Tag: ಝೀಕಾ ವೈರಸ್

  • ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    – ಸೋಂಕಿತರಿದ್ದ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಡೆಂಗ್ಯೂ ಬೆನ್ನಲ್ಲೇ ಝಿಕಾ ವೈರಸ್ (Zika Virus) ಕೂಡ ನಗರಕ್ಕೆ ಕಾಲಿಟ್ಟಿದೆ. ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿಯಲ್ಲಿ (Jigani) ಎರಡು ವಾರಗಳಲ್ಲಿ ಒಟ್ಟು 5 ಝಿಕಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

    ಸೋಂಕು ಕಾಣಿಸಿಕೊಂಡ  ಹಿನ್ನೆಲೆ ರೋಗಿಗಳು ಹಾಗೂ ಕುಟುಂಬಸ್ಥರ ರಕ್ತದ ಸ್ಯಾಂಪಲ್‌ಗಳನ್ನು ಪಡದುಕೊಂಡು ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾ ವಹಿಸಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 7 ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರು ಪತ್ತೆಯಾದ ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಿ ಆರೋಗ್ಯ ಇಲಾಖೆ (Health Department) ನಿಗಾ ವಹಿಸುತ್ತಿದೆ. ಇದನ್ನೂ ಓದಿ: ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ಈಡಿಸ್ ಸೊಳ್ಳೆಯಿಂದ ಝಿಕಾ ವೈರಸ್ ಹರಡುತ್ತದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ ದದ್ದುಗಳು ಕಾಣಿಸಿಕೊಳ್ಳುವುದು ಝಿಕಾ ವೈರಸ್‌ನ ಗುಣಲಕ್ಷಣ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಇದನ್ನೂ ಓದಿ: Maharashtra: ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿಯನ್ನು ಲ್ಯಾಬ್ ಟೆಸ್ಟ್‌ಗೆ ಒಳಪಡಿಸಬೇಕು. ಮನೆಯ ಸುತ್ತಮುತ್ತಲಿನ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್‌ ನಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್ 

  • ಝಿಕಾ ವೈರಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಸುಧಾಕರ್ ಆಗ್ರಹ

    ಝಿಕಾ ವೈರಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಸುಧಾಕರ್ ಆಗ್ರಹ

    ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ (Zika Virus) ಪತ್ತೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr. K Sudhakar) ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯ ಡಿಜಿಟಲ್ ವರದಿಗೆ ರೀ ಎಕ್ಸ್ ಮಾಡಿರುವ ಮಾಜಿ ಸಚಿವರು, ಝಿಕಾ ವೈರಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾರಕ ಝಿಕಾ ವೈರಸ್ ಪತ್ತೆಯಾಗಿರುವುದು ಅತ್ಯಂತ ಕಳವಳಕಾರಿ. ವೈರಾಣು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕಾಗಿ ಆಗ್ರಹಿಸುತ್ತೇನೆ ಎಂದಿದ್ದಾರೆ.

     

    ಝಿಕಾ ವೈರಸ್ ಬರುವುದು ಹೇಗೆ?: ಇದು ಸೊಳ್ಳೆಗಳಿಂದ ಹರಡುವ ವೈರಸ್. ಈಡಿಸ್ ಸೊಳ್ಳೆಗಳೇ ಝಿಕಾ ವೈರಸ್‍ನ ಮೂಲಕಾರಣ. ಸಾಧಾರಣವಾಗಿ ಹಗಲುಹೊತ್ತಿನಲ್ಲೇ ಈ ಸೊಳ್ಳೆಗಳು ಕಡಿಯುತ್ತವೆ.

    ರೋಗ ಲಕ್ಷಣಗಳೇನು?: ಜ್ವರ, ತಲೆ ನೋವು, ಕೀಲು ನೋವು, ಸ್ನಾಯು ನೋವು ಇದರ ಪ್ರಮುಖ ಲಕ್ಷಣಗಳು. ಸಾಧಾರಣವಾಗಿ 2ರಿಂದ 7 ದಿನಗಳ ಕಾಲ ಈ ಲಕ್ಷಣ ಕಾಣಿಸುತ್ತದೆ. ಸೊಳ್ಳೆ ನಿಮ್ಮನ್ನು ಕಚ್ಚಿದ ತಕ್ಷಣ ಲಕ್ಷಣಗಳು ಕಾಣಿಸಲ್ಲ. ಆದರೆ 3ರಿಂದ 12 ದಿನಗಳ ಅವಧಿಯೊಳಗೆ ದೇಹ ಹೊಕ್ಕ ವೈರಸ್ ಗುಣಲಕ್ಷಣಗಳನ್ನು ತೋರಿಸಲು ಆರಂಭಿಸುತ್ತದೆ. ಈ ವೈರಸ್ ಬಾಧಿಸಿದರೆ ಮರಣವನ್ನಪ್ಪುವ ಸಾಧ್ಯತೆ ತೀರಾ ಕಡಿಮೆ.

    ಆದರೆ ಗರ್ಭಿಣಿಯರು ಎಚ್ಚರದಿಂದಿರಬೇಕು. ಗರ್ಭಾವಸ್ಥೆಯ ವೇಳೆ ಝಿಕಾ ವೈರಸ್ ಕಾಣಿಸಿದರೆ ಹುಟ್ಟುವ ಮಗು ಅಂಗವೈಕಲ್ಯಕ್ಕೀಡಾಗಬಹುದು. ಕೆಲವೊಮ್ಮೆ ಗರ್ಭಪಾತಕ್ಕೂ ಕಾರಣವಾಗಬಹುದು. ಮಕ್ಕಳು ಹಾಗೂ ಹಿರಿಯರಿಗೆ ವೈರಸ್ ತಗುಲಿದರೆ ನರ ಸಂಬಂಧಿತ ಸಮಸ್ಯೆ ಕಾಡುವ ಸಾಧ್ಯತೆಯೂ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಾರಾಷ್ಟ್ರದಲ್ಲಿ 7 ವರ್ಷದ ಬಾಲಕಿಗೆ ಝಿಕಾ ವೈರಸ್

    ಮಹಾರಾಷ್ಟ್ರದಲ್ಲಿ 7 ವರ್ಷದ ಬಾಲಕಿಗೆ ಝಿಕಾ ವೈರಸ್

    ಮುಂಬೈ: ಕೊರೋನಾ ತಣ್ಣಗಾಯ್ತು ಅಂತ ನಿಟ್ಟುಸಿರು ಬಿಟ್ಟಿದ್ದ ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಭೀತಿ ಶುರುವಾಗಿದೆ.

    ಪಾಲ್ಗರ್ ಜಿಲ್ಲೆಯಲ್ಲಿ 7 ವರ್ಷದ ಬಾಲಕಿಗೆ ಝಿಕಾ ವೈರಸ್ ತಗುಲಿದೆ. ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

    2021ರ ಜುಲೈನಲ್ಲಿ ಝಿಕಾ ವೈರಸ್ ಮೊದಲ ಪ್ರಕರಣ ಪುಣೆಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದಿಂದ ಮತ್ತಷ್ಟು ಆತಂಕ ಹೆಚ್ಚಿದೆ. ಒಟ್ಟಿನಲ್ಲಿ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ಹಾಗೂ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

    ರೋಗ ಲಕ್ಷಣಗಳೇನು..?
    – ಸೌಮ್ಯ ಜ್ವರ
    – ರ್ಯಾಶ್
    – ಕೆಂಪು ಕಣ್ಣು ಅಥವಾ ಕಾಂಜಂಕ್ಟಿವಿಟಿಸ್
    – ಸ್ನಾಯು ಮತ್ತು ಕೀಲು ನೋವು
    – ತಲೆನೋವು
    – ಆಯಾಸ ಅಥವಾ ಅಸ್ವಸ್ಥತೆಯ ಸಾಮಾನ್ಯ ಭಾವನೆ
    – ಹೊಟ್ಟೆ ನೋವು

    ಈ ರೋಗಲಕ್ಷಣಗಳು ಸಾಮಾನ್ಯವಾಗಿ 2-7 ದಿನಗಳವರೆಗೆ ಇರುತ್ತವೆ. ಆದರೆ ಒಮ್ಮೊಮ್ಮೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಳ್ಳದಿರುವ ಸಾಧ್ಯಗಳು ಕೂಡ ಇವೆ.

    Live Tv
    [brid partner=56869869 player=32851 video=960834 autoplay=true]

  • ಗರ್ಭಿಣಿಯರೇ ಎಚ್ಚರ: ರಾಜ್ಯದಲ್ಲಿ ಝೀಕಾ ಸೋಂಕಿನ ಭೀತಿ- ಮುನ್ನೆಚ್ಚರಿಕಾ ಕ್ರಮಕ್ಕೆ ಆಸ್ಪತ್ರೆಗಳಿಗೆ ಸುತ್ತೋಲೆ

    ಗರ್ಭಿಣಿಯರೇ ಎಚ್ಚರ: ರಾಜ್ಯದಲ್ಲಿ ಝೀಕಾ ಸೋಂಕಿನ ಭೀತಿ- ಮುನ್ನೆಚ್ಚರಿಕಾ ಕ್ರಮಕ್ಕೆ ಆಸ್ಪತ್ರೆಗಳಿಗೆ ಸುತ್ತೋಲೆ

    ಬೆಂಗಳೂರು: ಝೀಕಾ.. ಇದು ಡೆಂಘೀ, ಮಲೇರಿಯಾಗಿಂತಲೂ ಭಯಾನಕ. ಒಂದು ವೇಳೆ ಝೀಕಾ ಸೋಂಕು ಗರ್ಭಿಣಯರಿಗೆ ಹರಡಿದ್ರೆ ಹುಟ್ಟೋ ಮಕ್ಕಳು ಜೀವನಪರ್ಯಂತ ಬುದ್ಧಿಮಾಂದ್ಯರಾಗ್ತಾರೆ. ನಮ್ಮ ರಾಜ್ಯದಲ್ಲೂ ಝೀಕಾ ಸೋಂಕಿನ ಭೀತಿ ಎದುರಾಗಿದೆ. ಅದಕ್ಕೆ ಕಾರಣ ಪಕ್ಕದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಝೀಕಾ ವೈರಸ್. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ.

    ಗರ್ಭಿಣಿಯರಿಗೆ ಜ್ವರವಿದ್ರೆ ತಕ್ಷಣವೇ ಎಲ್ಲಾ ಸ್ಯಾಂಪಲ್‍ಗಳನ್ನು ನಿಮ್ಹಾನ್ಸ್ ಮತ್ತು ಮಣಿಪಾಲ ಆಸ್ಪತ್ರೆಗೆ ಕಳುಹಿಸಿ ಝೀಕಾ ವೈರಸ್ ಟೆಸ್ಟ್ ಮಾಡಿಸುವಂತೆ ಸೂಚಿಸಿದೆ. ಈ ವೈರಸ್‍ನಿಂದ ಮಗುವಿನ ಮೆದುಳು ಬೆಳವಣಿಗೆ ಆಗದೆ ಇರೋದ್ರಿಂದ ಸ್ಕ್ಯಾನಿಂಗ್ ರಿಪೋರ್ಟ್ ಬಗ್ಗೆ ನಿಗಾ ವಹಿಸುವಂತೆ ಸೂಚಿಸಲಾಗಿದೆ.

    ಏರ್‍ಪೋರ್ಟ್ ಮತ್ತು ತಮಿಳುನಾಡು-ಕರ್ನಾಟಕ ಗಡಿ, ತಮಿಳರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ನಿಗಾ ವಹಿಸುವಂತೆ ನಿರ್ದೇಶಿಸಲಾಗಿದೆ. ಜೊತೆಗೆ ತಮಿಳರ ಏರಿಯಾಗಳಿಗೆ ತೆರಳಿ ಪರಿಶೀಲಿಸುವಂತೆಯೂ ಸೂಚಿಸಲಾಗಿದೆ. ಆದ್ರೆ ಸಮಾಧಾನಕಾರಿ ಸಂಗತಿ ಅಂದ್ರೆ ಇದುವೆರೆಗೆ ನಮ್ಮ ರಾಜ್ಯದಲ್ಲಿ ಝೀಕಾ ಪಾಸಿಟಿವ್ ಕಂಡುಬಂದಿಲ್ಲ. ಆದರೂ ಮಾದರಿ ಪರೀಕ್ಷೆಗೆ ಸೂಚಿಸಿದ್ದೇವೆ ಅಂತಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಷರೀಫ್ ಹೇಳಿದ್ದಾರೆ.