Tag: ಜೆಪಿಸಿ

  • ಪ್ರಿಯಾಂಕಾ Vs ಬಾನ್ಸುರಿ ಸ್ವರಾಜ್‌ – ʼNational Herald Ki Lootʼ ಕೈಚೀಲ ಹೊತ್ತು ಸಭೆಗೆ ಹಾಜರ್‌

    ಪ್ರಿಯಾಂಕಾ Vs ಬಾನ್ಸುರಿ ಸ್ವರಾಜ್‌ – ʼNational Herald Ki Lootʼ ಕೈಚೀಲ ಹೊತ್ತು ಸಭೆಗೆ ಹಾಜರ್‌

    – ಒಂದು ದೇಶ ಒಂದು ಚುನಾವಣೆ, JPC ಸಭೆ ಆರಂಭ
    – ಇಂದು ನಾಲ್ವರು ನ್ಯಾಯಾಂಗ ತಜ್ಞರೊಂದಿಗೆ ಸಂವಾದ

    ನವದೆಹಲಿ: ಚುನಾವಣೆಯ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದಂತೆ ಬಹು ನಿರೀಕ್ಷೆಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆಗೆ (One Nation One Election) ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ (JPC) ಸಭೆ ಆರಂಭಗೊಂಡಿದೆ.

    ಈ ಸಭೆಗೆ ಮಾಜಿ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್‌ ಪುತ್ರಿ, ದೆಹಲಿ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ (Bansuri Swaraj) ಅವರು ʼNational Herald Ki Lootʼ ಎಂದು ಬರೆದಿರುವ ಬ್ಯಾಗ್‌ ಹೊತ್ತುಕೊಂಡು ಸಂಸತ್ತಿನ ಅನೆಕ್ಸ್ ಕಟ್ಟಡಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

    ಡಿಸೆಂಬರ್‌ನಲ್ಲಿ ಪ್ರಿಯಾಂಕಾ ವಾದ್ರಾ (Priyanka Wadra) ಅವರು ʼಪ್ಯಾಲೆಸ್ತೀನ್‌ʼಎಂದು ಬರೆದಿರುವ ಬ್ಯಾಗ್‌ ಹಾಕಿಕೊಂಡು ಬಂದಿದ್ದು ಬಹಳ ಚರ್ಚೆಯಾಗಿತ್ತು. ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದರೂ ಅವರ ನೋವಿಗೆ ಮಿಡಿಯದ ಪ್ರಿಯಾಂಕಾ ಮುಸ್ಲಿಮರ ವೋಟ್‌ ಬ್ಯಾಂಕ್‌ಗಾಗಿ ʼಪ್ಯಾಲೆಸ್ತೀನ್‌ʼ ಎಂದು ಬರೆದಿರುವ ಬ್ಯಾಗ್‌ ಧರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

    ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಇತ್ತಿಚೇಗೆ ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಇದರಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರುಗಳಾದ ಸೋನಿಯಗಾಂಧಿ ಮತ್ತು ರಾಹುಲ್‌ಗಾಂಧಿ ಸೇರಿ ಹಲವು ಕಾಂಗ್ರೇಸ್ ನಾಯಕರನ್ನು ಆರೋಪಿಗಳನ್ನಾಗಿಸಿದೆ. ಈ ಬೆಳವಣಿಗೆ ಬೆನ್ನಲೆ ಬನ್ಸೂರಿ ನ್ಯಾಷನಲ್ ಹೆರಾಲ್ಡ್ ಕಿ ಲೂಟ್ ಸಂದೇಶವಿರುವ ಬ್ಯಾಗ್ ಧರಿಸುವ ಮೂಲಕ ಗಮನ ಸೆಳೆದಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಬಾನ್ಸುರಿ ಸ್ವರಾಜ್‌, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮದಲ್ಲಿ ಮೊದಲ ಬಾರಿಗೆ ಭ್ರಷ್ಟಾಚಾರವು ಒಳನುಗ್ಗಿದೆ. ಇಡಿಯ ಚಾರ್ಜ್‌ಶೀಟ್ ಪ್ರಕಾರ, ಕಾಂಗ್ರೆಸ್ ಪಕ್ಷವು ಸಾರ್ವಜನಿಕ ಸೇವೆಗಾಗಿ ಮೀಸಲಾದ ಸಂಸ್ಥೆಗಳನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತು ಅದರ ಉನ್ನತ ನಾಯಕತ್ವವು ಇದಕ್ಕೆ ಜವಾಬ್ದಾರರಾಗಿರಬೇಕು ಎಂದು ಆರೋಪಿಸಿದರು

    ಸಂಜೆ 5 ಗಂಟೆಯವರೆಗೆ ಸಭೆ:
    ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೂ ನಾಲ್ಕು ಹಂತಗಳಲ್ಲಿ ನ್ಯಾಯಾಂಗ ತಜ್ಞರೊಂದಿಗೆ ಇಂದು ಜೆಪಿಸಿ ಸಭೆ ನಡೆಯಲಿದೆ. ಮೊದಲ ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಹೇಮಂತ್ ಗುಪ್ತಾ, ಎರಡನೇ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್‌ಎನ್ ಝಾ ಅವರೊಂದಿಗೆ ಸಂವಾದ ನಡೆಯಲಿದೆ.
    ಮೂರನೇ ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಭಾರತದ 21 ನೇ ಕಾನೂನು ಆಯೋಗದ ಅಧ್ಯಕ್ಷರಾದ ಡಾ. ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಭಾಗವಹಿಸಲಿದ್ದಾರೆ.

    ಅಂತಿಮ ಅಧಿವೇಶನದಲ್ಲಿ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರೊಂದಿಗೆ ನಡೆಯಲಿದೆ. ಹೊಸ ಕಾನೂನಿನ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರಿಂದ ಅಭಿಪ್ರಾಯ ಸಂಗ್ರಹವಾಗಲಿದೆ.

    ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Law Minister Arjun Meghwal) ಡಿಸೆಂಬರ್‌ನಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದ್ದರು. ಮಸೂದೆ ಮಂಡನೆಯ ಬೆನ್ನಲ್ಲೇ INDIA ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಹೆಚ್ಚಿನ ಚರ್ಚೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಿತ್ತು. ಇದನ್ನೂ ಓದಿ:1 ಲಕ್ಷ ರೂ. ದಾಟಿದ ಚಿನ್ನದ ಬೆಲೆ – ಸಾರ್ವಕಾಲಿಕ ದಾಖಲೆ

    ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿ 2014ರ ಮಾರ್ಚ್‌ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸಲ್ಲಿಸಿತ್ತು.

    191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು. ಇದನ್ನೂ ಓದಿ: ಖರ್ಗೆ ಕಾರ್ಯಕ್ರಮಕ್ಕೆ ಬಾರದ ಜನ – ಪಕ್ಷದಿಂದಲೇ ಜಿಲ್ಲಾಧ್ಯಕ್ಷ ಅಮಾನತು

    ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.

  • ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

    ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

    – ಜೆಪಿಸಿ ಮುಖ್ಯಸ್ಥರ ವಿರುದ್ಧ ವಿಪಕ್ಷಗಳ ಸದಸ್ಯರು ಗರಂ

    ನವದೆಹಲಿ: ಸಂಸತ್ತಿನ ಜಂಟಿ ಸಮಿತಿಯು (JPC ) ವಕ್ಫ್ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ.

    ಈ ಮಸೂದೆಯನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನಲ್ಲಿ ಮಂಡಿಸಿದ್ದರು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ (Jagdambika Pal) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ, ವಕ್ಫ್‌ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ – ಡಿಸಿ, ಎಸ್ಪಿಗಳಿಗೆ ಕೃಷ್ಣಬೈರೇಗೌಡ ಸೂಚನೆ

    ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿತು. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಪ್ರಜಾಪ್ರಭುತ್ವ ಪದ್ದತಿಯಲ್ಲಿ ಜೆಪಿಸಿ ಕೆಲಸ ಮಾಡಿಲ್ಲ ಎಂದು ವಿಪಕ್ಷ ಸದಸ್ಯರು ಗರಂ ಆದರು. ಈ 14 ಪ್ರತಿಪಾದನೆಗಳ ಅನುಮೋದನೆಗೆ ಬುಧವಾರ (ಜ.29) ವೋಟಿಂಗ್ ನಡೆಯಲಿದೆ. ಜನವರಿ 31ಕ್ಕೆ ಅಂತಿಮ ವರದಿಯನ್ನು ಲೋಕಸಭೆಗೆ ಸಲ್ಲಿಸಲು ಜೆಪಿಸಿ ಮುಖ್ಯಸ್ಥರು ತೀರ್ಮಾನಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್, ಎನ್‌ಡಿಎ ಸದಸ್ಯರು ಮಂಡಿಸಿದ 14 ತಿದ್ದುಪಡಿಗಳನ್ನು ಸ್ವೀಕರಿಸಲಾಗಿದೆ. ವಿಪಕ್ಷದ ಸದಸ್ಯರು ಹಲವು ತಿದ್ದುಪಡಿಗಳನ್ನು ಮಂಡಿಸಿದ್ದರಾದರೂ, ಅವೆಲ್ಲವನ್ನೂ ಮತದಾನದ ಮೂಲಕ ತಿರಸ್ಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

    ಸಮಿತಿಯು ಅಂಗೀಕರಿಸಿದ ತಿದ್ದುಪಡಿಗಳು ಕಾನೂನನ್ನು ಉತ್ತಮ ಮತ್ತು ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡುತ್ತದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಅಂಗೀಕಾರ ನೀಡುವ ಜೆಪಿಸಿ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕ ಎಂದು ಬಣ್ಣಿಸಿರುವ ಜಗದಂಬಿಕಾ ಪಾಲ್‌, ಅಂಗೀಕರಿಸಿದ ತಿದ್ದುಪಡಿಗಳು ಉತ್ತಮ ಮಸೂದೆಯನ್ನು ರೂಪಿಸುತ್ತವೆ ಎಂದು ಬಲವಾಗಿ ನಂಬಿರುವುದಾಗಿ ಹೇಳಿದ್ದಾರೆ.

  • ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ನವದೆಹಲಿ: ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಪರಿಶೀಲಿಸುವ ಹೊಸ ಜಂಟಿ ಸಂಸದೀಯ ಸಮಿತಿಯ ಭಾಗವಾಗಿದ್ದಾರೆ.

    ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಅನಿಲ್ ಬಲುನಿ ಕೂಡ ಜೆಪಿಸಿಯಲ್ಲಿ ಇದ್ದಾರೆ. ಜೆಪಿಸಿ, ಲೋಕಸಭೆಯಿಂದ 21 ಸಂಸದರನ್ನು ಮತ್ತು ರಾಜ್ಯಸಭೆಯಿಂದ 10 ಸಂಸದರನ್ನು ಹೊಂದಿದೆ.

    ಹೊಸ ಜೆಪಿಸಿ ಮುಂದಿನ ಅಧಿವೇಶನದ ಕೊನೆಯ ವಾರದ ಮೊದಲ ದಿನದೊಳಗೆ ಸಂಸತ್ತಿಗೆ ವರದಿಯನ್ನು ನೀಡಬೇಕು.

    ಸಂಬಿತ್ ಪಾತ್ರ, ಸುಪ್ರಿಯಾ ಸುಲೆ, ಶ್ರೀಕಾಂತ್ ಏಕನಾಥ್ ಶಿಂಧೆ, ಮನೀಶ್ ತಿವಾರಿ ಮತ್ತು ಕಲ್ಯಾಣ್ ಬ್ಯಾನರ್ಜಿ ಇತರರು ಸಮಿತಿಯಲ್ಲಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ತರಬಹುದೇ ಎಂಬುದನ್ನು ನಿರ್ಧರಿಸಲು ಜೆಪಿಸಿ ರಚಿಸಲಾಗಿದೆ.

  • Waqf Amendment Bill | ವಿಪಕ್ಷ ನಾಯಕರಿಂದ ಜೆಪಿಸಿ ರಾಜ್ಯ ಪ್ರವಾಸ ಬಹಿಷ್ಕಾರ

    Waqf Amendment Bill | ವಿಪಕ್ಷ ನಾಯಕರಿಂದ ಜೆಪಿಸಿ ರಾಜ್ಯ ಪ್ರವಾಸ ಬಹಿಷ್ಕಾರ

    ನವದೆಹಲಿ: ಜೆಪಿಸಿ ಸಮಿತಿಯ ಅಧ್ಯಕ್ಷರು ತಮಗಿಷ್ಟಬಂದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವಾಸ ಮುಂದೂಡಬೇಕೆಂಬ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ, ವಕ್ಫ್ ತಿದ್ದುಪಡಿ ಮಸೂದೆಯ (Waqf Amendment Bill) ಮೇಲಿನ ಜಂಟಿ ಸಮಿತಿಯ (JPC) ವಿಪಕ್ಷ ಸದಸ್ಯರು ಸಮಿತಿಯ ಮುಂಬರುವ 5 ರಾಜ್ಯಗಳ ಪ್ರವಾಸವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

    ಸಮಿತಿಯು ಶನಿವಾರದಿಂದ (ನ.9 ರಿಂದ) ಗುವಾಹಟಿ, ಭುವನೇಶ್ವರ, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋ ಪ್ರವಾಸವನ್ನು (JPC State Tour) ಆರಂಭಿಸಲಿದ್ದು, ವಿವಿಧ ಸಂತ್ರಸ್ತರ ಜೊತೆ ಚರ್ಚೆ ನಡೆಸಲಿದೆ. ಅಧ್ಯಕ್ಷರ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ವಿವರಿಸಿದರು. ಜಾರ್ಖಂಡ್‌ನಲ್ಲಿ ಮುಂಬರುವ ಚುನಾವಣೆಗಳು, ಬಂಗಾಳದ ಉಪಚುನಾವಣೆಗಳು ಮತ್ತು ಉತ್ಸವಗಳ ಹಿನ್ನೆಲೆ ಪ್ರತಿಪಕ್ಷಗಳ ಸದಸ್ಯರು ಪ್ರವಾಸದಲ್ಲಿ ಭಾಗವಹಿಸಲು ಕಷ್ಟವಾಗುತ್ತದೆ ಎಂದರು.

    ನಾವು ನಮ್ಮದೇ ಆದ ವೇಳಾಪಟ್ಟಿ ಹೊಂದಿದ್ದೇವೆ, ಪ್ರವಾಸದಲ್ಲಿ ಹೇಗೆ ಭಾಗವಹಿಸಲು ಸಾಧ್ಯ? ಪ್ರವಾಸಗಳು ಮುಂದೂಡಲ್ಪಟ್ಟಿಲ್ಲ ಎಂದು ನಾವು ನಿರಾಶೆಗೊಂಡಿದ್ದೇವೆ. ನಾವು ಇದನ್ನು ಸ್ಪೀಕರ್ ಅವರ ಗಮನಕ್ಕೆ ತಂದಿದ್ದೇವೆ. ನಮಗೆ ನಮ್ಮದೇ ಆದ ಬದ್ಧತೆಗಳಿವೆ. ಇದನ್ನು ಹೇಗೆ ಸರಿಹೊಂದಿಸಬಹುದು? ಪ್ರವಾಸಗಳು ಅತ್ಯಂತ ತೀವ್ರವಾದವು. ನಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡದಂತೆ ನಮ್ಮನ್ನು ತಡೆಯಲಾಗುತ್ತಿದೆ. ಜಾರ್ಖಂಡ್ ಚುನಾವಣೆಗಳಿವೆ, ಬಂಗಾಳದಲ್ಲಿ ಉಪಚುನಾವಣೆಗಳಿವೆ, ಅವರು ಈ ಪ್ರಕ್ರಿಯೆಯನ್ನು ಮುಂದೂಡಲು ಸ್ಪೀಕರ್‌ಗೆ ಮನವಿ ಮಾಡಿದರೂ ಏನೂ ಮಾಡಲಾಗಿಲ್ಲ ಎಂದು ಬ್ಯಾನರ್ಜಿ ಹೇಳಿದರು.

