Tag: ಜೇಮ್ಸ್ ಕ್ಯಾಮರಾನ್

  • ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ  ‘ಅವತಾರ್ 2’ ಸಿನಿಮಾ

    ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಜೇಮ್ಸ್ ಕ್ಯಾಮೆರಾನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಅವತಾರ್ 2 ಸಿನಿಮಾ ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾಗಾಗಿ ಟಿಕೆಟ್‌ ದರವನ್ನೂ ಏರಿಸಿದ್ದರಿಂದ, ಸಾವಿರಾರು ಕೋಟಿ ರೂಪಾಯಿ ಹರಿದು ಬಂದಿದೆ. ಭಾರತದಲ್ಲೇ ಮೂರು ದಿನಕ್ಕೆ 150 ಕೋಟಿಯಿಂದ 165 ಕೋಟಿವರೆಗೂ ಕಲೆಕ್ಷನ್ ಮಾಡಿದೆ ಎಂದು ಅಂದಾಜಿಸಲಾಗಿದೆ. ಮೊದಲ ಮೂರು ದಿನಗಳ ಬಹುತೇಕ ಟಿಕೆಟ್‌ ಮಾರಾಟವಾಗಿತ್ತು ಎನ್ನುತ್ತಿದೆ ಬಾಕ್ಸ್ ಆಫೀಸ್ ರಿಪೋರ್ಟ್.

    ವೀಕೆಂಡ್ ಹೊರತಾಗಿಯೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು ಕೂಡ ಅನೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ನಡೆಸಿವೆಯಂತೆ. ಭಾರತೀಯ ನಾನಾ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದರಿಂದ ಮತ್ತು 3ಡಿಯಲ್ಲೂ ಸಿನಿಮಾ ರಿಲೀಸ್ ಆಗಿದ್ದರಿಂದ, ಹೆಚ್ಚಿನ ಪ್ರಮಾಣದಲ್ಲೇ ಬಾಕ್ಸ್ ಆಫೀಸಿಗೆ ಹಣ ಹರಿದು ಬಂದಿದೆ ಎಂದು ಅಂದಾಜಿಸಲಾಗಿದೆ. 2009ರಲ್ಲಿ ಅವತಾರ ಸಿನಿಮಾ ತೆರೆಕಂಡಾಗಲೂ ಇಷ್ಟೇ ಸಂಭ್ರಮದಿಂದಲೇ ಅಭಿಮಾನಿಗಳು ಚಿತ್ರವನ್ನು ಬರಮಾಡಿಕೊಂಡಿದ್ದರು. ಇದನ್ನೂ ಓದಿ: ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

    ಈ ನಡುವೆ ಅಹಿತಕರ ಘಟನೆಯೊಂದು ನಡೆದಿದೆ. ಸಿನಿಮಾ ನೋಡುತ್ತಲೇ ಹೃದಯಾಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಪುರಂನಲ್ಲಿ ಸಹೋದರ ರಾಜು ಜೊತೆ ಲಕ್ಷ್ಮಿರೆಡ್ಡಿ ಶ್ರೀನು ಎಂಬಾತ ಬಂದಿದ್ದ. ಸಿನಿಮಾ ನೋಡುತ್ತಾ, ಮೈಮರೆತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಕೂಡ ಆಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ತೀವ್ರ ರಕ್ತದೊತ್ತಡದ ನಂತರ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಅವತಾರ್ ಸಿನಿಮಾ ನೋಡುವ ವೇಳೆಯಲ್ಲಿ ಈ ರೀತಿಯ ಘಟನೆಗಳು ಹಿಂದೆಯೇ ನಡೆದಿವೆ. ಅವತಾರ್ ಮೊದಲ ಭಾಗ ಬಂದಾಗ ತೈವಾನ್ ನಲ್ಲಿಯೂ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದ. ಇದು ಕೇವಲ ಕಾಕತಾಳೀಯವಾದರೂ, ಪ್ರೇಕ್ಷಕರಲ್ಲಿ ಒಂದು ರೀತಿಯಲ್ಲಿ ಭಯ ಹುಟ್ಟಿಸಿದ್ದು ಸುಳ್ಳು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವತಾರ್ ಸಿನಿಮಾ ರಿಲೀಸ್ ಆಗಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಅವತಾರ್ 2’ ಚಿತ್ರ ನೋಡುವಾಗ ಹೃದಯಾಘಾತ, ವ್ಯಕ್ತಿ ಸಾವು

    ‘ಅವತಾರ್ 2’ ಚಿತ್ರ ನೋಡುವಾಗ ಹೃದಯಾಘಾತ, ವ್ಯಕ್ತಿ ಸಾವು

    ಗತ್ತಿನಾದ್ಯಂತ ಜೇಮ್ಸ್ ಕ್ಯಾಮರಾನ್ ನಿರ್ದೇಶನದ ‘ಅವತಾರ್ : ದಿ ವೇ ಆಫ್ ವಾಟರ್’ ಸಿನಿಮಾ ರಿಲೀಸ್ ಆಗಿದೆ. ಬಿಡುಗಡೆಗೊಂಡು ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕೂಡ ಕಾಣುತ್ತಿದೆ. ಪ್ರೇಕ್ಷಕರು ಭರ್ಜರಿಯಾಗಿಯೇ ಈ ಸಿನಿಮಾವನ್ನು ಸ್ವೀಕರಿಸುತ್ತಿದ್ದಾರೆ. ಈ ನಡುವೆ ಅಹಿತಕರ ಘಟನೆಯೊಂದು ನಡೆದಿದೆ. ಸಿನಿಮಾ ನೋಡುತ್ತಲೇ ಹೃದಯಾಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

    ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಪುರಂನಲ್ಲಿ ಸಹೋದರ ರಾಜು ಜೊತೆ ಲಕ್ಷ್ಮಿರೆಡ್ಡಿ ಶ್ರೀನು ಎಂಬಾತ ಬಂದಿದ್ದ. ಸಿನಿಮಾ ನೋಡುತ್ತಾ, ಮೈಮರೆತಿದ್ದ ಈ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಕೂಡ ಆಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ತೀವ್ರ ರಕ್ತದೊತ್ತಡದ ನಂತರ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ಅವತಾರ್ ಸಿನಿಮಾ ನೋಡುವ ವೇಳೆಯಲ್ಲಿ ಈ ರೀತಿಯ ಘಟನೆಗಳು ಹಿಂದೆಯೇ ನಡೆದಿವೆ. ಅವತಾರ್ ಮೊದಲ ಭಾಗ ಬಂದಾಗ ತೈವಾನ್ ನಲ್ಲಿಯೂ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದ. ಇದು ಕೇವಲ ಕಾಕತಾಳೀಯವಾದರೂ, ಪ್ರೇಕ್ಷಕರಲ್ಲಿ ಒಂದು ರೀತಿಯಲ್ಲಿ ಭಯ ಹುಟ್ಟಿಸಿದ್ದು ಸುಳ್ಳು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವತಾರ್ ಸಿನಿಮಾ ರಿಲೀಸ್ ಆಗಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • `ಅವತಾರ್ 2′ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ: 2 ಕೋಟಿ ಟಿಕೆಟ್ ಸೋಲ್ಡ್ ಔಟ್

    `ಅವತಾರ್ 2′ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ: 2 ಕೋಟಿ ಟಿಕೆಟ್ ಸೋಲ್ಡ್ ಔಟ್

    ಹಾಲಿವುಡ್‌ನ (Hollywood) ಬಹುನಿರೀಕ್ಷಿತ `ಅವತಾರ್ 2′ (Avatar 2) ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಅವತಾರ್ ಪಾರ್ಟ್ ಒನ್‌, 2009ರಲ್ಲಿ ಕಮಾಲ್ ಮಾಡಿತ್ತು. ಈಗ ಮತ್ತೆ `ಅವತಾರ್ 2′ ಮೂಲಕ ಮೋಡಿ ಮಾಡಲು ಸಜ್ಜಾಗಿದೆ. ಟಿಕೆಟ್‌ನ ದರ ದುಬಾರಿಯಾಗಿದ್ದರೂ ಕೂಡ 2 ಕೋಟಿ ಟಿಕೆಟ್ ಸೋಲ್ಡ್ ಔಟ್ ಆಗಿದೆ.

    ಜೇಮ್ಸ್ ಕ್ಯಾಮರಾನ್ ನಿರ್ದೇಶನದ `ಅವತಾರ್ 2′ (Avatar 2 Film) ರಿಲೀಸ್‌ಗೂ ಮುನ್ನವೇ ಚಿತ್ರದ ಮೇಲೆ ಸಿನಿರಸಿಕರಿಗೆ ಭಾರಿ ನಿರೀಕ್ಷೆ ಹುಟ್ಟಿಸಿದೆ. ಡಿಸೆಂಬರ್ 16ರಂದು ವಿಶ್ವಾದ್ಯಂತ ಏಕಕಾಲದಲ್ಲಿ 20ಕ್ಕೂ ಹೆಚ್ಚು ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಕನ್ನಡ ಭಾಷೆಯಲ್ಲೂ ಸಿನಿಮಾ ತೆರೆಗೆ ಬರಲಿದೆ. ಇನ್ನೂ ಟಿಕೆಟ್ ದರ 1500 ರೂ. ಅಧಿಕ ಬೆಲೆ ಇದ್ದರೂ ಕೂಡ 2 ಕೋಟಿ ಟಿಕೆಟ್ಸ್ ಅಡ್ವಾನ್ಸ್ ಆಗಿ ಬುಕ್ ಆಗಿರೋದು ವಿಶೇಷ. ಇದನ್ನೂ ಓದಿ: ರೂಪೇಶ್ ಶೆಟ್ಟಿ ಮನೆಯಿಂದ ಮದುವೆ ಪ್ರಪೋಸಲ್ ಬಂದರೆ ಸಾನ್ಯ ಉತ್ತರವೇನು?

