Tag: ಟಿಪ್ಪು

  • ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ – ಸಿದ್ದರಾಮಯ್ಯಗೆ ರಘುಪತಿ ಭಟ್ ಪ್ರಶ್ನೆ

    ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ – ಸಿದ್ದರಾಮಯ್ಯಗೆ ರಘುಪತಿ ಭಟ್ ಪ್ರಶ್ನೆ

    -ಕೇಸರಿ ಬಟ್ಟೆ ಧರಿಸಿದ ಕಾಪು ಪೊಲೀಸರು

    ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿಯ ಕಾಪು ಪೊಲೀಸರು ಕೇಸರಿ ಬಟ್ಟೆ ಧರಿಸಿದ ಫೋಟೋ ಟ್ವೀಟ್ ಮಾಡಿ ಟೀಕಿಸಿದ್ದರು. ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ? ನೀವು ಟಿಪ್ಪುವಿನ ಪೋಷಾಕು ಧರಿಸಿ, ಖಡ್ಗ ಹಿಡಿದಿಲ್ಲವೇ? ಪಚ್ಚೆ ಶಾಲು, ಟೊಪ್ಪಿ ಧರಿಸಿದಾಗ ಭಾವೈಕ್ಯತೆ ನೆನಪಾಗಲಿಲ್ಲವೇ? ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೆ ಏನು ಸಮಸ್ಯೆ? ಎಂದು ಉಡುಪಿ ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ.

    ಪೊಲೀಸರು ವಿಜಯದಶಮಿಯಂದು ಕೇಸರಿ ಉಡುಪು ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪಿಸಿ ಟ್ವೀಟ್ ಮಾಡಿದ್ದರು. ಪೊಲೀಸರ ಕೈಗೆ ತ್ರಿಶೂಲ ಕೊಟ್ಟುಬಿಡಿ ಎಂದು ಕಿಡಿಕಾರಿದ್ದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ತ್ಯಾಗದ ಸಂಕೇತ. ದೇಶದಲ್ಲಿ ಕೇಸರಿಯನ್ನು ಹಿಂದಿನಿಂದಲೂ ಪೂಜಿಸಿಕೊಂಡು ಬಂದಿದ್ದೇವೆ. ಅಲ್ಪಸಂಖ್ಯಾತರ ಮತ ಬ್ಯಾಂಕ್ ಉದ್ದೇಶವಿಟ್ಟುಕೊಂಡು ಕೇಸರಿಯನ್ನು ದ್ವೇಷಿಸಿದ್ದೀರಿ. ಕೇಸರಿಯನ್ನು ದ್ವೇಷಿಸಿದಕ್ಕೆ ಕಾಂಗ್ರೆಸ್‍ಗೆ ಈ ಪರಿಸ್ಥಿತಿ ಬಂದಿದೆ. ಕೇಸರಿಯನ್ನು ವಿರೋಧಿಸಿದರೆ ಇನ್ನಷ್ಟು ಮೂಲೆಗುಂಪಾಗುತ್ತೀರಿ. ಹಬ್ಬದ ದಿನ ಪೊಲೀಸರು ಕೇಸರಿ ಧರಿಸಿದ್ದನ್ನು ಸಮರ್ಥಿಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ತ್ರಿಶೂಲಗಳನ್ನು ಕೊಟ್ಟು ಹಿಂಸೆಯ ದೀಕ್ಷೆ ಕೊಡಿ: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

    ನಮ್ಮ ರಾಷ್ಟ್ರ ಧ್ವಜದಲ್ಲಿ ಕೇಸರಿ ಬಣ್ಣ ಇದೆ. ಕೇಸರಿ ಧರಿಸಿದ್ದು ಅಪರಾಧವೇನಲ್ಲ. ಸಿದ್ದರಾಮಯ್ಯ ಭಾವನೆ ಈ ಟ್ವೀಟ್‍ನಿಂದ ಗೊತ್ತಾಗುತ್ತೆ. ತ್ರಿಶೂಲ ಯಾರನ್ನೂ ಕೊಲ್ಲುವ ಆಯುಧವಲ್ಲ. ತ್ರಿಶೂಲ ಹಿಂದೂಗಳು ಆರಾಧಿಸುವ ಆಯುಧ. ಪೊಲೀಸರಿಗೆ ತ್ರಿಶೂಲ ಕೊಡುವುದು ಒಳ್ಳೆಯ ಸಂಗತಿ. ಸಿದ್ದರಾಮಯ್ಯನವರು ಹೇಳಿರುವುದು ಸರಿಯಾಗಿದೆ ಎಂದು ಶಾಸಕ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ದುರ್ಗಾ ದೌಡ್ – ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಕಾರ್ಯಕರ್ತರು

  • ಟಿಪ್ಪು ಕುರಿತ ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಬಿಜೆಪಿ ಅಭಿಪ್ರಾಯವಲ್ಲ: ಸುರೇಶ್ ಕುಮಾರ್

    ಟಿಪ್ಪು ಕುರಿತ ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಬಿಜೆಪಿ ಅಭಿಪ್ರಾಯವಲ್ಲ: ಸುರೇಶ್ ಕುಮಾರ್

    ಚಾಮರಾಜನಗರ: ಟಿಪ್ಪು ಸುಲ್ತಾನ್ ಕುರಿತು ಮಾಜಿ ಸಚಿವ ವಿಶ್ವನಾಥ್ ಅವರದ್ದು ವೈಯಕ್ತಿಕ ಅಭಿಪ್ರಾಯವೇ ಹೊರತು ಬಿಜೆಪಿಯ ಅಭಿಪ್ರಾಯವಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ವಿಶ್ವನಾಥ್ ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದೆ, ಆದರೆ ಬಿಜೆಪಿಯ ನಾಯಕರಾಗಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಮಾತನಾಡುವ ಮುನ್ನ ಪಕ್ಷ ನಿಲುವೇನು ಎಂಬುದನ್ನು ಯೋಚಿಸಬೇಕು ಅವರು ಎಂಎಲ್ ಸಿ ಹೆಚ್.ವಿಶ್ವನಾಥ್ ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟಾಂಗ್ ನೀಡಿದ್ದಾರೆ.

    ಒಂದು ಬಾರಿ ಪಕ್ಷಕ್ಕೆ ಸೇರಿದ ಮೇಲೆ ಇಲ್ಲಿನ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕು. ಹೆಚ್.ವಿಶ್ವನಾಥ್ ಪ್ರಬುದ್ಧರಿದ್ದಾರೆ. ಈ ರೀತಿ ಮಾತನಾಡುವಾಗ ಯಾವ ಪಕ್ಷದಲ್ಲಿದ್ದೇನೆ ಅನ್ನುವುದನ್ನು ಯೋಚನೆ ಮಾಡಿ ಮಾತನಾಡಿದರೆ ಒಳಿತು ಎಂದು ಪರೋಕ್ಷವಾಗಿ ವಿಶ್ವನಾಥ್‍ಗೆ ಎಚ್ಚರಿಕೆ ಕೊಟ್ಟರು. ವಿಶ್ವನಾಥ್ ಅವರ ಸ್ವಭಾವವೇ ಹಾಗೇ ಯಾವುದಾದರೂ ವಿಚಾರ ಬಂದರೆ ಮುನ್ನುಗ್ಗಿ ಮಾತನಾಡುತ್ತಾರೆ. ಅವರ ಯಾವುದೋ ಒಂದು ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದಿಲ್ಲ ಎಂದರು.

    ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು ವಿಶ್ಚನಾಥ್ ಅವರಿಗೆ ಅನುಭವವಿದೆ. ಆದರೆ ಅವರು ಸಚಿವರಾಗುವುದು ಕಾನೂನಿಗೆ ಬಿಟ್ಟ ವಿಚಾರ. ಕಾನೂನು ಪಂಡಿತರು ಅದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವ ಮೂಲಕ ಸಚಿವ ವಿಶ್ವನಾಥ್ ಗೆ ಮಂತ್ರಿಗಿರಿ ಸಿಗುವುದಕ್ಕೆ ಕಾನೂನು ತೊಡಕಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದರು.

  • ಟಿಪ್ಪು ಕಾಲದಲ್ಲಿದ್ದ ಮತಾಂತರ, ದೌರ್ಜನ್ಯವನ್ನು ಬಿಜೆಪಿ ಮರೆಯಲ್ಲ: ಅಶೋಕ್

    ಟಿಪ್ಪು ಕಾಲದಲ್ಲಿದ್ದ ಮತಾಂತರ, ದೌರ್ಜನ್ಯವನ್ನು ಬಿಜೆಪಿ ಮರೆಯಲ್ಲ: ಅಶೋಕ್

    – ವಿಶ್ವನಾಥ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ

    ಯಾದಗಿರಿ: ಟಿಪ್ಪುವಿನ ಕಾಲದಲ್ಲಿದ್ದ ಮತಾಂತರ ದೌರ್ಜನ್ಯ, ಕಗ್ಗೊಲೆ ಜೊತೆಗೆ ಕೊಡಗಿನಲ್ಲಿ ಮತಾಂತರ ಮಾಡಿದ್ದು ಇನ್ನೂ ನಮ್ಮ ಕಣ್ಮುಂದೆ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