    ಸಮಿತಿಯ ಅಧ್ಯಕ್ಷರು ನಮ್ಮ ಪ್ರಕ್ರಿಯೆಯನ್ನು ಅಣಕಿಸುತ್ತಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮಿತಿಗೆ ತನಿಖೆಯ ಅಧಿಕಾರವಿಲ್ಲ. ಅದರ ಕೆಲಸ ಕೇವಲ ಮಸೂದೆಯನ್ನು ಪರಿಶೀಲಿಸುವುದು. ಮೇಲಾಗಿ, ಅಧ್ಯಕ್ಷರು ಏಕಪಕ್ಷೀಯವಾಗಿ ವರ್ತಿಸುವಂತಿಲ್ಲ ಮತ್ತು ಸಮಿತಿಯು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್‌, ಸೋತ ಹ್ಯಾರಿಸ್‌ಗೆ ರಾಹುಲ್‌ ಗಾಂಧಿ ಪತ್ರ

    ಪ್ರತಿಪಕ್ಷದ ಜೆಪಿಸಿ ಸದಸ್ಯರು ನವೆಂಬರ್ 5 ರಂದು ಲೋಕಸಭಾ ಸ್ಪೀಕರ್ ಅವರನ್ನು ಭೇಟಿ ಮಾಡಿ, ವೇಳಾಪಟ್ಟಿಯನ್ನು ಮುಂದೂಡಬೇಕು ಮತ್ತು ಜೆಪಿಸಿಯ ಸಭೆಯ ದಿನಗಳ ಸಂಖ್ಯೆಯನ್ನು ವಾರದಲ್ಲಿ ಎರಡು ದಿನಗಳಿಂದ ವಾರಕ್ಕೆ ಒಂದು ದಿನ ಅಥವಾ ಪ್ರತಿ ಹದಿನೈದು ದಿನಗಳಿಗೊಮ್ಮೆ ಸತತ ಎರಡು ದಿನಗಳಿಗೆ ಕಡಿತಗೊಳಿಸಬೇಕೆಂದು ಕೋರಿದ್ದರು. ಇದನ್ನೂ ಓದಿ: ಶಾರುಖ್ ಖಾನ್‌ಗೆ ಬೆದರಿಕೆ: ಕೃತ್ಯದ ಹಿಂದೆ ನಟನ ವಿರುದ್ಧ ದೂರು ನೀಡಿದ್ದ ವಕೀಲನ ಫೋನ್‌!

  • ವಕ್ಫ್ ಮಸೂದೆ ಸಂಸತ್‌ನ ಸ್ಥಾಯಿ ಸಮಿತಿಗೆ ರವಾನೆ

    ವಕ್ಫ್ ಮಸೂದೆ ಸಂಸತ್‌ನ ಸ್ಥಾಯಿ ಸಮಿತಿಗೆ ರವಾನೆ

    ನವದೆಹಲಿ: ವಕ್ಫ್ ಬೋರ್ಡ್ನಲ್ಲಿ ಸುಧಾರಣೆ ತರುವ ಸಲುವಾಗಿ ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದೆ. ಆದರೆ, ನಿರೀಕ್ಷೆಯಂತೆ ಇದಕ್ಕೆ ಕಾಂಗ್ರೆಸ್ ಸೇರಿ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯ್ತು. ಪರಿಣಾಮವಾಗಿ ಕೇಂದ್ರ ಸರ್ಕಾರ, ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳಿಸಿಕೊಟ್ಟಿದೆ.

    ಸಂಸತ್‌ನಲ್ಲಿ ಕೇಂದ್ರ ಮಂತ್ರಿ ಕಿರಣ್ ರಿಜಿಜು ಈ ಮಸೂದೆ ಮಂಡಿಸಿದರು. ಇದಕ್ಕೆ ಕಾಂಗ್ರೆಸ್, ಸಮಾಜವಾದಿ ಪಕ್ಷ, ಟಿಎಂಸಿ, ಡಿಎಂಕೆ, ಎಂಐಎಂ, ಕಮ್ಯುನಿಸ್ಟ್ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಮಸೂದೆ ಖಂಡಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದವು. ಆದರೆ, ನಿಮ್ಮ ಕೈಲಿ ಆಗದ ಕಾರಣ ನಾವು ತಿದ್ದುಪಡಿ ಮಾಡ್ಬೇಕಿದೆ ಎಂದು ಕಿರಣ್ ರಿಜಿಜು ಕೌಂಟರ್ ಕೊಟ್ಟರು.

    ರಾಜ್ಯ ವಕ್ಫ್ ಬೋರ್ಡ್ಗಳು ಮಾಫಿಯಾ ಆಗಿವೆ ಎಂದು ವಿಪಕ್ಷಗಳ ಅನೇಕರು ನನ್ನ ಬಳಿ ದೂರು ನೀಡಿದ್ದಾರೆ. ನಾನು ಅವರ ಹೆಸರೇಳಿ ಅವರ ರಾಜಕೀಯ ಜೀವನ ನಾಶ ಮಾಡಲು ಹೋಗಲ್ಲ ಎಂದು ರಿಜಿಜು ಹೇಳಿಕೊಂಡರು. ರಿಜಿಜು ಮಾತಿಗೆ ಆಕ್ರೋಶ ವ್ಯಕ್ತವಾಯ್ತು. ಇದು ಕ್ರೂರ ಬಿಲ್.. ಸಂವಿಧಾನದ ಮೇಲಿನ ದಾಳಿ ಎಂದು ಕೆಸಿ ವೇಣುಗೋಪಾಲ್ ಆರೋಪಿಸಿದರು.

    ವಕ್ಫ್ ಬೋರ್ಡ್ನಲ್ಲಿ ಮುಸ್ಲಿಮೇತರರನ್ನು ನೇಮಕ ಮಾಡುವ ನಿಯಮವನ್ನು ವಿರೋಧಿಸಿದರು. ಹಿಂದೂ ದೇವಾಲಯಗಳನ್ನು ನಿರ್ವಹಿಸಲು ಕ್ರೈಸ್ತರು, ಮುಸ್ಲಿಮರಿಗೆ ಆಗುತ್ತಾ ಎಂದು ಕನಿಮೋಳಿ ಪ್ರಶ್ನಿಸಿದರು. ಈ ಮಸೂದೆ ರಾಜಕೀಯ ಷಡ್ಯಂತ್ರ ಎಂದು ಸಮಾಜವಾದಿ ಪಕ್ಷ ಟೀಕಿಸಿತು.

    ಸ್ಟಾಂಡಿಂಗ್ ಕಮಿಟಿಗೆ ವಹಿಸುವಂತೆ ಎನ್‌ಸಿಪಿ ಒತ್ತಾಯಿಸಿತು. ತೀವ್ರ ವಿರೋಧ ಹಿನ್ನೆಲೆಯಲ್ಲಿ ಇದನ್ನು ಜೆಪಿಸಿಗೆ ಕಳಿಸಲು ಕೇಂದ್ರ ಸರ್ಕಾರ ಒಪ್ಪಿತು.