Tag: ಜೋಹನ್ಸ್‌ಬರ್ಗ್

  • ದಕ್ಷಿಣ ಆಫ್ರಿಕಾದಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 73 ಮಂದಿ ಸಾವು

    ದಕ್ಷಿಣ ಆಫ್ರಿಕಾದಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 73 ಮಂದಿ ಸಾವು

    ಕೇಪ್‌ ಟೌನ್‌: ದಕ್ಷಿಣ ಆಫ್ರಿಕಾದ (South Africa) ಅತಿದೊಡ್ಡ ನಗರ ಜೋಹಾನ್ಸ್‌ಬರ್ಗ್‌ನಲ್ಲಿ (Johannesburg) ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿದು ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಎಂದು ತುರ್ತು ನಿರ್ವಹಣಾ ಸೇವೆ ಗುರುವಾರ ತಿಳಿಸಿದೆ.

    ಗುರುವಾರ ಮುಂಜಾನೆ ಸಂಭವಿಸಿದ ಬೆಂಕಿಯಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತುರ್ತು ಸೇವಾ ವಿಭಾಗದ ವಕ್ತಾರ ರಾಬರ್ಟ್ ಮುಲಾಡ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಮಹಾಯುದ್ಧದ ನಂತರ ಅತಿ ಹೆಚ್ಚು ಸಾವುಗಳಾದ ಯುದ್ಧ ರಷ್ಯಾ-ಉಕ್ರೇನ್‌ ವಾರ್‌; ಮಡಿದವರೆಷ್ಟು?

    ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ 63 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹೆಚ್ಚಿನ ಜನರು ಒಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ರಾಬರ್ಟ್‌ ಮಾಹಿತಿ ನೀಡಿದ್ದಾರೆ.

    ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಕಪ್ಪು ಕಟ್ಟಡದ ಡೌನ್ಟೌನ್‌ನ ಕಿಟಕಿಗಳಿಂದ ಹೊಗೆ ಇನ್ನೂ ಹರಡಿದೆ. ಬೆಂಕಿ ಬಿದ್ದ ಕಟ್ಟಡದಲ್ಲಿ ಸುಮಾರು 200 ಮಂದಿ ವಾಸವಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಯಾವ ಪ್ರಧಾನಿಯೂ 5 ವರ್ಷ ಪೂರೈಸಿಲ್ಲ – ಕಾರಣಗಳೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    ಕೇಪ್‌ಟೌನ್: ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದಕ್ಷಿಣ ಆಫ್ರಿಕಾದ (South Africa) ಜೋಹನ್ಸ್‌ಬಗ್‌ಗೆ (Johannesburg) ತೆರಳಿದ್ದಾರೆ. ಪ್ರವಾಸದಲ್ಲಿರುವ ಮೋದಿಯವರು ಭಾರತದ ತ್ರಿವರ್ಣ ಧ್ವಜಕ್ಕೆ (Tricolor) ಗೌರವ ತೋರಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

    ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದ ನಾಯಕರನ್ನು ಗ್ರೂಪ್ ಫ್ರೋಟೋ ಕ್ಲಿಕ್ಕಿಸಿಕೊಳ್ಳಲು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ನರೇಂದ್ರ ಮೋದಿ ಅವರು ವೇದಿಕೆಯ ನೆಲದ ಮೇಲೆ ತಾವು ನಿಲ್ಲಬೇಕಾಗಿದ್ದ ಸ್ಥಳದಲ್ಲಿ ಪುಟ್ಟ ತ್ರಿವರ್ಣ ಧ್ವಜವನ್ನು ಗಮನಿಸಿದ್ದಾರೆ.

    ತಕ್ಷಣ ಮೋದಿ ಧ್ವಜದ ಮೇಲೆ ತಾವು ಕಾಲಿಡದಂತೆ ನೋಡಿಕೊಂಡು, ಪುಟ್ಟ ರಾಷ್ಟ್ರ ಧ್ವಜವನ್ನು ಕೈಗೆತ್ತಿಕೊಂಡು, ತಮ್ಮ ಜೇಬಿನಲ್ಲಿ ಇರಿಸಿಕೊಂಡರು. ಇದನ್ನು ಗಮನಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲೆ ರಾಮಾಫೋಸಾ ಕೂಡಾ ಮೋದಿಯವರನ್ನು ಅನುಸರಿಸಿ, ನೆಲದ ಮೇಲೆ ಇಡಲಾಗಿದ್ದ ದಕ್ಷಿಣ ಆಫ್ರಿಕಾದ ಧ್ವಜವನ್ನು ಎತ್ತಿಕೊಂಡರು. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ

    ಇದಾದ ಬಳಿಕ ಮೋದಿ ಅವರು ವೇದಿಕೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

    ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ರಾಷ್ಟ್ರಧ್ವಜಕ್ಕೆ ತೋರಿದ ಗೌರವದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]