Tag: ಜಿಲ್ಲಾಧಿಕಾರಿ ಕಚೇರಿ

  • ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    – ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ರೈತರು

    ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಯಶಸ್ವಿಯಾಗಿ ಮುಂದುವರಿದಿದೆ.

    ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಠಿಕಾಣಿ ಹೂಡಿರುವ ರೈತರು ರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

    ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ, ವಿಜಯಪುರ ರೈತರು ಕರಾಳ ದೀಪಾವಳಿ ಆಚರಿಸುತ್ತಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಇದನ್ನೂ ಓದಿ: ಇಂದು ಬೆಳಗ್ಗೆ 10:30ಕ್ಕೆ ದರ್ಶನ್‌ ಜಾಮೀನು ಭವಿಷ್ಯ ಪ್ರಕಟ

    ನಗರದ ಗಾಂಧಿಚೌಕ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಪ್ರಾರಂಭಿಸಿದ್ದಾರೆ.

    ರಾಜ್ಯ ಸರ್ಕಾರ ಕೇವಲ ಯಾವುದೋ ಒಂದು ಆದೇಶ ಪ್ರತಿ ತೋರಿಸಿ ನಮ್ಮನ್ನ ಯಾಮಾರಿಸಲು ಸಾಧ್ಯವಿಲ್ಲ. ಎಲ್ಲಿಯವರೆಗೂ ರೈತರ ಪಹಣಿಯಲ್ಲಿರುವ ವಕ್ಫ್ ಬೋರ್ಡ್ ಹೆಸರು ತೆಗೆದು ಹಾಕುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಸಿದ್ದಾರೆ.

    ಸರ್ಕಾರ ಈ ಹೋರಾಟಕ್ಕೆ ಜಗ್ಗದಿದ್ದರೆ ಶವಸಂಸ್ಕಾರ, ತಿಥಿ ಕಾರ್ಯಕ್ರಮ, ಕತ್ತೆ ಚಳವಳಿ ಸೇರಿದಂತೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅನ್ನದಾತರ ಪಾಲಿಗೆ ಈ ಬಾರಿ ರಾಜ್ಯ ಸರ್ಕಾರ ಕರಾಳ ದೀಪಾವಳಿಯನ್ನು ಉಡುಗೊರೆಯಾಗಿ ನೀಡಿದೆ. ಇನ್ನೂ ಸ್ಥಳಕ್ಕೆ ಇಂದು (ಅ.30) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡುವಂತೆ ರೈತರು ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ. ಇದು ಅನ್ನದಾತರ ಹೋರಾಟ. ಇದಕ್ಕೆ ಯಾರೇ ಬೆಂಬಲ ನೀಡಿದರು ನಾವು ಸ್ವಾಗತ ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.

    ಈ ಹೋರಾಟವನ್ನು ಕೈಬಿಡಲು ರಾತ್ರೋರಾತ್ರಿ ಎಡಿಸಿ ಸೋಮಲಿಂಗ ಗೆಣ್ಣೂರ ಬಂದು ರೈತರಿಗೆ ಇಂಡಿ ಎಸಿ ಆದೇಶದ ಕಾಪಿ ತೋರಿಸಿ ಹೋರಾಟ ಕೈ ಬಿಡಲು ಮನವಿ ಮಾಡಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಸೇರಿದಂತೆ ಪೊಲೀಸ್ ಸಿಬ್ಬಂದಿ ರೈತರಿಗೆ ಹೋರಾಟ ಕೈಬಿಡಲು ಒತ್ತಾಯಿಸಿದರು. ಆದರೆ ರೈತರು ಇದ್ಯಾವುದಕ್ಕೂ ಒಪ್ಪಲಿಲ್ಲ. ಡಿಸಿ ಕಚೇರಿ ಎದುರು ಸ್ಥಳ ಖಾಲಿ ಮಾಡಿ ನಿಮಗೆ ಬೇರೆ ಜಾಗ ಕೊಡುತ್ತೇವೆ ಅಲ್ಲಿ ಹೋರಾಟ ಮುಂದುವರೆಸಿ ಎಂದು ತಿಳಿಸಿದರು. ಪೊಲೀಸ್ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟು, ರೈತರು ಇಂದು (ಬುಧವಾರ) ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 30-10-2024

  • ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ವಿಕಲಚೇತನ

    ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ವಿಕಲಚೇತನ

    ಕಲಬುರಗಿ: ವಿಕಲಚೇತನ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

    ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ವಿಕಲಚೇತನ ಅಣವೀರಪ್ಪ ಗೌಡಗಾಂವ್‌ನನ್ನು ಟಾರ್ಗೆಟ್ ಮಾಡಿಕೊಂಡಿದ್ದ ಒಂದು ಗುಂಪು ವಿನಾಕಾರಣ ಆತನ ವಿರುದ್ಧ ಇಲ್ಲ ಸಲ್ಲದ ದೂರು ದಾಖಲು ಮಾಡಿ ಕೆಲಸದಿಂದ ತೆಗೆಯೋದಕ್ಕೆ ಮುಂದಾಗಿತ್ತು. ಇದರಿಂದ ನೊಂದಿದ್ದ ಆತ ಗುರುವಾರ ಕಲಬುರಗಿ ಜಿಲ್ಲಾಧಿಕಾರಿ ಬಳಿ ತನ್ನ ನೋವನ್ನು ತೋಡಿಕೊಳ್ಳಲು ಬಂದಿದ್ದ. ಆದರೆ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾನೆ.

    ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ನಿವಾಸಿಯಾಗಿರುವ ಅಣವೀರಪ್ಪ ಉಡಚಣ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಆದರೆ ಅಫಜಲಪುರ ತಾಲೂಕಿನ ಬಸವರಾಜ್ ಹಡಪದ ಹಾಗೂ ಟೀಮ್ ಈತನನ್ನು ಮತ್ತು ಈತನ ಜೊತೆಗಿದ್ದವರನ್ನು ಕೆಲಸದಿಂದ ತೆಗೆದು ಹಾಕಿಸಲು ಪ್ಲ್ಯಾನ್ ಮಾಡಿ ಇವರ ವಿರುದ್ಧ ಮೇಲಾಧಿಕಾರಿಗಳಿಗೆ ಸುಳ್ಳು ದೂರು ದಾಖಲು ಮಾಡೋದಕ್ಕೆ ಮುಂದಾಗಿದ್ದರು. ಇದರಿಂದ ಮನನೊಂದು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡೋದಕ್ಕೆ ಬಂದಿದ್ದ ಅಣವೀರಪ್ಪ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಗೆ ಸಂಕಷ್ಟ

    ವಿಷ ಸೇವಿಸಿ ಅಸ್ವಸ್ಥಗೊಂಡ ಅಣವೀರಪ್ಪ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವರಾಜ್ ಹಡಪದ ಕೂಡ ಆರಂಭದಲ್ಲಿ ಅಫಜಲಪುರ ತಾಲೂಕಿನಲ್ಲಿ ತಾಲೂಕು ವಿವಿಧ ಪುರ್ನವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುವಾಗ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡೋದಕ್ಕೆ ಮುಂದಾಗಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.

    ಬಸವರಾಜ್ ಹಡಪದ ತನ್ನ ಕೆಲಸ ಕಳೆದುಕೊಳ್ಳಲು ಅಣವೀರಪ್ಪ ಮತ್ತು ಆತನ ಜೊತೆಗಿದ್ದವರೇ ಕಾರಣ ಎಂದುಕೊಂಡು ಅವರಿಗೆ ಟಾರ್ಚರ್ ಕೊಡುತ್ತಿದ್ದ. ಈತನ ಟಾರ್ಚರ್‌ಗೆ ನೊಂದು ಅಣವೀರಪ್ಪ ಪೊಲೀಸ್ ಠಾಣೆಯಲ್ಲಿ ಅಂಗವಿಕಲ ಜಿಲ್ಲಾ ಕಲ್ಯಾಣಾಧಿಕಾರಿ ಸೇರಿ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದ. ಆದರೆ ಯಾವುದೇ ಪ್ರಯೋಜನ ಆಗಿರದಿದ್ದರಿಂದ ಮನನೊಂದು ಆತ್ಮಹತ್ಯಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ? – ಶಾ, ಹೆಚ್‌ಡಿಡಿ ಸಭೆಯ ಇನ್‌ಸೈಡ್‌ ಸ್ಟೋರಿ

