Tag: ಟಿ20 ರ್ಯಾಕಿಂಗ್

  • ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಯ ಅಪರೂಪದ ವಿಶ್ವ ದಾಖಲೆ ಮುರಿದ ಬಾಬರ್ ಅಜಮ್

    ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಯ ಅಪರೂಪದ ವಿಶ್ವ ದಾಖಲೆ ಮುರಿದ ಬಾಬರ್ ಅಜಮ್

    ದುಬೈ: ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ನಂ.1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ಈ ಮೂಲಕ 1030 ದಿನಗಳ ಕಾಲ ನಂ.1 ಸ್ಥಾನ ಅಲಂಕರಿಸಿ ಈ ಹಿಂದೆ ವಿರಾಟ್ ಕೊಹ್ಲಿ ಹೆಸರಲಿದ್ದ ದಾಖಲೆಯನ್ನು ಮುರಿದಿದ್ದಾರೆ.

    ಈ ಹಿಂದೆ ಐಸಿಸಿ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 1013 ದಿನ ನಂ.1 ಸ್ಥಾನದಲ್ಲಿ ಇದ್ದು ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಇದೀಗ ಬಾಬರ್ ಅಜಮ್ ಪುಡಿಗಟ್ಟಿದ್ದು, ಒಟ್ಟು 1030 ದಿನಗಳ ಕಾಲ ನಂ.1 ಸ್ಥಾನದಲ್ಲಿ ಮುಂದುವರಿದು ನೂತನ ದಾಖಲೆ ಬರೆದಿದ್ದಾರೆ. ಜೊತೆಗೆ ಬ್ಯಾಟಿಂಗ್ ಕಿಂಗ್ ಆಗಿ ಮೆರೆದಾಡಿದ್ದಾರೆ. ಇದನ್ನೂ ಓದಿ: ಚೊಚ್ಚಲ ಶತಕದೊಂದಿಗೆ ಮಿಂಚಿದ ದೀಪಕ್‌ ಹೂಡಾ – ಐರ್ಲೆಂಡ್‌ ವಿರುದ್ಧ ಭಾರತಕ್ಕೆ 4 ರನ್‌ಗಳ ರೋಚಕ‌ ಜಯ

    ಇಂದು ಐಸಿಸಿ ಬಿಡುಗಡೆ ಮಾಡಿರುವ ರ್‍ಯಾಂಕಿಂಗ್‌ನಲ್ಲಿ ಬಾಬರ್ ಅಜಮ್ 818 ಅಂಕಗಳೊಂದಿಗೆ ನಂ.1 ಸ್ಥಾನ ಪಡೆದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 794 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ದಕ್ಷಿಣಾ ಆಫ್ರಿಕಾ ತಂಡದ ಮಾರ್ಕ್ರಾಮ್ ಇದ್ದಾರೆ. ಭಾರತೀಯರ ಪೈಕಿ ಇಶಾನ್ ಕಿಶನ್ 682 ಅಂಕಗಳೊಂದಿಗೆ 7 ನೇ ಸ್ಥಾನ ಪಡೆದು ಟಾಪ್ 10ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರನಾಗಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಯಾನ್ ಮಾರ್ಗನ್ ವಿದಾಯ

    ವಿರಾಟ್ ಕೊಹ್ಲಿ ರ್‍ಯಾಂಕಿಂಗ್‌ನಲ್ಲಿ 21ನೇ ಸ್ಥಾನದಲ್ಲಿದ್ದು, ಈ ವರ್ಷ ಕೊಹ್ಲಿ ಕೇವಲ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ ವರ್ಷಕ್ಕೆ 300 ರನ್‍ಗಳನ್ನು ಗಳಿಸಿಲ್ಲ. ಇದರಿಂದಾಗಿ ರ್‍ಯಾಂಕಿಂಗ್ ಕುಸಿತ ಕಂಡಿದೆ.

    Live Tv

  • ಐಸಿಸಿ ನೂತನ ಟಿ20 ರ‍್ಯಾಂಕಿಂಗ್  5ನೇ ಸ್ಥಾನಕ್ಕೇರಿದ ಕೊಹ್ಲಿ

    ಐಸಿಸಿ ನೂತನ ಟಿ20 ರ‍್ಯಾಂಕಿಂಗ್ 5ನೇ ಸ್ಥಾನಕ್ಕೇರಿದ ಕೊಹ್ಲಿ

    ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪ್ರಕಟಿಸಿರುವ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ನಲ್ಲಿ ಒಂದು ಸ್ಥಾನ ಮೇಲೇರಿ 5ನೇ ಸ್ಥಾನ ಅಲಂಕರಿಸಿದ್ದಾರೆ.

    ವಿರಾಟ್ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಪರಿಣಾಮ ಐಸಿಸಿಯ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ನಲ್ಲಿ ಒಂದು ಸ್ಥಾನ ಭಡ್ತಿ ಪಡೆದಿದ್ದಾರೆ.

    ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 73 ರನ್ ಮತ್ತು 3ನೇ ಪಂದ್ಯದಲ್ಲಿ 77 ರನ್ ಸಿಡಿಸಿ ಮಿಂಚಿದ್ದರು. ಹಾಗಾಗಿ ಐಸಿಸಿಯ ನೂತನ ರ‍್ಯಾಂಕಿಂಗ್ ನಲ್ಲಿ 744 ಅಂಕಗಳೊಂದಿಗೆ 6ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    ಕೊಹ್ಲಿ ಒಂದು ಸ್ಥಾನ ಭಡ್ತಿ ಪಡೆದರೆ ಇತ್ತ ಕನ್ನಡಿಗ ಕೆ.ಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸತತ ಶೂನ್ಯ ಸಂಪಾದಿಸಿ ನಿರಾಸೆ ಮೂಡಿಸಿದ ಪರಿಣಾಮ ಒಂದು ಸ್ಥಾನ ಕುಸಿದಿದ್ದಾರೆ. ಈ ಮೊದಲು ಐಸಿಸಿಯ ಟಿ20 ರ‍್ಯಾಂಕಿಂಗ್ ನಲ್ಲಿ 3ನೇ ಸ್ಥಾನದಲ್ಲಿದ್ದ ರಾಹುಲ್ ಒಂದು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ.

    ಐಸಿಸಿಯ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಹೊರತು ಪಡಿಸಿ ಬೇರೆ ಯಾವುದೇ ಭಾರತದ ಬ್ಯಾಟ್ಸ್‌ಮ್ಯಾನ್ ಗಳು ಅಗ್ರ ಹತ್ತರ ಕ್ರಮಾಂಕದಲ್ಲಿ ಕಾಣಿಸಿಕೊಂಡಿಲ್ಲ. 894 ಅಂಕಗಳೊಂದಿಗೆ ಟಿ20 ಕ್ರಿಕೆಟ್‍ನ ನಂಬರ್ 1 ಬ್ಯಾಟ್ಸ್‌ಮ್ಯಾನ್ ಆಗಿ ಇಂಗ್ಲೆಂಡ್‍ನ ಡೇವಿಡ್ ಮಲಾನ್ ಮುಂದುವರೆದರೆ, ನಂತರದ ಸ್ಥಾನವನ್ನು 830 ಅಂಕಗಳೊಂದಿಗೆ ಆಸ್ಟ್ರೇಲಿಯಾದ ಆರೋನ್ ಫಿಂಚ್ ಪಡೆದಿದ್ದಾರೆ.