Tag: ಜಿಮ್ಮಿ ಕನ್ನಡ ಸಿನಿಮಾ

  • ಸೋದರಳಿಯನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್

    ಸೋದರಳಿಯನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್

    ಕಿಚ್ಚ ಸುದೀಪ್ (Kicha Sudeep) ಕುಟುಂಬದಿಂದ ಮತ್ತೊಬ್ಬ ಯುವನಟನ ಎಂಟ್ರಿಯಾಗುತ್ತಿದೆ. ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ (Sanchith Sanjeev) ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಂಚಿತ್ ಅವರ ಚೊಚ್ಚಲ ಸಿನಿಮಾದ ಮುಹೂರ್ತ ಜೂನ್ 15ರಂದು ಬೆಂಗಳೂರಿನ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಅಕ್ಕನ ಮಗನ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಸುದೀಪ್ ವಿಶ್ ಮಾಡಿದ್ದಾರೆ.

    ಕಿಚ್ಚನ ಮಾರ್ಗದರ್ಶನದೊಂದಿಗೆ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಲು ಸಂಚಿತ್ ಸಂಜೀವ್ ರೆಡಿಯಾಗಿದ್ದಾರೆ. ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ (Sandalwood) ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಫೈನಲಿ ಅದಕ್ಕೆ ವೇದಿಕೆ ಸಿದ್ಧವಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಸಂಚಿತ್ ಕೆಲಸ ಮಾಡಿದ್ದರು. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಸುದೀಪ್ ಸೋದರಳಿಯ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ.

    ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಜೂನ್‌ರಂದು ಬೆಂಗಳೂರಿನ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭವು ಸರಳವಾಗಿ ನಡೆದಿದೆ. ಚಿತ್ರಕ್ಕೆ ‘ಜಿಮ್ಮಿ’ (Jimmy Kannada Film) ಎಂದು ಟೈಟಲ್ ಫಿಕ್ಸ್ ಮಾಡಲಾಗಿದ್ದು, ಸೋದರಳಿಯನ ಮೊದಲ ಹೆಜ್ಜೆಗೆ ಸುದೀಪ್ ಕೂಡ ಸಾಥ್ ನೀಡಿದ್ದಾರೆ.

    ಇದೊಂದು ಕ್ರೈಂ-ಡ್ರಾಮಾ ಸಿನಿಮಾ ಆಗಿದ್ದು, ತಂದೆ- ಮಗನ ಬಾಂಧವ್ಯ ಸಾರುವ ಕಥೆಯಾಗಿದೆ. ಸುದೀಪ್ ಸಲಹೆಯ ಮೇರೆಗೆ ಮೊದಲ ಚಿತ್ರದಲ್ಲೇ ಸಂಚಿತ್ ನಟನೆಯ ಜೊತೆ ನಿರ್ದೇಶನ ಕೂಡ ಮಾಡ್ತಿದ್ದಾರೆ. ನೆಚ್ಚಿನ ನಟ ಸುದೀಪ್ ಫ್ಯಾಮಿಲಿಯಿಂದ ಸಂಚಿತ್ ಕೂಡ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿರೋದು ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಮೂಡಿದೆ.