Tag: ಜೈಲರ್‌ ಸಿನಿಮಾ

  • ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!

    ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!

    2023ರಲ್ಲಿ ತೆರೆ ಕಂಡಿದ್ದ ಸೂಪರ್ ಹಿಟ್ ಸಿನಿಮಾ ʻಜೈಲರ್ʼನಲ್ಲಿ (Jailer) ರಜನಿಕಾಂತ್ ಎದುರು ವಿಲನ್ ಆಗಿ ಅಬ್ಬರಿಸಿದ್ದ ಮಲಯಾಳಂ ನಟ ವಿನಾಯಕನ್ (Vinayakan) ಅವರನ್ನು ಅರೆಸ್ಟ್ ಮಾಡಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಠಪೂರ್ತಿ ಕುಡಿದಿದ್ದ ವಿನಾಯಕನ್, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

    ವಿನಾಯಕನ್ ಅವರು ಕೊಚ್ಚಿಯಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ಗೆ (Hyderabad Airport) ಆಗಮಿಸಿದ್ದರು. ಅಲ್ಲಿ ಇಂಡಿಗೋ ಸಿಬ್ಬಂದಿ ಜೊತೆಗೆ ಮೊದಲು ಅನುಚಿತವಾಗಿ ವರ್ತಿಸಿದ್ದಾರೆ. ಅವರು ವಿಪರೀತ ಕುಡಿದಿದ್ದರಿಂದ ಮೈಮೇಲೆ ಅರಿವೇ ಇಲ್ಲದಂತೆ ನಡೆದುಕೊಂಡಿದ್ದಾರೆ. ಅಲ್ಲಿನ ಸಿಬ್ಬಂದಿಗೆ ಅವರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಅಲ್ಲದೇ ಪ್ರಯಾಣಿಕರೊಂದಿಗೂ ಅಸಭುವಾಗಿ ವರ್ತಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಬಳಿಕ ಏರ್‌ಪೋರ್ಟ್ ಸಿಐಎಸ್‌ಎಫ್ (CISF) ಭದ್ರತಾ ಸಿಬ್ಬಂದಿ ವಿನಾಯಕನ್ ಅವರನ್ನು ವಶಕ್ಕೆ ಪಡೆದು, ಸ್ಥಳೀಯ ಏರ್‌ಪೋರ್ಟ್ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಅರೆಬೆತ್ತಲಾಗಿ ಕುಳಿತಿದ್ದ ನಟ:
    ವಿಮಾನ ನಿಲ್ದಾಣದಲ್ಲಿ ಧರಿಸಿದ್ದ ಶರ್ಟ್ ಬಿಚ್ಚಿ ಅರೆಬೆತ್ತಲಾಗಿ ಕುಳಿತಿದ್ದ ವಿನಾಯಕನ್ ಅವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸದ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಏರ್‌ಪೋರ್ಟ್ ಪೊಲೀಸ್ ಠಾಣೆಯ ಸಿಐ ಬಾಲರಾಜ್, ಪ್ರಕರಣ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ಉತ್ತಮ ನಟ:
    ಕಳೆದ 28 ವರ್ಷಗಳಿಂದ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ವಿನಾಯಕನ್ ಅವರು ಮಲಯಾಳಂನ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ, ಉತ್ತಮ ನಟ ಎನಿಸಿಕೊಂಡಿದ್ದಾರೆ. ʻಜೈಲರ್‌ʼ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಗಿ ನಟಿಸಿದ ಮೇಲೆ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಯಿತು. 2016ರಲ್ಲಿ ತೆರೆಕಂಡ ಮಲಯಾಳಂನ ʻಕಮ್ಮಟ್ಟಿಪಾಡಂʼ ಸಿನಿಮಾದ ನಟನೆಗಾಗಿ ವಿನಾಯಕನ್‌ಗೆ ಭಾರೀ ಮೆಚ್ಚುಗೆ ಸಿಕ್ಕಿತ್ತು. ಅದಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದರು. ಇದನ್ನೂ ಓದಿ: ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ವಿವಾದಗಳಿಂದಲೇ ಫೇಮಸ್‌:
    ನಟ ವಿನಾಯಕನ್‌ ಅವರ ವಿವಾದ ಇದೇ ಮೊದಲೇನಲ್ಲ. 2023ರ ಅಕ್ಟೋಬರ್‌ನಲ್ಲಿ ಮಲಯಾಳಂ ಕೇರಳದ ಎರ್ನಾಕುಲಂನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿತ್ತು. 2022ರಲ್ಲಿ ಮೀಟೂ ಆಂದೋಲನದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಇದನ್ನೂ ಓದಿ: ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ವಿನಾಯಕನ್‌, ಸದ್ಯ ವಿಕ್ರಮ್‌ ನಟನೆಯ ಆಕ್ಷನ್‌ ಥ್ರಿಲ್ಲರ್‌ ಸಿನಿಮಾ ʻಧ್ರುವನಚ್ಚತ್ತಿರಂʼ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಬಳಿಕ ತೆಕ್ಕು ವಡಕ್ಕು, ಕರಿಂತಂದನ್‌ ಮಲಯಾಳಂ ಸಿನಿಮಾಗಳಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಲು ಕಾಲ್‌ಶೀಟ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಅಂಬಾನಿ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಸ್ಟಾರ್ಸ್

  • ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ಮಿಳಿನ ‘ಜೈಲರ್’ (Jailer) ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೊಡಕ್ಷನ್ ಹೌಸ್ ಆರಂಭಿಸಿದ್ದು, ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ನೆಲ್ಸನ್ ಹೊಸ ಹೆಜ್ಜೆಗೆ ಅಭಿಮಾನಿಗಳು ಶುಭಕೋರಿದ್ದಾರೆ. ಇದನ್ನೂ ಓದಿ:‘ತಿಮ್ಮನ ಮೊಟ್ಟೆಗಳು’ ಚಿತ್ರಕ್ಕೆ ಫಾಲ್ಕೆ ಜ್ಯೂರಿ ಅವಾರ್ಡ್

    20ರ ಹರೆಯದಲ್ಲಿ ನನ್ನ ಸಿನಿಮಾ ಪಯಣ ಶುರುವಾಗಿದ್ದು, ಇಂಡಸ್ಟ್ರಿ ನನಗೆ ಹಲವು ವರ್ಷಗಳಿಂದ ಏರಿಳಿತಗಳನ್ನು ನೀಡಿದೆ. ಇವೆಲ್ಲವೂ ನನ್ನ ಬೆಳವಣಿಗೆಗೆ ಕಾರಣವಾಗಿವೆ. ಸ್ವಂತ ನಿರ್ಮಾಣ ಸಂಸ್ಥೆ ಆರಂಭಿಸಬೇಕು ಎಂಬುದು ನನ್ನ ಬಹುದಿನಗಳ ಕನಸು. ಆ ಕನಸು ಇದೀಗ ನನಸಾಗಿದೆ. ‘ಫಿಲಮೆಂಟ್ ಪಿಕ್ಚರ್ಸ್’ ಎಂಬ ನನ್ನ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಲು ನಾನು ಹೆಮ್ಮೆಪಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಡೈರೆಕ್ಟರ್ ನೆಲ್ಸನ್ ಬರೆದುಕೊಂಡಿದ್ದಾರೆ.

    ಪ್ರೇಕ್ಷಕರನ್ನು ರಂಜಿಸಲು ಸೃಜನಶೀಲ ಮತ್ತು ಆಸಕ್ತಿದಾಯಕ ವಿಷಯವನ್ನು ಒದಗಿಸುವುದು ನಮ್ಮ ಕಂಪನಿಯ ಮುಖ್ಯ ಗುರಿಯಾಗಿದೆ ಎಂದು ಪ್ರಸ್ತಾಪಿಸಿದ ನೆಲ್ಸನ್, ಮೇ 3ರಂದು ತಮ್ಮ ನಿರ್ಮಾಣ ಕಂಪನಿಯ ಮೊದಲ ಚಿತ್ರದ ಮಾಹಿತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

    ಕಳೆದ ವರ್ಷ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಈಗ ಇದರ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಶುರುವಾಗಲಿದೆ. ತಲೈವಾ ಚಿತ್ರಕ್ಕೆ ಸಾಥ್ ನೀಡಲಿದ್ದಾರೆ.

  • ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ಜನಿಕಾಂತ್ ನಟನೆಯ ‘ಜೈಲರ್’ (Jailer) ಸಿನಿಮಾದಲ್ಲಿ ಬಹುಭಾಷಾ ಕಲಾವಿದರ ದಂಡೇ ಇದೆ. ಇದೇ ಆಗಸ್ಟ್ 10ಕ್ಕೆ ತೆರೆಗೆ ಬರೋದಕ್ಕೆ ಸಜ್ಜಾಗಿದೆ. ಹೀಗಿರುವಾಗ ‘ಜೈಲರ್’ ತಂಡಕ್ಕೆ ಸೆನ್ಸಾರ್ ಶಾಕ್ ಕೊಟ್ಟಿದೆ. ರಜನಿ- ಶಿವಣ್ಣ ಸೀನ್‌ಗೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತಲೈವಾ ನಟನೆಯ ‘ಜೈಲರ್’ ಸಿನಿಮಾ ತೆರೆಗೆ ಬರುವ ಮುನ್ನವೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾದ ಫಸ್ಟ್ ಲುಕ್, ಕಾವಾಲಾ (Kaavala) ಸಾಂಗ್ ಸೇರಿದಂತೆ ಜೈಲರ್ ಝಲಕ್ ಫ್ಯಾನ್ಸ್‌ಗೆ ಕಿಕ್ ಕೊಟ್ಟಿದೆ. ಇದೆಲ್ಲದರ ನಡುವೆ ಜೈಲರ್ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ.

    ಆ್ಯಕ್ಷನ್ ಎಂಟರ್‌ಟೈನರ್ ‘ಜೈಲರ್’ ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳು ಹೆಚ್ಚಿದ್ದು ಅದನ್ನು ಕಮ್ಮಿ ಮಾಡುವಂತೆ ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಸೂಚಿಸಿದೆಯಂತೆ. ಒಟ್ಟು 11 ಕಟ್ ಚಿತ್ರದಲ್ಲಿ ಮೋಹನ್ ಲಾಲ್ (Mohanlal) ಮ್ಯಾಥೂ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದು ಮಲಯಾಳಂ ಪದವನ್ನು ಮ್ಯೂಟ್ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆಯಂತೆ. ಇದನ್ನೂ ಓದಿ:ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ‘ಜೈಲರ್’ ಚಿತ್ರದಲ್ಲಿ ಮುತ್ತುವೇಲ್ ಪಾಂಡಿಯನ್ ಆಗಿ ರಜನಿಕಾಂತ್(Rajanikanth), ನರಸಿಂಹ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್‌ನಲ್ಲಿ ಮುತ್ತುವೇಲ್, ನರಸಿಂಹ ಹಾಗೂ ಮ್ಯಾಥ್ಯೂ ಮೂವರು ಸಿಗರೇಟ್ ಸೇದುವ ಸನ್ನಿವೇಶವೊಂದಿದೆಯಂತೆ. ಆ ದೃಶ್ಯದ ಕ್ಲೋಸ್‌ಅಪ್ ಶಾಟ್ಸ್ ಕತ್ತರಿಸುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಮ್ಯಾಥ್ಯೂ, ವ್ಯಕ್ತಿಯೊಬ್ಬನನ್ನು ಕೊಲ್ಲುವುದು ಸೇರಿದಂತೆ ಹಲವು ಸಣ್ಣ ದೃಶ್ಯಗಳಿಗೆ ಕತ್ತರಿ ಬಿದ್ದಿದೆಯಂತೆ.

    ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ರಜನಿಕಾಂತ್, ಶಿವಣ್ಣ(Shivarajkumar), ಮೋಹನ್‌ಲಾಲ್, ತಮನ್ನಾ, ರಮ್ಯಾ ಕೃಷ್ಣ, ಜಾಕಿ ಶ್ರಾಫ್, ಯೋಗಿ ಬಾಬು ನಟಿಸಿದ್ದಾರೆ. ‘ಜೈಲರ್’ ಸಿನಿಮಾ ಬರೋಬ್ಬರಿ 2 ಗಂಟೆ 49 ನಿಮಿಷ ಕಾಲಾವಧಿಯಲ್ಲಿ ಮೂಡಿ ಬಂದಿದೆ. ಕನ್ನಡದ ಜೊತೆ ಮೂರು ಭಾಷೆಗಳಲ್ಲಿ ಜೈಲರ್ ಸಿನಿಮಾ ರಿಲೀಸ್ ಆಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಂಪು ಬಣ್ಣದ ಉಡುಗೆಯಲ್ಲಿ ‌’ಕಾವಾಲಾ’ ಬ್ಯೂಟಿ ಮಿಂಚಿಂಗ್

    ಕೆಂಪು ಬಣ್ಣದ ಉಡುಗೆಯಲ್ಲಿ ‌’ಕಾವಾಲಾ’ ಬ್ಯೂಟಿ ಮಿಂಚಿಂಗ್

    ಸೌತ್ ಬ್ಯೂಟಿ ತಮನ್ನಾ ಭಾಟಿಯಾ (Tamannah Bhatia) ಅವರು ಸದ್ಯ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಮಿಂಚ್ತಿದ್ದಾರೆ. ಸಿನಿಮಾ, ವೆಬ್ ಸಿರೀಸ್ ಅಂತಾ ಬ್ಯಾಕ್ ಟು ಬ್ಯಾಕ್ ಪ್ರಾಜೆಕ್ಟ್‌ನಲ್ಲಿ ನಟಿ ಸದ್ದು ಮಾಡ್ತಿದ್ದಾರೆ. ಕಾವಾಲಾ (Kavaala)  ಸಾಂಗ್‌ಗೆ ಸೊಂಟ ಬಳುಕಿಸಿದ ಮೇಲೆ ತಮನ್ನಾ ನೇಮು ಫೇಮು ಮತ್ತಷ್ಟು ಜಾಸ್ತಿಯಾಗಿದೆ. ಹೀಗಿರುವಾಗ ಈ ನಡುವೆ ನಯಾ ಫೋಟೋಶೂಟ್‌ನಲ್ಲಿ ನಟಿ ಮಿಂಚಿದ್ದಾರೆ.

    ಲಸ್ಟ್ ಸ್ಟೋರಿಸ್ 2, ಜೀ ಕರ್ದಾ (Jee Kardha) ಪ್ರಾಜೆಕ್ಟ್‌ನಲ್ಲಿ ನಟಿ ತಮನ್ನಾ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಂಚಲನ ಮೂಡಿಸಿದ್ದರು. ತಮನ್ನಾ ಹಸಿ ಬಿಸಿ ದೃಶ್ಯಕ್ಕೆ ಕೆಲವರು ವಿರೋಧಿಸಿದ್ರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದರು. ಇತ್ತೀಚಿಗೆ ರಜನಿಕಾಂತ್ ನಟನೆಯ ‘ಜೈಲರ್’ (Jailer) ಸಿನಿಮಾದಲ್ಲಿ ತಮನ್ನಾ ಸಾಥ್ ನೀಡಿದ್ದರು. ಚಿತ್ರದ ಕಾವಾಲಾ ಹಾಡಿಗೆ ಅದ್ಭುತವಾಗಿ ಹೆಜ್ಜೆಗೆ ಹಾಕಿದ್ದರು. ಅವರ ಲುಕ್‌ಗೆ ಪಡ್ಡೆಹುಡುಗರು ಕಳೆದು ಹೋಗಿದ್ದರು.

    ಅಷ್ಟರ ಮಟ್ಟಿಗೆ ತಮನ್ನಾ ‘ಕಾವಾಲಾ’ ಸಾಂಗ್ ಎಲ್ಲೆಲ್ಲೂ ವೈರಲ್ ಆಗುತ್ತಿದೆ. ಚಿಕ್ಕವರಿಂದ ದೊಡ್ಡವರ ತನಕ ಈ ಸಾಂಗ್‌ಗೆ ರೀಲ್ಸ್ ಮಾಡ್ತಿದ್ದಾರೆ. ಸದ್ಯ ಜೈಲರ್ ಸಿನಿಮಾದ ಆಡಿಯೋ ರಿಲೀಸ್‌ ಈವೆಂಟ್‌ಗೆ ತಮನ್ನಾ ಭಾಗಿಯಾಗಿದ್ದಾರೆ. ಅದಕ್ಕಾಗಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಶ್ರೀಲೀಲಾಗೆ ಸೆಡ್ಡು ಹೊಡೆದ ವೈಷ್ಣವಿ- ‘ಬೇಬಿ’ ನಾಯಕಿಗೆ ಬಂಪರ್ ಆಫರ್ಸ್

    ಕೆಂಪು ಬಣ್ಣದ ಉಡುಗೆಯಲ್ಲಿ ಸಖತ್ ಗ್ಲ್ಯಾಮರಸ್ ಆಗಿ ತಮನ್ನಾ ಪೋಸ್ ನೀಡಿದ್ದಾರೆ. ಕಾವಾಲಾ ಬ್ಯೂಟಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ತಮನ್ನಾ ನಯಾ ಫೋಟೋ ನೋಡ್ತಿದ್ದಂತೆ ಫ್ಯಾನ್ಸ್, ಪ್ಲೀಸ್ ಮೇಡಂ ಹೀಗೆಲ್ಲಾ ಸೀರೆ ಉಡಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ. ಕಾವಾಲಾ ಬ್ಯೂಟಿಯ ಹೊಸ ಅವತಾರಕ್ಕೆ ಫಿದಾ ಆಗಿದ್ದಾರೆ. ಇದನ್ನೂ ಓದಿ:ಶ್ರೀಲೀಲಾಗೆ ಸೆಡ್ಡು ಹೊಡೆದ ವೈಷ್ಣವಿ- ‘ಬೇಬಿ’ ನಾಯಕಿಗೆ ಬಂಪರ್ ಆಫರ್ಸ್

    ತಮನ್ನಾ ಸಿನಿ ಜಗತ್ತಿಗೆ ಎಂಟ್ರಿ ಕೊಟ್ಟು 18 ವರ್ಷಗಳಾಯ್ತು. 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ. ಸದ್ಯ ತಮನ್ನಾ ಮುಂಬರುವ ಸಿನಿಮಾಗಾಗಿ ಸಿನಿಪ್ರಿಯರು ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]