Tag: ಜಿ.ಪರಮೇಶ್ವರ

  • ಎರಡೂವರೆ ವರ್ಷಕ್ಕಷ್ಟೇ ಸಿಎಂ ಎಂದು ಯಾರೂ ಹೇಳಿಲ್ಲ, 5 ವರ್ಷಕ್ಕೆ ಸಿದ್ದರಾಮಯ್ಯರೇ ಸಿಎಂ ಅಂತ ಆಯ್ಕೆ ಮಾಡಿದ್ದೇವೆ: ಪರಂ

    ಎರಡೂವರೆ ವರ್ಷಕ್ಕಷ್ಟೇ ಸಿಎಂ ಎಂದು ಯಾರೂ ಹೇಳಿಲ್ಲ, 5 ವರ್ಷಕ್ಕೆ ಸಿದ್ದರಾಮಯ್ಯರೇ ಸಿಎಂ ಅಂತ ಆಯ್ಕೆ ಮಾಡಿದ್ದೇವೆ: ಪರಂ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿದೆ. ಇದರ ಮಧ್ಯೆ ಗೃಹ ಸಚಿವ ಪರಮೇಶ್ವರ್ (G.Parameshwara) ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

    ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನ 5 ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ನಾವು ಯಾವುದೇ ಅವಧಿ ನಿಗದಿ ಮಾಡಿ ಆಯ್ಕೆ ಮಾಡಿಲ್ಲ. ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಅಂತ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವ್ರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಕೆಶಿ

    ಹಾಗೇನಾದ್ರೂ ಅಧಿಕಾರ ಹಂಚಿಕೆ ಆಗಿದ್ರೆ ಈ ಬಗ್ಗೆ ಹೈಕಮಾಂಡ್ ಸೇರಿ ಬೇರ‍್ಯಾರು ಹೇಳಿಲ್ಲ. ಆಯ್ಕೆ ಮಾಡುವಾಗಲೂ ಎರಡೂವರೆ ವರ್ಷಕ್ಕೆ ಸಿಎಂ ಅಂತ ಹೇಳಿಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ತೆರೆ ಎಳೆಯಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

  • ಮೈಕ್ರೋ ಫೈನಾನ್ಸ್| ಶಿಕ್ಷೆಯ ಪ್ರಮಾಣ 3 ಅಲ್ಲ, 10 ವರ್ಷಕ್ಕೆ ಹೆಚ್ಚಿಸಿದ್ದೇವೆ: ಪರಮೇಶ್ವರ್

    ಮೈಕ್ರೋ ಫೈನಾನ್ಸ್| ಶಿಕ್ಷೆಯ ಪ್ರಮಾಣ 3 ಅಲ್ಲ, 10 ವರ್ಷಕ್ಕೆ ಹೆಚ್ಚಿಸಿದ್ದೇವೆ: ಪರಮೇಶ್ವರ್

    – ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲಲ್ಲ

    ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ (Micro Finance) ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದರು.

    ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.

    ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಅಂತನೇ ಬಿಲ್ ಸಿದ್ಧ ಮಾಡಲು ತಡವಾಯಿತು. ಮೊದಲ ಕರಡು ಸಿದ್ಧ ಮಾಡಿದಾಗ ಈ ಬಗ್ಗೆ ಚರ್ಚೆ ಮಾಡಿದ್ದೆವು. ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಅಂತ ಸಿಎಂ ಸೂಚನೆ ನೀಡಿದ್ದರು. ಕಾನೂನು ಇಲಾಖೆಗೆ ಸೂಚನೆ ಕೊಟ್ಟರು ಸಹ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕಂಪನಿಗಳು ಕೋರ್ಟ್ಗೆ ಹೋದರು ಸಹ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಭಾವಿಸಿದ್ದೇವೆ ಎಂದು ನುಡಿದರು.

    ಹಸುಗಳನ್ನ ಕದ್ದವರನ್ನ ಗುಂಡಿಟ್ಟು ಕೊಲ್ಲುತ್ತೇನೆ ಎಂಬ ಸಚಿವ ಮಂಕಾಳ್ ವೈದ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದರ ಬಗ್ಗೆ ಗೊತ್ತಾಗಲಿಲ್ಲ. ಅವರು ವೈಯಕ್ತಿಕವಾಗಿ ಏನೋ ಹೇಳಿರುತ್ತಾರೆ ಎಂದರು.

    ಬೆಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪ ಬಗ್ಗೆ ಮಾತನಾಡಿ, ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮತಾಂತರದ ಬಗ್ಗೆ ಹಿಂದೆಯೇ ಕಾನೂನು ಮಾಡಿದ್ದೇವೆ. 2020-21ರಲ್ಲಿ ಕಾನೂನು ತಂದಿದ್ದರು. ಅದನ್ನು ವಿತ್ ಡ್ರಾ ಮಾಡುವ ಪ್ರಕ್ರಿಯೆ ಆಗಿತ್ತು. ಅದು ಯಾವ ಹಂತದಲ್ಲಿ ಇದೆ ಎಂದು ಕಾನೂನು ಇಲಾಖೆ ಬಳಿ ಕೇಳಬೇಕು. ಮತಾಂತರ ಮಾಡೋ ಬಗ್ಗೆ ನಮ್ಮ ಇಲಾಖೆಗೆ ದೂರು ಬಂದರೆ ಅಥವಾ ಬಲವಂತ ಮಾಡುತ್ತಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಹೇಳಿದರು.

    ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹಿಜಬ್‌ಗೆ ಅವಕಾಶ ನೀಡುವ ವಿಚಾರವಾಗಿ ಗೃಹ ಸಚಿವರ ಜೊತೆ ಸಭೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಸುದೀರ್ಘವಾದ ಚರ್ಚೆ ಅವಶ್ಯಕತೆ ಇದೆ. ಚರ್ಚೆ ಮಾಡಿ ಆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇನ್ನೂ ಒಂದು ತಿಂಗಳು ಪರೀಕ್ಷೆಗೆ ಸಮಯ ಇದೆ. ಸಭೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

    ಪರಮೇಶ್ವರ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಕೆಲ ಸಚಿವರು ಭೇಟಿ ಮಾಡುತ್ತಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿಯಾಗಿದೆ. ನನಗೇ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಹ ಸುದ್ದಿ ಹುಟ್ಟಿ ಹಾಕುತ್ತಾರೆ ಎನ್ನುವುದೇ ಗೊತ್ತಾಗುತ್ತಿಲ್ಲ. ನಾನು ಯಾವುದೇ ನಿಯೋಗವನ್ನು ಹೈಕಮಾಂಡ್ ಬಳಿ ತೆಗೆದುಕೊಂಡು ಹೋಗುತ್ತಿಲ್ಲ. ಅಂತಹ ಯಾವುದೇ ರಾಜಕೀಯ ಬೆಳವಣಿಗೆಯೂ ಇಲ್ಲ. ನಾನು ಮೊನ್ನೆಯೇ ಹೇಳಿದ್ದೇನೆ. ಇಲಾಖೆ ಕೆಲಸ ಇದ್ದಾಗ ಹೋಗುತ್ತೇನೆ ಬಿಟ್ಟರೆ ಬೇರೆ ವಿಚಾರಕ್ಕೆ ನಾನು ದೆಹಲಿಗೆ ಹೋಗುವುದಿಲ್ಲ. ದೆಹಲಿಗೆ ಹೋಗಬಾರದು ಅಂತ ಏನಿಲ್ಲ. ಬ್ಯಾನ್ ಆರ್ಡರ್ ಕೂಡಾ ಇಲ್ಲ. ದೆಹಲಿಗೆ ಹೋಗುವ ಅಗತ್ಯ ಇಲ್ಲ. ಅಗತ್ಯ ಬಿದ್ದಾಗ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು.

  • ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

    ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

    ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದ ಗೃಹ ಸಚಿವ

    ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದು ಗೃಹಸಚಿವ ಜಿ. ಪರಮೇಶ್ವರ್ (G.Parameshwara) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಕೊಠಡಿ ಪೂಜೆ ಮಾಡಿದ ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಸಿಗುತ್ತದೆ. ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು. ಇದನ್ನೂ ಓದಿ: ಮಕ್ಕಳ ಜೊತೆ ಕ್ರಿಕೆಟ್ ಆಡಿದ ರೇಣುಕಾಚಾರ್ಯ

    ಬಜರಂಗದಳ (Bajarang Dal) ನಿಷೇಧ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಂಥರ್ ಗೌಡ ಗೆಲುವು – 135 ಕಿಮೀ ದೂರದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ

    ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಚಟುವಟಿಕೆ ಮಾದರಿಯ ಕೇಕ್ ಮಾಡಿ ಚೆಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ

  • ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

    ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

    ತುಮಕೂರು: ತುಮಕೂರು (Tumakuru) ಜಿಲ್ಲೆಯಲ್ಲೇ ಕೊರಟಗೆರೆ ಅತಿ ಚಿಕ್ಕ ಕ್ಷೇತ್ರ. ಈ ವಿಧಾನಸಭಾ ಕ್ಷೇತ್ರ ಚಿಕ್ಕದಾದರೂ ಚುನಾವಣೆ ಹಾಗೂ ರಾಜಕೀಯ ವಿಚಾರದಲ್ಲಿ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆಯಲ್ಲಿ (Koratagere) ಪ್ರಸ್ತುತ ಚುನಾವಣಾ ರಾಜಕೀಯ ಬೆಳವಣಿಗೆ ಹೇಗಿದೆ ಎಂಬುದನ್ನು ನೋಡೋಣ.

    ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ನಡುವೆ ನೇರಾನೇರ ಫೈಟ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ (G.Parameshwara) ಹಾಗೂ ಜೆಡಿಎಸ್ ಮಾಜಿ ಶಾಸಕ ಸುಧಾಕರ್ ಲಾಲ್ (Sudhakar Lal) ನಡುವೆ ಹಣಾಹಣಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್‌ಗೆ (Anil Kumar) ಬಿಜೆಪಿ (BJP) ಟಿಕೆಟ್‌ ನೀಡಿದ್ದು, ಜಿ.ಪರಮೇಶ್ವರ ನಿರಾಯಾಸ ಗೆಲುವಿಗೆ ತೊಡಕಾಗಿದೆ. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ

    ಅನಿಲ್ ಕುಮಾರ್ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಸಮುದಾಯದ ಸುಮಾರು 40,000 ಮತಗಳಿವೆ. ಆದರೆ ಜಿ.ಪರಮೇಶ್ವರ ಬಲೈಗೆ ಸಮುದಾಯಕ್ಕೆ ಸೇರಿದ್ದು, ಕೇವಲ 4-5 ಸಾವಿರ ಮತಗಳು ಮಾತ್ರ ಇದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಹೆಚ್ಚು ಮತಗಳನ್ನು ಪಡೆದರೆ ಅದು ಜಿ.ಪರಮೇಶ್ವರರಿಗೆ ಮುಳುವಾಗಬಹುದು. ಈ ಹಿಂದಿನ ಚುನಾವಣೆಗಳಲ್ಲಿ ಎಡಗೈ ಸಮುದಾಯದವರು ಹೆಚ್ಚಿನದಾಗಿ ಪರಮೇಶ್ವರ ಕೈ ಹಿಡಿಯುತ್ತಿದ್ದರು. ಆದರೀಗ ತಮ್ಮದೇ ಸಮುದಾಯದ ಪ್ರಬಲ ವ್ಯಕ್ತಿ ಸ್ಪರ್ಧೆಗೆ ಇಳಿದಿರುವುದರಿಂದ ಎಡಗೈ ಸಮುದಾಯದ ಬಹುಪಾಲು ಮತಗಳು ಬಿಜೆಪಿ ಅಭ್ಯರ್ಥಿ ಕಡೆಗೆ ವಾಲಿ ಪರಮೇಶ್ವರಗೆ ಹಿನ್ನಡೆ ಆಗಬಹುದು. ಇದರ ಲಾಭ ಜೆಡಿಎಸ್‌ಗೆ ಆಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅಷ್ಟೊಂದು ಪ್ರಚಾರದಲ್ಲಿ ತೊಡಗಿಲ್ಲ. ಜಿ.ಪರಮೇಶ್ವರ ಅವರು ಕಾಲಿಗೆ ಚಕ್ರಕಟ್ಟಿಕೊಂಡು ಮತದಾರರನ್ನು ತಲುಪುತ್ತಿದ್ದಾರೆ. ಜೆಡಿಎಸ್ ಇದೇ ರೀತಿ ಕ್ಷೀಣವಾಗಿದ್ದರೆ ಕಾಂಗ್ರೆಸ್‌ಗೆ ಗೆಲುವಿನ ಹಾದಿ ಸುಗಮವಾಗಲಿದೆ.

    ವೈಯಕ್ತಿಕ ವರ್ಚಸ್ಸು, ಅಭಿವೃದ್ಧಿ ಕೆಲಸ ಪರಮೇಶ್ವರ್‌ ‘ಕೈ’ ಹಿಡಿಯುತ್ತಾ?
    ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ.ಪರಮೇಶ್ವರ ಪ್ರಬಲರಾಗಿದ್ದಾರೆ. ಪರಮೇಶ್ವರಗೆ ತನ್ನದೇ ಆದ ವರ್ಚಸ್ಸಿದೆ. ಸಚಿವರಾಗಿ, ಡಿಸಿಎಂ ಆಗಿ ಕೆಲಸ ಮಾಡಿದವರು. ಅಲ್ಲದೇ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದು, ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಲಿಸ್ಟ್‌ನಲ್ಲಿದ್ದಾರೆ. ಕಳೆದ ಎರಡು ವರ್ಷದಿಂದಲೇ ಚುನಾವಣೆ ತಯಾರಿ ಮಾಡಿಕೊಂಡಿರುವ ಜಿ‌.ಪರಮೇಶ್ವರ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದಿನದಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿರುವುದು ಚುನಾವಣೆಯಲ್ಲಿ ಅವರ ಕೈ ಹಿಡಿಯಬಹುದು. ಇದನ್ನೂ ಓದಿ: ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಇನ್ನೊಂದು ದೃಷ್ಟಿಕೋನದಲ್ಲಿ ನೋಡುವುದಾದರೆ, ಜಿ.ಪರಮೇಶ್ವರ ಸಮುದಾಯದ ಮತ ಅತಿ ಕಡಿಮೆ ಇದೆ. ಈ ಬಾರಿ ಪರಮೇಶ್ವರರನ್ನೇ ಟಾರ್ಗೆಟ್‌ ಮಾಡಿರುವ ಬಿಜೆಪಿ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಎಡಗೈ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಇದು ಪರಮೇಶ್ವರರಿಗೆ ಹೊಡೆತ ಕೊಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದು ಸಹ ಈ ಬಾರಿ ಕೊರಟಗೆರೆ ಕ್ಷೇತ್ರದ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಪರಮೇಶ್ವರ ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿ ಕೂಡ ಹೊತ್ತಿರುವುದು ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬುದು ರಾಜಕೀಯ ತಜ್ಞರ ವಿಶ್ಲೇಷಣೆ.