    ಆತ್ಮಹತ್ಯೆ ಯತ್ನದ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಈ ರೀತಿಯ ಘಟನೆ ಆಗಬಾರದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅಣವೀರಪ್ಪ ಸೇರಿ ನಮ್ಮ ಇಲಾಖೆಯ ಅಧಿಕಾರಿಗಳ ಬೆನ್ನಿಗೆ ನಿಲ್ಲುವ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

    ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

    ಶಿವಮೊಗ್ಗ: ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಮೇಲೆ ಆಜಾನ್ (Azan) ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ.

    ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ ನಿವಾಸಿ ಮೌಸಿನ್ (27) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಪಿಎಫ್‍ಐ ಸದಸ್ಯನಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದ.

    ಘಟನೆಯೇನು? : ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೌಸಿನ್ ಶಿವಮೊಗ್ಗದ ಜಿಲ್ಲಾಧಿಕಾರಿಯ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಈ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದರು. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೌಸಿನ್‍ನನ್ನು ಜಯನಗರ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಸಿಆರ್‌ಪಿಸಿ 107 ಅಡಿ ಪ್ರಕರಣ ದಾಖಲಾಸಿದ್ದಾರೆ. ಅದಾದ ಬಳಿಕ ಠಾಣಾ ಜಾಮೀನಿನ ಮೇಲೆ ಮೌಸಿನ್‍ನನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್ – ತಾಯಿ, ಇಬ್ಬರು ಮಕ್ಕಳು ಸಾವು

  • ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಯುವಕನೊಬ್ಬ ಆಜಾನ್ ಕೂಗಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ (KS Eshwarappa) ಅವಹೇಳನ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಯುವಕನೊಬ್ಬ ಆಜಾನ್ (Azan) ಕೂಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕ ಆಜಾನ್ ಕೂಗುತ್ತಿದ್ದ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿ, ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮುಸ್ಲಿಂ ಯುವಕನೊಬ್ಬ ಉದ್ದಟತನ ಪ್ರದರ್ಶಿಸಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಯುವಕನೊಬ್ಬ ಆಜಾನ್ ಕೂಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ

    ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ನಡೆಸಿದ್ದಾರೆ. ಈ ವೇಳೆ ಮತ್ತೋರ್ವ ಯುವಕ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ? ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲಾಹ ಬಗ್ಗೆ ಮಾತನಾಡಿದ್ದು ಎಂದು ಕಿಡಿಕಾರಿದ್ದಾನೆ.

    ಘಟನೆಯ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದಾರೆ. ನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

  • ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ (DC Office) ನಡೆದಿದೆ.

    ಬೆಳಗಾವಿಯ (Belagavi) ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailahongala) ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8), ಸಾನ್ವಿ (3) ಅವರಿಗೂ ಫಿನಾಯಿಲ್ (Phenyl) ಕುಡಿಸಿದ್ದಾರೆ. ಇದನ್ನೂ ಓದಿ: ಧ್ವನಿಯಿಂದ ಎದುರಿಸಿದ ಟೀಕೆ ಬಗ್ಗೆ ಬಾಯ್ಬಿಟ್ಟ ರಾಣಿ ಮುಖರ್ಜಿ

    ಕಳೆದ ಹಲವು ವರ್ಷಗಳಿಂದ ಪತಿ ಅದೃಶ್ಯಪ್ಪ ಹಂಪಣ್ಣವರ ಜೊತೆಗೆ ಬೆಳಗಾವಿಯ ಅನಗೋಳದ ಬಾಡಿಗೆ ಮನೆಯಲ್ಲಿ ಸರಸ್ವತಿ ವಾಸವಿದ್ದರು. ಅನಗೋಳದ ಸಲೂನ್ ಶಾಪ್‌ನಲ್ಲಿ ಅದೃಶ್ಯಪ್ಪ ಹಂಪಣ್ಣವರ ಕೆಲಸ ಮಾಡುತ್ತಿದ್ದರು. ಕೈತುಂಬ ಸಾಲ ಮಾಡಿ 15 ದಿನಗಳ ಹಿಂದೆಯೇ ಪತ್ನಿ ಹಾಗೂ ತನ್ನ ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅದೃಶ್ಯಪ್ಪ ಹೋಗಿದ್ದರು. ಇದನ್ನೂ ಓದಿ: ಬಿಜೆಪಿಯಿಂದ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ

    ತುತ್ತು ಅನ್ನಕ್ಕೂ ಗತಿಯಿಲ್ಲದೇ ಸರಸ್ವತಿ ತನ್ನ ಮಕ್ಕಳ ಜೊತೆಗೆ ಜಿಲ್ಲಾಧಿಕಾರಿ ಭೇಟಿಗಾಗಿ ಡಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಹಿಳೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ವಿಚಾರಿಸಿದ್ದಾರೆ. ಆಗ ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಸಿಬ್ಬಂದಿ ಎದುರು ಹಿರಿಯ ಪುತ್ರಿ ಸೃಷ್ಟಿ ಹೇಳಿದ್ದಾಳೆ. ಬಳಿಕ ಸರಸ್ವತಿ ಹಾಗೂ ಮೂವರು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತಕ್ಷಣ ಅಲರ್ಟ್ ಆದ ಡಿಸಿ ಕಚೇರಿ ಸಿಬ್ಬಂದಿಗಳು ಡಿಸಿ ಕಚೇರಿ ಬಳಿಯ ಪೊಲೀಸರ ನೆರವು ಪಡೆದು ಜಿಲ್ಲಾಸ್ಪತ್ರೆಗೆ ಅಸ್ವಸ್ಥರನ್ನು ಶಿಫ್ಟ್ ಮಾಡಿದ್ದಾರೆ. ಸದ್ಯ ಸರಸ್ವತಿ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಮುಂದುವರೆಸಲಾಗಿದೆ. ಇದನ್ನೂ ಓದಿ: ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!

  • ರಾಯಚೂರಿನಲ್ಲಿ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ – ಹೋರಾಟಗಾರರ ಬಂಧನ

    ರಾಯಚೂರಿನಲ್ಲಿ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ – ಹೋರಾಟಗಾರರ ಬಂಧನ

    ರಾಯಚೂರು: ನಗರದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Prabhu Chauhan

    ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ, ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ ಜಾರಿಗೆಗೆ ವಿರೋಧ ವ್ಯಕ್ತಪಡಿಸಿರುವ ಸಚಿವರ ಕ್ರಮ ಖಂಡಿಸಿ ಘೋಷಣೆ ಕೂಗಿದರು. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಘೇರಾವ್ ಹಾಕಿದ ಮೂರು ಜನ ಹೋರಾಟಗಾರರನ್ನು ಬಂಧಿಸಲಾಗಿದೆ.  ಇದನ್ನೂ ಓದಿ: ನ್ಯಾಯಾಲಯಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಅಧಿಕಾರವಿದೆ: ಸುಪ್ರೀಂಕೋರ್ಟ್

    Prabhu Chauhan

    ಇದಕ್ಕೂ ಮುನ್ನ ಪ್ರಭು ಚಲ್ಹಾಣ್ ರಾಯಚೂರು ತಾಲೂಕಿನ ಮಲಿಯಾಬಾದ್ ಗೋ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಡಿ 400 ಕೇಸ್ ದಾಖಲಾಗಿವೆ. 10 ಸಾವಿರ ಗೋಗಳ ರಕ್ಷಣೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ

    Prabhu Chauhan

    ಗೋ ಸಂಜೀವಿನಿ ಯೋಜನೆ ಮುಖಾಂತರ ಆಂಬುಲೆನ್ಸ್ ನೀಡಿದ್ದೇವೆ. ಗೋವುಗಳ ಆರೋಗ್ಯದ ದೃಷ್ಟಿಯಿಂದ ಗೋ ಸಂಜೀವಿನಿ ಜಾರಿಗೆ ಮಾಡಿದ್ದೇವೆ. ರಾಜ್ಯದ ಎಲ್ಲಾ ತಾಲೂಕಿಗೂ ಒಂದು ಆಂಬುಲೆನ್ಸ್ ಬರುತ್ತದೆ ಎಂದು ಹೇಳಿದ್ದಾರೆ.

  • ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    – ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ
    – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

    ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

    ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್‌ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಜನತಾದಳದ ಸಿಎಂ – ಎಚ್‍ಡಿ ಕುಮಾರಸ್ವಾಮಿ

  • ವಿವಾಹಿತ ಮಹಿಳೆಯನ್ನ ಕರ್ಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗ ಥಳಿತ

    ವಿವಾಹಿತ ಮಹಿಳೆಯನ್ನ ಕರ್ಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗ ಥಳಿತ

    ಕಾರವಾರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಕರೆದುಕೊಂಡು ಬಂದಿದ್ದ ಯುವಕನಿಗೆ ಮಹಿಳೆಯ ಪತಿ ಹಾಗೂ ಸಂಬಂಧಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ.

    ಧಾರವಾಡ ಮೂಲದ ಮುತ್ತು ಥಳಿತಕ್ಕೊಳಗಾದ ಯುವಕ. ಮುತ್ತು ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಅಲ್ಲದೇ ಈತ ಧಾರವಾಡದಿಂದ ಮಹಿಳೆಯನ್ನು ಕರೆದುಕೊಂಡು ಕಾರವಾರಕ್ಕೆ ಬಂದಿದ್ದನು. ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯೊಂದಿಗೆ ಮುತ್ತು ನಿಂತಿದ್ದನು.

    ಇತ್ತ ಕಾರವಾರಕ್ಕೆ ಬಂದ ವಿಷಯ ತಿಳಿದು ಕಾರಿನಲ್ಲಿ ಆಗಮಿಸಿದ ಮಹಿಳೆಯ ಪತಿ ಹಾಗೂ ಸಂಬಂಧಿ ಜಿಲ್ಲಾಧಿಕಾರಿ ಕಚೇರಿ ಬಳಿ ನಿಂತಿದ್ದ ಮುತ್ತುಗೆ ಸಾರ್ವಜನಿಕವಾಗಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸ್ಥಳದಲ್ಲಿದ್ದವರು ಪೊಲೀಸರು ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಬರುವ ಮೊದಲೇ ಮಹಿಳೆ ಹಾಗೂ ಯುವಕನನ್ನು ಧಾರವಾಡಕ್ಕೆ ಎಳೆದುಕೊಂಡು ಹೋಗಿದ್ದಾರೆ.

  • ಇಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಂಪೂರ್ಣ ಬಂದ್

    ಇಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಂಪೂರ್ಣ ಬಂದ್

    ದಾವಣಗೆರೆ: ಇಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಂಪೂರ್ಣ ಬಂದ್ ಆಗಲಿದೆ.

    ಡಿಸಿ ಕಚೇರಿಯಲ್ಲಿ ಏಳು ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇಂದು ಜಿಲ್ಲಾಡಳಿತ ಎಲ್ಲ ಕಚೇರಿಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಜಿಲ್ಲಾಡಳಿತ ಸಂಪೂರ್ಣವಾಗಿ ಬಂದ್ ಆಗಲಿದೆ. ಕಚೇರಿಯ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

    ಕಚೇರಿಯ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿಗಳು ಸಹ ಕ್ವಾರಂಟೈನ್ ನಲ್ಲಿದ್ದಾರೆ. ದಾವಣಗೆರೆಯಲ್ಲಿ ಸೋಮವಾರ ಒಂದೇ ದಿನ 225 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3.666ಕ್ಕೆ ಏರಿಕೆಯಾಗಿದೆ. ನಿನ್ನೆ 11 ಜನರನ್ನು ಕೊರೊನಾ ಬಲಿ ಪಡೆದಿದ್ದು, 1,234 ಸಕ್ರಿಯ ಪ್ರಕರಣಗಳಿವೆ.

  • ಡಿಸಿ ಕಚೇರಿಯಲ್ಲಿ ಅನಂತ್‍ಕುಮಾರ್ ಹೆಗ್ಡೆ ಧರಣಿ- ಅಧಿಕಾರಿಗಳು ಕಕ್ಕಾಬಿಕ್ಕಿ!

    ಡಿಸಿ ಕಚೇರಿಯಲ್ಲಿ ಅನಂತ್‍ಕುಮಾರ್ ಹೆಗ್ಡೆ ಧರಣಿ- ಅಧಿಕಾರಿಗಳು ಕಕ್ಕಾಬಿಕ್ಕಿ!

    – ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ಸಂಸದರ ಖಡಕ್ ವಾರ್ನಿಂಗ್
    – ರಾತ್ರಿ 9 ಬಳಿಕ ಬಿಡುಗಡೆಯಾದ ಅಧಿಕಾರಿಗಳು

    ಕಾರವಾರ: ಕೆಲಸ ಆಗುವವರೆಗೂ ಧರಣಿ ಕೂರುತ್ತೇನೆ. ಇಂದು ಎಲ್ಲಿಗೂ ಹೋಗೊಲ್ಲ ಎಂದು ಸಂಸದ ಅನಂತ್‍ಕುಮಾರ್ ಹೆಗ್ಡೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಕುಳಿತ ಪ್ರಸಂಗ ಇಂದು ನಡೆದಿದೆ. ಬಳಿಕ ರಾತ್ರಿ 9 ಗಂಟೆ ಸುಮಾರಿಗೆ ಸಂಸದರು ಕಚೇರಿಯಿಂದ ಹೊರ ನಡೆದು ಮಂಗಳವಾರದವರೆಗೆ ಅಧಿಕಾರಿಗಳಿಗೆ ಸಮಯ ನೀಡಿದ್ದಾರೆ.

    ಹೌದು. ಈ ಕೋಪಕ್ಕೆ ಕಾರಣವೂ ಇದೆ. ಗುರುವಾರ ಕಾರವಾರದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಂಸದರು ಮಧ್ಯಾಹ್ನದ ವೇಳೆ ಜಿಲ್ಲೆಯಲ್ಲಿನ 231 ಗ್ರಾಮ ಪಂಚಾಯ್ತಿಗಳಿಗೆ ಉಚಿತ ಬಿಎಸ್‍ಎನ್‍ಎಲ್ ವೈಫೈ ನೀಡಿರುವ ಕುರಿತು ಮಾಹಿತಿ ಪಡೆದರು. ಈ ವೇಳೆ ಜಿಲ್ಲೆಯಲ್ಲಿ ಎಲ್ಲಾ ಗ್ರಾಮಪಂಚಾಯ್ತಿಗಳಿಗೂ ವೈಪೈ ನೀಡಲಾಗಿದ್ದು, ಕಾರ್ಯನಿರ್ವಹಿಸುತ್ತಿದೆ ಎಂದು ಬಿಎಸ್‍ಎನ್‍ಎಲ್‍ನ ಜಿಎಂ ಆರ್.ವಿ.ಜನ್ನು ದಾಖಲೆಗಳನ್ನು ನೀಡಿದರು. ಆದರೆ ಜಿಲ್ಲೆಯಲ್ಲಿ ಉಚಿತ ವೈಫೈ ನೀಡಿರುವ ಪೈಕಿ ಕೇವಲ 148 ಗ್ರಾಮ ಪಂಚಾಯ್ತಿಗಳಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ 62 ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ.

    ಇದಲ್ಲದೇ ಈ ಹಿಂದೆ ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯದ ಕಾರ್ಯಕ್ರಮದಲ್ಲಿ ಬಿಎಸ್‍ಎನ್‍ಎಲ್‍ನ ನೆಟ್‍ವರ್ಕ್ ಸಮಸ್ಯೆ ಸರಿಪಡಿಸುವಂತೆ ಜನರು ಕೇಳಿಕೊಂಡಿದ್ದರು. ಹೀಗಾಗಿ ಈ ಕುರಿತು ಸಹ ಪಬ್ಲಿಕ್ ಟಿವಿ ಸಂಸದರಿಗೆ ಮಾಹಿತಿ ನೀಡಿತ್ತು. ಬಿಎಸ್‍ಎನ್‍ಎಲ್‍ನ ಸುಳ್ಳುಮಾಹಿತಿ ಬಗ್ಗೆ ಬೆಳಕು ಚಲ್ಲಿತ್ತು. ಜಿಲ್ಲೆಯಲ್ಲಿ ಗ್ರಾಮಪಂಚಾಯ್ತಿಗಳಿಗಲ್ಲದೇ ಹಲವು ಮೊಬೈಲ್ ಟವರ್ ಸಿದ್ಧವಾಗಿದ್ದರೂ ಯಾವುದೂ ಕೂಡ ಕಾರ್ಯನಿರ್ವಹಿಸದಿದ್ದರೂ ಬಿಎಸ್‍ಎನ್‍ಎಲ್ ಅಧಿಕಾರಿಗಳು ಎಲ್ಲವೂ ಸುಸ್ಥಿತಿಯಲ್ಲಿದೆ ಎಂದು ಸುಳ್ಳುದಾಖಲೆ ತೋರಿಸಿತ್ತು. ಹೀಗಾಗಿ ಈ ವಿಷಯ ಕುರಿತು ಗರಂ ಆದ ಸಂಸದ ಅನಂತ್‍ಕುಮಾರ್ ಹೆಗ್ಡೆ ಸಂಜೆ ಆರು ಘಂಟೆಗೆ ಮುಗಿಯಬೇಕಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂದೇ ಎಲ್ಲಾ ಸರಿಯಾಗಬೇಕು ಎಂದು ಪಟ್ಟು ಹಿಡಿದರು.

    ಅಷ್ಟಕ್ಕೇ ಸುಮ್ಮನಾಗದ ಸಂಸದರು ಇಂದೇ ಸರಿಯಾಗಬೇಕು ಅಲ್ಲಿವರೆಗೂ ಕಚೇರಿ ಬಿಟ್ಟು ನಾನೂ ತೆರಳುವುದಿಲ್ಲ ನೀವೂ ತೆರಳುವಂತಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲೇ ಕುಳಿತರು. ಇದರಿಂದಾಗಿ ಬಿಎಸ್‍ಎನ್‍ಎಲ್ ಅಧಿಕಾರಿಗಳು ಕಕ್ಕಾ ಬಿಕ್ಕಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ಲಾಕ್ ಆಗಿದ್ದರು.

    ಈ ಮಧ್ಯೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂಸದರು, “ಒಂದು ವರ್ಷಗಳಿಂದ ಬಿಎಸ್‍ಎನ್‍ಎಲ್, ಜಿಎಸ್‍ಎನ್‍ಎಲ್, ಸಿಎಸ್‍ಎ ತಮ್ಮ ಆಂತರಿಕ ಜಗಳದಿಂದ ಗ್ರಾಮ ಪಂಚಾಯ್ತಿಗಳಿಗೆ ವೈಫೈ ನೀಡದೆ ಇಡೀ ಗ್ರಾಮ ಪಂಚಾಯ್ತಿ ಕಾರ್ಯ, ಚಟುವಟಿಕೆ ನಿಂತುಹೋಗುವಂತಾಗಿದೆ. ಇಂದೇ ಎಲ್ಲಾ ಸಮಸ್ಯೆ ಬಗೆಹರಿಯಬೇಕು ಅಲ್ಲಿಯವರೆಗೂ ಕಚೇರಿ ಬಿಟ್ಟು ತೆರಳುವುದಿಲ್ಲ ಇಲ್ಲಿಯೇ ಧರಣಿ ಕೂರುತ್ತೇನೆ, ಅಧಿಕಾರಿಗಳನ್ನು ಸಹ ಬಿಡುವುದಿಲ್ಲ ಎಂದರು.

    ಅಧಿಕಾರಿಗಳು ಸಹ ಸಂಸದರ ಈ ದಿಢೀರ್ ನಿರ್ಧಾರದಿಂದ ತಲೆಕೆಡಿಸಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದರನ್ನು ಓಲೈಸುವ ಕೆಲಸ ಮಾಡಿದರು. ಬಳಿಕ ಸುಮಾರು ರಾತ್ರಿ 9 ಗಂಟೆ ಸುಮಾರಿಗೆ ಸಂಸದರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರ ಬಂದರು.