    ಇದೇ ವೇಳೆ ಟಿಪ್ಪು ಬಗ್ಗೆ ಹೆಚ್.ವಿಶ್ವನಾಥ್ ಹೇಳಿಕೆ ವಿಚಾರವಾಗಿ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಟಿಪ್ಪುವಿಗೆ ಯಾವಾಗಲೂ ನಮ್ಮ ವಿರೋಧವಿದೆ. ನಮ್ಮ ನಿಲುವಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ಪಕ್ಷ ಹಿಂದೆ ಏನ್ ಹೇಳಿದೆ ಅದಕ್ಕೆ ಈಗಲೂ ಬದ್ಧವಾಗಿದೆ. ವಿಶ್ವನಾಥ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದರು.

    ಜೊತೆಗೆ ಸಿಎಂ ಪುತ್ರ ವಿಜಯೇಂದ್ರ ಬಗ್ಗೆ ಕಾಂಗ್ರೆಸ್ ನಾಯಕರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಆ ರೀತಿ ಏನೂ ನಡೆದಿಲ್ಲ. ಸುಮ್ಮನೆ ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡೋದು ಸರಿಯಲ್ಲ. ಸಾಕ್ಷ್ಯಾಧಾರ ಇಲ್ಲದೆ ಮಾತಾಡೋದು ತಪ್ಪು ಎಂದು ಹೇಳಿದರು.

  • ಸಿಎಂ ಬದಲಾವಣೆ ಮಾಡಿದ್ರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ: ಮುತಾಲಿಕ್

    ಸಿಎಂ ಬದಲಾವಣೆ ಮಾಡಿದ್ರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ: ಮುತಾಲಿಕ್

    – ಓವೈಸಿಯನ್ನು ನಾಯಿ ಹೋಲಿಸಿದ ಪ್ರಮೋದ್

    ಕೊಪ್ಪಳ: ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದ್ರೆ, ಅಂತವರನ್ನ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

    ಕೊಪ್ಪಳದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ರಾಜಕೀಯ ದುಷ್ಟತನ ಮಾಡಬೇಡಿ. ಒಂದು ವೇಳೆ ರಾಜಕೀಯ ದುಷ್ಟತನ ಮಾಡಿದರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ. ಈ ಹಿಂದೆ ಅನಂತ್ ಕುಮಾರ್ ಹೆಗಡೆ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿದ್ರು. ಹಿಂದೆ ಕತ್ತಿ ನಾನೇ ಮುಖ್ಯಮಂತ್ರಿ ಎಂದರು. ಇದೆಲ್ಲ ಸುಳ್ಳು, ಅನಾವಶ್ಯಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮುತಾಲಿಕ್ ಮನವಿ ಮಾಡಿದರು.

    ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಕೈ ಬಿಟ್ಟ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ನಾನು ಇದನ್ನು ಸ್ವಾಗತ ಮಾಡ್ತೀನಿ. ಟಿಪ್ಪು ಒಬ್ಬ ಮತಾಂಧ, ದೇಶದ್ರೋಹಿ, ಈತನನ್ನು ಪಠ್ಯಪುಸ್ತಕದಿಂದ ತೆಗೆದಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದರು.

    ಇದೇ ವೇಳೆ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಮೋದಿ ಭಾಗಿಯಾಗಬಾರದು ಎಂದು ಓವೈಸಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮೋದಿ ಆನೆ ಇದ್ದಂಗೆ. ಓವೈಸಿ ನಾಯಿ ಇದ್ದಂಗೆ, ಅದೊಂದು ಕಸದ ತುಂಡು. ಹೀಗಾಗಿ ಅಂತವರು ಬೊಗಳಿದ್ರೆ ಏನೂ ಆಗಲ್ಲ ಎನ್ನುವ ಮೂಲಕ ಓವೈಸಿಯನ್ನು ನಾಯಿಗೆ ಹೋಲಿಸಿದರು.

    ಯಾವುದೇ ಗದ್ದಲ ಗಲಭೆ ಇಲ್ಲದೆ ರಾಮಮಂದಿರ ನಿರ್ಮಾಣ ಕಾರ್ಯ ಆಗತ್ತೆ ಎಂದು ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.

  • ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಕೈಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಪತ್ರ

    ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಕೈಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಪತ್ರ

    ಮಡಿಕೇರಿ: ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‍ಗೆ ಪತ್ರ ಬರೆದಿರುವ ಅವರು, ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಆದರೆ ಸ್ವಾತಂತ್ರ್ಯ ಹೋರಾಟಗಾರ ಎಂದು ಪಠ್ಯಪುಸ್ತಕಗಳಲ್ಲಿ ವೈಭವೀಕರಿಸಲಾಗಿದೆ. ಟಿಪ್ಪು ಫ್ರೆಂಚ್‍ರೊಂದಿಗೆ ಕೈ ಜೋಡಿಸಿದ್ದ, ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ ಸಹಾಯ ಪಡೆಯುತ್ತಿದ್ದನು. ಅಲ್ಲದೆ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು. ಕೊಡಗಿನಲ್ಲಿಯೂ ಹಿಂದೂಗಳನ್ನು ಮತಾಂತರ ಮಾಡಿದ್ದ ಮತ್ತು ಹತ್ಯೆ ಮಾಡಿದ್ದ. ಟಿಪ್ಪು ಒಬ್ಬ ಮತಾಂಧನಾಗಿದ್ದ. ಇಂತಹವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ಈ ಎಲ್ಲ ಕಾರಣಗಳಿಂದ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.

  • ಟಿಪ್ಪು ಯಾರು..!?

    ಟಿಪ್ಪು ಯಾರು..!?

    https://www.youtube.com/watch?v=v2VBQNJ1pFc

  • ಹಜ್ ಭವನಕ್ಕೆ ಟಿಪ್ಪು ಹೆಸರನ್ನು ಇಟ್ಟರೆ ಹಿಂದೂಗಳು ದಂಗೆ ಏಳ್ತಾರೆ: ಸೊಗಡು ಶಿವಣ್ಣ

    ಹಜ್ ಭವನಕ್ಕೆ ಟಿಪ್ಪು ಹೆಸರನ್ನು ಇಟ್ಟರೆ ಹಿಂದೂಗಳು ದಂಗೆ ಏಳ್ತಾರೆ: ಸೊಗಡು ಶಿವಣ್ಣ

    ತುಮಕೂರು: ಮೊಘಲರ ದೌಲತ್ತನ್ನು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಈಗ ಮತ್ತೆ ತೋರಿಸುವುದಕ್ಕೆ ಮುಂದಾಗುತ್ತಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿ ಕಾರಿದ್ದಾರೆ.

    ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಏಕವಚನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜಮೀರ್‍ನನ್ನು ಹೀಗೆಬಿಟ್ಟರೆ ಮುಂದೊಂದು ದಿನ ಹಜ್ ಭನಕ್ಕೆ ಅಷ್ಟೇ ಅಲ್ಲ, ವಿಧಾನಸೌಧಕ್ಕೂ ಟಿಪ್ಪು ಹೆಸರು ಇಡುತ್ತಾನೆ. ಹಜ್ ಭವನಕ್ಕೆ ಟಿಪ್ಪು ಹೆಸರನ್ನು ಇಟ್ಟಿದ್ದೇ ಆದರೆ ಹಿಂದೂಗಳು ದಂಗೆ ಏಳುವುದು ಖಚಿತ ಎಂದು ಹೇಳಿದರು.

    ನಾವು ಮೊಘಲರ ದಾಳಿ ಸಹಿಸಿಕೊಂಡಿದ್ದೇವೆ. ಬ್ರಿಟಿಷ್ ಹಿಂಸೆ ಸಹಿಸಿಕೊಂಡಿದ್ದೇವೆ. ಇನ್ನು ಮುಂದೆ ನಮ್ಮ ಮೇಲಾಗುವ ಹಿಂಸೆಯನ್ನು ಸಹಿಸಿಕೊಳ್ಳಲ್ಲ. ಕಂಪ್ಯೂಟರ್ ಯುಗದಲ್ಲಿ ಮೊಘಲ್ ಆಳ್ವಿಕೆಯನ್ನು ತೋರಿಸಲು ಜಮೀರ್ ಮುಂದಾಗುತ್ತಿದ್ದಾರೆ. ಇದನ್ನು ಹಿಂದೂಗಳು ಸಹಿಸುವುದಿಲ್ಲ. ಇದು ಕಾಶ್ಮೀರವಲ್ಲ ಜಮೀರ್ ಅವರೇ ಕರ್ನಾಟಕ ಎಂದು ಹೇಳಿ ವಾಗ್ದಾಳಿ ನಡೆಸಿದರು.

    ಅದೃಷ್ಟವಶಾತ್ ಜಮೀರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ಜಮ್ಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಇಂತಹ ಹೇಳಿಕೆ ಮೂಲಕ ಜಮೀರ್ ಅವರು ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಜಮೀರ್ ಅವರು ತಮ್ಮ ಉದ್ಧಟತನವನ್ನು ಹೀಗೆ ಮುಂದುವರಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.