Tag: ಜೀವಾವಧಿ

  • ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬೆಳಗಾವಿ: ಗೌಂಡವಾಡದ ಯುವಕನ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ ಎರಡನೇ ಹೆಚ್ಚುವರಿ ಜಿಲ್ಲಾ ‌ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

    ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ ಜಾಗ ಸಂಬಂಧ ಎರಡು ಗುಂಪುಗಳ ಮಧ್ಯೆ ಗಲಾಟೆಗಳು ನಡೆಯುತ್ತಿತ್ತು. ಭೈರವನಾಥ ದೇವಸ್ಥಾನ ಜಾಗದ ಪರ ಹೋರಾಟ ನಡೆಸುತ್ತಿದ್ದ ಸತೀಶ್ ಪಾಟೀಲನನ್ನು 18 ಸೆಪ್ಟೆಂಬರ್ 2022 ರಂದು ರಾತ್ರಿ ಮನೆ ಮುಂದೆ ಕೊಲೆ ಮಾಡಿದ್ದರು.

     

    ಈ ಸಂಬಂಧ ಐವರಿಗೆ ಕಠಿಣ ಜೀವಾವಧಿ ಶಿಕ್ಷೆ, ಹಾಗೂ ತಲಾ ಎರಡು ಲಕ್ಷ ದಂಡವನ್ನು ಕೋರ್ಟ್ ವಿಧಿಸಿದ್ದು ಪ್ರಕರಣದ ನಾಲ್ವರು ಅಪರಾಧಿಗಳಿಗೆ ಸಾಮಾನ್ಯ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಿದೆ. ಮೂರು ವರ್ಷಗಳ ಕಾಲ ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪುನ್ನು ಕೋರ್ಟ್ ಪ್ರಕಟಿಸಿದೆ.  ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

    ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ‌ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ ಕೆ.ಎ‌ನ್‌ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

    ಗೌಂಡವಾಡ ಗ್ರಾಮದ ಆನಂದ ರಾಮಾ ಕುಟ್ರೆ, ಅನರ್ವ್ ಕುಟ್ರೆ, ಜಾಯಪ್ಪ ನೀಲಜಕರ, ಮಹಾಂತೇಶ ನೀಲಜಕರ ಹಾಗೂ ಶಶಿಕಲಾ ಕುಟ್ರೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

  • ಕಲಬುರಗಿ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ಬಿಡುಗಡೆ

    ಕಲಬುರಗಿ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ಬಿಡುಗಡೆ

    ಕಲಬುರಗಿ: ಸನ್ನಡತೆ ಆಧಾರದ (Good Conduct) ಮೇಲೆ ಜೀವಾವಧಿ ಶಿಕ್ಷೆಗೆ (Life-Term Prisoners) ಗುರಿಯಾಗಿದ್ದ ಆರು ಜನ ಖೈದಿಗಳು ಬಿಡುಗಡೆಯಾಗಿದ್ದಾರೆ.

    ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ್, ಬಸವರಾಜ, ರವಿ, ಬೀರಪ್ಪ ಹಾಗೂ ಅಬೀದಾ ಬೇಗಂ ಕಲಬುರಗಿ ಸೆಂಟ್ರಲ್ ಜೈಲಿನಿಂದ (Kalaburagi Central Jail) ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ಅನುದಾನ ಕೋರಿದ ಡಿಕೆಶಿ: ಏನೇನು ಮನವಿ ಮಾಡಲಾಗಿದೆ?

     

    ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್. ಅನಿತಾ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

  • ಗೋದ್ರಾ ರೈಲು ದಹನಕಾಂಡ – ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದೋಷಿಗೆ ಜಾಮೀನು

    ಗೋದ್ರಾ ರೈಲು ದಹನಕಾಂಡ – ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದೋಷಿಗೆ ಜಾಮೀನು

    ನವದೆಹಲಿ: ಗೋದ್ರಾ ರೈಲು ದಹನಕಾಂಡ(Godhra Train Burning Case) ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸ್ತಿದ್ದ ಓರ್ವ ಕೈದಿಗೆ ಸುಪ್ರೀಂಕೋರ್ಟ್(Supreme Court) ಜಾಮೀನು ಮಂಜೂರು ಮಾಡಿದೆ.

    ಗೋದ್ರಾ ರೈಲ್ವೇ ನಿಲ್ದಾಣದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌(Sabarmati Express) ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಕಾರಣ 56 ಕರಸೇವಕರು ಸಜೀವ ದಹನ ಆಗಿದ್ದರು. ಈ ಸಂದರ್ಭದಲ್ಲಿ ಬೋಗಿ ಮೇಲೆ ಕಲ್ಲು ತೂರಿದ್ದ ಫಾರೂಖ್ ಸೇರಿ ಹಲವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ಕಳೆದ 17 ವರ್ಷಗಳಿಂದ ಜೈಲಲ್ಲಿದ್ದ ಫಾರೂಖ್ ಸೇರಿ ಹಲವರು ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸಿಜಿಐ ಚಂದ್ರಚೂಡ್‌ ನೇತೃತ್ವದ ಪೀಠ, 17 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದನ್ನು ಪರಿಗಣಿಸಿ ಫಾರೂಖ್‍ಗೆ ಜಾಮೀನು ಮಂಜೂರು ಮಾಡಿದೆ. ಉಳಿದವರ ಅರ್ಜಿಗಳ ಬಗ್ಗೆ ಶೀಘ್ರವೇ ನಿರ್ಣಯ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಚೀನಾ ತಲುಪಬಲ್ಲ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪ್ರಯೋಗ ಯಶಸ್ವಿ

    ಇದಕ್ಕೂ ಮೊದಲು ದೋಷಿಗಳಿಗೆ ಜಾಮೀನು ನೀಡಬಾರದು ಎಂದು ಗುಜರಾತ್ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. ಗುಜರಾತ್ ಪರವಾಗಿ ಸಾಲಿಸಿಟರಲ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

    2002 ಫೆ.27 ರಂದು ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿನ ಬೆಂಕಿ ಹಚ್ಚಿದ್ದ ಪರಿಣಾಮ 59 ಮಂದಿ ಕರ ಸೇವಕರು ಸಾವನ್ನಪ್ಪಿದ್ದರು. ಈ ಘಟನೆಯ ಮರು ದಿನ ಫೆ.28 ರಿಂದ ಮಾರ್ಚ್‌ 31ರವರೆಗೆ ಗುಜರಾತ್‌ನ ಅನೇಕ ಕಡೆಗಳಲ್ಲಿ ಕೋಮು ಗಲಭೆ ನಡೆದು 1,200 ಮಂದಿ ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]

  • ಉನ್ನಾವೋ ಕೇಸ್ – ಅತ್ಯಾಚಾರಿ ಶಾಸಕ ಸೆಂಗಾರ್‌ಗೆ ಜೀವಾವಧಿ ಜೈಲು ಶಿಕ್ಷೆ

    ಉನ್ನಾವೋ ಕೇಸ್ – ಅತ್ಯಾಚಾರಿ ಶಾಸಕ ಸೆಂಗಾರ್‌ಗೆ ಜೀವಾವಧಿ ಜೈಲು ಶಿಕ್ಷೆ

    ನವದೆಹಲಿ: ಉನ್ನಾವೋದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೋಷಿಯಾಗಿದ್ದ ಉಚ್ಚಾಟಿತ ಬಿಜೆಪಿ ಶಾಸಕ, ಕುಲದೀಪ್ ಸಿಂಗ್ ಸೆಂಗಾರ್‌ಗೆ  ಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.

    ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉನ್ನಾವೋ ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಿಟಿಸಿದೆ. ಸೆಂಗಾರ್‌ಗೆ ಈ ಪ್ರಕರಣದಲ್ಲಿ 25 ಲಕ್ಷ ರೂ. ದಂಡದ ಜೊತೆಗೆ ಅತ್ಯಾಚಾರ ಸಂತ್ರಸ್ತೆಗೆ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದೆ.

    ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ಡಿ. 16 ರಂದು ಸೆಕ್ಷನ್ 376 (5,6) ಹಾಗೂ ಪೋಕ್ಸೊ ಅಡಿ ದೋಷಿ ಎಂದು ಹೇಳಿತ್ತು. 2017ರಲ್ಲಿ ಉನ್ನಾವೋ ಮೂಲದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿತ್ತು. ಅಲ್ಲದೆ ಸಂತ್ರಸ್ತೆ ಕೋರ್ಟ್ ಗೆ ತೆರಳುತ್ತಿದ್ದ ವೇಳೆ ಕೊಲೆ ಯತ್ನ ನಡೆಸಲಾಗಿತ್ತು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಕುರಿತು ಸಿಬಿಐ ಹಾಗೂ ಆರೋಪಿಗಳ ಪರ ವಕೀಲರಿಂದ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ತೀರ್ಪು ಪ್ರಕಟಿಸಿ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

    ಬಿಜೆಪಿಯ ಉಚ್ಚಾಟಿತ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಹಿನ್ನೆಲೆ ಸುಪ್ರೀಂಕೋರ್ಟ್ ಲಕ್ನೋ ನಿಂದ ದೆಹಲಿಯ ತೀಸ್ ಹಜಾರಿ ಕೋರ್ಟ್ ಗೆ ಪ್ರಕರಣವನ್ನು ವರ್ಗಾಯಿಸಿತ್ತು. ಆಗಸ್ಟ್ 5 ರಿಂದ ಕೋರ್ಟ್ ಪ್ರತಿನಿತ್ಯ ವಿಚಾರಣೆ ನಡೆಸಿತ್ತು.

    ಕೋರ್ಟ್ ಅಪರಾಧಿ ಎಂದು ಘೋಷಿಸುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕುಲದೀಪ್ ಸಿಂಗ್ ಸೆಂಗಾರ್ 1990ರಲ್ಲಿ ಕಾಂಗ್ರೆಸ್‍ನಲ್ಲಿದ್ದರೆ, 2002ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಸೇರಿ ಶಾಸಕನಾಗಿ ಆಯ್ಕೆಯಾಗಿದ್ದರು. ನಂತರ ಸಮಾಜವಾದಿ ಪಕ್ಷ ಸೇರಿ 2007, 2012 ರಲ್ಲಿ ಜಯಗಳಿಸಿದ್ದು ನಂತರ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಜಯಗಳಿಸಿದ್ದರು.

    ಉನ್ನಾವೋ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರಿಯ ತನಿಖಾ ದಳ (ಸಿಬಿಐ) ದೆಹಲಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ ವೇಳೆ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಮಾಡಿದ ಒಂದು ವಾರದ ನಂತರ ಅದೇ ಸಂತ್ರಸ್ತೆಯನ್ನು ಇನ್ನೂ ಮೂವರು ಉನ್ನಾವೋದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿತ್ತು.

    ಅಪ್ರಾಪ್ತೆಯನ್ನು ಜೂನ್ 11, 2017 ರಂದು ಉನ್ನಾವೊದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ರೇಪ್ ಕೇಸ್ ದೇಶಾದ್ಯಂತ ಸುದ್ದಿಯಾದ ಬಳಿಕ ಬಿಜೆಪಿ ಕುಲ್‍ದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.

  • ಪತ್ರಕರ್ತನ ಕೊಲೆ ಪ್ರಕರಣ – ರಾಮ್ ರಹೀಂಗೆ ಜೀವಾವಧಿ ಶಿಕ್ಷೆ

    ಪತ್ರಕರ್ತನ ಕೊಲೆ ಪ್ರಕರಣ – ರಾಮ್ ರಹೀಂಗೆ ಜೀವಾವಧಿ ಶಿಕ್ಷೆ

    ಪಂಚಕುಲ: ಸ್ವಯಂಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ.

    ಈಗಾಗಲೇ ಹರಿಯಾಣದ ಡೇರಾ ಸಚ್ಛಾಸೌದಾದ ಸಾಧ್ವಿಗಳ ಮೇಲೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಂಗೆ ಪತ್ರಕರ್ತ ರಾಮಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿದೆ.

    ಸ್ವಾಧ್ವಿಗಳ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಪತ್ರಕರ್ತ ರಾಮ್ ಚಂದರ್ ಸರಣಿ ಲೇಖನ ಬರೆದಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ರಾಮ್ ರಹೀಂ, 2002ರಲ್ಲಿ ಸಿರ್ಸಾ ಎಂಬಲ್ಲಿ ರಾಮ್ ಚಂದರ್ ಅವರನ್ನು ಕೊಲೆ ಮಾಡಿಸಿದ್ದ. ಈ ಪ್ರಕರಣ ಸಂಬಂಧ ಬಾಬಾ ಜೊತೆಗೆ ಇತರೆ ಮೂವರಿಗೂ ಜೀವಾವಧಿ ಶಿಕ್ಷೆ ಜೊತೆಗೆ 50 ಸಾವಿರ ದಂಡ ವಿಧಿಸಲಾಗಿದೆ.

    ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ಘೋಷಣೆ ಆಗುತ್ತಿದಂತೆ 2017ರಲ್ಲಿ ಪಂಚಕುಲಾ ಹೊತ್ತಿ ಉರಿದಿತ್ತು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಬಾಬಾ ಬೆಂಬಲಿಗರು ಅಡಗಿಸಿಟ್ಟದ್ದ ಅಪಾರ ಪ್ರಮಾಣದ ಬಡಿಗೆ, ಕಬ್ಬಿಣದ ಸರಳು, ಚೈನು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

    ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಇಂದು ಕೂಡ ಪಂಚಕುಲ ಪ್ರದೇಶದ ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ ಮಾಡಲಾಗಿತ್ತು. ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾರ್ ನಲ್ಲಿ 32 ವರ್ಷದ ವ್ಯಕ್ತಿಯನ್ನ ಕೊಂದ 16 ಮಂದಿಗೆ ಜೀವಾವಧಿ ಶಿಕ್ಷೆ

    ಬಾರ್ ನಲ್ಲಿ 32 ವರ್ಷದ ವ್ಯಕ್ತಿಯನ್ನ ಕೊಂದ 16 ಮಂದಿಗೆ ಜೀವಾವಧಿ ಶಿಕ್ಷೆ

    ಮುಂಬೈ: 2012ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಯಾಣ್ ಕೋರ್ಟ್ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಪ್ರಕರಣದಲ್ಲಿ 16 ಮಂದಿಯ ಆರೋಪ ಸಾಬೀತಾಗಿದ್ದು, ಕೊಲೆ, ಪಿತೂರಿ, ಸಾಕ್ಷಿ ನಾಶಕ್ಕಾಗಿ ಕೋರ್ಟ್ ಈ ಶಿಕ್ಷೆ ನೀಡಿ ತೀರ್ಪು ಪ್ರಕಟ ಮಾಡಿದೆ.

    ಏನಿದು ಪ್ರಕರಣ?: 2012ರ ಅಕ್ಟೋಬರ್ 3ರಂದು ವಿಕಾಸ್ ಪಾಟೀಲ್ ಎಂಬವರನ್ನ ಅವರು ಕೆಲಸ ಮಾಡುತ್ತಿದ್ದ ಬಾರ್‍ನಲ್ಲಿ ಕೊಲೆ ಮಾಡಲಾಗಿತ್ತು. ಕಾಕಾ ಪಾಟೀಲ್ ಎಂಬ ವ್ಯಕ್ತಿ ಕತ್ತಿಯಿಂದ ವಿಕಾಸ್ ಅವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆಂದು ವಿಕಾಸ್ ಅವರ ಪತ್ನಿ ಹಾಗೂ ಇತರೆ ಕುಟುಂಬಸ್ಥರಿಗೆ ಮಾಹಿತಿ ಬಂದಿತ್ತು.

    ಮೃತ ವಿಕಾಸ್ ಅವರ ಪತ್ನಿ ಕೋರ್ಟ್ ನಲ್ಲಿ ನೀಡಿದ ಹೇಳಿಕೆಯ ಪ್ರಕಾರ, ಕಟುಂಬಸ್ಥರು ನೋಡಿದಾಗ ವಿಕಾಸ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಅವರು ಸಾವನ್ನಪ್ಪಿದ್ದರು. ಆರೋಪಿ ಕಾಕಾ ಪಾಟೀಲ್ ಹಾಗೂ ನನ್ನ ಪತಿಯ ನಡುವೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಲಹವಿತ್ತು. ಹೀಗಾಗಿ ಅವರು ಕೆಲಸಕ್ಕೆ ಹೋಗುವಾಗಲೆಲ್ಲಾ ಕಾಕಾ ಪಾಟೀಲ್ ಕಿರುಕುಳ ನೀಡುತ್ತಿದ್ದ. ಹಲವಾರು ಬಾರಿ ಬೆದರಿಕೆ ಹಾಕಿದ್ದ ಎಂದು ಪತ್ನಿ ಹೇಳಿಕೆ ನೀಡಿದ್ದರು.

    ಆರೋಪಿಗಳು ಎರಡು ಕಾರ್‍ಗಳಲ್ಲಿ ಆಯುಧಗಳೊಂದಿಗೆ ಬಂದಿದ್ದರು. ಎಲ್ಲಾ 16 ಮಂದಿ ಸ್ಥಳದಲ್ಲಿದ್ದ ಬಗ್ಗೆ ಹಾಗೂ ಕೃತ್ಯದಲ್ಲಿ ಅವರ ಪಾತ್ರವಿರುವ ಬಗ್ಗೆ ಸಾಕ್ಷಿಗಳಿಂದ ದೃಢಪಟ್ಟಿದ್ದು, ಅವರ ಆರೋಪ ಸಾಬೀತಾಗಿದೆ ಎಂದು ವರದಿಯಾಗಿದೆ.

  • ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಬೆಂಗಳೂರು: ಸೈನೆಡ್ ಮೋಹನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೆಳ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿ ಜೀವಾವಧಿ ಶಿಕ್ಷೆಗೆ ಇಳಿಸಿದೆ.

    ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ ವಿಭಾಗೀಯ ಪೀಠ, ಸೈನೆಡ್ ಮೋಹನ್ ಕುಮಾರ್ ಸಮಾಜಕ್ಕೆ ಮಾರಕ. ಹೀಗಾಗಿ ಈತ ಸಾಯುವವರೆಗೂ ಜೈಲಿನಲ್ಲಿರಬೇಕು ಎಂದು ಆದೇಶ ನೀಡಿದರು.

    20 ಯುವತಿಯರನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಸೈನೆಡ್ ನೀಡಿ ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮೋಹನ್ ಕುಮಾರ್‍ಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2013ರ ಡಿಸೆಂಬರ್ 21ರಂದು ಗಲ್ಲುಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿದ್ದ ಮೋಹನ್ ಕುಮಾರ್‍ಗೆ ಹೈಕೋರ್ಟ್ ರಿಲೀಫ್ ನೀಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ.

    ತಾನೇ ವಾದಿಸಿದ್ದ:
    ವಿಚಾರಣೆ ವೇಳೆ ನನ್ನ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಇಲ್ಲ. ನಾನು ಅತ್ಯಾಚಾರ ನಡೆಸಿದ್ದಕ್ಕೆ ಪುರಾವೆಯೇ ಇಲ್ಲ. ನಾನು ಸೈನೆಡ್ ತಿನ್ನಿಸಿ ಸಾಯಿಸಿದ್ದೇನೆ ಎಂದು ವಕೀಲರು ವಾದಿಸಿದ್ದಾರೆ. ಆದರೆ ಪ್ರಯೋಗಾಲಯದಲ್ಲಿ ನಾನು ನಾನು ಸೈನೆಡ್ ನೀಡಿ ಕೊಲೆ ಮಾಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಸೈನೆಡ್ ಸೇವಿಸಿದ್ದರೆ ಹೃದಯ ಬಡಿತ ನಿಂತುಹೋಗಿ ನರಗಳು ಹೆಪ್ಪುಗಟ್ಟಿ ಸಾವನ್ನಪ್ಪುತ್ತಾರೆ. ಆದರೆ ವರದಿಯಲ್ಲಿ ಈ ಯಾವುದೇ ವಿವರಗಳು ಇಲ್ಲ ಎಂದು ವಾದಿಸಿದ್ದ.

    ಸುಮಾರು 25ಕ್ಕೂ ಹೆಚ್ಚು ಖಾಲಿ ಪೇಪರ್ ಗಳಿಗೆ ನನ್ನ ಸಹಿ ಮಾಡಿಸಿಕೊಂಡು ಪೊಲೀಸರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನೀಡಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದ.

    2004ರಿಂದ 2009ರ ಅವಧಿಯಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಸೈನೆಡ್ ಮೋಹನ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ವಾದಿಸಿದ್ದರು. ಬಂಟ್ವಾಳ ಮೂಲದ ಶಿಕ್ಷಕನಾದ ಮೋಹನ್ 2002ರಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದ.

  • ಎಟಿಎಂ ಸೆಕ್ಯೂರಿಟಿ ಗಾರ್ಡ್ ಕೊಂದಿದ್ದ ದೋಷಿಗೆ ಜೀವಾವಧಿ ಶಿಕ್ಷೆ

    ಎಟಿಎಂ ಸೆಕ್ಯೂರಿಟಿ ಗಾರ್ಡ್ ಕೊಂದಿದ್ದ ದೋಷಿಗೆ ಜೀವಾವಧಿ ಶಿಕ್ಷೆ

    ಬೆಂಗಳೂರು: ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಕೊಲೆ ಮಾಡಿದ ಪ್ರಕರಣದ ದೋಷಿಗೆ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

    2011ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ನ ಎಟಿಎಂನನಲ್ಲಿ ಹಣ ದೋಚಲು ಸೈಮನ್ ಬಂದಿದ್ದ. ಈ ವೇಳೆ ಸೆಕ್ಯೂರಿಟಿ ಆಗಿದ್ದ ಚಂದ್ರಪ್ಪ ಅವರನ್ನು ಕೊಲೆ ಮಾಡಿದ್ದ. ಬಳಿಕ ಆರೋಪಿಯನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದರು.

    7 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು ಸೆಷನ್ಸ್ ಕೋರ್ಟ್ ಸೋಮವಾರ ದೋಷಿ ಸೈಮನ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ.

     ಇದನ್ನೂ ಓದಿ: ಎಟಿಎಂಗಳಲ್ಲಿ 200 ರೂ. ನೋಟ್‍ಗಳು ಸಿಗಲು ಇನ್ನೂ 3 ತಿಂಗಳಾಗ್ಬಹುದು

    ಇದನ್ನೂ ಓದಿ: ವಿಡಿಯೋ: ಎಟಿಎಂ ಯಂತ್ರವನ್ನೇ ಕದ್ದು ಟ್ರಕ್‍ನಲ್ಲಿ ಎಳೆದುಕೊಂಡು ಹೋದ್ರು!

    ಇದನ್ನೂ ಓದಿ: ಎಟಿಎಂ ತೆರೆಯದೇ, ಒಡೆಯದೇ 20 ಲಕ್ಷ ರೂ. ಕದ್ದ ಖದೀಮರು!