Tag: ಜಿಯೋ ನೆಟ್‌ವರ್ಕ್‌

  • ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

    ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

    – ಕರ್ನಾಟಕದಲ್ಲಿ Jioಗೆ ಏಪ್ರಿಲ್‌ನಲ್ಲಿ 1.2 ಲಕ್ಷ ಹೊಸ ಚಂದಾದಾರರು ಸೇರ್ಪಡೆ
    – ರಾಜ್ಯದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ ಬಳಕೆದಾರರ ಸಂಖ್ಯೆ 3,61,122ಕ್ಕೆ ಹೆಚ್ಚಳ; ಜಿಯೋ ನಂ.1
    – ಭಾರತದಲ್ಲಿ ರಿಲಯನ್ಸ್ ಜಿಯೋ ಮೊಬೈಲ್ ಬಳಕೆದಾರರ ಒಟ್ಟು ಸಂಖ್ಯೆ 47.24 ಕೋಟಿ

    ಬೆಂಗಳೂರು: ರಿಲಯನ್ಸ್ ಜಿಯೋ (Reliance Jio) ಕರ್ನಾಟಕದಲ್ಲಿ ತನ್ನ ಬಲವಾದ ಪ್ರಾಬಲ್ಯವನ್ನ ಮುಂದುವರಿಸಿದೆ. 2025ರ ಏಪ್ರಿಲ್ ನಲ್ಲಿ 1.2 ಲಕ್ಷ ಹೊಸ ಮೊಬೈಲ್ ಚಂದಾದಾರರನ್ನ ಜಿಯೋ ಸೇರ್ಪಡೆ ಮಾಡಿಕೊಂಡಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಇತ್ತೀಚಿನ ಮಾಹಿತಿಯ ಪ್ರಕಾರ, ರಾಜ್ಯದ ಎಲ್ಲ ಟೆಲಿಕಾಂ ಆಪರೇಟರ್‌ಗಳ ಪೈಕಿ ಈ ಸಂಖ್ಯೆ ಅತ್ಯಧಿಕ ಎನಿಸಿಕೊಂಡಿದೆ.

    ಕರ್ನಾಟಕದಲ್ಲಿ ಜಿಯೋ ಸ್ಥಿರ ವೈರ್‌ಲೆಸ್ ಸಂಪರ್ಕದಲ್ಲಿ (FWA) ತನ್ನ ನಾಯಕತ್ವ ಸ್ಥಾನವನ್ನು ಬಲಪಡಿಸುತ್ತಿದ್ದು, ಜಿಯೋ ಏರ್‌ಫೈಬರ್ ಸೇವೆಯು ಸ್ಪಷ್ಟವಾಗಿ ಮಾರುಕಟ್ಟೆ ನಾಯಕನಾಗಿ ಹೊರಹೊಮ್ಮುತ್ತಿದೆ. ಕರ್ನಾಟಕದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ (Jio Airfiber) ಬಳಕೆದಾರರ ಸಂಖ್ಯೆ ಏಪ್ರಿಲ್‌ ತಿಂಗಳಿನಲ್ಲಿ 3,61,122 (3.61 ಲಕ್ಷ)ಕ್ಕೆ ಏರಿಕೆಯಾಗಿದೆ. ಇದು 2025ರ ಮಾರ್ಚ್ ತಿಂಗಳಿನಲ್ಲಿ 3,38,177 (3.38 ಲಕ್ಷ) ರಷ್ಟಿತ್ತು. ಇನ್ನು ಜಿಯೋದ ಸಂಖ್ಯೆಗೆ ಹೋಲಿಸಿದರೆ ಏರ್‌ಟೆಲ್ 1,23,393 ಸ್ಥಿರ ವೈರ್‌ಲೆಸ್ ಸಂಪರ್ಕದ ಚಂದಾದಾರರನ್ನ ಹೊಂದಿದೆ.

    ಏಪ್ರಿಲ್ ತಿಂಗಳಿನಲ್ಲಿ ದೇಶಾದ್ಯಂತ ಸಕಾರಾತ್ಮಕವಾದ ಸಕ್ರಿಯ ಚಂದಾದಾರರ ಸೇರ್ಪಡೆ ಹೊಂದಿದ ಏಕೈಕ ಟೆಲಿಕಾಂ ಆಪರೇಟರ್ ಕೂಡ ಜಿಯೋ ಆಗಿದೆ. 55 ಲಕ್ಷಕ್ಕಿಂತ ಹೆಚ್ಚು ಸಕ್ರಿಯ ಬಳಕೆದಾರರ ಸೇರ್ಪಡೆಗಳನ್ನ ಹೊಂದಿದ್ದು, ಇದು ಸತತ 2ನೇ ತಿಂಗಳು 50 ಲಕ್ಷಕ್ಕಿಂತಲೂ ಹೆಚ್ಚು ವಿಎಲ್ಆರ್ (ವಿಸಿಟರ್ ಲೊಕೇಶನ್ ರಿಜಿಸ್ಟರ್) ಸೇರಿಸಿದೆ. ಇದೇ ವೇಳೆ ವಿಐ (Vi) ಮತ್ತು ಬಿಎಸ್ಎನ್ಎಲ್ (BSNL) ಸೇರಿ ಇತರ ಟೆಲಿಕಾಂ ಆಪರೇಟರ್‌ಗಳು ನಿವ್ವಳ ಚಂದಾದಾರರ ಸಂಖ್ಯೆಯಲ್ಲಿ ಕುಸಿತವನ್ನು ಕಂಡಿವೆ.

    ರಾಷ್ಟ್ರೀಯ ಮಟ್ಟದಲ್ಲಿ, ಜಿಯೋ ಶೇ 82ರಷ್ಟು ಪಾಲು ಮತ್ತು 61.4 ಲಕ್ಷ ಚಂದಾದಾರರೊಂದಿಗೆ ಸ್ಥಿರ ವೈರ್‌ಲೆಸ್ ಸಂಪರ್ಕದಲ್ಲಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ.

    2025ರ ಏಪ್ರಿಲ್ ತಿಂಗಳಲ್ಲಿ ಒಟ್ಟಾರೆ ಸ್ಥಿರ ಬ್ರಾಡ್‌ಬ್ಯಾಂಡ್ ಬೆಳವಣಿಗೆಗೆ ದಾಖಲೆಯ ತಿಂಗಳಾಗಿದ್ದು, ಜಿಯೋದ ವೈರ್‌ಲೈನ್ ಮತ್ತು ಸ್ಥಿರ ವೈರ್‌ಲೆಸ್ ಸಂಪರ್ಕ ಸೇವೆಗಳಲ್ಲಿ ಸುಮಾರು 9.10 ಲಕ್ಷ ಹೊಸ ಗ್ರಾಹಕರನ್ನು ಸೇರಿಸಲಾಗಿದೆ. ಕೇವಲ 2.30 ಲಕ್ಷ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಂಡಿರುವ ಏರ್‌ಟೆಲ್‌ಗಿಂತ ಜಿಯೋದ ಈ ಅಂಕಿ- ಅಂಶವು ಸುಮಾರು 4 ಪಟ್ಟು ಹೆಚ್ಚಾಗಿದೆ.

    ರಾಷ್ಟ್ರೀಯ ಮಟ್ಟದಲ್ಲಿ, ಜಿಯೋ ಏಪ್ರಿಲ್ ನಲ್ಲಿ 26.44 ಲಕ್ಷ ಒಟ್ಟು ಚಂದಾದಾರರನ್ನು ಸೇರ್ಪಡೆ ಮಾಡಿಕೊಂಡಿದ್ದು, ಒಟ್ಟು ಬಳಕೆದಾರರ ಸಂಖ್ಯೆಯನ್ನು 47.24 ಕೋಟಿಗೆ ಹೆಚ್ಚಿಸಿದೆ ಮತ್ತು ಮೊಬೈಲ್ ವಿಭಾಗದಲ್ಲಿ ಶೇ 40.76ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ಏರ್‌ಟೆಲ್ ಶೇ 33.65ರಷ್ಟು (ಸುಮಾರು 39 ಕೋಟಿ ಬಳಕೆದಾರರು) ಇದ್ದರೆ, ವೊಡಾಫೋನ್ ಐಡಿಯಾ ಶೇ 17.66ರಷ್ಟು (20.47 ಕೋಟಿ ಬಳಕೆದಾರರು) ಹೊಂದಿದೆ. ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಒಟ್ಟಾಗಿ ಶೇ 7.84ರಷ್ಟು ಪಾಲನ್ನು ಹೊಂದಿವೆ.

    ಜಿಯೋದ ಬಹಳ ವೇಗವಾದ ನೆಟ್‌ವರ್ಕ್ ವಿಸ್ತರಣೆ, ಕೈಗೆಟುಕುವ ಬೆಲೆಯ ಪ್ಲಾನ್ ಗಳು ಮತ್ತು ಸಂಯೋಜಿತ ಡಿಜಿಟಲ್ ಸೇವೆಗಳು ಕರ್ನಾಟಕ ಮತ್ತು ಭಾರತದ ಉಳಿದ ಭಾಗಗಳಲ್ಲಿ ಮನೆ ಮತ್ತು ಬಿಜಿನೆಸ್ ಸಂಪರ್ಕವನ್ನು ಮರುರೂಪಿಸುತ್ತಾ ಇವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವೇಗದ ಇಂಟರ್ ನೆಟ್ ಬೇಡಿಕೆ ಹೆಚ್ಚುತ್ತಿರುವುದರಿಂದ ಡಿಜಿಟಲ್ ವಿಭಜನೆಯನ್ನು ನಿವಾರಣೆ ಮಾಡುವಲ್ಲಿ ಜಿಯೋ ಪ್ರಮುಖ ಪಾತ್ರ ವಹಿಸುತ್ತಿದೆ.

  • ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ಬೆಂಗಳೂರು: ಈಗ ಕರ್ನಾಟಕದ (Karnataka) ದೂರ ದೂರದ ಪ್ರದೇಶಗಳಲ್ಲಿಯೂ ರಿಲಯನ್ಸ್ ಜಿಯೋದ (Reliance Jio) ನೆಟ್‌ವರ್ಕ್‌ ಸಿಗುತ್ತಿದೆ.

    ಶಿವಮೊಗ್ಗದ ಗಾಜನೂರು, ಚಾಮರಾಜನಗರದ ಕೊಳ್ಳೇಗಾಲ, ಹುಗ್ಯಂನಲ್ಲಿ ಸಂಪರ್ಕ ದೊರೆಯುವಂತೆ ಮಾಡುವಲ್ಲಿ ಜಿಯೋ ಯಶಸ್ಸು ಕಂಡಿದೆ. ಇದಕ್ಕೂ ಮುನ್ನ ಈ ಪ್ರದೇಶಗಳಲ್ಲಿ ಸಂವಹನ ಮೂಲಸೌಕರ್ಯಕ್ಕೆ ಕೊರತೆ ಇತ್ತು.  ಇದನ್ನೂ ಓದಿ: ಗೂಗಲ್‌, ಆಪಲ್‌ಗೆ ಜಿಯೋ ಠಕ್ಕರ್‌ – ಕ್ಲೌಡ್‌ ಸ್ಟೋರೇಜ್‌ನಲ್ಲೂ ದರ ಸಮರ ಆರಂಭ?

    ಪರಿಸರ ಮತ್ತು ಭೌಗೋಳಿಕ ಸವಾಲುಗಳನ್ನು ದಾಟುವ ಮೂಲಕವಾಗಿ ಜಿಯೋ ತನ್ನ ದೃಢವಾದ 4ಜಿ ಮತ್ತು 5ಜಿ ನೆಟ್‌ವರ್ಕ್ ಅನ್ನು ರಾಜ್ಯದ್ಯಂತ ಹಳ್ಳಿ ಹಳ್ಳಿಗಳಿಗೆ ವಿಸ್ತರಿಸುತ್ತಿದೆ. ಈ ತಾಲೂಕುಗಳಲ್ಲಿ ಇರುವ ಅನೇಕ ಹಳ್ಳಿಗಳು (Village) ಈಗ ಜಿಯೋ ನೆಟ್‌ವರ್ಕ್‌ನಿಂದಾಗಿ (Jio Network) ಮಾತ್ರ ಪ್ರಯೋಜನ ಪಡೆಯುತ್ತಿವೆ.

     

    ಜಿಯೋ ಟವರ್‌ನಿಂದಾಗಿ ಮಕ್ಕಳು ನೆಟ್‌ವರ್ಕ್ ಸಂಪರ್ಕಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣ ಮಾಡುವ ಅಗತ್ಯವಿಲ್ಲ. ಯುವಜನರಿಗೆ ವರ್ಕ್ ಫ್ರಮ್ ಹೋಮ್ ಮಾಡುವುದಕ್ಕೆ ಅನುಕೂಲವಾಗಿದ್ದು, ಇದರಿಂದ ಅವಕಾಶಗಳು ತೆರೆದುಕೊಂಡಿವೆ.

    ಈ ಗ್ರಾಮದ ಜನರು ಜಿಯೋದ ಪ್ರೀಮಿಯಂ ಅಪ್ಲಿಕೇಷನ್‌ಗಳಾದ ಜಿಯೋಟಿವಿ ಮತ್ತು ಜಿಯೋ ಸಿನಿಮಾ  ಮೂಲಕ ಮನರಂಜನೆಯನ್ನು ಪಡೆಯಬಹುದಾಗಿದೆ.