Tag: ಟಿಎಂಸಿ

  • ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    – ಗಡಿ ಕಾಯುವಲ್ಲಿ, ನುಸುಳುವಿಕೆ ತಡೆಯುವಲ್ಲಿ ಶಾ ವಿಫಲ ಅಂತ ವಾಗ್ದಾಳಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ.

    ಭಾರತಕ್ಕೆ ಬಾಂಗ್ಲಾ ಪ್ರದೇಶಗಳ ಒಳನುಸುಳುವಿಕೆ (Bangladeshi immigrants) ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ಅಮಿತ್‌ ಶಾ ತಲೆಯನ್ನು ಕತ್ತರಿಸಿ, ಪ್ರದರ್ಶನಕ್ಕಾಗಿ ಟೇಬಲ್‌ ಮೇಲೆ ಇಡಬೇಕು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ಒಂದು ವೇಳೆ ಭಾರತದ ಗಡಿಯನ್ನ (Indian Border) ರಕ್ಷಣೆ ಮಾಡಲು ಸಾಧ್ಯವಾಗದಿದ್ರೆ, ನೂರಾರು ಸಂಖ್ಯೆಯಲ್ಲಿ ನುಸುಳುಕೋರರು ಒಳನುಸುಳುತ್ತಿದ್ದರೆ, ನಮ್ಮ ಮಹಿಳೆಯರನ್ನ ಅಗೌರವಿಸುತ್ತಿದ್ದರೆ ಅಥವಾ ನಮ್ಮ ಭೂಮಿಯನ್ನ ಅತಿಕ್ರಮಿಸಿಕೊಳ್ಳುತ್ತಿದ್ದರೆ? ಅಮಿತ್‌ ಶಾ (Amit Shah) ಅವರ ತಲೆ ಕತ್ತರಿಸಿ ಟೇಬಲ್‌ ಮೇಲೆ ಪ್ರದರ್ಶನಕ್ಕಿಡುವುದು ನಿಮ್ಮ ಕರ್ತವ್ಯ. ಏಕೆಂದರೆ ಗಡಿ ಕಾಯಲು, ನುಸುಳುವಿಕೆ ತಡೆಯಲು ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದರು.

    ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ಮೋದಿಯ ಕೆಂಪುಕೋಟೆ ಭಾಷಣ ಉಲ್ಲೇಖಿಸಿದ ಮಹುವಾ, ʻಮೋದಿ ಕೆಂಪು ಕೋಟೆಯಲ್ಲಿ ನಿಂತು ನುಸುಳುಕೋರು ಜನಸಂಖ್ಯಾ ಬದಲಾವಣೆ ಮಾಡುತ್ತಿದ್ದಾರೆ ಅಂತ ಹೇಳುತ್ತಿದ್ದರು. ಇದನ್ನ ಗಂಭೀರವಾಗಿ ಪರಿಗಣಿಸದೇ ಗೃಹಸಚಿವರು ಮುಂದಿನ ಸಾಲಿನಲ್ಲಿ ನಿಂತು ಚಪ್ಪಾಳೆ ತಟ್ಟುತ್ತಿದ್ದರು. ಗಡಿಯಲ್ಲಿ ಭದ್ರತಾ ಪಡೆಗಳಿದ್ದೂ ಒಳನುಸುಳುವಿಕೆ ಏಕೆ ಮುಂದುವರಿಯುತ್ತಿದೆ? ಅದರಲ್ಲೂ ಪಶ್ಚಿಮ ಬಂಗಾಳದ ಗಡಿಯಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನ ತಡೆಯುವಲ್ಲಿ ಶಾ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ ಕಳವಳ

    ಕೆರಳಿದ ಕೇಸರಿ ಪಡೆ
    ಇನ್ನೂ ಮಹುವಾ ಮೊಯಿತ್ರಾ ಅವರ ಹೇಳಿಕೆಯಿಂದ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಮೊಯಿತ್ರಾ ಲಜ್ಜೆಗೆಟ್ಟ ಹೇಳಿಕೆ ನೀಡಿದ್ದಾರೆ. ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ಪ್ರದೀಪ್‌ ಭಂಡಾರಿ, ಇದು ರಾಜಕೀಯ ಮೀರಿದ ಅಪ್ಪಟ ದ್ವೇಷ ಭಾಷಣ, ಇದರಲ್ಲಿ ವಿಷ ತುಂಬಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

  • ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಕೋಲ್ಕತ್ತಾ: ಸಿಎಂ ಮಮತಾ ಬ್ಯಾನರ್ಜಿಯ (Mamata Banergee) ಟಿಎಂಸಿಯಲ್ಲಿ ನಾಯಕರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ನಾಯಕರ ಮಾತಿನ ಚಕಮಕಿಯ ವಾಟ್ಸಪ್‌ ಚಾಟ್‌ನ್ನು ಬಿಜೆಪಿಯ ಅಮಿತ್‌ ಮಾಳವೀಯ ಬಹಿರಂಗಪಡಿಸಿದ್ದಾರೆ.

    ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕೀರ್ತಿ ಆಜಾದ್ ನಡುವಿನ ಮೆಸೇಜ್ ವೈರಲ್ ಆಗಿದೆ. ಮಹುವಾ ಮೊಯಿತ್ರಾ ಉಲ್ಲೇಖಿಸಿ ಕಲ್ಯಾಣ್‌ ಬ್ಯಾನರ್ಜಿ ಮೆಸೇಜ್ ಮಾಡಿದ್ದಾರೆ. ಇಬ್ಬರು ನಾಯಕರ ಕದನದಲ್ಲಿ ಮಮತಾ ಬ್ಯಾನರ್ಜಿ ಮಧ್ಯಪ್ರವೇಶ ಮಾಡಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನೀಡದಂತೆ ಸೂಚನೆ ನೀಡಿದ್ದಾರೆ. ಆದರೆ, ಟಿಎಂಸಿ ನಾಯಕರ ನಡುವಿನ ತಿಕ್ಕಾಟವನ್ನು ಹಿರಿಯ ಸಂಸದ ಸೌಗತಾ ರಾಯ್ ಖಚಿತಪಡಿಸಿದ್ದಾರೆ.

    ನಾನು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಈ ಮಹಿಳಾ ಸಂಸದೆ ಚುನಾವಣಾ ಆಯೋಗದ ಕಚೇರಿಯ ಹೊರಗೆ ಭದ್ರತಾ ಸಿಬ್ಬಂದಿಯನ್ನು ಸಂಪರ್ಕಿಸಿ ನನ್ನನ್ನು ಬಂಧಿಸುವಂತೆ ಕೇಳುತ್ತಿದ್ದರು. ನನ್ನನ್ನು ಜೈಲಿಗೆ ಕಳುಹಿಸಲು ಅವರು ಯಾರು? ಅವರು ನನ್ನ ಮೇಲೆ ನಿಂದನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಹೋರಾಡುವುದು ನಾನೇ. ನಾನು ನಿರ್ದಿಷ್ಟ ಕೈಗಾರಿಕಾ ಸಂಸ್ಥೆಯ ಬಗ್ಗೆ ಮಾತ್ರ ಗೀಳು ಹೊಂದಿರುವ ವ್ಯಕ್ತಿಯಲ್ಲ ಎಂದು ಕಲ್ಯಾಣ್‌ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

    ಮಹಿಳಾ ಸಂಸದೆ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಅವರು ಯಾರನ್ನಾದರೂ ಅವಮಾನಿಸಬಹುದು ಎಂದರ್ಥವಲ್ಲ ಎಂದು ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

  • ಅದಾನಿ ವಿರುದ್ಧ ಸಂಸತ್‌ ಹೋರಾಟದಲ್ಲಿ ಬಿರುಕು – INDIA ಸಭೆಗೆ ಟಿಎಂಸಿ ಗೈರು

    ಅದಾನಿ ವಿರುದ್ಧ ಸಂಸತ್‌ ಹೋರಾಟದಲ್ಲಿ ಬಿರುಕು – INDIA ಸಭೆಗೆ ಟಿಎಂಸಿ ಗೈರು

    ನವದೆಹಲಿ: ಅದಾನಿ ವಿಚಾರವನ್ನು (Adani Case) ಇಟ್ಟುಕೊಂಡು ಸಂಸತ್‌ ಸದನದಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಿರ್ಧಾರಕ್ಕೆ ಟಿಎಂಸಿ (TMC) ವಿರೋಧ ವ್ಯಕ್ತಪಡಿಸಿದೆ.

    ಇಂದು ಸದನ ನಡೆಯುತ್ತಿದ್ದಂತೆ ಕಾಂಗ್ರೆಸ್‌ ಸದಸ್ಯರು ಸೇರಿಂತೆ INDIA ಒಕ್ಕೂಟದ ಸದಸ್ಯರು ಅದಾನಿ ವಿರುದ್ಧ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಇದರ ಜೊತೆ ವಿವಿಧ ವಿಷಯಗಳನ್ನು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೊನೆಗೆ ಲೋಕಸಭೆ ಮತ್ತು ರಾಜ್ಯ ಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

    ಸದನ ನಡೆಯುವ ಮೊದಲು ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಅವರ ಕಚೇರಿಯಲ್ಲಿ INDIA ಒಕ್ಕೂಟದ ಸದಸ್ಯರು ಸಭೆ ನಡೆಸಿದರು. ಈ ಸಭೆಗೆ ಟಿಎಂಸಿ ಸದಸ್ಯರು ಗೈರಾಗಿದ್ದರು.

    ಮೂಲಗಳ ಪ್ರಕಾರ ಬೆಲೆ ಏರಿಕೆ, ಮಣಿಪುರ ಘರ್ಷಣೆ, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕು. ಆದರೆ ಕಾಂಗ್ರೆಸ್‌ ಕೇವಲ ಅದಾನಿ ವಿಚಾರವನ್ನು ಮುಂದಿಟ್ಟುಕೊಂಡು ಗದ್ದಲ ಎಬ್ಬಿಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡ ಟಿಎಂಸಿ ಸದಸ್ಯರು ಸಭೆಗೆ ಹಾಜರಾಗಲಿಲ್ಲ ಎಂದು ವರದಿಯಾಗಿದೆ.  ಇದನ್ನೂ ಓದಿ: ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ

    ಕಳೆದ ಸೋಮವಾರದಿಂದ ಸಂಸತ್‌ ಅಧಿವೇಶನ ಆರಂಭವಾಗಿದೆ. ಪ್ರತಿ ದಿನವೂ ಕಾಂಗ್ರೆಸ್‌ ಅದಾನಿ ವಿಚಾರಕ್ಕೆ ಜೆಪಿಸಿ ತನಿಖೆ ನಡೆಸಬೇಕೆಂದು ಪಟ್ಟು ಹಿಡಿದಿದೆ. ಚಳಿಗಾಲದ ಅಧಿವೇಶನದ ಡಿ. 20ಕ್ಕೆ ಕೊನೆಯಾಗಲಿದೆ.

     

  • ನನಗೂ ಮಗಳಿದ್ದಾಳೆ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ವಿರುದ್ಧ ಹೋರಾಟಕ್ಕೆ ಟಿಎಂಸಿ ಸಂಸದ ಬೆಂಬಲ

    ನನಗೂ ಮಗಳಿದ್ದಾಳೆ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ವಿರುದ್ಧ ಹೋರಾಟಕ್ಕೆ ಟಿಎಂಸಿ ಸಂಸದ ಬೆಂಬಲ

    ಕೋಲ್ಕತ್ತಾ: ನನಗೂ ಮಗಳು, ಮೊಮ್ಮಗಳಿದ್ದಾಳೆ. ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ವಿರುದ್ಧದ ಹೋರಾಟಕ್ಕೆ ಟಿಎಂಸಿ ರಾಜ್ಯಸಭಾ ಸಂಸದ ಸುಕೇಂದು ಶೇಖರ್‌ ರಾಯ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

    ನಾಳೆ ನಾನು ಪ್ರತಿಭಟನಾಕಾರರೊಂದಿಗೆ ಸೇರಲಿದ್ದೇನೆ. ಲಕ್ಷಾಂತರ ಬಂಗಾಳಿ ಕುಟುಂಬಗಳಂತೆ ನನಗೆ ಮಗಳು ಮತ್ತು ಪುಟ್ಟ ಮೊಮ್ಮಗಳು ಇದ್ದಾರೆ. ಮಹಿಳೆಯರ ವಿರುದ್ಧದ ಕ್ರೌರ್ಯ ಸಾಕು. ನಾವು ಒಟ್ಟಾಗಿ ವಿರೋಧಿಸೋಣ ಎಂದು ರಾಯ್‌ ಎಕ್ಸ್‌ನಲ್ಲಿ ಮಂಗಳವಾರ ಪೋಸ್ಟ್‌ ಹಾಕಿದ್ದರು.

    ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಬರ್ಬರ ಹತ್ಯೆ ಮತ್ತು ಅತ್ಯಾಚಾರದ ವಿರುದ್ಧ ದೇಶಾದ್ಯಂತ ವೈದ್ಯರು ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತರುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವ ವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

    ತೀವ್ರ ಪ್ರತಿಭಟನೆಯ ಪರಿಣಾಮವಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಮಂಗಳವಾರ ಈ ಆದೇಶ ಹೊರಬಿದ್ದ ಬೆನ್ನಲ್ಲೇ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ತಲಾ ಪೊಲೀಸ್‌ ಠಾಣೆಗೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪೊಲೀಸರು ಸಂಗ್ರಹಿಸಿರುವ ತನಿಖಾ ವರದಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಿಬಿಐಗೆ ಒಪ್ಪಿಸುವಂತೆ ಸೂಚಿಸಲಾಗಿದೆ.

  • Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ (Assembly Bypoll Result) ಪ್ರಕಟವಾಗಿದ್ದು, ಇಂಡಿಯಾ ಒಕ್ಕೂಟ (INDIA Alliance) 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಆಡಳಿತ ಪಕ್ಷದ ಭಾಗವಾಗಿರುವ ಬಿಜೆಪಿ (BJP) ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಒಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ.

    ಪಶ್ಚಿಮ ಬಂಗಾಳದ (West Bengal) 4, ಹಿಮಾಚಲ ಪ್ರದೇಶದ 3, ಉತ್ತರಾಖಂಡದ 2 ಹಾಗೂ ಪಂಜಾಬ್‌, ಮಧ್ಯಪ್ರದೇಶ, ಬಿಹಾರ ತಮಿಳುನಾಡಿನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಪೈಕಿ ಇಂಡಿಯಾ ಒಕ್ಕೂಟ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್‌, ಟಿಎಂಸಿ, ಆಮ್‌ ಆದ್ಮಿ ಪಕ್ಷ ಹಾಗೂ ದ್ರಾವೀಡ ಮುನ್ನೇತ್ರ ಕಳಗಂ (DMK) ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

    ಈ ಪೈಕಿ ಪಶ್ಚಿಮ ಬಂಗಾಳದ ನಾಲ್ಕು ಸ್ಥಾನಗಳು ಟಿಎಂಸಿ ಪಾಲಾಗಿವೆ. ಹಿಮಾಚಲ ಪ್ರದೇಶದ (Himachala Pradesh) ಮೂರು ಸ್ಥಾನಗಳ ಪೈಕಿ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಅಲ್ಲದೇ ಉತ್ತರಾಖಂಡದ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದೆ. ಪಂಜಾಬ್‌ ಕ್ಷೇತ್ರ ಎಎಪಿ ಪಾಲಾದರೆ, ತಮಿಳುನಾಡಿನ ಒಂದು ಕ್ಷೇತ್ರ ಡಿಎಂಕೆ ಗೆದ್ದುಕೊಂಡಿದೆ. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಬಿಜೆಪಿಗೆ 2 ಸ್ಥಾನ:
    2024ರ ಲೋಕಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ವಿಧಾನಸಭಾ ಉಪಚುನಾವಣೆಯಲ್ಲಿ ಕೇವಲ 2 ಕ್ಷೇತ್ರಗಳನ್ನು ಮಾತ್ರ ಗೆದ್ದುಕೊಂಡಿದೆ. ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: 200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ

    ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ:
    ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಿಎಂಕೆ ಪಕ್ಷದ ಅಣ್ಣಿಯೂರ್‌ ಶಿವ ಅವರು ಸುಮಾರು 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದರೆ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಡೆಹ್ರಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್‌ ಭಾರತ್‌ ನಿಧಿ’ – ಏನಿದು ಯೋಜನೆ?

  • Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!

    Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!

    – ಆಡಳಿತ ಎನ್‌ಡಿಎ ಕೂಟಕ್ಕೆ ಭಾರೀ ಹಿನ್ನಡೆ

    ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶವಿಂದು (Assembly ByPoll Result) ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಗೆಲುವು (INDIA Alliance) ಸಾಧಿಸಿದ್ದು, 7 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

    13 ಕ್ಷೇತ್ರಗಳ ಪೈಕಿ ಈಗಾಗಲೇ ಹಲವು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌ 2ರಲ್ಲಿ ಗೆಲುವು ಸಾಧಿಸಿದ್ದು 2 ಸ್ಥಾನಗಳಲ್ಲಿ ಮುಂದಿದೆ. ಟಿಎಂಸಿ (TMC) 3 ಸ್ಥಾನ ಗೆದ್ದಿದ್ದು, 1 ಕ್ಷೇತ್ರದಲ್ಲಿ ಮುಂದಿದೆ. ಪಶ್ಚಿಮ ಜಾರ್ಜಂಡ್‌ ಕ್ಷೇತ್ರವನ್ನು ಆಪ್‌ (AAP) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ತಮಿಳುನಾಡಿನ ಒಂದು ಕ್ಷೇತ್ರದಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ʻಮಹಾʼ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!

    ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಕಂಡಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿದಿದೆ. ಇಂಡಿಯಾ ಮೈತ್ರಿಕೂಟ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್, ಡೆಹ್ರಾ ಕ್ಷೇತ್ರದಿಂದ ಗೆದ್ದಿದ್ದಾರೆ. ಮತ್ತೊಂದು ಕ್ಷೇತ್ರ ನಲಗಢದಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಮುನ್ನಡೆ ಕಾಯ್ದುಕೊಂಡಿದ್ದಾರೆ.

  • ಹೊಸ ಕ್ರಿಮಿನಲ್‌ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್‌ ದಾಖಲು

    ಹೊಸ ಕ್ರಿಮಿನಲ್‌ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್‌ ದಾಖಲು

    ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 ಅಡಿಯಲ್ಲಿ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ 2 ಅಂತಸ್ತಿನ ಕಟ್ಟಡ ಕುಸಿತ – ಮೂವರು ಸಾವು, 3 ಮಂದಿಗೆ ಗಾಯ

    ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. ನಂತರ ಈಚೆಗೆ ನಡೆದ ಚುನಾವಣೆಯಲ್ಲಿ ಸುಮಾರು 56,000 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ಗುರುವಾರ ಮಹಿಳಾ ಆಯೋಗದ ವೀಡಿಯೊಗಳಿಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶುಕ್ರವಾರದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿತ್ತು. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್‌ ಶಿಂಧೆ ಬಣದ ನಾಯಕನ ಪುತ್ರ ಆರೋಪಿ

  • Exit Polls: ಪಶ್ಚಿಮ ಬಂಗಾಳದಲ್ಲಿ ದೀದಿ ಹಿಂದಿಕ್ಕಿದ ಮೋದಿ

    Exit Polls: ಪಶ್ಚಿಮ ಬಂಗಾಳದಲ್ಲಿ ದೀದಿ ಹಿಂದಿಕ್ಕಿದ ಮೋದಿ

    ನವದೆಹಲಿ: 2019 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ಬಿಜೆಪಿ ಈ ಬಾರಿಯೂ ಅದೇ ಓಟವನ್ನು ಮುಂದುವರಿಸಿದೆ. ಈ ಸಲ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ್ನು ಹಿಂದಿಕ್ಕಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

    ಜನ್‌ ಕಿ ಬಾತ್‌ ಬಿಜೆಪಿಗೆ 22-26 ಹಾಗೂ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) 16-18, ಕಾಂಗ್ರೆಸ್‌ಗೆ 0-2 ಸ್ಥಾನಗಳನ್ನು ನೀಡಿದೆ.

    ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್: ಬಿಜೆಪಿ 21, ಟಿಎಂಸಿ 19, ಕಾಂಗ್ರೆಸ್‌ – 2.

    ಮ್ಯಾಟ್ರಿಜ್: ಬಿಜೆಪಿ 21-25, ಟಿಎಂಸಿ 16-20, ಕಾಂಗ್ರೆಸ್‌ 0-1.

    2019 ರಲ್ಲಿ ಬಂಗಾಳದ 42 ಸ್ಥಾನಗಳ ಪೈಕಿ ಬಿಜೆಪಿ 18 ಹಾಗೂ ಟಿಎಂಸಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಈ ಬಾರಿ ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. 22 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

    ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ 2 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ.

  • ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ವಿರುದ್ಧ ಕ್ರಮಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ

    ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ವಿರುದ್ಧ ಕ್ರಮಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ

    ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ (Kolkata High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ (BJP) ಕೋರ್ಟ್ ನಿರ್ಬಂಧ ಹೇರಿದೆ.

    ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್‌ (TMC) ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು (BJP Advertisement) ಪ್ರಕಟಿಸಿತ್ತು. ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ (ECI) ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು. ಇದನ್ನೂ ಓದಿ: ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳಲು ಸಹಕರಿಸಬೇಕು: ಸಿಎಂ ಮನವಿ

    ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು. ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆ, ಟಿಎಂಸಿಯ ಹಕ್ಕುಗಳು ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು. ಇದನ್ನೂ ಓದಿ: ಜೈಲಲ್ಲಿ ದೇವರಾಜೇಗೌಡ ಜೀವಕ್ಕೆ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

    ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಮತ್ತು ಪ್ರಕಟಣೆಗಳು ಸಂಪೂರ್ಣ ಅವಹೇಳನಕಾರಿ ಮತ್ತು ಪ್ರತಿಸ್ಪರ್ಧಿಗಳನ್ನು ಅವಮಾನಿಸುವ ಮತ್ತು ವೈಯಕ್ತಿಕವಾಗಿ ದಾಳಿ ನಡೆಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ, ಮುಕ್ತ, ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ನಿರ್ಬಂಧ ವಿಧಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್‌ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?

  • ಲೂಟಿ, ಹಗರಣ ಮಾಡೋದೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿದೆ: ಟಿಎಂಸಿ ವಿರುದ್ಧ ಮೋದಿ ಕೆಂಡ

    ಲೂಟಿ, ಹಗರಣ ಮಾಡೋದೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿದೆ: ಟಿಎಂಸಿ ವಿರುದ್ಧ ಮೋದಿ ಕೆಂಡ

    ಕೋಲ್ಕತ್ತಾ: ಕಾಂಗ್ರೆಸ್‌ ಸೇರಿದಂತೆ ಇಂಡಿಯಾ ಒಕ್ಕೂಟ (INDIA Block) ರಹಸ್ಯವಾಗಿ ಭ್ರಷ್ಟಾಚಾರಗಳಲ್ಲಿ ತೊಡಗಿದ್ದರೆ, ತೃಣಮೂಲ ಕಾಂಗ್ರೆಸ್‌ ಪಕ್ಷ ಹಗರಣ ಮಾಡುವುದನ್ನೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ (Narendra Modi) ಕಿಡಿ ಕಾರಿದ್ದಾರೆ.

    4ನೇ ಹಂತದ ಮತದಾನಕ್ಕೂ ಮುನ್ನಾದಿನ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ನಾಲ್ಕು ಚುನಾವಣಾ ರ‍್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಸರ್ಕಾರ ಹಾಗೂ ಇಂಡಿಯಾ ಒಕ್ಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿಯಂಥ ವ್ಯಕ್ತಿಯೊಂದಿಗೆ ಚರ್ಚಿಸಲು ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿಯೇ? – ಸ್ಮೃತಿ ಇರಾನಿ ವ್ಯಂಗ್ಯ

    ಹಗರಣ ಮಾಡುವುದನ್ನೇ ಟಿಎಂಸಿ ಪೂರ್ಣ ಸಮಯದ ವ್ಯವಹಾರವನ್ನಾಗಿ ಮಾಡಿಕೊಂಡಿದೆ. ಕಾಂಗ್ರೆಸ್ (Congress), ಇಂಡಿಯಾ ಒಕ್ಕೂಟ ಯಾವುದೇ ಪಕ್ಷವಾಗಿರಲಿ. ಅವರೆಲ್ಲರಿಗೂ ಭ್ರಷ್ಟಾಚಾರ ಮಾಡುವುದು ಸಾಮಾನ್ಯ ಗುಣವಾಗಿಬಿಟ್ಟಿದೆ. ಇಂಡಿಯಾ ಒಕ್ಕೂಟದಲ್ಲಿ ಹೆಚ್ಚಿನ ಮಿತ್ರಪಕ್ಷಗಳು ರಹಸ್ಯವಾಗಿ ಹಗರಣಗಳನ್ನು ಮಾಡುತ್ತಿದ್ದರೆ, ಟಿಎಂಸಿ ಮುಕ್ತ ಉದ್ಯಮವನ್ನಾಗಿಯೇ ಅದನ್ನು ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    25,000 ಸಾವಿರ ಶಿಕ್ಷಕರ ನೇಮಕಾತಿ ಹಗರಣ, ಪೊಂಜಿ ಹಗರಣ, ಕಲ್ಲಿದ್ದಲು ಹಗರಣ, ಚಿಟ್ ಫಂಡ್ ಹಗರಣ, ಪಡಿತರ ಹಗರಣ ಮಾಡಿರುವ ಟಿಎಂಸಿ ರೈತರನ್ನೂ ಬಿಡದೇ ಲೂಟಿ ಮಾಡಿದೆ ಎಂದು ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ – ಚುನಾವಣಾಧಿಕಾರಿಗಳ ವಿರುದ್ಧ `ಕೈ’ ಕಿಡಿ!

    ಮೋದಿ ಸರ್ಕಾರವಿಂದು ಪ್ರತಿಯೊಬ್ಬ ನಾಗರಿಕನ ಮನೆ ಬಾಗಿಲನ್ನು ತಲುಪುತ್ತಿದೆ. ಈ ಹಿಂದಿನ ಪಕ್ಷಗಳು ನಿಮ್ಮ ಮನೆ ಬಾಗಿಲಿಗೆ ಬಂದು ಮತ ಕೇಳುತ್ತಿದ್ದರು. ಗೆದ್ದು ಅಧಿಕಾರಕ್ಕೆ ಬಂದ ಮೇಲೆ ನೀವು ಅಲೆದಾಡಬೇಕಿತ್ತು. ಸಹಾಯ ಕೇಳಿಕೊಂಡು ಮನೆ ಬಳಿ ಹೋದರೆ ನಿಮ್ಮ ಗುರುತೇ ಅವರಿಗೆ ಸಿಗುತ್ತಿರಲಿಲ್ಲ. ಆದ್ರೆ ಇಂತಹ ಆಲೋಚನೆಗಳನ್ನು ಮೋದಿ ಸರ್ಕಾರ ಬದಲಾಯಿಸಿದೆ. ಪ್ರತಿಯೊಬ್ಬ ನಾಗರಿಕನ ಮನೆ ಬಾಗಿಲನ್ನೂ ತಲುಪುತ್ತಿದೆ. ಇದೇ ದೇಶದ ಅಭಿವೃದ್ಧಿಗೆ ಕಾರಣ ಎಂದು ಹೇಳಿದ್ದಾರೆ.

    ಸೋಮವಾರ (ಮೇ 13) 4ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 96 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