ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು (Kadugolla Community) ಪರಿಶಿಷ್ಟ ಪಂಗಡಕ್ಕೆ (ST) ಸೇರ್ಪಡೆ ಮಾಡುವ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಅವರು ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರನ್ನು ದೆಹಲಿಯಲ್ಲಿ (New Delhi) ಭೇಟಿ ಮಾಡಿ ಚರ್ಚೆ ಮಾಡಿದರು.
ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ ಅವರು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಸಹಾಯ ಮಾಡುವಂತೆ ಟಿ.ಬಿ ಜಯಚಂದ್ರ ಅವರು ಕೇಂದ್ರ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ
ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದರಿಂದ ಆ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಸವಲತ್ತುಗಳು ದೊರೆಯಲಿವೆ ಎಂದು ಜಯಚಂದ್ರ ಅವರು ಇದೇ ವೇಳೆ ಕೇಂದ್ರ ಸಚಿವರ ಗಮನಕ್ಕೆ ತಂದರು. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?
ಬೆಂಗಳೂರು: ಲೋಕಸಭಾ ಚುನಾವಣೆ (Loksabha Election) ಸ್ಪರ್ದೆ ವಿಚಾರದಲ್ಲಿ ನನಗಂತೂ ಯಾವುದೇ ಆಸಕ್ತಿ ಇಲ್ಲ. ನನ್ನ ದೊಡ್ಡ ಮಗನಿಗೆ ಆಸಕ್ತಿ ಇದೆ ಎಂದು ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ ಜಯಚಂದ್ರ (TB Jayachandra) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ರಾಜಕೀಯವಾಗಿ ಸಮುದಾಯಗಳನ್ನ ಓಲೈಕೆ ಮಾಡಬೇಕಾಗುತ್ತೆ. ತುಮಕೂರಿನಲ್ಲಿ ಕುಂಚಿಟಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡೋದು ಸೂಕ್ತ ಮುದ್ದು ಹನುಮೇಗೌಡ, ಸೋಮಣ್ಣ ಬಗ್ಗೆ ಊಹಾಪೋಹ ಮಾತುಗಳು ಬರುತ್ತವೆ ಎಂದಿದ್ದಾರೆ. ಇದನ್ನೂ ಓದಿ: MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ
ಅವರು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ತುಮಕೂರು ಬಗ್ಗೆ ಚರ್ಚೆ ಆಗಿಲ್ಲ, ಚಿತ್ರದುರ್ಗದ ಬಗ್ಗೆ ಚರ್ಚೆ ಆಗಿದೆ. ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಖಂಡಿತಾ ಅನಿವಾರ್ಯವಲ್ಲ. ಅವರನ್ನ ವಾಪಸ್ ಕರೆದುಕೊಂಡು ಬರೋದು ಅಷ್ಟು ಸಮಂಜಸವಲ್ಲ. ವಿ.ಸೋಮಣ್ಣ, ಮುದ್ದಹನುಮೇಗೌಡ ಇಬ್ಬರೂ ಬಿಜೆಪಿಯಲ್ಲೇ ಇದ್ದಾರೆ. ಅವರು ಅಲ್ಲಿರುವಾಗ ನಮ್ಮಲ್ಲೇಕೆ ಚರ್ಚೆ ಎಂದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ‘ಜೋಡೆತ್ತು’ ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ (K. C. Venugopal) ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದಿದೆ. ಪ್ರಮುಖ ಖಾತೆಗಳನ್ನು ತಮ್ಮ ಆಪ್ತ ಶಾಸಕರಿಗೆ ನೀಡುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ
ಸಚಿವ ಸ್ಥಾನ, ಖಾತೆ ವಿಚಾರವಾಗಿ ಒಮ್ಮತ ಮೂಡದ ಪರಿಣಾಮ ಕೇವಲ 8 ಮಂದಿ ಮಾತ್ರ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆಯಿದೆ.
ಬೆಂಗಳೂರು: ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ಶಿರಾ ಕ್ಷೇತ್ರದ ಕಾಂಗ್ರೆಸ್‍ನ ಮಾಜಿ ಸಚಿವ ಟಿಬಿ ಜಯಚಂದ್ರ ಅವರು ವೀಡಿಯೋ ಮೂಲಕ ತಿಳಿಸಿದ್ದಾರೆ.
ಘಟನೆ ಕುರಿತು ಖಾಸಗಿ ಆಸ್ಪತ್ರೆಯಿಂದಲೇ ವೀಡಿಯೋ ಕಳುಹಿಸಿರುವ ಅವರು, ರಾತ್ರಿ ನಾನು ಸಂಚರಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಅಪಘಾತ ಆಗಿದೆ ಎಂದು ಮಾಹಿತಿ ನೀಡಿದರು.
ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಭಯ ಪಡುವ ಅಗತ್ಯವಿಲ್ಲ. ಸಣ್ಣ ಗಾಯವಾಗಿದ್ದು 3-4 ವಾರ ಆಸ್ಪತ್ರೆಯಲ್ಲಿ ಇರಬೇಕು ಅಂತ ವೈದ್ಯರು ಹೇಳಿದ್ದಾರೆ. ನನ್ನನ್ನು ನೋಡಲು ಯಾರು ಬರುವುದು ಬೇಡ ಎಂದು ವೀಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನುಗ್ಗಿಕೇರಿ ಕಲ್ಲಂಗಡಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ನಡೆದಿದ್ದು ಏನು?
ಶಿರಾ ಕ್ಷೇತ್ರದ ಕಾಂಗ್ರೆಸ್‍ನ ಮಾಜಿ ಸಚಿವ ಟಿಬಿ ಜಯಚಂದ್ರ ಅವರು ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದ ಘಟನೆ ತುಮಕೂರು ತಾಲೂಕಿನ ಸಿಬಿ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ರಾತ್ರಿ ಸುಮಾರು 1 ಗಂಟೆಗೆ ನಡೆದಿದೆ. ಇದನ್ನೂ ಓದಿ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ
ಘಟನೆಯಲ್ಲಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗನ್ ಮ್ಯಾನ್ ಹಾಗೂ ಕಾರು ಚಾಲಕ ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಜಯಚಂದ್ರ ಅವರಿಗೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರು: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ.
ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇದನ್ನೂ ಓದಿ: ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ
ತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗನ್ ಮ್ಯಾನ್ ಹಾಗೂ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ.
ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.
ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. ನವೆಂಬರ್ 3ರಂದು ಮತದಾರರು ಬರೆದ ಭವಿಷ್ಯ ಇಂದು ಬಹಿರಂಗವಾಗಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷದ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು ವಿಜಯದ ಕಿರೀಟ ಯಾರ ತಲೆಯೇರಲಿದೆ ಅನ್ನೋದು ಮಧ್ಯಾಹ್ನದೊಳಗೆ ತಿಳಿಯಲಿದೆ.
ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಲಿದೆ. ಶಿರಾ ಉಪಚುನಾವನೆಯ ಕಣದಲ್ಲಿ ಒಟ್ಟು ಅಭ್ಯರ್ಥಿಗಳು 15 ಅದೃಷ್ಟ ಪರೀಕ್ಷೆ ನಡೆಸಿದ್ದು, ಕ್ಷೇತ್ರದಲ್ಲಿ 2,15,694 ಮತದಾರರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶೇ.84 ಅಂದರೇ 1,77,645 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. 4,821 ಅಂಚೆ ಮತಗಳು ಚಲಾವಣೆಯಾಗಿದೆ.
ಇಂದು 24 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದೆ. 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗೃತೆ ವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ.
