Tag: ಟಿ.ಆರ್. ನರಸಿಂಹರಾಜು

  • ಕಿರುತೆರೆಗೆ ಖ್ಯಾತ ಹಾಸ್ಯನಟ ನರಸಿಂಹರಾಜು ಮೊಮ್ಮಗ ಎಂಟ್ರಿ

    ಕಿರುತೆರೆಗೆ ಖ್ಯಾತ ಹಾಸ್ಯನಟ ನರಸಿಂಹರಾಜು ಮೊಮ್ಮಗ ಎಂಟ್ರಿ

    ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ (Nanna Devaru) ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ಆರೂ ವರೆಗೆ ವೀಕ್ಷಿಸಬಹುದು.

    ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ ‘ಅಶ್ವಿನಿ ನಕ್ಷತ್ರ’ ಸೀರಿಯಲ್‌ನಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು (Mayuri) ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಂಬಲಿಸುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

    ‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ `ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ (Avinash Divakar) ಹಾಸ್ಯ ಚಕ್ರವರ್ತಿ ನರಸಿಂಹರಾಜು (Narasimharaju) ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ ‘ನನ್ನ ದೇವ್ರು’ ತಾರಾಗಣದಲ್ಲಿ ಜನಪ್ರಿಯ ನಟ ನಟಿಯರು ತುಂಬಾನೇ ಇದ್ದಾರೆ.

    ಈ ಮೊದಲು ‘ಒಲವಿನ ನಿಲ್ದಾಣ’ ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ್ಳಿತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ (Ramesh Indira) ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:ಕ್ವೀನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ, ಜೆರ್ಸಿ ಅನಾವರಣ

    ಈ ಹೊಸ ಧಾರಾವಾಹಿ ಬಗ್ಗೆ ಉತ್ಸುಕತೆ ತೋರಿದ ವಾಹಿನಿಯ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಸದಾ ಹೊಸತನಕ್ಕಾಗಿ ತುಡಿಯುವ ಕಲರ್ಸ್ ಕನ್ನಡ ಈ ಹೊಸ ಧಾರಾವಾಹಿಯ ಮುಖಾಂತರ ಮುಗ್ಧತೆ ಮತ್ತು ಪ್ರಾಮಾಣಿಕತೆ ತಂದೊಡ್ಡುವ ಸವಾಲುಗಳ ಕತೆಯೊಂದನ್ನು ವೀಕ್ಷಕರಿಗೆ ಉಣಬಡಿಸಲಿದೆ ಎಂದು ಹೇಳಿದರು.

    ಇದೇ ಜುಲೈ 8ರ ಸಂಜೆ ಆರೂವರೆಗೆ ‘ನನ್ನ ದೇವ್ರು’ ಧಾರಾವಾಹಿಯ ಮೊದಲ ಕಂತು ಪ್ರಸಾರವಾಗಲಿದೆ. ಇದನ್ನು ನೀವು ಜಿಯೋ ಸಿನಿಮಾ ಮುಖಾಂತರ ನಿಮ್ಮ ಫೋನಿನಲ್ಲೂ ನೋಡಬಹುದಾಗಿದೆ.

  • ಶತಮಾನಕೊಬ್ಬ ಹಾಸ್ಯಚಕ್ರವರ್ತಿ: ವರ್ಷಪೂರ್ತಿ ನರಸಿಂಹರಾಜು ಶತಮಾನೋತ್ಸವ

    ಶತಮಾನಕೊಬ್ಬ ಹಾಸ್ಯಚಕ್ರವರ್ತಿ: ವರ್ಷಪೂರ್ತಿ ನರಸಿಂಹರಾಜು ಶತಮಾನೋತ್ಸವ

    ಜುಲೈ 24 ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ಟಿ.ಆರ್ ನರಸಿಂಹರಾಜು (T.R. Narasimharaju) ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು  ‘ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ (Birth Centenary) ಎಂಬ ಹೆಸರಿನಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ವರ್ಷಪೂರ್ತಿ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿಶ್ಚಯಿಸಿದ್ದಾರೆ.

    ನರಸಿಂಹರಾಜು ಅವರ ಹುಟ್ಟುಹಬ್ಬದಂದೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್, ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಎನ್ ಸುಬ್ರಹ್ಮಣ್ಯ ಹಾಗೂ ಹಿರಿಯನಟ ಬೆಂಗಳೂರು ನಾಗೇಶ್ ಸೇರಿದಂತೆ ವಿವಿಧ ಗಣ್ಯರು ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು ಹಾಗೂ ನರಸಿಂಹರಾಜು ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡರು.

    ನರಸಿಂಹರಾಜು ಅವರ ಶತಮಾನೋತ್ಸವ ಸಮಾರಂಭ ಬರೀ ಕುಟುಂಬದವರಲ್ಲ. ಎಲ್ಲರೂ ಸೇರಿ ಮಾಡಬೇಕಾದ ಕಾರ್ಯಕ್ರಮ ಎಂದು ಆಗಮಿಸಿದ್ದ ಎಲ್ಲಾ ಗಣ್ಯರು ತಿಳಿಸಿದರು. ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ಸಹ ಉಪಸ್ಥಿತರಿದ್ದರು. ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬವನ್ನು ‘ಶತಮಾನಕ್ಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ ಎಂಬ ಹೆಸರಿನಿಂದ ವರ್ಷಪೂರ್ತಿ ಆಚರಿಸಲಾಗುವುದು. ನರಸಿಂಹರಾಜು ಅವರ ಹೆಸರಿನಲ್ಲಿ ಮೂರು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿದೆ. ದೊಡ್ಡಮಟ್ಟದ ಸಮಾರಂಭ ಆಯೋಜಿಸಿ ಈ ಪ್ರಶಸ್ತಿಗಳನ್ನು ನೀಡಲಾಗುವುದು.

    ಮೊದಲು ನರಸಿಂಹರಾಜು ಅವರನ್ನು ಯುವಜನತೆಗೆ  ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

    ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ (ಹಾಸ್ಯದ ಕುರಿತು) ಆಯೋಜಿಸಲಾಗುವುದು.  ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು. ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಸಕ್ರಿಯವಾಗಿರುವ  ನಾಟಕ ಕಂಪನಿಗಳಿವೆ.  ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ನರಸಿಂಹರಾಜು ಅವರ ಜನಪ್ರಿಯ ನಾಟಕಗಳನ್ನು ಅಹೋರಾತ್ರಿ ಆಯೋಜಿಸುವ ಯೋಜನೆ ಇದೆ. ಆಗಸ್ಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಸಮಾರಂಭ ನಡೆಸುವ ಸಿದ್ದತೆ ಕೂಡ ನಡೆಯುತ್ತಿದೆ.

     

    ಈ ಎಲ್ಲಾ ಕಾರ್ಯಕ್ರಮಗಳು ಮುಂದಿನ ಆರು ತಿಂಗಳಲ್ಲಿ ಮೊದಲನೇ ಭಾಗಿ ನಡೆಯಲಿದೆ. ಮುಂದಿನ ಆರು ತಿಂಗಳ ಕಾರ್ಯಕ್ರಮಗಳನ್ನು ಮುಂಬರುವ ದಿನಗಳಲ್ಲಿ ತಿಳಿಸುವುದಾಗಿ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ (Avinash) ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]