Tag: ಜಿ.ಎನ್.ನಂಜುಂಡಸ್ವಾಮಿ

  • ಅವಹೇಳನ ಮಾಡಿದ್ದ ಎಂಎಲ್ಎ ಮಗನ ವಿರುದ್ಧ ಟ್ವೀಟ್ ಮಾಡಿದ ಸುದೀಪ್

    ಅವಹೇಳನ ಮಾಡಿದ್ದ ಎಂಎಲ್ಎ ಮಗನ ವಿರುದ್ಧ ಟ್ವೀಟ್ ಮಾಡಿದ ಸುದೀಪ್

    ಟ ಕಿಚ್ಚ ಸುದೀಪ್ (Sudeep) ಬಗ್ಗೆ ಕೊಳ್ಳೇಗಾಲ (Kollegala) ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಪುತ್ರ ಲೋಕೇಶ್ (Lokesh) ಅವಹೇಳನಕಾರಿಯಾಗಿ (Contempt) ಆಡಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕಿಚ್ಚನ ಬಗ್ಗೆ ಲೋಕೇಶ್ ಹಗುರವಾಗಿ ಮಾತನಾಡಿದ್ದಕ್ಕಾಗಿ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ತಮ್ಮ ನೆಚ್ಚಿನ ನಟನ ಕುರಿತು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ಮಾಡುವುದಾಗಿಯೂ ಎಚ್ಚರಿಸಿದ್ದರು.

    ಈ ಎಚ್ಚರಿಕೆಯ ಹಿನ್ನೆಲೆಯಲ್ಲಿ ಲೋಕೇಶ್ ಮತ್ತೊಂದು ವಿಡಿಯೋ ಮಾಡಿ, ‘ಸುದೀಪ್ ಅವರು ನನಗೆ ಕರೆ ಮಾಡಿದ್ದರು. ನಮ್ಮವರು ಅವರೆಲ್ಲ ಕ್ಷಮೆ ಕೇಳಿ ಎಂದು ಹೇಳಿದ್ದರು. ಹಾಗಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ’ ಎನ್ನುವ ವಿಡಿಯೋ ಅಪ್ ಲೋಡ್ ಮಾಡಿದ್ದರು. ಅದು ಕೂಡ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಸುದೀಪ್ ಬೇಸರ ವ್ಯಕ್ತ ಪಡಿಸಿದ್ದಾರೆ. ಆ ಕುರಿತು ಅವರು ಟ್ವೀಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ‘ನಾನು ಯಾರಿಗೂ ಕರೆ ಮಾಡಿಲ್ಲ. ಕ್ಷಮೆ ಕೇಳುವುದನ್ನು ನಾನು ಹೆಮ್ಮೆ ಪಡುವುದಿಲ್ಲ. ಪ್ರತಿಯೊಂದು ಕ್ರಿಯೆಗೂ ಪ್ರತಿಕ್ರಿಯೆ ಇರುತ್ತದೆ ಎನ್ನುವುದು ಹಳೆಯ ಸಿದ್ಧಾಂತ. ನಾನು ಹೇಳಿಲ್ಲ’ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಲೋಕೇಶ್ ತಮ್ಮ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಪರೋಕ್ಷವಾಗಿ ಅಭಿಮಾನಿಗಳಿಗೆ ಹೇಳಿದ್ದಾರೆ.

    ಏನಿದು ವಿವಾದ?

     ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕಿಚ್ಚ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರಂತೆ. ಇವರಿಗೆ ಟಾಂಗ್ ಕೊಡುವುದಕ್ಕಾಗಿಯೇ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದರು.

    ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, ‘ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ’ ಎಂದು ಮಾತನಾಡಿದ್ದಾರೆ. ಈ ಮಾತುಗಳು ಸುದೀಪ್ ಅಭಿಮಾನಿಗಳನ್ನು ಕೆರಳಿಸಿವೆ. ಹಾಗಾಗಿ ಲೋಕೇಶ್ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪಟ್ಟ ಹಿಡಿದಿದ್ದರು.

    ಈ ಕುರಿತು ಮಾತನಾಡಿರುವ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು, ‘ಲೋಕೇಶ್ ಕೂಡಲೇ ಸುದೀಪ್ ಅವರಿಗೆ ಕ್ಷಮೆ ಕೇಳಬೇಕು. ಕೇಳದೇ ಇದ್ದರೆ, ಪ್ರತಿಭಟನೆ ಮಾಡಲಾಗುವುದು. ಇದು ಕೇವಲ ಸುದೀಪ್ ಅವರಿಗೆ ಮಾಡಿರುವ ಅವಮಾನವಲ್ಲ, ಅಭಿಮಾನಿಗಳಿಗೂ ಮಾಡಿರುವ ಅಪಮಾನ’ ಎಂದಿದ್ದರು.

  • ಕಿಚ್ಚನ ವಿರುದ್ಧ ಅವಹೇಳನ: ಮಾಜಿ ಶಾಸಕನ ಪುತ್ರನ ವಿರುದ್ಧ ಫ್ಯಾನ್ಸ್ ಗರಂ

    ಕಿಚ್ಚನ ವಿರುದ್ಧ ಅವಹೇಳನ: ಮಾಜಿ ಶಾಸಕನ ಪುತ್ರನ ವಿರುದ್ಧ ಫ್ಯಾನ್ಸ್ ಗರಂ

    ನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ (Sudeep) ಬಗ್ಗೆ ಕೊಳ್ಳೇಗಾಲ (Kollegala) ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಪುತ್ರ ಲೋಕೇಶ್ (Lokesh) ಅವಹೇಳನಕಾರಿಯಾಗಿ (Contempt) ಆಡಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಚ್ಚನ ಬಗ್ಗೆ ಲೋಕೇಶ್ ಹಗುರವಾಗಿ ಮಾತನಾಡಿದ್ದಾರೆ ಎಂದು ಅಭಿಮಾನಿಗಳ ಗರಂ ಆಗಿದ್ದಾರೆ.

    ಜಿ.ಎನ್. ನಂಜುಂಡಸ್ವಾಮಿ (G.N. Nanjundaswamy) ಈ ಬಾರಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕಿಚ್ಚ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರಂತೆ. ಇವರಿಗೆ ಟಾಂಗ್ ಕೊಡುವುದಕ್ಕಾಗಿಯೇ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, ‘ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ’ ಎಂದು ಮಾತನಾಡಿದ್ದಾರೆ. ಈ ಮಾತುಗಳು ಸುದೀಪ್ ಅಭಿಮಾನಿಗಳನ್ನು ಕೆರಳಿಸಿವೆ. ಹಾಗಾಗಿ ಲೋಕೇಶ್ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪಟ್ಟ ಹಿಡಿದಿದ್ದಾರೆ.

    ಈ ಕುರಿತು ಮಾತನಾಡಿರುವ ವಾಲ್ಕೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು, ‘ಲೋಕೇಶ್ ಕೂಡಲೇ ಸುದೀಪ್ ಅವರಿಗೆ ಕ್ಷಮೆ ಕೇಳಬೇಕು. ಕೇಳದೇ ಇದ್ದರೆ, ಪ್ರತಿಭಟನೆ ಮಾಡಲಾಗುವುದು. ಇದು ಕೇವಲ ಸುದೀಪ್ ಅವರಿಗೆ ಮಾಡಿರುವ ಅವಮಾನವಲ್ಲ, ಅಭಿಮಾನಿಗಳಿಗೂ ಮಾಡಿರುವ ಅಪಮಾನ’ ಎಂದಿದ್ದಾರೆ.

  • ಕೊಳ್ಳೇಗಾಲ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ – ಹಾಲಿ, ಮಾಜಿ ಶಾಸಕರ ನಡುವೆ ಟಿಕೆಟ್ ಫೈಟ್!

    ಕೊಳ್ಳೇಗಾಲ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ – ಹಾಲಿ, ಮಾಜಿ ಶಾಸಕರ ನಡುವೆ ಟಿಕೆಟ್ ಫೈಟ್!

    ಚಾಮರಾಜನಗರ: 2023ರ ಚುನಾವಣಾ ಕಾವು ರಾಜ್ಯಾದ್ಯಂತ ಜೋರಾಗಿದೆ. ಗಡಿಜಿಲ್ಲೆ ಚಾಮರಾಜನಗರದಲ್ಲೂ (Chamarajanagar) ರಾಜಕೀಯ ಆಟ ಶುರುವಾಗಿದ್ದು, ಕೊಳ್ಳೇಗಾಲ (Kollegala) ನಗರಸಭೆ ಉಪಚುನಾವಣೆ ರಿಸಲ್ಟ್ ಹಾಲಿ ಮತ್ತು ಮಾಜಿ ಶಾಸಕರ ಮುಸುಕಿನ ಗುದ್ದಾಟಕ್ಕೆ ಎಡೆ ಮಾಡಿಕೊಟ್ಟಿದೆ. ಈ ಮೂಲಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.

    ಬಿಎಸ್‌ಪಿಯಿಂದ (BSP) ಉಚ್ಚಾಟನೆಗೊಂಡು ಇದೀಗ ಕೇಸರಿ ಪಡೆ ಸೇರಿರುವ ಶಾಸಕ ಎನ್.ಮಹೇಶ್ (N.Mahesh) ವಿರುದ್ಧ ಪಕ್ಷದಲ್ಲೇ ವಿರೋಧಿಗಳು ಹೆಚ್ಚಾಗಿದ್ದಾರೆ. ಇದಕ್ಕೆ ಕಾರಣ ನಗರಸಭೆ ಉಪಚುನಾವಣೆ. ಬಿಎಸ್ಪಿ ತ್ಯಜಿಸಿ ಬಂದಿದ್ದ ಕಮಲ ಹಿಡಿದ ಆರು ಸದಸ್ಯರ ಗೆಲುವು. 6 ಬಾರಿ ಚುನಾವಣೆ ಎದುರಿಸಿ ಎರಡು ಬಾರಿ ಶಾಸಕರಾಗಿರುವ ಜಿ.ಎನ್.ನಂಜುಂಡಸ್ವಾಮಿ (G.N.Nanjundaswamy) ತಾವೇ ಅಭ್ಯರ್ಥಿ ಎಂಬ ಉಮೇದಿನಲ್ಲಿದ್ದರು. ಆದರೆ ಉಪಚುನಾವಣೆಯ ಗೆಲುವು ಶಾಸಕ ಮಹೇಶ್ ಪಾಲಿಗೆ ವರವಾಗಿದೆ. ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa), ಸಚಿವ ಸೋಮಣ್ಣ ಅವರು ಎನ್.ಮಹೇಶ್ ಅವರನ್ನು ಗೆಲ್ಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿರುವುದು ನಂಜುಂಡಸ್ವಾಮಿ ಅವರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಹೀಗಾಗಿ ಅವರು ಎನ್.ಮಹೇಶ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯಲ್ಲಿ ಯಾರಿಗೂ ಟಿಕೆಟ್ ಘೋಷಣೆಯಾಗಿಲ್ಲ. ನಾನು ಕೂಡ ಪ್ರಬಲ ಆಕಾಂಕ್ಷಿ ಅಂತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಕಮಿಷನ್ ಆರೋಪ

    ಬಿಎಸ್ಪಿ ತ್ಯಜಿಸಿ ಬಿಜೆಪಿ ಸೇರಿರುವ ಎನ್.ಮಹೇಶ್ 2023ರ ಅದೃಷ್ಟ ಪರೀಕ್ಷೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಗರಸಭೆ ಉಪಚುನಾವಣೆ ಫಲಿತಾಂಶ ಬಿಜೆಪಿ ಪರ ಬಂದಿರುವುದು ಮಾತ್ರವಲ್ಲದೆ ರಾಜ್ಯ ಮಟ್ಟದ ನಾಯಕರು ಹೋದಲ್ಲಿ ಬಂದಲ್ಲಿ ಕೊಳ್ಳೇಗಾಲ ಗೆಲುವನ್ನು ಪುನರುಚ್ಛರಿಸುತ್ತಿರುವುದು ಮಹೇಶ್ ಸಂತಸಕ್ಕೆ ಕಾರಣವಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಎದ್ದಿರುವ ಭಿನ್ನಮತವನ್ನು ಅವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಿದ್ದೇನೆ. ಚುನಾವಣೆಯಲ್ಲಿ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಇಲ್ಲವಾದರೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ಇದರ ಜೊತೆಗೆ ತಾನು ಸಹ ಟಿಕೆಟ್ ಆಕಾಂಕ್ಷಿ ಎಂದು ಜಾಣ್ಮೆಯ ನಡೆ ಅನುಸರಿಸ್ತಿದ್ದಾರೆ.

    ಸದ್ಯ ಗಡಿ ಜಿಲ್ಲೆಯ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟ ಆಂತರಿಕವಾಗಿದೆಯಾದರೂ ಮುಂದಿನ ದಿನಗಳಲ್ಲಿ ಬಹಿರಂಗವಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿ ಹೈಕಮಾಂಡ್ ಈಗಲೇ ನೋವಿಗೆ ಮುಲಾಮು ಹಚ್ಚುವ ಕೆಲಸ ಮಾಡದಿದ್ರೆ ಮುಂದೆ ಬಂಡಾಯ ಸ್ಪೋಟವಾಗುವ ಸಾಧ್ಯತೆಯೇ ಹೆಚ್ಚಿದೆ. ಇದನ್ನೂ ಓದಿ: ಮಹೇಶ್ ಕಮಾಲ್, ಬಿಜೆಪಿಗೆ ಭರ್ಜರಿ ಗೆಲುವು – 7 ಅನರ್ಹರಲ್ಲಿ 6 ಮಂದಿ ಜಯಭೇರಿ

    Live Tv
    [brid partner=56869869 player=32851 video=960834 autoplay=true]