    ಸದ್ಯ ಈ ಚಿತ್ರದ ಟ್ರೈಲರ್, ಪೋಸ್ಟರ್ ಮೂಲಕ ಮೋಡಿ ಮಾಡಿದೆ. ಹಾಗಾಗಿ ʻಅವತಾರ್ 2ʼ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‌ʻಅವತಾರ್ʼ ಭಾಗ 1ಕ್ಕಿಂತ ಪಾರ್ಟ್ 2 ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ದುಬಾರಿ ಬೆಲೆಗೆ `ಅವತಾರ್ 2′ ಟಿಕೆಟ್ ಸೋಲ್ಡ್ ಔಟ್

    ದುಬಾರಿ ಬೆಲೆಗೆ `ಅವತಾರ್ 2′ ಟಿಕೆಟ್ ಸೋಲ್ಡ್ ಔಟ್

    ಹಾಲಿವುಡ್‌ನ ʻಅವತಾರ್ʼ ಪಾರ್ಟ್ ಒನ್ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಹದಿಮೂರು ವರ್ಷಗಳ ಹಿಂದೆ ಕಮಾಲ್ ಮಾಡಿದ್ದ ಈ ಚಿತ್ರದ ಮುಂದಿನ ವರ್ಷನ್ ತೆರೆಗೆ ತರಲು ನಿರ್ದೇಶಕ ಜೇಮ್ಸ್ ಕ್ಯಾಮರಾನ್ ರೆಡಿಯಾಗಿದ್ದಾರೆ. ಸದ್ಯ ಭಾರತದಲ್ಲಿ ಎಲ್ಲೆಡೆ `ಅವತಾರ್ 2′ ಟಿಕೆಟ್ಸ್ ದುಬಾರಿ ಬೆಲೆಗೆ ಸೆಲ್ ಆಗುತ್ತಿದೆ.

    `ಅವತಾರ್ 2′ ಸಿನಿಮಾ ಇದೇ ಡಿಸೆಂಬರ್ 16ಕ್ಕೆ ವಿಶ್ವದ ಎಲ್ಲೆಡೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಅವತಾರ್ ಸಿನಿಮಾ ಮೋಡಿ ಮಾಡಿದ ಹಾಗೇ `ಅವತಾರ್ 2′ ಚಿತ್ರ ಕೂಡ ಕಮಾಲ್ ಮಾಡುತ್ತೆ ಅಂತಾ ಚಿತ್ರದ ಬಗ್ಗೆ ಫ್ಯಾನ್ಸ್ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟ್ರೈಲರ್ ನೋಡಿಯೇ ಫಿದಾ ಆಗಿರುವ ಫ್ಯಾನ್ಸ್‌ಗೆ, ಚಿತ್ರದ ರಿಲೀಸ್‌ಗೂ ಮುಂಚೆನೇ ಟಿಕೆಟ್ ಬುಕ್ ಮಾಡ್ತಿದ್ದಾರೆ.

    ವಿಶ್ವದ ಹಲವು ದೇಶಗಳಲ್ಲಿ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಭಾರತದಲ್ಲೂ ಟಿಕೆಟ್‌ಗೆ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಂಗಳೂರು, ಚೆನ್ನೈ, ಇಂದೋರ್, ಮುಂಬೈ, ಕೋಲ್ಕತ್ತಾ, ಮುಂತಾದ ನಗರದಲ್ಲಿ ಮುಂಗಡ ಬುಕ್ಕಿಂಗ್ ಓಪನ್ ಆಗಿದೆ. ಸಿನಿಮಾ ಟಿಕೆಟ್ಸ್‌ಗೆ ದುಬಾರಿ ಮೊತ್ತವನ್ನೇ ನಿಗದಿಪಡಿಸಿದ್ದಾರೆ. ಇದನ್ನೂ ಓದಿ: ಬೆಳ್ಳಿ ಪರದೆ ಮೇಲೆ ‘ಸೂರ್ಯ’ನ ಮಾಸ್ ಲವ್ ಸ್ಟೋರಿ

    ಬೆಂಗಳೂರು 1450 ರೂ.- ಐಮ್ಯಾಕ್ಸ್ 3ಡಿ, ದೆಹಲಿ 1000- ಐಮ್ಯಾಕ್ಸ್ 3ಡಿ, ಮುಂಬೈ 970- 4ಡಿಎಕ್ಸ್ 3ಡಿ, ಕೋಲ್ಕತ್ತಾ 770 -ಐಮ್ಯಾಕ್ಸ್ 3ಡಿ, ಅಹ್ಮದ್‌ಬಾದ್ 750- 4ಡಿಎಕ್ಸ್ 3ಡಿ, ಇಂದೋರ್ 700- 4ಡಿಎಕ್ಸ್ 3ಡಿ, ಹೈದರಾಬಾದ್ 350- 4ಡಿಎಕ್ಸ್ 3ಡಿ

    ಈ ರೀತಿಯಾಗಿ ಟಿಕೆಟ್ ದರವನ್ನ ಫಿಕ್ಸ್ ಮಾಡಲಾಗಿದ್ದು, ಎಲ್ಲಾ ಕಡೆ ಟಿಕೆಟ್ ಸೋಲ್ಡ್ ಔಟ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]