Tag: ಝಾಕೀರ್ ನಾಯ್ಕ್‌

  • ಸಾಕ್ಷ್ಯ ನೀಡಿದ್ರೆ ಝಾಕೀರ್‌ ನಾಯ್ಕ್‌ ಭಾರತಕ್ಕೆ ಹಸ್ತಾಂತರ – ಮಲೇಷ್ಯಾ ಪ್ರಧಾನಿ ಇಬ್ರಾಹಿಂ

    ಸಾಕ್ಷ್ಯ ನೀಡಿದ್ರೆ ಝಾಕೀರ್‌ ನಾಯ್ಕ್‌ ಭಾರತಕ್ಕೆ ಹಸ್ತಾಂತರ – ಮಲೇಷ್ಯಾ ಪ್ರಧಾನಿ ಇಬ್ರಾಹಿಂ

    ನವದೆಹಲಿ:  ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ವಿವಾದಿತ ಇಸ್ಲಾಮಿಕ್ ಬೋಧಕ ಝಾಕೀರ್‌ ನಾಯ್ಕ್ (Zakir Naik) ವಿರುದ್ಧ ಹಸ್ತಾಂತರಿಸಬೇಕೆಂಬ ಭಾರತದ ಮನವಿಯನ್ನು ನಮ್ಮ ಸರ್ಕಾರ ಪರಿಗಣಿಸಬಹುದು ಎಂದು ಮಲೇಷ್ಯಾ (Malaysia) ಪ್ರಧಾನಿ ಅನ್ವರ್ ಇಬ್ರಾಹಿಂ (Anwar Ibrahim) ಹೇಳಿದ್ದಾರೆ.

    2022 ರಲ್ಲಿ ಪ್ರಧಾನ ಮಂತ್ರಿ ಹುದ್ದೆ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅನ್ವರ್ ಇಬ್ರಾಹಿಂ ಮೂರು ದಿನಗಳ ಭಾರತ (India) ಪ್ರವಾಸ ಕೈಗೊಂಡಿದ್ದಾರೆ.

    ಮಂಗಳವಾರ ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್‌ನಲ್ಲಿ ನಡೆದ ಅಧಿವೇಶನದಲ್ಲಿ ಝಾಕೀರ್‌ ನಾಯ್ಕ್ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಈ ಸಮಸ್ಯೆ ದೇಶದ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರದಿರಲಿ ಎಂದು ತಿಳಿಸಿದರು. ಇದನ್ನೂ ಓದಿ: ಹಣ್ಣುಗಳ ಉತ್ಪಾದನೆ ಹೆಚ್ಚಿಸಲು ಕೇಂದ್ರದ ಮಾಸ್ಟರ್ ಪ್ಲ್ಯಾನ್ – ಏನಿದು ಕ್ಲೀನ್ ಪ್ಲಾಂಟ್ ಪ್ರೋಗ್ರಾಂ?

    ಮಂಗಳವಾರದ ಮಾತುಕತೆಯ ಸಂದರ್ಭದಲ್ಲಿ ಈ ವಿಷಯವನ್ನು ಭಾರತದ ಕಡೆಯಿಂದ ಪ್ರಸ್ತಾಪಿಸಲಾಗಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: PublicTV Explainer: ಭಾರತಕ್ಕೆ ಕಾಲಿಡುತ್ತಾ ಡೆಡ್ಲಿ ವೈರಸ್‌ – ಆಫ್ರಿಕಾ ಕಾಡಿದ ‘ಮಂಕಿಪಾಕ್ಸ್‌’ ಪಾಕ್‌ನಲ್ಲಿ ಪತ್ತೆ; ಭಾರತ ಹೈಅಲರ್ಟ್‌

    ನಾವು ಭಯೋತ್ಪಾದನೆಯನ್ನು ಬೆಂಬಲಿಸುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಈ ಹಲವು ವಿಷಯಗಳಲ್ಲಿ ನಾವು ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಅಕ್ರಮ ಹಣ ವರ್ಗಾವಣೆ ಮತ್ತು ದ್ವೇಷದ ಭಾಷಣಗಳ ಮೂಲಕ ಉಗ್ರವಾದವನ್ನು ಪ್ರಚೋದಿಸುವ ಆರೋಪ ಝಾಕೀರ್‌ ನಾಯ್ಕ್ ಮೇಲಿದೆ. 2016 ರಲ್ಲಿ ಭಾರತವನ್ನು ತೊರೆದಿರುವ ನಾಯ್ಕ್‌ಗೆ ಈ ಹಿಂದೆ ಮಲೇಷ್ಯಾದಲ್ಲಿದ್ದ ಮಹತೀರ್ ಮೊಹಮ್ಮದ್ ನೇತೃತ್ವದ ಸರ್ಕಾರ ಶಾಶ್ವತ ಪೌರತ್ವ ನೀಡಿದೆ.

    ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಶಾರೀಕ್‌ ಝಾಕೀರ್ ನಾಯ್ಕ್ ಭಾಷಣದ ವಿಡಿಯೋದಿಂದ ಪ್ರಭಾವಿತನಾಗಿದ್ದ.ಈತ ಝಾಕೀರ್‌ ನಾಯ್ಕ್‌ನನ್ನು ʼದಿ ರಿಯಲ್ ಇನ್ಸ್ಪಿರೇಶನ್ʼ ಎಂದು ಸಂಬೋಧಿಸಿದ್ದ. ತನಿಖೆಯ ವೇಳೆ ಶಾರೀಕ್‌ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಝಾಕೀರ್ ನಾಯ್ಕ್ ಭಾಷಣಗಳು ಲಭ್ಯವಾಗಿದ್ದವು. ಇದನ್ನೂ ಓದಿ: ಮೀನು ಸಂಸ್ಕರಿಸಿ ಯಶಸ್ವಿ ಉದ್ಯಮಿಯಾದ ಕೊಡಗಿನ ಮಹಿಳೆ – PMFME ಯೋಜನೆಯ ಲಾಭ ನೀವೂ ಪಡೆಯಿರಿ!

    ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ ʼಪೀಸ್‌ ಟಿವಿʼಗೆ ಭಾರತ ನಿರ್ಬಂಧ ಹೇರಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದ. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾಕ್ಕೆ ಹೋಗಿದ್ದ.

    ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರೋತ್ಸಾಹ, ಭಯೋತ್ಪಾದಕರನ್ನು ಹೊಗಳುವುದು, ಆತ್ಮಹತ್ಯಾ ಬಾಂಬ್ ದಾಳಿ ಸಮರ್ಥನೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌, ಇತರ ಧರ್ಮಗಳಿಗೆ ಅವಮಾನ ಈ ಎಲ್ಲಾ ಆರೋಪಗಳು ಝಾಕೀರ್‌ ನಾಯ್ಕ್‌ ಮೇಲಿದೆ.

  • ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ

    ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ

    ತಿರುವನಂತನಪುರಂ: ಇತ್ತೀಚೆಗೆ ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮಗು ಸೇರಿ ಮೂರು ಜನರ ಸಾವಿಗೆ ಕಾರಣನಾದ ಆರೋಪಿ ಶಾರುಖ್ ಸೈಫಿ ತೀವ್ರ ಮತೀಯವಾದ (Radicalised) ಬೆಳೆಸಿಕೊಂಡಿದ್ದ ಎಂದು ಎಸ್‍ಐಟಿ (SIT) ಮುಖ್ಯಸ್ಥ ಎಡಿಜಿಪಿ (ADGP) ಎಂ.ಆರ್ ಅಜಿತ್ ಕುಮಾರ್ ಸೋಮವಾರ ತಿಳಿಸಿದ್ದಾರೆ.

    ಆರೋಪಿ ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕೀರ್ ನಾಯ್ಕ್ (Zakeer Naik) ವೀಡಿಯೊಗಳನ್ನು ವೀಕ್ಷಿಸುತ್ತಿದ್ದ. ಕೃತ್ಯ ಎಸಗಲು ಸಂಚು ರೂಪಿಸಿ ರಾಜ್ಯಕ್ಕೆ ಬಂದಿದ್ದ. ಆರೋಪಿ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವ ಕಾಯ್ದೆಯಡಿ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಆತನ ವಿರುದ್ಧ ಯುಎಪಿಎಯ (UAPA) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ – ಓರ್ವ ಯೋಧನ ಬಂಧನ

    CRIME

    ತನಿಖಾ ತಂಡ ವಿವಿಧ ರಾಜ್ಯಗಳಿಗೆ ತೆರಳಿ ವೈಜ್ಞಾನಿಕ ಪುರಾವೆಗಳು, ಸಾಕ್ಷ್ಯಚಿತ್ರ ಮತ್ತು ಮೌಖಿಕ ಮಾಹಿತಿಯನ್ನು ಸಂಗ್ರಹಿಸಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿದ್ದೇವೆ. ಆತನಿಗೆ ಬೇರೆಯವರಿಂದ ಏನಾದರೂ ಸಹಾಯ ಸಿಕ್ಕಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಆರೋಪಿಗೆ 27 ವರ್ಷ ವಯಸ್ಸಾಗಿದ್ದು, ನ್ಯಾಷನಲ್ ಓಪನ್ ಸ್ಕೂಲ್‍ನಲ್ಲಿ ಶಿಕ್ಷಣ ಪೂರೈಸಿದ್ದಾನೆ. ತನಿಖೆ ವೇಳೆ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏ.2ರ ರಾತ್ರಿ ಅಲಪ್ಪುಳ-ಕಣ್ಣೂರು ಎಕ್ಸ್‍ಪ್ರೆಸ್ ರೈಲಿನಲ್ಲಿ (Alappuzha-Kannur Executive Express train) ಪ್ರಯಾಣಿಸುವಾಗ ಕೋಝಿಕ್ಕೋಡ್‍ನ ಎಲತ್ತೂರ್ ಬಳಿಯ ಕೊರಾಪುಝ ಸೇತುವೆಯ (Korapuzha Bridge) ಬಳಿ ಸೈಫಿ ತನ್ನ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಎರಡು ವರ್ಷದ ಮಗು ಸೇರಿದಂತೆ ಮೂವರು ಸಾವಿಗೀಡಾಗಿದ್ದರು. ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿತ್ತು. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

  • ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಮಂಗಳೂರು: ಬಾಂಬರ್‌ ಶಾರೀಕ್‌(Shariq) ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ.

    ಮಂಗಳೂರು ಸ್ಫೋಟದ(Mangaluru Blast) ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಾರೀಕ್‌ ಮೊಬೈಲ್‌ ನೋಡಿ ದಂಗಾಗಿದ್ದಾರೆ. ಐಸಿಸ್‌ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ಶಾರೀಕ್ ಮೊಬೈಲ್‌ನಲ್ಲಿ ಬಾಂಬ್ ತಯಾರಿಯ ವಿಡಿಯೋ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೂಲಭೂತವಾದಿ ಭಾಷಣಕಾರ ಝಾಕೀರ್ ನಾಯ್ಕ್‌(Zakir Naik) ಭಾಷಣದಿಂದ ಪ್ರಭಾವಿತನಾಗಿದ್ದ ಈತ ಝಾಕೀರ್‌ ನಾಯ್ಕ್‌ನನ್ನು ʼದಿ ರಿಯಲ್ ಇನ್ಸ್ಪಿರೇಶನ್ʼ ಎಂದು ಸಂಬೋಧಿಸಿದ್ದ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಯೂಟ್ಯೂಬ್‌ನಿಂದ ಝಾಕೀರ್ ನಾಯ್ಕ್ ವೀಡಿಯೋ ಡೌನ್‌ಲೋಡ್‌ ಮಾಡಿದ್ದು ಶಾರೀಕ್ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಭಾಷಣಗಳು ಸಿಕ್ಕಿವೆ. ಟೋರ್ ಬ್ರೌಸರ್ ಮೂಲಕ ಡಾರ್ಕ್ ವೆಬ್ ಬಳಸುತಿದ್ದ ವಿಚಾರವೂ ಲಭ್ಯವಾಗಿದೆ.

    ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ ಪೀಸ್‌ ಟಿವಿಗೆ ಭಾರತ ನಿರ್ಬಂಧ ಹೇರಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾಕ್ಕೆ ಹೋಗಿದ್ದ.

    ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರೋತ್ಸಾಹ, ಭಯೋತ್ಪಾದಕರನ್ನು ಹೊಗಳುವುದು, ಆತ್ಮಹತ್ಯಾ ಬಾಂಬ್ ದಾಳಿ ಸಮರ್ಥನೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌, ಇತರ ಧರ್ಮಗಳಿಗೆ ಅವಮಾನ ಈ ಎಲ್ಲಾ ಆರೋಪಗಳು ಝಾಕೀರ್‌ ನಾಯ್ಕ್‌ ಮೇಲಿದೆ.

    Live Tv
    [brid partner=56869869 player=32851 video=960834 autoplay=true]