Tag: ಜಿಲ್ಲಾ ನ್ಯಾಯಾಲಯ ಲುಧಿಯಾನ

  • ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಚಂಡೀಗಢ: ಪಂಜಾಬ್‍ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಟ್ಟಡದ ಎರಡನೇ ಮಹಡಿಯಲ್ಲಿರುವ ಬಾತ್‍ರೂಮ್‍ನಲ್ಲಿ ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್‍ರೂಮ್ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ನ್ಯಾಯಾಲಯ ಲುಧಿಯಾನ ನಗರದ ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಮೀಪದಲ್ಲಿದೆ.

    ಈ ಘಟನೆ ಸಂಬಂಧ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಕೂಲಂಕಷವಾಗಿ ತನಿಖೆ ನಡೆಸುವಂತೆ ಪಂಜಾಬ್ ಪೊಲೀಸರಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ:  ಜಾಹೀರಾತಿನಲ್ಲಿ ಸಹಾಯವಾಣಿ ನಂಬರ್ ತಪ್ಪಾಗಿದ್ದಕ್ಕೆ ಮಹಿಳೆಗೆ ಎಡಬಿಡದೇ ಬಂತು 4,500 ಫೋನ್‌ ಕಾಲ್‌!

    ಲುಧಿಯಾನ ಕೋರ್ಟ್ ಆವರಣದಲ್ಲಿ ಸಂಭವಿಸಿದ ಸ್ಫೋಟ ವಿಚಾರ ಗೊಂದಲನ್ನುಂಟು ಮಾಡಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಬಗ್ಗೆ ಕೇಳಿ ದುಃಖವಾಗಿದೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ಕುರಿತಂತೆ ಪಂಜಾಬ್ ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಬಗ್ಗೆ ಸಿಕ್ತು ಗುಡ್‌ ನ್ಯೂಸ್‌ – ಪ್ರಾಥಮಿಕ ಅಧ್ಯಯನ ವರದಿಗಳು ಬಹಿರಂಗ

    ಅಮರಿಂದರ್ ಸಿಂಗ್ ಅವರು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಡೆಗಳಿಂದ ರಾಜ್ಯಕ್ಕೆ ಬೆದರಿಕೆ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ರಕ್ಷಣೆಗಾಗಿ 25 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಡ್ರೋನ್ ವಿರೋಧಿ ಗ್ಯಾಜೆಟ್‍ಗಳನ್ನು ಗಡಿ ಭದ್ರತಾ ಪಡೆಗೆ (ಬಿಎಸ್‍ಎಫ್) ಕೋರಿದ್ದಾರೆ.