Tag: ಜಿಲ್ಲಾ ಪಂಚಾಯತಿ

  • ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲೇ ಕಾಲೆಳೆದಾಟ

    ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲೇ ಕಾಲೆಳೆದಾಟ

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರಲ್ಲೇ ಪರಸ್ಪರ ಕಾಲೆಳೆದಾಟ ನಡೆದಿದ್ದು, ಹಾಲಿ ಜಿಲ್ಲಾ ಪಂಚಾಯತಿ ಸದಸ್ಯ ಎಚ್.ವಿ ಮಂಜುನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕಾಂಗ್ರೆಸ್‍ಗೆ ಬಹುಮತವಿದ್ದು ಮೊದಲ ಅವಧಿಗೆ ಶಾಸಕ ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಅಧ್ಯಕ್ಷರಾಗಿದ್ದರು. ತದನಂತರ ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ಬೆಂಬಲಿತ ಹೊಸೂರು ಜಿಲ್ಲಾ ಪಂಚಾಯತಿ ಸದಸ್ಯ ಎಚ್.ವಿ ಮಂಜುನಾಥ್ ಆಯ್ಕೆಯಾಗಿದ್ದರು.

    ಆದರೆ ಈಗ ಅಧ್ಯಕ್ಷಗಾದಿ ಮೇಲೆ ಮತ್ತೆ ಕಣ್ಣು ಹಾಕಿರುವ ಶಾಸಕ ಸುಧಾಕರ್ ತಮ್ಮ ಬೆಂಬಲಿತರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ರಾಜ್ಯದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಈ ಸಂಬಂಧ ನಿನ್ನೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿ ಹಾಲಿ ಅಧ್ಯಕ್ಷ ಮಂಜುನಾಥ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

    ಇಂದು ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಎಚ್.ವಿ ಮಂಜುನಾಥ್ ರಾಜಕೀಯ ಕಾರಣಕ್ಕೋಸ್ಕರ ಹೈಕಮಾಂಡ್ ಆದೇಶದಂತೆ ತಾನು ನಾಳೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಇದಕ್ಕೆ ಮಂಜುನಾಥ್ ಬೆಂಬಲಿಗರು ವಿರೋಧ ಮಾಡಿದ್ದರು. ಅದರೆ ಅಂತಿಮವಾಗಿ ರಾಜೀನಾಮೆ ನೀಡಲು ಹೈಕಮಾಂಡ್ ಸೂಚಿಸಿದ್ದು ಪಕ್ಷದ ಶಿಸ್ತಿನ ಸಿಪಾಯಿಯಾದ ನಾನು ಪಕ್ಷದ ಆದೇಶಕ್ಕೆ ತಲೆಬಾಗಿ ರಾಜೀನಾಮೆ ಕೊಡುತ್ತೇನೆ ಎಂದು ಮಂಜುನಾಥ್ ಹೇಳಿದ್ದಾರೆ.

    ಇನ್ನೂ ಮುಂದೆ ಸಾಮಾನ್ಯ ಸದಸ್ಯನಾಗಿ ಕೆಳಗೆ ಕುಳಿತು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಅದರೆ ಈ ಹಿಂದಿನ ಅಧ್ಯಕ್ಷರ ಹಾಗೆ ಅಧ್ಯಕ್ಷ ಸ್ಥಾನದಿಂದ ಹೋದ ಬಳಿಕ ಸಭೆಗಳಿಗೆ ಬಾರದೆ ಇರಲ್ಲ ಎಂದು ಮಾಜಿ ಅಧ್ಯಕ್ಷ ಶಾಸಕ ಸುಧಾಕರ್ ತಂದೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

  • ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಫೆ.23ರಂದು ನಡೆಯಲಿದೆ. ಈ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

    ಈ ಹಿಂದೆ ಸ್ಥಳೀಯ ನಾಯಕರು ತೆಗೆದುಕೊಂಡಿದ್ದ ನಿರ್ಧಾರದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಈ ಮೂಲಕ ಹಿಂದಿನ ಒಪ್ಪಂದದಂತೆ ನಮ್ಮ ಪಕ್ಷದ ಪರಿಮಳಾ ಶ್ಯಾಮ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಂಠಪೂರ್ತಿ ಕುಡಿದು ಕಚೇರಿಯಲ್ಲೇ ರಂಪಾಟ ನಡೆಸಿದ ಸರ್ಕಾರಿ ನೌಕರ

