Tag: ಟಿಪಿಎಲ್

  • ಟಿಪಿಎಲ್ ಸೀಸನ್ 3 ಮುಕ್ತಾಯ: ಟ್ರೋಫಿಗೆ ಮುತ್ತಿಟ್ಟ ಕೆಟಿಎಂ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ಟಿಪಿಎಲ್ ಸೀಸನ್ 3 ಮುಕ್ತಾಯ: ಟ್ರೋಫಿಗೆ ಮುತ್ತಿಟ್ಟ ಕೆಟಿಎಂ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 (TPL) ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ (Cricket) ಪ್ರಾರಂಭವಾಗಿತ್ತು. ಮೊನ್ನೆ ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ ರಾಸು ವಾರಿಯರ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಅಲಕಾ ನಂದ ಶ್ರೀನಿವಾಸ್ ನೇತೃತ್ವದ ಬಯೋಟಾಪ್ ಲೈಫ್ ಸೇವಿಯರ್ಸ್ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆದುಕೊಂಡು ಬರ್ತಿರುವ ಟಿಪಿಎಲ್ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್ಸ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೇವಿಯರ್ಸ್, AVR ಟಸ್ಕರ್ಸ್, ರಾಸು ವಾರಿಯರ್ಸ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದರು.

    ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೇವಿಯರ್ಸ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ಸ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

     

    ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಟವಾಡಿದ್ದು ವಿಶೇಷವಾಗಿತ್ತು.

  • ಟಿಪಿಎಲ್ ಸೀಸನ್ 3ಗೆ ಚಾಲನೆ- ಬ್ಯಾಟ್ & ಬಾಲ್ ಹಿಡಿದು ಫೀಲ್ಡ್‌ಗಿಳಿದ ಕಿರುತೆರೆ ಕಲಾವಿದರು

    ಟಿಪಿಎಲ್ ಸೀಸನ್ 3ಗೆ ಚಾಲನೆ- ಬ್ಯಾಟ್ & ಬಾಲ್ ಹಿಡಿದು ಫೀಲ್ಡ್‌ಗಿಳಿದ ಕಿರುತೆರೆ ಕಲಾವಿದರು

    ಟಿಪಿಎಲ್ 3ನೇ (TPL) ಸೀಸನ್‌ಗೆ ಅಧಿಕೃತ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ನಿನ್ನೆಯಿಂದ ಪಂದ್ಯಾವಳಿಗಳು ಪ್ರಾರಂಭವಾಗಿವೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಓ1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ (Television Premier League) ನಡೆಸುತ್ತಾ ಬಂದಿದ್ದು, ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದೆ. ನಿನ್ನೆಯಿಂದ 3ನೇ ಸೀಸನ್ ಶುರುವಾಗಿದ್ದು, ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ.

    ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಮೊದಲ ದಿನ ನಡೆದ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್ ಹಾಗೂ ಜಿಎಲ್ ಆರ್ ವಾರಿಯರ್ಸ್ ಹಾಗೂ ರಾಸು ವಾರಿಯರ್ ತಂಡಗಳು ಜಯಗಳಿಸಿವೆ.

    ಯಾವ ಯಾವ ತಂಡಗಳು ಭಾಗಿ?

    ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೆವಿಯರ್, ಎವಿಆರ್ ಟಸ್ಕರ್ಸ್, ರಾಸು ವಾರಿಯರ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್‌ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್‌ಗಳಿದ್ದಾರೆ. ಎವಿಆರ್ ಗ್ರೂಪ್ಸ್ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

    ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್‌ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ (Loose Madha Yogi) ನಾಯಕನಾದರೆ ರಾಜೇಶ್ ಎಲ್ ಓನರ್ ಆಗಿದ್ದಾರೆ. ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕನಾದರೆ ಮೋನಿಶ್ ಓನರ್ ಆಗಿದ್ದಾರೆ. ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕನಾಗಿದ್ದು, ಸ್ವಸ್ತಿಕ್ ಆರ್ಯ ಓನರ್ ಆಗಿದ್ದಾರೆ.

    ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ (Dheekshith Shetty) ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ತಂಡಕ್ಕೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೆವಿಯರ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮಿಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi)  ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3ನಲ್ಲಿ ಆಡುತ್ತಿರುವುದು ವಿಶೇಷ.

  • ಕಿರುತೆರೆಯಲ್ಲಿ ಕ್ರಿಕೆಟ್: TPL-ಮೂರನೇ ಸೀಸನ್ ಟೀಂ ಲೋಗೋ ಲಾಂಚ್

    ಕಿರುತೆರೆಯಲ್ಲಿ ಕ್ರಿಕೆಟ್: TPL-ಮೂರನೇ ಸೀಸನ್ ಟೀಂ ಲೋಗೋ ಲಾಂಚ್

    ಕ್ರಿಕೆಟ್ ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟ ಪಡ್ತಾರೆ. ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -3 ನಡೆಯಲಿದೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಬಿ.ಆರ್.ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ  ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಟಿಪಿಎಲ್ ಸೀಸನ್-3 ಟೀಂ ಲೋಗೋ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜಯಂತ್ ಕುಮಾರ್ ವೀರಶೈವ ವೇದಿಕೆ ರಾಷ್ಟ್ರೀಯ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

    ಬಳಿಕ ಮಾತನಾಡಿದ ಜಯಂತ್ ಕುಮಾರ್ , TPL ಸೀಸನ್ 3ರ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಜನವರಿ 24 ರಿಂದ 28ರವರೆಗೆ 5ದಿನ ಜರುಗಲಿದೆ. ಈ TPL ಸೀಸನ್ ಗೆ ನಮ್ಮ ಸಂಪೂರ್ಣ ಬೆಂಬಲ ಹಾಗು ಯಾವುದೇ ಸಹಾಯ ನಾನು ಮಾಡಲು ಸಿದ್ಧ ಮತ್ತು ಮುಂದಿನ ಕಾರ್ಯಕ್ರಮದಲ್ಲಿ ಕೇಂದ್ರ ಹಾಗು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಶ್ರೀ ಸುನೀಲ್ ಕುಮಾರ್ ಬಿ ಆರ್ ರವರಿಗೆ ಹೇಳಿದರು. ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಟ್ಟಾರೆ 10 ತಂಡಗಳು ಭಾಗಿಯಾಗಲಿದ್ದು, 150 ಫ್ಲೇಯರ್ಸ್ ಇರಲಿದ್ದಾರೆ. ಒಂದು ಟೀಂನಲ್ಲಿ 15 ಜನ ಇರ್ತಾರೆ. ಒಂದು ಗ್ರೂಪ್ ಗೆ 4 ಲೀಗ್ ಮ್ಯಾಚ್ ಇರುತ್ತದೆ. ಲೀಗ್ ಮ್ಯಾಚ್ ಬಳಿಕ ಸೆಮಿ ಫೈನಲ್, ಫೈನಲ್ ಇರುತ್ತದೆ. ಒಟ್ಟು 23 ಪಂದ್ಯಾವಳಿ ಇರಲಿದೆ. ಹುಬ್ಬಳ್ಳಿಯಲ್ಲಿ ಈ ಬಾರಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಜನವರಿ 24 ರಿಂದ 28ರವೆಗೆ ಪಂದ್ಯ ನಡೆಯಲಿದೆ ಎಂದು ತಿಳಿಸಿದರು.

    ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, KKR ಮೀಡಿಯಾ ಹೌಸ್, ಖುಷಿ 11, AVR tuskers, ರಾಸು ವಾರಿಯರ್, ಭಜರಂಗಿ ಬಾಯ್ಸ್, The bull squad, Insane Cricket team, GLR ವಾರಿಯರ್ಸ್ ಎಂಬ 10 ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ. ಎ ವಿ ಆರ್ ಗ್ರೂಪ್ಸ್ ನ ಹೆಚ್.ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

    ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ-ರಂಜಿತ್ ಕುಮಾರ್.ಎಸ್ ಓನರ್, GLR ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕ-ರಾಜೇಶ್ ಎಲ್ ಓನರ್, Insane Cricket team ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, The bull squad ತಂಡಕ್ಕೆ ಶರತ್ ಪದ್ಮಾನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, AVR tuskers ಚೇತನ್ ಸೂರ್ಯ ನಾಯಕ- ಅರವಿಂದ್ ವೆಂಕಟ್ ರೆಡ್ಡಿ ಓನರ್, ಖುಷಿ 11 ಅಲಕ್ ನಂದ ಶ್ರೀನಿವಾಸ್ ನಾಯಕ-ಅನಿಲ್ ಬಿಆರ್ ಓನರ್, KKR ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಟಿಪಿಎಲ್ ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ರಾಗಿಣಿ ದ್ವಿವೇದಿ ಇದ್ದಾರೆ.

    ಈ ಬಾರಿಯ ಟೆಲಿಮಿಷನ್ ಪ್ರೀಮಿಯರ್ ಲೀಗ್ ಸೀಸನ್-3ನಲ್ಲಿ ಮಾಧ್ಯಮದವರಿಗೂ ಅವಕಾಶ ನೀಡಲಾಗಿದೆ. ಈ ಬಾರಿ ಪಂದ್ಯಾವಳಿ ವಿಶೇಷ ಎಂದರೆ ಎನ್ 1 ಕ್ರಿಕೆಟ್ ಅಕಾಡೆಮಿಯಿಂದ ಮ್ಯಾನ್ ಆಫ್ ದಿ ಸೀರಿಸ್ ಪಟ್ಟ ಪಡೆದವರಿಗೆ ಕಾರು, ಆರೆಂಜ್ ಕ್ಯಾಪ್ ಹೋಲ್ಡರ್(batsman), ಪರ್ಪಲ್ ಕ್ಯಾಪ್ ಹೋಲ್ಡರ್(bowler) ಪಡೆದವರಿಗೆ ಬೈಕ್ ಕೊಡಲಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ  ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಾಪತ್ತೆಯಾದ ಲೋಕೇಶ್

    ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.  ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]