ಚುನಾವಣಾ ಮತ ಎಣಿಕೆಗೆ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಮತ ಎಣಿಕಾ ಕೇಂದ್ರದ ಸುತ್ತ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು ಕ್ಷೇತ್ರದಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 3 ಸುತ್ತಿನ ಭದ್ರತೆ. ಮತ ಎಣಿಕೆ ಕೇಂದ್ರದ ಸುತ್ತ ಸೆಂಟ್ರಲ್ ಆರ್ಮಡ್ ಫೋರ್ಸ್ ಕಾರ್ಯನಿರ್ವಹಣೆ. 2 ಕೆಎಸ್‍ಆರ್‍ಪಿ, 3 ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಸೇರಿ 200ಕ್ಕೂ ಹೆಚ್ಚು ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಈ ಹಿನ್ನಲೆಯಲ್ಲಿ ಒಂದೊಂದು ಸುತ್ತಿನಲ್ಲೂ ಒಬ್ಬೊಬ್ಬರು ಮುನ್ನಡೆ ಕಾಯ್ದುಕೊಂಡು ಫಲಿತಾಂಶದಲ್ಲಿ ಕುತೂಹಲ ಹುಟ್ಟುವ ಸಾಧ್ಯತೆ ಇದೆ. 6 ಜಿ.ಪಂ ಕ್ಷೇತ್ರ ಹಾಗೂ ನಗರ ಪ್ರದೇಶ ಸೇರಿ 7 ಕಡೆಗಳಲ್ಲಿ ಯಾರಿಗೆ ಎಷ್ಟು ಮತ ಬೀಳಲಿದೆ ಎಂಬುದು ಕುತೂಹಲ ಕೆರಳಿಸಿದೆ.
ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರು: ವಕೀಲರ ಮತ ಕೇಳಲು ಹೋದ ಕಾನೂನು ಸಚಿವ ಟಿಬಿ ಜಯಚಂದ್ರ ಅವರಿಗೆ ಶಿರಾ ವಕೀಲರ ಸಂಘ ತರಾಟೆಗೆ ತೆಗೆದುಕೊಂಡಿದೆ.
ಗುಬ್ಬಿಯಲ್ಲಿ ಮೂರು ಜನ ಇದ್ದರೆ, 15 ವರ್ಷ ದಿಂದ ಶಿರಾ ಕೋರ್ಟ್‍ನಲ್ಲಿ ಸಾರ್ವಜನಿಕ ಅಭಿಯೋಜಕರಿಲ್ಲ. ಅಷ್ಟೇ ಅಲ್ಲದೇ ಎ.ಸಿ.ಕೋರ್ಟ್ ಅನ್ನು ತಿಂಗಳಲ್ಲಿ ಒಂದು ದಿನ ಶಿರಾದಲ್ಲಿ ನಡೆಸುವಂತೆ ವಕೀಲರ ಸಂಘ ಈ ಹಿಂದೆ ಜಯಚಂದ್ರ ಅವರಲ್ಲಿ ಮನವಿ ಮಾಡಿತ್ತು.
ವಕೀಲರ ಸಂಘ ಮನವಿ ಮಾಡಿದ ಸಂದರ್ಭದಲ್ಲಿ ಭರವಸೆ ನೀಡಿದ್ದ ಜಯಚಂದ್ರ ನಂತರ ಮರೆತಿದ್ದರು. ಈಗ ಜಯಚಂದ್ರ ಅವರು ವಕೀಲರ ಬಳಿ ಮತ ಕೇಳಲು ಬಂದಿದ್ದಾರೆ. ಸಚಿವರು ಬಂದ ಹಿನ್ನೆಲೆಯಲ್ಲಿ ವಕೀಲರು ಹಿಂದೆ ನೀಡಿದ್ದ ಭರವಸೆ ಏನಾಯ್ತು ಎಂದು ಪ್ರಶ್ನಿಸಿ ಜಯಚಂದ್ರ ಅವರನ್ನು ಇಂದು ತರಾಟೆಗೆ ತೆಗೆದುಕೊಂಡರು.
ಗೃಹ ಇಲಾಖೆ ಮತ್ತು ಕನೂನು ಸಚಿವಾಲಯಕ್ಕೆ ಬಹಳಷ್ಟು ಸಲ ವಕೀಲರ ಸಂಘದಿಂದ ಮನವಿಯನ್ನು ಸಲ್ಲಿಸಿದ್ದೇವೆ. ನಮ್ಮ ಕಕ್ಷೀದಾರರೇ ನಿಮ್ಮ ಮತದಾರರು ಅನ್ನುವುದನ್ನು ಮರೆಯಬಾರದು. ಕಾನೂನು ಸಚಿವರಾಗಿ ನೀವೇ ಮಾಡಿಲ್ಲ ಅಂದರೆ ಏನರ್ಥ? ಮತ ಕೇಳಲು ನಿಮಗೆ ಹೇಗೆ ಹಕ್ಕಿದೆಯೋ ಅದೇ ರೀತಿಯಾಗಿ ನಮ್ಮ ಬೇಡಿಕೆ ಈಡೇರಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಪ್ರಶ್ನಿಸಿ ಸಚಿವರಿಗೆ ವಕೀಲರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಕುಮಾರ್ ಭೇಟಿ ಮಾಡಿದ್ದಾರೆ.
ವಿಧಾನಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ತಾಯಿ-ಮಗ, ನೆಲಮಂಗಲ ತಾಲೂಕು ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಅದು ಕಂದಾಯ ಭೂಮಿ ಎಂದು ಕಾನೂನು ತಿದ್ದುಪಡಿ ಮಾಡಬೇಕಾಗಿದೆ. ಜತೆಗೆ ಬ್ಯಾರೇಜ್ ನಿರ್ಮಾಣಕ್ಕೂ ಸಚಿವರಲ್ಲಿ ಮನವಿ ಸಲ್ಲಿಸಿದರು.
ಇದಕ್ಕೆ ಜನವರಿ 27 ರಂದು ಸ್ಥಳ ಪರಿಶೀಲನೆ ಮಾಡಿ ವಿವಾದ ಬಗೆ ಹರಿಸುವುದಾಗಿ ಸಚಿವ ಜಯಚಂದ್ರ ಭರವಸೆ ನೀಡಿದ್ದಾರೆ ಅಂತ ಭೇಟಿ ಬಳಿಕ ಸುದ್ದಿಗಾರರಿಗೆ ನಟಿ ಲೀಲಾವತಿ ತಿಳಿಸಿದರು.
ಬೆಂಗಳೂರು: ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 15 ರಿಂದ 28ರ ತನಕ ಬಜೆಟ್ ಅಧಿವೇಶನ ನಡೆಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕ್ಯಾಬಿನೆಟ್ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು. ಈ ವೇಳೆ ಎಸ್‍ಸಿ, ಎಸ್‍ಟಿ ಬಡ್ತಿ ಮೀಸಲಾತಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಸುಪ್ರೀಂ ಕೋರ್ಟ್ ತೀರ್ಪಿನ ಸಂಪೂರ್ಣ ಅಧ್ಯಯನದ ಬಳಿಕ ಮುಂದಿನ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ವಿಂಡ್ಸರ್ ಮ್ಯಾನರ್‍ನಿಂದ ಹೆಬ್ಬಾಳದ ಕಡೆಗೆ 2 ಕಿಮೀ ರಸ್ತೆ ಅಗಲೀಕರಣಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಕಲ್ಲಿ ಮಾರ್ಚ್ ವೇಳೆಗೆ ಮೇವಿನ ಕೊರತೆಯಾಗುವ ಮುನ್ಸೂಚನೆ ಸಿಕ್ಕಿದೆ. ನೆರೆರಾಜ್ಯಗಳಲ್ಲೂ ಮೇವಿನ ಅಭಾವವಿದ್ದು, ಅಲ್ಲಿದ್ದ ಬರುತ್ತಿದ್ದ ಮೇವು ಸ್ಥಗಿತಗೊಂಡಿದೆ, ಹೀಗಾಗಿ ಮೇವಿಗಾಗಿ ಇತರ ರಾಜ್ಯಗಳಲ್ಲಿ ಸಹಾಯ ಕೇಳಲಾಗುವುದು ಎಂದು ಹೇಳಿದರು.
362 ಗೆಜೆಟೆಡ್ ಪ್ರೊಬೇಷನರಿ ಮರು ನೇಮಕಾತಿಗೆ ಸಂಬಂಧಿಸಿದಂತೆ ಕೆಎಟಿ ಆದೇಶಕ್ಕೆ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಎಟಿ ಆದೇಶ ಮಾನ್ಯ ಮಾಡಲು ಸಿಎಂ ಮುಂದಾಗಿದ್ದರು. ಆದರೆ ಈ ಕುರಿತು ಸಂಪೂರ್ಣ ಮಾಹಿತಿಯ ಕೊರತೆ ಇರುವ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಯಿತು. ಈ ಹಿನ್ನೆಲೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ತಿರ್ಮಾನ ಮಾಡಲಾಗುವುದು ಎಂದು ತಿಳಿಸಿದರು.