Tag: ಟಿ20 ಕ್ರಿಕೆಟ್

  • Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    ಕ್ಯಾನ್ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ (Ind vs AUS) ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಳೆಯಾಟವೇ ಮೇಲಾಗಿದೆ. ನಿರಂತರ ಮಳೆ (Rain) ಸುರಿಯುತ್ತಿದ್ದ ಕಾರಣ ಇಂದಿನ ಪಂದ್ಯವನ್ನ ರದ್ದುಗೊಳಿಸಲಾಗಿದೆ.

    ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಶುರುವಾಗಿದ್ದು, ಮೊದಲ ಪಂದ್ಯ ಮಳೆಗೆ ಬಲಿಯಾಗಿದೆ. ಕ್ಯಾನ್ಬೆರಾದ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 35 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡಿತು. 5 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 43 ರನ್‌ ಗಳಿಸಿದ್ದಾಗ ಮೊದಲ ಬಾರಿಗೆ ಮಳೆ ಶುರುವಾಯ್ತು. ಕೆಲ ಕಾಲ ಬಿಡುವು ಕೊಟ್ಟಿತ್ತು. ಇದನ್ನೂ ಓದಿ: ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಮತ್ತೆ ಬ್ಯಾಟಿಂಗ್‌ ಶುರು ಮಾಡಿದ ಗಿಲ್‌, ಸೂರ್ಯಕುಮಾರ್‌ ಯಾದವ್‌ (Suryakumar Yadav) ಜೋಡಿ ಆಸೀಸ್‌ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿತು. 10ನೇ ಓವರ್‌ನ ಮೊದಲ 4 ಎಸೆತಗಳಲ್ಲೇ ವೇಗಿ ನಾಥನ್‌ ಎಲ್ಲಿಸ್‌ಗೆ ಸೂರ್ಯ 15 ರನ್‌ ಬಾರಿಸಿದ್ದರು. ಇದರೊಂದಿಗೆ ಭಾರತ ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿತ್ತು. ಅಲ್ಲದೇ ಪಂದ್ಯ ಗೆಲ್ಲುವ ವಿಶ್ವಾಸವೂ ಇತ್ತು. ಆದ್ರೆ ಮಳೆಯ ಬಿಡುವುಕೊಡದ ಹಿನ್ನೆಲೆ ಪಂದ್ಯವನ್ನು ಯಾವುದೇ ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು. ಅಕ್ಟೋಬರ್‌ 31ರ ಶುಕ್ರವಾರ ಮೆಲ್ಬರ್ನ್‌ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಇದನ್ನೂ ಓದಿ: ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಭಾರತದ ಪರ ಆರಂಭಿಕ ಅಭಿಷೇಕ್‌ ಶರ್ಮಾ 19 ರನ್‌ ಗಳಿಸಿ ಔಟಾದ್ರೆ, ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್‌ (24 ಎಸೆತ, 2 ಸಿಕ್ಸರ, 3 ಬೌಂಡರಿ), ಶುಭಮನ್‌ ಗಿಲ್‌ 37 ರನ್‌ (20 ಎಸೆತ, 1 ಸಿಕ್ಸರ್‌, 4 ಬೌಂಡರಿ) ಗಳಿಸಿ ಅಜೇಯರಾಗುಳಿದರು.

  • ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಕ್ಯಾನ್ಬೆರಾ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 2 ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ವಿಶೇಷ ದಾಖಲೆ ಬರೆದಿದ್ದಾರೆ.

    ಹೌದು. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಇಂದು ಭಾರತ ಆಡುತ್ತಿದೆ. ಕ್ಯಾನ್ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ (Team India) 9.4 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿದೆ. ಬಳಿಕ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದನ್ನೂ ಓದಿ: ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಕ್ರೀಸ್‌ಗಿಳಿದ ಬೆನ್ನಲ್ಲೇ ಜೋಶ್‌ ಹೇಜಲ್ವುಡ್‌ಗೆ ಮೊದಲ ಸಿಕ್ಸರ್‌ (Sixes) ಬಾರಿಸಿದ ಸೂರ್ಯ 10 ಓವರ್‌ನ 3ನೇ ಎಸೆತದಲ್ಲಿ ನಾಥನ್‌ ಎಲ್ಲಿಸ್‌ಗೆ‌ ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚಿ ಸಿಕ್ಸರ್‌ ಸಿಡಿಸಿದ ವಿಶ್ವದ 5ನೇ ಬ್ಯಾಟರ್‌ ಹಾಗೂ ಭಾರತದ 2ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 205 ಸಿಕ್ಸರ್‌ ಸಿಡಿಸಿರುವ ರೋಹಿತ್‌ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    T20I ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವದ ಟಾಪ್‌-5 ಬ್ಯಾಟರ್ಸ್‌
    * ರೋಹಿತ್‌ ಶರ್ಮಾ – 159 ಪಂದ್ಯ – 205 ಸಿಕ್ಸರ್‌
    * ಮೊಹಮ್ಮದ್‌ ವಸೀಮ್‌ – 91 ಪಂದ್ಯ – 187 ಸಿಕ್ಸರ್
    * ಮಾರ್ಟಿನ್‌ ಗಪ್ಟಿಲ್‌ – 122 ಪಂದ್ಯ – 173 ಸಿಕ್ಸರ್
    * ಜೋಸ್‌ ಬಟ್ಲರ್‌ – 144 ಪಂದ್ಯ – 172‌ ಸಿಕ್ಸರ್‌
    * ಸೂರ್ಯಕುಮಾರ್‌ ಯಾದವ್‌ – 91 ಪಂದ್ಯ – 150 ಸಿಕ್ಸರ್‌

  • ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ನವದೆಹಲಿ: ಭಾರತ (India) ಮತ್ತು ಪಾಕಿಸ್ತಾನ (Pakistan) ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ.

    ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ.

    ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ (World Championship of Legends) ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ.

    ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಎರಡನೇ ಆವೃತ್ತಿಯು ಜುಲೈ 18 ರಂದು ಪ್ರಾರಂಭವಾಗಲಿದ್ದು ಯುವರಾಜ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದರೆ ಯೂನಿಸ್ ಖಾನ್ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.  ಇದನ್ನೂ ಓದಿ: ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು: ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳನ್ನು ಸೇರಿಸಿಕೊಳ್ಳುವಂತೆ ICC, BCCIಗೆ ಅನಯಾ ಮನವಿ

    ಕಳೆದ ವರ್ಷ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಆರಂಭಗೊಂಡಿತ್ತು. ಫೈನಲಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ 5 ವಿಕೆಟ್‌ ಜಯ ಸಾಧಿಸಿ ಕಪ್‌ ಗೆದ್ದಿತ್ತು. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ಪಾಕಿಸ್ತಾನ, ವೆಸ್ಟ್‌ ಇಂಡೀಸ್‌ನ ಹಿರಿಯ ಆಟಗಾರರು ಈ ಟೂರ್ನಿಯಲ್ಲಿ ಭಾಗವಹಿಸುತ್ತಾರೆ.

    ಭಾರತ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಪಾರ್ಥಿವ್ ಪಟೇಲ್, ವಿನಯ್ ಕುಮಾರ್, ಹರ್ಭಜನ್ ಸಿಂಗ್, ಪ್ರಗ್ಯಾನ್ ಓಜಾ, ಯೂಸುಫ್ ಪಠಾಣ್, ನಮನ್ ಓಜಾ, ಮುನಾಫ್ ಪಟೇಲ್, ರಿತಿಂದರ್ ಸಿಂಗ್ ಸೋಧಿ, ಆರ್‌ಪಿ ಸಿಂಗ್, ಅಶೋಕ್ ದಿಂಡಾ.

    ಪಾಕಿಸ್ತಾನ ಚಾಂಪಿಯನ್ಸ್ ತಂಡ: ಯೂನಿಸ್ ಖಾನ್ (ನಾಯಕ), ಶಾಹಿದ್ ಅಫ್ರಿದಿ, ಶೋಯೆಬ್ ಮಲಿಕ್, ಮಿಸ್ಬಾ-ಉಲ್-ಹಕ್, ಇಮ್ರಾನ್ ನಜೀರ್, ಮೊಹಮ್ಮದ್ ಹಫೀಜ್, ಕಮ್ರಾನ್ ಅಕ್ಮಲ್, ಸಲ್ಮಾನ್ ಬಟ್, ಅಬ್ದುಲ್ ರಜಾಕ್, ವಹಾಬ್ ರಿಯಾಜ್, ಮೊಹಮ್ಮದ್ ಆಮಿರ್, ಯಾಸಿರ್ ಅರಾಫತ್, ಸೊಹೈಲ್ ತನ್ವೀರ್, ಸಯೀದ್ ಅಜ್ಮಲ್, ಉಮರ್ ಗುಲ್.

  • ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿದ ಭಾರತ – 6 ರನ್‌ಗಳ ರೋಚಕ ಜಯ

    ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿದ ಭಾರತ – 6 ರನ್‌ಗಳ ರೋಚಕ ಜಯ

    – ಟಿ20 ಪಂದ್ಯದಲ್ಲಿ ಮಿಂಚಿದ ನಮನ್ ಓಜಾ-ವೆಂಕಟೇಶ್ ಪ್ರಸಾದ್

    ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರೀಡಾಂಗಣದಲ್ಲಿ ನಡೆದ ʻವಸುಧೈವ ಕುಟುಂಬಕಂʼ ತತ್ವದಡಿ ನಡೆದ ʻಒಂದು ಜಗತ್ತು-ಒಂದು ಕುಟುಂಬʼ ಕಪ್‌ನ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಶ್ರೀಲಂಕಾ (Sri Lanka) ವಿರುದ್ಧ ಭಾರತ ಗೆದ್ದು ಬೀಗಿದೆ.

    ಯುವಮಾನವತವಾದಿ ಶ್ರೀ ಸದ್ಗುರು ಮಧುಸೂದನಸಾಯಿ ಆಯೋಜನೆ ಮಾಡಿದ್ದ ʻಒನ್ ವರ್ಲ್ಡ್-ಒನ್ ಫ್ಯಾಮಿಲಿʼ ಕಪ್‌ಗಾಗಿ ಭಾರತ (Team India) ಹಾಗೂ ಶ್ರೀಲಂಕಾ ನಿವೃತ್ತ ಕ್ರಿಕೆಟ್ ಆಟಗಾರರು ಈ ಪಂದ್ಯದಲ್ಲಿ ಸೆಣಸಾಟ ನಡೆಸಿದ್ರು. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಹೊತ್ತಲ್ಲೇ ಆಸೀಸ್‌ಗೆ ದೊಡ್ಡ ಆಘಾತ – ಏಕದಿನ ಕ್ರಿಕೆಟ್‌ಗೆ ಸ್ಟೋಯ್ನಿಸ್‌ ಗುಡ್‌ಬೈ

    ಭಾರತ ತಂಡದಲ್ಲಿ ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ನಮನ್ ಒಜಾ, ಎಸ್.ಬದ್ರೀನಾಥ್, ಅಶೋಕ್ ದಿಂಡಾ, ಪಿಯೂಷ್ ಚಾವ್ಲಾ, ವೆಂಕಟೇಶ್ ಪ್ರಸಾದ್, ಸುನಿಲ್ ಜೋಷಿ, ಪಾಥೀವ್ ಪಟೇಲ್, ಸುಜಿತ್ ಸೋಮಸುಂದರ್, ಮನೋಜ್ ತಿವಾರಿ, ಸ್ಟುವರ್ಟ್ ಬಿನ್ನಿ, ಅಭಿಮನ್ಯು ಮಿಥುನ್ ಭಾಗವಹಿಸಿದ್ದರು.

    ಇನ್ನೂ ಶ್ರೀಲಂಕಾ ತಂಡದಿಂದ ನಾಯಕ ಮಾರ್ವಿನ್‌ ಅಟಪಟ್ಟು, ಉಪಲ್ ತರಂಗ, ರೋಮೇಶ್, ಮಿಲಿಂಡಾ, ಅಸೆಲಾ, ಅರವಿಂದ ಡಿ ಸಿಲ್ವಾ, ನೂವಾನ್, ಅಜೆಂತಾ ಮೆಂಡಿಸ್, ತಿಲಾನ್, ಮುತ್ತಯ್ಯ ಮುರಳೀಧರನ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಟೀಂ ಇಂಡಿಯಾದ ಆಲ್‌ರೌಂಡರ್‌ ಆಟ – ಇಂಗ್ಲೆಂಡ್‌ ವಿರುದ್ಧ 4 ವಿಕೆಟ್‌ಗಳ ಜಯ

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು. ಟೀಂ ಇಂಡಿಯಾ ಪರ ಯೂಸೂಫ್ ಪಠಾಣ್ 32 ಎಸೆತಗಳಲ್ಲಿ ಸ್ಫೋಟಕ 61 ರನ್ ಗಳಿಸಿದ್ದು, ನಮನ್ ಒಜಾ 27 ಎಸೆತಗಳಲ್ಲಿ 53 ರನ್ ಚಚ್ಚಿದರು. ಇನ್ನೂ 196 ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 189 ರನ್‌ ಗಳಿಸಿ ವಿರೋಚಿತ ಸೋಲು ಕಂಡಿತು.

    ಲಂಕಾ ತಂಡ ಉತ್ತಮ ಆರಂಭ ಪಡೆದರು ಬಳಿಕ ಟೀಂ ಇಂಡಿಯಾ ವೇಗಿಗಳ ಆರ್ಭಟಕ್ಕೆ ಸಿಲುಕಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: 10 ಸಾವಿರ ಸಾಲ.. ಒಂದೂವರೆ ಲಕ್ಷ ಬಡ್ಡಿ – ಮೈಕ್ರೋ ಫೈನಾನ್ಸ್‌ ಬೆನ್ನಲ್ಲೇ ಮೀಟರ್ ಬಡ್ಡಿ ಹಾವಳಿ

  • 20 ಓವರ್‌ಗಳಲ್ಲಿ 37 ಸಿಕ್ಸರ್‌, 349 ರನ್‌ – ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ

    20 ಓವರ್‌ಗಳಲ್ಲಿ 37 ಸಿಕ್ಸರ್‌, 349 ರನ್‌ – ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ

    ಮುಂಬೈ: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್-ಬಿ ಪಂದ್ಯದಲ್ಲಿ ಬರೋಡಾ (Baroda), ಸಿಕ್ಕಿಂ ತಂಡದ ವಿರುದ್ಧ ರನ್‌ ರಣಮಳೆಯನ್ನೇ ಸುರಿಸಿದೆ.

    ಇಂದೋರ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕೃನಾಲ್‌ ಪಾಂಡ್ಯ ನಾಯಕತ್ವದ ಬರೋಡಾ ತಂಡ 20 ಓವರ್‌ನಲ್ಲಿ ಬರೋಬ್ಬರಿ 349 ರನ್‌ ಸಿಡಿಸಿ ವಿಶ್ವ ದಾಖಲೆ ಬರೆದಿದೆ. ಆರಂಭಿಕರಾಗಿ ಕಣಕ್ಕಿಳಿದ ಬರೋಡಾದ ಶಾಶ್ವತ್ ರಾವತ್ ಹಾಗೂ ಅಭಿಮನ್ಯು ಸಿಂಗ್ 92 ರನ್‌ ಗಳ ಜೊತೆಯಾಟ ನೀಡಿ ಸ್ಫೋಟಕ ಆರಂಭ ನೀಡಿದರು. ಇದರಲ್ಲಿ ಅಭಿಮನ್ಯು 17 ಎಸೆತಗಳಲ್ಲಿ 53 ರನ್‌ ಬಾರಿಸಿದ್ರೆ, ಶಾಶ್ವತ್‌ 16 ಎಸೆತಗಳಲ್ಲಿ 43 ರನ್ ಸಿಡಿಸಿದರು.

    ಇವರಿಬ್ಬರ ವಿಕೆಟ್‌ ಪತನಗೊಳ್ಳುತ್ತಿದ್ದಂತೆ ಕ್ರೀಗಿಳಿದ ಭಾನು ಪಾನಿಯಾ (Bhanu Pani) ಭರ್ಜರಿ ಸಿಕ್ಟರ್‌ ಬೌಂಡರಿಗಳ ಮಳೆ ಸುರಿಸಿದರು. ತಾನು ಎದುರಿಸಿದ 51 ಎಸೆಯಗಳಲ್ಲಿ 15 ಭರ್ಜರಿ ಸಿಕ್ಸರ್‌, 5 ಬೌಂಡರಿ ಸೇರಿ 262.74 ಸ್ಟ್ರೈಕ್‌ರೇಟ್‌ನೊಂದಿಗೆ ಅಜೇಯ 134 ರನ್‌ ಚಚ್ಚಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಟೆಕ್ವಾಂಡೋ ಸ್ಪರ್ಧೆ: ಪಾಣೆಮಂಗಳೂರಿನ‌ ಆಯಿಶಾ ಹಫೀಝ್‌ಗೆ ಚಿನ್ನ

    ಇದರೊಂದಿಗೆ ಜೊತೆಯಾದ ಶಿವಾಲಿಕ್ ಶರ್ಮಾ 17 ಎಸೆತಗಳಲ್ಲಿ 6 ಸಿಕ್ಸರ್‌ ಗಳನ್ನು ಬಾರಿಸಿ 55 ರನ್‌ ಗಳಿಸಿದರು. ಇನ್ನಿಂಗ್ಸ್‌ನ ಕೆಲ ಓವರ್‌ ಬಾಕಿ ಇರುವಾಗ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ವಿಷ್ಣು ಸೋಲಂಕಿ 16 ಎಸೆತಗಳಲ್ಲಿ 6 ಸಿಕ್ಸರ್​​ಗಳೊಂದಿಗೆ 50 ರನ್ ಬಾರಿಸಿದರು.

    ಒಟ್ಟಾರೆಯಾಗಿ ಬರೋಡಾ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 349 ರನ್‌ ಪೇರಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ್ದ ಸಿಕ್ಕಿಂ ತಂಡ 20 ಓವರ್‌ಗಳಲ್ಲಿ ಕೇವಲ 86 ರನ್‌ಗಳಿಸಿ 7 ವಿಕೆಟ್‌ ಕಳೆದುಕೊಂಡು 263 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

    ಈ ಹಿಂದೆ (2024 ರಲ್ಲಿ) ಜಿಂಬಾಬ್ಬೆ ತಂಡ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ತಂಡವು 344 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿತ್ತು. ಇದಕ್ಕೂ ಮುನ್ನ ನೇಪಾಳ ತಂಡ ಮಂಗೋಲಿಯಾ ವಿರುದ್ಧ ಹ್ಯಾಂಗ್‌ಝೌ (2023ರಲ್ಲಿ) 314/3 ರನ್‌ ಗಳಿಸಿತ್ತು.

    ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ ಗಳಿಸಿದ ಟಾಪ್‌-5 ತಂಡಗಳು
    * ಜಿಂಬಾಬ್ವೆ – 344 ರನ್‌
    * ನೇಪಾಳ – 314 ರನ್‌
    * ಭಾರತ – 297 ರನ್‌
    * ಜಿಂಬಾಬ್ವೆ – 286 ರನ್‌
    * ಭಾರತ – 283 ರನ್‌

  • ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

    ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

    ಹೈದರಾಬಾದ್‌: ಬಾಂಗ್ಲಾ ವಿರುದ್ಧ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಟೀಂ ಇಂಡಿಯಾ (Team India) ಹಲವು ದಾಖಲೆಗಳನ್ನು ನುಚ್ಚುನೂರು ಮಾಡಿತು.

    ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್‌ 12) ನಡೆದ ಪಂದ್ಯವು ನಿಜಕ್ಕೂ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಭಾರತದ ಬ್ಯಾಟರ್‌ಗಳ ಅಬ್ಬರಕ್ಕೆ ದಾಖಲೆಗಳು ಧೂಳಿಪಟ ಆದವು. ಮೊದಲ ಓವರ್‌ನಿಂದಲೇ ಅಬ್ಬರಿಸಲು ಶುರು ಮಾಡಿದ ಸಂಜು ಸ್ಯಾಮ್ಸನ್‌‌ (Sanju Samson), ಸಿಕ್ಸರ್, ಬೌಂಡರಿಗಳೊಂದಿಗೆ ಶತಕ ಸಿಡಿಸಿ ಮೆರೆದಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ ಶತಕ ಸಿಡಿಸಿದ ಮೊದಲ ವಿಕೆಟ್‌ ಕೀಪರ್‌ ಎನಿಸಿಕೊಂಡರು. ಜೊತೆಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಸಹ ಎನಿಸಿಕೊಂಡರು.

    ವಿಶ್ವದ 2ನೇ ಗರಿಷ್ಠ ರನ್‌:
    20 ಓವರ್‌ಗಳಲ್ಲಿ 297 ರನ್‌ ಗಳಿಸಿದ ಭಾರತ ತಂಡವು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (T20I Cricket) ಗಳಿಸಿದ 2ನೇ ಗರಿಷ್ಠ ಸ್ಕೋರ್‌ ಆಯಿತು. 2023ರ ಏಷ್ಯನ್‌ ಗೇಮ್ಸ್‌ನಲ್ಲಿ ನೇಪಾಳ ತಂಡವು ಮಂಗೋಲಿಯಾ ವಿರುದ್ಧ 314 ರನ್‌ ಗಳಿಸಿರುವುದು ಈವರೆಗಿನ ದಾಖಲೆ. ಇದನ್ನೂ ಓದಿ: 6,6,6,6,6: ಒಂದೇ ಓವರ್‌ನಲ್ಲಿ 5 ಸಿಕ್ಸರ್‌ ಸಿಡಿಸಿ ಅಬ್ಬರಿಸಿದ ಸ್ಯಾಮ್ಸನ್‌

    ಅಲ್ಲದೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ 10 ಓವರ್‌ಗಳಲ್ಲಿ ಅತಿಹೆಚ್ಚು ರನ್‌ ಗಳಿಸಿದ, ಅತಿವೇಗವಾಗಿ 100, 150, 200, 250 ರನ್‌ ಗಳಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು. ಜೊತೆಗೆ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಡಿಸಿದ ಖ್ಯಾತಿಯನ್ನೂ ತನ್ನದಾಗಿಸಿಕೊಂಡಿತು.  ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಕ್ಲೀನ್‌ಸ್ವೀಪ್‌ ಸಾಧನೆ:
    ಬಾಂಗ್ಲಾದೇಶ ವಿರುದ್ಧ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಅತಿಹೆಚ್ಚು ಬಾರಿ ಕ್ಲೀನ್‌ ಸ್ವೀಪ್‌ ಸಣಿ ಗೆದ್ದ ಸಾಧನೆಯೂ ಮಾಡಿತು. 34 ಸರಣಿಗಳ ಪೈಕಿ ಭಾರತ 10 ಸರಣಿಗಳನ್ನು ಕ್ಲೀನ್‌ ಸ್ವೀಪ್‌ ಮಾಡಿ ಭಾರತ ಅಗ್ರಸ್ಥಾನಲ್ಲಿದೆ. ಇನ್ನುಳಿದಂತೆ ಪಾಕಿಸ್ತಾನ (8), ಅಫ್ಘಾನಿಸ್ತಾನ (6), ಆಸ್ಟ್ರೇಲಿಯಾ (5), ಇಂಗ್ಲೆಂಡ್‌ (4) ಸರಣಿಗಳನ್ನು ಗೆದ್ದು ಕ್ರಮವಾಗಿ 2,3,4,5ನೇ ಸ್ಥಾನದಲ್ಲಿವೆ.  ಇದನ್ನೂ ಓದಿ: ಸಂಜು, ಸೂರ್ಯ ಬ್ಯಾಟಿಂಗ್‌ ಅಬ್ಬರ – ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ; 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌

  • ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಹೈದರಾಬಾದ್: ಭಾರತದ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ‌

    ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್‌ 12) ಬಾಂಗ್ಲಾದೇಶ (Bangladesh) ವಿರುದ್ಧ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಅಬ್ಬರಿಸಿದ ಸೂರ್ಯ ಕೇವಲ 35 ಎಸೆತಗಳಲ್ಲಿ 75 ರನ್‌ ಚಚ್ಚಿದರು. ಇದೇ ವೇಳೆ ಭಾರತದ ಪರ ಅತಿ ವೇಗವಾಗಿ 2,500 ರನ್‌ ಪೂರೈಸಿದ 2ನೇ ಬ್ಯಾಟರ್‌ ಎಂಬ ದಾಖಲೆಗೆ ಪಾತ್ರರಾದರು.

    ಟೀಂ ಇಂಡಿಯಾ ಪರ ಆಡಿದ 71ನೇ ಇನಿಂಗ್ಸ್‌ ಹಾಗೂ 73ನೇ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌, 2,500 ರನ್‌ಗಳ ಗಡಿ ದಾಟಿಸಿದರು. ಅಂದಹಾಗೆ ಮಾಜಿ ನಾಯಕ ವಿರಾಟ್‌ ಕೊಹ್ಲಿ ಕೇವಲ 68 ಇನಿಂಗ್ಸ್‌ 73 ಪಂದ್ಯಗಳಲ್ಲಿ ಈ ದಾಖಲೆ ನಿರ್ಮಿಸಿದ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದರು. ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್‌ ಆಜಂ ಹೆಸರಿನಲ್ಲೂ ಈ ದಾಖಲೆ ಇದೆ. ಬಾಬರ್‌ ಕೇವಲ 62 ಇನಿಂಗ್ಸ್‌, 67 ಪಂದ್ಯಗಳಲ್ಲಿ ಈ ಮೈಲುಗಲ್ಲು ಮುಟ್ಟಿದ್ದಾರೆ.

    ಅತಿ ವೇಗವಾಗಿ 2,500 ರನ್‌ ಪೂರೈಸಿದ ಬ್ಯಾಟರ್‌
    * ಬಾಬರ್‌ ಆಜಂ (ಪಾಕಿಸ್ತಾನ) – 67 ಪಂದ್ಯ
    * ಸೂರ್ಯಕುಮಾರ್‌ ಯಾದವ್‌ (ಭಾರತ) – 73 ಪಂದ್ಯ
    * ವಿರಾಟ್‌ ಕೊಹ್ಲಿ (ಭಾರತ) – 73 ಪಂದ್ಯ
    * ಮೊಹಮ್ಮದ್‌ ರಿಜ್ವಾನ್‌ (ಪಾಕಿಸ್ತಾನ) – 76 ಪಂದ್ಯ
    * ಆರನ್‌ ಫಿಂಚ್‌ (ಆಸ್ಟ್ರೇಲಿಯಾ) – 78 ಪಂದ್ಯ
    * ಮಾರ್ಟಿನ್‌ ಗಪ್ಟಿಲ್‌ (ನ್ಯೂಜಿಲೆಂಡ್)‌ – 86 ಪಂದ್ಯ

  • ಸೂರ್ಯನಿಗೆ ಬೇಕಿದೆ 39 ರನ್‌ – ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಮಿಸ್ಟರ್‌ 360

    ಸೂರ್ಯನಿಗೆ ಬೇಕಿದೆ 39 ರನ್‌ – ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಮಿಸ್ಟರ್‌ 360

    ಮುಂಬೈ: ವಿಶ್ವದ ನಂ.2 ಟಿ20 ಬ್ಯಾಟರ್‌ ಎಂದೇ ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

    ʻಮಿಸ್ಟರ್‌ 360ʼ ಖ್ಯಾತಿಯ ಸೂರ್ಯಕುಮಾರ್‌ ಯಾದವ್‌ ಈವರೆಗೆ ಆಡಿರುವ 72 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 2,461 ರನ್‌ ಸಿಡಿಸಿದ್ದಾರೆ. ಅ.9ರಂದು ಬಾಂಗ್ಲಾದೇಶ ಕ್ರಿಕೆಟ್‌ ತಂಡದ (Bangladesh Cricket) ವಿರುದ್ಧ ನಡೆಯಲಿರುವ 2ನೇ ಟಿ20 ಪಂದ್ಯದಲ್ಲಿ 39 ರನ್‌ ಸಿಡಿಸಿದ್ರೆ, 2,500 ಪೂರೈಸಲಿದ್ದಾರೆ. ಇದನ್ನೂ ಓದಿ: ಕುಸಿಯಲಿದೆಯೇ 24 ಕೋಟಿ ಸರದಾರನ ಮೌಲ್ಯ – 18 ಕೋಟಿ ಪಡೆಯಲು ಪಾಂಡ್ಯ ಅರ್ಹರೇ?

    ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 2,500 ರನ್‌ ಪೂರೈಸಿದ ವಿಶ್ವದ 2ನೇ ಆಟಗಾರ (Fastest Batter) ಎಂಬ ವಿಶೇಷ ಸಾಧನೆಗೆ ಪಾತ್ರರಾಗಲಿದ್ದಾರೆ. 67 ಪಂದ್ಯಗಳಲ್ಲಿ ಈ ಸಾಧನೆ ಮಾಡಿರುವ ಪಾಕ್‌ ತಂಡದ ನಾಯಕ ಬಾಬರ್‌ ಆಜಂ (Babar Azam) ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೇ ವಿರಾಟ್‌ ಕೊಹ್ಲಿ (Virat Kohli), ಮೊಹಮ್ಮದ್‌ ರಿಜ್ವಾನ್‌, ಆರನ್‌ ಫಿಂಚ್‌, ಮಾರ್ಟಿನ್‌ ಗಪ್ಟಿಲ್‌ ಈ ಸಾಧಕರ ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: ಬೌಲರ್‌ಗಳ ದಾಳಿಗೆ ಬಾಂಗ್ಲಾ ಧೂಳಿಪಟ – ಪಾಂಡ್ಯ ಸೂಪರ್‌ ಸಿಕ್ಸರ್; ಭಾರತಕ್ಕೆ 7 ವಿಕೆಟ್‌ಗಳ ಜಯ

    ಅತಿ ವೇಗವಾಗಿ 2,500 ರನ್‌ ಪೂರೈಸಿದ ಬ್ಯಾಟರ್‌
    * ಬಾಬರ್‌ ಆಜಂ (ಪಾಕಿಸ್ತಾನ) – 67 ಪಂದ್ಯ
    * ವಿರಾಟ್‌ ಕೊಹ್ಲಿ (ಭಾರತ) – 73 ಪಂದ್ಯ
    * ಮೊಹಮ್ಮದ್‌ ರಿಜ್ವಾನ್‌ (ಪಾಕಿಸ್ತಾನ) – 76 ಪಂದ್ಯ
    * ಆರನ್‌ ಫಿಂಚ್‌ (ಆಸ್ಟ್ರೇಲಿಯಾ) – 78 ಪಂದ್ಯ
    * ಮಾರ್ಟಿನ್‌ ಗಪ್ಟಿಲ್‌ (ನ್ಯೂಜಿಲೆಂಡ್)‌ – 86 ಪಂದ್ಯ

    ಇದೇ ಅಕ್ಟೋಬರ್‌ 6ರಂದು ಬಾಂಗ್ಲಾದೇಶದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ನಾಯಕನಾಗಿ ಸೂರ್ಯಕುಮಾರ್‌ ಯಾದವ್‌ 14 ಎಸೆತಗಳಲ್ಲಿ 29 ರನ್‌ ಬಾರಿಸಿದ್ದರು. ಇದನ್ನೂ ಓದಿ: ಮಿಸ್ಟರ್‌ 360 ಮೇಲೆ ಆರ್‌ಸಿಬಿ ಕಣ್ಣು – ಈ ಸಲ ಕಪ್‌ ನಮ್ಮದಾಗುತ್ತಾ ಅಂತಿದ್ದಾರೆ ಫ್ಯಾನ್ಸ್‌?

  • ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    ಬೆಂಗಳೂರು: ಭಾರತ ಕ್ರಿಕೆಟ್ (Team India) ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಮಗ ಸಮಿತ್ ದ್ರಾವಿಡ್ ಸಿಕ್ಸ್ (Six) ಬಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸಮಿತ್, ಕೆಎಸ್‌ಸಿಎ ಆಯೋಜಿಸುತ್ತಿರುವ ಮಹಾರಾಜ ಟಿ20 ಕ್ರಿಕೆಟ್ ಪಂದ್ಯಗಳಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಬೆಂಗಳೂರು ಬ್ಲಾಸ್ಟರ್ ವಿರುದ್ಧದ ಪಂದ್ಯದಲ್ಲಿ ಅವರು ಬಾರಿಸಿದ ಸಿಕ್ಸ್‌  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    ವಿಡಿಯೋ ನೋಡಿದ ಎಲ್ಲರೂ ದ್ರಾವಿಡ್ ಮತ್ತು ಸಮಿತ್ (Samit Dravid) ನಡುವೆ ಹೋಲಿಕೆ ಮಾಡುತ್ತಿದ್ದಾರೆ. ಸಮಿತ್‌ರನ್ನು ಜೂನಿಯರ್ ರಾಹುಲ್ ದ್ರಾವಿಡ್ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.

    ಮೈಸೂರು ವಾರಿಯರ್ಸ್ ತಂಡ ದೊಡ್ಡ ಮೊತ್ತದ ರನ್ ಗಳಿಸಿದರೂ 4 ರನ್‌ಗಳಿಂದ ಸೋಲು ಕಂಡಿತು. ಪಂದ್ಯಕ್ಕೆ ಸ್ವಲ್ಪ ಹೊತ್ತು ಮಳೆಯೂ ಅಡ್ಡಿಪಡಿಸಿತು.

    ಕಳೆದ ಜೂನ್ ತಿಂಗಳಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ (T20 World Cup) ಗೆದ್ದ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

     

  • ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಹರಾರೆ: ಸಂಜು ಸ್ಯಾಮ್ಸನ್ (Sanju Samson)​ ಅಮೋಘ ಅರ್ಧ ಶತಕ, ಶಿವಂ ದುಬೆ ಆಲ್‌ರೌಂಡ್‌ ಆಟ ಹಾಗೂ ಮುಕೇಶ್‌ ಕುಮಾರ್‌ ಮಾರಕ ಬೌಲಿಂಗ್‌ ದಾಳಿಯಿಂದ ಭಾರತ ತಂಡ (Team India) ಜಿಂಬಾಬ್ವೆ ವಿರುದ್ಧ ಟಿ20 ಸರಣಿಯ 5ನೇ ಪಂದ್ಯದಲ್ಲೂ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1ರಲ್ಲಿ ಗೆದ್ದುಕೊಂಡಿದೆ.

    ಆರಂಭಿಕ ಪಂದ್ಯದಲ್ಲಿ ಅತ್ಯಲ್ಪ ಮೊತ್ತವಿದ್ದರೂ ಅಚ್ಚರಿ ಸೋಲು ಕಂಡಿದ್ದ ಯುವ ಬಳಗದ ಭಾರತ ತಂಡ ಬಳಿಕ ಸತತ ನಾಲ್ಕೂ ಪಂದ್ಯಗಳಲ್ಲೂ ಭರ್ಜರಿ ಗೆಲುವಿನೊಂದಿಗೆ ಸರಣಿ ತನ್ನದಾಗಿಸಿಕೊಂಡಿದೆ. ಅಲ್ಲದೇ ತನ್ನ ನಾಯಕತ್ವದಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಗೆಲುವು ಸಾಧಿಸುವ ಮೂಲಕ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

    ಭಾನುವಾರ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆದ ಕೊನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 6 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿತ್ತು. 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ (Zimbabwe), ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ 18.3 ಓವರ್‌ಗಳಲ್ಲೇ 125 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

    ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದ್ದ ಭಾರತ ತಂಡಕ್ಕೆ ಆಘಾತ ಎದುರಾಗಿತ್ತು. ಮೊದಲ ಐದು ಓವರ್‌ಗಳಲ್ಲೇ 40 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಸಂಜು ಸ್ಯಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಯಿತು. 56 ಎಸೆತಗಳಲ್ಲಿ ಈ ಜೋಡಿ 4ನೇ ವಿಕೆಟ್‌ಗೆ 65 ರನ್‌ ಬಾರಿಸಿತ್ತು. ಈ ವೇಳೆ ಸಿಕ್ಸರ್‌ ಬಾರಿಸಲು ಮುಂದಾದ ರಿಯಾನ್‌ ಪರಾಗ್‌ ಕ್ಯಾಚ್‌ ನೀಡಿ ಔಟಾದರು. ಬಳಿಕ ಕ್ರೀಸ್‌ಗಿಳಿದ ಶಿವಂ ದುಬೆ (Shivam Dube) ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. ಇದರಿಂದ ಭಾರತ ತಂಡ 160 ರನ್‌ ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಸಂಜು 110 ಮೀಟರ್‌ ಸಿಕ್ಸರ್‌:
    ಸಂಕಷ್ಟ ಸಮಯದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟಿದ ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನೊಂದಿಗೆ 58 ರನ್‌ ಚಚ್ಚಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಬಾರಿಸಿದ ಸಿಕ್ಸರ್‌ವೊಂದು 110 ಮೀಟರ್‌ ಸಾಗಿತು. ಸಂಜು ಸಿಡಿಲಬ್ಬರದ ಸಿಕ್ಸರ್‌ ಕಂಡು ಪ್ರೇಕ್ಷಕರೇ ದಂಗಾದರು. ಇದರೊಂದಿಗೆ ಶಿವಂ ದುಬೆ 28 ರನ್‌ (12 ಎಸೆತ, 2 ಸಿಕ್ಸರ್‌, 2 ಬೌಂಡರಿ), ರಿಯಾನ್‌ ಪರಾಗ್‌ 22 ರನ್‌, ಯಶಸ್ವಿ ಜೈಸ್ವಾಲ್‌ 12 ರನ್‌, ಶುಭಮನ್‌ ಗಿಲ್‌ 13 ರನ್‌, ಅಭಿಷೇಕ್‌ ಶರ್ಮಾ 14 ರನ್‌, ರಿಂಕು ಸಿಂಗ್‌ 11 ರನ್‌, ವಾಷಿಂಗ್ಟನ್‌ 10 ರನ್‌ಗಳ ಕೊಡುಗೆ ನೀಡಿದರು.  ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ಮುಕೇಶ್‌ ಮಾರಕ ದಾಳಿ:
    ಭಾರತ ನೀಡಿದ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೇ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದರು. ಮರುಮಣಿ 27 ರನ್ ಕೊಡುಗೆ ನೀಡಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ನೆಲೆಯೂರದ ಕಾರಣ ಜಿಂಬಾಬ್ವೆ ಕೊನೇ ಪಂದ್ಯದಲ್ಲೂ ಹೀನಾಯ ಸೋಲಿಗೆ ತುತ್ತಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 3.3 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ ಶಿವಂ ದುಬೆ 2 ವಿಕೆಟ್ ಪಡೆದರು. ಇದರೊಂದಿಗೆ ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌!