Tag: ಝೂ

  • ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ

    ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ

    ಬ್ಯಾಂಕಾಕ್: ಥಾಯ್ಲೆಂಡ್‌ನ (Thailand) ಮೃಗಾಲಯದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಸಫಾರಿ (Safari) ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ (Lions) ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿವೆ.

    ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದೆ. ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕ ಜಿಯಾನ್ ರಂಗ್ಖರಸಾಮೀ ಎಂಬಾತನ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಸುಮಾರು 15 ನಿಮಿಷಗಳ ಕಾಲ ನಡೆದ ಈ ಭೀಕರ ಘಟನೆಗೆ ನೂರಾರು ಪ್ರವಾಸಿಗರು ಸಾಕ್ಷಿಯಾಗಿದ್ದರು. ಅಲ್ಲದೆ ಕೆಲವರು ತಮ್ಮ ಮೊಬೈಲ್‌ನಲ್ಲಿ ಈ ಭೀಕರ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ: ನೇಪಾಳ ಪ್ರಧಾನಿ

    ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ಕುರಿತು ಆಘಾತ ವ್ಯಕ್ತಪಡಿಸಿರುವ ಸಫಾರಿ ವರ್ಲ್ಡ್ ಆಡಳಿತ ಮಂಡಳಿ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ಮೃಗಾಲಯದಲ್ಲಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

  • ಮೈಸೂರು ಝೂನಲ್ಲಿ ಗಂಡು ಮರಿಗೆ ಜನ್ಮ ನೀಡಿದ ಜಿರಾಫೆ

    ಮೈಸೂರು ಝೂನಲ್ಲಿ ಗಂಡು ಮರಿಗೆ ಜನ್ಮ ನೀಡಿದ ಜಿರಾಫೆ

    ಮೈಸೂರು: ಇಲ್ಲಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಜಿರಾಫೆ ಲಕ್ಷ್ಮಿಗೆ ಅಮ್ಮನಾದ ಸಂಭ್ರಮ. ಈ ಮೂಲಕ ಜಿರಾಫೆ ಮರಿಗಳ ವಿಷಯದಲ್ಲಿ ಮೈಸೂರು ಮೃಗಾಲಯ ದಾಖಲೆ ನಿರ್ಮಿಸಿದೆ.

    ಲಕ್ಷ್ಮಿ ಮತ್ತು ಭರತ್ ಜೋಡಿ ಜಿರಾಫೆಗೆ ಜುಲೈ 12ರಂದು ಒಂದು ಗಂಡು ಮರಿ ಜಿರಾಫೆ ಜನನವಾಗಿದೆ. ಲಕ್ಷ್ಮಿಗೆ ಇದು ನಾಲ್ಕನೇ ಮರಿಯಾಗಿದೆ. ಮೈಸೂರು ಮೃಗಾಲಯದಲ್ಲಿ ಇಲ್ಲಿಯವರೆಗೆ 22 ಜಿರಾಫೆ ಮರಿಗಳ (17 ಗಂಡು ಮತ್ತು 5 ಹೆಣ್ಣು) ಜನನದ ದಾಖಲೆಯನ್ನು ಹೊಂದಿದೆ. ಇದನ್ನೂ ಓದಿ: ಶುಭಾಶಯಗಳು ಮಾಮ- ನೂತನ ಸಿಎಂ ಬೊಮ್ಮಾಯಿಗೆ ಕಿಚ್ಚ ಅಭಿನಂದನೆ

    ಲಕ್ಷ್ಮಿ ತನ್ನ ಮರಿಯ ಲಾಲನೆ ಮತ್ತು ಪಾಲನೆಯನ್ನು ಮಾಡುತ್ತಿದ್ದು, ಮರಿಯು ಆರೋಗ್ಯವಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಿಎಂಗೆ ಸಿದ್ದಗಂಗಾ ಶ್ರೀ ಅಭಿನಂದನೆ

  • ಆದಾಯದಲ್ಲಿ ಏರಿಕೆ ಕಂಡ ಮೈಸೂರು ಮೃಗಾಲಯ

    ಆದಾಯದಲ್ಲಿ ಏರಿಕೆ ಕಂಡ ಮೈಸೂರು ಮೃಗಾಲಯ

    ಮೈಸೂರು: ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವುದರ ಜೊತೆ ಮೈಸೂರು ಮೃಗಾಲಯದ ಆದಾಯ ಕಳೆದ ಹಣಕಾಸು ವರ್ಷದಲ್ಲಿ ಏರಿಕೆ ಕಂಡಿದೆ.

    ಮೈಸೂರು ಮೃಗಾಲಯದ ಪ್ರವೇಶದ್ವಾರ ಶುಲ್ಕವನ್ನು ಈ ಬಾರಿ ಏರಿಸಲಾಗಿದೆ. ಅಷ್ಟೇ ಅಲ್ಲದೇ ಪ್ರಾಣಿ ದತ್ತು ಯೋಜನೆಯಲ್ಲಿ ಭಾರೀ ಏರಿಕೆ ಕಂಡಿದೆ. ಎಲ್ಲದರ ಪರಿಣಾಮ ಮೃಗಾಲಯದ ಆದಾಯದಲ್ಲಿ ಏರಿಕೆ ಕಂಡಿದೆ.

    2016-17 ಸಾಲಿನ ಹಣಕಾಸು ವರ್ಷದಲ್ಲಿ ಮೃಗಾಲಯ 19 ಕೋಟಿ ರೂ. ಆದಾಯ ಗಳಿಸಿತ್ತು. 2017-18 ಸಾಲಿನ ಹಣಕಾಸು ವರ್ಷದಲ್ಲಿ 23.10 ಕೋಟಿ ರೂ. ಆದಾಯ ಗಳಿಸಿದೆ. ಒಂದೇ ವರ್ಷದಲ್ಲಿ ಒಟ್ಟು 3 ಕೋಟಿ ರೂ. ಆದಾಯದಲ್ಲಿ ಏರಿಕೆ ಕಂಡಿದೆ.

    ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ 1 ಲಕ್ಷದ 30 ಸಾವಿರ ಮಂದಿ ಮೃಗಾಲಯಕ್ಕೆ ಭೇಟಿ ನೀಡಿದ್ದರೆ ಈ ವರ್ಷ ಮಾರ್ಚ್ ತಿಂಗಳಲ್ಲಿ 1 ಲಕ್ಷದ 60 ಸಾವಿರ ಮಂದಿ ಭೇಟಿ ನೀಡಿದ್ದಾರೆ. ಮೇ ತಿಂಗಳ ಪ್ರವಾಸಿಗರ ಸಂಖ್ಯೆಯಲ್ಲೂ ಕಳೆದ ವರ್ಷಕ್ಕಿಂತ 60 ಸಾವಿರ ಹೆಚ್ಚಳವಾಗಿದೆ. 2017-18 ಸಾಲಿನಲ್ಲಿ 35 ಲಕ್ಷ ಮಂದಿ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.

    ಮೃಗಾಲಯಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಸಿಗದ ಕಾರಣ 17 ವರ್ಷಗಳಲ್ಲಿ 4,041 ಪ್ರಾಣಿಗಳನ್ನು 3,149 ವ್ಯಕ್ತಿಗಳು ದತ್ತು ಸ್ವೀಕರಿಸಿದ್ದಾರೆ. 17 ವರ್ಷಗಳ ಹಿಂದೆ ಆರ್ಥಿಕ ನಷ್ಟದಿಂದಾಗಿ ಮೈಸೂರು ಮೃಗಾಲಯ ಮುಚ್ಚುವ ಹಂತ ತಲುಪಿತ್ತು. ಹೀಗಾಗಿ, ಅಂದಿನ ಕಾರ್ಯನಿರ್ವಾಹಕ ನಿರ್ದೇಶಕ ಕುಮಾರ ಪುಷ್ಕರ್ ಅವರು ಪ್ರಾಣಿಗಳ ದತ್ತು ಯೋಜನೆ ಆರಂಭಿಸಿದ್ದರು. ಈ ಯೋಜನೆ ಅಸ್ತಿತ್ವಕ್ಕೆ ಬಂದ 2001-02ನೇ ಸಾಲಿನಲ್ಲಿ 40 ಸಾವಿರ ಲಭಿಸಿತ್ತು. ಅಲ್ಲಿಂದ ದತ್ತು ಪಡೆಯುವವರ ಸಂಖ್ಯೆ ಹಾಗೂ ಆದಾಯ ಹೆಚ್ಚಾಗುತ್ತಿದೆ. ಒಂದು ಹುಲಿ ನಿರ್ವಹಣೆಗೆ ವರ್ಷಕ್ಕೆ 4 ಲಕ್ಷ ರೂ. ಖರ್ಚಾಗುತ್ತದೆ.

  • ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಝೂ ನಿರ್ಮಿಸಿದ್ರು

    ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಝೂ ನಿರ್ಮಿಸಿದ್ರು

    ಬಳ್ಳಾರಿ: ಅದು ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶ. ಹೀಗಾಗಿ ಅಲ್ಲಿ ಏನೇ ಮಾಡಿದರೂ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿ ಬೇಕೇ ಬೇಕು. ಆದರೆ ವನ್ಯ ಮೃಗಾಲಯದ ಅಧಿಕಾರಿಗಳು ಅರಣ್ಯ ಇಲಾಖೆಯ ಅನುಮತಿಯೇ ಪಡೆಯದೇ ಝೂ ವೊಂದು ನಿರ್ಮಿಸಿದ್ದಾರೆ.

    ಅರಣ್ಯ ಇಲಾಖೆಯ ಅನುಮತಿ ಪಡೆಯದೇ ನೂರಾರು ಎಕರೆ ಪ್ರದೇಶದಲ್ಲಿ ನಿರ್ಮಿಸಿದ ಝೂ ವನ್ನು ಸ್ವಂತ ಅರಣ್ಯ ಇಲಾಖೆ ಸಚಿವರು ಮತ್ತು ಸಿಎಂ ಸಿದ್ದರಾಮಯ್ಯನವರೇ ಉದ್ಘಾಟನೆ ಮಾಡುತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

    ಇದು ಹೊಸಪೇಟೆ ತಾಲೂಕಿನ ಕಮಲಾಪುರ ಬಳಿಯಿರುವ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್. ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶಕ್ಕೆ ಸೇರಿದ 149 ಹೆಕ್ಟೇರ್ ಭೂಮಿಯಲ್ಲಿಗ ಮೃಗಾಲಯ ನಿರ್ಮಿಸಿದ್ದಾರೆ. ಆದರೆ ಇದಕ್ಕೆ ಇದುವರೆಗೂ ಕೇಂದ್ರ ಅರಣ್ಯ ಇಲಾಖೆ ಅನುಮತಿ ದೊರೆತಿಲ್ಲ. ಆದರೂ ತರಾತುರಿಯಲ್ಲಿ ಇಂದು ಮುಖ್ಯಮಂತ್ರಿಗಳು ಮೃಗಾಲಯವನ್ನು ಉದ್ಘಾಟಿಸುತ್ತಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಪರಿಸರವಾದಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.

    ಈ ಸಂಬಂಧ ಹೈಕೋರ್ಟ್ ಸಹ 11 ಜನರಿಗೆ ನೋಟಿಸ್ ಜಾರಿ ಮಾಡಿದೆ. ಇದೇ ನವಂಬರ್ 16 ಕ್ಕೆ ವಿಚಾರಣೆ ನಡೆಸಲಿದೆ. ಆದರೆ ಇದ್ಯಾವುದಕ್ಕೂ ಕಿಮ್ಮತ್ತು ನೀಡದೆ ಸ್ವತಃ ಅರಣ್ಯ ಸಚಿವರು ಉದ್ಘಾಟನೆ ಉಸ್ತುವಾರಿ ವಹಿಸಿದ್ದಾರೆ. ಕಮಲಾಪುರ ಝೂಗೆ ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ ಅನ್ನೋದನ್ನು ಮೃಗಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.