Tag: ಟಿಜೆ ಅಬ್ರಹಾಂ

  • ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    – ಬಿಸಿಸಿಐಗೆ ಶೀಘ್ರದಲ್ಲೇ ದೂರು ಕೊಡ್ತೇನೆ ಎಂದ ಅಬ್ರಹಾಂ

    ಬೆಂಗಳೂರು: 2025ರ ಐಪಿಎಲ್‌ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಗೆದ್ದು 18 ವರ್ಷಗಳ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿತು. ಆದ್ರೆ ಈ ಖುಷಿ ಒಂದು ದಿನವೂ ಉಳಿಯಲಿಲ್ಲ. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ರು. ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಬಾಂಬ್‌ ಸಿಡಿಸಿದ್ದಾರೆ.

    ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ (Bengaluru Stampede Case) ಸಂಬಂಧಿಸಿದಂತೆ ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಇದೇ ವೇಳೆ ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಆರೋಪ ಮಾಡಿದ್ದಾರೆ. ಇದನ್ನೂ ಓದಿ: `ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೈನಲ್ ಪಂದ್ಯಕ್ಕೂ ಮುನ್ನವೇ ವಿಧಾನಸೌಧದ ಬಳಿ ಸಂಭ್ರಮಾಚರಣೆ, ಮೆರವಣಿಗೆ ಸಂಬಂಧ ಕಬ್ಬನ್ ಪಾರ್ಕ್ ಎಸಿಪಿಗೆ ಮಾಹಿತಿ ನೀಡಿ, ವಿಧಾನಸೌಧ ಬಳಿ ತಯಾರಿ ಮಾಡಿದ್ರಿ. ನಮ್ಮ ತಂಡ ಗೆಲ್ಲುತ್ತೆ ಅನ್ನೋ ಬಗ್ಗೆ ನಿಮಗೆ ಗೊತ್ತಾಗಿದ್ದು ಹೇಗೆ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

    ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆ ಪ್ಲ್ಯಾನ್ ಮಾಡಿದ್ದು ಹೇಗೆ? ಆಗಿದ್ದರೆ ಮೊದಲೇ ಆರ್‌ಸಿಬಿ ಗೆಲ್ಲುವ ಬಗ್ಗೆ ನಿಮಗೆ ಮಾಹಿತಿ‌ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ? ಈ ಬಗ್ಗೆ ಅನುಮಾನ ಇದೆ. ಈ ಬಗ್ಗೆಯೂ ಬಿಸಿಸಿಐಗೆ ಮುಂದಿನ ದಿನಗಳಲ್ಲಿ ದೂರು ಕೊಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

  • ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ

    ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ

    ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪಗೆ (Yediyurappa) ಮತ್ತೊಂದು ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ದದ ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆಗೆ ಪೂರ್ವಾನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಿದ್ದರಾಮಯ್ಯ (Siddaramaiah) ಸಂಪುಟ ತೀರ್ಮಾನಿಸಿದೆ.

    2020 ನವೆಂಬರ್ 19 ರಂದು ಟಿಜೆ ಅಬ್ರಹಾಂ (TJ Abraham) ಎಸಿಬಿಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಯಡಿಯೂರಪ್ಪ- ವಿಜಯೇಂದ್ರ (BY Vijayendra) ವಿರುದ್ದ ದೂರು ನೀಡಿದ್ದರು. ಬಿಡಿಎ ಫ್ಲಾಟ್ ಕಟ್ಟುವ ವಿಚಾರಕ್ಕೆ ರಾಮಲಿಂಗಂ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿದ್ದಾರೆ ಅಂತ ಆರೋಪಿಸಿದ್ದರು. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

     

    ತನಿಖೆ – ವಿಚಾರಣೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದರೆ ರಾಜ್ಯಪಾಲರು ಅನುಮತಿಯನ್ನು ನಿರಾಕರಿಸಿದ್ದರು. ಈ ವಿಷಯ ಇಂದು ಕ್ಯಾಬಿನೆಟ್ ಮುಂದೆ ಪ್ರಸ್ತಾಪ ಆಗಿದ್ದು, ರಾಜ್ಯಪಾಲರ ನಿರ್ಣಯ ಪುನಃ ಪರಿಶೀಲನೆಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ.

    ಈ ಮಧ್ಯೆ ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಮಧ್ಯಂತರ ರಕ್ಷಣೆ ತೆರವಿಗೆ ಹೈಕೋರ್ಟ್ ಒಪ್ಪಿಲ್ಲ. ಮಧ್ಯಂತರ ರಕ್ಷಣೆ ತೆರವು ಮಾಡಬೇಕು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊಫೆಸರ್ ರವಿ ವರ್ಮಕುಮಾರ್ ವಾದ ಮಾಡಿದ್ದಾರೆ. ಇದಕ್ಕೆ ಪ್ರತಿವಾದ ಮಾಡಲು ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಕಾಲಾವಕಾಶ ಕೇಳಿದ್ದರಿಂದ ಡಿಸೆಂಬರ್ 2ರ ಮಧ್ಯಾಹ್ನ 2.30ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ.

     

    ಅಬ್ರಹಾಂ ನೀಡಿದ ದೂರಿನಲ್ಲಿ ಏನಿತ್ತು?
    ಕೋಲ್ಕತ್ತಾ ಮೂಲದ ಶೆಲ್ ಕಂಪನಿಗಳಲ್ಲಿ ಬಿಎಸ್‍ವೈ ಕುಟುಂಬಸ್ಥರು ಹೂಡಿಕೆ ಮಾಡಿದ್ದಾರೆ. ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಜೊತೆ ವಿಜಯೇಂದ್ರ, ಶಶಿಧರ ಮರಡಿ ಲಿಂಕ್ ಇದೆ. ಸರ್ಕಾರದ ವಿವಿಧ ಕಾಮಗಾರಿಗಳಿಗೆ ಫಂಡ್ ರಿಲೀಸ್ ಮಾಡಲು ಸಿಎಂ ಆಪ್ತರು ಒತ್ತಡ ಹಾಕಿದ್ದಾರೆ. ಸರ್ಕಾರ ವಿವಿಧ ಇಲಾಖೆ ಯೋಜನೆಗಳಲ್ಲಿ ಒತ್ತಡ ಹಾಕಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.

    ದೂರಿಗೆ ಪೂರಕವಾಗಿ ವಾಟ್ಸಪ್ ಚಾಟ್ ಸಲ್ಲಿಕೆಯಾಗಿದ್ದು, 2020ರ ಅಕ್ಟೋಬರ್ 19 ರಂದು ಶಶಿಧರ್, ಚಂದ್ರಕಾಂತ್ ಅವರಲ್ಲಿ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಯಾವಾಗ ತಮ್ಮ ಬ್ಯಾಲೆನ್ಸ್ ಕ್ಲೀಯರ್ ಮಾಡ್ತಿರಾ ಎಂದು ಪ್ರಶ್ನೆ ಮಾಡಿದ್ದಾರೆ.  ಮಧ್ಯಾಹ್ನ 2:36ಕ್ಕೆ ಮೆಸೇಜ್ ಮಾಡಿ ಕೇಳಿರುವ ಸಾಕ್ಷಿಗಳಿದೆ. ಅದಕ್ಕೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹಣ ನೀಡುತ್ತೇನೆ ಎಂದು ಚಂದ್ರಕಾಂತ್ ಹೇಳಿದ್ದಾರೆ. ಈ ಚಾಟ್‍ನಲ್ಲಿ ಶಶಿಧರ್ ಅವರಿಗೆ 3 ಕೋಟಿ ನೀಡುವ ಬಗ್ಗೆ ಮಾತುಕತೆ ನಡೆಸಿದ ಬಗ್ಗೆ ದಾಖಲೆ ಪತ್ತೆಯಾಗಿದೆ ಎಂದು ದೂರು ನೀಡಿದ್ದರು.

    ಆರೋಪಿಗಳು ಯಾರು?
    ಎ1 – ಸಿಎಂ ಬಿ.ಎಸ್ ಯಡಿಯೂರಪ್ಪ, ಎ2 – ಬಿ.ವೈ ವಿಜಯೇಂದ್ರ, ಎ3 – ಶಶಿಧರ್ ಮರಡಿ, ಎ4 – ಸಂಜಯ್ ಶ್ರೀ, ಎ5 – ಚಂದ್ರಕಾಂತ್ ರಾಮಲಿಂಗಂ, ಎ6 – ಎಸ್.ಟಿ ಸೋಮಶೇಖರ್, ಎ7 – ಡಾ. ಜಿಸಿ ಪ್ರಕಾಶ್ ಐಎಎಸ್, ಎ8 – ಕೆ ರವಿ, ಎ9 – ವಿರೂಪಾಕ್ಷಪ್ಪ ಯಮಕನಮರಡಿ.

  • ಉದ್ದೇಶಪೂರ್ವಕಾಗಿ ಪತ್ನಿಯ ಆಸ್ತಿ ವಿವರ ಮರೆ ಮಾಚಿದ್ದಾರೆ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

    ಉದ್ದೇಶಪೂರ್ವಕಾಗಿ ಪತ್ನಿಯ ಆಸ್ತಿ ವಿವರ ಮರೆ ಮಾಚಿದ್ದಾರೆ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

    – ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಟಿಜೆ ಅಬ್ರಹಾಂ

    ನವದೆಹಲಿ: ಸಿಎಂ ಸಿದ್ಧರಾಮಯ್ಯ (CM Siddaramaiah) ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission of India) ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ದೂರು ನೀಡಿದ್ದಾರೆ.

    2013 ರ ವಿಧಾನಸಭಾ ಚುನಾವಣೆಯ (Vidhan Sabha Election) ಅಫಿಡವಿಟ್‌ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ (Wife Parvathi) ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ 2010 ರಲ್ಲಿ ಈ ಜಾಗವನ್ನು ಗಿಫ್ಟ್‌ ಡೀಡ್‌ ಆಗಿ ನೋಂದಣಿ ಮಾಡಿದ್ದಾರೆ. ಈ ಜಾಗದ ಮೂಲ ಮಾಲೀಕರು ದೇವರಾಜು ಮತ್ತು ಕುಟುಂಬಸ್ಥರು ಆಗಿದ್ದು ಆಗಸ್ಟ್‌ 25, 2004 ರಂದು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಈ ಜಾಗವನ್ನು ಮಾರಾಟ ಮಾಡಿದ್ದಾರೆ. ಈ ಅವಧಿಯಲ್ಲಿ ಸಿದ್ದರಾಮಯ್ಯನವರು ಜೆಡಿಎಸ್‌ ಪಕ್ಷದಲ್ಲಿದ್ದು ಕರ್ನಾಟಕ ಉಪ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಇದನ್ನೂ ಓದಿ: MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

    ಸಹೋದರ ಪಾರ್ವತಿ ಅವರಿಗೆ ಗಿಫ್ಟ್‌ ಡೀಡ್‌ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಶಾಸಕರು ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದರು. ಅಚ್ಚರಿಯ ವಿಷಯ ಏನೆಂದರೆ ಮಾರ್ಚ್‌ 31, 2013ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದ ವಾರ್ಷಿಕ ರಿಟರ್ನ್‌ ಲೋಕಾಯುಕ್ತಕ್ಕೆ ಸಲ್ಲಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಪತ್ನಿ ಬಳಿ ಇದ್ದ ನಿವೇಶನದ ವಿವರವನ್ನು ಉಲ್ಲೇಖಿಸಿದ್ದಾರೆ. ಆದರೆ 2013ರ ಚುನಾವಣೆಯ ಅಫಿಡವಿಟ್‌ ಸಲ್ಲಿಸುವಾಗ ಈ ವಿಚಾರವನ್ನು ಉದ್ದೇಶಪೂರ್ವಕವಾಗಿ ಉಲ್ಲೇಖ ಮಾಡಿಲ್ಲ.

    ಕೃಷಿ ಭೂಮಿಯ ಬಗ್ಗೆಯ ಮಾಹಿತಿ ನೀಡದೇ ಸುಳ್ಳು ಅಫಿಡವಿಟ್ ಸಲ್ಲಿಸಿದ್ದು ಜನಪ್ರತಿ ನಿಧಿ ಕಾಯ್ದೆ ಸೆಕ್ಷನ್ 125 ಎ ಮತ್ತು ಸೆಕ್ಷನ್ 8 ಉಲ್ಲಂಘನೆ. ಸುಳ್ಳು ದಾಖಲೆ ಸಲ್ಲಿಸಿದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ 227, 229, 231, 236, 202 ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಟಿಜೆ ಅಬ್ರಹಾಂ ಮನವಿ ಮಾಡಿದ್ದಾರೆ. ಇದನ್ನೂ ಓದಿ:  Valmiki Scam | ಮಾಲ್‌, ಪಾರ್ಕ್‌, ಜಂಕ್ಷನ್‌ನಲ್ಲಿ ಕೋಟಿ ಕೋಟಿ ಸಂದಾಯ