Tag: ಟಿಎಂಸಿ

  • Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿದ್ದು, ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

    ಗುರುವಾರ ಸಂಸತ್ತಿನ ನೈತಿಕ ಸಮಿತಿಯ ಮುಂದೆ ಅಫಿಡವಿಟ್ ಸಲ್ಲಿಸಿರುವ ಅವರು ಮಹುವಾ ಮೊಯಿತ್ರಾ ಪರವಾಗಿ ಪ್ರಶ್ನೆ ಪೋಸ್ಟ್‌ ಮಾಡಲು ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ನೀಡಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಬಿಜೆಪಿ ಸಂಸದ ನಿಶಿಕಾಂತ್ ದುಬೆ

    ಟಿಎಂಸಿಯ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪ ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

    ಸ್ನೇಹಿತರ ಸಲಹೆಯ ಮೇರೆಗೆ ರಾಷ್ಟ್ರಮಟ್ಟದಲ್ಲಿ ಬಹಳ ಬೇಗ ಹೆಸರು ಗಳಿಸಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ವಂಶಾವಳಿ, ನಿಗಮ ಮಂಡಳಿಗಳ ರೇಟ್ ಕಾರ್ಡ್ ರಿಲೀಸ್

    ದುಬಾರಿ ಐಷಾರಾಮಿ ವಸ್ತುಗಳನ್ನು ಉಡುಗೊರೆ, ಬಂಗಲೆಯ ನವೀಕರಣಕ್ಕೆ ಸಹಾಯ, ರಜಾ ದಿನಗಳ ಪ್ರಯಾಣ ವೆಚ್ಚ ಸೇರಿದಂತೆ ಮಹುವಾ ಮೊಯಿತ್ರಾ ನನಗೆ ಪದೇ ಪದೇ ಈಡೇರಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು ಮತ್ತು ಹಲವಾರು ಅನುಕೂಲಗಳನ್ನು ಕೇಳುತ್ತಿದ್ದರು. ಅಷ್ಟೇ ಅಲ್ಲದೇ ತನ್ನ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಎಂದು ಉಲ್ಲೇಖಿಸಿದ್ದಾರೆ.

    ದರ್ಶನ್ ಹಿರಾನಂದಾನಿ ಅಫಿಡವಿಟ್‌ ಸಲ್ಲಿಸಿದ ಬೆನ್ನಲ್ಲೇ ಮಹುವಾ ಮೊಯಿತ್ರಾ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ಮತ್ತು ನೈತಿಕ ಸಮಿತಿಯ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ) ಸದಸ್ಯರು ನನ್ನನ್ನು ಕರೆದರೆ ಮತ್ತು ಕೇಳಿದಾಗ ಉತ್ತರಿಸಲು ನಾನು ಸಿದ್ದನಿದ್ದೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ,ಆಸಕ್ತಿ ಇಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ

    ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ

    ಕೋಲ್ಕತ್ತಾ: ಅಕ್ರಮ ನೇಮಕಾತಿ (Recruitment Scam) ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ (West Bengal) ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ.

    ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ರಾಜ್ಯದ ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಿತ್ತಳೆ ಬಣ್ಣದ ವಂದೇ ಭಾರತ್ ರೈಲಿನ ಹಿಂದಿದೆ ವೈಜ್ಞಾನಿಕ ಚಿಂತನೆ – ರಾಜಕೀಯ ಅಲ್ಲ: ಅಶ್ವಿನಿ ವೈಷ್ಣವ್

    ಭದ್ರತಾ ಪಡೆಗಳ ತುಕಡಿಯೊಂದಿಗೆ ತನಿಖಾಧಿಕಾರಿಗಳು ಘೋಷ್ ಅವರ ಮನೆ ಮೇಲೆ ಬೆಳಿಗ್ಗೆ 6:10 ರ ಸುಮಾರಿಗೆ ದಾಳಿ ನಡೆಸಿದ್ದಾರೆ. ತನಿಖಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ 12 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಘೋಷ್ ಅವರು ಮನೆಯಲ್ಲಿದ್ದರೆ ಎಂಬುದು ತಿಳಿದು ಬಂದಿಲ್ಲ.

    ಮಧ್ಯಮಗ್ರಾಮದ ಟಿಎಂಸಿ (TMC) ಶಾಸಕ ಘೋಷ್ ಅವರು ಈ ಹಿಂದೆ ಅಲ್ಲಿನ ಪುರಸಭೆಯ ಪದಾಧಿಕಾರಿಯಾಗಿದ್ದರು. 2014 ಮತ್ತು 2018ರ ನಡುವೆ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳ ನಿಯಮದ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಇದನ್ನೂ ಓದಿ: ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ: ಮಮತಾ ಬ್ಯಾನರ್ಜಿ ಭವಿಷ್ಯ

    ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ: ಮಮತಾ ಬ್ಯಾನರ್ಜಿ ಭವಿಷ್ಯ

    ಕೋಲ್ಕತ್ತಾ: ಡಿಸೆಂಬರ್‌ನಲ್ಲಿ ಬಿಜೆಪಿ (BJP) ಲೋಕಸಭೆ ಚುನಾವಣೆಯನ್ನು (Lok Sabha) ನಡೆಸಬಹುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಭವಿಷ್ಯ ನುಡಿದಿದ್ದಾರೆ.

