Tag: ಜೈನಮುನಿ

  • ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ನಿಧನ- ಪ್ರಧಾನಿ ಸಂತಾಪ

    ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ನಿಧನ- ಪ್ರಧಾನಿ ಸಂತಾಪ

    ನವದೆಹಲಿ: ಖ್ಯಾತ ಜೈನ ಮುನಿಗಳಾದ ಆಚಾರ್ಯ ವಿದ್ಯಾಸಾಗರ ಮಹಾರಾಜ್ (Jain Muni Acharya Vidhyasagar Maharaj) ಅವರು ಇಂದು ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

    ಆಚಾರ್ಯ ವಿದ್ಯಾಸಾಗರ ಮಹಾರಾಜರಿಗೆ 77 ವರ್ಷ ವಯಸ್ಸಾಗಿತ್ತು. ಇವರು ಛತ್ತೀಸ್‌ಗಢದ ಡೊಂಗರ್‌ಗಢ್‌ನ ಚಂದ್ರಗಿರಿ ತೀರ್ಥದಲ್ಲಿ ಭಾನುವಾರ ಮುಂಜಾನೆ ನಿಧನರಾದರು. ವಿದ್ಯಾಸಾಗರ ಮಹಾರಾಜರ ನಿಧನದ ಹಿನ್ನೆಲೆಯಲ್ಲಿ ಸರ್ಕಾರದಿಂದ ಅರ್ಧ ದಿನ ರಜೆ ಘೋಷಿಸಲಾಗಿದೆ.

    ಪ್ರಧಾನಿ ಟ್ವೀಟ್:‌ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಮಾಜಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಜನರಲ್ಲಿ ಆಧ್ಯಾತ್ಮಿಕ ಜಾಗೃತಿಗಾಗಿ ಅವರು ಮಾಡಿದ ಪ್ರಯತ್ನಗಳು, ಬಡತನ ನಿವಾರಣೆ, ಆರೋಗ್ಯ ರಕ್ಷಣೆ, ಶಿಕ್ಷಣ ಹೀಗೆ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ಹೀಗೆ ಅವರು ಮಾಡಿದ ಉತ್ತಮ ಕೆಲಸಗಳಿಂದಾಗಿ ಅವರನ್ನು ಮುಂದಿನ ಪೀಳಿಗೆಯವರು ನೆನಪಿಸಿಕೊಳ್ಳುತ್ತಾರೆ.

    ವರ್ಷಗಳ ಕಾಲ ಅವರ ಆಶೀರ್ವಾದ ಪಡೆಯುವ ಗೌರವ ನನಗಿತ್ತು. ಕಳೆದ ವರ್ಷದ ಕೊನೆಯಲ್ಲಿ ಛತ್ತೀಸ್‌ಗಢದ ಡೊಂಗರ್‌ಗಢ್‌ನಲ್ಲಿರುವ ಚಂದ್ರಗಿರಿ ಜೈನ ಮಂದಿರಕ್ಕೆ ನಾನು ಭೇಟಿ ನೀಡಿದ್ದು, ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಸಮಯದಲ್ಲಿ ನಾನು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಮಹಾರಾಜ್  ಅವರೊಂದಿಗೆ ಸಮಯ ಕಳೆದಿದ್ದೇನೆ ಮತ್ತು ಅವರ ಆಶೀರ್ವಾದವನ್ನು ಸಹ ಪಡೆದಿದ್ದೇನೆ ಎಂದು ಅವರು ಹೇಳಿದರು.

    ಜೈನ ಸಮುದಾಯದವರು ಹೇಳಿದ್ದೇನು?: ವಿದ್ಯಾಸಾಗರ ಅವರು 2020 ರಲ್ಲಿ ಇಂದೋರ್‌ಗೆ ಬಂದಾಗ ಕೊರೊನಾದಿಂದ ಲಾಕ್‌ಡೌನ್ ಇತ್ತು. ಇದರಿಂದಾಗಿ ಇಂದೋರ್‌ನ ಜನರು ಈ ಪ್ರೀತಿಯನ್ನು ಪಡೆಯಲು ಸಾಧ್ಯವಾಯಿತು. ಗುರುಗಳ ಮೇಲಿನ ಅಪಾರವಾದ ಮಮತೆಯಿಂದಲೇ ಇಂದೋರ್‌ಗೆ ಈ ಸೌಭಾಗ್ಯ ಸಿಕ್ಕಿದೆ ಎಂದು ಜೈನ ಸಮುದಾಯದವರು ಹೇಳುತ್ತಾರೆ.  ಇದನ್ನೂ ಓದಿ: ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

    ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜರು ತಮ್ಮ ಸಂತ ಜೀವನದಲ್ಲಿ ಹೆಚ್ಚಿನ ಸಮಯವನ್ನು ಇಂದೋರ್ ನಲ್ಲಿ ಕಳೆದಿದ್ದಾರೆ. ಅವರ 56 ವರ್ಷಗಳ ತಪಸ್ವಿ ಜೀವನದಲ್ಲಿ ಅವರು ಇಂದೋರ್‌ನಲ್ಲಿ 10 ತಿಂಗಳುಗಳಿಗಿಂತ ಹೆಚ್ಚು ಕಾಲ ಕಳೆದರು. ಈ ಅವಧಿಯಲ್ಲಿ 300 ದಿನಗಳಿಗೂ ಹೆಚ್ಚು ಕಾಲ ಗುರುವಿನ ಸಾಂಗತ್ಯ ಸಿಕ್ಕಿರುವುದು ಇಂದೋರ್ ನ ಭಕ್ತರ ಸೌಭಾಗ್ಯವಾಗಿದೆ.

  • ಜೈನಮುನಿ ಹತ್ಯೆ ಪ್ರಕರಣ- ಹಣವಷ್ಟೇ ಅಲ್ಲ, ಬೈಗುಳವೇ ಕೊಲೆಗೆ ಕಾರಣ?

    ಜೈನಮುನಿ ಹತ್ಯೆ ಪ್ರಕರಣ- ಹಣವಷ್ಟೇ ಅಲ್ಲ, ಬೈಗುಳವೇ ಕೊಲೆಗೆ ಕಾರಣ?

    – 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ (Jain Monk Nandi Kamakumara Swamiji) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.

    ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು ಜೈನಮುನಿ ಜೊತೆ ಹೆಚ್ಚು ಒಡನಾಟ ಹೊಂದಿದ್ದನು. ಇತ್ತ ಆರೋಪಿಗಳು ಜೈನಮುನಿ ಬಳಿ 6 ಲಕ್ಷ ಹಣ ಪಡೆದಿದ್ದರು. ಆರೋಪಿಗಳನ್ನು ಹೀಯಾಳಿಸಿ ನಿಂದನೆ ಜೊತೆ ಬೈದ್ದಿದ್ದರು. ಜೈನಮುನಿ ಬೈಗುಳದಿಂದ ಆರೋಪಿ ನಾರಾಯಣ ಕೊಲೆಗೆ ಪ್ಲಾನ್ ಮಾಡಿದ್ದ. ಜೈನಮುನಿ ಒಬ್ಬರೇ ವಾಸವಿದ್ದರಿಂದ ಆರೋಪಿ ಹೆಚ್ಚಿನ ಒಡನಾಟ ಬೆಳೆಸಿದ್ದನು. ಅಂತೆಯೇ ಇತರ ಆರೋಪಿಗಳ ಜೊತೆ ಸೇರಿ ಕೊಲೆ ಮಾಡಿ ಗುರುತು ಪತ್ತೆಯಾಗದಂತೆ ದೇಹ ಕತ್ತರಿಸಿದ. ಬಳಿಕ ಕೊಲೆಗೆ ಬಳಸಿದ್ದ ಮಚ್ಚನ್ನು ಮೇಲ್ಸೇತುವೆ ಮೇಲೆ ಬಿಸಾಡಿದ್ದರು. ಇದನ್ನೂ ಓದಿ: ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಈ ಮಾರಕಾಸ್ತ್ರಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸದ್ಯ 10 ಮಂದಿಯ ಸಾಕ್ಷ್ಯಾಧಾರ, 164 ಹೇಳಿಕೆಗಳ ಜೊತೆ ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಿ 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

  • ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    – ಧರ್ಮಾಧಿಕಾರಿ ಮೇಲಿನ ಆರೋಪ ಸಹಿಸಲ್ಲ

    ಹುಬ್ಬಳ್ಳಿ: ಕರ್ನಾಟಕ ಶಾಂತಿದೋಟ ಇಂತಹ ಹಿಂಸೆ ನಡೆಯಬಾರದು. ಸೌಜನ್ಯ (Sowjanya Case) ಹತ್ಯೆ ಪ್ರಕರಣ ನನಗೆ ಸಾಕಷ್ಟು ನೋವು ಕೊಟ್ಟಿದೆ. ಇದನ್ನೇ ನೆಪವಾಗಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಮೇಲೆ ಆರೋಪ ಮಾಡುವುದನ್ನು ನಾನು ಸಹಿಸುವುದಿಲ್ಲ ಅಂತ ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ.

    ಹುಬ್ಬಳ್ಳಿ ಹೊರ ವಲಯದ ನವಗ್ರಹ ತೀರ್ಥ ಪೀಠದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣಿನ ಮೇಲೆ ಅತ್ಯಾಚಾರ, ಹತ್ಯೆ ಆಗಬಾರದು. ಎಲ್ಲರ ಜೀವ ಒಂದೇ. ಸೌಜನ್ಯ ಹತ್ಯೆಯನ್ನು ನಾನು ಖಂಡನೆ ಮಾಡುತ್ತೇನೆ. ಈ ಹತ್ಯೆ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ವೀರೇಂದ್ರ ಹೆಗ್ಗಡೆಯವರ ಮೇಲೆ ಸುಮ್ಮನೆ ಸುಮ್ಮನೆ ಆರೋಪ ಸರಿಯಲ್ಲ ಎಂದರು.

    ಕರ್ನಾಟಕ ರಾಜ್ಯವನ್ನು ದೇಶಕ್ಕೆ ವಿಶ್ವಕ್ಕೆ ಪರಿಚಯ ಮಾಡಿದವರು, ಧರ್ಮಸ್ಥಳಕ್ಕೆ (Dharmasthala) ಅಪವಿತ್ರ ಶಬ್ದಗಳು ಬರಬಾರದು. ಪದೇ ಪದೇ ಅಪ್ರಚಾರ ಮಾಡಿ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಅವರ ವಿರುದ್ಧ ಈ ರೀತಿ ಅಪ್ರಚಾರ ಬೇಡ. ಯಾವುದೇ ಆಧಾರವಿಲ್ಲದೆ ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ನಾನು ಅವರ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದೇನೆ. ಅವರು ನನ್ನ ಬಳಿ ನೋವು ತೋಡಿಕೊಂಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆ ನೀಡಲಿ. ಹತ್ಯೆಯ ಬಗ್ಗೆ ಮತ್ತೆ ತನಿಖೆ ಮಾಡಲಿ. ನಮಗೆ ಸಂವಿಧಾನದ ಮತ್ತು ಸರ್ಕಾರದ ಮೇಲೆ ನಂಬಿಕೆಯಿದೆ ಎಂದು ಹೇಳಿದರು.

    ಧರ್ಮಸ್ಥಳಕ್ಕೆ ಹೋಗದಿರುವ ಬಗ್ಗೆ ಶುರುವಾಗಿರುವ ಅಭಿಯಾನದ ಬಗ್ಗೆ ಮಾತನಾಡಿದ ಅವರು, ನ್ಯಾಯ ಮತ್ತು ಧರ್ಮ ಬೇರೆ ವ್ಯವಸ್ಥೆ. ಧರ್ಮ ಪರಮಾತ್ಮ ವ್ಯವಸ್ಥೆ ಮಂಜುನಾಥ ಯಾವುದೇ ಪಾಪ ಮಾಡಿಲ್ಲ. ಯಾರಿಗೂ ಬಾ ಅಂತ ಕರೆಯವುದಿಲ್ಲ. ನಾಸ್ತಿಕರಿಗೆ ಈ ಬಗ್ಗೆ ಏನು ಹೇಳಿದರೂ ಅರ್ಥವಾಗವುದಿಲ್ಲ. ಯಾರಿಗೆ ದೇವರ ಮೇಲೆ ನಂಬಿಕೆಯಿದೆ ಅವರು ಬಂದೆ ಬರುತ್ತಾರೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿಗಳ ಹತ್ಯೆ ಪ್ರಕರಣ – ಸ್ವಾಮೀಜಿ ಪರ್ಸನಲ್ ಡೈರಿ ಪತ್ತೆ

    ಜೈನಮುನಿಗಳ ಹತ್ಯೆ ಪ್ರಕರಣ – ಸ್ವಾಮೀಜಿ ಪರ್ಸನಲ್ ಡೈರಿ ಪತ್ತೆ

    ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ (Kamkumar Nandi Maharaj) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ್ಸನಲ್ ಡೈರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾಗಿ ಮೂಲಗಳು ಖಚಿತ ಪಡಿಸಿವೆ.

