Tag: ಜೆ ಆರ್ ಲೋಬೋ

  • ಮಾಜಿ ಶಾಸಕ ಜೆ.ಆರ್ ಲೋಬೊ ಚುನಾವಣಾ ತಕರಾರು ಅರ್ಜಿ ವಜಾ

    ಮಂಗಳೂರು: 2018ರ ಮೇ ತಿಂಗಳಲ್ಲಿ ನಡೆದ ಅಸೆಂಬ್ಲಿ ಚುನಾವಣೆ (Assembly Election) ಸಂದರ್ಭ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ (Electronic Voting Mission) ದುರ್ಬಳಕೆ ಮಾಡಲಾಗಿದೆ ಹಾಗೂ ಬಿಜೆಪಿ ಅಭ್ಯರ್ಥಿಯ ಪತ್ನಿ ಧರ್ಮದ ಆಧಾರದಲ್ಲಿ ಹಿಂದುತ್ವ ಹೆಸರಿನಲ್ಲಿ ಮತಯಾಚಿಸಿದ್ದಾರೆ. ಆದ್ದರಿಂದ ವಿಜೇತ ಅಭ್ಯರ್ಥಿಯ ಆಯ್ಕೆಯನ್ನು ರದ್ದುಪಡಿಸಿ ಪರಾಜಿತ ಅಭ್ಯರ್ಥಿಯ ಆಯ್ಕೆ ಘೋಷಿಸುವಂತೆ ಕೋರಿದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.

    ಅಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ (Congress Party) ಸ್ಪರ್ಧಿಸಿದ್ದ ಜೆ.ಆರ್. ಲೋಬೊ (J R Lobo) ಅವರು ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ (Vedavyas Kamath) ವಿರುದ್ಧ ಸೋಲನುಭವಿಸಿದ್ದರು. ಫಲಿತಾಂಶದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ತಮ್ಮ ವಕೀಲರಾದ ರವೀಂದ್ರನಾಥ್ ಕಾಮತ್ (Ravindranath Kamath) ಅವರ ಮೂಲಕ ರಾಜ್ಯ ಹೈಕೋರ್ಟಿಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯಲ್ಲಿ ಮಂಗಳೂರು ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಇವಿಎಂ (EVM) ದುರ್ಬಳಕೆ ಮಾಡಲಾಗಿದೆ. ಅಲ್ಲದೆ ವೇದವ್ಯಾಸ್ ಕಾಮತ್ ಅವರ ಪತ್ನಿ ಹಿಂದುತ್ವ ಹೆಸರಿನಲ್ಲಿ ಮತ ಯಾಚನೆ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂಬ ಆರೋಪವನ್ನು ಅರ್ಜಿಯಲ್ಲಿ ಮಾಡಿದ್ದರು.

    ಈ ಪ್ರಕರಣದಲ್ಲಿ ವೇದವ್ಯಾಸ್ ಕಾಮತ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಹಿಂದುತ್ವ ಎನ್ನುವುದು ಧರ್ಮ ಸೂಚಕವಲ್ಲ. ಅದು ಜೀವನಪದ್ಧತಿ ಎಂಬುದನ್ನು ಸುಪ್ರೀಂ ಕೋರ್ಟ್ (Supreme Court) ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಇವಿಎಂ ದುರ್ಬಳಕೆಯ ಪ್ರಶ್ನೆಯೇ ಇಲ್ಲ. ಇವಿಎಂ ದುರ್ಬಳಕೆ ಅಸಾಧ್ಯ ಎಂಬುದನ್ನು ಕೂಡ ಸುಪ್ರೀಂ ಕೋರ್ಟ್ ಹೇಳಿರುವ ಕುರಿತ ತೀರ್ಪನ್ನು ಉಲ್ಲೇಖಿಸಿ ಅವರು ವಾದ ಮಂಡಿಸಿದ್ದರು. ಇದನ್ನೂ ಓದಿ: ಶಕ್ತಿ ಯೋಜನೆಗೆ ಸಿಕ್ಕ ಜನಮನ್ನಣೆಗೆ ಮೆಚ್ಚುಗೆ ಸೂಚಿಸಿ ಸಿಎಂಗೆ ಧರ್ಮಾಧಿಕಾರಿ ಪತ್ರ

    ಸುಮಾರು ಐದು ವರ್ಷ ಕಾಲ ಈ ಕುರಿತು ವಾದ- ವಿವಾದ ನಡೆಸಲಾಗಿದೆ. ಈ ಬಗ್ಗೆ ಇತ್ತಂಡ ವಾದ ವಿವಾದ ಆಲಿಸಿದ ಹೈಕೋರ್ಟ್‍ನ ಏಕಸದಸ್ಯ ನ್ಯಾಯ ಪೀಠದ ನ್ಯಾಯಮೂರ್ತಿ ದೇವದಾಸ್ ಅವರು, ಅರ್ಜಿದಾರರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುದನ್ನು ಮನಗಂಡು 2023ರಲ್ಲಿ ಹೊಸ ಚುನಾವಣೆ ನಡೆದು ಮತ್ತೆ ಆಯ್ಕೆ ಆಗಿರುವುದರಿಂದ ಲೋಬೊ ಸಲ್ಲಿಸಿದ್ದ ಅರ್ಜಿ ನಿರರ್ಥಕ ಎಂದು ಜು.6ರಂದು ಅರ್ಜಿಯನ್ನು ವಜಾಗೊಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗ್ಳೂರಲ್ಲಿ ನಕಲಿ ಮತದಾರರ ಸೃಷ್ಠಿ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

    ಮಂಗ್ಳೂರಲ್ಲಿ ನಕಲಿ ಮತದಾರರ ಸೃಷ್ಠಿ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

    ಮಂಗಳೂರು: ಚುನಾವಣೆಯಲ್ಲಿ ಅಧಿಕಾರಿಗಳನ್ನು ವಂಚಿಸಿ ನಕಲಿ ಮತ ಹಾಕೋದನ್ನು ಕೇಳಿದ್ದೇವೆ. ಆದರೆ, ಇಲ್ಲಿ ರಾಜಾರೋಷವಾಗಿಯೇ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ.

    ಮಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಹಾಸ್ಟೆಲ್ ಗಳಲ್ಲಿ ವಾಸವಿರುವ ಹೊರರಾಜ್ಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಮತಪಟ್ಟಿಗೆ ಸೇರಿಸಲಾಗಿದೆ. ಕೇರಳ ಮೂಲದ ಸಾವಿರಾರು ವಿದ್ಯಾರ್ಥಿಗಳು ಮಂಗಳೂರಿನಲ್ಲಿದ್ದು ತಾತ್ಕಾಲಿಕ ನೆಲೆಯಲ್ಲಿ ಹೊರಗಡೆ ಇದ್ದರೂ, ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ.

    ಈ ಪೈಕಿ ಕೆಲವರ ಹೆಸರು ಕೇರಳದಲ್ಲಿಯೂ ಚಾಲ್ತಿಯಲ್ಲಿರುವುದು ಕಂಡುಬಂದಿದೆ. ದೀನಾ ಶಾಜಿ ಎನ್ನುವ ವಿದ್ಯಾರ್ಥಿನಿ ಕೇರಳದಲ್ಲಿ ಇಲೆಕ್ಟೋರಲ್ ಡಿವಿಶನ್ (ಚುನಾವಣಾ ವಿಭಾಗ)ದಲ್ಲಿ ಹೆಸರು ಹೊಂದಿದ್ದರೂ, ಮಂಗಳೂರಿನಲ್ಲಿ ಮತಪಟ್ಟಿಗೆ ಹೆಸರು ನೋಂದಣಿ ಮಾಡಿಸಿದ್ದು, ಎರಡು ಕಡೆ ಮತದಾನದ ಹಕ್ಕು ಪಡೆದಿದ್ದು, ಅಪರಾಧವಾಗಿದೆ.

    ಮಂಗಳೂರಿನಲ್ಲಿ ಹೀಗೆ ಶೇ.350 ರಷ್ಟು ಕೇರಳ ಮೂಲದವರು ಎರಡು ಕಡೆ ಮತದಾನದ ಹಕ್ಕು ಹೊಂದಿರುವುದನ್ನು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ, ಈ ನಕಲಿ ಮತದಾರರ ಸೃಷ್ಟಿಯ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಹಾಲಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊ ಸೋಲುವ ಭೀತಿಯಿಂದ ಹೊರರಾಜ್ಯದ ವಿದ್ಯಾರ್ಥಿಗಳನ್ನು ಮತದಾನದ ಪಟ್ಟಿಗೆ ಸೇರಿಸಿದ್ದಾರೆ ಅಂತಾ ಆರೋಪಿಸಿದ್ದಾರೆ.