    ಜೆಡಿಎಸ್‌ ಪರಿಸ್ಥಿತಿ ಹೇಗಿದೆ?
    ಜೆಡಿಎಸ್‌ ಅಭ್ಯರ್ಥಿಯಾಗಿರುವ ಪಿ.ಆರ್‌.ಸುಧಾಕರ್‌ ಲಾಲ್‌ ಅವರು 2013ರಲ್ಲಿ ಪರಮೇಶ್ವರ ವಿರುದ್ಧವೇ ಜಯಭೇರಿ ಸಾಧಿಸಿ ಶಾಸಕರಾಗಿದ್ದರು. ಮೂರು ಬಾರಿ ಜಿಪಂ ಸದಸ್ಯರಾಗಿ, ಒಂದು ಬಾರಿ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಕ್ಷೇತ್ರದ ಜನರಿಗೆ ಲಭ್ಯ ಇರುವ ವ್ಯಕ್ತಿ ಎಂದೂ ಸಹ ಹೇಳಲಾಗುತ್ತಿದೆ. ಲಂಬಾಣಿ ಸಮುದಾಯಕ್ಕೆ ಸೇರಿದವರಾದರೂ, ಜೆಡಿಎಸ್‌ ಅಭ್ಯರ್ಥಿಯಾಗಿರುವುದರಿಂದ ಒಕ್ಕಲಿಗ ಸಮುದಾಯದ ಸುಮಾರು 40,000 ಮತ ಗಟ್ಟಿಯಾಗಿದೆ. ಇದು ಜೆಡಿಎಸ್‌ ಪಕ್ಷಕ್ಕೆ ವರದಾನವಾಗಬಹುದು ಎಂದು ಹೇಳಲಾಗಿದೆ. ಮತ್ತೊಂದು ದಿಕ್ಕಿನಲ್ಲಿ ನೋಡುವುದಾದರೆ, ಆರ್ಥಿಕ ಬಲ ಇಲ್ಲದಿರುವುದು, ರಾಜ್ಯಮಟ್ಟದ ನಾಯಕರ ಸಂಪರ್ಕ ಅಷ್ಟೊಂದು ಇಲ್ಲದಿರುವುದು, ಪ್ರಚಾರದಲ್ಲಿ ಹಿಂದೆ ಉಳಿದಿರುವುದು ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾಗಬಹುದು. ಅಲ್ಲದೇ ಸಮುದಾಯದ ಮತ ಕೇವಲ 7,000 ಇದೆ. ಇದು ಜೆಡಿಎಸ್‌ ಪಕ್ಷಕ್ಕೆ ಮೈನಸ್‌ ಪಾಯಿಂಟ್‌ನಂತಿದೆ. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ

    ಜಾತಿ‌ ಲೆಕ್ಕಾಚಾರ ಏನು?
    ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,02,977 ಇದೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ, ಎಸ್ಸಿ-60,009, ಎಸ್ಟಿ- 20,000, ಒಕ್ಕಲಿಗರು-36,000, ಲಿಂಗಾಯತರು- 35,000, ಗೊಲ್ಲರು- 15,000, ಮುಸ್ಲಿಂ- 18,000, ಕುರುಬರು- 15,000, ಬ್ರಾಹ್ಮಣರು- 3,000, ಬಲಿಜ- 4,000 ಇದ್ದಾರೆ.

  • ಶೆಟ್ಟರ್ ನಮ್ಮ ಸಿದ್ಧಾಂತ ಒಪ್ಪಿಕೊಳ್ಳುತ್ತಾರೆ: ಪರಮೇಶ್ವರ್

    ಶೆಟ್ಟರ್ ನಮ್ಮ ಸಿದ್ಧಾಂತ ಒಪ್ಪಿಕೊಳ್ಳುತ್ತಾರೆ: ಪರಮೇಶ್ವರ್

    ಬೆಂಗಳೂರು: ಸಮಾಜದಲ್ಲಿ ಸಮಾನತೆ ಕೊಡುವುದು ಕಾಂಗ್ರೆಸ್ (Congress) ಪಕ್ಷದ ನಿಲುವು. ನಮ್ಮ ಪಕ್ಷಕ್ಕೆ ಸೇರಿದವರು ನಮ್ಮ ಧ್ಯೇಯೋದ್ದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಯಾಕೆಂದರೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಆ ರೀತಿಯಾಗಿವೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ (G.Parameshwar) ಹೇಳಿದರು.

    ಬೆಂಗಳೂರಿನಲ್ಲಿ (Bengaluru) ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ನಾನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಆಗಮನ ನಮಗೆ ಉತ್ತರ ಕರ್ನಾಟಕ ಭಾಗದಲ್ಲಿ ಸಹಾಯವಾಗುತ್ತದೆ. ಏಕೆಂದರೆ ಶೆಟ್ಟರ್ ಒಬ್ಬ ಹಿರಿಯ ರಾಜಕಾರಣಿ ಹಾಗೂ ಬಹಳಷ್ಟು ಅನುಭವವುಳ್ಳವರು. ಅವರು ನಮ್ಮ ಸಿದ್ಧಾಂತವನ್ನು ಒಪ್ಪಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ಪಕ್ಷ ನಿಷ್ಠೆ ಇಲ್ಲ, ವ್ಯಕ್ತಿ ನಿಷ್ಠೆಯಿದೆ – ಜೋಷಿ ವಿರುದ್ಧ ಶೆಟ್ಟರ್ ಕಿಡಿ 

    ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಟಿಕೆಟ್ ಮಿಸ್ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಅಧ್ಯಕ್ಷರು ಫೈನಲ್ ಮಾಡುತ್ತಾರೆ. ಪುಲಕೇಶಿನಗರದ ಬಗ್ಗೆ ಚರ್ಚೆ ಏನಾಗಿದೆ ಎಂದು ಗೊತ್ತಿಲ್ಲ. ರಾಜ್ಯ ಸಮಿತಿಗೆ ನಾವು ಅಖಂಡ ಅವರ ಹೆಸರು ಕಳುಹಿಸಿದ್ದೆವು. ಆದರೆ ಹೈಕಮಾಂಡ್ (High Command) ಯಾವ ನಿರ್ಧಾರ ಮಾಡುತ್ತಾರೆ ಎಂದು ಗೊತ್ತಿಲ್ಲ. ಮಂಗಳವಾರ ಟಿಕೆಟ್ ಫೈನಲ್ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿ.ಎಲ್ ಸಂತೋಷ್ ಷಡ್ಯಂತ್ರದಿಂದ ನನಗೆ ಟಿಕೆಟ್ ಕೈತಪ್ಪಿದೆ : ಶೆಟ್ಟರ್ ನೇರ ಆರೋಪ

    ಅಲ್ಪಸಂಖ್ಯಾತರ ವಿರೋಧ ಇರುವುದಕ್ಕೆ ಟಿಕೆಟ್ ಮಿಸ್ ಆಗಿದೆ ಎನ್ನುವುದು ನನಗೆ ಗೊತ್ತಿಲ್ಲ. ಪುಲಕೇಶಿನಗರಕ್ಕೆ ನನ್ನ ಬೆಂಬಲಿಗರಿಗೆ ಟಿಕೆಟ್ ಕೊಡಬೇಕು ಎಂದು ನಾನು ಕೇಳಿಲ್ಲ. ನಮ್ಮ ಪ್ಯಾನಲ್‌ನಲ್ಲಿ ಅಖಂಡ ಅವರ ಹೆಸರು ಕಳುಹಿಸಿದ್ದೇವೆ. ಮುಂದಿನದ್ದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ: ಹೆಚ್‍ಡಿಕೆ 

    ಕಾಂಗ್ರೆಸ್‌ಭವನ ಉದ್ಘಾಟನೆಗೆ ಗೈರಾದ ವಿಚಾರದ ಕುರಿತು ಮಾತನಾಡಿದ ಅವರು, ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇರಲಿಲ್ಲ. ನಾನು ಉದ್ಘಾಟನೆಗೆ ಬರುವ ಸಲುವಾಗಿ ಅರ್ಧ ದಾರಿಗೆ ಹೊರಟಿದ್ದೆ. ನಮ್ಮ ಕ್ಷೇತ್ರದಲ್ಲಿ ಅಪಘಾತವಾಗಿತ್ತು. ಈ ಕಾರಣದಿಂದ ಬರಲಾರದೆ ವಾಪಸ್ ತೆರಳಿದೆ. ಭವನದ ಕೆಲಸವನ್ನು 80% ನಾನೇ ಮುಗಿಸಿದ್ದೆ. ಅದಕ್ಕೆ ಬೇರೆ ಅರ್ಥ ಬೇಡ. ಕೋಲಾರ (Kolar) ಸಮಾವೇಶಕ್ಕೆ ಬರುವುದಿಲ್ಲ ಎಂದು ಮೊದಲೇ ಹೇಳಿದ್ದೆ. ನಮ್ಮ ಕ್ಷೇತ್ರದಲ್ಲಿ ಪ್ರಚಾರ ಮಾಡಬೇಕು, ಅದಕ್ಕಾಗಿ ಬರಲಾಗುವುದಿಲ್ಲ ಎಂದು ಮೊದಲೇ ಹೇಳಿದ್ದೆ ಎಂದರು. ಇದನ್ನೂ ಓದಿ: ಅಪ್ಪ JDS, ಮಗ BJPಗೆ ಬೆಂಬಲ – ಮತದಾರ, ಕಾರ್ಯಕರ್ತರಲ್ಲಿ ಗೊಂದಲ 

    ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಣಾಳಿಕೆ ರೆಡಿ ಆಗಿದೆ. ಫೈನಲ್ ಚರ್ಚೆಯ ಹಂತದಲ್ಲಿದೆ. ಚರ್ಚೆ ಮುಗಿದ ತಕ್ಷಣ ಪ್ರಣಾಳಿಕೆ ಬಿಡುಗಡೆ ಆಗುತ್ತದೆ ಎಂದರು. ಅಲ್ಲದೇ ಕಾಂಗ್ರೆಸ್ ಕೊನೆ ಪಟ್ಟಿ ಅಧ್ಯಕ್ಷರು ಚರ್ಚೆ ಮಾಡುತ್ತಿದ್ದಾರೆ. ಅದಕ್ಕೆ ಫೈನಲ್ ಟಚ್ ಕೊಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಕೊರೊನಾ

  • ಪೊಲೀಸರಿಗೆ ಡಿಸಿಎಂ ಖಡಕ್ ಎಚ್ಚರಿಕೆ

    ಪೊಲೀಸರಿಗೆ ಡಿಸಿಎಂ ಖಡಕ್ ಎಚ್ಚರಿಕೆ

    ಬೆಂಗಳೂರು: ನಿರ್ಭಯಾ ಯೋಜನೆಯಡಿ ಸಾಕಷ್ಟು ಅನುದಾನವಿದ್ದು, ಅದನ್ನು ಪಡೆದು ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ತಡೆಗೆ ಮುಂದಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.

    ವಿಧಾನಸೌಧದಲ್ಲಿ ಆಯೋಜಿಸಿದ್ದ ಆ್ಯಪ್ ಆಧಾರಿತ್ ಟ್ಯಾಕ್ಸಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ಪಡೆದು 5 ಸಾವಿರ ಸಿಸಿಟಿಟಿ ಕ್ಯಾಮೆರಾ, 1 ಸಾವಿರ ದ್ವಿಚಕ್ರ ವಾಹನ, ಪೊಲೀಸ್ ವಾಹನ ಖರೀದಿಸಿ ಮಫ್ತಿ ಪೊಲೀಸರನ್ನು ಹೆಚ್ಚಿಸಬೇಕು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ಅಗತ್ಯವಿದೆ ಎಂದು ತಿಳಿಸಿದರು.

    ಕ್ಯಾಬ್‍ಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ. ಆದರೂ ಅವು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಇನ್ನುಮುಂದೆ ಮಹಿಳಾ ಸುರಕ್ಷತೆಗೆ ಇರುವ ಕಾನೂನು, ಕಾರ್ಯಕ್ರಮ, ಸಹಾಯವಾಣಿ ಎಲ್ಲನ್ನೂ ಜಾಹಿರಾತು ಮೂಲಕ ಜನರಿಗೆ ಮಾಹಿತಿ ತಲುಪಿಸುವ ಕ್ರಮಕ್ಕೆ ಮುಂದಾಗಬೇಕು. ಯಾವುದೇ ಕಾರಣಕ್ಕೂ ಮಹಿಳೆ ಮೇಲೆ ದೌರ್ಜನ್ಯ ನಡೆಯಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.

    ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯುಕ್ತರು ಭಾಗವಹಿಸಿದ್ದರು.

  • ಇದು ಬಿಬಿಎಂಪಿ ಬಜೆಟಾ, ರಾಜ್ಯ ಬಜೆಟಾ: ಎಚ್.ಕೆ.ಪಾಟೀಲ್ ವಾಗ್ದಾಳಿ

    ಇದು ಬಿಬಿಎಂಪಿ ಬಜೆಟಾ, ರಾಜ್ಯ ಬಜೆಟಾ: ಎಚ್.ಕೆ.ಪಾಟೀಲ್ ವಾಗ್ದಾಳಿ

    ಬೆಂಗಳೂರು: ಇದು ಬಿಬಿಎಂಪಿ ಬಜೆಟ್ಟೋ..? ರಾಜ್ಯದ ಬಜೆಟ್ಟೋ..?. ಇದನ್ನು ನಾವು ಸಹಿಸೋದಕ್ಕೆ ಆಗಲ್ಲ. ತಪ್ಪನ್ನು ಸರಿಪಡಿಸೋದಕ್ಕೆ ಸಮಯ ಇದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಚ್.ಕೆ.ಪಾಟೀಲ್ ಕಿಡಿ ಕಾರಿದರು.

    ಕುಮಾರಸ್ವಾಮಿ ಅವರ ಬಜೆಟ್‍ನಲ್ಲಿ ಉತ್ತರ ಕರ್ನಾಟಕ, ಅಲ್ಪಸಂಖ್ಯಾತರನ್ನ ಕಡೆಗಣಿಸಲಾಗಿದೆ ಎನ್ನುವ ಟೀಕೆಯನ್ನು ಇಂದು ಕೂಡಾ ಸದನದಲ್ಲಿ ಹೊರಹಾಕಿದರು.

    ಅಂಕಿ ಅಂಶಗಳ ಮೂಲಕ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಜೆಟ್‍ನಲ್ಲಿ ಶೇಕಡಾ 82ರಷ್ಟು ಅನುದಾನವನ್ನು ಬೆಂಗಳೂರಿಗೆ ಮೀಸಲಿಡಲಾಗಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದರಿಂದ ಸಮ್ಮಿಶ್ರ ಸರ್ಕಾರಕ್ಕೆ ಟೀಕೆಗಳು ಕೇಳಿಬರುತ್ತಿವೆ. ಇದನ್ನು ಸರಿಪಡಿಸಿ ಅಂತಾ ಡಿಸಿಎಂ ಪರಮೇಶ್ವರ್ ಅವರಿಗೆ ಒತ್ತಾಯಿಸಿದರು.

    ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ ರಾಜುಗೌಡ, ಬಿಜೆಪಿಯವರಿಗಿಂತ ಜೆಡಿಎಸ್‍ನವರು ನಿಜವಾದ ಹಿಂದೂವಾದಿಗಳು. ರೇವಣ್ಣ ಅವರ ಹೋಮ-ಹವನದಿಂದಲೇ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದು. ಹಾಗಾಗಿ, ಬಜೆಟ್‍ನಲ್ಲಿ ಹೋಮ-ಹವನಕ್ಕೂ 20% ಹಣ ಮೀಸಲಿಡಿ ಎಂದು ವ್ಯಂಗ್ಯವಾಡಿದರು. ಅತ್ತ, ಪರಿಷತ್‍ನಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು ಸಿದ್ದರಾಮಯ್ಯ ಬಜೆಟ್‍ನ ಎಲ್ಲಾ ಯೋಜನೆಗಳನ್ನು ಮುಂದುವರಿಸಿದ್ದೇವೆ ಅಂತ ಸಿಎಂ ಹೇಳುತ್ತಿದ್ದಾರೆ. ಅದ್ಯಾವ ಯೋಜನೆಗಳು ಅಂತ ವಿವರಿಸುತ್ತೀರಾ ಎಂದು ಪ್ರಶ್ನಿಸಿದರು.

  • ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ

    ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ

    ಬೆಂಗಳೂರು: ಬಿಜೆಪಿಯವರು ಹಿಂದುತ್ವವನ್ನು ಇಟ್ಟುಕೊಂಡು ಮಾಡಿದ ಅಪಪ್ರಚಾರಕ್ಕೆ ಸರಿಯಾಗಿ ಕೌಂಟರ್ ಕೊಡಲು ಸಾಧ್ಯವಾಗದ ಕಾರಣ ಚುನಾವಣೆಯಲ್ಲಿ ನಮಗೆ ಸೋಲಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಾತನಾಡಿದ ಮಾಜಿ ಸಿಎಂ, ಬಿಜೆಪಿಯವರ ಸುಳ್ಳು ಪ್ರಚಾರವನ್ನು ಹತ್ತಿಕ್ಕುವಲ್ಲಿ ನಾವು ವಿಫಲವಾದೆವು. ಇದರಿಂದಾಗಿ ಕರಾವಳಿಯಲ್ಲಿ ಕಳೆದ ಬಾರಿ 19ರಲ್ಲಿ ನಾವು 13 ಕ್ಷೇತ್ರಗಳಲ್ಲಿ ಜಯಗಳಿಸಿದ್ದೇವು. ಆದರೆ ಈ ಬಾರಿ ಕೇವಲ 3 ಸ್ಥಾನ ಗೆಲುವು ಸಾಧಿಸಬೇಕಾಯಿತು ಎಂದು ಹೇಳಿದರು.

    ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯವರು 30 ಮತದಾರರಿಗೆ ಒಬ್ಬ ಏಜೆಂಟರ್ ಅನ್ನು ನೇಮಿಸಿದ್ದರು. ಅವರ ಕಾಯಕ ಮತದಾರರಿಗೆ ಸುಳ್ಳು ಹೇಳುವುದೇ ಆಗಿತ್ತು. ಅವರ ತಂತ್ರಕ್ಕೆ ನಾವು ಪ್ರಭಲ ಸ್ಪರ್ಧೆ ನೀಡಲಿಲ್ಲ. ಇದೇ ನಮಗೆ ಮುಳುವಾಯಿತು. 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಜ್ಜಾಗಬೇಕು. ಕೇಂದ್ರ ಬಿಜೆಪಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕಳೆದ ನಾಲ್ಕು ವರ್ಷದಿಂದ ಬಿಜೆಪಿಯವರು ಹಿಂದುತ್ವದ ವಿಚಾರ ಇಟ್ಟುಕೊಂಡು ಜನರನ್ನು ಯಮಾರಿಸುತ್ತಿದ್ದಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರಬಾರದು. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 20 ಸ್ಥಾನಗಳನ್ನು ನಾವು ಗೆಲ್ಲಲೇಬೇಕು ಎಂದು ಕರೆ ಕೊಟ್ಟರು.

    ಅನ್ನಭಾಗ್ಯದ ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಸಲಾಗಿದೆ. ಅದನ್ನು ಮತ್ತೇ 7 ಕೆಜಿಗೆ ಹೆಚ್ಚಿಸಬೇಕು. ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವೆ ಎಂದು ಈ ವೇಳೆ ತಿಳಿಸಿದರು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಯುವ ನಾಯಕರು. ಈಶ್ವರ್ ಖಂಡ್ರೆ ಅವರ ಆಯ್ಕೆಯಿಂದ ಉತ್ತರ ಕರ್ನಾಟಕ್ಕೆ ಮಹತ್ವ ಸಿಕ್ಕಿದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ. ಅಚ್ಚೇದಿನ್ ಆಯೇಗಾ ಮರೆಯಾಗಲಿದೆ. ಕೇಂದ್ರ ಸರ್ಕಾರ ನಾಲ್ಕು ವರ್ಷದಿಂದ ಮಾಡಿದ್ದೇನು? ರೈತರ ಅಭಿವೃದ್ಧಿಗೆ ಬಗ್ಗೆ ಕೇಂದ್ರ ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.

    ಸದ್ಯದಲ್ಲಿಯೇ ಆಂಧ್ರಪ್ರದೇಶ, ಮಿಜೋರಾಂ, ಛತ್ತೀಸ್‍ಘಡ್ ಗಳಲ್ಲಿ ವಿಧಾನ ಸಭೆ ಚುನಾವಣೆ ನಡೆಯಲಿದೆ. ಈ ವೇಳೆ ಬಿಜೆಪಿಗೆ ಮತದಾರರು ಬುದ್ಧಿ ಕಲಿಸಲಿದ್ದಾರೆ. ದೇಶವನ್ನು ಒಡೆದು ಆಳುವವರಿಗೆ ಅವಕಾಶ ನೀಡಬಾರದು ಎಂದು ಅವರು ಕಿಡಿಕಾರಿದರು.

    https://youtu.be/qPQ96qS9Bs0

    ನಾಡಗೀತೆ ಹಾಡುವಾಗ ಎಡವಟ್ಟು:
    ಸಮಯ ಉಳಿಸಲು ಎಲ್ಲರೂ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಯಾವುದೇ ಸೂಚನೆ ನೀಡದೇ, ಕಾರ್ಯಕ್ರಮ ಆರಂಭಕ್ಕು ಮುನ್ನವೆ ಏಕಾಏಕಿ ನಾಡಗೀತೆ ಆರಂಭಿಸಲಾಯಿತು. ಇದರಿಂದಾಗಿ ಸ್ವಲ್ಪ ಸಮಯದ ನಂತರ ಒಬ್ಬೊಬ್ಬರಾಗಿ ನಾಯಕರು ಎದ್ದು ನಿಂತರು. ಅಷ್ಟೇ ಅಲ್ಲದೆ ನಾಡಗೀತೆಯ ಮಧ್ಯೆದಲ್ಲಿಯೇ ಮೈಕಿನಲ್ಲಿ ಎಲ್ಲರೂ ಎದ್ದು ನಿಲ್ಲಿ, ಎದ್ದು ನಿಲ್ಲಿ ಎಂದು ಪ್ರಕಟಣೆ ಮಾಡಲಾಯಿತು. ಆದರೆ ಕೆಲವರು ಮೊಬೈಲ್ ನಲ್ಲಿಯೇ ಮಾತನಾಡುತ್ತ ನಿಂತಿದ್ದರು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಆಗಮನಕ್ಕು ಮುನ್ನವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು.

  • ಜಮೀರ್ ಅಹಮದ್ ಸಾಹೇಬ್ರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ: ಜಿ.ಪರಮೇಶ್ವರ್

    ಜಮೀರ್ ಅಹಮದ್ ಸಾಹೇಬ್ರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ: ಜಿ.ಪರಮೇಶ್ವರ್

    ತುಮಕೂರು: ಜಮೀರ್ ಅಹಮದ್ ಸಾಹೇಬರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ. ಮುಂದೆ ಈ ರಾಜ್ಯದಲ್ಲಿ ಮುಸ್ಲಿಮರ ಕಷ್ಟ-ದುಃಖಗಳಿಗೆ ಸ್ಪಂದಿಸುವ ಏಕೈಕ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಪಾಲ್ಗೊಂಡಿದ್ದರು. ಈ ವೇಳೆ ಮುಸ್ಲಿಮ್ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುತ್ತಾ ಜಮೀರ್ ರನ್ನು ಹಾಡಿ ಹೊಗಳಿದ್ದಾರೆ. ಹತ್ತು ವರ್ಷದ ಹಿಂದೆಯೇ ಜಮೀರ್ ಅವರನ್ನು ಕಾಂಗ್ರೆಸ್ ಗೆ ತರಲು ನಾನು ಬಹಳ ಕಷ್ಟಪಟ್ಟಿದ್ದೆ. ಜನತಾ ದಳದಲ್ಲಿದ್ದರೆ ಸಾಧನೆ ಮಾಡಲು ಆಗಲ್ಲ ಎಂದು ಜಮೀರ್ ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ಜಮೀರ್ ಬಹಳ ಎತ್ತರಕ್ಕೆ ಬೆಳೆಯುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

    ಸ್ವತಃ ರಾಹುಲ್ ಗಾಂಧಿಯವರೇ ಜಮೀರ್ ಅವರನ್ನು ಸ್ವಾಗತ ಮಾಡಿ ಅದರ ಫೋಟೋ ನನಗೆ ಕಳುಹಿಸಿದ್ದಾರೆ. ಅಷ್ಟರಮಟ್ಟಿಗೆ ಜಮೀರ್ ಪ್ರಭಾವಶಾಲಿ ನಾಯಕರಾಗಿದ್ದಾರೆ. ಡಿಸೆಂಬರ್ ನಲ್ಲಿ ಜಮೀರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ರಾಜ್ಯಾದ್ಯಂತ ಮುಸ್ಲಿಂ ಸಮಾವೇಶ ಮಾಡುತ್ತಾರೆ. ದೇಶದಲ್ಲಿ ಮುಸ್ಲಿಂ ಬಾಂಧವರ ಸಂಖ್ಯೆ ಕಡಿಮೆ ಇದೆ. ಆದ್ರೆ ಕರ್ನಾಟಕದಲ್ಲಿ ಮುಸ್ಲಿಂ ಜನಸಂಖ್ಯೆ ಎರಡನೇ ಸ್ಥಾನದಲ್ಲಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.