    ಜೈನಮುನಿಗಳ (Jain Monk) ಡೈರಿಯನ್ನು ಸುಟ್ಟು ಹಾಕಿದ್ದಾಗಿ ಬಂಧಿತ ಆರೋಪಿಗಳು ಕಥೆ ಕಟ್ಟಿದ್ದರು. ಆದರೆ ಇದೀಗ ಪೊಲೀಸರ ಕೈಗೆ ಜೈನಮುನಿಗಳ ಡೈರಿ ಲಭ್ಯವಾಗಿದೆ. ಡೈರಿಯಲ್ಲಿ ಉಲ್ಲೇಖವಿರುವವರನ್ನು ಠಾಣೆಗೆ ಕರೆಸಿ ತನಿಖೆ ಮಾಡಲಾಗುತ್ತಿದೆ. ಇದರಿಂದಾಗಿ ಸ್ವಾಮೀಜಿ ಬಳಿ ಹಣ ಪಡೆದಿದ್ದವರಲ್ಲಿ ಆತಂಕ ಶುರುವಾಗಿದೆ. ಇದನ್ನೂ ಓದಿ: ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಪೊಲೀಸರ (Police) ದಿಕ್ಕು ತಪ್ಪಿಸುತ್ತಿದ್ದ ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ಸಾಬ್ ದಲಾಯತ್, ತಮ್ಮ ರಕ್ತಸಿಕ್ತ ಬಟ್ಟೆ ಜೊತೆ ಜೈನಮುನಿಗಳ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿದ್ದಾಗಿ ಹೇಳಿದ್ದರು. ಅಲ್ಲದೇ ಪೊಲೀಸರಿಗೆ ಬೂದಿಯನ್ನು ಸಹ ತೋರಿಸಿದ್ದರು. ಬಳಿಕ ಪೊಲೀಸರು ಎಫ್‍ಎಸ್‍ಎಲ್‍ಗೆ ಬೂದಿಯನ್ನು ರವಾನಿಸಿದ್ದರು. ಈಗ ಡೈರಿಯ ಬೂದಿ ಅಲ್ಲ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ಡೈರಿ ಪತ್ತೆಯಾಗುತ್ತಿದ್ದಂತೆ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: ಹಿರೇಕೋಡಿ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಪ್ರಕರಣ – ಇಬ್ಬರೂ ಆರೋಪಿಗಳಿಗೆ ಜು.21 ರವರೆಗೆ ನ್ಯಾಯಾಂಗ ಬಂಧನ

    ಜೈನಮುನಿ ಹತ್ಯೆ ಪ್ರಕರಣ – ಇಬ್ಬರೂ ಆರೋಪಿಗಳಿಗೆ ಜು.21 ರವರೆಗೆ ನ್ಯಾಯಾಂಗ ಬಂಧನ

    ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ.

    7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ (Chikkodi) ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು

    ಚಿಕ್ಕೋಡಿ ಸಿಪಿಐ ಆರ್‌ಆರ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಸಿಲುಕಿಕೊಂಡ ಕಾರನ್ನು ಕಿ.ಮೀ ಗಟ್ಟಲೆ ಎಳೆದುಕೊಂಡು ಹೋದ ಟಿಪ್ಪರ್ ಚಾಲಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು

    ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು

    ಚಿಕ್ಕೋಡಿ: ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಆರೋಪಿಗಳ 7 ದಿನಗಳ ಪೊಲೀಸ್ ಕಸ್ಟಡಿ (Police Custody) ಅಂತ್ಯವಾಗಲಿದೆ. ಇಂದು ಮತ್ತೆ ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ (Court) ಮುಂದೆ ಹಾಜರು ಪಡಿಸಲಿದ್ದಾರೆ.

    ಈ 7 ದಿನಗಳಲ್ಲಿ ಆರೋಪಿಗಳಿಂದ ಪಿನ್ ಟು ಪಿನ್ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ಬಗೆದಷ್ಟು ರಹಸ್ಯ ಪತ್ತೆಯಾಗಿದ್ದು, ಚಿಕ್ಕೋಡಿ (Chikkodi) ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ತನಿಖೆ ನಡೆದಿದೆ. ಎ1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ಡಾಲಾಯತ್‌ನನ್ನು ತೀವ್ರ ವಿಚಾರಣೆ ಮಾಡಲಾಗಿದೆ. ಪೊಲೀಸರ ಕೈಯಲ್ಲಿ ಸಿಕ್ಕಿಹಾಕಿಕೊಳ್ಳಬಾರದು ಎಂದು ಆರೋಪಿಗಳು ಹತ್ಯೆ ಮಾಡಿ ಬಂದು ತಮ್ಮ ಬಟ್ಟೆಗಳನ್ನೆಲ್ಲಾ ಸುಟ್ಟು ಹಾಕಿರುವ ರಹಸ್ಯವೊಂದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಕ್ಯಾಸಿನೋಗಾಗಿ ಕಳ್ಳತನ – ಮೂವರು ಆರೋಪಿಗಳು ಅರೆಸ್ಟ್

    ಸಾಕ್ಷ್ಯ ನಾಶ ಮಾಡಲು ಖತರ್ನಾಕ್ ಐಡಿಯಾ ಮಾಡಿದ್ದ ಹಂತಕರು, ಸ್ವಾಮೀಜಿಯ ಹತ್ಯೆ ಮಾಡಿ ಮಧ್ಯರಾತ್ರಿ 3 ಗಂಟೆಗೆ ಹೀರೆಕೋಡಿ (Hirekodi) ಗ್ರಾಮಕ್ಕೆ ಬಂದಿದ್ದರು. ಚಿಕ್ಕೋಡಿ ತಾಲೂಕಿನ ಹೀರೆಕೋಡಿ ಗ್ರಾಮದಿಂದ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದವರೆಗೆ ಸ್ವಾಮೀಜಿಯ ಶವ ಸಾಗಿಸಿ ಬಳಿಕ ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಇದನ್ನೂ ಓದಿ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ದುರ್ಮರಣ

