Tag: ಜೆಸಿ ಮಾಧುಸ್ವಾಮಿ

  • ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ

    ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ

    ತುಮಕೂರು: ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂ ಕೃಷ್ಣ (SM Krishna) ಮಾದರಿಯಾಗಿದ್ದರು. ಅವರ ರಾಜಕೀಯ ಹಾಗೂ ಖಾಸಗಿ ಜೀವನದಲ್ಲಿ ಒರಟಾಗಿ, ಏಕವಚನದಲ್ಲಿ ಮಾತನಾಡಿದ್ದು ನಾವು ನೋಡಿಲ್ಲ ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ (JC Madhuswamy) ಹೇಳಿದ್ದಾರೆ.

    ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನ ಹಿನ್ನೆಲೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ (Chikkanayakanahalli) ಸಂತಾಪ ಸೂಚಿಸಿ ಮಾತನಾಡಿದ ಅವರು, ಎಸ್‌ಎಂ ಕೃಷ್ಣ ಅವರು ಕರ್ನಾಟಕ ರಾಜ್ಯದಲ್ಲಿ ಯಾವುದೇ ರಾಜಕಾರಣಿ ಪಡೆಯದಂತಹ ಸ್ಥಾನ, ಗೌರವ ಪಡೆದಿದ್ದಾರೆ. ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಎಲ್ಲಾ ಆಯಾಮಗಳಲ್ಲೂ ಕೆಲಸ ಮಾಡಿದ್ದಾರೆ. ಎಲ್ಲಾ ಸೇವೆಗೂ ಗೌರವ ತಂದುಕೊಡುವ ವ್ಯಕ್ತಿತ್ವ ಅವರದ್ದು ಎಂದರು. ಇದನ್ನೂ ಓದಿ: ಪತ್ನಿಯ ಮಾರ್ಫ್‌ ಫೋಟೋ ಬಳಸಿ ಆ್ಯಪ್‌ ಏಜೆಂಟರ ಕಿರುಕುಳ – 2,000 ರೂ. ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

    ನಾವು ರಾಜಕಾರಣಕ್ಕೆ ಬರುವ ಮೊದಲೇ ಅವರು ಹಿರಿಯ ರಾಜಕಾರಣಿಯಾಗಿದ್ದರು. ನಮಗೆಲ್ಲಾ ತುಂಬಾ ಗೌರವ ಕೊಟ್ಟು ಮಾತನಾಡಿಸುತ್ತಿದ್ದರು. 1989-90ರಲ್ಲೇ ವಿಧಾನಸಭೆ ಸ್ಪೀಕರ್ ಆಗಿದ್ದರು. ವಿಧಾನಸಭೆಯಲ್ಲಿ ನಮ್ಮನ್ನು ಗುರುತಿಸಿ ಮಾತನಾಡಲು ಅವಕಾಶ ನೀಡುತ್ತಿದ್ದರು. ಮಾಧುಸ್ವಾಮಿಯವರೇ ಎದ್ದು ಮಾತನಾಡಿ ಎಂದು ಪ್ರೋತ್ಸಾಹ ನೀಡುತ್ತಿದ್ದರು. ಅವರು ತೋರಿಸುತ್ತಿದ್ದ ಸೌಜನ್ಯ, ಹಾಗೂ ರಾಜಕೀಯ ಶಕ್ತಿಯನ್ನು ಎಂದಿಗೂ ಮರೆಯೋದಿಲ್ಲ. ವಿಧಾನಸಭೆಯಲ್ಲಿ ನಮ್ಮನ್ನು ಮೊದಲು ಗುರುತಿಸಿದ್ದು ಕೃಷ್ಣರವರು. ಆರಂಭದ ದಿನಗಳಲ್ಲಿ ಇಂತಹ ವಿಷಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡುತ್ತಿದ್ದರು. ವಿಧಾನಸಭೆಯಲ್ಲಿ ಯಾರಿಗೂ ತಾರತಮ್ಯ ಮಾಡದೇ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಮಂತ್ರಿಯಾದಮೇಲೆ ನಮಗೆ ಹೆಚ್ಚಿನ ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದರು. ಅವರು ಮುಖ್ಯಮಂತ್ರಿಯಾದಮೇಲೆ ನಾನು ಸೋತಿದ್ದೆ. ಆಗ ವಿಧಾನಸಭೆಯಲ್ಲಿ ಮಾಧುಸ್ವಾಮಿಯಂತವರು ಇರಬೇಕಿತ್ತು ಎಂದು ನೆನೆದಿದ್ದರು. ಅದನ್ನು ಎಂದಿಗೂ ಮರೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಕೃಷ್ಣ ಅವರ ಬಗ್ಗೆ ನನಗೆ ಅಪಾರವಾದ ಗೌರವ ಇತ್ತು. ಅವರು ಅಷ್ಟೇ ಗೌರವ ಇಟ್ಟುಕೊಂಡಿದ್ದರು. ಅವರು ಇಂದು ನಮ್ಮ ಜೊತೆ ಇಲ್ಲ. ಅವರು ತುಂಬು ಜೀವನ ನಡೆಸಿ ಹೋಗಿದ್ದಾರೆ. ಅವರ ಛಾಪು ರಾಜ್ಯದ ಮೇಲಿದೆ. ಯಾವುದೇ ಪಕ್ಷ, ಜಾತಿ, ಧರ್ಮದಿಂದ ಬರಲಿ. ರಾಜ್ಯಕ್ಕೆ ಇಂತಹ ಸೌಮ್ಯ ಸ್ವಭಾವದ ರಾಜಕಾರಣಿ ಬೇಕು. ಅವರ ನಿಧನಕ್ಕೆ ನನ್ನ ಅಂತಿಮ ಅಶ್ರುತರ್ಪಣೆ ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ಬೈಕ್‌ಗೆ ಲಾರಿ ಡಿಕ್ಕಿ – ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿ ಸಾವು

  • ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ: ಮಾಧುಸ್ವಾಮಿ

    ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ: ಮಾಧುಸ್ವಾಮಿ

    ತುಮಕೂರು: ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್‍ಮೆಂಟ್ ಮಾಡುತ್ತಿದ್ದೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ವಿಚಾರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ತುಂಬಾ ಹಳೇಯದು. ಯಾವಾಗ ಮಾತನಾಡಿದ್ದೀನಿ ಅನ್ನೋದು ನನಗೆ ನೆನಪಿಲ್ಲ. ಆಡಿಯೋದಲ್ಲಿ ಇರುವ ಧ್ವನಿ ನನ್ನದೆ. ಆಡಿಯೋ ರೆಕಾರ್ಡಿಂಗ್ ಮಾಡಿದ ವ್ಯಕ್ತಿ ವಿರುದ್ಧ ದೂರು ನೀಡುತ್ತೇನೆ. ಗೊತ್ತಿಲ್ಲದೇ ಕಾಲ್ ರೆಕಾರ್ಡ್ ಮಾಡುವುದು ಕೂಡ ಅಪರಾಧವಾಗಿದೆ. ಹಾಗಾಗಿ ಪ್ರಸಾರ ಮಾಡಿದ ಮಾಧ್ಯಮದ ಮೇಲೂ ಕೇಸ್ ಹಾಕುತ್ತೇನೆ ಎಂದು ತಿಳಿಸಿದರು.

    bjP

    ಅಪರಿಚಿತ ವ್ಯಕ್ತಿಯ ದಾಖಲೆ ಮಾಧ್ಯಮದವರು ನೀಡಲಿ. ಯಾರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿಲ್ಲ. ಯಾರನ್ನೂ ನಾನು ದೂಷಣೆ ಮಾಡುವುದಿಲ್ಲ. ಈಗಾಗಲೇ ಸಿಎಂಗೆ ಸ್ಪಷ್ಟನೆ ನೀಡಿದ್ದೇನೆ. ರಾಜೀನಾಮೆ ಕೊಡುವ ಪ್ರಮೇಯ ಇಲ್ಲ. ಸಿಎಂ ರಾಜೀನಾಮೆ ಕೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ದಲಿತ ವಿದ್ಯಾರ್ಥಿ ಸಾವಿನಿಂದ ಮನನೊಂದು ಕಾಂಗ್ರೆಸ್ ಶಾಸಕ ರಾಜೀನಾಮೆ

    ಅನಾಮಿಕ ವ್ಯಕ್ತಿ ನನಗೆ ಪ್ರಚೋದನೆ ನೀಡುತ್ತಿದ್ದ. ಹಾಗಾಗಿ ನಾನು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಹೇಳಿದೆ. ಸಚಿವ ಸೋಮಶೇಖರ್ ಕುರಿತು ನಾನು ಗೌರವಯುತವಾಗಿ ಮಾತನಾಡಿದ್ದೇನೆ. ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರದ ಬಗ್ಗೆ ಎರಡು ಮಾತಿಲ್ಲ. ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಸಂಪುಟದಲ್ಲಿ ಖಾಲಿ ಸ್ಥಾನಗಳನ್ನು ಭರ್ತಿ ಮಾಡುತ್ತಾರೆ: ಮಾಧುಸ್ವಾಮಿ

