Tag: ಜೀವಂತ ಹೃದಯ

  • ಎರಡೂಕಾಲು ಗಂಟೆಯಲ್ಲಿ ಮೈಸೂರಿನಿಂದ ಬೆಂಗ್ಳೂರು ತಲುಪಿತು ಹೃದಯ

    ಎರಡೂಕಾಲು ಗಂಟೆಯಲ್ಲಿ ಮೈಸೂರಿನಿಂದ ಬೆಂಗ್ಳೂರು ತಲುಪಿತು ಹೃದಯ

    – ತುಮಕೂರಿನ ವ್ಯಕ್ತಿಗೆ ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ

    ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು ಯಶಸ್ವಿಯಾಗಿ ಗ್ರೀನ್ ಕಾರಿಡಾರ್ ಮೂಲಕ ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೊಮ್ಮಸಂದ್ರದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯನ್ನು ಯಶಸ್ವಿಯಾಗಿ ರವಾನೆ ಮಾಡಲಾಗಿದೆ.

    ಕಳೆದ ತಿಂಗಳು 9ರಂದು ಪಿರಿಯಾಪಟ್ಟಣದ ಕೊಪ್ಪ ಬಳಿ ಯುವಕ ಮದನ್ ರಾಜ್ (22)ಗೆ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ಯುವಕನ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದರು.

    ಬೊಮ್ಮಸಂದ್ರ ಬಳಿಯ ನಾರಾಯಣ ಹೃದಯಾಲಯದಲ್ಲಿ ತುಮಕೂರು ಮೂಲದ ನವೀನ್ (39) ಎಂಬವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಹೊರಟು 2 ಗಂಟೆ 18 ನಿಮಿಷದಲ್ಲಿ ನಾರಾಯಣ ಹೃದಯಾಲಯಕ್ಕೆ ಯಶಸ್ವಿಯಾಗಿ ಗ್ರೀನ್ ಕಾರಿಡಾರ್ ಮೂಲಕ ಜೀವಂತ ಹೃದಯ ರವಾನೆಯಾಗಿದೆ.

    ಸದ್ಯ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ನವೀನ್ ಅವರಿಗೆ ವೈದ್ಯರು ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಗ್ರೀನ್ ಕಾರಿಡಾರ್ ಮಾಡಲಾಗಿತ್ತು. ಪೊಲೀಸ್ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ಜೀವಂತ ಹೃದಯವನ್ನು ರವಾನಿಸಲಾಗಿತ್ತು.

  • ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ

    ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ

    – 170 ಕಿಮೀ ರಸ್ತೆ ಮಾರ್ಗದಲ್ಲಿ 3 ಗಂಟೆ ಪ್ರಯಾಣ

    ಬೆಂಗಳೂರು: ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ರಾಮಯ್ಯ ನಾರಾಯಣ ಹೃದಯ ಕೇಂದ್ರಕ್ಕೆ ಜೀವಂತ ಹೃದಯ ಯಶಸ್ವಿಯಾಗಿ ರವಾನೆ ಆಗಿದೆ.

    ಹೃದಯ ಸಾಗಿಸಲು ಗ್ರೀನ್ ಕಾರಿಡರ್ ವ್ಯವಸ್ಥೆ ನಿರ್ಮಿಸಲಾಗಿತ್ತು. ಇದರಿಂದ ಸುಮಾರು 170 ಕಿ. ಮೀ ರಸ್ತೆ ಮಾರ್ಗವನ್ನು 3 ಗಂಟೆಯಲ್ಲಿ ಆಸ್ಪತ್ರೆ ಸೇರಲು ಸಾಧ್ಯವಾಯಿತು.

    ಮುಂಜಾನೆ 7.30ಕ್ಕೆ ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಿಂದ ಹೊರಟ ಅಂಬುಲೆನ್ಸ್ ಮಂಡ್ಯ, ಬಿಡದಿ, ಕೆಂಗೇರಿ ಮಾರ್ಗದ ಮೂಲಕ ಬೆಳ್ಳಗ್ಗೆ 10.30ಕ್ಕೆ ಸರಿಯಾಗಿ ರಾಮಯ್ಯ ನಾರಾಯಣ ಹೃದಯ ಕೇಂದ್ರ ತಲುಪಿತು ಎಂದು ರಾಮಯ್ಯ ನಾರಾಯಣ ಹೃದಯ ಕೇಂದ್ರದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    ಚಾಮರಾಜನಗರ ಮೂಲದ ಶಿವಕುಮಾರ್ ಎಂಬವರಿಗೆ ಹೃದಯಾಘಾತ ಆಗಿತ್ತು. ಹೃದಯ ಕಸಿ ಮಾಡಲು ರಾಮಯ್ಯ ನಾರಾಯಣ ಹೃದಯ ಕೇಂದ್ರದ ವೈದ್ಯರು ನಿರ್ಧರಿಸಿದ್ದರು. ಹೀಗಾಗಿ ಶಿವಕುಮಾರ್ ಕುಟುಂಬಸ್ಥರ ಒಪ್ಪಿಗೆ ಮೆರೆಗೆ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ರಾಮಯ್ಯ ನಾರಾಯಣ ಹೃದಯ ಕೇಂದ್ರದ ವೈದ್ಯರಾದ ಡಾ. ನಾಗಮಲ್ಲೇಶ್, ರವಿಶಂಕರ್ ಶೆಟ್ಡಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ.