Tag: ಜಿಲೆಟಿನ್ ಕಡ್ಡಿ

  • ಚೆನ್ನೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ

    ಚೆನ್ನೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ

    – 100 ಜಿಲೆಟಿನ್ ಕಡ್ಡಿ, 350 ಡಿಟೋನೇಟರ್ ಪತ್ತೆ

    ತಿರುವನಂತಪುರಂ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ಯಾಸೆಂಜರ್ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350  ಡಿಟೋನೇಟರ್‌ಗಳನ್ನು ಆರ್‌ಪಿಎಫ್ ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

    ತಮಿಳುನಾಡು ಮೂಲದ ರಮಣಿ ಸ್ಫೋಟಕಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದಳು. ಮಹಿಳೆ ಚೆನ್ನೈ-ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೋಯಿಕೋಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್, ಆರ್‌ಪಿಎಫ್ ಪೊಲೀಸರು ಮಹಿಳೆಯಿಂದ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡೆದಿದ್ದಾರೆ.

    ಕಟ್ಟಾಡಿಯಿಂದ ತಲಸ್ಸೆರಿಗೆ ಈ ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಮಹಿಳೆ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್‌ಗಳನ್ನು ಯಾರಿಗೂ ತಿಳಿಯದಂತೆ ರೈಲಿನಲ್ಲಿ ಸಾಗಿಸುತ್ತಿದ್ದರು. ಬ್ಯಾಗ್‍ನಲ್ಲಿ ಈ ಸ್ಫೋಟಕಗಳನ್ನು ಹಾಕಿ ಸೀಟ್ ಕೆಳಗಡೆ ಇಟ್ಟು ಸಾಗಿಸುತ್ತಿದ್ದರು. ಮಹಿಳೆಯನ್ನು ಸ್ಫೋಟಕ ವಸ್ತುಗಳ ಸಮೇತ ಆರ್‌ಪಿಎಫ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಿಚಾರಣೆ ವೇಳೆ ಮಹಿಳೆ ಬಾವಿ ತೋಡಲು ಜಿಲೆಟಿನ್ ಕಟ್ಟಿಗಳನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಹೇಳಿದ್ದಾಳೆ ಎಂದು ವರದಿಯಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

  • ಸ್ಫೋಟದ ಸ್ಥಳಕ್ಕೆ ಸುಧಾಕರ್ ಭೇಟಿ – ಕ್ರಷರ್ ಮಾಲೀಕರ ಬಂಧನಕ್ಕೆ ಆದೇಶ

    ಸ್ಫೋಟದ ಸ್ಥಳಕ್ಕೆ ಸುಧಾಕರ್ ಭೇಟಿ – ಕ್ರಷರ್ ಮಾಲೀಕರ ಬಂಧನಕ್ಕೆ ಆದೇಶ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಯಾವುದೇ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿಲ್ಲ. ಶಿವಮೊಗ್ಗ ಪ್ರಕರಣದ ಬಳಿಕ ನಿರಂತರವಾಗಿ ಸಭೆ ನಡೆಸಿ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿತ್ತು. ಅಕ್ರಮ ಸ್ಫೋಟಕಗಳ ಸಂಗ್ರಹಕ್ಕೆ ಅವಕಾಶಕ ಕೊಡಬೇಡಿ ಅಂತ ಹೇಳಿದ್ದೆ. ಈ ಸಂಬಂಧ ಅಧಿಕಾರಿಗಳು ಅರಿವು ಮೂಡಿಸುವ ಕಾರ್ಯಕ್ರಮ ಸಹ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಭ್ರಮರವಾಸಿನಿ ಕ್ವಾರಿ ಮೇಲೆ ಎಸ್ಪಿ ದಾಳಿ ನಡೆಸಿ ನಿಯಮ ಉಲ್ಲಂಘಿಸಿದ ಕಾರಣ ಫೆಬ್ರವರಿ 07 ರಂದು ಕ್ವಾರಿ ಕ್ಲೋಸ್ ಮಾಡಿದ್ದರು. ಆದರೂ ಸ್ಫೋಟ ಸಂಭವಿಸಿರೋದು ದುರಂತ ಎಂದು ಸಚಿವ ಸುಧಾಕರ್ ಬೇಸರ ಹೊರ ಹಾಕಿದರು.

    ಭ್ರಮರವಾಸಿನಿ ಮಾಲೀಕರು ಜಿಲೆಟಿನ್ ಕಡ್ಡಿಗಳನ್ನ ದಾಸ್ತಾನು ಮಾಡಿದ್ರು ಅಂತ ತಿಳಿದಿದೆ. ಅದೇ ದಾಸ್ತಾನು ಕಾಡಿನಲ್ಲಿ ಎಸೆದು ಹೋಗಲು ಬಂದಾಗ ಮೊಬೈಲ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿರುವ ಸಾಧ್ಯತೆಗಳಿವೆ. ಪೊಲೀಸರು ಪ್ರಾಥಮಿಕ ತನಿಖೆ ಮಾಡಿ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

    ಸ್ಫೋಟದಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ. ಭ್ರಮರವಾಸಿನಿಯ ಮೂವರು ಮಾಲೀಕರ ಬಂಧನಕ್ಕಾಗಿ ತಂಡ ರಚನೆ ಮಾಡಲಾಗಿದ್ದು, ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

    ಭ್ರಮರವಾಸಿನಿ ಕ್ರಷರ್ ನ ಮಾಲೀಕರು ಸ್ಥಳೀಯ ಬಿಜೆಪಿ ಮುಖಂಡ ನಾಗರಾಜು ಹಾಗೂ ಆಂಧ್ರಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಅಂತ ತಿಳಿದುಬಂದಿದೆ.

  • ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಫೋಟ – ಐವರು ಕಾರ್ಮಿಕರು ಬಲಿ

    ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಫೋಟ – ಐವರು ಕಾರ್ಮಿಕರು ಬಲಿ

    – ಜಿಲೆಟಿನ್ ಶಿಫ್ಟ್ ಮಾಡ್ತಿದ್ದ ಕಾರ್ಮಿಕರು ಪೀಸ್ ಪೀಸ್
    – ದುರಂತಕ್ಕೆ ಸಾಕ್ಷಿ ಹೇಳ್ತಿವೆ ಕಾರ್ಮಿಕರ ದೇಹದ ಮಾಂಸ ಮುದ್ದೆ

    ಚಿಕ್ಕಬಳ್ಳಾಪುರ: ಶಿವಮೊಗ್ಗ ಗಣಿ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಗಣಿ ಸ್ಪೋಟ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಬಳಿಯ ಭ್ರಮರವಾಸಿನಿ ಕ್ರಷರ್ ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಐದು ಮಂದಿ ಮೃತಪಟ್ಟಿದ್ದು, ಒರ್ವ ಗಾಯಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯಲ್ಲಿ ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಅಪರೇಟರ್ ಆದ ಗಂಗಾಧರ್, ವೇಯರ್ ಆದ ಮುರುಳಿ ಹಾಗೂ ವಾಚ್ ಮೆನ್ ಮಹೇಶ್ ಸೇರಿದಂತೆ ಸ್ಥಳೀಯ ರಾಮು ಎಂಬಾತ ಮೃತಪಟ್ಟಿದ್ದಾರೆ. ಟಾಟಾ ಏಸ್ ಚಾಲಕ ರಿಯಾಜ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಟಾಟಾ ಏಸ್ ಹಾಗೂ ಒಂದು ಬೈಕ್ ಮೂಲಕ ಭ್ರಮರವಾಸಿನಿ ಕ್ರಷರ್ ನಿಂದ ಒಂದು ಕಿಲೋಮೀಟರ್ ದೂರದ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದಾರೆ.

    ಈ ವೇಳೆ ಬೈಕ್‍ನಲ್ಲಿ ಮುಂದೆ ಸಾಗಿದರೆ ಹಿಂದೆ ಟಾಟಾ ಏಸ್ ವಾಹನ ಸಾಗಿದೆ. ಕೊನೆಗೆ ಅರಣ್ಯ ಪ್ರದೇಶದಲ್ಲಿ ಅಡಗಿಸಿದ್ದ ಸ್ಫೋಟಕಗಳನ್ನ ಹೊತ್ತು ತರುವ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದ್ದು, ಪರಿಣಾಮ ಐದು ಮಂದಿಯ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಛಿಧ್ರ ಛಿದ್ರವಾಗಿ ಮೃತದೇಹಗಳೆಲ್ಲಾ ನೂರಾರು ಮೀಟರ್ ಚೆಲ್ಲಾಪಿಲ್ಲಿಗಳಾಗಿವೆ. ಇನ್ನೂ ಭ್ರಮರವಾಸಿನಿ ಕ್ರಷರ್ ನ ಮಾಲೀಕರು ಸ್ಥಳೀಯ ಬಿಜೆಪಿ ಮುಖಂಡ ನಾಗರಾಜು ಹಾಗೂ ಆಂಧ್ರಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಅಂತ ತಿಳಿದುಬಂದಿದೆ.

    ಕಳೆದ ವಾರ ಈ ಕ್ರಷರ್ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕಗಳನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಲಾಗಿದೆ. ಹೀಗಾಗಿ ಪೊಲೀಸರು ಕಣ್ತಪ್ಪಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕಗಳನ್ನ ಬಿಸಾಡಲು ಹೋದಾಗ ಘಟನೆ ನಡೆದಿರಬಹುದು ಅಂತ ಅಂದಾಜಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಡಿ ಸಿ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸ

    ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸ

    ತುಮಕೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತ ಮಾಸುವ ಮುನ್ನವೇ ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸವಾದ ಘಟನೆ ನಡೆದಿದೆ.

    ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಲಕ್ಷ್ಮೀಕಾಂತ್ ಎಂಬವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಲಕ್ಷ್ಮೀಕಾಂತ್ ಅವರು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

    ಬಿಸಿಲಿನ ತಾಪಕ್ಕೆ ಸೀಟಿನ ಮನೆಯಲ್ಲಿ ಇಟ್ಟಿದ್ದ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ. ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ಹೊರಗಿದ್ದ ಸುವರ್ಣಮ್ಮ ಎಂಬವರಿಗೆ ಸಿಮೆಂಟ್ ಶೀಟು ತಗುಲಿ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಈ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.