Tag: ಝಿರೋ ಟ್ರಾಫಿಕ್

  • ಡಿಸಿಎಂಗಾಗಿ 4 ಬಾರಿ ಝೀರೋ ಟ್ರಾಫಿಕ್ – ಬಿಸಿಲಿನಲ್ಲಿ ನಿಂತು ಹೈರಾಣದ ಜನತೆ

    ಡಿಸಿಎಂಗಾಗಿ 4 ಬಾರಿ ಝೀರೋ ಟ್ರಾಫಿಕ್ – ಬಿಸಿಲಿನಲ್ಲಿ ನಿಂತು ಹೈರಾಣದ ಜನತೆ

    ಚಿಕ್ಕಮಗಳೂರು: ದೋಸ್ತಿ ಸರ್ಕಾರದಲ್ಲಿ ಡಿಸಿಎಂ ಪರಮೇಶ್ವರ್ ಝೀರೋ ಟ್ರಾಫಿಕ್ ಸೌಲಭ್ಯ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಝೀರೋ ಟ್ರಾಫಿಕ್ ಪಡೆದು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಡಿಸಿಎಂ ಅಶ್ವಥ್ ನಾರಾಯಣ್‍ಗಾಗಿ ಪೊಲೀಸರು ಒಂದಲ್ಲ ಎರಡಲ್ಲ ನಾಲ್ಕು ಬಾರೀ ಝಿರೋ ಟ್ರಾಫಿಕ್ ಸೌಲಭ್ಯ ನೀಡಿದ್ದು, ಬಿಸಿಲಿನಲ್ಲಿ ನಿಂತು ಚಿಕ್ಕಮಗಳೂರಿನ ಜನ ಹೈರಾಣಾಗಿ ಹೋಗಿದ್ದಾರೆ.

    ಇಂದು ಚಿಕ್ಕಮಗಳೂರು ಪ್ರವಾಸದಲ್ಲಿರೋ ಡಿಸಿಎಂ ಅಶ್ವಥ್ ನಾರಾಯಣ್ 4 ಬಾರಿ ಝಿರೋ ಟ್ರಾಫಿಕ್ ಬಳಸಿದ್ದಾರೆ. ಚಿಕ್ಕಮಗಳೂರು ನಗರದ ತೊಗರಿಹಂಕಲ್, ಹನುಮಂತಪ್ಪ ವೃತ್ತ, ಮಲಂದೂರು ಸರ್ಕಲ್ ನಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಬಿಸಿಲಲ್ಲೇ ನಿಂತು ವಾಹನ ಸವಾರರು ರೇಗಾಡಿದ್ದಾರೆ.

    ಈ ಹಿಂದೆ ಟ್ರಾಫಿಕ್ ವಿಚಾರದ ಬಗ್ಗೆ ಮಾತನಾಡಿದ್ದ ಡಿಸಿಎಂ ಅಶ್ವಥ್ ನಾರಾಯಣ್, ನಾನು ಜನರ ಜೊತೆ ಬೆಳೆದು ಬಂದವನು. ಜನರಿಗೆ ತೊಂದರೆಯಾಗುವ ರೀತಿಯಲ್ಲಿ ನಡೆದುಕೊಳ್ಳಲ್ಲ. ನನಗೆ ಝೀರೋ ಟ್ರಾಫಿಕ್ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ನಾನು ಜನರಿಗೆ ಅನಾನುಕೂಲತೆ ಆಗಾದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಝಿರೋ ಟ್ರಾಫಿಕ್ ಉಪಯೋಗಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಈಗ ಒಂದೇ ದಿನದಲ್ಲಿ ನಾಲ್ಕು ಬಾರಿ ಝಿರೋ ಟ್ರಾಫಿಕ್ ಬಳಸಿದ್ದು ಚರ್ಚೆಗೆ ಕಾರಣವಾಗಿದೆ.

    ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ಝಿರೋ ಟ್ರಾಫಿಕ್ ತೆಗೆದುಕೊಳ್ಳಬಾರದು. ಝಿರೋ ಟ್ರಾಫಿಕ್‍ನಿಂದ ಸಂಚಾರ ಅಸ್ತವ್ಯಸ್ತವಾಗಲಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ. ಇದರಿಂದಾಗಿ ಜನರಿಗೆ ಕೆಟ್ಟ ಸಂದೇಶ ಹೋಗಿ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಬಿಜೆಪಿ ಹೈಕಮಾಂಡ್ ಈ ಹಿಂದೆ ಎಚ್ಚರಿಕೆ ನೀಡಿತ್ತು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

  • ಸಾರ್ವಜನಿಕರಿಗೆ ತೊಂದರೆಯಾಗುತ್ತೆ, ಝಿರೋ ಟ್ರಾಫಿಕ್ ಬೇಡ: ಬಸವರಾಜ ಬೊಮ್ಮಾಯಿ

    ಸಾರ್ವಜನಿಕರಿಗೆ ತೊಂದರೆಯಾಗುತ್ತೆ, ಝಿರೋ ಟ್ರಾಫಿಕ್ ಬೇಡ: ಬಸವರಾಜ ಬೊಮ್ಮಾಯಿ

    ಹಾವೇರಿ: ಝಿರೋ ಟ್ರಾಫಿಕ್ ಬೇಡ ಹಾಗೂ ಜಿಲ್ಲೆಗೆ ಭೇಟಿ ನೀಡಿದಾಗೊಮ್ಮೆ ಗಾರ್ಡ್ ಆಫ್ ಆನರ್ ಬೇಡ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರ್, ಫೇಸ್‍ಬುಕ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವರು, ‘ಝಿರೋ ಟ್ರಾಫಿಕ್‍ನಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಝಿರೋ ಟ್ರಾಫಿಕ್ ಬೇಡ. ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಶುಕ್ರವಾರ ಭೇಟಿ ನೀಡಿದ್ದಾಗ ಝಿರೋ ಟ್ರಾಫಿಕ್‍ನಿಂದ ಸಾರ್ವಜನಿಕರಿಗೆ ಉಂಟಾದ ಸಮಸ್ಯೆಯನ್ನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.

    ಝಿರೋ ಟ್ರಾಫಿಕ್ ಜೊತೆಗೆ ಜಿಲ್ಲೆಗೆ ಭೇಟಿ ನೀಡಿದಾಗ ಪ್ರತಿ ಬಾರಿಯೂ ಗಾರ್ಡ್ ಆಫ್ ಹಾನರ್ ಸಲ್ಲಿಸುವುದು ಬೇಡ. ಈ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಝಿರೋ ಟ್ರಾಫಿಕ್‍ನಿಂದಾಗಿ ಮಾಜಿ ಡಿಸಿಎಂ ಪರಮೇಶ್ವರ್ ಅವರು ವಿವಾದಕ್ಕೆ ಗುರಿಯಾಗಿದ್ದರು. ಈ ವಿಚಾರವಾಗಿ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್, ತಮ್ಮ ಉಪ ಮುಖ್ಯಮಂತ್ರಿಗಳಿಗೆ ಝಿರೋ ಟ್ರಾಫಿಕ್ ಸೌಲಭ್ಯ ಪಡೆಯದಂತೆ ಖಡಕ್ ಸೂಚನೆ ನೀಡಿದೆ.

    ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ಝಿರೋ ಟ್ರಾಫಿಕ್ ತೆಗೆದುಕೊಳ್ಳಬಾರದು. ಝಿರೋ ಟ್ರಾಫಿಕ್‍ನಿಂದ ಸಂಚಾರ ಅಸ್ತವ್ಯಸ್ತವಾಗಲಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ. ಇದರಿಂದಾಗಿ ಜನರಿಗೆ ಕೆಟ್ಟ ಸಂದೇಶ ಹೋಗಿ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಬಿಜೆಪಿ ಹೈಕಮಾಂಡ್ ಇತ್ತೀಚೆಗಷ್ಟೇ ಎಚ್ಚರಿಕೆ ನೀಡಿತ್ತು.

    ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಡಿಸಿಎಂ ಸಿ.ಎನ್.ಅಶ್ವಥ್ ನಾರಾಯಣ ಅವರು, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಝಿರೋ ಟ್ರಾಫಿಕ್ ವ್ಯವಸ್ಥೆಯ ಅನುಕೂಲವನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದರು.

  • ಝಿರೋ ಟ್ರಾಫಿಕ್ ತಗೋಬೇಡಿ: ಡಿಸಿಎಂಗಳಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ

    ಝಿರೋ ಟ್ರಾಫಿಕ್ ತಗೋಬೇಡಿ: ಡಿಸಿಎಂಗಳಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ

    ಬೆಂಗಳೂರು: ಝಿರೋ ಟ್ರಾಫಿಕ್ ತಗೆದುಕೊಳ್ಳಬೇಡಿ ಎಂದು ಬಿಜೆಪಿ ಹೈಕಮಾಂಡ್ ರಾಜ್ಯದ ಮೂವರು ಜನ ಉಪ ಮುಖ್ಯಮಂತ್ರಿಗಳಿಗೆ ಖಡಕ್ ಸೂಚನೆ ರವಾನಿಸಿದೆ.

    ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ಝಿರೋ ಟ್ರಾಫಿಕ್ ತೆಗೆದುಕೊಳ್ಳಬಾರದು. ಝಿರೋ ಟ್ರಾಫಿಕ್‍ನಿಂದ ಸಂಚಾರ ಅಸ್ತವ್ಯಸ್ತವಾಗಲಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ. ಇದರಿಂದಾಗಿ ಜನರಿಗೆ ಕೆಟ್ಟ ಸಂದೇಶ ಹೋಗಿ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನೀಡಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಸಿ.ಎನ್.ಅಶ್ವಥ್ ನಾರಾಯಣ ಅವರು, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಝಿರೋ ಟ್ರಾಫಿಕ್ ವ್ಯವಸ್ಥೆಯ ಅನುಕೂಲವನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಝಿರೋ ಟ್ರಾಫಿಕ್‍ನಿಂದಾಗಿ ಮಾಜಿ ಡಿಸಿಎಂ ಪರಮೇಶ್ವರ್ ಅವರು ವಿವಾದಕ್ಕೆ ಗುರಿಯಾಗಿದ್ದರು. ಈ ವಿಚಾರವಾಗಿ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್ ತಮ್ಮ ಉಪ ಮುಖ್ಯಮಂತ್ರಿಗಳಿಗೆ ಝಿರೋ ಟ್ರಾಫಿಕ್ ಸೌಲಭ್ಯ ಪಡೆಯದಂತೆ ಖಡಕ್ ಸೂಚನೆ ನೀಡಿದೆ.

    2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಸ್ಥಾನದಲ್ಲಿ ಬಿ.ಎಸ್.ಯಡಿಯೂರಪ್ಪ ಇದ್ದರು. ಆಗ ಬಿ.ಎಸ್.ಯಡಿಯೂರಪ್ಪ ಅವರಿಗೆ ಝಿರೋ ಟ್ರಾಫಿಕ್ ಸೌಲಭ್ಯವನ್ನು ಕಲ್ಪಿಸಲಾಗಿತ್ತು. 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದರು. ಅವರಿಗೂ ಝಿರೋ ಟ್ರಾಫಿಕ್ ಸೌಲಭ್ಯ ನೀಡಲಾಗಿತ್ತು. ಆದರೆ ಈಗ ಬಿಜೆಪಿ ಈ ಸೌಲಭ್ಯವನ್ನು ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.

  • ತೊಲಗಿತು ತೊಲಗಿತು ಝೀರೋ ಟ್ರಾಫಿಕ್ ತೊಲಗಿತು – ರಾಜಣ್ಣ ಬೆಂಬಲಿಗರಿಂದ ವ್ಯಂಗ್ಯ

    ತೊಲಗಿತು ತೊಲಗಿತು ಝೀರೋ ಟ್ರಾಫಿಕ್ ತೊಲಗಿತು – ರಾಜಣ್ಣ ಬೆಂಬಲಿಗರಿಂದ ವ್ಯಂಗ್ಯ

    ತುಮಕೂರು: ತೊಲಗಿತು ತೊಲಗಿತು ಝೀರೋ ಟ್ರಾಫಿಕ್ ತೊಲಗಿತು ಎಂದು ಘೋಷಣೆ ಕೂಗುವ ಮೂಲಕ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‍ ಗೆ ವ್ಯಂಗ್ಯವಾಡಿದ್ದಾರೆ.

    ಇಂದು ನಗರದ ಟೌನ್ ಹಾಲ್ ವೃತ್ತದಲ್ಲಿ ಕೆ.ಎನ್.ರಾಜಣ್ಣ ಬೆಂಬಲಿಗರು ಝೀರೋ ಟ್ರಾಫಿಕ್ ತೊಲಗಿತು. ತುಮಕೂರು ಜನರಿಗೆ ನೆಮ್ಮದಿ ಬಂತು ಎಂದು ಜಿ.ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ ಆಗಿದ್ದಾಗ ಝೀರೋ ಟ್ರಾಫಿಕ್‍ನಲ್ಲಿ ಓಡಾಡುತ್ತಿದ್ದರು. ಇದರಿಂದ ತುಮಕೂರು ಜನತೆ ತೊಂದರೆ ಅನುಭವಿಸಿದ್ದರು. ಈಗ ಮೈತ್ರಿ ಸರ್ಕಾರ ಪತನವಾಗಿ ಮಂತ್ರಿಗಿರಿ ಹೋಗಿದ್ದರಿಂದ ತುಮಕೂರು ಜನರಿಗೆ ಝೀರೋ ಟ್ರಾಫಿಕ್‍ನಿಂದ ಮುಕ್ತಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಈ ವಿಚಾರಕ್ಕೆ ಪರಮೇಶ್ವರ್ ವಿರುದ್ಧ ಕಿಡಿಕಾರಿದ್ದ ಕೆ.ಎನ್ ರಾಜಣ್ಣ, ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ಹೋಗಿರುವುದರಿಂದ ತುಮಕೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿದೆ. ಪದೇ ಪದೇ ಪರಮೇಶ್ವರ್ ತುಮಕೂರಿಗೆ ಬರುತ್ತಿದ್ದರಿಂದ ಟ್ರಾಫಿಕ್ ಸಮಸ್ಯೆ ಇತ್ತು, ಸದ್ಯ ಅದು ಇಲ್ಲ ಎಂದು ಹೇಳಿದ್ದರು.

  • ಇರುವ ಅವಕಾಶ ಬಳಸಿಕೊಳ್ತಿದ್ದೇನೆ, ನಿಮಗೆ ಹೊಟ್ಟೆ ಉರಿ: ಝಿರೋ ಟ್ರಾಫಿಕ್‍ಗೆ ಡಿಸಿಎಂ ಸಮರ್ಥನೆ

    ಇರುವ ಅವಕಾಶ ಬಳಸಿಕೊಳ್ತಿದ್ದೇನೆ, ನಿಮಗೆ ಹೊಟ್ಟೆ ಉರಿ: ಝಿರೋ ಟ್ರಾಫಿಕ್‍ಗೆ ಡಿಸಿಎಂ ಸಮರ್ಥನೆ

    ಬೆಂಗಳೂರು: ಝಿರೋ ಟ್ರಾಫಿಕ್ ವ್ಯವಸ್ಥೆ ನನಗೂ ಇದೆ, ಹೀಗಾಗಿ ಬಳಸಿಕೊಳ್ಳುತ್ತಿದ್ದೇನೆ. ಮಾಧ್ಯಮಗಳಿಗೆ ಝಿರೋ ಟ್ರಾಫಿಕ್ ತಗೆದುಕೊಳ್ಳುವುದು ಹೊಟ್ಟೆ ಉರಿ ಎನ್ನುವ ಮೂಲಕ ಡಿಸಿಎಂ ಜಿ.ಪರಮೇಶ್ವರ್ ಅಧಿಕಾರ ದರ್ಪ ಮೆರೆದಿದ್ದಾರೆ.

    ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಪರಮೇಶ್ವರ್ ರವರನ್ನು ಆಹ್ವಾನಿಸಲಾಗಿತ್ತು. ಇಂದು ಸಹ ಝಿರೋ ಟ್ರಾಫಿಕ್ ಮೂಲಕವೇ ಕಾರ್ಯಕ್ರಮಕ್ಕೆ ಡಿಸಿಎಂ ಆಗಮಿಸಿದ್ದರು.

    ಝಿರೋ ಟ್ರಾಫಿಕ್ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝಿರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಝಿರೋ ಟ್ರಾಫಿಕ್ ಅಗತ್ಯ ಇದೆ ಎನ್ನುವುದರಿಂದ ಅವಕಾಶ ನೀಡಲಾಗಿದೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ನನಗೆ ಇರುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ನಾನು ಝಿರೋ ಟ್ರಾಫಿಕ್ ತೆಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಹುರಿ ಎನ್ನುವ ಮೂಲಕ ಮತ್ತೊಮ್ಮ ತಮ್ಮ ಅಧಿಕಾರದ ದರ್ಪ ತೋರಿದ್ದಾರೆ.

    ಇದೇ ವೇಳೆ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪನವರು ಈ ದೇಶಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಅವರ ಪರಿಶ್ರಮ ಅಪಾರ. ಇಂದು ಅವರ ಪ್ರತಿಮೆ ಅನಾವರಣ ಮಾಡುವ ಮೂಲಕ ಯುವಪೀಳಿಗೆಗೆ ಮಾದರಿಯಾಗಿದ್ದಾರೆ. ಅಲ್ಲದೇ ಮಿಲ್ಲರ್ಸ್ ಜಂಕ್ಷನ್‍ಗೆ ಕಾರಿಯಪ್ಪನಗರ ಹೆಸರನ್ನು ಇಡುವ ಪ್ರಸ್ತಾಪನೆಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೀನಿ ಎಂದು ಹೇಳಿದರು. ಸಮಾರಂಭ ಕಾರ್ಯಕ್ರಮಕ್ಕೆ ಸಂಸದ ಪಿಸಿ ಮೋಹನ್ ಸೇರಿದಂತೆ ಮೇಯರ್ ಸಂಪತ್ ರಾಜ್ ಭಾಗಿಯಾಗಿದ್ದರು.

    ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಮಂಗಳವಾರ ನಡೆದ ಸಿಎಲ್‍ಪಿ ಸಭೆಯಲ್ಲಿ ಯಾರು ಸಹ ನನ್ನ ವಿರುದ್ಧ ಮಾತನಾಡಿಲ್ಲ. ಯಾರು ಅಸಮಾಧಾನ ಹೊರ ಹಾಕಿಲ್ಲ. ಯಾವ ಶಾಸಕರು ನನ್ನ ವಿರುದ್ದ ಸಿಟ್ಟು ವ್ಯಕ್ತಪಡಿಸಿಲ್ಲ. ನಾನೇ ಸಭೆಯಲ್ಲಿ ಸಿಎಂ ಸಿಗಲಿಲ್ಲ ಅಂದರೆ ನನ್ನ ಹತ್ತಿರ ಬನ್ನಿ ನಾನೇ ಕೆಲಸ ಮಾಡಿಸಿಕೊಡ್ತೀನಿ ಎಂದು ಹೇಳಿದ್ದೀನಿ. ನನ್ನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.

    ಬಿಬಿಎಂಪಿ ಮೇಯರ್ ಚುನಾವಣೆ ವಿಚಾರದ ಬಗ್ಗೆ ಮಾತನಾಡಿ, ಪಕ್ಷದ ಅಧ್ಯಕ್ಷರು ಬುಧವಾರ ಸಂಜೆ ಈ ಬಗ್ಗೆ ಸಭೆ ಕರೆದಿದ್ದಾರೆ. ಇಂದಿನ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಿ ಫೈನಲ್ ಮಾಡುತ್ತೇನೆ. ರೇಸ್‍ನಲ್ಲಿ ಯಾರು ಯಾರು ಇದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸಭೆಯ ಬಳಿಕ ಅಭ್ಯರ್ಥಿಯನ್ನು ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಪರಮೇಶ್ವರ್ ದಾದಾಗಿರಿ – ಮಳೆಯ ನಡುವೆಯೂ ಝಿರೋ ಟ್ರಾಫಿಕ್‍ನಲ್ಲಿ ಸಂಚಾರ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಸಿಎಂ ಪರಮೇಶ್ವರ್ ದಾದಾಗಿರಿ – ಮಳೆಯ ನಡುವೆಯೂ ಝಿರೋ ಟ್ರಾಫಿಕ್‍ನಲ್ಲಿ ಸಂಚಾರ!

    ಡಿಸಿಎಂ ಪರಮೇಶ್ವರ್ ದಾದಾಗಿರಿ – ಮಳೆಯ ನಡುವೆಯೂ ಝಿರೋ ಟ್ರಾಫಿಕ್‍ನಲ್ಲಿ ಸಂಚಾರ!

    ಬೆಂಗಳೂರು: ಸಿಲಿಕಾನ್ ಸಿಟಿ ಜನ ಮಳೆಯಿಂದ ತತ್ತರಿಸಿ ಹೋಗಿದ್ದರೆ ಸಮ್ಮಿಶ್ರ ಸರ್ಕಾರ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ನಲ್ಲಿ ಸಂಚರಿಸಿ ಅಧಿಕಾರದ ದರ್ಪ ಮೆರೆದಿದ್ದಾರೆ.

    ಕಳೆದ ಎರಡು ದಿನಗಳಿಂದ ಭಾರೀ ಮಳೆಗೆ ಸಿಲುಕಿದ್ದ ಬೆಂಗಳೂರಿನ ಜನರು ಟ್ರಾಫಿಕ್ ಸಮಸ್ಯೆಯಿಂದ ಹೈರಣಾಗಿದ್ದಾರೆ. ಅಲ್ಲದೇ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಮಳೆ ಆರಂಭವಾಗಿದ್ದರಿಂದ ನಗರ ಬಹುತೇಕ ಕಡೆ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಡಿಸಿಎಂ ಪರಮೇಶ್ವರ್ ಅವರು ಯಲಹಂಕ ಕಡೆಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಕಾರಣ ಝಿರೋ ಟ್ರಾಫಿಕ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಡಿಸಿಎಂ ಸೂಚನೆಯಂತೆ ನಗರದ ಬಳ್ಳಾರಿ ರಸ್ತೆಯಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿತ್ತು. ಇದರಿಂದ ಬೆಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ಬಳ್ಳಾರಿ ರಸ್ತೆ ಮತ್ತು ಈ ರಸ್ತೆಗೆ ಸಂಪರ್ಕ ಕಲ್ಪಿಸುವ ಇತರ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಗೃಹ ಇಲಾಖೆಯನ್ನು ನಿರ್ವಹಿಸುತ್ತಿರುವ ಡಿಸಿಎಂ ಪರಮೇಶ್ವರ್ ಅವರು ತಮ್ಮ ಇಲಾಖೆಯ ಪೊಲೀಸ್ ಅಧಿಕಾರಿಗಳಿಗೆ ತಾವು ಎಲ್ಲೇ ತೆರಳಿದರೂ ಝಿರೋ ಟ್ರಾಫಿಕ್ ಮಾಡಲೇಬೇಕೆಂಬ ಆದೇಶ ನೀಡಿದ್ದಾರೆ. ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿರುವ ಪೊಲೀಸರು ಮಳೆಯ ನಡುವೆಯೂ ಪರಮೇಶ್ವರ್ ಗೆ ಝೀರೋ ಟ್ರಾಫಿಕ್ ಮಾಡಿಕೊಡುವ ಮೂಲಕ ಸರ್ಕಾರಿ ಸೇವೆ ಸಲ್ಲಿಸಿದ್ದಾರೆ.

    ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೊದಲೇ ಸೂಚನೆ ನೀಡಿದೆ. ಅಲ್ಲದೇ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಡಿಸಿಎಂ ಸಂಚರಿಸಿದ್ದ ಹೆಬ್ಬಾಳ ಸೇತುವೆ ಬಳಿ ಭಾರೀ ನೀರು ನಿಂತಿದ್ದ ಕಾರಣ ಬೆಳಗ್ಗೆಯಿಂದಲೇ ಟ್ರಾಫಿಕ್ ಅಧಿಕವಾಗಿತ್ತು. ಸಂಜೆ ವೇಳೆ ಮತ್ತೆ ಮಳೆ ಆರಂಭವಾಗಿದ್ದು, ಶಾಲಾ ಕಾಲೇಜು ಬಿಡುವ ಸಮಯದಲ್ಲೇ ಝಿರೋ ಟ್ರಾಫಿಕ್ ಮಾಡಿದ್ದ ಕಾರಣ ಸಣ್ಣ ಮಕ್ಕಳನ್ನು ಶಾಲೆಯಿಂದ ಕರೆತರಲು ಬೈಕಿನಲ್ಲಿ ಬಂದಿದ್ದ ಪೋಷಕರು ಮಳೆಯಲ್ಲೇ ನಿಂತಿದ್ದರು. ಮಳೆಯಿಂದಾಗಿ ಜನ ಟ್ರಾಫಿಕ್ ನಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿದ್ದರೂ ಅಧಿಕಾರದ ಮದದಲ್ಲಿರುವ ಪರಮೇಶ್ವರ್ ಇದಕ್ಕೂ ನನಗೂ ಸಂಬಂಧ ಇಲ್ಲ. ನಾನೇ ಬೆಂಗಳೂರಿನ ರಾಜ ಎನ್ನುವಂತೆ ದಾದಾಗಿರಿ ತೋರಿಸಿದ್ದಾರೆ.

    ಡಿಸಿಎಂ ಅವರ ಅಡಿಯಲ್ಲಿ ಗೃಹ ಇಲಾಖೆಯೂ ಇರುವುದರಿಂದ ಪೊಲೀಸರು ಹೈರಣಾಗಿದ್ದು, ಪರಮೇಶ್ವರ್ ಕೋರಿಕೆಯಂತೆ ಅನಿವಾರ್ಯವಾಗಿ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಜನರ ಟೀಕೆಗೆ ಗುರಿಯಾಗುತ್ತಿದ್ದಾರೆ. ನಿಯಮಗಳ ಅನ್ವಯ ಮುಖ್ಯಮಂತ್ರಿಗಳಿಗೆ ಮಾತ್ರ ಝಿರೋ ಟ್ರಾಫಿಕ್ ಮಾಡಲು ಅವಕಾಶವಿದೆ. ಆದರೆ ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಪರಮೇಶ್ವರ್ ತಮ್ಮ ಅಧಿಕಾರ ಮದದಿಂದಾಗಿ ನಗರದಲ್ಲಿ ಎಲ್ಲೇ ಸಂಚರಿಸಲು ಝೀರೋ ಟ್ರಾಫಿಕ್ ಮಾಡುವಂತೆ ಆದೇಶಿಸಿದ್ದು ಈಗ ಸಾರ್ವಜನಿಕರ ವ್ಯಾಪಕ ಟೀಕೆಗೆ ಕಾರಣವಾಗಿದೆ.

    ಪರಮೇಶ್ವರ್ ಅವರ ಈ ದರ್ಬಾರ್ ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಬಾಕ್ಸ್ ನಲ್ಲಿ  ಅಭಿಪ್ರಾಯ ತಿಳಿಸಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv