– ದಳಪತಿ ವಿಜಯ್ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ 36 ಮಂದಿ ಬಲಿ
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur Stampede) ನಟ, ರಾಜಕಾರಣಿ ವಿಜಯ್ (Vijay) ಅವರ ರ‍್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 34 ಮಂದಿ ಸಾವನ್ನಪ್ಪಿದ್ದು, ನಟ ರಜನಿಕಾಂತ್ (Rajinikanth) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಜನಿಕಾಂತ್, ಕರೂರಿನಲ್ಲಿ ನಡೆದ ಘಟನೆಯಲ್ಲಿ ಅಮಾಯಕರ ಜೀವಹಾನಿಯ ಸುದ್ದಿ ಹೃದಯವನ್ನು ಕಲಕಿದೆ. ಅಪಾರ ದುಃಖವನ್ನುಂಟು ಮಾಡಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ತಮಿಳು ನಟ ವಿಜಯ್ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
கரூரில் நிகழ்ந்திருக்கும் அப்பாவி மக்களின் உயிரிழப்புச் செய்தி நெஞ்சை உலுக்கி மிகவும் வேதனையளிக்கிறது.
உயிரிழந்தோரின் குடும்பத்தினருக்கு என் ஆழ்ந்த அனுதாபங்கள். காயமடைந்தோருக்கு ஆறுதல்கள்.#Karur#Stampede
ಶನಿವಾರ ಸಂಜೆ ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆಯ ನಂತರ 50 ಕ್ಕೂ ಹೆಚ್ಚು ಜನರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚೆನ್ನೈ: ತಮಿಳು ನಟ, ರಾಜಕಾರಣಿ ವಿಜಯ್ (Vijay) ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ವಿಜಯ್ ರ‍್ಯಾಲಿ ಸಂದರ್ಭದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದೆ. ಅಪಾರ ಜನಸಂದಣಿಯಲ್ಲಿ 9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.
ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರನ್ನು ಉದ್ದೇಶಿಸಿ ವಿಜಯ್ ಮಾತನಾಡುವ ವೇಳೆ, ವ್ಯಕ್ತಿಯೊಬ್ಬ ಬಸ್ ಮೇಲೆ ಬಂದು ಬಾಲಕಿ ಕಾಣೆಯಾಗಿರುವ ಬಗ್ಗೆ ವಿಜಯ್‌ಗೆ ತಿಳಿಸುತ್ತಾನೆ. ಆಗ ನಟ ತಕ್ಷಣ ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಾರೆ. ‘9 ವರ್ಷದ ಅಶ್ಮಿಕಾ ಹೆಸರಿನ ಬಾಲಕಿ ಕಾಣೆಯಾಗಿದ್ದಾಳೆ. ದಯವಿಟ್ಟು ಯಾರಿಗಾದರು ಕಂಡರೆ ಗಮನಕ್ಕೆ ತನ್ನಿ. ಪೊಲೀಸರೇ ಸಹಕರಿಸಿ’ ಎಂದು ವಿಜಯ್ ಮನವಿ ಮಾಡಿದ್ದರು. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?
#WATCH | Tamil Nadu: A large number of people attended the campaign of TVK (Tamilaga Vettri Kazhagam) chief and actor Vijay in Karur
A stampede-like situation reportedly occurred here. Several people fainted and were taken to a nearby hospital. More details are awaited.… pic.twitter.com/4f2Gyrp0v5
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಕರೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮಕ್ಕಳು, ಮಹಿಳೆಯರೆನ್ನದೇ 1 ಲಕ್ಷಕ್ಕೂ ಹೆಚ್ಚು ಮಂದಿ ರ‍್ಯಾಲಿಯಲ್ಲಿ ಜಮಾಯಿಸಿದ್ದರು. ಈ ವೇಳೆ ತಳ್ಳಾಟ-ನೂಕಾಟವಾಗಿ ಕಾಲ್ತುಳಿತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ತಮಿಳು ನಟ ವಿಜಯ್ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
ಚೆನ್ನೈ: ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ಮತ ಹಾಕಿದಂತೆ. ಹೀಗಾಗಿ, ಬಿಜೆಪಿ ಜೊತೆ ಯಾವ ಕಾರಣಕ್ಕೂ ಕೈಜೋಡಿಸಲ್ಲ ಎಂದು ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ದಳಪತಿ ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಕೊಂಗು ಪ್ರದೇಶದಲ್ಲಿ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ ಟಿವಿಕೆ ಮುಖ್ಯಸ್ಥ ವಿಜಯ್, 2026 ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ಮತ ಹಾಕುವುದು ಬಿಜೆಪಿಗೆ ಮತ ಹಾಕಿದಂತೆ ಎಂದು ಹೇಳಿದ್ದಾರೆ. ಕೇಸರಿ ಪಕ್ಷದೊಂದಿಗಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಮೈತ್ರಿ ಅವಕಾಶವಾದಿತನದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.
2021ರ ಚುನಾವಣೆ ವೇಳೆ ಡಿಎಂಕೆ ಹಲವಾರು ಭರವಸೆಗಳನ್ನು ನೀಡಿತ್ತು. ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತಹ ಭರವಸೆಗಳನ್ನು ಕಾರ್ಯಗತಗೊಳಿಸಿದ್ದಾರೆಯೇ? ಇತ್ತ ಅಮ್ಮನ (ಜಯಲಲಿತಾ) ಹೆಸರು ಜಪಿಸುತ್ತಿದ್ದರೂ, ಅವರ ಆದರ್ಶನಗಳನ್ನು ಎಐಎಡಿಎಂಕೆ ಮರೆತಿದೆ. ಬಿಜೆಪಿ ಜೊತೆ ಸೂಕ್ತವಲ್ಲದ ಮೈತ್ರಿ ಮಾಡಿಕೊಂಡಿದೆ ಎಂದು ಟಾಂಗ್ ಕೊಟ್ಟಿದ್ದಾರೆ.
ತಮಿಳುನಾಡಿನ ಕಲ್ಯಾಣಕ್ಕಾಗಿ ಇಂತಹ ಮೈತ್ರಿ ಏರ್ಪಟ್ಟಿತ್ತು ಎಂದು ಎಐಎಡಿಎಂಕೆ ಹೇಳಿಕೊಂಡಿದೆ. ಆದರೆ, ಟಿವಿಕೆ ಅಂತಹ ಅವಕಾಶವಾದಿ ರಾಜಕೀಯ ನಿಲುವನ್ನು ತೆಗೆದುಕೊಳ್ಳುವುದಿಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತಮಿಳುನಾಡಿಗೆ ಏನು ಮಾಡಿದೆ? ಅದು ತಮಿಳುನಾಡಿಗೆ ನೀಟ್ ವ್ಯಾಪ್ತಿಯಿಂದ ವಿನಾಯಿತಿ ನೀಡಿದೆಯೇ? ಟಿವಿಕೆ ಸಾಮಾನ್ಯ ಜನರ ಧ್ವನಿಯಾಗಿದ್ದರೆ, ಡಿಎಂಕೆ ತಮಿಳುನಾಡನ್ನು ಲೂಟಿ ಮಾಡುತ್ತಿದೆ. 2026 ರ ವಿಧಾನಸಭಾ ಚುನಾವಣಾ ಹೋರಾಟ ಟಿವಿಕೆ ಮತ್ತು ಡಿಎಂಕೆ ನಡುವೆ ಎಂದು ಮಾತನಾಡಿದ್ದಾರೆ.
ಪಶ್ಚಿಮ ಕೊಂಗು ಪ್ರದೇಶದ ಭಾಗವಾಗಿರುವ ನಾಮಕ್ಕಲ್, ದಶಕಗಳಿಂದ ಎಐಎಡಿಎಂಕೆಯ ಭದ್ರಕೋಟೆಯಾಗಿತ್ತು. ಕೊಂಗು ಪ್ರದೇಶದಾದ್ಯಂತ ಬಿಜೆಪಿ ಪ್ರಭಾವ ಹೊಂದಿದೆ.
– ಈಳಂ ತಮಿಳಿಗರ ಪರ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ
ಚೆನ್ನೈ: ಶ್ರೀಲಂಕಾದ ತಮಿಳರ ಸಮಸ್ಯೆ ಬಗ್ಗೆ ಮಾತನಾಡುವ ವೇಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ವಿವಾದಿತ ಹೇಳಿಕೆಯೊಂದನ್ನ ನೀಡಿದ್ದಾರೆ. ಮಾತನಾಡುವ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆಯ ಹಿಂದಿನ ಸೂತ್ರಧಾರಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ವೇಲುಪಿಳ್ಳೈ ಪ್ರಭಾಕರನ್‌ನನ್ನು (Velupillai Prabhakaran) ಹೊಗಳಿದ್ದಾರೆ.
2026ರ ವಿಧಾನಸಭಾ ಚುನಾವಣೆಗಾಗಿ ವಿಜಯ್ (Thalapathy Vijay) ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದ ಸಮಾವೇಶದಲ್ಲಿ ಶ್ರೀಲಂಕಾದ ತಮಿಳರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವೇಲುಪಿಳ್ಳೈ ಪ್ರಭಾಕರನ್ ʻಈಳಂʼ ತಮಿಳರ ಸಮುದಾಯಕ್ಕೆ ತಾಯಿಯಂತೆ. ಹಾಗಾಗಿ ಲಂಕಾ ತಮಿಳರ ಸಮಸ್ಯೆ ತಮಿಳುನಾಡಿನಲ್ಲಿ ಅದ್ರಲ್ಲೂ ನಾಗಪಟ್ಟಣಂನಂತಹ ಪ್ರದೇಶಗಳ ಮೀನುಗಾರರಲ್ಲಿ ಭಾವನಾತ್ಮಕವಾಗಿದೆ ಎಂದಿದ್ದಾರೆ. ʻಈಳಂʼ ಎನ್ನುವುದು ಶ್ರೀಲಂಕಾದ ಆ ಪ್ರದೇಶವನ್ನು ಸೂಚಿಸುವ ಹೆಸರು.
ಅಲ್ಲದೇ, ಶ್ರೀಲಂಕಾ ಹಾಗೂ ವಿಶ್ವದ ವಿವಿಧೆಡೆ ಇರುವ ನಮ್ಮ ಈಳಂ ತಮಿಳರು ಇಂದು ಮಾತೃ ವಾತ್ಸಲ್ಯ ತೋರಿಸಿದ ನಾಯಕನನ್ನ ಕಳೆದುಕೊಂಡು ಬಳಲುತ್ತಿದ್ದಾರೆ. ಅವರಿಗಾಗಿ ನಾವಿಂದು ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ ನೀಡಿದ್ದಾರೆ.
1990ರ ದಶಕದಿಂದ ಭಾರತದಲ್ಲಿ ನಿಷೇಧಿಸಲ್ಪಟ್ಟ ಎಲ್‌ಟಿಟಿಇ ಶ್ರೀಲಂಕಾದ ಉತ್ತರ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ ಆಳ್ವಿಕೆ ನಡೆಸುತ್ತಿದ್ದ ಸಶಸ್ತ್ರ ಪಡೆಯಾಗಿತ್ತು. ಆದ್ರೆ 2009ರಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸುವವರೆಗೂ ಅದು ದಶಕಗಳ ಕಾಲ ಸ್ವತಂತ್ರ ತಮಿಳು ರಾಜ್ಯ ಸ್ಥಾಪಿಸಲು ಹೋರಾಡಿತ್ತು. ಅದೇ ವರ್ಷ ವೇಲುಪಿಳ್ಳೈ ಪ್ರಭಾಕರನ್ ರನ್ನ ಶ್ರೀಲಂಕಾ ಸೇನೆ ಕೊಂದಿತು.
ರಾಜೀವ್ ಗಾಂಧಿ ಹತ್ಯೆ ಹಿಂದಿನ ಮಾಸ್ಟರ್?
1991 ರಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಹಿಂದೆ ಎಲ್‌ಟಿಟಿಇ ಇದೆ ಎಂದು ಆರೋಪಿಸಲಾಗಿದೆ. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಎಲ್‌ಟಿಟಿಇ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರಭಾಕರನ್ ಆದೇಶಿಸಿದ್ದಾರೆ ಎಂದು ಹೇಳಲಾಗಿತ್ತು. ಇನ್ನು, 2011ರ ಸಂದರ್ಶನವೊಂದರಲ್ಲಿ, ಎಲ್‌ಟಿಟಿಇಯ ಖಜಾಂಚಿ ಮತ್ತು ಅದರ ಮುಖ್ಯ ಶಸ್ತ್ರಾಸ್ತ್ರ ಸಂಪಾದನೆದಾರರಾಗಿದ್ದ ಕುಮಾರನ್ ಪತ್ಮನಾಥನ್ ಅವರು ರಾಜೀವ್ ಗಾಂಧಿಯನ್ನು ಹತ್ಯೆಗೈದ ವೇಲುಪಿಳ್ಳೈ ಪ್ರಭಾಕರನ್ ಅವರ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ್ದರು.
2009ರಲ್ಲಿಯೇ ಪ್ರಭಾಕರನ್ ಹತ್ಯೆ; ಶ್ರೀಲಂಕಾ
ಶ್ರೀಲಂಕಾ ಸರ್ಕಾರ ಮೇ 2009ರಲ್ಲಿಯೇ ಪ್ರಭಾಕರನ್ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಹೇಳಿಕೊಂಡಿತ್ತು. ಅದಲ್ಲದೇ ಪ್ರಭಾಕರನ್ ಹಾಗೂ ಅವರ ಮಗನ ಡಿಎನ್‌ಎ ಹೊಂದಾಣಿಕೆಯಾಗಿತ್ತು ಎಂದು ಶ್ರೀಲಂಕಾ ಸೇನೆ ಹೇಳಿಕೆ ನೀಡಿತ್ತು. ಮುಲ್ಲೈತೀವು ಪ್ರದೇಶದ ನಾಂತಿಕಡಲ್ ತೀರದಲ್ಲಿ ಎಲ್‌ಟಿಟಿಇ ಮುಖ್ಯಸ್ಥನ ಶವ ಪತ್ತೆಯಾಗಿತ್ತು ಎಂದು ವರದಿಗಳು ಹೇಳಿದ್ದವು. ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್ ದೇಹವನ್ನು ಆತನ ಇಬ್ಬರು ಮಾಜಿ ಸಹಚರರು ಗುರುತಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.
ಆದ್ರೆ ಎಲ್‌ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಇನ್ನೂ 2023ರಲ್ಲಿ ಆತ ಜೀವಂತವಾಗಿದ್ದು, ಅವರ ಕುಟುಂಬದ ಜೊತೆ ಜೀವಿಸುತ್ತಿದ್ದಾನೆ ಎಂದು ಕಾಂಗ್ರೆಸ್‌ನ ಮಾಜಿ ನಾಯಕ ಪಜಾ ನೆಡುಮಾರನ್ ಹೇಳಿದ್ದರು. ಆದ್ರೆ ಆತ ಜೀವಂತವಾಗಿರುವ ಸುಳಿವು ಎಲ್ಲಿಯೂ ಸಿಕ್ಕಿರಲಿಲ್ಲ.
ಇನ್ನೂ ವಿಜಯ್ ಲಂಕಾದ ತಮಿಳರಿಗೆ ಬೆಂಬಲ ನೀಡುತ್ತಿರುವುದು ಇದೇ ಮೊದಲೇನಲ್ಲ. 2008ರಲ್ಲೂ ಸಮುದಾಯದ ಸದಸ್ಯರನ್ನ ಹತ್ಯೆ ಖಂಡಿಸಿ ಚೆನ್ನೈನಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ದಳಪತಿ ವಿಜಯ್ ತಮಿಳುನಾಡಿನಲ್ಲಿ (Tamil Nadu) ರಣಕಹಳೆ ಊದಿದ್ದಾರೆ. 2026ರ ಚುನಾವಣೆಗಾಗಿ (Election) ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಮಧುರೈನಲ್ಲಿ ಟಿವಿಕೆ ಪಕ್ಷದ ಸಮಾವೇಶಕ್ಕೆ ಹರಿದು ಬಂದ ಜನಸಾಗರ ನೋಡಿ ನಟ ವಿಜಯ್ (Vijay) ಭಾವುಕರಾಗಿದ್ದಾರೆ.
ಜನ ನಾಯಗನ್ (Jana Nayagan) ಸಿನಿಮಾ ಮುಗಿಸಿ ರಾಜಕೀಯ ರಣರಂಗದಲ್ಲಿ ಸೆಣಸಾಡಲು ಪಣ ತೊಟ್ಟು ನಿಂತಿದ್ದಾರೆ. ವಿಜಯ್ ದಳಪತಿ ಸಿನಿಮಾರಂಗಕ್ಕೆ ಗುಡ್ ಬೈ ಹೇಳಿ ಪೂರ್ತಿಯಾಗಿ ರಾಜಕೀಯ ರಂಗದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಈಗಾಗಲೇ ಘೋಷಿಸಿದ್ದಾರೆ. ವಿಜಯ್ ತಮ್ಮ ಕೊನೆಯ ಸಿನಿಮಾ ಜನ ನಾಯಗನ್ ಮುಗಿಸಿ ಕಂಪ್ಲೀಟ್ ಆಗಿ ರಾಜಕೀಯದಲ್ಲೇ ತೊಡಗಿಸಿಕೊಳ್ಳಲಿದ್ದಾರೆ. ಇದನ್ನೂಓದಿ: ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
ಸದ್ಯ ತಮ್ಮ ಕೊನೆಯ ಸಿನಿಮಾ ಜನ ನಾಯಗನ್ ಚಿತ್ರದ ಶೂಟಿಂಗ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ವಿಜಯ್ ದಳಪತಿ ಸದ್ಯದಲ್ಲಿಯೇ ಸಿನಿಮಾದ ಶೂಟಿಂಗ್ ಮುಗಿಸಿಕೊಡಲಿದ್ದಾರೆ. ಅಂದಹಾಗೆ ಜನ ನಾಯಗನ್ ಚಿತ್ರ 2026ರ ಸಂಕ್ರಾಂತಿಗೆ ಅಭಿಮಾನಿಗಳ ಮುಂದೆ ದರ್ಶನ ನೀಡಲಿದೆ. ಈ ನಿಟ್ಟಿನಲ್ಲಿ ಒಂದು ಕಡೆ ಸಿನಿಮಾ ತಂಡ ತಯಾರಿಯನ್ನ ಮಾಡಿಕೊಂಡಿದೆ. ಇದರ ಜೊತೆ ಜೊತೆಗೆ ತಮ್ಮ ಪಕ್ಷ ಕಟ್ಟುವ ಕಾರ್ಯದಲ್ಲಿ ವಿಜಯ್ ಸದಾ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಮಧುರೈನ ಸಮಾವೇಶದಲ್ಲಿ ವಿಜಯ್ ಗುಡುಗಿಗೆ ತಮಿಳುನಾಡು ರಾಜಕೀಯ ಕ್ಷೇತ್ರದಲ್ಲಿ ಕಂಪನ ಶುರುವಾಗಿದೆ.
ಮಧುರೈನಲ್ಲಿ ನಡೆದ ಸಮಾವೇಶಕ್ಕೆ ಜನ ಸಾಗರವೇ ಹರಿದು ಬಂದಿದೆ. ವಿಜಯ್ ವೇದಿಕೆ ಮೇಲೆ ಆಡಿದ ಒಂದೊಂದು ಮಾತಿಗೆ ವಿಜಯ್ ಅಭಿಮಾನಿ ಬಳಗ ಹಾಗೂ ತಮಿಳು ನಾಡಿನ ಜನ ರಣಕೇಕೆ ಹಾಕಿ ಕುಣಿದಿದೆ. 234 ಕ್ಷೇತ್ರದಲ್ಲೂ ನಾನೇ ಸ್ಪರ್ಧಿಸಿದ ಹಾಗೆ ಎನ್ನುವ ಮಾತಿಗೆ ಸಮ್ಮತ ನೀಡಿದ್ದಾರೆ ತಮಿಳುನಾಡಿನ ಜನ. ವಿಜಯ್ ದಳಪತಿ ಸಿನಿಮಾರಂಗದಿಂದ ರಾಜಕೀಯ ರಂಗಕ್ಕೆ ಪ್ರವೇಶ ಮಾಡಲು ಸಖತ್ ರೆಸ್ಪಾನ್ಸ್ ಸಿಕ್ತಿದೆ. ಅಲ್ಲದೇ ತಮ್ಮ ನಾಯಕನ ಮೂಲಕ ಮತ್ತಷ್ಟು ಅಭಿವೃದ್ದಿ ಹಾಗೂ ಬದಲಾವಣೆಯ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ ಜನ.
ವಿಜಯ್ ದಳಪತಿ ತಮ್ಮ ಸಿನಿಮಾ ಮೂಲಕ ಅಪಾರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅವರ ಅಭಿಮಾನಿ ಬಳಗ ಹಾಗೂ ಅವರ ಮೇಲಿನ ಅಭಿಮಾನ ಮತ್ತೊಮ್ಮೆ ಪ್ರೂವ್ ಆಗಿದೆ. ಮಧುರೈನ ಸಮಾವೇಶಕ್ಕೆ ಲಕ್ಷಾಂತರ ಜನ ಸೇರಿದ್ದಾರೆ. ಈ ಅಪಾರ ಜನಸಂಖ್ಯೆಯನ್ನ ನೋಡಿ ವೇದಿಕೆ ಮೇಲೆ ವಿಜಯ್ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ಈ ವೇಳೆ ತಮಿಳುನಾಡಿನ ಜನರಿಗೆ ಕೆಲವೊಂದಿಷ್ಟು ಮಾತುಗಳನ್ನ ಕೊಟ್ಟಿದ್ದಾರೆ. ತಮ್ಮ ಪಕ್ಷ ಸ್ವತಂತ್ರವಾಗಿರಲಿದೆ ಯಾವುದೇ ಪಕ್ಷದೊಂದಿದೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಚೆನ್ನೈ; ಟಿವಿಕೆ (TVK) ಪಕ್ಷ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ, ಡಿಎಂಕೆ (DMK) ಹಾಗೂ ಬಿಜೆಪಿ (DMK) ಯಾವ ಪಕ್ಷದ ಜೊತೆಗೂ ಕೈಜೋಡಿಸಲ್ಲ ಎಂದು ನಟ, ರಾಜಕಾರಣಿ ತಮಿಳಿಗ ವೆಟ್ರಿ ಕಳಗಂ (Tamilaga Vettri Kazhagam) ಪಕ್ಷದ ಮುಖ್ಯಸ್ಥ ವಿಜಯ್ (Vijay) ಘೋಷಣೆ ಮಾಡಿದ್ದಾರೆ.
ಮಧುರೈ (Madhurai) ಜಿಲ್ಲೆಯ ಪರಪತಿಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷ ಡಿಎಂಕೆ ಹಾಗೂ ಬಿಜೆಪಿ ನಡುವೆ ಹೋರಾಡಲಿದೆ. ಡಿಎಂಕೆ ನಮಗೆ ರಾಜಕೀಯ ಬದ್ದ ವೈರಿ, ಬಿಜೆಪಿಯ ಜೊತೆಗೂ ಕೈಜೋಡಿಸಲ್ಲ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ತಮಿಳುನಾಡಿನಲ್ಲಿರುವ 234 ಕ್ಷೇತ್ರಗಳಲ್ಲಿಯೂ ಟಿವಿಕೆ ಪಕ್ಷ ಸ್ಪರ್ಧಿಸಲಿದೆ. ನಾನು ಪೂರ್ವ ಮಧುರೈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಡಿಎಂಕೆ ಸರ್ಕಾರವು ಚುನಾವಣೆ ಪೂರ್ವದಲ್ಲಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈಗಿನಿಂದಲೇ ಚುನಾವಣಾ ತಯಾರಿ ಮಾಡಿಕೊಳ್ಳುತ್ತಿರುವ ಟಿವಿಕೆ ಪಕ್ಷ ಮುಂದಿನ ತಿಂಗಳಲ್ಲಿ ಬೃಹತ್ ರಾಜ್ಯ ಸಮ್ಮೇಳನ ಆಯೋಜಿಸಲು ತಯಾರಿ ನಡೆಸುತ್ತಿದೆ. ಪಕ್ಷದ ಸಿದ್ಧಾಂತಗಳನ್ನ ಜನರಿಗೆ, ಮನೆ ಮನೆಗೆ ಹಳ್ಳಿಗೆ ಹಳ್ಳಿಗೆ ತಲುಪಿಸಲು ಸಾರ್ವಜನಿಕ ಸಭೆಗಳನ್ನು ನಡೆಸಲು ಪ್ಲ್ಯಾನ್ ಮಾಡಿದೆ. ಜೊತೆಗೆ ಪಕ್ಷದ ಸದಸ್ಯತ್ವ ಹೆಚ್ಚಿಸಲು ಮತ್ತು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್
ಟಿವಿಕೆ ಇಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಿತು. ಇದರಲ್ಲಿ ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿ ವಿಜಯ್ಎಂದು ತೀರ್ಮಾನಿಸಿದೆ. ಮುಂದಿನ ತಿಂಗಳು ದೊಡ್ಡ ಮಟ್ಟದ ರಾಜ್ಯ ಸಮ್ಮೇಳನ ನಡೆಸಿ, ಪಕ್ಷದ ಸಿದ್ಧಾಂತವನ್ನು ಹಳ್ಳಿಗಳಿಗೆ ತಲುಪಿಸಲು ತೀರ್ಮಾನಿಸಲಾಗಿದೆ.
ಮೈತ್ರಿಗೆ ನೋ ಎಂದ ವಿಜಯ್
ಇನ್ನೂ ಸಭೆಯಲ್ಲಿ ಮಾತನಾಡಿದ ನಟ ಮತ್ತು ಟಿವಿಕೆ ನಾಯಕ ವಿಜಯ್, ಬಿಜೆಪಿಯ ಜೊತೆಗೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ. ಬಹಿರಂಗವಾಗಿ ಮಾತ್ರವಲ್ಲ, ತೆರೆಮರೆಯಲ್ಲೂ ಮೈತ್ರಿ ಮಾಡಿಕೊಳ್ಳೋದೆ ಇಲ್ಲ ಎಂದು ಖಡಕ್ಆಗಿ ಹೇಳಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಇಂಗ್ಲಿಷ್ ಭಾಷೆಯ ಕುರಿತಾದ ಹೇಳಿಕೆ ವೈರಲ್ಆಗಿತ್ತು. ಅದನ್ನು ಉಲ್ಲೇಖಿಸಿ ಮಾತನಾಡಿದ ವಿಜಯ್, ಇದು ದುರುದ್ಧೇಶಪೂರಿತ. ಇದರಿಂದಲೇ ತಿಳಿಯುತ್ತದೆ ಮುಂದೆ ತಮಿಳುನಾಡಿನ ಮೇಲೂ ಎರಡು ಭಾಷಾ ನೀತಿ ಹೇರಿಕೆಯಾಗಲಿದೆ ಹೀಗಾಗಿ, ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ನುಡಿದಿದ್ದಾರೆ.
ನಟ, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ದಳಪತಿ (Vijay Thalapathy) ವಿರುದ್ಧ ಅಖಿಲ ಭಾರತ ಮುಸ್ಲಿಂ ಜಮಾತ್ ಫತ್ವಾ (Fatwa) ಹೊರಡಿಸಿದೆ. ಮುಸ್ಲಿಂ ಸಮುದಾಯದ ಯಾರು ಕೂಡ ವಿಜಯ್ ಜೊತೆ ನಿಲ್ಲದಂತೆ ಮನವಿ ಮಾಡಿಕೊಂಡಿದೆ.
ಮುಸ್ಲಿಮರನ್ನು ವಿಜಯ್ ನಕಾರಾತ್ಮಕವಾಗಿ ಬಿಂಬಿಸಿದ್ದಾರೆ. ಜೂಜುಕೋರರು ಮತ್ತು ಮದ್ಯ ಗ್ರಾಹಕರನ್ನು ತಮ್ಮ ಇಫ್ತಾರ್ ಕೂಟಕ್ಕೆ ಆಹ್ವಾನಿಸಿದ್ದರಿಂದ ಫತ್ವಾ ಹೊರಡಿಸಲಾಗಿದೆ ಎಂದು ಎಐಎಂಜೆ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಬರೇಲ್ವಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ನಟಿಸಲು ಹಲವು ಕಥೆಗಳನ್ನು ಕೇಳಿದ್ದೆ, ಯಾವುದು ಇಷ್ಟವಾಗಿಲ್ಲ: ಪೂಜಾ ಹೆಗ್ಡೆ
ನಟ ವಿಜಯ್ ರಾಜಕೀಯ ಪಕ್ಷವನ್ನು ರಚಿಸಿದ್ದಾರೆ. ಮುಸ್ಲಿಮರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಆದರೆ, ಅವರು ತಮ್ಮ ಚಲನಚಿತ್ರಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದನೆ ಹರಡುವವರಂತೆ ನಕಾರಾತ್ಮಕ ರೀತಿಯಲ್ಲಿ ಬಿಂಬಿಸಿದ್ದರು ಎಂದು ರಜ್ವಿ ಆರೋಪಿಸಿದ್ದಾರೆ.
ಅವರು ಈಚೆಗೆ ಆಯೋಜಿಸಿದ್ದ ಇಫ್ತಾರ್ ಕೂಟಕ್ಕೆ ಜೂಜುಕೋರರು ಮತ್ತು ಮದ್ಯ ಸೇವಿಸುವವರನ್ನು ಆಹ್ವಾನಿಸಲಾಗಿತ್ತು. ಇದೆಲ್ಲದರಿಂದ ತಮಿಳುನಾಡಿನ ಸುನ್ನಿ ಮುಸ್ಲಿಮರು ಅವರ ಮೇಲೆ ಕೋಪಗೊಂಡಿದ್ದಾರೆ. ಅವರು ಫತ್ವಾ ಕೇಳಿದರು. ಹೀಗಾಗಿ, ಮುಸ್ಲಿಮರು ವಿಜಯ್ ಜೊತೆ ನಿಲ್ಲಬಾರದು ಎಂದು ಉಲ್ಲೇಖಿಸಿ ಫತ್ವಾ ಹೊರಡಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ವೈಯಕ್ತಿಕ ಸವಾಲುಗಳೊಂದಿಗೆ ಹೋರಾಡುತ್ತಿದ್ದೇನೆ: ಫ್ಯಾನ್ಸ್‌ಗೆ ಪತ್ರ ಬರೆದ ನಜ್ರಿಯಾ
ನಟ, ರಾಜಕಾರಣಿ ವಿಜಯ್ ಅವರಿಗೆ ಮುಸ್ಲಿಮರಿಂದ ಬೆದರಿಕೆ ಇದೆ ಎಂದು ಕೇಂದ್ರದಿಂದ ವೈ-ಭದ್ರತೆ ಕೋರಲಾಗಿದೆಯೆಂದು ಪ್ರತಿಸ್ಪರ್ಧಿಗಳು ಆರೋಪಿಸಿದ್ದರು. ಇದರ ಬೆನ್ನಲ್ಲೇ ವಿವಾದ ಭುಗಿಲೆದ್ದಿತ್ತು.
ವಿಜಯ್ ತಮ್ಮ ‘ಕಥಿ’ ಮತ್ತು ‘ಬೀಸ್ಟ್’ ಚಿತ್ರಗಳಲ್ಲಿ ಮುಸ್ಲಿಮರನ್ನು ನಕಾರಾತ್ಮಕವಾಗಿ ತೋರಿಸಿದ್ದಾರೆ. ಆದ್ದರಿಂದ, ನಟನಿಗೆ ಮುಸ್ಲಿಮರಿಂದ ಬೆದರಿಕೆ ಬರಬಹುದು ಎಂದು ವಿಜಯ್ ಮತ್ತು ಟಿವಿಕೆ, ಗೃಹ ಸಚಿವಾಲಯದಿಂದ ರಕ್ಷಣೆ ಕೋರಿದ್ದಾರೆ ಎಂದು ವಿಸಿಕೆ ವಕ್ತಾರ ವನ್ನಿಯರಸು ಹೇಳಿದ್ದರು. ಇದನ್ನೂ ಓದಿ: ಪೀರಿಯಡ್ಸ್ ಬಗ್ಗೆ ಸಮಂತಾ ಓಪನ್ ಟಾಕ್
ಆದರೆ, ಟಿವಿಕೆ ಮತ್ತು ಮಿತ್ರ ಪಕ್ಷ ತಮಿಳುನಾಡು ಮುಸ್ಲಿಂ ಲೀಗ್ ಈ ಆರೋಪಗಳನ್ನು ನಿರಾಕರಿಸಿದೆ. ಇದು ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಮುಸ್ಲಿಮರನ್ನು ಟಿವಿಕೆಯಿಂದ ದೂರವಿಡಲು ಮಾಡಿದ ತಂತ್ರವಾಗಿದೆ ಎಂದು ಆರೋಪಿಸಿದೆ.
ಚೆನ್ನೈ: ನಟ ವಿಜಯ್ (Vijay) ಹುಟ್ಟು ಹಾಕಿರುವ ತಮಿಳಗ ವೆಟ್ರಿ ಕಳಗಂ (TVK) ಮೊದಲ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ (Prashanth Kishore) ಕಾಣಿಸಿಕೊಂಡಿದ್ದಾರೆ.
ಇಂದು ಮಹಾಬಲಿಪುರಂನಲ್ಲಿ ಟಿವಿಕೆ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. 2026ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಎಂದೇ ಕರೆಯಲಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಜನ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಕಾಣಿಸಿಕೊಂಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (PM Narendra Modi) ಮತ್ತು ತಮಿಳುನಾಡು ಸಿಎಂ ಸ್ಟಾಲಿನ್ (CM Stalin) ಗುರಿಯಾಗಿಸಿ #GetOut, #GetOutModi ಹಾಗೂ #GetOutStalin ಹೆಸರಿನ ಫಲಕಗಳಿಗೆ ವಿಜಯ್ ಸಹಿ ಹಾಕಿದರು. ಆದರೆ ಪ್ರಶಾಂತ್ ಕಿಶೋರ್ ಈ ಫಲಕಗಳಿಗೆ ಸಹಿ ಹಾಕಿಲ್ಲ. ಸಹಿ ಹಾಕಲು ನಿರಾಕರಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೇಂದ್ರ ಮತ್ತು ತಮಿಳುನಾಡು ನಡುವೆ ಹಿಂದಿ ಹೇರಿಕೆ ಸಂಘರ್ಷ ಸಂಘರ್ಷವನ್ನು ಎಲ್‌ಕೆಜಿ ಮಕ್ಕಳ ಗಲಾಟೆಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.
ಎನ್‌ಇಪಿ, ತ್ರಿಭಾಷಾ ಸೂತ್ರ ಜಾರಿ ವಿಚಾರದಲ್ಲಿ ಎರಡು ಪಕ್ಷಗಳ ಮಧ್ಯೆ ಯುದ್ಧ ನಡೀತಿದೆ. ತಮಿಳುನಾಡನ್ನು (Tamil Nadu) ರಣರಂಗ ಮಾಡುತ್ತಿದ್ದಾರೆ. ಎರಡೂ ಪಕ್ಷಗಳು ಸೋಷಿಯಲ್ ಮೀಡಿಯಾದಲ್ಲಿ ಹ್ಯಾಷ್‌ಟ್ಯಾಗ್ ಗೇಮ್ ಆಡುತ್ತಿವೆ. ಜನರನ್ನು ಹಾದಿತಪ್ಪಿಸುವ ಪ್ರಯತ್ನ ನಡೆಸಿವೆ. ಅವರ ನಡುವಿನ ಸಂಘರ್ಷ ಚಿಕ್ಕಮಕ್ಕಳ ಗಲಾಟೆಯಂತಿದೆ ಎಂದಿದ್ದಾರೆ.
ಡಿಎಂಕೆ ಮಾದರಿಯಲ್ಲೇ ತ್ರಿಭಾಷಾ ವಿಧಾನವನ್ನು ಖಂಡಿಸಿದ ಅವರು, 2400 ಕೋಟಿ ರೂ. ನೀಡುವುದಿಲ್ಲ ಎಂದು ಹೇಳಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಾತನ್ನು ಟೀಕಿಸಿದ್ದಾರೆ. ಇದು ಒಕ್ಕೂಟ ಸ್ಪೂರ್ತಿಗೆ ವಿರುದ್ಧ ಎಂದು ವ್ಯಾಖ್ಯಾನಿಸಿದ್ದಾರೆ.