Tag: ಜೆಡ್ಡಾ

  • ಆಪರೇಷನ್ ಕಾವೇರಿ- 229 ಭಾರತೀಯರನ್ನು ಹೊತ್ತ 7ನೇ ವಿಮಾನ ಜೆಡ್ಡಾದಿಂದ ಬೆಂಗಳೂರಿನತ್ತ

    ಆಪರೇಷನ್ ಕಾವೇರಿ- 229 ಭಾರತೀಯರನ್ನು ಹೊತ್ತ 7ನೇ ವಿಮಾನ ಜೆಡ್ಡಾದಿಂದ ಬೆಂಗಳೂರಿನತ್ತ

    ರಿಯಾದ್: ಆಪರೇಷನ್ ಕಾವೇರಿಯಡಿಯಲ್ಲಿ (Operation Kaveri) ಸುಡಾನ್‌ನಿಂದ (Sudan) ಭಾರತೀಯರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, 229 ಭಾರತೀಯರು ಭಾನುವಾರ ಜೆಡ್ಡಾದಿಂದ (Jeddah) ಬೆಂಗಳೂರಿಗೆ (Bengaluru) ತೆರಳುವ ವಿಮಾನದಲ್ಲಿ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry Of External Affairs) ತಿಳಿಸಿದೆ.

    ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi)  ತಮ್ಮ ಟ್ವಿಟ್ಟರ್‌ (Twitter) ಖಾತೆಯಲ್ಲಿ ಟ್ವೀಟ್ (Tweet) ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಪರೇಷನ್ ಕಾವೇರಿ ನಾಗರಿಕರನ್ನು ಮರಳಿ ಮನೆಗೆ ಕರೆತರುತ್ತಿದೆ. 229 ಪ್ರಯಾಣಿಕರನ್ನು ಹೊತ್ತ 7ನೇ ವಿಮಾನವು ಇದಾಗಿದ್ದು, ಜೆಡ್ಡಾದಿಂದ ಬೆಂಗಳೂರಿಗೆ ತೆರಳಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರೇಪ್‍ನಿಂದ ರಕ್ಷಿಸಲು ಮೃತ ಹೆಣ್ಣು ಮಕ್ಕಳ ಸಮಾಧಿಗೆ ಬೀಗ ಹಾಕಿದ ಪಾಕ್‌ ಪಾಲಕರು

    ಸುಡಾನ್‌ನಲ್ಲಿ ಕದನ ವಿರಾಮವನ್ನು ಘೋಷಿಸಿರುವುದರಿಂದ, ಭಾರತ ಸೇರಿದಂತೆ ಹಲವಾರು ದೇಶಗಳು ತಮ್ಮ ನಾಗರಿಕರನ್ನು ಸಂಘರ್ಷ-ಪೀಡಿತ ರಾಷ್ಟ್ರದಿಂದ ಸ್ಥಳಾಂತಿರಸಲು ಪ್ರಯತ್ನಿಸುತ್ತಿವೆ. ಇದಕ್ಕೂ ಮೊದಲು, ಭಾರತೀಯ ನೌಕಾಪಡೆಯ ಹಡಗು, ಐಎನ್‌ಎಸ್ ಟೆಗ್ (INS Teg), ಶನಿವಾರ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ 288 ಭಾರತೀಯರನ್ನು ಆಪರೇಷನ್ ಕಾವೇರಿ ಮೂಲಕ ಯಶಸ್ವಿಯಾಗಿ ಸ್ಥಳಾಂತರಿಸಿತು. ಸುಡಾನ್ ಸಂಘರ್ಷಣೆಯಲ್ಲಿ ಸಿಲುಕಿಕೊಂಡಿದ್ದ 14ನೇ ತಂಡ ಇದಾಗಿದ್ದು, ಭಾರತಕ್ಕೆ ಮರಳಲು ಜೆಡ್ಡಾಕ್ಕೆ ತೆರಳಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – 5 ಮಕ್ಕಳು ಸೇರಿ 26 ಜನ ಸಾವು

    ಈ ಹಿಂದೆ ಪೋರ್ಟ್ ಸುಡಾನ್‌ನಲ್ಲಿ ನೆಲೆಗೊಂಡಿದ್ದ ಐಎನ್‌ಎಸ್ ಸುಮೇಧಾ (INS Sumedha) ಬಿಕ್ಕಟ್ಟಿನಿಂದಾಗಿ 300 ಪ್ರಯಾಣಿಕರೊಂದಿಗೆ ಜೆಡ್ಡಾಕ್ಕೆ ಹೊರಟಿತ್ತು. ಆಪರೇಷನ್ ಕಾವೇರಿಯಡಿಯಲ್ಲಿ ಭಾರತ ಸರ್ಕಾರವು ಸುಮಾರು 3,000 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲು ನಿರ್ಧರಿಸಿದೆ. ಇದನ್ನೂ ಓದಿ: ಸುಡಾನ್‌ನಲ್ಲಿ ಸಂಘರ್ಷ – ಜೆಡ್ಡಾದಿಂದ 362 ಭಾರತೀಯರು ಬೆಂಗಳೂರು ಕಡೆ ಪ್ರಯಾಣ


    ಸೇನಾಪಡೆ ಮತ್ತು ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದಾಗಿ ಸುಡಾನ್ ದೇಶವು ರಕ್ತಪಾತವನ್ನು ಅನುಭವಿಸುತ್ತಿದೆ. ಇಲ್ಲಿಯವರೆಗೆ 2,400ಕ್ಕೂ ಹೆಚ್ಚು ಭಾರತೀಯರನ್ನು ಸುಡಾನ್‌ನಿಂದ ಭಾರತಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ವಲಸೆಗಾರರು “ಭಾರತ್ ಮಾತಾ ಕೀ ಜೈ” ಮತ್ತು “ವಂದೇ ಮಾತರಂ” ಘೋಷಣೆಗಳನ್ನು ಕೂಗಿದರು. ಅಲ್ಲದೇ ಆಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್‌ನಿಂದ ರಕ್ಷಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ (S.Jaishankar) ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಕಾವೇರಿ- 135 ಮಂದಿ ಭಾರತೀಯರಿದ್ದ 3ನೇ ತಂಡ ಸೌದಿಗೆ ರೀಚ್

  • ವಿಮಾನ ಏರುವ ಭರದಲ್ಲಿ ಮಗುವನ್ನೇ ಮರೆತ ತಾಯಿ!

    ವಿಮಾನ ಏರುವ ಭರದಲ್ಲಿ ಮಗುವನ್ನೇ ಮರೆತ ತಾಯಿ!

    ರಿಯಾದ್: ಪ್ರಯಾಣ ಮಾಡುವ ವೇಳೆ ಗಡಿಬಿಡಿಯಲ್ಲಿ ಕೆಲವೊಮ್ಮೆ ಪ್ರಯಾಣಿಕರು ಲಗೇಜ್ ಮರೆತು ಹೋಗುತ್ತಾರೆ. ಆದ್ರೆ ಮಹಿಳೆಯೊಬ್ಬರು ವಿಮಾನ ಹತ್ತುವ ಭರದಲ್ಲಿ ತನ್ನ ಮಗುವನ್ನೇ ಏರ್​ಪೋರ್ಟ್ ನಲ್ಲಿ  ಮರೆತು ಹೋದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.

    ಹೌದು, ಜೆಡ್ಡಾದ ಕಿಂಗ್ ಅಬ್ದುಲ್ಲ ಅಜೀಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂತಹ ಘಟನೆ ಜರುಗಿದೆ. ವಿಮಾನ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ತನ್ನ ಮಗುವಿನೊಂದಿಗೆ ವಿಮಾನಕ್ಕಾಗಿ ಕಾಯುತ್ತಿದ್ದ ಮಹಿಳೆ, ವಿಮಾನ ಬಂದ ಪ್ರಕಟಣೆ ಕೇಳಿದ ಕೂಡಲೇ ಮಗುವನ್ನು ಅಲ್ಲಿಯೇ ಬಿಟ್ಟು ವಿಮಾನ ಏರಿದ್ದಾಳೆ. ಬಳಿಕ ವಿಮಾನ ಟೇಕಾಫ್ ಆಗಿ ಸ್ವಲ್ಪ ದೂರ ಹೋದ ಬಳಿಕ ಮಹಿಳೆಗೆ ತನ್ನ ಮಗುವಿನ ನೆನಪಾಗಿದೆ. ನಂತರ ಗಾಬರಿಯಿಂದ ವಿಮಾನದ ಸಿಬ್ಬಂದಿಗೆ ವಿಷಯ ತಿಳಿಸಿ ವಾಪಸ್ ವಿಮಾನವನ್ನು ಜೆಡ್ಡಾ ವಿಮಾನ ನಿಲ್ದಾಣಕ್ಕೆ ತಿರುಗಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆ.

    ಕೊನೆಗೆ ಮಹಿಳೆಯ ಮನವಿಗೆ ಮಣಿದ ಸಿಬ್ಬಂದಿ ವಿಮಾನವನ್ನು ವಾಪಸ್ ವಿಮಾನ ನಿಲ್ದಾಣಕ್ಕೆ ತಿರುಗಿಸಿದ್ದು, ಮಹಿಳೆ ಮಗುವನ್ನು ಕರೆದುಕೊಂದು ವಾಪಸ್ ಅದೇ ವಿಮಾನದಲ್ಲಿ ತಾನು ಹೋಗಬೇಕಿದ್ದ ಊರಿಗೆ ಪ್ರಯಾಣಿಸಿದ್ದಾರೆ.

    ಈ ರೀತಿ ಪ್ರಕರಣ ಇದೇ ಮೊದಲ ಬಾರಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಲ್ಲದೆ ಮಗುವೊಂದೇ ನಿಲ್ದಾಣದಲ್ಲಿ ತಾಯಿಗಾಗಿ ಕಾಯುತ್ತಿದ್ದ ಕಾರಣಕ್ಕೆ ವಿಮಾನವನ್ನು ವಾಪಸ್ ತಿರುಗಿಸಲಾಯಿತು ಎಂದು ಪೈಲಟ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೆಕ್ಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಬಂಧನಕ್ಕೆ ಒಳಗಾದ ಭಾರತೀಯರ ಬಿಡುಗಡೆ

    ಮೆಕ್ಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಬಂಧನಕ್ಕೆ ಒಳಗಾದ ಭಾರತೀಯರ ಬಿಡುಗಡೆ

    ಜೆಡ್ಡಾ: ಸೌದಿ ಅರೇಬಿಯಾದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಬಂಧನಕ್ಕೆ ಒಳಗಾದ ಇಬ್ಬರು ಭಾರತೀಯರನ್ನು ಭಾರತ ಸರ್ಕಾರ ಮಧ್ಯಪ್ರವೇಶಿಸಿ ಬಿಡುಗಡೆಗೊಳಿಸಿದೆ.

    ವಡೋದರಾದ ನಿವಾಸಿ ಇಮ್ತಿಯಾಜ್, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಮೆಕ್ಕಾ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ವಿಚಾರ ತಿಳಿದು ಪೊಲೀಸರು ಬಂಧಿಸಿದ್ದರು.

    ಹರಾಮ್ ಪ್ರದೇಶದಲ್ಲಿ ಧ್ವಜವನ್ನು ಪ್ರದರ್ಶಿಸುವುದು, ಫೋಟೋ ಕ್ಲಿಕ್ಕಿಸುವುದನ್ನು ನಿಷೇಧಿಸಲಾಗಿದೆ. ಜೆಡ್ಡಾದಲ್ಲಿರುವ ಭಾರತದ ದೂತಾವಾಸ ಕಚೇರಿ ಮಧ್ಯಪ್ರವೇಶ ಮಾಡಿದ ಬಳಿಕ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ.

    ಇಮ್ತಿಯಾಜ್ ಬಂಧನದ ಸುದ್ದಿ ತಿಳಿದು ಕುಟುಂಬಸ್ಥರು ಪ್ರಧಾನಿ ಮೋದಿ, ಗುಜರಾತ್ ಸಿಎಂ ರೂಪಾನಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಜೆಡ್ಡಾದಲ್ಲಿರುವ ದೂತವಾಸ ಕಚೇರಿಗೆ ಟ್ವೀಟ್ ಮಾಡಿ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews