Tag: ಟಿಕೆಟ್ ಹಂಚಿಕೆ

  • Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

    Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

    ಬೆಂಗಳೂರು: 2023ರ ಕರ್ನಾಟಕ (Karnataka) ವಿಧಾನಸಭಾ ಚುನಾವಣೆಗೆ (Election) ಕಾಂಗ್ರೆಸ್‍ನಿಂದ (Congress) ಇಂದು (ಮಾ.25) ಮೊದಲ ಪಟ್ಟಿ ಬಿಡುಗಡೆಗೊಂಡಿದೆ. 124 ಕ್ಷೇತ್ರಗಳ ಪೈಕಿ ಯಾವ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

    ಒಟ್ಟು ಕ್ಷೇತ್ರಗಳ ಪೈಕಿ 32 ಕ್ಷೇತ್ರಗಳಲ್ಲಿ ಲಿಂಗಾಯತರು ಹಾಗೂ 19 ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್‌ – 124 ಕ್ಷೇತ್ರಗಳಿಗೆ ಅಭ್ಯರ್ಥಿ

    ಯಾವ ಸಮುದಾಯಕ್ಕೆ ಎಷ್ಟು?
    ಲಿಂಗಾಯತ – 30
    ಒಕ್ಕಲಿಗ – 19
    ಎಸ್‍ಸಿ – 22
    ಎಸ್‍ಟಿ – 10
    ಮುಸ್ಲಿಂ – 8
    ಈಡಿಗ – 6
    ಕುರುಬ – 6
    ರೆಡ್ಡಿ – 5
    ಬ್ರಾಹ್ಮಣ – 5
    ಬಂಟ್ಸ್ – 3
    ಮರಾಠ – 2
    ಕ್ರಿಶ್ಚಿಯನ್ – 1
    ಮೊಗವೀರ – 1
    ಉಪ್ಪಾರ – 1
    ರಜಪೂತ್ – 1
    ಇತರೆ – 1
    ಜೈನ್ – 1
    ಕೊಡವ – 1
    ವೈಶ್ಯ – 1

    ಕೊಪ್ಪಳ, ಬ್ಯಾಡಗಿ, ಹೊಸದುರ್ಗ, ವರುಣಾ, ಹೆಬ್ಬಾಳ, ಕೆಆರ್ ನಗರದಲ್ಲಿ ಕುರುಬ ಸಮುದಾಯದ ಅಭ್ಯರ್ಥಿ ಹಾಗೂ ವಿಜಯನಗರ, ಸೊರಬ, ಸಾಗರ, ಬೈಂದೂರ್, ಕಾಪು, ಬೆಳ್ತಂಗಡಿಯಲ್ಲಿ ಈಡಿಗ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇದನ್ನೂ ಓದಿ: ಗೊಂದಲಕ್ಕೆ ತೆರೆ- ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ

  • ಸರ್ಕಾರ ಬರಲು ಕಾರಣರಾದವರಿಗೆ ಪರಿಷತ್‍ನಲ್ಲಿ ಸ್ಥಾನ: ಸಚಿವ ಈಶ್ವರಪ್ಪ

    ಸರ್ಕಾರ ಬರಲು ಕಾರಣರಾದವರಿಗೆ ಪರಿಷತ್‍ನಲ್ಲಿ ಸ್ಥಾನ: ಸಚಿವ ಈಶ್ವರಪ್ಪ

    – ಪರಿಷತ್ ಚುನಾವಣೆ ನಂತರ ಸಂಪುಟ ವಿಸ್ತರಣೆ

    ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವ ಮೂಲಕ ಅವರ ಋಣ ತೀರಿಸುವುದರ ಜೊತೆಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಈ ಮೂಲಕ ಎಂಟಿಬಿ ನಾಗರಾಜ್, ಎಚ್.ವಿಶ್ವನಾಥ್ ಹಾಗೂ ಆರ್.ಶಂಕರ್ ಗೆ ಪರಿಷತ್ ಟಿಕೆಟ್ ನೀಡುವ ಸುಳಿವು ನೀಡಿದ್ದಾರೆ.

    ಶಿವಮೊಗ್ಗದ ವೀರಣ್ಣನ ಬೆನವಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕು ಎಂಬ ದೃಷ್ಟಿಯಿಂದ ಕೆಲ ಕಾಂಗ್ರೆಸ್, ಜೆಡಿಎಸ್ ಶಾಸಕರು ಪಕ್ಷ ತೊರೆದು ಬಿಜೆಪಿಗೆ ಬಂದಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ಮಾತು ಕೊಟ್ಟು ಮೋಸ ಮಾಡಲು ಬರುವುದಿಲ್ಲ. ಅಲ್ಲದೆ ಅನೇಕ ವರ್ಷಗಳಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದಿರುವ ಅನೇಕ ಸಾಮಾನ್ಯ ಕಾರ್ಯಕರ್ತರು ಇದ್ದಾರೆ. ಅವರಿಗೂ ಅವಕಾಶ ಮಾಡಿಕೊಡಬೇಕಿದೆ ಎಂದರು.

    ಪರಿಷತ್ ಚುನಾವಣೆ ಸಂಬಂಧ ಸೋಮವಾರ ಸಂಜೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸುತ್ತೇವೆ. ಟಿಕೆಟ್ ಹಂಚಿಕೆ ವಿಷಯದಲ್ಲಿ ಹೊಸಬರು, ಹಳಬರು ಎಂಬ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಬರಲು ಕಾರಣರಾದವರನ್ನು ಹಾಗೂ ಕಾರ್ಯಕರ್ತರನ್ನು ಮರೆಯಲು ಸಾಧ್ಯವಿಲ್ಲ. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    ಟಿಕೆಟ್ ಹಂಚಿಕೆ ವೇಳೆ ಡಿವಿಜನ್ ವಾರ್, ಜಿಲ್ಲಾವಾರು ಹಾಗೂ ಜಾತಿವಾರು ಎಂಬುದು ನಡೆಯುವುದಿಲ್ಲ. ಬಿಜೆಪಿಯಲ್ಲಿ ಜಾತಿವಾರು ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂಬುದು ಸುಳ್ಳು. ಬಿಜೆಪಿಯಲ್ಲಿ ಕಾರ್ಯಕರ್ತರ ಶಕ್ತಿ ಮೇಲೆ ಟಿಕೆಟ್ ಹಂಚಿಕೆ ನಡೆಯಲಿದೆ. ಪರಿಷತ್ ಚುನಾವಣೆ ನಂತರ ಸಂಪುಟ ವಿಸ್ತರಣೆ ನಡೆಯಲಿದ್ದು, ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

  • ಟಿಕೆಟ್‍ಗಾಗಿ ಕೃಷ್ಣ ಮುಖ್ಯಪ್ರಾಣ – ಈಶ್ವರನ ಮೊರೆ ಹೋದ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು

    ಟಿಕೆಟ್‍ಗಾಗಿ ಕೃಷ್ಣ ಮುಖ್ಯಪ್ರಾಣ – ಈಶ್ವರನ ಮೊರೆ ಹೋದ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು

    ಉಡುಪಿ: ಈ ಬಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ಸಿಗಲಿ ಎಂದು ಅವರ ಬೆಂಬಲಿಗರು ದೇವರ ಮೊರೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಜಿಲ್ಲೆಯ ಶ್ರೀಕೃಷ್ಣಮಠ- ಅನಂತೇಶ್ವರ ದೇವಸ್ಥಾನ ಮತ್ತು ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯಪ್ರಕಾಶ ಹೆಗ್ಡೆ ಜೆಡಿಎಸ್‍ಗೆ ಹೋಗಲ್ಲ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಅವರಿಗೆ ಬಿಜೆಪಿ ಟಿಕೆಟ್ ಕೊಡಿ ಎಂದು ಅವರ ನೂರಾರು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಹಾಗೆಯೇ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ನಂತರ ಜನರ ಜೊತೆ ಇಲ್ಲದೆ, ಆಗಾಗ ಬಂದು ಹೋಗುವ, ರಾಜ್ಯಾದ್ಯಂತ ಪ್ರವಾಸ ಮಾಡುವ, ಟಿವಿಯಲ್ಲಿ ಮಾತ್ರ ಕಾಣುವ ಸಂಸದೆ ನಮಗೆ ಬೇಡ ಎಂದು ಬಿಜೆಪಿ ಕಾರ್ಯಕರ್ತ ರಾಘವೇಂದ್ರ ಹೆಬ್ರಿ ಆಕ್ರೋಶ ವ್ಯಕ್ತಗೊಳಿಸಿದರು.

    ಉಡುಪಿ ಶ್ರೀಕೃಷ್ಣ ಪರಮಾತ್ಮ ಮುಖ್ಯಪ್ರಾಣ ದೇವರಿಗೆ ಪೂಜೆ ಸಲ್ಲಿಸಿದ್ದೇವೆ. ಮೋದಿ ಮತ್ತೆ ದೇಶದ ಪ್ರಧಾನಿ ಆಗಬೇಕು. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಇರುವ ಅಭ್ಯರ್ಥಿಗೆ ಹೈಕಮಾಂಡ್ ಟಿಕೆಟ್ ನೀಡಬೇಕು. ಜನರ ಅಭಿಪ್ರಾಯ ಪರಿಗಣಿಸಬೇಕು. ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಬಾರದು ಅಂತ ಅಲ್ಲ. ಆದ್ರೆ ಹೆಗ್ಡೆಯವರಿಗೆ ಟಿಕೆಟ್ ಕೊಟ್ಟರೆ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ. ಕಾರ್ಯಕರ್ತರ ಒಕ್ಕೊರಲ ಧ್ವನಿಗೆ ಬೆಲೆ ಸಿಗುತ್ತದೆ ಎಂದು ಜಯಪ್ರಕಾಶ್ ಹೆಗ್ಡೆ ಅಭಿಮಾನಿ ಹರೀಶ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಉಡುಪಿ ಬಿಜೆಪಿ ಮುಖಂಡ ರಾಘವೇಂದ್ರ ಕಿಣಿ ಮಾತನಾಡಿ, ಉಡುಪಿಯ ಕೃಷ್ಣನಾಡಿನಿಂದ ಪಾಂಚಜನ್ಯ ಮೊಳಗಿಸಿದ್ದೇವೆ. 16ನೇ ದಿನಾಂಕದಂದು ಜನರಿಗೆ ಸಿಗುವ ಹಾಗೂ ಅವರೊಂದಿಗೆ ಬೆರೆಯುವ ಅಭ್ಯರ್ಥಿ ಆಯ್ಕೆಯಾಗಬೇಕು ಎನ್ನುವುದು ನಮ್ಮ ಅಭಿಪ್ರಾಯ. ಪಕ್ಷದ ಹಿರಿಯ ನಾಯಕರಲ್ಲಿ ಜನಾಭಿಪ್ರಾಯಕ್ಕೆ ಮನ್ನಣೆ ಇದೆ. ಶೋಭಾ ಕರಂದ್ಲಾಜೆಯವರ ಸಾಧನೆ ಬಗ್ಗೆ ಯಾರಿಗೂ ನೋವು ಇಲ್ಲ. ಅವರ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ಆದ್ರೆ ರಾಜ್ಯ ನಾಯಕರು ಬೇರೆ ಬೇರೆ ಹೋರಾಟದಲ್ಲಿ ತೊಡಗಿದ್ದಾಗ ಕ್ಷೇತ್ರಕ್ಕೆ ಬರುವುದು ಕಷ್ಟಸಾಧ್ಯ ಎಂದೂ ಹೇಳಿದರು.

    ಈಗಾಗಲೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸಮೀಕ್ಷೆ ಆಗಿದೆ. ಸಮೀಕ್ಷೆಯ ಆಧಾರದಲ್ಲಿ ಅಭ್ಯರ್ಥಿ ಆಯ್ಕೆ ಆಗಬೇಕು. ಅಭ್ಯರ್ಥಿಯ ಆಯ್ಕೆಯ ತನಕ ಹೋರಾಟ ನಡೆಯುತ್ತೆ, ಬಳಿಕ ಅಭ್ಯರ್ಥಿ ಘೋಷಣೆಯಾದ ನಂತರ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡುವುದಾಗಿ ಕಾರ್ಯಕರ್ತರು ಅಭಿಪ್ರಾಯವನ್ನು ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

    ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

    ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್‍ಗೆ ಗೊಂದಲ ಇದೆ ಎಂದು ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರವನ್ನ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರ ಪ್ರತಿಕ್ರಿಯಿಸಿದ್ದಾರೆ. ಬೇರೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ಗೊಂದಲ ಇರಬಹುದು. ಆದರೆ ಬಿಜೆಪಿಯಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ. ಅವರು ಈಗಾಗಲೇ ಹಾಲಿ ಸಂಸದರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಅವರಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿದ್ದಾರೆ.

    ಬಳಿಕ ಚುನಾವಣೆಗೆ ನಿಲ್ಲಬೇಕೆಂದು ಎಲ್ಲರಿಗೂ ಆಸೆ ಇರುತ್ತೆ ಅದು ಸಹಜ ಬಿಡಿ. ಹಾಗಂತ ಎಲ್ಲರಿಗೂ ಟೀಕೆಟ್ ನೀಡಲು ಆಗಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಟಿಕೆಟ್ ಕೈತಪ್ಪೋದಕ್ಕೆ ಅನಂತ್ ಕುಮಾರ್ ನೇರ ಹೊಣೆ: ರಮೇಶ್ ಆರೋಪ

    ಟಿಕೆಟ್ ಕೈತಪ್ಪೋದಕ್ಕೆ ಅನಂತ್ ಕುಮಾರ್ ನೇರ ಹೊಣೆ: ರಮೇಶ್ ಆರೋಪ

    ಬೆಂಗಳೂರು: ಅಕ್ರಮಗಳ ವಿರುದ್ಧ ಹೋರಾಟ ನನ್ನ ಮೊದಲ ಆದ್ಯತೆಯಾಗಿದ್ದು ಕಳೆದ 10 ವರ್ಷಗಳಿಂದ ಹಲವು ಅಕ್ರಮ ಬಯಲಿಗೆಳೆದಿದ್ದೇನೆ. ನನಗೆ ಟಿಕೆಟ್ ಕೈ ತಪ್ಪುವುದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ನೇರ ಹೊಣೆಗಾರರು ಎಂದು ಚಿಕ್ಕಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್‍ಆರ್ ರಮೇಶ್ ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಯಡಿಯೂರು ವಾರ್ಡ್ ಅನ್ನು ಮಾದರಿ ವಾರ್ಡ್ ಆಗುವ ರೀತಿ ಅಭಿವೃದ್ಧಿಗೊಳಿಸಿದ್ದೇನೆ. 2018 ರ ಚುನಾವಣೆಯಲ್ಲಿ ಚಿಕ್ಕಪೇಟೆ ಟಿಕೆಟ್ ಆಕಾಕ್ಷಿಯಾಗಿದ್ದೆ. ನಮ್ಮ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯ ಆಯ್ಕೆಗಾಗಿ ನಡೆಸಿದ ಸರ್ವೆಯಲ್ಲಿಯೂ ನನಗೆ ಮತದಾರರು ಒಲವು ತೋರಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಸರ್ವೆಯಲ್ಲೂ ಪಕ್ಷದ ಎಲ್ಲ ವರಿಷ್ಠರೂ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು.

    ಸುಮಾರು 17 ಬಾರಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ. ಎದೆಗುಂದದೆ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೇಂದ್ರ ಸಚಿವರು, ಸಂಸದರೂ ಆಗಿರುವ ಅನಂತ್ ಕುಮಾರ್ ಅವರಿಗೆ, ನಾನು ಚಿಕ್ಕಪೇಟೆ ಕ್ಷೇತ್ರದ ಆಕಾಂಕ್ಷಿ ಎಂದು ಗೊತ್ತಿದೆ. ಉದಯ್ ಗರುಡಾಚಾರ್ ಹೆಸರು ಪಟ್ಟಿಯಲ್ಲಿ ಬರುವುದಕ್ಕೆ ಹಾಗೂ ನನಗೆ ಟಿಕೆಟ್ ಕೈತಪ್ಪುವುದಕ್ಕೆ ಅನಂತ್ ಕುಮಾರ್ ನೇರ ಹೊಣೆಗಾರರು. ಅನಂತ್ ಕುಮಾರ್ ಹೊರತು ಪಡಿಸಿದರೆ ಬೇರೆ ಯಾವ ನಾಯಕರು ಇದರಲ್ಲಿ ಭಾಗಿಯಾಗಿಲ್ಲ ಎಂದು ದೂರಿದರು.

    ಉದಯ್ ಗರುಡಾಚಾರ್ ಕಳೆದ ಬಾರಿ ಸೋತ ನಂತರ ಇದುವರೆಗೂ ಚಿಕ್ಕಪೇಟೆಗೆ ಕಾಲಿಟ್ಟಿಲ್ಲ. ಅನಂತ್ ಕುಮಾರ್ ಭ್ರಷ್ಟಾಚಾರ ಹೊತ್ತಿರುವ ಉದ್ಯಮಿಗೆ ಸಾಥ್ ನೀಡಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ ಎಂದರು.

    ಹಲವು ದಿನಗಳ ಹಿಂದೆಯೇ ಫೇಸ್‍ಬುಕ್‍ನಲ್ಲಿ ಬ್ಲಾಕ್ ಕಾಂಗ್ರೆಸ್‍ನ ಕಾರ್ಯಕರ್ತರು ಬಿಜೆಪಿ ಟಿಕೆಟ್ ಸೇಲ್ ಆಗಿದೆ ಅನ್ನುವುದಾಗಿ ಹಾಕಿದ್ದರು. 8 ದಿನಗಳ ಹಿಂದೆಯೇ ಉದಯ್ ಗರುಡಾಚಾರ್ ಗೆ ಟಿಕೆಟ್ ಕನ್ಫರ್ಮ್ ಆಗಿರುವ ಕುರಿತು ವಿಷಯ ಲೀಕ್ ಆಗಿದ್ದು ಹೇಗೆ ಎಂದು ಪ್ರಶ್ನಿಸಿದರು.

    ಅನಂತ್ ಕುಮಾರ್ ಗೆ ಬುದ್ಧಿವಂತ ಹೋರಾಟಗಾರರು ಬೇಕಾಗಿಲ್ಲ ಹಾಗಾಗಿ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಪಕ್ಷ ಬಿಡಬೇಕಾ ಅಥವಾ ಇರಬೇಕೋ ಅನ್ನುವ ತೀರ್ಮಾನ ನಾಳೆ ನನ್ನ ಅಭಿಮಾನಿಗಳ ಜೊತೆ ಸಭೆ ಮಾಡಿ ತೀರ್ಮಾನಿಸುತ್ತೇನೆ. ರಾಜ್ಯಾಧ್ಯಾಕ್ಷರ ಜೊತೆ ಮಾತನಾಡ ಬೇಕಿದೆ ಎಂದರು.

    ಅಶೋಕ್ ಅವರು ನನ್ನ ಹೋರಾಟ, ಸಂಘಟನೆ, ಅಭಿವೃದ್ಧಿಯನ್ನು ಕಂಡವರು. ಅವರು ನನಗೆ ಸಹಕಾರ ನೀಡಬೇಕಿತ್ತು. ನಾಳೆ ಸಂಜೆಯೊಳಗೆ ನನಗೆ ಆಗಿರುವ ಅನ್ಯಾಯ ಸರಿ ಪಡಿಸುವ ಆಕಾಂಕ್ಷೆ ಇದೆ. ಆರ್ ಅಶೋಕ್ ಅವರು ಬ್ಲಾಕ್ ಮೇಲ್ ಮಾಡುವಂತವರಿಗೆ ಮಣಿಯುತ್ತಾರೆ. ನಮ್ಮಂಥಹ ಪ್ರೀತಿ ವಿಶ್ವಾಸ ಇರುವಂತವರಿಗೆ ಮಣಿಯುವುದಿಲ್ಲ. ಮುರಳೀಧರ್ ಹಾಗೂ ಜಾವಡೇಕರ್ ಅವರು ಇವತ್ತು ಭೇಟಿ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

    ಎನ್.ಆರ್. ರಮೇಶ್ ಅಸಮಾಧಾನ ವಿಚಾರ ಎಲ್ಲವೂ ಸುಳ್ಳು ಸುದ್ದಿ. ಯಾವುದೇ ಸಮಸ್ಯೆ ಇಲ್ಲ. ನಾನು ಕರೆದು ಮಾತನಾಡುತ್ತೇನೆ. ರಮೇಶ್ ಬಗ್ಗೆ ನನಗೆ ಪೂರ್ಣ ವಿಶ್ವಾಸವಿದೆ. ರಮೇಶ್ ಅವರಿಗೆ ಎಲ್ಲಾದರೂ ವಿಧಾನಸಭಾ ಟಿಕೆಟ್ ಕೊಡುತ್ತೇವೆ, ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.