Tag: ಟಿಪ್ಪರ್

  • ಸಿಲಿಂಡರ್ ಸಾಗಾಟ ಲಾರಿ, ಟಿಪ್ಪರ್ ಮಧ್ಯೆ ಡಿಕ್ಕಿ – ಅಪಘಾತದ ರಭಸಕ್ಕೆ ಒಂದೊಂದಾಗಿ ಸಿಲಿಂಡರ್ ಸ್ಫೋಟ

    ಸಿಲಿಂಡರ್ ಸಾಗಾಟ ಲಾರಿ, ಟಿಪ್ಪರ್ ಮಧ್ಯೆ ಡಿಕ್ಕಿ – ಅಪಘಾತದ ರಭಸಕ್ಕೆ ಒಂದೊಂದಾಗಿ ಸಿಲಿಂಡರ್ ಸ್ಫೋಟ

    ಹುಬ್ಬಳ್ಳಿ: ಅಡುಗೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಮತ್ತು ಟಿಪ್ಪರ್ ನಡುವೆ ಮಾಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೊಂದಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿಯ ಭಂಡಿವಾಡ ಗ್ರಾಮದ ಬಳಿ ನಡೆದಿದೆ.

    ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆ ಉರುಳಿ ಬಿದ್ದು ಬೆಂಕಿ ಹೊತ್ತಿಕೊಂಡು, ಈ ಬೆಂಕಿಯಿಂದ ಲಾರಿಯಲ್ಲಿದ್ದ ಸಿಲಿಂಡರ್ ಗಳು ಒಂದೊಂದಾಗಿ ಸ್ಫೋಟಗೊಂಡಿವೆ. ಪರಿಣಾಮ ಅಕ್ಕಪಕ್ಕದ ಹೊಲದಲ್ಲಿ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹೀಗಾಗಿ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ಸವಾರರಲ್ಲಿಯೂ ಭಯದ ವಾತಾವರಣ ನಿರ್ಮಾಣವಾಗಿದೆ.

    300 ಕ್ಕೂ ಹೆಚ್ಚು ಸಿಲಿಂಡರ್ ಪೈಕಿ ಸುಮಾರು 180 ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟಗೊಂಡಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ, ಕೆಲಹೊತ್ತು ಕಾರ್ಯಚರಣೆ ಮಾಡಲು ಆಗದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲಾಯಿತು. ಇದರಿಂದ ಹುಬ್ಬಳ್ಳಿ- ಗದಗ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ವಾಹನ ಸವಾರರು ಪರದಾಡುವಂತಹ ಸ್ಥಿತಿಯಿತ್ತು.

    ಘಟನೆಯಿಂದ ಲಾರಿ ಮತ್ತು ಟಿಪ್ಪರ್ ಚಾಲಕರು ಹಾಗೂ ಕ್ಲೀನರ್ ಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗ್ತಿದ್ದಾಗ ಬೈಕ್, ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ದುರ್ಮರಣ

    ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗ್ತಿದ್ದಾಗ ಬೈಕ್, ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ದುರ್ಮರಣ

    ಚಿಕ್ಕಬಳ್ಳಾಪುರ: ಪಲ್ಸರ್ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಬಳಿ ನಡೆದಿದೆ.

    ಆಂಧ್ರಪ್ರದೇಶದ ಅನಂತಪುರ ಮೂಲದ ರಾಕೇಶ್(23) ಮೃತ ಯುವಕ. ಇಂದು ಬೆಳಗ್ಗೆ ಒಂದೇ ಬೈಕ್‍ನಲ್ಲಿ ಮೂವರು ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ಸರಿಯಾಗಿ ರಸ್ತೆ ಕಾಣದೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

    ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

    ಈ ಘಟನೆ ಹೊಸೂರು ಮುಖ್ಯರಸ್ತೆ ಹೊಸರೋಡ್ ಜಂಕ್ಷನ್ ನಲ್ಲಿ ನಡೆದಿದೆ. ತನ್ನ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಮಂಜುನಾಥ್ ಕೆಳಗೆ ಬಿದ್ದಿದ್ದು, ಅವರ ಮೇಲೆ ಟಿಪ್ಪರ್ ಹರಿದಿದೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಟಿಪ್ಪರ್ ಚಾಲಕ ಗಣೇಶನನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

    ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ವೇಗವಾಗಿ ಬಂದ ಬೈಕ್ ಪಿಕಪ್ ಟ್ರಕ್ ಗೆ ಡಿಕ್ಕಿ- ಸವಾರರಿಬ್ಬರ ದುರ್ಮರಣ

    ವೇಗವಾಗಿ ಬಂದ ಬೈಕ್ ಪಿಕಪ್ ಟ್ರಕ್ ಗೆ ಡಿಕ್ಕಿ- ಸವಾರರಿಬ್ಬರ ದುರ್ಮರಣ

    ಕಾರವಾರ: ಬೈಕ್ ಮತ್ತು ಪಿಕಪ್ ಟ್ರಕ್ ನಡುವೆ ನಡೆದ ಡಿಕ್ಕಿಯ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿವಾಡದಲ್ಲಿ ನಡೆದಿದೆ.

    ತಾಲೂಕಿನ ಕಿರವತ್ತಿಯ ಮಾಲತೇಶ್(31) ರವಿದಾಸ್ (25) ಮೃತ ವ್ಯಕ್ತಿಗಳಾಗಿದ್ದಾರೆ.  ಯಲ್ಲಾಪುರದಿಂದ ಅಂಕೋಲದ ಕಡಗೆ ಪಿಕಪ್ ಟ್ರಕ್ ಸಾಗುತಿದ್ದ ವೇಳೆ ಕಿರುವತ್ತಿಯಿಂದ ಯಲ್ಲಾಪುರಕ್ಕೆ ಸಾಗುತ್ತಿದ್ದ ಬೈಕ್ ವೇಗದಲ್ಲಿ ಬಂದು ಪಿಕಪ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಾಲತೇಶ್ ಹಾಗೂ ರವಿದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಘಟನೆಯಿಂದ ಚಾಲಕ ರವಿಶಂಕರ್ ಘಾಟಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವವನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಟಿಪ್ಪರ್

    ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಟಿಪ್ಪರ್

    ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಟಿಪ್ಪರ್‍ವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

    ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಸಂಸ್ಥೆಗೆ ಸೇರಿದ ಟಿಪ್ಪರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಟಿಪ್ಪರ್ ಹೆದ್ದಾರಿಯಲ್ಲಿ ಹೋಗುತ್ತಿದ್ದಂತೆ ಮೊದಲು ಮುಂಭಾಗದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕೆಲ ಕ್ಷಣದಲ್ಲಿಯೇ ಟಿಪ್ಪರ್ ಹೊತ್ತಿ ಉರಿಯಲು ಆರಂಭಿಸಿದೆ.

    ಇದನ್ನು ಗಮನಿಸಿದ ಚಾಲಕ ತಕ್ಷಣ ಟಿಪ್ಪರ್ ನಿಲ್ಲಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಟಿಪ್ಪರ್ ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ರಾಯಚೂರು: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್‍ನನ್ನ ಸುಮಾರು 20 ಕಿ.ಮೀ ಹಿಂಬಾಲಿಸಿ ರಾಯಚೂರಿನ ದೇವದುರ್ಗ ತಹಶೀಲ್ದಾರ್ ಹಿಡಿದಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು ತಹಶೀಲ್ದಾರ್ ಕೆ.ಶಿವಶರಣಪ್ಪ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ನಂಬರ್ ಪ್ಲೇಟ್ ಸಹ ಇಲ್ಲದೆ ಅಕ್ರಮ ದಂಧೆಯಲ್ಲಿ ತೊಡಗಿದ್ದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

    ಕೃಷ್ಣ ನದಿ ತೀರದ ಬಾಗೂರು, ಹೆರುಂಡಿ, ನಿಲವಂಜಿ, ಲಿಂಗದಹಳ್ಳಿಯಿಂದ ರಾತ್ರಿ-ಹಗಲು ಅಕ್ರಮ ಮರಳುಗಾರಿಕೆ ನಡೆದಿದೆ. ಇಲ್ಲಿಂದ ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಚಿಕ್ಕಬಳ್ಳಾಪುರ: ನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ ನಡೆದಿದೆ.

    ಮೃತ ಯುವಕನನ್ನು ವಿಜಯ್ ಕುಮಾರ್ (21) ಎಂದು ಗುರುತಿಸಲಾಗಿದೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ಟಿಪ್ಪರ್ ನ ಹಿಂಬದಿಗೆ ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

    ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

    https://www.youtube.com/watch?v=379h-ao45-U&feature=youtu.be

  • ನಿಂತಿದ್ದ ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

    ನಿಂತಿದ್ದ ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

    ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋದಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಬಳ್ಳಾಪುರ ತಾಲೂಕು ಅರೂರು ಗೇಟ್ ಬಳಿ ನಡೆದಿದೆ.

    ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರ ಕಡೆಗೆ ಬರುತ್ತಿದ್ದ ಟೆಂಪೋ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಿಂದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಚಿಕ್ಕಬಳ್ಳಾಪುರ ತಾಲೂಕು ಮಂಚನಬಲೆ ಗ್ರಾಮದ 21 ವರ್ಷ ವಿಜಯ್ ಕುಮಾರ್ ಮೃತ ದುರ್ದೈವಿ.

     

    ಎಲ್ಲರೂ ಕೂಲಿ ಕೆಲಸಕ್ಕೆಂದು ತರಕಾರಿ ಕೀಳಲು ಹೋಗಿ ವಾಪಸ್ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ಸಂಬಂಧ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

    ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕಾಲಿಯಾ ರಫೀಕ್ ಆರೋಪಿಯಾಗಿದ್ದು, ಮೂಲತಃ ಕೇರಳದ ಕಾಸರಗೋಡಿನ ಉಪ್ಪಳ ಗ್ರಾಮದ ನಿವಾಸಿ.

    ತಡರಾತ್ರಿ ಸ್ನೇಹಿತರ ಜೊತೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ರಫೀಕ್ ಕಾರಿಗೆ ಟಿಪ್ಪರ್‍ನಲ್ಲಿ ಡಿಕ್ಕಿ ಹೊಡೆದು, ಬಳಿಕ ತಲ್ವಾರ್‍ಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ರಫೀಕ್ ಮೇಲೆ ಫೈರಿಂಗ್ ಮಾಡಿದ್ದಾರೆ.

    ರಫೀಕ್ ಜೊತೆಯಿದ್ದ ಸ್ನೇಹಿತರ ಮೇಲೆಯೂ ತಲ್ವಾರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಹಲ್ಲೆಗೊಳಗಾದ ರಫೀಕ್ ಸ್ನೇಹಿತರು ಬೆರಳಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಸ್ನೇಹಿತರು ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉಪ್ಪಳದ ನೂರ್ ಅಲಿ ಹಾಗೂ ಐವರ ತಂಡ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.

    ಸ್ಥಳಕ್ಕೆ ಎಸಿಪಿ ಶೃತಿ, ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ, ಮಂಗಳೂರು ಸಿಸಿಬಿ ಪೊಲೀಸ್, ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.