Tag: ಜೈನಮುನಿ

  • ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಬೆಳಗಾವಿ: ಚಿಕ್ಕೋಡಿ ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ (Kama Kumara Nandi Maharaj) ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು 7 ದಿನ ಕಸ್ಟಡಿಗೆ ಪಡೆದಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಆರೋಪಿ ನಾರಾಯಣ ಮಾಳಿ, ಮತ್ತೊಬ್ಬ ಆರೋಪಿ ಹಸನಸಾಬ್ ದಲಾಯತ್‍ನಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯ್ತು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯ್ತು.

    ಇಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ (Nalin Kumar Kateel) ನೇತೃತ್ವದ ಬಿಜೆಪಿ ಸಮಿತಿ ಹಿರೇಕೋಡಿ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಳಿಕ ರಾಜ್ಯ ಸರ್ಕಾರದ ವಿರುದ್ಧ ಕಟೀಲ್ ವಾಗ್ದಾಳಿ ನಡೆಸಿದ್ರು. ಈ ಪ್ರಕರಣದಲ್ಲಿ ಕೇವಲ ಇಬ್ಬರಲ್ಲ, ಇನ್ನಷ್ಟು ಮಂದಿ ಇರುವ ಶಂಕೆ ಇದೆ ಅಂದ್ರು. ಎಲ್ಲವೂ ಸಂಶಯಾಸ್ಪದವಾಗಿದ್ದಾಗ ಪ್ರಕರಣವನ್ನು ಸಿಬಿಐಗೆ ವಹಿಸೋದ್ರಲ್ಲಿ ತಪ್ಪೇನಿದೆ. ಒಬ್ಬ ಆರೋಪಿ ಹೆಸರನ್ನು ಕೊನೆಯವರೆಗೂ ಮುಚ್ಚಿಟ್ಟಿದ್ದು ಏಕೆ ಎಂದು ಕಟೀಲ್ ಪ್ರಶ್ನಿಸಿದ್ರು.

    ಈ ಪ್ರಕರಣ ಸಂಬಂಧ ಸದನಕ್ಕೆ ಉತ್ತರ ನೀಡಿದ ಗೃಹ ಸಚಿವ ಪರಮೇಶ್ವರ್ (G Parameshwar), ಇದು 6 ಲಕ್ಷ ರೂಪಾಯಿ ವ್ಯವಹಾರ. ಹಣ ವಾಪಸ್ ಕೇಳಿದಾಗ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣದ ತನಿಖೆ ಸರಿಯಾಗಿಯೇ ನಡೆಯುತ್ತಿದೆ. ಇದನ್ನು ಸಿಬಿಐಗೆ ಒಪ್ಪಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ನಮ್ ಪೊಲೀಸ್ರು ದೇಶದಲ್ಲೇ ಬೆಸ್ಟ್ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಜೈನ ಮುನಿ ಕೊಲೆ ಕೇಸ್‌ – ಸಿಬಿಐ ತನಿಖೆಗೆ ಆಗ್ರಹಿಸಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

    ನಮ್ಮ ಕಾಲದಲ್ಲಿ ಮಾತ್ರ ಕೊಲೆ ನಡೆದಿಲ್ಲ. ಎಲ್ಲರ ಕಾಲದಲ್ಲೂ ನಡೆದಿದೆ ಎಂಬ ಗೃಹ ಸಚಿವರ ಮಾತು ಬಿಜೆಪಿಗರನ್ನು ಸಿಟ್ಟಿಗೆಬ್ಬಿಸಿತು. ಈ ವೇಳೆ ಪೊಲೀಸರನ್ನು ಸಿಎಂ ಸಮರ್ಥಿಸಿಕೊಂಡರು. ಸರ್ಕಾರದ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಮತ್ತೆ ಸದನದ ಬಾವಿಗೆ ಇಳಿಯಿತು. ಪರಸ್ಪರ ವಾಕ್ಸಮರ ನಡೆದವು. ಸರಣಿ ಹತ್ಯೆಗಳನ್ನು ಖಂಡಿಸಿ ಬುಧವಾರ ಬಿಜೆಪಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಪ್ರಕರಣವನ್ನು CBI ತನಿಖೆಗೆ ಕೊಡಲ್ಲ: ಜಿ. ಪರಮೇಶ್ವರ್

    ಜೈನಮುನಿ ಹತ್ಯೆ ಪ್ರಕರಣವನ್ನು CBI ತನಿಖೆಗೆ ಕೊಡಲ್ಲ: ಜಿ. ಪರಮೇಶ್ವರ್

    ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI)ಗೆ ಕೊಡುವ ಅಗತ್ಯವಿಲ್ಲ, ನಮ್ಮ ಪೊಲೀಸರೇ ಸಮರ್ಥರಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G. Parameshwar) ಹೇಳಿದ್ದಾರೆ.

    ಜೈನಮುನಿ ಹತ್ಯೆ ಪ್ರಕರಣವನ್ನು (Jain Monk Murder Case) ಶೂನ್ಯ ವೇಳೆಯಲ್ಲಿ ಬಿಜೆಪಿ (BJP)ಸೋಮವಾರ ಪ್ರಸ್ತಾಪ ಮಾಡಿತ್ತು. ಸಿಬಿಐಗೆ ನೀಡುವಂತೆ ಬಿಜೆಪಿ ಶಾಸಕರು ಆಗ್ರಹಿಸಿದ್ದರು. ಇದಕ್ಕೆ ಇಂದು ಸದನದಲ್ಲಿ ಉತ್ತರ ನೀಡಿದ ಪರಮೇಶ್ವರ್, ಇಂತಹ ಘೋರ ಹತ್ಯೆಯನ್ನು ಕಂಡಿರಲಿಲ್ಲ. ಇದು ಅತ್ಯಂತ ನೋವು ತಂದ ಘಟನೆ ಎಂದರು.

    ಆಚಾರ್ಯ ಕಾಮಕುಮಾರ ನಂದಿ (Acharya Kamakumar Nandi Maharaj) ಜೈನಮುನಿ ಅವರ ಹಿರೇಕೋಡಿ ಆಶ್ರಮಕ್ಕೆ 4 ಎಕರೆ ಜಮೀನು ಇದೆ. ಹತ್ಯೆ ಆರೋಪಿಗಳಾದ ನಾರಾಯಣ ಬಸಣ್ಣ ಮಾಳಿ, ಹಸನ್ ಸಾಬಾ ಮಕ್ಬೂಲ್ ದಲಾಯಿತಗೆ 6 ಲಕ್ಷ ರೂ. ಸಾಲ ನೀಡಿದ್ದು, ಅದನ್ನು ಮರಳಿಸುವಂತೆ ಕೇಳಿದ್ದರು. ಆ ಕಾರಣಕ್ಕಾಗಿ ಕೊಲೆ ಮಾಡಿ ದೇಹವನ್ನು ತುಂಡು ಮಾಡಿ ಕೊಳವೆ ಬಾವಿಯಲ್ಲಿ ಹಾಕಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ವರ್ಗಾವಣೆ ‘ವ್ಯಾಪಾರ’ದ ಕಿಚ್ಚು ; ಕಾಂಗ್ರೆಸ್-ಬಿಜೆಪಿ ಮಧ್ಯೆ ಜಟಾಪಟಿ, ಕಲಾಪ ಮುಂದೂಡಿಕೆ

    ಪೊಲೀಸರು ಘಟನೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಹಿಡಿದಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಮಾತ್ರ ಹತ್ಯೆ ನಡೆದಿಲ್ಲ. ಎಲ್ಲಾ ಸಂದರ್ಭದಲ್ಲೂ ಹತ್ಯೆಗಳು ನಡೆದಿವೆ. ಆದರೆ ತಾವು ಸಿಬಿಐಗೆ ತನಿಖೆಗೆ ಕೊಡಲು ಬೇಡಿಕೆ ಇಡುತ್ತೀರಿ. ಹಾಗಾದರೆ ನಮ್ಮ ಪೊಲೀಸರಿಗೆ ಸಾಮರ್ಥ್ಯ ಇಲ್ಲವೇ? ನಿಮ್ಮ ಸರ್ಕಾರದ ಅವಧಿಯಲ್ಲಿ ಇದ್ದ ಬೆಸ್ಟ್ ಪೊಲೀಸ್ ಇವಾಗ ಅಸಮರ್ಥರಾದರೇ? ನಮ್ಮ ಪೊಲೀಸರ ಮೇಲೆ ನಮಗೆ ನಂಬಿಕೆ ವಿಶ್ವಾಸ ಇಲ್ಲವೇ? ಕರ್ನಾಟಕ ಪೊಲೀಸ್ ವನ್ ಆಫ್ ದಿ ಬೆಸ್ಟ್ ಪೊಲೀಸ್ ಎಂದು ತಿರುಗೇಟು ಕೊಟ್ಟರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ

    ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ

    ಹುಬ್ಬಳ್ಳಿ: ಬಿಜೆಪಿಯವರೇನು (BJP) ಸಾಚಾಗಳಲ್ಲ. ಸಿಬಿಐ (CBI) ಅನ್ನೋದು ಬುರುಡೆ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು ಏನಾಯಿತು? ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಹೀರೆಕುಡಿ (Hirekudi) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು. ಇದನ್ನೂ ಓದಿ: ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೇನು ಸಾಚಾಗಳಲ್ಲ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು, ಏನಾಯಿತು? 22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಪರಮೇಶ್ ಮೇಸ್ತಾ ಕೇಸ್ ಏನಾಯಿತು? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ. ಇವರೇನು ಸಾಚಾಗಳ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದುತ್ವ ಉಳಿಸಲು ಏನು ಮಾಡುತ್ತೇವೆ ನೋಡಿ ಎಂದು ಹರಿಹಾಯ್ದರು. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ತಮಿಳುನಾಡಿನ ರಾಮನಾಥಪುರಂನಿಂದ ಮೋದಿ ಸ್ಪರ್ಧೆ?

    ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ. ಈ ರೀತಿ ಮಾಡಿದವರನ್ನು ಸರ್ಕಾರ ಹೊರಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ. ಬೇರೆ ಏನೋ ಷಡ್ಯಂತ್ರ ಇದೆ ಎಂದರು. ಇದನ್ನೂ ಓದಿ: ಭಾರೀ ಮಳೆ.. ಹಿಮಪಾತ – ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್

    ನಾನು ಇದನ್ನು ಸಿಬಿಐಗೆ ವಹಿಸಿ ಅಂತಾ ಹೇಳಲ್ಲ. ಬಿಜೆಪಿಯವರೇ ಬಾಯಿ ಮುಚ್ಚಿ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ (Uttara Pradesh) ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಳಪೆ ರಸ್ತೆ ಕಾಮಗಾರಿ ಆರೋಪ – ಎಂಜಿನಿಯರ್‌ಗೆ ಕಲ್ಲೇಟು

    ಸನ್ಯಾಸಿಯನ್ನು ಕೊಲ್ಲಲು ಅವರಿಗೆ ಯಾವ ಮಾನಸಿಕತೆ ಇದೆ. ಇದು ಕರ್ನಾಟಕಕ್ಕೆ ಕಳಂಕ. ಯಾರಾದರೂ ಇವರನ್ನು ರಕ್ಷಣೆ ಮಾಡಿದರೆ ಇದೇ ಮಚ್ಚು ನಾಳೆ ನಿಮ್ಮ ಮನೆಗೆ ಬರುತ್ತದೆ. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಅಕಸ್ಮಾತ್ ವಕಾಲತ್ತು ಮಾಡಿದರೆ ಅವರ ಕ್ರೌರ್ಯಕ್ಕೆ ಸಹಾಯ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

    ಇದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚುಮರೆ ಮಾಡಿದರೆ ದೇಶಕ್ಕೇ ಅಪಾಯಕಾರಿ. ಪೊಲೀಸರು ಯಾರನ್ನೂ ಮುಚ್ಚುಮರೆ ಮಾಡಬಾರದು. ಅಕಸ್ಮಾತ್ ಮುಚ್ಚುಮರೆ ಮಾಡಿದರೆ ಅವರು ಪೊಲೀಸರನ್ನೂ ಬಿಡಲ್ಲ. ಪೊಲೀಸ್ ಇಲಾಖೆಯ ಮೂಲಕ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ. ಈಗಾಗಲೇ ದಿಕ್ಕು ತಪ್ಪಿಸಿದ್ದಾರೆ. ಇದರ ಹಿಂದೆ ಬಲವಾದ ಕಾರಣವಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಬಾಯಿಮುಚ್ಚಿ ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಿ ಎಂದು ಮೂರು ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುವಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಕೇಸ್ – ಸತ್ಯ ಶೋಧನೆಗಿಳಿದಿದ್ದ ಬಿಜೆಪಿಗೆ ಶಾಕ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ – ಎಫ್‌ಐಆರ್‌ನಲ್ಲಿ ಸ್ಫೋಟಕ ರಹಸ್ಯ ಬಯಲು

    ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ – ಎಫ್‌ಐಆರ್‌ನಲ್ಲಿ ಸ್ಫೋಟಕ ರಹಸ್ಯ ಬಯಲು

    ಚಿಕ್ಕೋಡಿ: ಜೈನ ಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ (FIR) ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ.

    ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಕೊಲೆ ಮಾಡಿದ್ದು ನಾರಾಯಣ ಮಾಳಿ ಮಾತ್ರ ಎಂದು ಬಿಂಬಿಸುವ ಕಾರ್ಯ ನಡೆದಿತ್ತು. ಆದರೆ ಸದ್ಯ ಹಸನ್ ಡಾಲಾಯತ್ ಹಾಗೂ ನಾರಾಯಣ ಮಾಳಿ ಇಬ್ಬರು ಸೇರಿ ಜೈನಮುನಿಯ ಹತ್ಯೆ ಮಾಡಿದ್ದಾರೆ ಎಂಬ ಸ್ಫೋಟಕ ಸುದ್ದಿ ಎಫ್‌ಐಆರ್ ಮೂಲಕ ಬಹಿರಂಗವಾಗಿದೆ. ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ. ಕರೆಂಟ್ ಶಾಕ್ ಕೊಟ್ಟು ಚಿತ್ರ ಹಿಂಸೆ ನೀಡಿದ ನಂತರ ಸ್ವಾಮೀಜಿಯ ಟವೆಲ್‌ನಿಂದಲೇ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಹಣ ವಾಪಸ್ ನೀಡುವಂತೆ ಪದೇ ಪದೇ ಸ್ವಾಮೀಜಿ ಪೀಡಿಸುತ್ತಿದ್ದು, ಇದರಿಂದ ಕೋಪಗೊಂಡ ನಾರಾಯಣ ಮಾಳಿ ತನ್ನ ಸ್ನೇಹಿತ ಹಸನ್ ಡಾಲಾಯತ್ ಜೊತೆ ಸೇರಿ ಕೊಲೆ ಮಾಡಿದ್ದಾನೆ. ಕೋಣೆಯಲ್ಲಿ ಜೈನ ಮುನಿಗೆ ಮೊದಲು ಕರೆಂಟ್ ಶಾಕ್ ನೀಡಿ ಚಿತ್ರ ಹಿಂಸೆ ನೀಡಿದ್ದು, ಬಳಿಕ ಕೊಲೆ ಮಾಡಿ ಗೋಣಿ ಚೀಲದಲ್ಲಿ ಶವ ಸಾಗಿಸಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಹೀರೆಕುಡಿಯಿಂದ ಖಟಕಬಾವಿಯವರೆಗೂ ಬೈಕ್ ಮೇಲೆ ಶವ ಸಾಗಾಟ ಮಾಡಿ ಖಟಕಬಾವಿಯ ಕೊಳವೆ ಬಾವಿ ಬಳಿ ದೇಹ ಪೀಸ್ ಪೀಸ್ ಮಾಡಿದ್ದಾರೆ. ನಂತರ ಕೊಳವೆ ಬಾವಿಯಲ್ಲಿ ಶವ ಎಸೆದು ಹೋಗಿರುವ ವಿಚಾರ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಲ್ಲ: ಗೃಹ ಸಚಿವ

    ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಲ್ಲ: ಗೃಹ ಸಚಿವ

    ಬೆಳಗಾವಿ: ಹಿರೇಕೋಡಿಯ ಜೈನ ಮುನಿಗಳ (Jain Monk) ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (G.Parameshwara) ಹೇಳಿದ್ದಾರೆ.

    ಬೆಳಗಾವಿ (Belagavi) ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

    ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿಸಿತರ ವಿರುದ್ಧ ಈಗಾಗಲೇ ತನಿಖೆ ಆರಂಭವಾಗಿದೆ. ಯಾರೂ ಉದ್ರೇಕಗೊಳ್ಳಬಾರದು. ಎಲ್ಲವನ್ನೂ ಕಾನೂನು ನೋಡಿಕೊಳ್ಳಲಿದೆ ಎಂದಿದ್ದಾರೆ.

    ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ಸರ್ಕಾರ ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹುಬ್ಬಳ್ಳಿಯ ಗುಣಧರನಂದಿ ಮಹಾರಾಜರ ಎಲ್ಲಾ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೇನೆ. ಈ ಮೂಲಕ ಎಲ್ಲಾ ಸಮುದಾಯದ ಸಾಧು ಸಂತರಿಗೆ ನಾನು ಭರವಸೆ ನೀಡುತ್ತೇನೆ. ಮುನಿಗಳು ಧರ್ಮಪ್ರಚಾರಕ್ಕೆ ನಡೆದುಕೊಂಡು ಹೋಗುವ ವೇಳೆ ಭದ್ರತೆ ನೀಡುತ್ತೇವೆ. ಜೈನ ಸಮುದಾಯಕ್ಕೆ ಮಂಡಳಿ ಮಾಡಿಕೊಳ್ಳಲು ಕೋರಿದ್ದಾರೆ. ಅದಕ್ಕೂ ನಮ್ಮ ಸರ್ಕಾರ ಬದ್ಧವಿದೆ. ನಾನು ಕೂಡ ಹಿರೇಕೋಡಿಯ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ.

    ಚಿಕ್ಕೋಡಿಗೆ ಎಡಿಜಿಪಿ ಆರ್. ಹಿತೇಂದ್ರ ಅವರನ್ನು ಕಳುಹಿಸಲಾಗಿದೆ. ಅವರೂ ಘಟನೆಯ ಎಲ್ಲಾ ಮಾಹಿತಿ ಪಡೆದಿದ್ದಾರೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ, ರಾಜ್ಯದಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ

    ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ

    – ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂಗಳ ಹತ್ಯೆ ಹತ್ಯೆ ನಡೆಯುತ್ತಿದ್ದು, ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

    ವಿಧಾನಸಭೆಯಲ್ಲಿ (Vidhanasabha Session) ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂಗಳ ಕೊಲೆ ನಡೆಯುತ್ತಿದೆ. ಟೀ.ನರಸೀಪುರದಲ್ಲಿ ಹನುಮಜಯಂತಿ ವಿಚಾರದಲ್ಲಿ ಯುವ ಬ್ರಿಗೇಡ್ (Yuvara Brigade) ಯುವಕನ ಕೊಲೆ ಆಗಿದೆ. ಈ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ (Pakistan Flag) ಹಾರಾಡ್ತಿದೆ ಎಂದಾಗ ಕಾಂಗ್ರೆಸ್ ಶಾಸಕರು (Congress MLA) ಆಕ್ರೋಶ ಹೊರಹಾಕಿದ್ದಾರೆ., ಇದೇನಿದು..!? ಏನೇನೋ ಹೇಳ್ತಾರೆ. ಜೈನಮುನಿಗಳ ಬಗ್ಗೆ ಚರ್ಚೆ ಬಗ್ಗೆ ಮಾತಾಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಜೈನ ಮುನಿಗಳು (Jain Monk) ಎಲ್ಲವನ್ನೂ ತ್ಯಾಗ ಮಾಡ್ತಾರೆ ಇಂತಹವರ ಹತ್ಯೆಯಿಂದ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರಾಜ್ಯಕ್ಕೆ ಮುನಿಗಳ ಹತ್ಯೆ ಕಳಂಕವಾಗಿದೆ. ಈ ಹತ್ಯೆ ಹಿಂದೆ ಹಲವು ಅನುಮಾನಗಳಿದ್ದಾವೆ. ಬೆಂಗಳೂರಿನಿಂದ ಪೊಲೀಸರ ಮೇಲೆ ಏನ್ ಒತ್ತಡ ಬಂದಿದೇಯೋ..!?. ಪೊಲೀಸರ ಮೇಲೆ ಒತ್ತಡ ಬರುತ್ತೆ. ಬೆಳಗ್ಗೆ ಚೆನ್ನಾಗಿ ಇರುತ್ತಾರೆ, ರಾತ್ರಿ ಒಳಗಾಗಿ ಪೊಲೀಸರು ಬದಲಾಗ್ತಾರೆ ಎಂದರು. ಇದನ್ನೂ ಓದಿ: ಬೆಳಗಾವಿ ಜೈನಮುನಿ ಕೊಲೆ ಪ್ರಕರಣ- ಸಿಬಿಐ ತನಿಖೆಗೆ ಒಪ್ಪದ ಸರ್ಕಾರ

    ಹಸನ್ ಎಂಬ ಹೆಸರನ್ನ ಏಕೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯದ ಪೊಲೀಸರ ಮೇಲೆ ಭರವಸೆ ಇಲ್ಲ. ಸಿಬಿಐ ತನಿಖೆಗೆ (CBI Investigation) ಈ ಕೇಸ್ ಕೊಡಬೇಕು. ಒಂದು ಕೋಮಿನ ತೃಪ್ತಿಪಡಿಸುವ ಕೆಲಸ ಆಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಒಂದು ಸಂತಾಪವನ್ನ ಕೂಡ ಹೇಳಲಿಲ್ಲ. ಬೇರೆ ಯಾರಾದರೂ ಸತ್ತಿದ್ರೆ ಸಂತಾಪ ಸೂಚಿಸುತ್ತಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಕೇಸ್‌ ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹ

    ಜೈನಮುನಿ ಹತ್ಯೆ ಕೇಸ್‌ ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹ

    ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸುವಂತೆ ಬಿಜೆಪಿ ಮುಖಂಡರೂ (BJP Leader) ಆಗಿರುವ ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಒತ್ತಾಯಿಸಿದ್ದಾರೆ.

    ಚಿಕ್ಕೋಡಿಯಲ್ಲಿ (Chikkodi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕವಟಗಿಮಠ, ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ‌. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕೆಂದು ಚಿಕ್ಕೋಡಿ ಬಿಜೆಪಿ ಘಟಕ ಒತ್ತಾಯಿಸುತ್ತದೆ. ಸ್ವಾಮೀಜಿಗಳಿಗೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

    ಸ್ವಾಮೀಜಿಗಳು ನಾಪತ್ತೆಯಾದ ದಿನವೇ ಪೊಲೀಸರು (Police) ತಕ್ಷಣ ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಪೊಲೀಸರಿಗೆ ಗ್ರೌಂಡ್‌ ರಿಯಾಲಿಟಿ ಗೊತ್ತಿರುತ್ತೆ, ಪ್ರಾಥಮಿಕ ಮಾಹಿತಿಗಳೂ ಸಿಕ್ಕಿರುತ್ತೆ. ಅವರು ಮನಸ್ಸು ಮಾಡಿದ್ದರೆ, ಸ್ವಾಮೀಜಿ ಹತ್ಯೆಯಾಗೋದನ್ನ ತೆಡೆಯಬಹುದಿತ್ತು. ಸರ್ಕಾರ ಸರ್ವಪಕ್ಷ ಸಭೆ ಕರೆದು ಸ್ವಾಮೀಜಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನ ಕಠಿಣವಾಗಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಜಿನಸೇನ ಭಟ್ಟಾರಕ, ಧರ್ಮಸೇನ ಭಟ್ಟಾರಕ, ಲಕ್ಷ್ಮೀಸೇನ ಭಟ್ಟಾರಕ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ 10 ಸಾವಿರ ಜನ ಭಾಗಯಾಗಿದ್ದರು. ಇದನ್ನೂ ಓದಿ: ಜೈನ ಧರ್ಮ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

    ಇದೇ ತಿಂಗಳ ಜುಲೈ 6ರಂದು ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಚಿಕ್ಕೋಡಿ/ಧಾರವಾಡ: ಜೈನಮುನಿ (Jain Muni) ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaja) ಕೊಲೆ ಖಂಡಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ.

    ಚಿಕ್ಕೋಡಿ (Chikkodi) ಪಟ್ಟಣದ ಆರ್‌ಡಿ ಹೈಸ್ಕೂಲ್ ಹತ್ತಿರವಿರುವ ಮೈದಾನದಲ್ಲಿ ಸೇರುವ ಜೈನಸಮುದಾಯದ ಜನರು ಹಾಗೂ ಸ್ವಾಮೀಜಿಗಳು ಮೌನ ಪ್ರತಿಭಟನೆ ಮಾಡಿ, ಬಳಿಕ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರಕರಣದ ತನಿಖೆ ಮಾಡಿ ಹಂತಕರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಲಿದ್ದಾರೆ.

    ಹುಬ್ಬಳ್ಳಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಲಿಲ್ಲವೆಂದು ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಗೃಹ ಸಚಿವರ ದೂರವಾಣಿ ಕರೆಮಾಡಿ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಬಳಿಕ ಗುಣಧರನಂದಿ ಸ್ವಾಮೀಜಿ ಉಪವಾಸ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಹತ್ಯೆ ಖಂಡಿಸಿ ಸಮುದಾಯದಿಂದ ಮೌನ ಪ್ರತಿಭಟನೆ ಮಾಡಲು ಮುಂದಾಗಿದೆ. ಧಾರವಾಡದಲ್ಲಿ ಶ್ರೀ ಅಮಿತಂಜನ ಕೀರ್ತಿ ಮುನಿ ಮಹಾರಾಜರ ಸಾನ್ನಿಧ್ಯದಲ್ಲಿ ಜೈನ ಸಮುದಾಯದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತನಿಖೆಗೆ ಆಗ್ರಹಿಸಲಿದ್ದಾರೆ. ಅಲ್ಲದೆ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಒಂದು ಸಮುದಾಯದ ಆರೋಪಿಯನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನ ಧರ್ಮ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

    ಜೈನ ಧರ್ಮ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

    ಚಿಕ್ಕೋಡಿ: ಆಪ್ತರಿಂದ ಹತ್ಯೆಗೀಡಾಗಿದ್ದ ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಅಂತ್ಯಸಂಸ್ಕಾರ ಜೈನ ಧರ್ಮದ ಸಂಪ್ರದಾಯದಂತೆ ಭಾನುವಾರ (ಇಂದು) ಹಿರೇಕೋಡಿಯ ನಂದಿಪರ್ವತದ ಆಶ್ರಮದ (Nandi Parvatha Ashram) ಬಳಿ ನೆರವೇರಿತು.

    ಸ್ವಾಮೀಜಿಯವರ ಪೂರ್ವಾಶ್ರಮದ ಸಹೋದರನ ಪುತ್ರ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ. ಚಿತೆಗೆ ಹಾಲು, ಬೆಲ್ಲ, ಕೊಬ್ಬರಿ, ಕರ್ಪೂರ, ಗಂಧದ ಕಟ್ಟಿಗೆ, ಬಾದಾಮಿ, ತುಪ್ಪವನ್ನು ಎರೆಯಲಾಯಿತು. ಈ ವೇಳೆ ಭಕ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಸ್ವಾಮೀಜಿ ಹತ್ಯೆ ಖಂಡಿಸಿ ಸೋಮವಾರ ಮೌನ ಪ್ರತಿಭಟನೆಗೆ ಜೈನ ಸಮುದಾಯ ಮುಂದಾಗಿದೆ. ಸ್ವಾಮೀಜಿಯವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಯವರ ಹತ್ಯೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ವಿಜಯಪುರ: ಚಿಕ್ಕೋಡಿಯಲ್ಲಿ (Chikkodi) ನಡೆದ ಜೈನಮುನಿ (Jain Muni) ಹತ್ಯೆಯನ್ನು ವಿಜಯಪುರದ ಮನಗೂಳಿ ಹಿರೇಮಠದ ಸಂಗನಬಸವ ಶ್ರೀಗಳು (Sanganabasava Swamiji) ಖಂಡಿಸಿದ್ದಾರೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಮಾಜಕ್ಕಾಗಿ ಜೀವನವನ್ನೆ ಮುಡಿಪಾಗಿಟ್ಟ ಸ್ವಾಮೀಜಿಗಳ ಹತ್ಯೆಯಾದರೆ ಹೇಗೆ. ರಾಜ್ಯದಲ್ಲಿ ಸ್ವಾಮೀಜಿಗಳಿಗೆ ರಕ್ಷಣೆ ಇದೆಯೇ ಎಂದ ಮನಗೂಳಿ ಶ್ರೀ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಸುಮ್ಮನೆ ಕೂರಬಾರದು. ಸರ್ಕಾರ ತಕ್ಷಣವೇ ಆ ಆರೋಪಿಗಳ ವಿರುದ್ಧ ಕಠಿಣ ಕ್ರಮ‌ ತೆಗೆದುಕೊಳ್ಳಬೇಕು. ಮುನಿಗಳ ಹಂತಕರನ್ನ ಗಲ್ಲಿಗೇರಿಸಬೇಕು. ಮುನಿಗಳ ಹತ್ಯೆ ವಿಚಾರದಲ್ಲಿ ಸರ್ಕಾರ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಹಿರಿಯ ಮುನಿಗಳು, ಜೈನ ಸಮುದಾಯದ ಭಕ್ತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]