    ಕಂಠಪೂರ್ತಿ ಕುಡಿದು ಕಚೇರಿಯಲ್ಲೇ ರಂಪಾಟ ನಡೆಸಿದ ಸರ್ಕಾರಿ ನೌಕರ

    ನೆಲಮಂಗಲ: ನಗರದ ಹೊರವಲಯ ನೆಲಮಂಗಲ ಪಟ್ಟಣ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕಂಠ ಪೂರ್ತಿ ಕುಡಿದು ಬಂದ ಸರ್ಕಾರಿ ನೌಕರನೊಬ್ಬ ಮದ್ಯದ ಅಮಲಿನಲ್ಲಿ ಮತ್ತೊಬ್ಬ ನೌಕರನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ಸುರೇಶ್ ಎಂಬವರ ವಿರುದ್ಧವೇ ಕುಡಿದು ಬಂದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುರೇಶ್ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದು, ಕ್ಷುಲಕ ವಿಚಾರಕ್ಕೆ ಮತೊಬ್ಬ ನೌಕರ ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

    ಸುರೇಶ್ ಗೆ ಕೆಲಸ ನಿರ್ವಹಿಸಲು ಸೂಚಿಸಿದಾಗ, ನನಗೆ ಕೆಲಸ ಹೇಳಲು ನೀನು ಯಾರು? ನನಗೆ ನನ್ನ ಅಧಿಕಾರಿಗಳೇ ಕೆಲಸ ಮಾಡಲು ಹೇಳಲ್ಲ. ನನಗೆ ನೀನು ಕೆಲಸ ಹೇಳುತ್ತೀಯ ಎಂದು ಗಲಾಟೆ ಮಾಡಿದ್ದಾರೆ. ಇಷ್ಟಲ್ಲದೇ ಉಮೇಶ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ.

    ಘಟನೆ ವೇಳೆ ಕಚೇರಿಯ ಉನ್ನತ ಅಧಿಕಾರಿಗಳು ಮಾತನಾಡುವ ಗೋಜಿಗೆ ಬರಲಿಲ್ಲ ಎನ್ನಲಾಗಿದೆ. ನಂತರ ನೆಲಮಂಗಲ ಪಟ್ಟಣ ಪೊಲೀಸರು ಘಟನಾ ಸ್ಥಳಕ್ಕೆ ದಾವಿಸಿ ಕುಡುಕನಿಗೆ ವಾರ್ನ್ ಮಾಡಿ ಕಳುಹಿಸಿದ್ದಾರೆ. ಇನ್ನೂ ಕುಡಿತದ ಮತ್ತಿನಲ್ಲಿದ ನೌಕರ ಸುರೇಶ್ ಮಾಧ್ಯಮಗಳ ಮುಂದೆ ನಾನು ಕುಡಿದಿಲ್ಲ, ಸುಮ್ಮನೆ ಮಾತನಾಡಿಸಲು ಬಂದಿದ್ದೆ ಎಂಬ ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುವ ಪ್ರಯತ್ನವನ್ನು ನಡೆಸಿದ್ದಾನೆ.

  • ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

    ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

    ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ ಮುಖಕ್ಕೆ ಚಪ್ಪಲಿಯಿಂದ ಹೊಡೆಯಲು ಯತ್ನಿಸಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.

    ಶನಿವಾರ ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಓ ಡಾ. ಆರ್ ಸೇಲ್ವಮಣಿ ಎದುರಲ್ಲೇ ಈ ಘಟನೆ ನಡೆದಿದ್ದು, ಸಿಇಓ ಸಾಹೇಬ್ರು ಜನ ಪ್ರತಿನಿಧಿಗಳ ರಂಪಾಟ ನೋಡಿ ದಂಗಾಗಿ ಹೊಗಿದ್ದರು.

    ಕುಡಿಯುವ ನೀರಿನ ಯೋಜನೆಯಡಿಯಲ್ಲಿ 32 ಲಕ್ಷದ ಕಾಮಗಾರಿ ಪೂರ್ಣಗೊಂಡಿದ್ದು ಅದರ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷರು ಮನವಿ ಮಾಡಿದ್ದರು. ಆದ್ರೆ ಇದಕ್ಕೆ ವಿರೋಧಿಸಿದ ಜಿ.ಪಂ ಸದಸ್ಯ ಸುಧೀರ್ ಕಾಡಾದಿ ಮತ್ತು ಅವರ ಟೀಂ ಅಶ್ಲೀಲವಾಗಿ ಮಾತನಾಡುತ್ತಾ ಗ್ರಾಪಂ ಅಧ್ಯಕ್ಷರ ಮತ್ತು ಮುಖಂಡರ ಮೇಲೆ ಹಲ್ಲೆಗೆ ಮುಂದಾದರು ಎನ್ನಲಾಗಿದೆ.

    ಈ ಕುರಿತು ಹುಲಸೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://youtu.be/jPubjLqjr0A