Tag: ಜ್ಯೋತಿರಾದಿತ್ಯ ಸಿಂಧಿಯಾ

  • ‘ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ’

    ‘ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ’

    – ಸಿಂಧಿಯಾಗೆ ಪಕ್ಕಾ ಆಯ್ತು ರಾಜ್ಯಸಭಾ ಸ್ಥಾನ

    ಭೋಪಾಲ್: ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ ಎಂದು ಮಧ್ಯಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೌಹಾಣ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ನಂಬಿ ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ನಂಬಿಕೆ, ಮಂತ್ರದ ಮೂಲ ಮಂತ್ರವನ್ನು ಅನುಸರಿಸಿ. ರಾಷ್ಟ್ರ ಮತ್ತು ಸಾರ್ವಜನಿಕರ ಸೇವೆ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ಶಾಸಕರು ನಮ್ಮ ಕುಟುಂಬ ಸೇರಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

    ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ದೂರ ದೃಷ್ಟಿ ಹೊಂದಿದ್ದಾರೆ. ಜನರ ಸೇವೆ ಮಾಡಲು ಅವರು ರಾಜಕೀಯಕ್ಕೆ ಬಂದಿದ್ದಾರೆ. ಅವರು 2018ರಲ್ಲಿ ನಡೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪರ ಉತ್ಸಾಹದಿಂದ ಕೆಲಸ ಮಾಡಿದರು. ಆದರೆ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಜ್ಯೋತಿರಾದಿತ್ಯ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

    ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ನನಗೆ ಸಂತೋಷದ ದಿನವಾಗಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಬಿಜೆಪಿ ಮತ್ತೆ ಮುಂದಾಗಿದೆ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ

    ರಾಜ್ಯಸಭೆ:
    ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಒಟ್ಟು 9 ಅಭ್ಯರ್ಥಿಗಳ ಪಟ್ಟಿಯನ್ನುಬಿಡುಗಡೆ ಮಾಡಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಜ್ಯೋತಿರಾದಿತ್ಯ ಸಿಂಧಿಯಾ ಗುರುತಿಸಿಕೊಂಡಿದ್ದಾರೆ.

  • ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

    ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

    ನವದೆಹಲಿ: ಮಧ್ಯಪ್ರದೇಶದಲ್ಲಿ ಕಮಲನಾಥ್ ಸರ್ಕಾರದ ವಿರುದ್ಧ ಬಂಡಾಯ ಸಾರಿ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಧಿಯಾ ಅವರನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಶಾಲನ್ನು ನೀಡಿ ಬಿಜೆಪಿಗೆ ಬರಮಾಡಿಕೊಂಡರು.

    ಮಂಗಳವಾರ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದರು. ರಾಜೀನಾಮೆ ಬೆನ್ನಲ್ಲೇ ಸಿಂಧಿಯಾ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.

    22 ಶಾಸಕರ ರಾಜೀನಾಮೆಯಿಂದ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಈಗ ಸದನದಲ್ಲಿ 206 ಶಾಸಕರಿದ್ದು ಬಹುಮತ ಸಾಧಿಸಲು 104 ಶಾಸಕರ ಬೆಂಬಲ ಬೇಕಿದೆ. ಬಿಜೆಪಿ ಬಳಿ 107 ಶಾಸಕರಿದ್ದರೆ ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.

  • ತಂದೆಯ ಹುಟ್ಟುಹಬ್ಬದಂದೇ ‘ಕೈ’ಗೆ ರಾಜೀನಾಮೆ – ಮೋದಿ ಸಂಪುಟದಲ್ಲಿ ಸಿಂಧಿಯಾ ಮಂತ್ರಿ?

    ತಂದೆಯ ಹುಟ್ಟುಹಬ್ಬದಂದೇ ‘ಕೈ’ಗೆ ರಾಜೀನಾಮೆ – ಮೋದಿ ಸಂಪುಟದಲ್ಲಿ ಸಿಂಧಿಯಾ ಮಂತ್ರಿ?