    ಟಿಎಂಸಿ (TMC) ಯುವ ಘಟಕದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಡಿಸೆಂಬರ್‌ನಲ್ಲಿ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ನಾನು ಆತಂಕಗೊಂಡಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: INDIA ಒಕ್ಕೂಟಕ್ಕೆ ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜ ಬಳಕೆಗೆ ಚಿಂತನೆ

    ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು (Choppers) ಕಾಯ್ದಿರಿಸಿದೆ. ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂದರು.

    ಕೇಸರಿ ಪಕ್ಷವು ಈಗಾಗಲೇ ನಮ್ಮ ದೇಶವನ್ನು ಸಮುದಾಯಗಳ ನಡುವಿನ ವೈರತ್ವದ ರಾಷ್ಟ್ರವಾಗಿ ಪರಿವರ್ತಿಸಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತದೆ ಎಂದು ತಿಳಿಸಿದರು.

    ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಕುರಿತು ಮಾತನಾಡಿದ ಅವರು ಕೆಲವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಕೃತ್ಯಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಸಹಕರಿಸುತ್ತಿದ್ದಾರೆ ಎಂದು ಹೇಳಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    ನವದೆಹಲಿ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ (TMC) ಸರ್ಕಾರ ಪಂಚಾಯತ್ ಚುನಾವಣೆಯ ಸಮಯದಲ್ಲಿ ರಕ್ತದೊಂದಿಗೆ ಆಟವಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳದ (West Bengal)  ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ಮಾತನಾಡಿದ ಅವರು, ಪಕ್ಷವು ಮತದಾರರಿಗೆ ಬೆದರಿಕೆ ಹಾಕುತ್ತಿದೆ ಮತ್ತು ಅವರ ಜೀವನವನ್ನು ನರಕವಾಗಿಸಿದೆ. ಪ್ರಜಾಪ್ರಭುತ್ವದ ಚಾಂಪಿಯನ್ ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳುವವರು ಇವಿಎಂ ತೊಡೆದುಹಾಕಲು ಪಿತೂರಿ ನಡೆಸುವವರು ಎಂದು ಹೇಳಿದರು. ಇದನ್ನೂ ಓದಿ: ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ 4 ಮಸೂದೆಗಳಿಗೆ ರಾಷ್ಟ್ರಪತಿ ಸಹಿ

    ಟಿಎಂಸಿ ಗೂಂಡಾಗಳಿಗೆ ಗುತ್ತಿಗೆ ನೀಡಿ ಮತ ಎಣಿಕೆ ದಿನದಂದು ಬೂತ್ ವಶಪಡಿಸಿಕೊಳ್ಳುವಂತೆ ಹೇಳಿದೆ. ಪಕ್ಷ ಕೆಲಸ ಮಾಡಲು ಮಾರಣಾಂತಿಕ ದಾಳಿಗಳನ್ನು ತನ್ನ ಸಾಧನವನ್ನಾಗಿ ಬಳಸುತ್ತಿದೆ. ಜುಲೈ 8ರಂದು ನಡೆದ ಚುನಾವಣೆಯಲ್ಲಿ ಹಿಂಸಾಚಾರದ ಭೀತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಎಂಸಿ ಎರಡು ವರ್ಷಗಳ ಹಿಂದೆ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಗೆದ್ದ ಜನಾದೇಶವನ್ನು ಹಾಗೆಯೇ ಉಳಿಸಿಕೊಂಡಿದೆ ಎಂದರು. ಇದನ್ನೂ ಓದಿ: ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

    ವರದಿಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ (Panchayat Election) ಮುನ್ನಾ ತಿಂಗಳಿನಲ್ಲಿ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಒಟ್ಟು 40 ಜನರು ಸಾವನ್ನಪ್ಪಿದ್ದಾರೆ. ಮತದಾನದ ದಿನವೇ 21 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಸೋಲಿಸಿದ್ದೇವೆ. ಇಡೀ ರಾಷ್ಟ್ರದಲ್ಲಿ ನಕಾರಾತ್ಮಕತೆಯನ್ನು ಹರಡುವವರಿಗೆ ತಕ್ಕ ಉತ್ತರವನ್ನು ನೀಡಿದ್ದೇವೆ. ವಿರೋಧ ಪಕ್ಷದ ಸದಸ್ಯರು ಸಂಸತ್ ಚರ್ಚೆ ನಡುವೆ ತೊರೆದರು. ಅವರು ಅವಿಶ್ವಾಸ ನಿರ್ಣಯದ ಮೇಲೆ ಮತ ಚಲಾಯಿಸಲು ಹೆದರುತ್ತಿದ್ದರು ಎಂಬುದು ಸತ್ಯ. ವಿರೋಧ ಪಕ್ಷಗಳಿಗೆ ಮಣಿಪುರದ (Manipur) ಬಗ್ಗೆ ಚರ್ಚೆ ಬೇಕಾಗಿಲ್ಲ. ದೇಶಕ್ಕಿಂತ ಅವರಿಗೆ ಪಕ್ಷವೇ ಮುಖ್ಯವಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ನು 5 ತಿಂಗಳಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಪತನ – ಬಿಜೆಪಿ ಭವಿಷ್ಯ

    ಇನ್ನು 5 ತಿಂಗಳಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಪತನ – ಬಿಜೆಪಿ ಭವಿಷ್ಯ

    ಕೋಲ್ಕತ್ತಾ: ಕೇವಲ 5 ತಿಂಗಳಲ್ಲಿ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಪಶ್ಚಿಮ ಬಂಗಾಳದ (West Bengal) ತೃಣಮೂಲ ಕಾಂಗ್ರೆಸ್‌ (TMC) ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ (BJP) ಭವಿಷ್ಯ ನುಡಿದಿದೆ.

    ಬಿಜೆಪಿ ಸಂಸದ ಶಾಂತನು ಠಾಕೂರ್ ತಮ್ಮ ಲೋಕಸಭಾ ಕ್ಷೇತ್ರ ಬೊಂಗಾವ್‌ನಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಟಿಎಂಸಿ ಸರ್ಕಾರ ಇನ್ನು ಐದು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: UPA ಮೈತ್ರಿ ಕೂಟದ ಮಹತ್ವದ ಸಭೆಗೆ ಬೆಂಗಳೂರಿನಲ್ಲಿ ಮುಹೂರ್ತ

    ಮಮತಾ ಬ್ಯಾನರ್ಜಿ ಸರ್ಕಾರವು ತನ್ನ ಉಪಯುಕ್ತತೆಯನ್ನು ಮೀರಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಅಕ್ರಮ ನಡೆಸದೇ ಇದ್ದಿದ್ದರೆ, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿತ್ತು. ಆದರೆ ಇದು ಟಿಎಂಸಿ ಸರ್ಕಾರದ ಮೇಲ್ವಿಚಾರಣೆಯಲ್ಲಿ ಕೊನೆಯ ಚುನಾವಣೆಯಾಗಲಿದೆ. ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಸೇರಿದಂತೆ ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆಯು ನಿಷ್ಪಕ್ಷಪಾತ ಪಾತ್ರವನ್ನು ವಹಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಬಿಜೆಪಿಯ ಬಂಗಾಳದ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಮಾತನಾಡಿ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಏನಾಗುತ್ತದೆ ಎಂಬುದನ್ನು ನೋಡೋಣ ಎಂದು ಟಿಎಂಸಿಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಇಂದಿನಿಂದ ಕೆಜಿ ಟೊಮೆಟೋ 80 ರೂ.ನಂತೆ ಮಾರಾಟ – ಕೇಂದ್ರ ನಿರ್ಧಾರ

    ಯಾರಿಗೆ ಗೊತ್ತು, ಟಿಎಂಸಿಯ ದುರಾಡಳಿತ ಮತ್ತು ಭಯೋತ್ಪಾದನೆಯ ವಿರುದ್ಧ ಜನರ ದಂಗೆ ಏಳಬಹುದು. ಯಾರಿಗೆ ಗೊತ್ತು, ಟಿಎಂಸಿ ಶಾಸಕರು ಇದ್ದಕ್ಕಿದ್ದಂತೆ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿ ಬಂಡಾಯ ಏಳಬಹುದು. ಅದು ಸಂಭವಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ರಾಜಕೀಯದಲ್ಲಿ ಏನು ಬೇಕಾದರೂ ಸಾಧ್ಯ ಎಂದು ತಿವಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಶ್ಚಿಮ ಬಂಗಾಳದಲ್ಲಿ ಸಾವಿನ ಹಬ್ಬ – ಪಂಚಾಯತ್‌ ಚುನಾವಣೆ ಹಿಂಸಾಚಾರಕ್ಕೆ 16 ಬಲಿ

    ಪಶ್ಚಿಮ ಬಂಗಾಳದಲ್ಲಿ ಸಾವಿನ ಹಬ್ಬ – ಪಂಚಾಯತ್‌ ಚುನಾವಣೆ ಹಿಂಸಾಚಾರಕ್ಕೆ 16 ಬಲಿ

    – ಮತಗಟ್ಟೆಗಳಿಗೆ ಬೆಂಕಿ, ಧ್ವಂಸ, ಕಚ್ಚಾಬಾಂಬ್ ಸ್ಫೋಟ
    – ಪಂಚಾಯತ್‌ ಚುನಾವಣೆಗೆ ಈ ವರ್ಷ 35 ಮಂದಿ ಬಲಿ
    – ಟಿಎಂಸಿ ವಿರುದ್ಧ ಬಿಜೆಪಿ, ಕಾಂಗ್ರೆಸ್‌ ಕಿಡಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‍ನ (TMC) ಮಮತಾ ಬ್ಯಾನರ್ಜಿ (Mamata Banerjee) ಮುಖ್ಯಮಂತ್ರಿಯಾಗಿರುವ ಪಶ್ಚಿಮ ಬಂಗಾಳದಲ್ಲಿ (West Bengal) ಪ್ರಜಾಪ್ರಭುತ್ವ ನಗೆಪಾಟಲಿಗೀಡಾಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್‌ ಚುನಾವಣೆಯಲ್ಲೇ (Panchayat Election) ನೆತ್ತರು ಹರಿದಿದೆ.

    ರಾಜ್ಯದ ಹಲವೆಡೆ ಟಿಎಂಸಿ-ಬಿಜೆಪಿ-ಕಾಂಗ್ರೆಸ್-ಸಿಪಿಎಂ ಕಾರ್ಯಕರ್ತರ ಮಧ್ಯೆ ಹಿಂಸಾಚಾರ ಸಂಭವಿಸಿದ್ದು, ಈವರೆಗೆ 16 ಮಂದಿ ಬಲಿಯಾಗಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಂಚಾಯತ್‌ ಚುನಾವಣೆಗೆ ಸಂಬಂಧಿಸಿದಂತೆ ಈ ವರ್ಷ ಸಾವನ್ನಪ್ಪಿದ್ದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಮೂಲಕ ಪ್ರಜಾಪ್ರಭುತ್ವ ಹಬ್ಬ ಸಾವಿನ ಹಬ್ಬವಾಗಿ ಬದಲಾಗಿದೆ ಎಂದು ಬಿಜೆಪಿ ಟೀಕಿಸಿದೆ.

    ಶನಿವಾರ ನಡೆದ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ನುಗ್ಗಿ ದಾಂಧಲೆ ನಡೆಸಿ, ಮತಪೆಟ್ಟಿಗಳಿಗೆ ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಲಾಗಿದೆ. ಮತಗಟ್ಟೆ ಅಧಿಕಾರಿಗಳ ಕೊಲೆ ಮಾಡಿದ್ದರೆ ಏಜೆಂಟ್‍ಗಳನ್ನು ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಪ್ರಿಯಕರನಿಗೋಸ್ಕರ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆಗೆ ಜಾಮೀನು

    ದುಷ್ಕರ್ಮಿಗಳು ಬ್ಯಾಲೆಟ್ ಬಾಕ್ಸನ್ನೇ ಕದ್ದೊಯ್ದಿದ್ದಾರೆ. ಅಷ್ಟೇ ಅಲ್ಲದೇ ಕೈಯಲ್ಲಿ ಗನ್ ಹಿಡಿದು ಬೆದರಿಸಿ ಕಲ್ಲು ತೂರಿದ ಪ್ರಸಂಗ ನಡೆದಿದೆ. ಮತಗಟ್ಟೆ ಸುತ್ತಮುತ್ತ ನಾಡ ಬಾಂಬ್‍ಗಳ ಮಳೆಗೆರೆದಿದ್ದಾರೆ. ಇದಕ್ಕೆಲ್ಲಾ ಆಡಳಿತರೂಢ ಟಿಎಂಸಿಯೇ ಕಾರಣ ಅಂತ ಬಿಜೆಪಿ ಮತ್ತು ಕಾಂಗ್ರೆಸ್‌ ದೂರಿದೆ.

     

    ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ಮುರ್ಷಿದಾಬಾದ್, ಮಾಲ್ಡಾ, ಕೂಚ್‍ಬೆಹಾರ್, ಹೂಗ್ಲಿ, ನಾರ್ತ್ 24 ಪರಗಣ ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದೆ.

    ಎಲ್ಲೆಲ್ಲಿ ಏನಾಗಿದೆ?
    ನಾರ್ತ್ 24 ಪರಗಣ ಜಿಲ್ಲೆಯ ಬಾರಕ್‍ಪೋರ್‌ನಲ್ಲಿ ಟಿಎಂಸಿ ಕಾರ್ಯಕರ್ತರು ಗನ್ ಹಿಡಿದು ಬೆದರಿಸಿ ಕಲ್ಲು ತೂರಿದ್ದಾರೆ. ಕೋಚ್ ಬೆಹಾರ್ ಜಿಲ್ಲೆಯ ದಿನ್ಹಾಟಾ ಏರಿಯಾದ ಬರನಚಿನಾ ಪಂಚಾಯತ್‌ ಪೋಲಿಂಗ್ ಬೂತ್‍ನಲ್ಲಿ ಮತ ಪೆಟ್ಟಿಗೆಗೆ ಬೆಂಕಿ ಇಡಲಾಗಿದೆ.

    ಕೋಚ್ ಬೆಹಾರ್‌ನ ಸರ್ಕಾರಿ ಶಾಲೆಗೆ ನುಗ್ಗಿರುವ ಕಿಡಿಗೇಡಿಗಳು ಮತಕೇಂದ್ರವನ್ನು ಧ್ವಂಸಗೊಳಿಸಿ, ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಯುವಕನೋರ್ವ ರಾಶಿರಾಶಿ ಬ್ಯಾಲೆಟ್ ಪೇಪರ್‌ಗಳನ್ನು ಕೈಯಲ್ಲಿ ಹಿಡಿದು ಕೊಂಡಿದ್ದ ದೃಶ್ಯ ಡೈಮಂಡ್ ಹಾರ್ಬರ್‌ನ ಮತಗಟ್ಟೆ ಕಾಣಿಸಿದೆ. ಮುರ್ಷಿದಾಬಾದ್‍ನ ಮತ ಕೇಂದ್ರದ ಸುತ್ತ ನಾಡ ಬಾಂಬ್‍ಗಳ ಸುರಿಮಳೆಯೇ ಸುರಿಸಲಾಗಿದೆ.

     

    ಹೂಗ್ಲಿ ಜಿಲ್ಲೆಯ ಮತಗಟ್ಟೆಯೊಂದಕ್ಕೆ ನುಗ್ಗಿದ ಕಿಡಿಗೇಡಿಗಳು 2 ಬ್ಯಾಲೆಟ್ ಬಾಕ್ಸ್ ಕದ್ದು ಕೆರೆಗೆ ಎಸೆದಿದ್ದಾರೆ. ಮತ್ತಷ್ಟು ಬಾಕ್ಸ್‌ಗಳನ್ನು ಚರಂಡಿ ನೀರಿನಲ್ಲಿ ಮುಳುಗಿಸಿಟ್ಟಿದ್ದಾರೆ.

    ನಾರ್ತ್ 24 ಪರಗಣ ಜಿಲ್ಲೆಯ ಪಿರ್‍ಗಚ್ಚಾ ಗ್ರಾಮದಲ್ಲಿ ಅಭ್ಯರ್ಥಿ ಓರ್ವನನ್ನು ಕೊಲೆ ಮಾಡಲಾಗಿದೆ. ಗ್ರಾಮದಲ್ಲಿ ಭಾರೀ ಘರ್ಷಣೆ ಸಂಭವಿಸಿದ್ದು, ರಸ್ತೆಯಲ್ಲಿ ಬೈಕ್‍ಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಚ್‍ಬೆಹಾರಿನ ಫಲಿಮಾರಿ ಮತಗಟ್ಟೆಯೊಂದರಲ್ಲಿ ಬಿಜೆಪಿ ಏಜೆಂಟ್ ಒಬ್ಬರ ತಲೆಯೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾಲ್ಡಾ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿಗರೊಂದಿಗೆ ನಡೆದ ಘರ್ಷಣೆಯಲ್ಲಿ ಟಿಎಂಸಿ ನಾಯಕನ ಸಹೋದರ ಸಾವನ್ನಪ್ಪಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂಗಾಳದಲ್ಲಿ ನಿಲ್ಲದ ಸಂಘರ್ಷ – ಗುಂಡು ಹಾರಿಸಿ ಪಕ್ಷೇತರ ಅಭ್ಯರ್ಥಿ ಪುತ್ರಿಯ ಹತ್ಯೆ

    ಬಂಗಾಳದಲ್ಲಿ ನಿಲ್ಲದ ಸಂಘರ್ಷ – ಗುಂಡು ಹಾರಿಸಿ ಪಕ್ಷೇತರ ಅಭ್ಯರ್ಥಿ ಪುತ್ರಿಯ ಹತ್ಯೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಪಂಚಾಯತ್ ಚುನಾವಣೆಯಲ್ಲಿ (Panchayat Election) ಸಂಘರ್ಷ ಮುಂದುವರಿದಿದ್ದು ಪಕ್ಷೇತರ ಅಭ್ಯರ್ಥಿಯೊಬ್ಬರ ಮಗಳ ಹಣೆಗೆ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಾರಕೇಶ್ವರ (Tarakeshwar) ಎಂಬಲ್ಲಿ ಘಟನೆ ನಡೆದಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    20 ವರ್ಷದ ಚಂದನಾ ಸಿಂಗ್ ಹತ್ಯೆಯಾದ ಯುವತಿಯಾಗಿದ್ದು, ಮೃತದೇಹವನ್ನು ಕೋಲ್ಕತ್ತಾ (Kolkata) ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಮಾಹಿತಿಗಳ ಪ್ರಕಾರ ಪಕ್ಷೇತರ ಅಭ್ಯರ್ಥಿ ಪಿಂಟು ಸಿಂಗ್ ಮನೆ ಮೇಲೆ ದಾಳಿ ಮಾಡಿದ ಗುಂಪೊಂದು ಅವರ ಕುಟುಂಬದ ಸದಸ್ಯರನ್ನು ಥಳಿಸಿದ್ದಾರೆ. ಬಳಿಕ ಯುವತಿಯನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೆಜಿ ಟೊಮೆಟೊಗೆ 200 ರೂ., ಮೆಣಸಿನಕಾಯಿಗೆ 170 ರೂ. – ತರಕಾರಿಗಳ ಬೆಲೆ ಭಾರೀ ದುಬಾರಿ!

    ಘಟನಾ ಸ್ಥಳದಿಂದ ಗುಂಡುಗಳು ಮತ್ತು ಬಾಂಬ್‌ಗಳ ಶೆಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ, ಪೊಲೀಸರು ಸ್ಥಳದಿಂದ ಬುಲೆಟ್‌ಗಳು ಮತ್ತು ಬಾಂಬ್‌ಗಳನ್ನು ವಶಪಡಿಸಿಕೊಳ್ಳಲು ಯಾವುದೇ ತ್ವರಿತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದನ್ನೂ ಓದಿ: ರೈಲ್ವೇ ಬ್ರಿಡ್ಜ್ ನಟ್ ಕಳಚಿದ ಕಿಡಿಗೇಡಿಗಳು – ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

    ಆಡಳಿತಾರೂಢ ಟಿಎಂಸಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಿಂಟು ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ (Independent Candidate) ಸ್ಪರ್ಧೆ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಅವರನ್ನು ಗುರಿಯಾಗಿಸಿ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಈ ಆರೋಪವನ್ನು ಟಿಎಂಸಿ ಕಾರ್ಯಕರ್ತರು ನಿರಾಕರಿಸಿದ್ದಾರೆ. ಹಲ್ಲೆಗೂ ನಮಗೂ ಸಂಬಂಧ ಇಲ್ಲ ಎಂದು ಸ್ಥಳೀಯ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ

    West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ (Panchayat Polls) ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ (West Bengal Violence) ಭುಗಿಲೆದ್ದಿದೆ. ಈ ಹಿಂಸಾಚಾರಕ್ಕೆ 11 ಮಂದಿ ಬಲಿಯಾಗಿದ್ದಾರೆ.

    ಹತ್ಯೆಗೀಡಾದವರಲ್ಲಿ 6 ಮಂದಿ ತೃಣಮೂಲ ಕಾಂಗ್ರೆಸ್‌ ಸದಸ್ಯರಿದ್ದು, ಬಿಜೆಪಿ (BJP), ಎಡ, ಕಾಂಗ್ರೆಸ್‌ (Congress) ಮತ್ತು ಐಎಸ್‌ಎಫ್‌ನ ತಲಾ ಒಬ್ಬೊಬ್ಬರು ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌, ಭದ್ರತೆಗೆ ನಿಯೋಜಿಸಲಾದ ಕೇಂದ್ರ ಪಡೆಗಳಿಂದ (Central Forces) ಅತಿದೊಡ್ಡ ಭದ್ರತಾ ವೈಫಲ್ಯ ಸಂಭವಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಇದನ್ನೂ ಓದಿ: ಅಚ್ಚರಿಯಾದ್ರೂ ಸತ್ಯ- ಅದಾನಿಗೆ ಸೇರಿದ 6 ಸಾವಿರ ಕೆ.ಜಿಯ ಸೇತುವೆ ಕಳ್ಳತನ!

    ಚುನಾವಣೆಗೆ ನಾಮಪತ್ರ (Nomination) ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. ಇದಾದ ನಂತರ ಮತದಾನ ದಿನವಾದ ಇಂದೂ ಕೂಡ ಅಂಥದ್ದೇ ಘಟನೆಗಳು ನಡೆದಿವೆ. ಮತದಾನ ಆರಂಭಕ್ಕೂ ಕೆಲವೇ ಗಂಟೆಗಳ ಮೊದಲು ಮುರ್ಷಿದಾಬಾದ್‌ನಲ್ಲಿ ತಡರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಮನೆಯೊಂದನ್ನು ಧ್ವಂಸಮಾಡಿದ್ದಾರೆ.

    ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಬಿಸ್ವಾಸ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಟಿಎಂಸಿ ಬೆಂಬಲಿಗರು ತಡೆದಿದ್ದಾರೆ. ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಟಿಎಂಸಿ ಈ ಆರೋಪಗಳನ್ನ ತಳ್ಳಿಹಾಕಿದೆ.

    ಈ ನಡುವೆ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರೊಬ್ಬರನ್ನು ಥಳಿಸಿ ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಹತ್ಯೆ ಮಡಾಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ವ್ಯಕ್ತಿಯನ್ನು 41 ವರ್ಷದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಹಲ್ಲೆ ಬಳಿಕ ಅಬ್ದುಲ್ಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆಂದು ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮುಖರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: Delhi Metro: ಮೈಬಿಸಿ ಏರಿಸುವ ಬಟ್ಟೆ ತೊಟ್ಟು ಯುವತಿಯರ ಡಾನ್ಸ್‌ – ನೆಟ್ಟಿಗರಿಂದ ಫುಲ್‌ ಕ್ಲಾಸ್‌!

    ಈ ನಡುವೆ ಕೇಂದ್ರ ಪಡೆಗಳ ಭದ್ರತೆ ಮಧ್ಯೆಯೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಮಾಲ್ಡಾದ ಮಾಣಿಕ್‌ಚಕ್‌ನಲ್ಲಿ ಬಾಂಬ್ ದಾಳಿಯ ನಡೆಸಲಾಗಿದೆ. ಇದು ನಮ್ಮ ಪಕ್ಷದ ಕಾರ್ಯಕರ್ತನನ್ನು ಬಲಿ ತೆಗೆದುಕೊಂಡಿದೆ. ನಾಡಿಯಾದ ನಾರಾಯಣಪುರ ಗ್ರಾಮ ಪಂಚಾಯತಿ ಅಭ್ಯರ್ಥಿ ಹಸೀನಾ ಸುಲ್ತಾನ್​ ಅವರ ಪತಿಯ ಮೇಲೆ ಗುಂಡು ಹಾರಿಸಲಾಗಿದೆ. ಮತದಾನ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಕಚ್ಚಾ, ದೇಶಿ ನಿರ್ಮಿತ ಬಾಂಬ್‌ಗಳನ್ನು ನಮ್ಮ ಕಾರ್ಯಕರ್ತರ ಮೇಲೆ ಎಸೆಯಲಾಗಿದೆ’ ಎಂದು ​​ಆರೋಪಿಸಿದೆ.

    ಮತಗಟ್ಟೆಗಳ ಬಳಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹಲವೆಡೆ ಮತದಾನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಜನಾಂಗೀಯ ಗಲಭೆ ಸೃಷ್ಟಿಸಲು ಯೋಚಿಸುತ್ತಿದೆ: ಮಮತಾ ಬ್ಯಾನರ್ಜಿ

    ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಜನಾಂಗೀಯ ಗಲಭೆ ಸೃಷ್ಟಿಸಲು ಯೋಚಿಸುತ್ತಿದೆ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಬಿಜೆಪಿಯು (BJP) ಪಶ್ಚಿಮ ಬಂಗಾಳದಲ್ಲಿ (West Bengal) ಮಣಿಪುರದಂತಹ ಪರಿಸ್ಥಿತಿಯನ್ನು ತರಲು ಪ್ರಯತ್ನಿಸುತ್ತಿದ್ದು, ಜನಾಂಗೀಯ ಗಲಭೆಗಳನ್ನು ಸೃಷ್ಟಿಸಲು ಯೋಚಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದಾರೆ.

    ಪಶ್ಚಿಮ ಮೇದಿನೀಪುರ ಜಿಲ್ಲೆಯ ಸಲ್ಬೋನಿಯಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸಚಿವ ಬಿರ್ಬಹಾ ಹನ್ಸ್ಡಾ(Birbaha Hansda) ಅವರ ವಾಹನದ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಅಲ್ಲದೇ ಈ ಘಟನೆಯ ಹಿಂದೆ ಇರುವುದು ಬಿಜೆಪಿ ಕಾರ್ಯಕರ್ತರೇ ಹೊರತು ಕುರ್ಮಿ ಸಮುದಾಯದ (Kurmi Community) ಸದಸ್ಯರಲ್ಲ ಎಂದರು. ಇದನ್ನೂ ಓದಿ: ಕೇಜ್ರಿವಾಲ್‌, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು

    ಮಣಿಪುರದಲ್ಲಿ (Manipur) ನಡೆದ ಹಿಂಸಾಚಾರ ಘಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಪಕ್ಷವು ಸಮುದಾಯಗಳ ನಡುವೆ ಇದೇ ರೀತಿಯ ಗಲಭೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಆದಿವಾಸಿಗಳೊಂದಿಗೆ ಕುರ್ಮಿ ಸಮುದಾಯದ ಜನರು ಗಲಾಟೆ ಮಾಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲು ಬಿಜೆಪಿಯವರು ಬಯಸುತ್ತಾರೆ. ರಾಜ್ಯದಲ್ಲಿ ಜನಾಂಗೀಯ ಗಲಭೆಗಳಿಗೆ ಉತ್ತೇಜನ ನೀಡಲು ಯತ್ನಿಸಿದವರನ್ನು ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಭಾರತದ ನೂತನ ಸಂಸತ್ ಭವನಕ್ಕೆ ದೇಶದ ವಿವಿಧತೆಯ ಮೆರುಗು

    ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಜಿಲ್ಲೆಯಲ್ಲಿ ಟಿಎಂಸಿ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ರಾಜ್ಯ ಸಚಿವರ ವಾಹನದ ಮೇಲೆ ಶುಕ್ರವಾರ ಕಲ್ಲು ತೂರಾಟ ನಡೆದಿದೆ. ನಾನು ಈ ಹಿಂಸಾಚಾರವನ್ನು ಖಂಡಿಸುತ್ತೇನೆ. ಕುರ್ಮಿಗಳು ಈ ಘಟನೆಯ ಹಿಂದೆ ಇದ್ದಾರೆ ಎಂದರೆ ನಾನು ನಂಬುವುದಿಲ್ಲ. ಕುರ್ಮಿ ಸಮುದಾಯದ ಸದಸ್ಯರಂತೆ ವೇಷಧರಿಸಿ ಬಿಜೆಪಿ ಕಾರ್ಯಕರ್ತರು ಈ ಕೃತ್ಯ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ ಕನಸಿನ ಸೆಂಟ್ರಲ್ ವಿಸ್ಟಾ ಯೋಜನೆಯಿಂದ ಉಳಿತಾಯವಾಗಲಿದೆ 1,000 ಕೋಟಿ ವಾರ್ಷಿಕ ಬಾಡಿಗೆ

  • ಪ್ರಾಣ ನೀಡಲು ಸಿದ್ಧನಿದ್ದೇನೆ ಆದ್ರೆ ದೇಶ ವಿಭಜಿಸಲು ಬಿಡಲ್ಲ: ಮಮತಾ ಬ್ಯಾನರ್ಜಿ

    ಪ್ರಾಣ ನೀಡಲು ಸಿದ್ಧನಿದ್ದೇನೆ ಆದ್ರೆ ದೇಶ ವಿಭಜಿಸಲು ಬಿಡಲ್ಲ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ನಾನು ನನ್ನ ಪ್ರಾಣವನ್ನು ನೀಡಲು ಸಿದ್ಧನಿದ್ದೇನೆ, ಆದರೆ ದೇಶವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದರು.

    ಕೋಲ್ಕತ್ತಾದಲ್ಲಿ (Kolkata) ನಡೆದ ಈದ್-ಉಲ್-ಫಿತರ್ (Ed-Ul-Fitar) ಸಭೆಯಲ್ಲಿ ರಂಜಾನ್ (Ramzan) ಶುಭಾಶಯವನ್ನು ಕೋರಿದರು. ನಂತರ ಮಾತನಾಡಿದ ಅವರು, ಮುಸ್ಲಿಂ ಬಾಂಧವರು ದಯವಿಟ್ಟು ಈದ್ ಹಬ್ಬವನ್ನು ಆನಂದಿಸಿ. ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಯಾರೂ ನಿಮಗೆ ಹಾನಿಯುಂಟು ಮಾಡುವುದಿಲ್ಲ. ಕೆಲವು ಜನರು ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಬಯಸುತ್ತಿದ್ದಾರೆ. ಆದರೆ ನಾವು ಬಂಗಾಳದಲ್ಲಿ ಶಾಂತಿಯನ್ನು ಬಯಸುತ್ತೇವೆ. ನಮಗೆ ಘರ್ಷಣೆಗಳು ಬೇಡ, ಶಾಂತಿ ಬೇಕು. ನಾವೆಲ್ಲರೂ ಒಂದಾಗಿ ದೇಶವನ್ನು ಕಟ್ಟೋಣ. ಏನೇ ಆದರು ಎಲ್ಲರೂ ಒಟ್ಟಾಗಿ ಹೋರಾಡಿ ಗೆಲ್ಲೋಣ ಎಂದರು. ಇದನ್ನೂ ಓದಿ: 1 ಲಕ್ಷ ಕೋತಿಗಳನ್ನು ಕಳುಹಿಸಿಕೊಡಿ ಎಂದ ಚೀನಾ – ರಫ್ತಿಗೆ ಒಪ್ಪಿದ ಶ್ರೀಲಂಕಾ 

    ಕೆಲವರು ಮುಸ್ಲಿಂ (Muslim) ಮತಗಳನ್ನು ವಿಭಜಿಸಿವುದಾಗಿ ಹೇಳಿ ಬಿಜೆಪಿಯಿಂದ (BJP) ಹಣ ಪಡೆದಿದ್ದಾರೆ ಎಂದು ಟಿಎಂಸಿ (TMC) ವರಿಷ್ಠರು ಆರೋಪಿಸಿದ್ದಾರೆ. ಬಿಜೆಪಿಗೆ ಮುಸ್ಲಿಂ ಮತಗಳನ್ನು ವಿಭಜಿಸುವ ಧೈರ್ಯವಿಲ್ಲ. ಲೋಕಸಭಾ ಚುನಾವಣೆಗೆ (Election) ಇನ್ನೂ ಒಂದು ವರ್ಷವಿದೆ. ಯಾರು ಆಯ್ಕೆಯಾಗುತ್ತಾರೆ ಮತ್ತು ಯಾರು ಆಗುವುದಿಲ್ಲ ಎಂಬುವುದನ್ನು ನೀವೇ ನೋಡಿ ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಟನ್‌ ಉಪ ಪ್ರಧಾನಿ ಡೊಮಿನಿಕ್‌ ರಾಬ್‌ ರಾಜೀನಾಮೆ – ಸಂಕಷ್ಟದಲ್ಲಿ ಸುನಾಕ್‌ ಸರ್ಕಾರ? 

    ಇಂದು ಸಂವಿಧಾನ (Constitution) ಬದಲಾಗುತ್ತಿದೆ. ಹಾಗೆಯೇ ಇತಿಹಾಸವನ್ನೂ ಬದಲಾಯಿಸುತ್ತಿದ್ದಾರೆ. ನಾನು ಎನ್‌ಆರ್‌ಸಿಯನ್ನು (NRC) ಮಾಡಲು ಬಿಡುವುದಿಲ್ಲ. ಇದರ ವಿರುದ್ಧ ನಾನು ಹೋರಾಡುತ್ತೇನೆ. ಹೋರಾಡುವ ಧೈರ್ಯ ನನ್ನಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ವರ್ಗ ಪ್ರಾಪ್ತಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ – ಬ್ರಿಟನ್ ಶಾಲೆಗಳಲ್ಲಿ ಹಿಂದೂಗಳಿಗೆ ಕಿರುಕುಳ