    ಸಂಪುಟದಲ್ಲಿ ಖಾಲಿ ಸ್ಥಾನಗಳನ್ನು ಭರ್ತಿ ಮಾಡುತ್ತಾರೆ: ಮಾಧುಸ್ವಾಮಿ

    – ತುಮಕೂರಲ್ಲಿ ಜೆಡಿಎಸ್ ಕ್ಷೀಣಿಸುತ್ತಿರುವುದು ನಿಜ
    – ಕ್ಯಾಬಿನೆಟ್ ಸಭೆ ನಂತರ ಕೆಲವು ಬದಲಾವಣೆ

    ತುಮಕೂರು: ಸಂಪುಟ ಪುನಾರಚನೆ ಮಾಡುವ ವಿಚಾರ ಗೊತ್ತಿಲ್ಲ. ಆದರೆ ಖಾಲಿ ಇದ್ದ ಸ್ಥಾನಗಳನ್ನು ಭರ್ತಿ ಮಾಡುತ್ತಾರೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಸಚಿವ ಸ್ಥಾನ ಖಾಲಿ ಬಿಡಬಾರದು. ಹಾಗಾಗಿ ಭರ್ತಿ ಮಾಡಬಹುದು ಎಂದ ಅವರು, ಇದೇ ತಿಂಗಳ 27ಕ್ಕೆ ಕ್ಯಾಬಿನೆಟ್ ಸಭೆ ಇದೆ. ಅದಾದ ಬಳಿಕ ಕೆಲ ನಿರ್ಧಾರ ಆಗಬಹುದು. ಜೊತೆಗೆ ಉಸ್ತುವಾರಿ ಸಚಿವರ ನೇಮಕ ಕೂಡ ಇದೇ ಸಭೆಯಲ್ಲಿ ನಿರ್ಧಾರ ಆಗಬಹುದು. ಆದರೆ ನಿಗಮ ಮಂಡಳಿಯ ಪುನಾರಚನೆ ಇಲ್ಲ. ಬದಲಾಗಿ ಖಾಲಿ ಇರುವ 18-20 ಸ್ಥಾನಗಳು ಭರ್ತಿಯಾಗಬಹುದು ಎಂದು ತಿಳಿಸಿದರು.

    ಸಿಎಂ ಬೊಮ್ಮಾಯಿ ಮುಂದುವರಿಯುತ್ತಾರೆ ಎಂಬ ವಾತಾವರಣವಿದೆ. ಅದನ್ನು ಹೊರತುಪಡಿಸಿ ಬೇರೆ ಏನೂ ಗೊತ್ತಿಲ್ಲ ಎಂದ ಅವರು, ಸಿದ್ದರಾಮಯ್ಯರ ಹೇಳಿಕೆಗೆ ದನಿಗೂಡಿಸಿ, ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಕ್ಷೀಣಿಸುತ್ತಿರುವುದು ನಿಜ. ನಾನು ಎಂಎಲ್‍ಸಿ ಚುನಾವಣೆಯಲ್ಲೇ ಈ ಬಗ್ಗೆ ಹೇಳಿದ್ದೆ. ಜೆಡಿಎಸ್ ನಾಯಕರಾದ ಗುಬ್ಬಿ ಶಾಸಕ ಶ್ರೀನಿವಾಸ್, ಮಾಜಿ ಎಂಎಲ್‍ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್‍ಗೆ ಹೋಗೋದು ಕೂಡ ಜೆಡಿಎಸ್ ಕ್ಷೀಣಿಸುತ್ತಿರುವ ಸಂಕೇತವಾಗಿದೆ. ಇದು ಜೆಡಿಎಸ್ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ. ಆದರೆ ಅದರ ಲಾಭವನ್ನು ಕಾಂಗ್ರೆಸ್ ಅವರು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

    ಇದೇ ಸಂದರ್ಭದಲ್ಲಿ ಬಿಜೆಪಿಯ ಕುರಿತು ಮಾತನಾಡಿದ ಅವರು, ನಮ್ಮಲ್ಲಿ ಕೆಲ ಆಂತರಿಕ ಭಿನ್ನಾಭಿಪ್ರಾಯ ಇರಬಹುದು. ಅದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಲ್ಲ. ಹಾಗಾಗಿ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ಇದರಿಂದ ಬಿಜೆಪಿಯಲ್ಲಿ ಯಾರೂ ವಲಸೆ ಹೋಗುವ ಸಾಧ್ಯತೆ ಇಲ್ಲ. ಹಾಗಾಗಿ ನಮಗೆ ಆತಂಕ ಅಷ್ಟಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