    – 20 ಮಂದಿ ಕೈ ಶಾಸಕರು ರಾಜೀನಾಮೆ
    – ಶಾಸಕರ ಜೊತೆ ಸಿಂಧಿಯಾ ಶೀಘ್ರವೇ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ಮಧ್ಯಪ್ರದೇಶದಲ್ಲಿ ಕಮಲನಾಥ್ ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮೋದಿ ಸರ್ಕಾರದಲ್ಲಿ ಮಂತ್ರಿ ಆಗಲಿದ್ದಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

    ಹೌದು. ಇಂದು ಬೆಳಗ್ಗೆ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಂಧಿಯಾ ಭೇಟಿಯಾಗಿದ್ದರು. ಭೇಟಿಯಾದ ನಂತರ ಸಿಂಧಿಯಾ ಅವರು ಅಧಿಕೃತವಾಗಿ ಕಾಂಗ್ರೆಸ್ಸಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ ನೀಡುತ್ತಿದ್ದಂತೆ ಮಧ್ಯಪ್ರದೇಶ 20 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿರುವ ಶಾಸಕರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಲಾಲ್ಜಿ ಟಂಡನ್ ಅವರಿಗೆ ರವಾನಿಸಿದ್ದಾರೆ.

    ಮೂಲಗಳ ಪ್ರಕಾರ ಸಿಂಧಿಯಾ ಹಲವು ದಿನಗಳ ಹಿಂದೆಯೇ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಬೇಕಿತ್ತು. ಆದರೆ ರಾಜೀನಾಮೆ ನೀಡಲಿರುವ ಕೈ ಶಾಸಕರ ನಿರ್ಧಾರ ಸ್ಪಷ್ಟವಾಗದ ಕಾರಣ ರಾಜೀನಾಮೆ ದಿನಾಂಕ ಮುಂದೂಡಿಕೆಯಾಗಿತ್ತು. ವಿಶೇಷ ಏನೆಂದರೆ ಇಂದು ಸಿಂಧಿಯಾ ಅವರ ತಂದೆ ಮಾಧವ್ ರಾವ್ ಸಿಂಧಿಯಾ ಅವರ ಜನ್ಮದಿನವಾಗಿದೆ. ಮಾಧವ್ ರಾವ್ ಈ ಹಿಂದೆ ರಾಜೀವ್ ಗಾಂಧಿ ಮತ್ತು ಪಿವಿ ನರಸಿಂಹ ರಾವ್ ಅವರ ಸರ್ಕಾರದಲ್ಲಿ ಕೇಂದ್ರ ಮಂತ್ರಿ ಆಗಿದ್ದರು.

    ಮೂಲಗಳ ಪ್ರಕಾರ ಸಿಂಧಿಯಾ ಅವರಿಗೆ ಮಂತ್ರಿ ಸ್ಥಾನ ನೀಡುವ ಆಫರ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ. ರಾಜ್ಯಸಭೆಯ ಮೂಲಕ ಆಯ್ಕೆ ಮಾಡಿ ಮಂತ್ರಿ ಸ್ಥಾನ ನೀಡವುದಾಗಿ ಹೇಳಿದ್ದು, ಈ ಆಫರ್ ಅನ್ನು ಸಿಂಧಿಯಾ ಒಪ್ಪಿಕೊಂಡಿದ್ದಾರೆ.

    230 ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಇಬ್ಬರು ಶಾಸಕರ ನಿಧನದಿಂದ ಸದ್ಯ 228 ಶಾಸಕರಿದ್ದಾರೆ. ಸದ್ಯ 20 ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸಿಎಂ ಕಮಲನಾಥ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಬಹುಮತ ಸಾಬೀತು ಪಡಿಸಲು 105 ಶಾಸಕರ ಬೆಂಬಲ ಬೇಕಿದೆ. ಕಾಂಗ್ರೆಸ್ ಬಳಿ 95 ಮಂದಿ ಶಾಸಕರಿದ್ದು ಬಿಜೆಪಿ 107 ಸ್ಥಾನಗಳನ್ನು ಹೊಂದಿದೆ. ಅಲ್ಲದೇ ಕೆಲವು ಪಕ್ಷೇತರ ಶಾಸಕರ ನೆರವು ಬಿಜೆಪಿಗೆ ಸಿಗುವ ಸಾಧ್ಯತೆ ಇದೆ.

    ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

  • ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಜ್ಯೋತಿರಾದಿತ್ಯ ಸಿಂಧಿಯಾ

    ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಜ್ಯೋತಿರಾದಿತ್ಯ ಸಿಂಧಿಯಾ

    ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‍ಗೆ ಜ್ಯೋತಿರಾದಿತ್ಯ ಸಿಂಧಿಯಾ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ್ದಾರೆ.

    ಸೋಮವಾರ ತಮ್ಮ ರಾಜೀನಾಮೆಯನ್ನು ಸಿಂಧಿಯಾ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿತ್ತು. ಇದೀಗ ಸಿಂಧಿಯಾ ರಾಜೀನಾಮೆ ಪತ್ರ ಬಹಿರಂಗಗೊಂಡಿದೆ. ಇತ್ತ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗಾಗಿ ಸಿಂಧಿಯಾ ತೆರಳಿದ್ದಾರೆ. ಮತ್ತೊಂದು ಕಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಗಳ ನಿವಾಸ ತಲುಪಿದ್ದಾರೆ.

    ಬಿಜೆಪಿ ಸೇರ್ಪಡೆಯಾಗಲು ಸಿಂಧಿಯಾ ತುದಿಗಾಲಿನಲ್ಲಿ ನಿಂತಿದ್ದು, ಕಮಲನಾಥ್ ಸರ್ಕಾರ ಬೀಳಿಸಿದ್ದ ಪ್ರತಿಫಲವಾಗಿ ಬಿಜೆಪಿ ಸಿಂಧಿಯಾರಿಗೆ ರಾಜ್ಯಸಭಾ ಸದಸ್ಯರನ್ನಾಗಿ ಮಾಡುವ ಸಾಧ್ಯತೆಗಳಿವೆ. ಸೋಮವಾರವೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಜೊತೆ ಸಿಂಧಿಯಾ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇದೀಗ ರಾಜೀನಾಮೆ ಅಧಿಕೃತಗೊಳ್ಳುತ್ತಿದ್ದಂತೆ ಬಹಿರಂಗವಾಗಿ ಮೋದಿ ನಿವಾಸಕ್ಕೆ ತೆರಳುತ್ತಿದ್ದಾರೆ.

    ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಸಿಂಧಿಯಾ, ಇಂದು ಸಂಜೆ ಬಿಜೆಪಿಯ ಬೈಠಕ್ ನಲ್ಲಿ ಭಾಗವಹಿಸುವ ಮೂಲಕ ಕಮಲದ ಬಾವುಟ ಹಿಡಿಯಲಿದ್ದಾರೆ.

  • ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಸಿಎಂ ಕಮಲನಾಥ್ ಅವರು ಎಲ್ಲ ಸಂಪುಟದ ಎಲ್ಲ ಸಚಿವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.

    ಈಗಾಗಲೇ 18 ಮಂದಿ ಕೈ ಶಾಸಕರು ಬೆಂಗಳೂರು ತಲುಪಿದ್ದಾರೆ. ಈ ಶಾಸಕರಿಗೆ ಮಂತ್ರಿ ಸ್ಥಾನ ನೀಡಲು ಕೊನೆಯ ಪ್ರಯತ್ನವಾಗಿ  ಕಮಲನಾಥ್ ಈ ದಾಳ ಉರುಳಿಸಿದ್ದಾರೆ ಎಂದು ವರದಿಯಾಗಿದೆ.

    ಒಂದು ವೇಳೆ ಕಮಲನಾಥ ಸರ್ಕಾರ ಪತನಗೊಂಡರೆ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಎಂ ಹುದ್ದೆಯ ಆಫರ್ ಅನ್ನು ಬಿಜೆಪಿ ನೀಡಿದೆ ಎನ್ನಲಾಗುತ್ತಿದೆ. ಈ ವಿದ್ಯಮಾನಗಳ ನಡುವೆ  ರಾಜೀನಾಮೆ ಪಡೆದುಕೊಂಡಿದ್ದು ರಾತ್ರಿ ಭಾರೀ ಬೆಳವಣಿಗೆ ನಡೆಯುತ್ತಿದೆ.

    ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

     

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    https://twitter.com/JM_Scindia/status/1158729410507182080?

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    – ಬಂದವರೆಲ್ಲ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರು
    – ಬಿಜೆಪಿಯಿಂದ ಆಪರೇಷನ್ ಕಮಲ

    ಬೆಂಗಳೂರು/ನವದೆಹಲಿ: ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಕರ್ನಾಟಕ ಮಾದರಿಯಲ್ಲೇ ಆಪರೇಷನ್ ಕಮಲದ ವಾಸನೆ ಬಡಿದಿದೆ.

    6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸುತ್ತಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    https://twitter.com/JM_Scindia/status/1158729410507182080?

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಕಾಂಗ್ರೆಸ್ಸಿನಲ್ಲೇ ಒಡಕು – ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ ಜ್ಯೋತಿರಾದಿತ್ಯ ಸಿಂಧಿಯಾ

    ಕಾಂಗ್ರೆಸ್ಸಿನಲ್ಲೇ ಒಡಕು – ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ ಜ್ಯೋತಿರಾದಿತ್ಯ ಸಿಂಧಿಯಾ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದ್ದಕ್ಕೆ ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಆದರೆ ಕಾಂಗ್ರೆಸ್‍ನ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸರ್ಕಾರಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಂಸದರು, ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವುದಕ್ಕೆ ಬೆಂಬಲ ನೀಡುತ್ತೇನೆ. ಈ ಮೂಲಕ ಭಾರತವು ಸಂಪೂರ್ಣ ಏಕೀಕರಣವಾಗಲಿದೆ. ಆದರೆ ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಚೆನ್ನಾಗಿರುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತಾಸಕ್ತಿ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    https://twitter.com/JM_Scindia/status/1158729410507182080

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರು ಕೇಳಿ ಬಂದಿತ್ತು. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಅದನ್ನು ಅಲ್ಲಗಳೆದಿದ್ದರು. ಕಾಂಗ್ರೆಸ್ ಹಿರಿಯ ನಾಯಕರು, ಸಂಸದರು 370 ವಿಧಿ ರದ್ದುಗೊಳಿಸುವುದಕ್ಕೆ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ.

    ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಅವರು, ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದರು.

    ರಾಹುಲ್ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸಂಸದರು ಹಾಗೂ ನಾಯಕರೊಂದಿಗೆ ನಡೆದ ಸಭೆ ಬಳಿಕ ಟ್ವೀಟ್ ಮಾಡಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು.

    ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಕುರಿತು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಘೋಷಣೆ ಮಾಡಿದರು. ಈ ವೇಳೆ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುವಲ್ಲಿ ಎಡವಿದ್ದರಿಂದ ರಾಹುಲ್ ಗಾಂಧಿ ಚಕಾರ ಎತ್ತಿರಲಿಲ್ಲ.

    ಅಮಿತ್ ಶಾ 370ನೇ ವಿಧಿ ಹಾಗೂ 35ಎ ರದ್ದು ಪಡಿಸುವ ಘೋಷಣೆ ಕೂಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಗದ್ದಲ ಎಬ್ಬಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕರು ಈ ನಿರ್ಧಾರವನ್ನು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಸಂಸತ್ ಹೊರಗಡೆ ಘೋಷಣೆ ಕೂಗಿದ್ದರು. ಇದಕ್ಕೆ ಜನಾರ್ಧನ್ ದ್ವಿವೇದಿ ಹಾಗೂ ದೀಪೇಂದರ್ ಹೂಡಾರಂತಹ ನಾಯಕರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

    ಈ ಮಹತ್ವದ ಬೆಳವಣಿಗೆ ಹಿನ್ನೆಲೆ ತುರ್ತು ಸಭೆ ಕರೆಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, ನಾನು ಕಾಂಗ್ರೆಸ್ ಅಧ್ಯಕ್ಷನಲ್ಲದ ಕಾರಣ ಯಾವುದೇ ಸಭೆ ಕರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಕಾರಣ ರಾಹುಲ್ ಗಾಂಧಿ ಅವರು ಮೇನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ಇಂದು ಬೆಳಗ್ಗೆ ಕಾಂಗ್ರೆಸ್ ವರಿಷ್ಠೆ, ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಚರ್ಚಿಸಲು ಸಭೆ ಕರೆದಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕೇ ಅಥವಾ ಬೆಂಬಲಿಸಬೇಕೇ ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.

  • ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ನವದೆಹಲಿ: ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಲೋಕಸಭಾ ಸದನದ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ.

    ಮಧ್ಯಪ್ರದೇಶದ ಗುನಾ ಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಣ ಮಾಡಿಲ್ಲ ಹಾಗೂ ಕಾರ್ಯಕ್ರಮಕ್ಕೆ ತಮಗೇ ಆಹ್ವಾನ ನೀಡಿಲ್ಲ. ಯಾವುದೇ ಯೋಜನೆಯ ಉದ್ಘಾಟನೆಗೆ ಆ ಕ್ಷೇತ್ರದ ಜನಪ್ರತಿನಿಧಿಯನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ರಾಜ್ಯ ಸರ್ಕಾರ ತಮಗೇ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ. ಅದ್ದರಿಂದ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸದನದಲ್ಲಿ ಹೇಳಿದರು.

    ಸಿಂಧಿಯಾ ಆರೋಪದ ಬಳಿಕ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪ್ಮೂಲ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಈ ತಪ್ಪಿನ ಕುರಿತು ನನಗೆ ಅರಿವಾಗಿದೆ. ಮುಂದೇ ಇಂತಹ ತಪ್ಪುಗಳು ನಡೆಯದಂತೆ ಎಚ್ಚರವಹಿಸಲಾಗುವುದು. ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಅದ್ದರಿಂದ ತಾನು ಈ ತಪ್ಪಿನ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಸಂಸದರ ಹೆಸರು ಕಡ್ಡಾಯವಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಬೇಕಿತ್ತು. ಅಲ್ಲದೇ ಅವರಿಗೆ ಆಹ್ವಾನ ನೀಡಬೇಕಿತ್ತು. ಅದ್ದರಿಂದ ಸದನದಲ್ಲಿ ನಾನು ಕ್ಷಮೆ ಕೇಳುವುದಾಗಿ ಹೇಳಿದರು.

    ಗಡ್ಕರಿ ಅವರ ಮಾತಿಗೆ ಸಮಾಧಾನಗೊಳ್ಳದ ಸಿಂಧಿಯಾ, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಗಡ್ಕರಿ ಅವರು ಈಗಾಗಲೇ ಸಭೆಯಲ್ಲಿ ಕ್ಷಮೆ ಕೇಳಿದ್ದರೆ ಎಂದರು. ಲೋಕಸಭಾ ಸದನ ವಿರೋಧಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಸಂಸದರನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ಸದನದಲ್ಲಿ ಈಗಾಗಲೇ ಹಿರಿಯ ಸಚಿವರು ಕ್ಷಮೆ ಕೇಳಿದ್ದಾರೆ. ಯುಪಿಎ ಅವಧಿಯಲ್ಲೂ ಬಿಜೆಪಿ ಸಂಸದರಿಗೆ ಆಹ್ವಾನ ನೀಡದೆ ಹಲವು ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿ ಈ ಚರ್ಚೆಗೆ ಪೂರ್ಣವಿರಾಮ ಹಾಕಿದರು.