Tag: ಜಿಲ್ಲಾ ಉಸ್ತುವಾರಿ

  • ಮೈಸೂರಿಗೆ ವಿ. ಸೋಮಣ್ಣ ಉಸ್ತುವಾರಿ

    ಮೈಸೂರಿಗೆ ವಿ. ಸೋಮಣ್ಣ ಉಸ್ತುವಾರಿ

    ಮೈಸೂರು: ಸಚಿವ ವಿ. ಸೋಮಣ್ಣ ಅವರು ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಆಗಿದ್ದು, ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

    ಆದೇಶ ಪತ್ರದಲ್ಲಿ, ವಿ ಸೋಮಣ್ಣ, ಮಾನ್ಯ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ಆದೇಶಿಸಿದೆ.

    ನೆರೆ ಬಗ್ಗೆ ಪರಿಶೀಲನೆ ಮಾಡಿ ಮಾಹಿತಿ ನೀಡುವುದಕ್ಕೆ ಆರ್. ಅಶೋಕ್ ಅವರನ್ನು ಮೈಸೂರಿನ ಉಸ್ತುವಾರಿ ಆಗಿ ಮಾಡಲಾಗಿತ್ತು. ಆಗ ಅಶೋಕ್ ಅವರೇ ಜಿಲ್ಲಾ ಉಸ್ತುವಾರಿ ಆಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇಂದು ಬೆಳಗ್ಗೆ ದಸರಾ ಗಜಪಡೆಗೆ ಚಾಲನೆ ನೀಡುವಾಗ ಸೋಮಣ್ಣ ಅವರು ಮೈಸೂರಿನ ಉಸ್ತುವಾರಿ ಆರ್. ಅಶೋಕ್ ಆದರೆ ನನಗೆ ಸಂತೋಷ ಎಂದು ಹೇಳಿದ್ದರು. ಆದರೆ ಅಷ್ಟರಲ್ಲಿ ಸರ್ಕಾರ ವಿ. ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಆಗಿ ನೇಮಕ ಮಾಡಿ ಆದೇಶಿಸಿದೆ. ಮುಂದಿನ ತಿಂಗಳು ದಸರಾ ಬರುತ್ತಿರುವ ಕಾರಣ ತರಾತುರಿಯಲ್ಲಿ ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎನ್ನಲಾಗಿದೆ.

  • ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್

    ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್

    ಬಳ್ಳಾರಿ: ಶನಿವಾರ ಡಿಕೆಶಿಯನ್ನ ಶಕುನಿಗೆ ಹೋಲಿಸಿದ್ದ ಶ್ರೀರಾಮುಲು ಇಂದು ಮೂರು ಸರಣಿ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

    ಶಿವಕುಮಾರ್ ಅವರ ದಾಟಿಯಲ್ಲೇ ಶಿವಕುಮಾರ್ ಅಣ್ಣಾ ಎನ್ನುವ ಮೂಲಕ ಕಾಲೆಳೆದ ರಾಮುಲು, “ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ಬಳ್ಳಾರಿಯ ಜನ ವಲಸೆ ಬಂದವರಿಗೆ ತಮ್ಮ ಸ್ವಾಭಿಮಾನದಿಂದ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ” ಎಂದು ಟಾಂಗ್ ಕೊಟ್ಟಿದ್ದಾರೆ.

    ಎರಡನೇ ಟ್ವೀಟ್‍ನಲ್ಲಿ “ರಾಜ್ಯ ಕಾಂಗ್ರೆಸ್ ಅನ್ನು ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೆ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು, ಬಳ್ಳಾರಿಯ ಮಂತ್ರಿಗಳಿಗೆ ಯಾರಿಗಾದರೂ ಬಳ್ಳಾರಿಯ ಉಸ್ತುವಾರಿ ಸಚಿವರನ್ನಾಗಿ ಮಾಡಿ” ಎಂದು ಹೇಳಿದ್ದಾರೆ.

    “ಶುಭಮಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ನು ಮುಂದೆ ಕೇವಲ ಚುನಾವಣಾ ಸಚಿವರಾಗದೇ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇನೆ ಅಣ್ಣಾ” ಎಂದು ಕಾಲೆಳೆದಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ವಾರ್-ಉಸ್ತುವಾರಿ ನೇಮಕ ಕಾದಾಟದಲ್ಲಿ ಮಾಜಿ ಸಿಎಂ ಫುಲ್ ಗರಂ

    ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ವಾರ್-ಉಸ್ತುವಾರಿ ನೇಮಕ ಕಾದಾಟದಲ್ಲಿ ಮಾಜಿ ಸಿಎಂ ಫುಲ್ ಗರಂ

    ಬೆಂಗಳೂರು: ಮೊದಲ ಹಂತದ ಮಂತ್ರಿ ಸ್ಥಾನ ಹಂಚಿಕೆ, ಬಜೆಟ್ ಮುಗಿತು, ಈಗ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿಗೆ ಸಂಬಂಧಸಿದಂತೆ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಬುಗಿಲೆದ್ದಿದ್ದು, ವಿಧಾನಸಭೆಯ ಚುನಾವಣೆಯ ಪೈಪೋಟಿಯ ಕಾವು ಮತ್ತೆ ಮರುಕಳಿಸಿದೆ.

    ಮಂಗಳವಾರ ಸಮ್ಮಿಶ್ರ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಣಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಮೈಸೂರು ಜಿಲ್ಲಾ ಉಸ್ತುವಾರಿಯನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ನೀಡಿದ್ದಕ್ಕೆ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರಂತೆ.

    ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಂಡದ ಯೋಜನೆಯಂತೆಯೇ ಜಿಲ್ಲಾ ಉಸ್ತುವಾರಿ ನೇಮಕ ನಡೆದಿದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತಕ್ಷೇತ್ರದಿಂದ ಭಾರೀ ಪೈಪೋಟಿ ನೀಡಿ, ಜಯಗಳಿಸಿದ್ದ ಜಿ.ಟಿ.ದೇವೇಗೌಡ ಹಾಗೂ ಸಿದ್ದರಾಮಯ್ಯ ನಡುವೆ ಅಸಮಾಧಾನದ ಹೊಗೆ ಇನ್ನು ಶಮನಗೊಂಡಿಲ್ಲ. ಕಳೆದ ಕೆಲವು ದಿನಗಳಿಂದ ಸಿಂಡಿಕೇಟ್ ಸದಸ್ಯರ ನೇಮಕಾತಿಯಲ್ಲಿಯೂ ಇಬ್ಬರ ನಾಯಕರ ಮಧ್ಯೆ ಶೀತಲ ಸಮರ ಏರ್ಪಟ್ಟಿತ್ತು. ಈಗ ಮೈಸೂರು ಜಿಲ್ಲಾ ಉಸ್ತುವಾರಿಯೂ ಜಿ.ಟಿ.ದೇವೇಗೌಡರು ಅಂದು ಕೊಂಡಂತೆ ಆಗಿದೆ.

    ತಮ್ಮ ಆಪ್ತ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕೊಟ್ಟಿರೋದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯವರ ಮಾತನ್ನೇ ಕೇಳುತ್ತಿಲ್ಲವಂತೆ. ಈಗ ಜಿಲ್ಲಾ ಉಸ್ತವಾರಿ ನೇಮಕದ ನಡೆ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಹಂಚಿಕೆ ಅಸಮಾಧಾನಕ್ಕೆ ಕಾರಣವಾಗಿದೆ.