Tag: ಜಿ.ವಿ.ಜೋಶಿ

  • 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢ – ಶಾಲೆಗೆ ರಜೆ

    9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢ – ಶಾಲೆಗೆ ರಜೆ

    ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ಕೊರೊನಾ ವಕ್ಕರಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ.

    ನಗರದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ ಎಸ್‍ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾಳೆ. ಎಂಬಿಬಿಎಸ್ ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು.

    ಆಗ ಬಾಲಕನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ನಗರದ ಆದರ್ಶನಗರದಲ್ಲಿರುವ ಜಿ.ವಿ.ಜೋಶಿ ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಇದನ್ನೂ ಓದಿ: 22 ಗಂಟೆಗಳ ಕಾಲ ಸಮುದ್ರದಲ್ಲಿದ್ದ 69 ವರ್ಷದ ವ್ಯಕ್ತಿಯ ರಕ್ಷಣೆ

    ಮಂಗಳವಾರ ಪರೀಕ್ಷೆ ಮಾಡಿದ್ದು ಇಂದು ಪಾಸಿಟಿವ್ ವರದಿ ಬಂದಿದೆ. ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನದಿಂದಲೇ ಶಾಲೆಯಿಂದ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.

    ಈ ಕುರಿತಂತೆ ಮಾತನಾಡಿದ ಪ್ರಾಂಶುಪಾಲ ನರೇಶ್ ಪಾಟೀಲ್ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಯಲ್ಲಿರುವ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತದೆ. ಜೊತೆಗೆ ಸೋಮವಾರದವರೆಗೆ ರೋಟರಿ ಶಾಲೆಗೆ ರಜೆ ನೀಡಲಾಗಿದೆ ಎಂದರು. ಇದನ್ನೂ ಓದಿ:  ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