Tag: ಜ್ಯುವೆಲ್ಲರಿ

  • ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್‌ – ಚಿನ್ನಾಭರಣ ಬೆಂಕಿಗಾಹುತಿ

    ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್‌ – ಚಿನ್ನಾಭರಣ ಬೆಂಕಿಗಾಹುತಿ

    ಕೊಪ್ಪಳ: ಇಲ್ಲಿನ ಗಂಗಾವತಿ ನಗರದ (Gangavathi City) ಗಣೇಶ ವೃತ್ತದಲ್ಲಿ ಕೆಜೆಪಿ ಜ್ಯುವೆಲ್ಲರಿ ಮಳಿಗೆಯಲ್ಲಿ (Jewellery Shops) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ ಆಗಿದೆ.‌

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಘಟನೆ ನಡೆದಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.‌ ಸ್ಥಳಕ್ಕೆ 4 ಅಗ್ನಿಶಾಮಕ ವಾಹನ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ನಡೆಸಿವೆ.

    ಒಟ್ಟು 3 ಮಹಡಿಯ ಕೆಜೆಪಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿವೆ ಇವೆ. ಎಲ್ಲ ಕಡೆ ಬೆಂಕಿ ಹೊತ್ತಿಕೊಂಡಿದೆ. ಸತತ 6 ಗಂಟೆ ಕಾರ್ಯಾಚರಣೆ ನಂತರ ಬೆಂಕಿ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಪಾರ ಪ್ರಮಾಣದ ಚಿನ್ನಾಭರಣ ಬೆಂಕಿಗೆ ಆಹುತಿ ಆಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲೆ ನಿರ್ಮಾಣವಾದ್ರೆ ಕಿರಿಕಿರಿ ಎಂದು ಕಾಮಗಾರಿಗೆ ಅಡ್ಡಿ – ಸಿಎ ಸೈಟಲ್ಲಿ ದೇವಾಲಯ ನಿರ್ಮಾಣ

    ಗಂಗಾವತಿ ನಗರ ಠಾಣೆಯಲ್ಲಿ (Gangavathi City Police) ಪ್ರಕರಣ ದಾಖಲಾಗಿದೆ‌. ಇದನ್ನೂ ಓದಿ: ಇನ್ಮುಂದೆ ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ಕಡ್ಡಾಯ 

  • ರಾಜ್ಯದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಬೊಮ್ಮಾಯಿ

    ರಾಜ್ಯದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಬೊಮ್ಮಾಯಿ

    ಬೆಂಗಳೂರು: ಉದ್ಯೋಗ ಸೃಷ್ಟಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂತಹ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜ್ಯುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.

    ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಮಾತನಾಡಿಸಿದ ಅವರು, ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ. ಗೋಲ್ಡ್ ಕಂಟ್ರೋಲ್ ಕಾಯ್ದೆ ತೆಗೆದುಹಾಕಿದ ನಂತರ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದು ತಿಳಿಸಿದರು.

    ಭಾರತೀಯ ಆರ್ಥಿಕತೆಯಲ್ಲಿ ಉಳಿತಾಯ ಸಂಸ್ಕೃತಿ ಇದೆ. ನಮ್ಮ ಜನರ ಉಳಿತಾಯ ಮನೋಭಾವ ಆಭರಣ ಉದ್ದಿಮೆಗೆ ಸಹಕಾರಿಯಾಗಿದೆ. ಬ್ಯಾಂಕ್ ದಿವಾಳಿಯಾದರೂ ಚಿನ್ನ ನಮ್ಮ ಆಪತ್ಭಾಂದವ. ಒಡವೆ ಎಂದರೆ ಒಂದು ಆತ್ಮೀಯತೆ. ಆಭರಣದ ವಹಿವಾಟು ಅಂತಃಕರಣವುಳ್ಳ ವ್ಯಾಪಾರ, ಇದು ಬಹಳ ಪುರಾತನ ವೃತ್ತಿಯಾಗಿದ್ದು ಭಾವನಾತ್ಮಕ ಸಂಬಂಧ ಬೆಸೆಯುವಂಥದ್ದು ಅಂತ ತಿಳಿಸಿದರು.

    ಆಭರಣ ಮಾಡುವ ಕಲೆ ಸೂಕ್ಷ್ಮವಾದುದು. ಆಭರಣ ತಯಾರಿ ಕರ್ನಾಟಕದ ಪಾರಂಪರಿಕ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು. ಚಿನ್ನದ ವ್ಯಾಪಾರಿಗಳು ಸಮಾಜದ ಗೌರವ ಮತ್ತು ಬಾಂಧವ್ಯ ಕಾಪಾಡುವ ಬಂಧುಗಳು. ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಲ್ಲದೆ, 2 ನೇ ಮತ್ತು 3 ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ಸಲಹೆ ನೀಡಿದರು.

  • ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

    ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

    ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಅವರಿಗೆ ಏನು ಆಗಿಲ್ಲ ಎಂದು ಜ್ಯುವೆಲ್ಲರಿಯ ಸೇಲ್ಸ್ ಅಸೋಶಿಯೇಟ್ ಮಹಮ್ಮದ್ ಶಾಬಾದ್ ತಿಳಿಸಿದ್ದಾರೆ.

    ಮಾನ್ಸೂರ್ ಮೃತಪಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಮಹಮದ್ ಶಾಬಾದ್ ಅವರನ್ನು ಸಂಪರ್ಕಿಸಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಎಂಡಿ ಸೇಫ್ ಆಗಿದ್ದಾರೆ. ಅವರಿಗೆ ಏನು ಆಗಿಲ್ಲ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಸುಳ್ಳು ಎಂಂದು ಹೇಳಿದ್ದಾರೆ.

    ನಮ್ಮ ಎಂಡಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಸೆಕ್ಯೂರಿಟಿ ಉದ್ದೇಶದಿಂದ ಬೇರೆ ಕಡೆ ಹೋಗಿರಬಹುದು ಅಂದಿದ್ದಾರೆ. ಅಲ್ಲದೆ ಆಡಿಯೋದಲ್ಲಿ ರೋಷನ್ ಬೇಗ್ ಹೆಸರನ್ನು ಯಾರೋ ಸೃಷ್ಟಿ ಮಾಡಿದ್ದಾರೆ. ನಾವು ಸೈಬರ್ ಕ್ರೈಮ್‍ಗೆ ದೂರು ನೀಡಿದ್ದೇವೆ ಎಂದು ಶಾಬಾದ್ ಹೇಳಿದ್ದಾರೆ.

    ಈ ನಡುವೆ ಶಾಬಾದ್ ಯುಎಇಗೆ ತೆರಳಿದ್ದಾರೆ ಎನ್ನುವ ಸುದ್ದಿ ಹರಿದಾಡತೊಡಗಿದೆ. ಕಂಪನಿ ವಿರುದ್ಧ ಗ್ರಾಹಕರು ತಿರುಗಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಜೂನ್ 8 ಶನಿವಾರ ಸಂಜೆಯೇ ಯುಎಇಗೆ ಶಾಬಾದ್ ಪರಾರಿಯಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

    ಎಸ್‍ಐಟಿ ರಚನೆ?
    ಐಎಂಎ ವಂಚನೆ ಕೇಸ್ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚನೆ ಮಾಡುವ ಸಾಧ್ಯತೆಯಿದೆ. ಸುಮಾರು 25 ಸಾವಿರಕ್ಕೂ ಹೆಚ್ಚುಮಂದಿ ಹೂಡಿಕೆ ಮಾಡಿದ್ದು, ಎಸ್‍ಐಟಿ ರಚನೆ ಮಾಡಿ ಪ್ರಕರಣದಿಂದ ನೊಂದವರಿಗೆ ನ್ಯಾಯ ಕೊಡಿಸಲು ಸರ್ಕಾರ ಮುಂದಾಗಿದೆ.

    ಇವತ್ತು ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಎಂಬಿ ಪಾಟೀಲರು ಚರ್ಚೆ ಮಾಡಿದ ಬಳಿಕ, ಎಸ್‍ಐಟಿ, ಸಿಐಡಿ, ಸಿಸಿಬಿ ಎನ್ನುವುದು ಗೊತ್ತಾಗಲಿದೆ.

    ಆಂಬಿಡೆಂಟ್ ಕೇಸ್ ತನಿಖೆ ನಡೆಸಿದ ಕೆಲ ಅಧಿಕಾರಿಗಳನ್ನ ಬಳಸಿಕೊಂಡು ಎಸ್‍ಐಟಿ ರಚಿಸಿದರೆ ಒಳ್ಳೆಯದು. ಮನ್ಸೂರ್ ವಿದೇಶದಲ್ಲಿ ತಲೆ ಮರೆಸಿಕೊಂಡಿರುವುದರಿಂದ ಆದಷ್ಟು ಬೇಗ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿದೆ. ಈ ಮಧ್ಯೆ, ಕಾಂಗ್ರೆಸ್ ಪಕ್ಷ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ರೋಷಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಎಸ್‍ಐಟಿ ತನಿಖೆಯ ಇಕ್ಕಟ್ಟಿಗೆ ಸಿಲುಕಿಸಲು ದೊಡ್ಡ ಅಸ್ತ್ರ ಸಿಕ್ಕಿದಂತಾಗಿದೆ ಎನ್ನುವ ಮಾತೂ ಕೇಳಿ ಬಂದಿದೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.

  • ಸಿನೆಮಾ ಸ್ಟೈಲಲ್ಲಿ ದರೋಡೆ – ಅಡ್ಡ ಬಂದ ಸೆಕ್ಯೂರಿಟಿ ಗಾರ್ಡ್ ಕೈ ಬೆರಳುಗಳನ್ನೇ ಕಟ್ ಮಾಡಿದ್ರು!

    ಸಿನೆಮಾ ಸ್ಟೈಲಲ್ಲಿ ದರೋಡೆ – ಅಡ್ಡ ಬಂದ ಸೆಕ್ಯೂರಿಟಿ ಗಾರ್ಡ್ ಕೈ ಬೆರಳುಗಳನ್ನೇ ಕಟ್ ಮಾಡಿದ್ರು!

    ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳನ್ನ ಕೈಯಲ್ಲಿ ಹಿಡಿದು ಸಿನಿಮೀಯ ರೀತಿಯಲ್ಲಿ ಚೆಮ್ಮನೂರ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿದ ದರೋಡೆಕೋರರು ಕೈಗೆ ಸಿಕ್ಕಷ್ಟು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರೋ ಘಟನೆ ಚಿಕ್ಕಬಳ್ಳಾಪುರದ ಬೀದಿ ರಸ್ತೆಯಲ್ಲಿ ನಡೆದಿದೆ.

    ನಗರದ ಬೆಂಗಳೂರು ರಸ್ತೆಯಲ್ಲಿರುವ ಚೆಮ್ಮನೂರು ಜ್ಯುವೆಲ್ಲರ್ಸ್ ಶಾಪ್ ಗೆ ಸಂಜೆ 6.40ರ ಸುಮಾರಿಗೆ ಹೆಲ್ಮೆಟ್ ಧರಿಸಿ, ಬೈಕ್ ನಲ್ಲಿ ಬಂದ ಮೂವರು ದರೋಡೆಕೋರರು ಏಕಾಏಕಿ ಒಳನುಗ್ಗಿದ್ದಾರೆ.

    ಒಳ ನುಗ್ಗುತ್ತಿದ್ದಂತೆ ಮೊದಲು ಹೊಗೆ ಬರುವ ಶೆಲ್ ಎಸೆದು ಜ್ಯುವೆಲ್ಲರಿ ಶಾಪ್ ತುಂಬೆಲ್ಲಾ ಹೊಗೆ ಆವರಿಸುವ ಹಾಗೆ ಮಾಡಿದ್ದಾರೆ. ದರೋಡೆಕೋರರಿಗೆ ಪ್ರತಿರೋಧ ತೋರಿದ ಸೆಕ್ಯೂರಿಟಿ ಗಾರ್ಡ್ ಅಶ್ವತ್ಥಪ್ಪ ನಿಗೆ ಲಾಂಗ್ ನಿಂದ ಹಲ್ಲೆ ಮಾಡಲಾಗಿದೆ. ನಿವೃತ್ತ ಯೋಧರೂ ಆಗಿರುವ ಅಶ್ವತ್ಥನಾರಾಯಣಪ್ಪ ಅವರ ಬೆರಳುಗಳು ಸಂಪೂರ್ಣ ಕಟ್ ಆಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

    ದರೋಡೆಕೋರರು ಕೈಗೆ ಸಿಕ್ಕಷ್ಟು ಚಿನ್ನಾಭರಣ ದೋಚಿಕೊಂಡು, ಕೊನೆಗೆ ಸೆಕ್ಯೂರಿಟಿ ಗಾರ್ಡ್ ಬಳಿ ಇದ್ದ ಗನ್ ಸಹ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪ್ರಭಾರಿ ಎಸ್ಪಿ ಲೋಕೇಶ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಸಿಬ್ಬಂದಿಯನ್ನು ಒಳಗೆ ಕರೆದು ಎಷ್ಟು ಆಭರಣಗಳು ದರೋಡೆಯಾಗಿವೆ ಎಂದು ಲೆಕ್ಕ ಹಾಕುತ್ತಿದ್ದಾರೆ.

    ಸುಮಾರು 1 ವರ್ಷ ಹಿಂದೆಯೂ ಇದೇ ರೀತಿ ದರೋಡೆ ಮಾಡುವ ಯತ್ನ ನಡೆದಿತ್ತು.

  • ಮೋರಿ ಒಳಗೆ ಸುರಂಗ ಕೊರೆದು ಜ್ಯುವೆಲ್ಲರಿ ಅಂಗಡಿಗೆ ಕನ್ನ

    ಮೋರಿ ಒಳಗೆ ಸುರಂಗ ಕೊರೆದು ಜ್ಯುವೆಲ್ಲರಿ ಅಂಗಡಿಗೆ ಕನ್ನ

    – 40 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

    ಬೆಂಗಳೂರು: ಕಳ್ಳರ ಗುಂಪೊಂದು ಮೋರಿಯ ಒಳಗಿನಿಂದ ಚಿನ್ನದ ಅಂಗಡಿಗೆ ಕನ್ನ ಹಾಕಿ ಚಿನ್ನಾಭರಣವನ್ನು ಕದ್ದಿರುವ ಘಟನೆ ಬೆಂಗಳೂರಿನ ಕೆಆರ್‍ಪುರಂನಲ್ಲಿ ನಡೆದಿದೆ.

    ದೇವಸಂದ್ರ ಮುಖ್ಯರಸ್ತೆಯ ಬಾಲಾಜಿ ಜ್ಯುವೆಲ್ಲರಿ ಅಂಗಡಿಗೆ ಕಳ್ಳರು ಕನ್ನ ಹಾಕಿದ್ದು, ಗುರುವಾರ ಬೆಳಗ್ಗೆ ಮಾಲೀಕ ಮೋಹನ್ ಲಾಲ್ ಅವರು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ.

    ಮೋರಿಯಿಂದ 6 ಅಡಿ ಉದ್ದದ ಸುರಂಗವನ್ನು ಕೊರೆದು ಮಧ್ಯಭಾಗವನ್ನು ಪ್ರವೇಶಿಸಿ ಚಿನ್ನ ಮತ್ತು ಬೆಳ್ಳಿಯನ್ನು ಕದ್ದಿದ್ದಾರೆ. ಈ ಕೃತ್ಯ ಬೆಳಕಿಗೆ ಬಂದ ಮೇಲೆ ಮಾಲೀಕ ಕೆಆರ್‍ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಬೆಳ್ಳಿ ಸೇರಿದಂತೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ವಿಷಯ ತಿಳಿದ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

    ಬೆಳ್ಳಿ ಪತ್ತೆ: ಪೊಲೀಸರು ಸ್ಥಳಕ್ಕೆ ಆಗಮಿಸಿ ಸುರಂಗದ ಒಳಗಡೆ ನುಗ್ಗಿ ಪರಿಶೀಲಿಸಿದ್ದಾರೆ. ಈ ವೇಳೆ ಸುಮಾರು 40 ಕೆಜಿಯಷ್ಟು ಬೆಳ್ಳಿಯನ್ನು ಅಲ್ಲೆ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ. ಅಂದಾಜು ಒಟ್ಟು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳ್ಳತನವಾಗಿದೆ ಎಂದು ಮಾಲೀಕ ತಿಳಿಸಿದ್ದಾರೆ.

    ಮೋರಿ ಮೇಲೆ ಕಲ್ಲಿನ ಸ್ಲ್ಯಾಬ್ ಹಾಕಲಾಗಿತ್ತು. ಸ್ಲ್ಯಾಬ್ ಇದ್ದ ಕಾರಣ ಸುರಂಗ ಕೊರೆದಿದ್ದ ವಿಚಾರ ಪತ್ತೆಯಾಗಿರಲಿಲ್ಲ. ಡಿಸಿಪಿ ಬೋರಲಿಂಗಯ್ಯ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಯುತ್ತಿದೆ.

    ಪೊಲೀಸರು ಈಗ ಜ್ಯುವೆಲ್ಲರಿ ಒಳಗಡೆ ಇದ್ದ ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಎಷ್ಟು ಜನ ಕಳ್ಳರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಎರಡು ಅಥವಾ ಮೂರು ಮಂದಿ ಈ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.