    ನಂತರ ಎ1 ಆರೋಪಿ ನಾರಾಯಣ ಮಾಳಿ ಮನೆಗೆ ಬಂದು ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಎಲ್ಲಾ ಬಟ್ಟೆಗಳಿಗೆ ಬೆಂಕಿ ಹಾಕಿ ಸುಟ್ಟಿದ್ದಾನೆ. ಬಳಿಕ ಬೇರೆ ಬಟ್ಟೆ ತೊಟ್ಟು ಚಿಕ್ಕೋಡಿಯ ಎ2 ಆರೋಪಿ ಹಸನ್ ಡಾಲಾಯತ್ ಮನೆಗೆ ತೆರಳಿದ್ದ. ಸಾಕ್ಷಿ ನಾಶ ಮಾಡಿದ ಬಟ್ಟೆ ಹಾಗೂ ಡೈರಿಯ ಬೂದಿಯನ್ನು ಪೊಲೀಸರು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಪೋಲಿ ಹುಡುಗರ ಹಾವಳಿ- ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿ ಅಶ್ಲೀಲ ಬರಹ

    ತಾವೇ ಕೊಂದು ಸ್ವಾಮೀಜಿ ಹುಡುಕಾಟದ ನಾಟಕವಾಡಲು ಹೋಗಿ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಸಾಕ್ಷಿ ನಾಶ ಮಾಡಿದ ಕುರಿತು ಮಾಹಿತಿ ಸಂಗ್ರಹಿಸಿ ಪುರಾವೆಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ತನಿಖೆ ವೇಳೆ ಕೊಲೆ ಮಾಡಿದ್ದ ಕುಡಗೋಲು ಕಾಲುವೆಯಲ್ಲಿ ಪತ್ತೆಯಾಗಿದ್ದು, ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಲು ಪೊಲೀಸರು ಸಾಕ್ಷಿ ಸಂಗ್ರಹ ಮಾಡಿದ್ದಾರೆ. ಇದನ್ನೂ ಓದಿ: 15 ಸಾವಿರಕ್ಕಾಗಿ ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನ ಪಾಕಿಸ್ತಾನಕ್ಕೆ ಕೊಡ್ತಿದ್ದ ವ್ಯಕ್ತಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿರೇಕೋಡಿ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ

    ಹಿರೇಕೋಡಿ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ

    ಚಿಕ್ಕೋಡಿ (ಬೆಳಗಾವಿ): ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ (Acharya Kam Kumar Nandi)  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಅನ್ನು ಚಿಕ್ಕೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

    ಹತ್ಯೆಗೂ ಮುನ್ನ ಅಂದರೆ ಜುಲೈ 5 ರ ರಾತ್ರಿ ಹಂತಕ ನಾರಾಯಣ ಮಾಳಿಯು (Narayana Maali) ಚಿಕ್ಕೋಡಿಯಲ್ಲಿ ಹಸನಸಾಬ್ ದಲಾಯತ್ ಸಂಪರ್ಕಿಸಿದ್ದನು. ಅಲ್ಲಿ ಹಸನಸಾಬ್ ದಲಾಯತ್‍ನ ಜೊತೆ ಮದ್ಯಪಾನ ಮಾಡಿ ಗೋಣಿ ಚೀಲ ಹಾಗೂ ಮಾರಕಾಸ್ತ್ರ ತೆಗೆದುಕೊಂಡು ಚಿಕ್ಕೋಡಿಯಲ್ಲಿ ಬೈಕ್‍ಗೆ ಪೆಟ್ರೋಲ್ ಹಾಕಿಸಿಕೊಂಡು ಹಂತಕರು ಆಶ್ರಮದತ್ತ ತೆರಳಿದ್ದರು.

    ಆಶ್ರಮದಲ್ಲಿ ಮೊದಲು ಜೈನಮುನಿಗಳಿಗೆ ಕರೆಂಟ್ ಶಾಕ್ ನೀಡಿ ಕೊಲ್ಲಲು ಯತ್ನಿಸಲಾಯಿತು. ಬಳಿಕ ಟವೆಲ್‍ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಯಿತು. ಕೊಲೆಯ ಬಳಿಕ ಚೀಲದಲ್ಲಿ ಮೃತದೇಹ ಕಟ್ಟಿ ಬೈಕ್‍ನಲ್ಲಿ ಹೊತ್ತೊಯ್ದಿದ್ದರು. ಸುಮಾರು 39 ಕಿಮೀ ಬೈಕ್‍ನಲ್ಲಿ ಜೈನಮುನಿಗಳ ಮೃತದೇಹ ಹೊತ್ತೊಯ್ದಿದ್ದರು. ಇದನ್ನೂ ಓದಿ: ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ನಂದಿಪರ್ವತ ಆಶ್ರಮದಿಂದ ಪರ್ಯಾಯ ಮಾರ್ಗವಾಗಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದರು. ಮಾರ್ಗಮಧ್ಯೆ ಗುಡ್ಡಗಾಡು ಪ್ರದೇಶದಲ್ಲಿ ಮೃತದೇಹವನ್ನು ಹಂತಕರು ಕತ್ತರಿಸಿದ್ದರು. ಮೃತದೇಹ ಕತ್ತರಿಸಿ ಚೀಲದಲ್ಲಿ ಕಟ್ಟಿಕೊಂಡು ಕಟಕಬಾವಿಯಲ್ಲಿರುವ ಸ್ವಂತ ಗದ್ದೆಗೆ ಹೋಗಿದ್ದರು. ಅಲ್ಲಿ ಬೋರ್‍ವೆಲ್‍ನಲ್ಲಿ ಮೃತದೇಹದ ತುಂಡು ಎಸೆದು ವಾಪಸ್ ಆಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಚಿಕ್ಕೋಡಿ: ಹೀರೆಕೋಡಿ (Hirekodi) ನಂದಿಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಕಾಮಕುಮಾರ ಮಹಾರಾಜರ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಚಿಕ್ಕೋಡಿ (Chikkodi) ಪೊಲೀಸರು ಸ್ವಾಮೀಜಿಯ ಡೈರಿ (Diary) ರಹಸ್ಯವನ್ನು ಕೆದಕುತ್ತಿದ್ದಾರೆ.

    ಜೈನಮುನಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ನಾರಾಯಣ ಮಾಳಿ ಮತ್ತು ಎ2 ಆರೋಪಿ ಹಸನ್ ದಲಾಯತ್‌ನನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆ ಡಿವೈಎಸ್ಪಿ ಬಸವರಾಜ್ ಯಲಿಗಾರ ಅವರ ನೇತೃತ್ವದಲ್ಲಿ ಆರೋಪಿಗಳ ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದು, ಈಗಾಗಲೇ ಚಿಕ್ಕೋಡಿ ಪೊಲೀಸರು ಹಲವು ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್ – ಕೃತ್ಯದ ಉದ್ದೇಶ ಕೇಳಿ ಪೊಲೀಸರೇ ಶಾಕ್

    ಆರೋಪಿಗಳು ಸ್ವಾಮೀಜಿಯ ಹತ್ಯೆ ಮಾಡಿದ್ದಲ್ಲದೇ ಅವರ ಡೈರಿಯನ್ನೂ ಸುಟ್ಟು ಹಾಕಿದ್ದರು. ಈ ಕುರಿತು ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಜೈನಮುನಿಯ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿದ ಸ್ಥಳವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ಸುಟ್ಟ ಡೈರಿಯ ಬೂದಿಯನ್ನು ಎಫ್‌ಎಸ್‌ಎಲ್‌ಗೆ (FSL) ರವಾನಿಸಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನ (Bengaluru) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಡೈರಿಯ ಬೂದಿಯನ್ನು ರವಾನಿಸಲು ಸಿದ್ಧತೆ ನಡೆಸಿದ್ದು, ಅದರೊಂದಿಗೆ ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹಾ ಪ್ರಯೋಗಾಲಯಕ್ಕೆ ರವಾನೆ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೇಳದೆ ಅಡುಗೆಗೆ ಟೊಮೆಟೊ ಬಳಸಿದ ಪತಿ – ಕೋಪಗೊಂಡು ಮಗಳೊಂದಿಗೆ ಮನೆಬಿಟ್ಟ ಹೆಂಡತಿ

    ಜೈನಮುನಿಗಳು ಬಳಸುತ್ತಿದ್ದ ಎರಡು ಮೊಬೈಲ್ ಹಾಗೂ ಇಬ್ಬರು ಆರೋಪಿಗಳ ತಲಾ ಒಂದೊಂದು ಮೊಬೈಲ್ ಅನ್ನು ಎಫ್‌ಎಸ್‌ಎಲ್‌ಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ಮೊಬೈಲ್‌ನಲ್ಲಿ ಏನಾದರೂ ಸಾಕ್ಷ್ಯ ಇದೆಯಾ? ಯಾವಾಗೆಲ್ಲಾ ಕರೆ ಮಾಡಿದ್ದರು ಎಂಬ ಬಗ್ಗೆ ಪೊಲೀಸರು ಪಿನ್ ಟು ಪಿನ್ ಮಾಹಿತಿ ಪಡೆಯುತ್ತಿದ್ದಾರೆ. ಹಣಕಾಸಿನ ವ್ಯವಹಾರ, ಸಾಮಾಜಿಕ ಜಾಲತಾಣ ಬಳಕೆ ಹಾಗೂ ಕಾಲ್ ರೆಕಾರ್ಡ್, ಪೋಟೋ ಮತ್ತು ವಿಡಿಯೋ ಪತ್ತೆಗಾಗಿ ಮೊಬೈಲ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್

    ಆರೋಪಿಗಳನ್ನು ಕಸ್ಟಡಿಗೆ ಪಡೆದು ಇಂದಿಗೆ (ಗುರುವಾರ) ಮೂರು ದಿನಗಳಾಗಿದ್ದು, ಮೂರನೇ ದಿನವೂ ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ. ಬುಧವಾರ ಆರೋಪಿಗಳನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಅಲ್ಲದೇ ಇಡೀ ದಿನ ಘಟನೆ ನಡೆದ ಸ್ಥಳ, ಮೃತದೇಹ ರವಾನಿಸಿದ ಮಾರ್ಗ ಜೈನಮುನಿಗಳ ದೇಹ ತುಂಡರಿಸಿದ ಸ್ಥಳ, ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸುಟ್ಟು ಹಾಕಿದ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಎ1 ಆರೋಪಿ ನಾರಾಯಣ್ ಇಲ್ಲಿಯವರೆಗೂ ಬಾಯ್ಬಿಟ್ಟಿಲ್ಲ. ಈ ಹಿನ್ನೆಲೆ ಹಿರೇಕೋಡಿ ಆಶ್ರಮದಿಂದ ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಯವರೆಗೂ ಹೋಗಿದ್ದ ಮಾರ್ಗವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 35 ಕಿಲೋಮೀಟರ್ ರಸ್ತೆ ಮಾರ್ಗದಲ್ಲಿ ಇರುವ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದು, ಹಂತಕರು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದಾರಾ ಎಂಬ ಬಗ್ಗೆ ಪೊಲೀಸರು ಸಾಕ್ಷ್ಯ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡದಿದ್ರೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ: ಈಶ್ವರಪ್ಪ

    ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡದಿದ್ರೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ: ಈಶ್ವರಪ್ಪ

    ಶಿವಮೊಗ್ಗ: ಜೈನ ಮುನಿ (Jain Monk) ಹತ್ಯೆಯನ್ನು ಕೇವಲ ಒಬ್ಬರು, ಇಬ್ಬರು ಮಾಡಿರಲು ಸಾಧ್ಯವಿಲ್ಲ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಉಳಿಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S. Eshwarappa) ಭವಿಷ್ಯ ನುಡಿದಿದ್ದಾರೆ.

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ದೇಶದ ನಾಗರೀಕರ ಅಭಿಪ್ರಾಯವಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಗೌರವ ಇದೆ. ಪೊಲೀಸ್ ತನಿಖೆ ಒಂದು ಕಡೆ ನಡೆಯಲಿ. ಅದರಂತೆ ಸಿಬಿಐ ತನಿಖೆ ಸಹ ನಡೆಯಲಿ. ಸಿಬಿಐ ತನಿಖೆ ನಡೆದರೆ ಸತ್ಯಾಸತ್ಯತೆ ಹೊರ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಜೈನಮುನಿ ಹಂತಕನ ಮನೆಯ ಮೂಕಪ್ರಾಣಿಗಳ ಪಾಲನೆ- ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದಾಗ, ಪ್ರೇಮ್ ಸಿಂಗ್‍ಗೆ ಚಾಕು ಇರಿತ ಪ್ರಕರಣ ನಡೆದಾಗ ಪೊಲೀಸ್ ತನಿಖೆ ನಡೆಯುವಾಗಲೇ ಎನ್‍ಐಎ ತನಿಖೆಗೆ ವಹಿಸಲಾಗಿತ್ತು. ಎನ್‍ಐಎ ತನಿಖೆ ನಂತರ ದೇಶದಲ್ಲಿ ದುಷ್ಕøತ್ಯ ನಡೆಸುವ ಸಂಘಟನೆಗಳ ಹುನ್ನಾರ ಬಹಿರಂಗವಾಗಿತ್ತು. ಈ ಎರಡೂ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ತನಿಖೆಗೆ ಒತ್ತಾಯಿಸಲಾಗುತ್ತಿದೆ ಎಂದಿದ್ದಾರೆ.

    ಅನೇಕ ಬಾರಿ ಪೊಲೀಸ್ ಇಲಾಖೆ ತನಿಖೆ ಮಾಡಿ ಯಶಸ್ವಿಯಾಗಿದೆ. ಆದರೆ ಕೆಲವು ಪ್ರಕರಣಗಳಲ್ಲಿ ಸಿಬಿಐಗೆ ಕೊಟ್ಟ ನಂತರ ನ್ಯಾಯ ಸಿಕ್ಕಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಿಬಿಐ ತನಿಖೆಗೆ ವಹಿಸುವುದಿಲ್ಲ ಎನ್ನುತ್ತಿದ್ದಾರೆ. ಸಿಬಿಐ ತನಿಖೆಗೆ ವಹಿಸದಿದ್ದರೆ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಆಪಾದನೆ ರಾಜ್ಯ ಸರ್ಕಾರದ ಮೇಲೆ ಬರಲಿದೆ ಎಂದು ಹೇಳಿದ್ದಾರೆ.

    ಸಿಬಿಐ ತನಿಖೆಗೆ ವಹಿಸಲು ಏಕೆ ಮೀನಾ ಮೇಷ ಎಣಿಸುತ್ತಿದ್ದೀರಾ? ಸಿಬಿಐ ತನಿಖೆಗೆ ಕೊಡದಿದ್ದರೆ, ದೇಶದ ಜನರ ಆಕ್ರೋಶ ಕಾಂಗ್ರೆಸ್ ವಿರುದ್ಧ ಸ್ಫೋಟವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಡ್ಯಾಂ ಕಾಮಗಾರಿಯಲ್ಲಿ ಅಕ್ರಮ – ತನಿಖೆಗೆ ಸಿಎಂ ಆದೇಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹಂತಕನ ಮನೆಯ ಮೂಕಪ್ರಾಣಿಗಳ ಪಾಲನೆ- ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಜೈನಮುನಿ ಹಂತಕನ ಮನೆಯ ಮೂಕಪ್ರಾಣಿಗಳ ಪಾಲನೆ- ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಜೈನಮುನಿ ಹತ್ಯೆ ಪ್ರಕರಣಕ್ಕೆ (Jain Monk Murder Case) ಸಂಬಂಧಿಸಿದಂತೆ ಹಂತಕನ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಅಲ್ಲದೆ ನಾರಾಯಣ ಮಾಳಿ (Narayana Maali) ಮನೆಯಲ್ಲಿರುವ ಮೂಕಪ್ರಾಣಿಗಳನ್ನು ಪೊಲೀಸರು ಪಾಲನೆ ಮಾಡುತ್ತಿದ್ದಾರೆ.

    ಹೌದು. ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಈಗ ಜೈಲು ಸೇರಿದ್ದಾನೆ. ನಾರಾಯಣ ಮಾಳೆ ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿವೆ.

    ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ ಮತ್ತು 40ಕ್ಕೂ ಹೆಚ್ಚು ಮೇಕೆಗಳನ್ನು ಶೆಡ್ ನಲ್ಲಿಯೇ ಬಿಟ್ಟು ಹೊರಟು ಹೋಗಿದ್ದಾರೆ. ಮಾಳೆ ಮನೆಗೆ ಭದ್ರತೆಗೆ ಅಂತ ಜುಲೈ 7 ರಂದು ನಿಯೋಜನೆಗೊಂಡಿದ್ದ ಕೆಎಸ್‍ಆರ್ ಪಿ ಪೊಲೀಸರು ಹಾಗೂ ಚಿಕ್ಕೋಡಿ ಪೊಲೀಸರು ಕಳೆದ ನಾಲ್ಕು ದಿನಗಳಿಂದ ಮಾಳೆ ಸಾಕಿದ್ದ ಮೇಕೆ ಹಾಗೂ ಹಸು, ಎಮ್ಮೆಗಳಿಗೆ ತಾವೇ ಮೇವು ಹಾಕಿ ನಿರುಣಿಸಿ ನೋಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಮಾಳೆ ಪಾಪಿಯಾದರೂ ಸಹ ಆತ ತನ್ನ ಮನೆಯಲ್ಲಿ ಕಟ್ಟಿದ್ದ ಮೂಕ ಪ್ರಾಣಿಗಳ ರೋಧನೆ ನೋಡಲಾಗದೆ ಪೊಲೀಸರು ಅವುಗಳ ಲಾಲನೆ-ಪಾಲನೆ ಮಾಡುತ್ತಿದ್ದಾರೆ. ಪೊಲೀಸರ ಈ ಮಾನವೀಯ ಕೆಲಸಕ್ಕೆ ಈಗ ಮೆಚ್ಚುಗೆ ವ್ಯಕ್ತವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]