Tag: ಜ್ಯೂಬಿಲಿಯೆಂಟ್ ಕಾರ್ಖಾನೆ

  • ಜ್ಯೂಬಿಲಿಯೆಂಟ್ ಕಾರ್ಖಾನೆ ಪ್ರಕರಣದ ತನಿಖೆ- ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಅಸಮಾಧಾನ

    ಜ್ಯೂಬಿಲಿಯೆಂಟ್ ಕಾರ್ಖಾನೆ ಪ್ರಕರಣದ ತನಿಖೆ- ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಅಸಮಾಧಾನ

    – ಸತ್ಯ ಎಲ್ಲರಿಗೂ ಗೊತ್ತು ಹೇಳಲು ಧೈರ್ಯವಿಲ್ಲ 

    – ತಮ್ಮದೇ ಸರ್ಕಾರದ ವಿರುದ್ಧ ಹರ್ಷವರ್ಧನ್ ಬೇಸರ

    ಮೈಸೂರು: ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆ ತನಿಖೆ ವಿಚಾರದಲ್ಲಿ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಹಾಗೂ ಹೋರಾಟದ ವಿಚಾರದಲ್ಲಿ ಸರ್ಕಾರದಿಂದ ನನಗೆ ಬೆಂಬಲ ಸಿಕ್ಕಿಲ್ಲ. ಜ್ಯೂಬಿಲಿಯೆಂಟ್ ವಿಚಾರದಲ್ಲಿ ಸತ್ಯ ಎಲ್ಲರಿಗೂ ಗೊತ್ತಿದೆ. ಆದರೆ ಹೇಳಲು ಯಾರಿಗೂ ಧೈರ್ಯವಿಲ್ಲ. ಕಂಪನಿಯದ್ದು ತಪ್ಪೇ ಇಲ್ಲ ಎಂಬಂತೆ ಬಿಂಬಿಸಿ ನನ್ನನ್ನು ತಪ್ಪಿತಸ್ಥನಂತೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಹರ್ಷಗುಪ್ತ ಅವರಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದೆ. ನೇಮಕ ಪ್ರಕ್ರಿಯೆ ವಿಳಂಬವಾಗಿದ್ದಕ್ಕೆ ತನಿಖೆ ಹಾದಿ ತಪ್ಪಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಲವು ಇಲಾಖೆಗಳು ಹರ್ಷಗುಪ್ತಾ ಅವರಿಗೆ ಸಹಕಾರ ನೀಡಿಲ್ಲ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಹರ್ಷಗುಪ್ತಾ ಅವರಂಥ ಅಧಿಕಾರಿಯೇ ಏನೂ ಮಾಡಲು ಸಾಧ್ಯವಾಗಿಲ್ಲ ಎಂದರೆ ಏನು ಹೇಳೋಕಾಗುತ್ತೆ. ತನಿಖೆಗೆ ಸಹಕರಿಸದಿರುವುದು ಎಲ್ಲೋ ಒಂದು ಕಡೆ ನಿರಾಸೆಯಾಗಿದೆ ಎಂದರು.

    ರೋಗಿ ನಂ.52 ನಿಂದ ಸರ್ಕಾರದ ಬೊಕ್ಕಸಕ್ಕೆ 8 ಕೋಟಿ ರೂ. ನಷ್ಟವಾಗಿದೆ. ಕಂಪನಿ ಕೆಲಸ ಶುರುಮಾಡಿದೆ. ನಾಳೆ ಮತ್ತೆ ಪುನರಾವರ್ತನೆ ಆಗಲ್ಲ ಅನ್ನೋದು ಏನು ಗ್ಯಾರೆಂಟಿ. ನನ್ನ ಸ್ವಾರ್ಥಕ್ಕಾಗಿಯೋ ಅಥವಾ ಲಾಭಕ್ಕಾಗಿಯೋ ನಾನು ಹೋರಾಟ ಮಾಡಿಲ್ಲ. ರೋಗಿ ನಂ.52 ನಂಜನಗೂಡು ಹೆಸರನ್ನು ಹೀನಾಯವಾಗಿ ಹಾಳು ಮಾಡಿದ್ದಾನೆ. ಅತ್ಯಾಚಾರಕ್ಕಿಂತ ಹೆಚ್ಚು ಹೀನಾಯವಾಗಿ ಎಫೆಕ್ಟ್ ಆಗಿದೆ. ಆತನಿಗೆ ನೋಟಿಸ್ ನೀಡುವ ಬದಲು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದ್ದಾರೆ ಒತ್ತಾಯಿಸಿದ್ದಾರೆ.

  • ಜ್ಯೂಬಿಲಿಯೆಂಟ್ ಕಾರ್ಖಾನೆಯ 42 ಜನರು ಪುನಃ ಕ್ವಾರಂಟೈನ್‍ಗೆ ದಾಖಲು

    ಜ್ಯೂಬಿಲಿಯೆಂಟ್ ಕಾರ್ಖಾನೆಯ 42 ಜನರು ಪುನಃ ಕ್ವಾರಂಟೈನ್‍ಗೆ ದಾಖಲು

    ಚಾಮರಾಜನಗರ: ಜ್ಯೂಬಿಲಿಯೆಂಟ್ ಕಾರ್ಖಾನೆಯ 42 ಜನರು ಪುನಃ ಕ್ವಾರಂಟೈನ್‍ಗೆ ದಾಖಲಾಗಿದ್ದಾರೆ.

    ಕೊರೊನಾ ಸೋಂಕಿತ ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ 52 ಜನರು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಬಿಡುಗಡೆಗೊಂಡಿದ್ದರು. ಈ ಪೈಕಿ ಮತ್ತೆ 42 ಜನರನ್ನು ಮುಂಜಾಗ್ರತಾ ಕ್ರಮವಾಗಿ ಪುನಃ ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಫಲಿತಾಂಶ ನಿರೀಕ್ಷಿಸಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

    ಜ್ಯೂಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ 52 ವ್ಯಕ್ತಿಗಳ ಪೈಕಿ ಈಗಾಗಲೇ 5 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಉಳಿದ 47 ಜನರಲ್ಲಿ 42 ಜನರನ್ನು ಪುನಃ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಉಳಿದ 5 ಜನರನ್ನು ಕ್ವಾರೆಂಟೈನ್ ಕೇಂದ್ರಕ್ಕೆ ಕರೆಸಲು ಕ್ರಮ ವಹಿಸಲಾಗಿದೆ.

    ಐ.ಎಲ್.ಐ ರೋಗಲಕ್ಷಣ ಇದ್ದ ಒರ್ವ ವ್ಯಕ್ತಿಯ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

  • ಡಿಸ್ಚಾರ್ಜ್ ಆದ್ರೂ ಮನೆಗೆ ಹೋಗಲ್ಲ ಎಂದ ಜ್ಯೂಬಿಲಿಯೆಂಟ್ ನೌಕರ

    ಡಿಸ್ಚಾರ್ಜ್ ಆದ್ರೂ ಮನೆಗೆ ಹೋಗಲ್ಲ ಎಂದ ಜ್ಯೂಬಿಲಿಯೆಂಟ್ ನೌಕರ

    – ಸರ್ಕಾರಕ್ಕೆ, ಆಸ್ಪತ್ರೆ ಸಿಬ್ಬಂದಿಗೆ ಪತ್ರದ ಮೂಲಕ ಧನ್ಯವಾದ
    – ಮೈಸೂರಿನಲ್ಲಿ ಮತ್ತೆ 5 ಸೋಂಕಿತ ಪ್ರಕರಣ ದೃಢ

    ಮೈಸೂರು: ಜಿಲ್ಲೆಯಲ್ಲಿ ಸದ್ಯ 42 ಇರುವ ಸೋಂಕಿತರ ಸಂಖ್ಯೆ ಇನ್ನೇರಡು ದಿನಕ್ಕೆ 50ರ ಗಡಿ ದಾಟುತ್ತೆ ಎನ್ನಲಾಗಿದೆ. ಹೀಗಾಗಿ ಮೈಸೂರಿನಲ್ಲಿ ಆತಂಕದ ಕಾರ್ಮೋಡ ದಿನದಿನಕ್ಕೂ ಹೆಚ್ಚಾಗ್ತಿದೆ. ಈ ನಡುವೆ ಸೋಂಕು ಹರಡಿದ ಜ್ಯೂಬಿಲಿಯೆಂಟ್ ಕಾರ್ಖಾನೆ ಕಾರ್ಮಿಕ ರೋಗಿ 52 ಸೋಂಕು ಮುಕ್ತರಾಗಿದ್ದಾರೆ. ಆದರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದರೂ ಮನೆಗೆ ಹೋಗಲ್ಲ ಎಂದು ಹೇಳಿದ್ದಾರೆ.

    ಜಿಲ್ಲೆಯಲ್ಲಿ ಇಂದು ಮತ್ತೆ 5 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 8 ವರ್ಷದ ಬಾಲಕ ಹಾಗೂ ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆ ನೌಕರರ ಸಂಪರ್ಕಿತ ವ್ಯಕ್ತಿಗಳಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರೊಬ್ಬರ ಪುತ್ರ ಹಾಗೂ ಪತ್ನಿಗೂ ಸೋಂಕು ಹರಡಿದ್ದು, ಜ್ಯೂಬಿಲಿಯೆಂಟ್ ಕಾರ್ಖಾನೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿದೆ.

    ಇಡೀ ಜ್ಯೂಬಿಲಿಯೆಂಟ್ ಕಾರ್ಖಾನೆಗೆ ಸೋಂಕು ಹರಡಿಸಿದ್ದ ರೋಗಿ 52 ಮೈಸೂರಿನ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ.

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರೋಗಿ 52 ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ ಬರೆದಿದ್ದು, ಜಿಲ್ಲಾಡಳಿತ, ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ನನಗೆ 10 ದಿನಗಳ ಹಿಂದೆ ಜ್ವರ ಇತ್ತು. ಮೊದಲು ಸ್ಥಳೀಯ ಕ್ಲಿನಿಕ್‍ಗೆ ತೋರಿಸಿದ್ದೆ, ಮಾರ್ಚ್ 21ರಂದು ನಾನು ಗೋಪಾಲಗೌಡ ಆಸ್ಪತ್ರೆಗೆ ದಾಖಲಾಗಿದ್ದೆ. ನಂತರ ಮಾರ್ಚ್ 25ರಂದು ಕೆ.ಆರ್ ಆಸ್ಪತ್ರೆಗೆ ಕರೆತಂದರು. ನನಗೆ ಎಲ್ಲಾ ರೀತಿಯ ಪರೀಕ್ಷೆ ಮಾಡಿದರು ಲಸಿಕೆ ಹಾಕಿದರು. ಮಾರ್ಚ್ 30ರಂದು ನನ್ನನ್ನ ಇಡಿ ಆಸ್ಪತ್ರೆಗೆ ಕಳುಹಿಸಿದರು. 14 ದಿನಗಳ ಕಾಲ ನನಗೆ ಚಿಕಿತ್ಸೆ ನೀಡಿ, ನನ್ನನ್ನು ಗುಣಮುಖರನ್ನಾಗಿ ಮಾಡಿದ್ದಾರೆ. ಕೊರೊನಾ ಪೀಡಿತರನ್ನ ಸರ್ಕಾರ ಚೆನ್ನಾಗಿ ನೋಡಿಕೊಳ್ಳುತ್ತಿದೆ. ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಿ ಎಂದು ಹೇಳಿದ್ದಾರೆ. ಈ ಮಾತನ್ನು ಹೇಳಿದ್ದರೂ ತಾನು ಮಾತ್ರ ಈಗಲೇ ಮನೆಗೆ ಹೋಗಲ್ಲ ಎಂದು ಹೇಳಿ ಸರ್ಕಾರಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಸೋಂಕು ಹರಡಿದ ವ್ಯಕ್ತಿ ಸೋಂಕಿನಿಂದ ಮುಕ್ತವಾದರೂ ಕೂಡ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಸೋಂಕಿತ ಕಾರ್ಮಿಕರ ಕುಟುಂಬದ ಒಳಗೆ ಈ ಚೈನ್ ಬೆಳೆಯುತ್ತಿರುವುದು ಅತಿ ದೊಡ್ಡ ಆತಂಕದ ವಿಚಾರವಾಗಿದೆ.

  • ಕೊರೊನಾ ಊರೆಲ್ಲ ಹಬ್ಬಿದ್ಮೇಲೆ ಜ್ಯೂಬಿಲಿಯೆಂಟ್ ಕಾರ್ಖಾನೆ ಮಾಲೀಕರ ಹೊಸ ನಾಟಕ

    ಕೊರೊನಾ ಊರೆಲ್ಲ ಹಬ್ಬಿದ್ಮೇಲೆ ಜ್ಯೂಬಿಲಿಯೆಂಟ್ ಕಾರ್ಖಾನೆ ಮಾಲೀಕರ ಹೊಸ ನಾಟಕ

    ಮೈಸೂರು: ಕೊರೊನಾ ವೈರಸ್ ಊರೆಲ್ಲ ಹಬ್ಬಿದ ಮೇಲೆ ಜ್ಯೂಬಿಲಿಯೆಂಟ್ ಕಾರ್ಖಾನೆ ಮಾಲೀಕ ಹೊಸ ನಾಟಕ ಶುರು ಮಾಡಿದ್ದಾರೆ. ಜ್ಯೂಬಿಲಿಯೆಂಟ್ ಕಾರ್ಖಾನೆಯಿಂದ ಇಡೀ ಮೈಸೂರಿಗೆ ಮೈಸೂರೇ ಹೈಟೆನ್ಷನ್ ನಲ್ಲಿದೆ. ಈ ಕಾರ್ಖಾನೆ ನೌಕರನಿಗೆ ಕೊರೊನಾ ವೈರಸ್ ಹೇಗೆ ಅಂಟಿತು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

    ಕಾರ್ಖಾನಗೆ ಬಂದ ಚೀನಾ ಉತ್ಪನ್ನಗಳ ಮೂಲಕ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದ್ದರೂ, ಇನ್ನು ಖಚಿತವಾಗಿಲ್ಲ. ಆದ್ರೆ ಈ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಮಾಹಿತಿ ನೀಡಬೇಕಿದ್ದ ಕಾರ್ಖಾನೆ ಮಾಲೀಕ ದೆಹಲಿಗೆ ಹೋಗಿ ಕೂತಿದ್ದಾರೆ. ಯಾವ ಮಾಹಿತಿಯೂ ಕೊಡದೇ ಆಟವಾಡಿಸ್ತಿದ್ದಾರೆ. ಈ ನಡುವೆ ಕಾರ್ಖಾನೆ ಮಾಲೀಕ ರಾಜ್ಯ ಸರ್ಕಾರಕ್ಕೆ ದೇಣಿಗೆ ಕೊಡುವ ನಾಟಕ ಶುರು ಮಾಡಿದ್ದಾರೆ.

    ತಿಂಗಳಿಗೆ ಕೋಟ್ಯಾಂತರ ರೂಪಾಯಿ ಲಾಭ ಮಾಡುವ ಈ ಕಾರ್ಖಾನೆ ಮಾಲೀಕ ಈಗ 25 ಲಕ್ಷ ಚಿಲ್ಲರೆ ದೇಣಿಗೆ ಕೊಡುವ ನಾಟಕವಾಡುತ್ತಿದ್ದಾರೆ. ಸಚಿವರಾದಿಯಾಗಿ ಯಾರೇ ಮನವಿ ಮಾಡಿದರೂ ವಿವರಣೆ ನೀಡಲು ಮುಂದಾಗದ ಕಂಪನಿ ಮಾಲೀಕ ಇದೀಗ ದೇಣಿಗೆ ಹಾಗೂ ಮಾಸ್ಕ್ ನೀಡುವ ನಾಟಕವಾಡ್ತಿದ್ದಾರೆ.

    ಈ ದೇಣಿಗೆ ಮೊತ್ತ ಕಂಪನಿಯವರಿಗೆ ನೀಡುತ್ತಿರುವ ಚಿಕಿತ್ಸೆಗೂ ಸಾಲಲ್ಲ. ಓರ್ವ ಪರೀಕ್ಷೆಗೆ ಅಂದಾಜು ಆರು ಸಾವಿರ ರೂಪಾಯಿ ಖರ್ಚಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೂವರೆ ಸಾವಿರ ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಇದೀಗ ಕಾರ್ಖಾನೆಯ ಮಾಲೀಕ 5 ಸಾವಿರ ಮಾಸ್ಕ್ ಮತ್ತು 25 ಲಕ್ಷ ದೇಣಿಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ.