Tag: ಜಿ.ಟಿ.ದೇವೆಗೌಡ

  • ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು? ನಾನೇ ದೇವೇಗೌಡ್ರ ಮನೆ ಬಾಗಿಲು ಕ್ಲೋಸ್ ಮಾಡಿ ಬಂದಿದ್ದೇನೆ: ಜಿಟಿಡಿ

    ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು? ನಾನೇ ದೇವೇಗೌಡ್ರ ಮನೆ ಬಾಗಿಲು ಕ್ಲೋಸ್ ಮಾಡಿ ಬಂದಿದ್ದೇನೆ: ಜಿಟಿಡಿ

    ಮೈಸೂರು: ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು..? ನಾನೇ ದೇವೇಗೌಡರ ಮನೆ ಬಾಗಿಲನ್ನು ದಡಾರಂತ ಕ್ಲೋಸ್ ಮಾಡಿಕೊಂಡು ಬಂದಿದ್ದೇನೆ ಎಂದು ಕುಮಾರಸ್ವಾಮಿಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

    ಮೈಸೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಬಾಗಿಲು ಹಾಕಿಕೊಂಡು ಬಂದ ನಂತರ ಅಂದಿನಿಂದ ಬಾಗಿಲು ಹಾಕಿದ್ದರೋ, ತೆಗೆದಿದ್ದಾರೋ ಎಂದು ನಾನು ನೋಡಿಲ್ಲ. ನಾನಂತು ನೋಡೋಕೆ ಹೋಗಲ್ಲ. ಈ ವಿಧಾನಪರಿಷತ್ ಚುನಾವಣೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಗುವುದಿಲ್ಲ. ಆದರೆ ಇಲ್ಲಿ ಕಳಂಕಗಳು ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

    HDD

    ಪರಿಷತ್‍ಗೆ ತಜ್ಞರು, ಬುದ್ದಿಜೀವಿಗಳು ಆರಿಸಿ ಹೋಗಬೇಕು. ಆದರೆ ಹಿನ್ನೆಲೆ ಹೇಗೆ ಇದ್ದರೂ ದುಡ್ಡೊಂದಿದ್ರೆ ಸಾಕು ಎನ್ನುವಂತಾಗಿದೆ. ಮೈಸೂರಿನಲ್ಲಿ ಮಂಜುನಾಥ ಸ್ವಾಮಿಯ ಬೆಳ್ಳಿಯ ಕಾಯಿನ್, ಜೊತೆಗೆ ಉಪ್ಪು, ಮಾರಿ ಕೂದಲು ಇಟ್ಟು ಆಣೆ ಪ್ರಮಾಣ ಮಾಡಿ ವೋಟ್ ಹಾಕಿಸಿಕೊಂಡಿದ್ದಾರೆ. ಇದನ್ನು ನೋಡಿದ್ರೆ ಪರಿಷತ್‍ನ ಪಾವಿತ್ರತೆಗೆ ಕಳಂಕ ಅಲ್ಲವೇ? ಎಂದು ಕಿಡಿಕಾರಿದರು. ಇದನ್ನೂ ಓದಿ: ಕರ್ನಾಟಕ: ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಗೈಡ್‌ಲೈನ್ಸ್‌

  • ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

    ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

    ಮೈಸೂರು: ನಾನು ಜೆಡಿಎಸ್‍ನಲ್ಲಿ ಇರಬೇಕಾ, ಬೇಡ್ವಾ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಕೇಳುತ್ತೇನೆ. ಕುಮಾರಸ್ವಾಮಿ ಅವರ ಯಾವುದೇ ಅಭಿಪ್ರಾಯ ಇದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ಎಂದು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಊಹಪೋಹಗಳಿಗೆ ಶಾಸಕ ಜಿ.ಟಿ.ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.


    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿರಬೇಕು ಅಂತ ಜನರು ತೀರ್ಮಾನ ಮಾಡುತ್ತಾರೆ. ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ. ಬೆಳವಾಡಿ ದೇವಾಲಯಕ್ಕೆ ಹಣವನ್ನು ನೀಡಿದ್ದೆ. ಆದ್ರು ಆಹ್ವಾನ ಮಾಡಲಿಲ್ಲ. ಅದೇ ರೀತಿ ರಮ್ಮನಹಳ್ಳಿಗು ಆಹ್ವಾನ ಮಾಡಲಿಲ್ಲ. ಇದೀಗಾ ಕ್ಷೇತ್ರದಲ್ಲಿ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು ಭಾಗಿಯಾಗುತ್ತಿದ್ದೇನೆ ಅಷ್ಟೆ ಎಂದರು. ಇದನ್ನೂ ಓದಿ: ಜಿಟಿಡಿ ಎಲ್ಲಿಗೆ ಹೋಗಬೇಕು ಹೋಗಲಿ ಬಿಡಿ: ಹೆಚ್‍ಡಿಡಿ


    ಕ್ಷೇತ್ರದ ಜನರು ಕರೆದಾಗ ನಾನು ಹೋಗಲೆ ಬೇಕು. ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದರೆ ನಾನು ಪಕ್ಷ ಸೇರುವುದು, ಬಿಡುವುದು ಎಲ್ಲವು ಜನರಿಗೆ ಬಿಟ್ಟಿದ್ದು. ನಾನು ಈ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಇನ್ನು ಚುನಾವಣೆಗೆ ಸಾಕಷ್ಟು ಸಮಯ ಇದೆ. ಎಲ್ಲವೂ ಮತದಾರ ತೀರ್ಮಾನದಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಠಾತ್ ಹಾರ್ಟ್ ಅಟ್ಯಾಕ್ ಆದಾಗ ಏನ್ ಮಾಡ್ಬೇಕು?

  • ಜಿಟಿಡಿ ಕಾಂಗ್ರೆಸ್ಸಿಗೆ ಬರುವುದಕ್ಕೆ ನಿರ್ಧರಿಸಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

    ಜಿಟಿಡಿ ಕಾಂಗ್ರೆಸ್ಸಿಗೆ ಬರುವುದಕ್ಕೆ ನಿರ್ಧರಿಸಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

    ಮಡಿಕೇರಿ: ಜಿ.ಟಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

    ಇಂದು ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳಲ್ಲ. ಜನತಾ ಪರಿವಾರ ಇರುವಾಗಿನಿಂದಲೂ ಜಿಟಿಡಿ ಮತ್ತು ನಮ್ಮ ತಂದೆ ಒಟ್ಟಿಗೆ ಇದ್ದರು ಮತ್ತು ಒಟ್ಟಿಗೆ ಕೆಲಸ ಮಾಡಿದ್ದಾರೆ. ನಂತರ ಬೇರೆ ಪಕ್ಷಕ್ಕೆ ಹೋದರು. ಈಗಲೂ ಅವರಿಬ್ಬರೂ ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರಿದ್ದಾರೆ. ಇದೀಗಾ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ಹೊಂದಿದ್ದು, ಕಾಂಗ್ರೆಸ್‍ಗೆ ಬರಲು ನಿರ್ಧಾರಿಸಿದ್ದಾರೆ. ಈ ಕುರಿತು ಪಕ್ಷದ ನಾಯಕರು ನಿರ್ಧರಿಸುತ್ತಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ – ಸಿದ್ದು ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

    ಇದೇ ವೇಳೆ ಸಿದ್ದರಾಮಯ್ಯ, ಡಿಕೆಶಿ ನಿನ್ನೆ ನಡೆದ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸದೇ ಇರುವುದರ ಬಗ್ಗೆ ಕುರಿತಂತೆ ಮಾತನಾಡಿದ ಅವರು, ಭಾಗವಹಿಸದಿರುವುದು ಗೊಂದಲ ಅಥವಾ ಮುನಿಸಲ್ಲ ಅವರವರ ಕೆಲಸದ ಒತ್ತಡದಲ್ಲಿದ್ದರು. ಹೀಗಾಗಿ ಇಬ್ಬರು ಭಾಗವಹಿಸಲಾಗಿಲ್ಲ. ಆದರೆ ಇದನ್ನೇ ಬಣ ರಾಜಕೀಯ ಅಂತ ಬಿಂಬಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರರಾಜಕಾರಣಕ್ಕೆ ಸಿದ್ದರಾಮಯ್ಯ ಹೋಗ್ತಾರಾ?- ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ 

    ಕಾಂಗ್ರೆಸ್‍ನವರು ನಾವೆಲ್ಲರೂ ಒಗ್ಗಟ್ಟಾಗಿದ್ದು ಕೆಲಸ ಮಾಡುತ್ತೇವೆ. ನಮ್ಮ ಗುರಿ ಇರುವುದು ಒಂದೇ 2023ರ ಚುನಾವಣೆಯಲ್ಲಿ ಕಾಂಗ್ರೆಸನ್ನು ಅಧಿಕಾರಕ್ಕೆ ತರುವುದು ಎಂದಿದ್ದಾರೆ.

  • ‘ಆ’ ಹೆಣ್ಣುಮಗಳಿಗೆ ಯಾರಿಂದ ರಕ್ಷಣೆ ಸಿಗಬೇಕೋ ಸಿಕ್ಕಿದೆ: ಹೆಚ್‍ಡಿಕೆ

    ‘ಆ’ ಹೆಣ್ಣುಮಗಳಿಗೆ ಯಾರಿಂದ ರಕ್ಷಣೆ ಸಿಗಬೇಕೋ ಸಿಕ್ಕಿದೆ: ಹೆಚ್‍ಡಿಕೆ

    ಮೈಸೂರು: ಸಿಡಿ ಪ್ರಕರಣದ ಹೆಣ್ಣು ಮಗಳಿಗೆ ಯಾರಿಂದ ರಕ್ಷಣೆ ಸಿಗಬೇಕಾಗಿದೆಯೋ ಅವರಿಂದ ರಕ್ಷಣೆ ಸಿಕ್ಕಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    ಹಾಲು ಒಕ್ಕೂಟ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಹೆಣ್ಣು ಮಗಳಿಗೆ ಯಾರಿಂದ ರಕ್ಷಣೆ ಸಿಗಬೇಕಿತ್ತೋ ಅವರಿಂದ ಸಿಕ್ಕಿದೆ. ಸರ್ಕಾರಕ್ಕೆ ಆ ಯುವತಿ ಟ್ರೇಸ್ ಆಗದಿದ್ದರೂ ಸಿಗಬೇಕಾದ ರಕ್ಷಣೆ ಕೆಲವರಿಂದ ಸಿಕ್ಕಿದೆ. ನನ್ನ ಅಭಿಪ್ರಾಯದಂತೆ ಆ ಹೆಣ್ಣು ಮಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದರು.

    ನಿನ್ನೆ ಆ ಹೆಣ್ಣು ಮಗಳು ವಾಟ್ಸಪ್ ಮುಖಾಂತರ ವೀಡಿಯೋವನ್ನು ಕಳುಹಿಸಿದ್ದಾಳೋ ಅಥವಾ ಆ ಮುನಷ್ಯನ ಸ್ಪೀಡ್‍ಗೆ ಬ್ರೇಕ್ ಹಾಕಲು ಯಾರಾದರೂ ಸರ್ಕಾರದ ಒಳಗೆ ಇದ್ದವರೆ ಆ ಯುವತಿಗೆ ರಕ್ಷಣೆ ಕೊಟ್ಟು ರೆಕಾರ್ಡ್ ಮಾಡಿ ಕಳುಹಿಸಿದ್ದಾರೋ ಗೊತ್ತಿಲ್ಲ. ಆದರೆ ಒಟ್ಟಾರೆ ಆ ಯುವತಿಗೆ ಯಾರೋ ಕೆಲವರಿಂದ ರಕ್ಷಣೆಯಂತೂ ಇದೆ ಎಂದರು.

    ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್‍ರವರ ಹೆಸರು ಕೇಳಿ ಬರುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದೆ ಅವರು, ಡಿಕೆಶಿ ಹೆಸರು ಈ ಪ್ರಕರಣದಲ್ಲಿ ಯಾರಾದರೂ ಹೇಳಿದ್ರಾ? ಅವರ ಹೆಸರನ್ನು ಅವರೇ ಯಾಕೆ ಮುಂದೆ ಬಿಟ್ಟುಕೊಂಡಿದ್ದಾರೆ. ಅವರೇ ಮಾಡಿದ್ದಾರೆ ಅಂತಾ ಯಾರಾದರೂ ಹೇಳಿದ್ರಾ? ಈ ರಾಜ್ಯದಲ್ಲಿ ಮಹಾ ನಾಯಕರು ಬಹಳ ಜನ ಇದ್ದಾರೆ. ಬಿಜೆಪಿ ಒಳಗೆ ಒಬ್ಬ ಮಹಾನಾಯಕರು ಬೆಳೆಯುತ್ತಿದ್ದಾರೆ. ಅವರು ಪ್ರಬುದ್ಧ ಪೊಲಿಟಿಶಿಯನ್, ನನಗಿಂತಾ ಪ್ರಬುದ್ಧ ರಾಜಕಾರಣಿ ಇಂತಹದರಲ್ಲಿ ಡಿಕೆ ಶಿವಕುಮಾರ್ ಯಾಕೆ ತಮ್ಮ ಹೆಸರನ್ನು ತಾವೇ ಈ ಪ್ರಕರಣದಲ್ಲಿ ಸಿಲುಕಿಸಿಕೊಂಡರೋ ಗೊತ್ತಿಲ್ಲ ಎಂದು ಹೇಳಿದರು.

    ಜಿಟಿ ದೇವೇಗೌಡ ವಿಚಾರವಾಗಿ, ಜಿಟಿ ದೇವೇಗೌಡರವರು ದುರಹಂಕಾರದಲ್ಲಿ ಮಾತಾಡುತ್ತಿದ್ದಾರೆ, ನಮ್ಮ ಪಕ್ಷದಿಂದ ಬೆಳೆದವರು ನಮ್ಮ ಪಕ್ಷ ಮುಗಿಸಲು ಹೊರಟಿದ್ದಾರೆ. ನನಗೆ ಸಹಕಾರ ಕ್ಷೇತ್ರದ ಎಬಿಸಿಡಿಯೂ ಗೊತ್ತಿಲ್ಲ. ಆದರೂ, ಕಾರ್ಯಕರ್ತರಿಗೆ ಶಕ್ತಿ ತುಂಬಲು ಸ್ಪರ್ಧೆಗೆ ಇಳಿದಿದ್ದೇವೆ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಜಿಟಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.

  • ಸಚಿವ ಜಿ.ಟಿ ದೇವೇಗೌಡ್ರು ತೆರಳ್ತಿದ್ದ ಕಾರಿಗೆ ಲಾರಿ ಡಿಕ್ಕಿ

    ಸಚಿವ ಜಿ.ಟಿ ದೇವೇಗೌಡ್ರು ತೆರಳ್ತಿದ್ದ ಕಾರಿಗೆ ಲಾರಿ ಡಿಕ್ಕಿ

    ಮೈಸೂರು: ಉನ್ನತ ಸಚಿವ ಜಿ.ಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ನಡೆದಿದೆ.

    ಸಚಿವ ಜಿ.ಟಿ ದೇವೇಗೌಡ ಅವರು ಕಾರ್ಯಕ್ರಮ ನಿಮಿತ್ತ ಮಳವಳ್ಳಿ ಕಡೆಗೆ ಹೊರಟ್ಟಿದ್ದರು. ಲಾರಿ ಬೆಂಗಳೂರಿನಿಂದ ಮೈಸೂರಿನತ್ತ ಚಲಿಸುತ್ತಿತ್ತು. ಈ ವೇಳೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಎದುರಿನಿಂದ ಬಂದ ಲಾರಿ ಜಿಟಿಡಿ ಇದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

    ಈ ಅಪಘಾತದಿಂದ ಸಚಿವರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸಿದ ಬಳಿಕ ಜಿ.ಟಿ ದೇವೇಗೌಡ ಅವರು ಅಪಘಾತಕ್ಕೆ ಒಳಗಾದ ಕಾರನ್ನು ಬಿಟ್ಟು ಬೇರೆ ಕಾರಿನಲ್ಲಿ ಪ್ರಚಾರಕ್ಕೆ ತೆರಳಿದ್ದಾರೆ.

    ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.