ಯಾವುದೇ ಮಹತ್ವದ ಟೂರ್ನಿ ಒಂದು ಮಾದರಿಯಲ್ಲಿ ನಡೆಯಬೇಕಾದ್ರೆ ಅದರ ಸ್ವರೂಪ ಮೊದಲೇ ನಿರ್ಧಾರವಾಗಿರುತ್ತೆ.. ಆದ್ರೆ ಏಷ್ಯಾ ಕಪ್ (Asia Cup 2025) ಮಾತ್ರ ಹಾಗಲ್ಲ. 2022ರಲ್ಲಿ ನಡೆದ ಏಷ್ಯಾ ಕಪ್ ಟಿ20 ಮಾದರಿಯಲ್ಲಿ ನಡೆದಿತ್ತು. 2023ರಲ್ಲಿ ಏಕದಿನ ಮಾದರಿಯಲ್ಲಿ ನಡೆಯಿತು. ಇದೀಗ ಮತ್ತೆ ಟಿ20 ಮಾದರಿಗೆ ಬದಲಾಯಿಸಲಾಗಿದೆ. ಈ ರೀತಿ ಪ್ರತಿಬಾರಿಯೂ ಮಾದರಿ ಬದಲಾಯಿಸಲು ಕಾರಣವೇನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಏಷ್ಯಾ ಕಪ್ ಟಿ20 ಕ್ರಿಕೆಟ್ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್ ಮಧ್ಯೆ ನಡೆದರೆ ಸೆ.28ರಂದು ಫೈನಲ್ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತ (India) ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಪಾಕಿಸ್ತಾನದ ವಿರುದ್ಧ ಸೂಪರ್ ಸಂಡೇ ಹೈವೋಲ್ಟೇಜ್ ಪಂದ್ಯವನ್ನಾಡಲಿದೆ.
ವಿಶ್ವಕಪ್‌ಗೆ ಪೂರ್ವತಯಾರಿ ಏಷ್ಯಾ ಕಪ್
1975ರಲ್ಲಿ ಪ್ರಾರಂಭವಾದ ಐಸಿಸಿ ಏಕದಿನ ವಿಶ್ವಕಪ್ (ICC ODI World Cup) ಪ್ರತಿ 4 ವರ್ಷಗಳಿಗೊಮ್ಮೆ ಬರುತ್ತದೆ. ಅದೇ 2007ರಲ್ಲಿ ಪ್ರಾರಂಭವಾದ ಐಸಿಸಿ ಟಿ20 ವಿಶ್ವಕಪ್ ಅನ್ನು ಪ್ರತಿ 2 ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಏಷ್ಯಾ ಕಪ್ ಸಹ 2 ವರ್ಷಗಳಿಗೊಮ್ಮೆ ನಡೆಯುತ್ತಿರುವುದರಿಂದ ಇದನ್ನು ವಿಶ್ವಕಪ್‌ಗೆ ಪೂರ್ವತಯಾರಿಯಾಗಿ ನಡೆಸಲು ಅನುಕೂಲ ಆಗುವಂತೆ ನಡೆಸಲು ಐಸಿಸಿ ನಿರ್ದೇಶನ ನೀಡಿದೆ. ಹಾಗಾಗಿ ಪ್ರತಿ ಬಾರಿ ಟಿ20 ವಿಶ್ವಕಪ್‌ಗೆ (T20 World Cup) ಮುನ್ನ ಟಿ20 ಮಾದರಿಯಲ್ಲಿ ಏಕದಿನ ವಿಶ್ವಕಪ್‌ಗೆ ಮುನ್ನ ಏಕದಿನ ಮಾದರಿಯಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಯಾವಾಗಿನಿಂದ ಈ ಬದಲಾವಣೆ?
2015ರ ಬಳಿಕ ಈ ಬೆಳವಣಿಗೆ ನಡೆದಿದೆ. 2016 ರಲ್ಲಿ ಏಷ್ಯಾಕಪ್ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2016ರ ಟಿ20 ವಿಶ್ವಕಪ್‌ಗೂ ಮುನ್ನ ಸಿದ್ಧತೆಯಾಗಿತ್ತು. 2018 ರಲ್ಲಿ ಏಷ್ಯಾ ಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ನಡೆಯಿತು. ಇದು 2019ರ ಏಕದಿನ ವಿಶ್ವಕಪ್‌ಗೆ ಸಿದ್ಧತೆಯಾಗಿತ್ತು. 2022ರಲ್ಲಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2022ರ ಟಿ20 ವಿಶ್ವಕಪ್‌ಗೆ ಪೂರ್ವತಯಾರಿ ಆಗಿತ್ತು. 2023 ರಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2023ರ ಏಕದಿನ ವಿಶ್ವಕಪ್‌ಗೆ ಸಕಲ ಸಿದ್ಧತೆಯಾಗಿತ್ತು. 2025 ರಲ್ಲಿ ಟಿ20ಐ ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದೆ. ಇದು 2026 ರ ಟಿ20ಐ ವಿಶ್ವಕಪ್‌ಗೆ ಪೂರ್ವ ಸಿದ್ಧತೆಯಾಗಿರಲಿದೆ. ಜೊತೆಗೆ ಎರಡೂ ಮಾದರಿಗಳ ಜನಪ್ರಿಯತೆ ಹೆಚ್ಚಲು, ಅಭಿಮಾನಿಗಳನ್ನು, ಪ್ರಾಯೋಜಕರನ್ನು ಹಿಡಿದಿಟ್ಟುಕೊಳ್ಳಲು ಐಸಿಸಿ ಮತ್ತು ಎಸಿಸಿ ಕಂಡುಕೊಂಡಿರುವ ತಂತ್ರವಾಗಿದೆ.
ಭಾರತವೇ ಯಶಸ್ವಿ ತಂಡ
ಏಷ್ಯಾಕಪ್ ಇಲ್ಲಿಯವರೆಗೆ 16 ಆವೃತ್ತಿಗಳನ್ನು ಪೂರ್ಣಗೊಳಿಸಿದ್ದು, ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಏಷ್ಯಾಕಪ್‌ನಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಭಾರತ ಆಗಿದೆ.
ಭಾರತ – 8 ಪ್ರಶಸ್ತಿಗಳು
ಶ್ರೀಲಂಕಾ – 6 ಪ್ರಶಸ್ತಿಗಳು
ಪಾಕಿಸ್ತಾನ – 2 ಪ್ರಶಸ್ತಿಗಳು
ರನ್ನರ್ ಅಪ್
ಶ್ರೀಲಂಕಾ – 7 ಬಾರಿ ರನ್ನರ್ ಅಪ್
ಭಾರತ – 3 ಬಾರಿ ರನ್ನರ್ ಅಪ್
ಪಾಕಿಸ್ತಾನ – 3 ಬಾರಿ ರನ್ನರ್ ಅಪ್
ಬಾಂಗ್ಲಾದೇಶ – 3 ಬಾರಿ ರನ್ನರ್ ಅಪ್
2025ರ ಹೊಸವರ್ಷಕ್ಕೆ ಕ್ಷಣಗಣನೆ ಬಾಕಿಯಿದೆ. ಹೊಸ ವರ್ಷ ಅಂದ್ರೆ ಹೊಸ ವಿಷಯಗಳೇ ನೆನಪಿಗೆ ಬರುತ್ತವೆ. ಹೊಸ ಸಂಕಲ್ಪಗಳು, ಹೊಸ ಹವ್ಯಾಸಗಳು, ಹೀಗೆ ಬದುಕನ್ನು ಬದಲಾಯಿಸಲು ಹೊಸ ನಿರ್ಧಾರ ತೆಗೆದುಕೊಳ್ಳಲು ಹೊಸ ವರ್ಷ ಒಳ್ಳೆಯ ಅವಕಾಶ. ಸಕಾರಾತ್ಮಕ ವಿಷಯ ಸಂಕಲ್ಪ ಮಾಡುವುದರಿಂದ ಬದುಕಿನಲ್ಲಿ ಒಳ್ಳೆಯ ಪರಿಣಾಮಗಳನ್ನು ಕಾಣಬಹುದು. ಹಾಗಾಗಿ ಮುಂಬರುವ ಹೊಸವರ್ಷದಲ್ಲಾದರೂ ಭಾರತೀಯ ಕ್ರೀಡಾಪಟುಗಳು ಇನ್ನಷ್ಟು ದಾಖಲೆಗಳನ್ನು ಬರೆದು ಇತಿಹಾಸ ನಿರ್ಮಿಸಲಿ ಎನ್ನುವುದು ಆಶಯ. ಅದಕ್ಕೂ ಮುನ್ನ 2024ರ ವರ್ಷದಲ್ಲಿ ಕಂಡ ಅವಿಸ್ಮರಣೀಯ ದಿನಗಳನ್ನು ನಾವು ನೆನಪಿಸಿಕೊಳ್ಳಲೇಬೇಕು. ಕಹಿ ಘಟನೆಗಳನ್ನು ಮರೆಯುತ್ತಾ, ಸಿಹಿ ನೆನಪುಗಳನ್ನು ಹೊತ್ತು ಮುಂದೆ ಸಾಗಬೇಕು. ಈ ವರ್ಷ ಕ್ರೀಡಾಲೋಕ ಏನೆಲ್ಲಾ ಏಳು-ಬೀಳುಗಳನ್ನು ಕಂಡಿದೆ? ಅವುಗಳಲ್ಲಿ ಇಣುಕುನೋಟ ಇಲ್ಲಿದೆ…..
ʻವಿಶ್ವಗುರುʼವಾದ ಭಾರತ
ಕಳೆದ ಜೂನ್ ತಿಂಗಳಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನ ಆತಿಥ್ಯದಲ್ಲಿ 2024ರ ಟಿ20 ವಿಶ್ವಕಪ್ ಟೂರ್ನಿ ನಡೆಯಿತು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳಿಂದ ರೋಚಕ ಗೆಲುವು ಸಾಧಿಸಿತು. ಗೆಲುವಿನೊಂದಿಗೆ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತು. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡ ಟೀಮ್ ಇಂಡಿಯಾ, 2007ರ ಬಳಿಕ 2ನೇ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತು. ಇದು ಒಂದು ಹೆಮ್ಮೆಯಾದರೆ ಟ್ರೋಫಿ ಎತ್ತಿ ಹಿಡಿಯುತ್ತಿದ್ದಂತೆ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಒಲಿಂಪಿಕ್ಸ್‌ನಲ್ಲಿ ಸೋಲು-ಗೆಲುವು
2024ರ ಪ್ಯಾರಿಸ್ ಒಲಿಂಪಿಕ್ಸ್ ಭಾರತೀಯ ಕ್ರೀಡಾಜಗತ್ತಿಗೆ ಅವಿಸ್ಮರಣೀಯವಾಗಿತ್ತು. ಪ್ರವೇಶಿಸಿದ ಚೊಚ್ಚಲ ಒಲಿಂಪಿಕ್ಸ್‌ನಲ್ಲೇ ಶೂಟರ್ ಮನು ಭಾಕರ್ ಎರಡು ಕಂಚಿನ ಪದಕ ಗೆದ್ದು ಐತಿಹಾಸಿಕ ದಾಖಲೆ ಬರೆದರು. ಮತ್ತೊಂದೆಡೆ ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಫೋಗಟ್ ಅಧಿಕ ತೂಕದಿಂದಾಗಿ ಅನರ್ಹಗೊಂಡರು. ಈ ಘಟನೆ ದೇಶಾದ್ಯಂತ ಸದ್ದು ಮಾಡಿತ್ತು. ಅಲ್ಲದೇ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಕಂಚುಗೆಲ್ಲುವ ಭರವಸೆ ಮೂಡಿಸಿದ್ದ ಲಕ್ಷ್ಯಸೇನ್ ಮೊಣಕೈ ಗಾಯದಿಂದಾಗಿ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದರು. ನೀರಜ್ ಚೋಪ್ರಾ ಬೆಳ್ಳಿ ಪದಕ್ಕೆ ತೃಪ್ತಿಪಟ್ಟುಕೊಂಡರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಶ್ವಿನ್ ಗುಡ್‌ಬೈ
ವರ್ಷದ ಕೊನೆಯಲ್ಲಿ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ 38 ವರ್ಷದ ಹಿರಿಯ ಆಟಗಾರ, ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ನಿವೃತ್ತಿ ಘೋಷಿಸಿದರು. ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಅಶ್ವಿನ್ ಆಗಿದ್ದಾರೆ. ಅನಿಲ್ ಕುಂಬ್ಳೆ 619 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದರೆ ಅಶ್ವಿನ್ 537 ವಿಕೆಟ್ ಪಡೆದಿದ್ದರು.
ಗುಕೇಶ್ ವಿಶ್ವ ಚೆಸ್ ಚಾಂಪಿಯನ್
ಇದೇ ಡಿಸೆಂಬರ್ 12ರಂದು ಸಿಂಗಾಪುರದಲ್ಲಿ ನಡೆದ ಚೆಸ್ ಟೂರ್ನಿಯಲ್ಲಿ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ 18ನೇ ವಯಸ್ಸಿನಲ್ಲೇ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸಿದರು.
ಕೆಕೆಆರ್‌ಗೆ 3ನೇ ಬಾರಿಗೆ ಚಾಂಪಿಯನ್ ಕಿರೀಟ
2024ರ ಐಪಿಎಲ್ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡವು 3ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಶ್ರೇಯಸ್ ಅಯ್ಯರ್ ನಾಯಕತ್ವ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ 2016ರ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿತು. 2012-14ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಚಾಂಪಿಯನ್ ಆಗಿದ್ದ ಕೆಕೆಆರ್ ತಂಡ ಈ ಬಾರಿ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇನ್ನೂ 2025ರ ಐಪಿಎಲ್ ಆವೃತ್ತಿಗೆ ಕಳೆದ ನವೆಂಬರ್‌ನಲ್ಲಿ ನಡೆದ ಮೆಗಾಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ 27 ಕೋಟಿ ರೂ.ಗಳಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಬಿಕರಿಯಾದರು.
ವಿಶ್ವದಾಖಲೆ ಬರೆದ ಜಿಂಬಾಬ್ವೆ
2026ರ ಟಿ20 ವಿಶ್ವಕಪ್ ಟೂರ್ನಿಗೆ ನಡೆದ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಜಿಂಬಾಬ್ವೆ ತಂಡವು ಗ್ಯಾಂಬಿಯಾ ವಿರುದ್ಧ 20 ಓವರ್‌ಗಳಲ್ಲಿ ಬರೋಬ್ಬರಿ 344 ರನ್ ಚಚ್ಚಿತು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನ್ನಿಂಗ್ಸ್‌ವೊಂದರಲ್ಲೇ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬರೆಯಿತು. ಇದಕ್ಕೂ ಮುನ್ನ ಮಂಗೋಲಿಯಾ ವಿರುದ್ಧ 314 ರನ್ ಗಳಿಸಿದ್ದ ನೇಪಾಳ ಹೆಸರಿನಲ್ಲಿ ಈ ದಾಖಲೆ ದಾಖಲಾಗಿತ್ತು. ಇನ್ನು ಕೆಲವೇ ದಿನಗಳ ಹಿಂದೆ ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 297 ರನ್ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತ್ತು. ಇದೀಗ ಜಿಂಬಾಬ್ವೆಯ ತ್ರಿಶತಕದ ಇನ್ನಿಂಗ್ಸ್‌ನಿಂದಾಗಿ ಭಾರತ 3ನೇ ಸ್ಥಾನಕ್ಕೆ ಕುಸಿಯಿತು.
ವರ್ಷದ ಕೊನೆಯಲ್ಲಿ ಒಂದು ಶತಕ, ಹಲವು ದಾಖಲೆ
ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್‌ನಲ್ಲಿ ನಿತೀಶ್ ರೆಡ್ಡಿ ವರ್ಷದ ಕೊನೆಯಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಹಲವು ದಾಖಲೆ ಬರೆದರು. ಆಸ್ಟ್ರೇಲಿಯಾದಲ್ಲಿ ಶತಕ ಭಾರಿಸಿದ ಭಾರತದ 3ನೇ ಕಿರಿಯ ಆಟಗಾರ, 2020ರ ಬಳಿಕ ಮೆಲ್ಬೋರ್ನ್‌ನಲ್ಲಿ ಶತಕ ಬಾರಿಸಿದ ಏಕೈಕ ಭಾರತೀಯ ಎಂಬ ಖ್ಯಾತಿ ಪಡೆದರಲ್ಲದೇ 8ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವಾಗ ಅತಿಹೆಚ್ಚು ರನ್ ಗಳಿಸಿದ ದಿಗ್ಗಜ ಅನಿಲ್ ಕುಂಬ್ಳೆ ಅವರ ದಾಖಲೆಯನ್ನೂ ಉಡೀಸ್ ಮಾಡಿದರು.
ಅತಿಹೆಚ್ಚು ರನ್ ಬಾರಿಸಿದ ಭಾರತದ ಟಾಪ್-5 ಬ್ಯಾಟರ್ಸ್
ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ನಿರಾಸೆ ಅನುಭವಿಸಿದ ಟೀಂ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅದ್ಭುತ ಸಾಧನೆ ಮಾಡಿತು. ಟೀಂ ಇಂಡಿಯಾ ಪ್ರಸಕ್ತ ವರ್ಷದಲ್ಲಿ ಒಟ್ಟು 26 ಪಂದ್ಯಗಳನ್ನಾಡಿ, 22ರಲ್ಲಿ ಜಯ ಸಾಧಿಸಿತು. ಈ ವರ್ಷ ಹಲವು ಯುವ ಆಟಗಾರರು ಅಮೋಘ ಪ್ರದರ್ಶನ ನೀಡಿದರು. ಈ ಪೈಕಿ ಸಂಜು ಸ್ಯಾಮ್ಸನ್ (436 ರನ್), ಸೂರ್ಯಕುಮಾರ್ ಯಾದವ್ (429 ರನ್), ರೋಹಿತ್ ಶರ್ಮಾ (378 ರಮ್), ತಿಲಕ್ ವರ್ಮಾ (306 ರನ್) ಅತಿಹೆಚ್ಚು ರನ್ ಸಿಡಿಸಿದ ಟಾಪ್-5 ಬ್ಯಾರ್‌ಗಳಾಗಿ ಹೊರಹೊಮ್ಮಿದರು.
ಕಿವೀಸ್ ವನಿತೆಯರಿಗೆ ಚೊಚ್ಚಲ ಚಾಂಪಿಯನ್ ಕಿರೀಟ
ಅಕ್ಟೋಬರ್ ತಿಂಗಳು ದುಬೈನಲ್ಲಿ ನಡೆದ ಐಸಿಸಿ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಮಹಿಳೆಯರ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತು. 14 ವರ್ಷಗಳ ಬಳಿಕ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ತಲುಪಿದ್ದ ನ್ಯೂಜಿಲೆಂಡ್ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ದಕ್ಷಿಣ ಆಫ್ರಿಕಾ ತಂಡ 2ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ಟೀಂ ಇಂಡಿಯಾಕ್ಕೆ ಸೋಲಿನ ಕಹಿ
2024ರ ವರ್ಷಾರಂಭದಲ್ಲಿ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್ ಮಾದರಿಯಲ್ಲಿ ನಂ.1 ಸ್ಥಾನದಲ್ಲಿದ್ದ ಭಾರತ, ವರ್ಷದ ಕೊನೇ ದಿನಗಳಲ್ಲಿ ಸಾಲು-ಸಾಲು ಸೋಲುಗಳನ್ನು ಎದುರಿಸಿತು. 2024ರ ಟಿ20 ವಿಶ್ವಕಪ್ ಗೆದ್ದ ಬಳಿಕ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದಲ್ಲಿ ಸೋಲುಕಂಡಿತು. ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ವೈಟ್‌ವಾಶ್ ಆಗಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡಿತು. ಈ ಬೆನ್ನಲ್ಲೇ ಬಾರ್ಡರ್ ಗವಾಸ್ಕರ್ ಟ್ರೋಫಿಯ 5 ಪಂದ್ಯಗಳ ಸರಣಿಯ ಪೈಕಿ ಮೊದಲ ನಾಲ್ಕು ಪಂದ್ಯಗಳಲ್ಲಿ 2-1 ಹಿನ್ನಡೆ ಅನುಭವಿಸಿತು. ಇದರಿಂದಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರೀ ಟೀಕೆಗೆ ಗುರಿಯಾದರು.
– 2011ರ ವಿಶ್ವಕಪ್ ವೇಳೆ ಟೀಂ ಇಂಡಿಯಾ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan, Cricket) ಯಾರು ಯಾವ ಹುದ್ದೆಯಲ್ಲಿದ್ದಾರೆಂದು ಹೇಳುವುದೇ ಕಷ್ಟವಾಗುತ್ತಿದೆ. ಏಕೆಂದರೆ ಕ್ರಿಕೆಟ್ ತಂಡದಲ್ಲಿ ತತಕ್ಷಣದ ಬದಲಾವಣೆಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೆ ನಾಯಕನ ಬದಲಾವಣೆಯೂ ಮಾಡಿರುವ ಪಾಕ್ ತಂಡ ಇದೀಗ ಮುಖ್ಯಕೋಚ್ ಬದಲಾವಣೆಗೂ ಮುಂದಾಗಿದೆ. 4 ತಿಂಗಳ ಹಿಂದೆಯಷ್ಟೇ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ವೈಟ್‌ಬಾಲ್ ಕ್ರಿಕೆಟ್‌ನ ಮುಖ್ಯಕೋಚ್ ಆಗಿ ನೇಮಕವಾಗಿದ್ದ ಗ್ಯಾರಿ ಕರ್ಸ್ಟನ್ (Gary Kirsten) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
The Pakistan Cricket Board today announced Jason Gillespie will coach the Pakistan men’s cricket team on next month’s white-ball tour of Australia after Gary Kirsten submitted his resignation, which was accepted.
ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್ ಅವರು ಕೋಚಿಂಗ್‌ನಲ್ಲಿ ಉತ್ತಮ ಹೆಸರು ಸಂಪಾದಿಸಿದ್ದ ಕ್ರಿಸ್ಟನ್ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೆಂಟರ್ ಆಗಿದ್ದರು. 2011ರಲ್ಲಿ ವಿಶ್ವಕಪ್ ಗೆದ್ದ ವೇಳೆ ಅವರು ಭಾರತ ತಂಡದ ಕೋಚ್ ಆಗಿದ್ದವರು. ಕಳೆದ ನಾಲ್ಕು ತಿಂಗಳ ಹಿಂದೆ ಅವರು ಪಾಕಿಸ್ತಾನದ ಏಕದಿನ ಮತ್ತು ಟಿ20 ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದರು. ಇದನ್ನೂ ಓದಿ: ಮೊದಲ ದಿನ ಸ್ಪಿನ್ನರ್‌ಗಳ ಆಟ – ವಾಷಿಂಗ್ಟನ್, ಅಶ್ವಿನ್ ಶೈನ್; ಕಿವೀಸ್ 259ಕ್ಕೆ ಆಲೌಟ್
ಗ್ಯಾರಿ ಕರ್ಸ್ಟನ್ ವೈಟ್‌ಬಾಲ್ ಕ್ರಿಕೆಟ್‌ನ ಮುಖ್ಯಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂಬರುವ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ವಿರುದ್ಧದ ಸರಣಿಗೆ ಟೆಸ್ಟ್ ತಂಡದ ಕೋಚ್ ಜೇಸನ್ ಗಿಲ್ಲೆಸ್ಪಿ ಅವರನ್ನು ವೈಟ್ ಬಾಲ್ ಕೋಚ್ ಆಗಿ ನೇಮಕ ಮಾಡಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತಿಳಿಸಿದೆ. ಈ ಸಂದೇಶವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ವೈಟ್‌ಬಾಲ್ ಕ್ರಿಕೆಟ್‌ಗೆ ನೂತನ ಕೋಚ್ ಅನ್ನು ಸೂಕ್ತ ಸಮಯದಲ್ಲಿ ನೇಮಿಸಲಾಗುವುದು. ಅಲ್ಲಿಯವರೆಗೆ ಗಿಲ್ಲೆಸ್ಪಿಯವರ ತಾತ್ಕಾಲಿಕ ಕೋಚ್ ಆಗಿ ಮುಂದುವರಿಯುವುದಾಗಿ ತಿಳಿಸಿದೆ.
ಕರ್ಸ್ಟನ್ ಅವರು ಮುಂಬರುವ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ವಿರುದ್ಧದ ಸರಣಿಗಳಿಗೆ ತಂಡದ ಆಯ್ಕೆ ಬಗ್ಗೆ ಪಿಸಿಬಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಕೊನೆಗೆ ಪಿಸಿಬಿ ಕಸ್ಟರ್ನ್ ಅವರ ಸಲಹೆಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೇ ತಂಡವನ್ನು ಪ್ರಕಟಿಸಿದೆ. ಇದರಿಂದ ಬೇಸರಗೊಂಡ ಕರ್ಸ್ಟನ್ ತಮ್ಮ ಹುದ್ದೆಗೆ ಗುಡ್‌ಬೈ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಲೆಜೆಂಡ್ ಕ್ರಿಕೆಟಿಗ ಎಂ.ಎಸ್ ಧೋನಿ ನೇಮಕ
2024ರ ಐಪಿಎಲ್ ಟೂರ್ನಿ ಬಳಿಕ ಪಾಕ್ ತಂಡದ ವೈಟ್‌ಬಾಲ್ ಕ್ರಿಕೆಟ್ ಮುಖ್ಯಕೋಚ್ ಆಗಿ ನೇಮಕಗೊಂಡು, 2024ರ ಟಿ20 ವಿಶ್ವಕಪ್ ಟೂರ್ನಿಯಿಂದ ತಮ್ಮ ವೃತ್ತಿ ಆರಂಭಿಸಿದ್ದರು. ಅಲ್ಲದೇ 2025ಕ್ಕೆ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, 2025ರ ಐಸಿಸಿ ಟಿ20 ಏಷ್ಯಾಕಪ್, 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗಳಿಗೆ ಪಾಕ್ ತಂಡದ ಮುಖ್ಯಕೋಚ್ ಆಗಿ ಗ್ಯಾರಿ ಕೆಲಸ ಮಾಡಲಿದ್ದಾರೆ ಎಂದು ಪಿಸಿಬಿ ಹೇಳಿತ್ತು. ಆದ್ರೆ ಕೋಚ್ ಆಗಿ ನೇಮಕಗೊಂಡ ನಾಲ್ಕೇ ತಿಂಗಳಿಗೆ ಕೋಚ್‌ಹುದ್ದೆಗೆ ಗುಡ್‌ಬೈ ಹೇಳಿದ್ದಾರೆ.
ಮುಂಬೈ: ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ (Women’s T20 World Cup) ಟೂರ್ನಿ ಆತಿಥ್ಯವನ್ನು ಭಾರತ (India) ವಹಿಸಲು ನಿರಾಕರಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (BCCI Secretary Jay Shah) ಹೇಳಿದ್ದಾರೆ.
ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಅಕ್ಟೋಬರ್ 3 ರಿಂದ 20ರ ಒಳಗಡೆ ಬಾಂಗ್ಲಾದೇಶದಲ್ಲಿ ಆಯೋಜನೆಗೊಂಡಿತ್ತು. ಆದರೆ ಈಗ ಅಲ್ಲಿ ಅಸ್ಥಿರತೆ ಇರುವ ಕಾರಣ ಟೂರ್ನಿಯನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಐಸಿಸಿ ಮುಂದಾಗಿದೆ.
ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಭಾರತ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಸಲಹೆಗಳನ್ನು ನೀಡಿವೆ. ಬಾಂಗ್ಲಾದೇಶ ಟೆಸ್ಟ್ ತಂಡವು ಪ್ರಸ್ತುತ ಪಾಕಿಸ್ತಾನದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದೆ, ಹಿಂಸಾಚಾರವು ತವರಿನಲ್ಲಿ ಅವರ ತಯಾರಿಗೆ ಅಡ್ಡಿಯಾಗಿದೆ.
ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup 2024) ವಿಜೇತ ಭಾರತ ತಂಡಕ್ಕೆ ಗೌರವಿಸುವ ಸಲುವಾಗಿ ವಾಂಖೆಡೆ ಮೈದಾನದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವು ಅನೇಕ ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರರು ಮಾತನಾಡಿ ಹಂಚಿಕೊಂಡರು. ಈ ವೇಳೆ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ರೋಹಿತ್ ಶರ್ಮಾ ಇಡೀ ದೇಶಕ್ಕೆ ಸಮರ್ಪಿಸಿದರು.
ನಾಯಕ ರೋಹಿತ್ ಶರ್ಮಾ ಮಾತನಾಡಿ ಮುಂಬೈ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಜೊತೆಗೆ ತಂಡದ ಪ್ರತಿಯೊಬ್ಬ ಆಟಗಾರನ ಶ್ರಮವನ್ನು ಗುಣಗಾನ ಮಾಡಿದರು. ಅಷ್ಟೇ ಅಲ್ಲದೇ ಈ ಗೆಲುವಿನಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಕೊಡುಗೆಯನ್ನು ಸ್ಮರಿಸಿದರು. ಇದನ್ನು ಕೇಳಿದ ಪಾಂಡ್ಯ ಮೈದಾನದಲ್ಲೇ ಕಣ್ಣೀರಿಟ್ಟರು. ಕೊನೇ ಓವರ್‌ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡಿದ್ದೇ ಗೆಲುವಿಗೆ ದೊಡ್ಡ ತಿರುವು ಕೊಟ್ಟಿತು ಎಂದು ರೋಹಿತ್ ಗುಣಗಾನ ಮಾಡಿದರು.
ಅಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಅವರು ಈ ಟಿ20 ವಿಶ್ವಕಪ್ ಪ್ರಶಸ್ತಿಗಾಗಿ ಆಟಗಾರರಂತೆ ಹಪಹಪಿಸುತ್ತಿದ್ದರು. ಇಂದು ಎಲ್ಲರ ಕನಸು ನನಸಾಗಿದೆ. ಈ ವಿಶ್ವಕಪ್ ನಮ್ಮ ಗೆಲುವಲ್ಲ, ದೇಶದ ಗೆಲುವು, ದೇಶದ ಪ್ರತಿಯೊಬ್ಬರಿಗೂ ಸೇರಿದ್ದು ಎಂದು ಭಾವುಕರಾದರು.
ಇದೇ ವೇಳೆ ಮಾತನಾಡಿದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್, ನಾನು ಈ ಪ್ರೀತಿಯನ್ನು ಕಳೆದುಕೊಳ್ಳಲಿದ್ದೇನೆ, ರಾತ್ರಿ ಬೀದಿಗಳಲ್ಲಿ ನಾನು ಕಂಡದ್ದನ್ನು ನಾನು ಮರೆಯುವುದಿಲ್ಲ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಕೊಹ್ಲಿಯೂ ಭಾವುಕ:
ರೋಹಿತ್ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ, ನನ್ನ 15 ವರ್ಷಗಳ ವೃತ್ತಿಜೀವನದಲ್ಲಿ ರೋಹಿತ್ ಇಷ್ಟೊಂದು ಭಾವುಕರಾಗಿರುವುದನ್ನು ನಾನು ನೋಡಿಲ್ಲ. ನಾನು ಡ್ರೆಸ್ಸಿಂಗ್ ರೂಮ್‌ಗೆ ಹೋಗುತ್ತಿದ್ದೆ ಮತ್ತು ರೋಹಿತ್ ಹೊರಗೆ ಬರುತ್ತಿದ್ದರು. ಇಬ್ಬರೂ ಭಾವುಕರಾಗಿ ಪರಸ್ಪರ ಅಪ್ಪಿಕೊಂಡೆವು. ಆ ಕ್ಷಣ ನನಗೆ ವಿಶೇಷವಾಗಿತ್ತು ಎಂದು ಹೇಳಿದರು.
2007 ಅಥವಾ 2011ರಲ್ಲಿ ನಾವು ವಿಶ್ವಕಪ್ ಗೆದ್ದಾಗ ಹಿರಿಯ ಆಟಗಾರರು ತುಂಬಾ ಅಳುತ್ತಿದ್ದರು. ಆದರೆ ನಾನು ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ. ಖುಷಿಯ ಸಂದರ್ಭದಲ್ಲಿ ಅವರೆಲ್ಲಾ ಯಾಕೆ ಇಷ್ಟೊಂದು ಭಾವುಕರಾಗುತ್ತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೆ. ಆದರೆ ಈಗ ನನಗೆ ಅರ್ಥವಾಯಿತು. ನಾನಿರಲಿ ಅಥವಾ ರೋಹಿತ್ ಆಗಿರಲಿ, ಇಬ್ಬರೂ ಬಹುಕಾಲ ಟ್ರೋಫಿ ಗೆಲ್ಲುವುದರಲ್ಲಿ ನಿರತರಾಗಿದ್ದರು. ಮೊದಲು ನನ್ನ ನಾಯಕತ್ವದಲ್ಲಿ ಮತ್ತು ನಂತರ ರೋಹಿತ್ ನಾಯಕತ್ವದಲ್ಲಿ. ನಾವಿಬ್ಬರೂ ಈ ಟ್ರೋಫಿ ಗೆಲ್ಲಲು ಹತಾಶರಾಗಿದ್ದೆವು. ಈಗ ನಾವು ಗೆದ್ದಿರುವುದು ನಮಗೆ ವಿಶೇಷ. ಗೆದ್ದು ಮತ್ತೆ ವಾಂಖೆಡೆಗೆ ಬರುವುದು ನಮ್ಮ ಪಾಲಿಗೆ ವಿಶೇಷವಾಗಿದೆ ಎಂದು ಹಳೆಯ ನೆನಪುಗಳನ್ನು ಮೆಲುಕುಹಾಕಿದರು.
ಮುಂಬೈ: ಟಿ20 ವಿಶ್ವಕಪ್ (T20 World Cup 2024) ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭವ್ಯ ಸಮಾರಂಭ ಆಯೋಜಿಸಿ ಅಭಿನಂದಿಸಲಾಯಿತು. ಈ ವೇಳೆ ‘ವಂದೇ ಮಾತರಂ’ ಹಾಡನ್ನು ಹಾಡುವ ಮೂಲಕ ಟೀಂ ಇಂಡಿಯಾ (Team India) ಆಟಗಾರರು ಮತ್ತು ಅಭಿಮಾನಿಗಳು ದೇಶಪ್ರೇಮ ಮೆರೆದರು.
ಎಲ್ಲರೂ ಹಾಡನ್ನು ಹಾಡುವ ಮೂಲಕ ದೇಶಪ್ರೇಮ ಮೆರೆದರು. ಈ ಸಂದರ್ಭ ನಿಜಕ್ಕೂ ಮೈನವರೇಳಿಸುವಂತಿತ್ತು. ದೃಶ್ಯದ ವೀಡಿಯೋವನ್ನು ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್:
ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು. ಇದನ್ನೂ ಓದಿ: Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್ ಗಿಫ್ಟ್ – 125 ಕೋಟಿ ರೂ. ಬಹುಮಾನ ಚೆಕ್ ವಿತರಣೆ
— Royal Challengers Bengaluru (@RCBTweets) July 4, 2024
ಮುಂಬೈಗೆ ತೆರಳುವ ಮುನ್ನ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.
ಮುಂಬೈ: ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ನಡೆದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಆಟಗಾರರ ಪರ ಅಭಿಮಾನಿಗಳು ಜೈಕಾರ ಕೂಗಿದರು. ಇದರಲ್ಲಿ ವಿಶೇಷ ಅನಿಸಿದ್ದು ಹಾರ್ದಿಕ್ ಪಾಂಡ್ಯ. ಏಕೆಂದರೆ 2024ರ ಐಪಿಎಲ್ ಟೂರ್ನಿ ವೇಳೆ ಇದೇ ಮೈದಾನದಲ್ಲಿ ಪಾಂಡ್ಯ ಪ್ರೇಕ್ಷಕರು ಹಾಗೂ ರೋಹಿತ್ ಅಭಿಮಾನಿಗಳಿಂದ ಭಾರೀ ಟೀಕೆಗೆ ಗುರಿಯಾಗಿದ್ದರು. ಅಂದು ಅವಮಾನಿಸಿದ್ದ ಜಾಗದಲ್ಲೇ ಇಂದು ಸನ್ಮಾನ ದೊರೆಯಿತು. ಟೀಕಿಸಿದ್ದ ಅಭಿಮಾನಿಗಳೇ ಜೈಕಾರ ಕೂಗಿದ್ದನ್ನು ಕಂಡು ಹಾರ್ದಿಕ್ ಭಾವುಕರಾದರು.
India, you mean the world to me! From the bottom of my heart, thank you for all the love.. these are moments that I will never ever forget! Thank you for coming out to celebrate with us, despite the rains! We love you so much! Celebrating with you is why we do what we do! We’re… pic.twitter.com/c18lLrPJ1q
ಹೌದು. 2024ರ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಫ್ರಾಂಚೈಸಿ ಹೊಸ ನಾಯಕತ್ವ ತರಲು ಬಯಸಿತ್ತು. ಅದಕ್ಕಾಯೇ ಗುಜರಾತ್ ಟೈಟಾನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಅವರನ್ನು ಮತ್ತೆ ತವರು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಟಿ20 ವಿಶ್ವಕಪ್ ಒತ್ತಡವನ್ನೂ ನಿಭಾಯಿಸಬೇಕಿದ್ದ ಕಾರಣ, 5 ಬಾರಿ ಚಾಂಪಿಯನ್ ಪಟ್ಟ ಗೆದ್ದುಕೊಟ್ಟ ರೋಹಿತ್ ಶರ್ಮಾರನ್ನು ಬಿಟ್ಟು ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಯಿತು. ಆದ್ರೆ ನಾಯಕತ್ವದ ಹೊಣೆ ಹೊತ್ತ ಭರದಲ್ಲಿ ಹಾರ್ದಿಕ್ ಪಾಂಡ್ಯ ಅವರು ಫೀಲ್ಡ್‌ನಲ್ಲಿ ರೋಹಿತ್‌ರನ್ನು ನಡೆಸಿಕೊಂಡ ರೀತಿ ಭಾರೀ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.
ಒಂದೊಮ್ಮೆ ಪಂದ್ಯದ ಮಧ್ಯದಲ್ಲೇ ನಾಯಿಯೊಂದು ಮೈದಾನ ಪ್ರವೇಶಿಸಿತ್ತು, ಈ ವೇಳೆ ಪ್ರೇಕ್ಷಕರು ಅದನ್ನು ಹಾರ್ದಿಕ್, ಹಾರ್ದಿಕ್ ಎಂದು ಕೂಗಿ ಅವಮಾನಿಸಿದ್ದರು. ಇದ್ಯಾವುದಕ್ಕೂ ಕುಗ್ಗದ ಪಾಂಡ್ಯ ತಮ್ಮ ಪ್ರದರ್ಶನ ಮುಂದುವರಿಸಿದರು. ಆದ್ರೆ ಸತತ ಸೋಲುಗಳಿಂದಾಗಿ ಮುಂಬೈ ತಂಡ ಲೀಗ್ ಸುತ್ತಿನಲ್ಲಿ ಹೊರಬಿದ್ದಿತು. ಇದರಿಂದ ಪಾಂಡ್ಯ ನಾಯಕತ್ವದ ಬಗ್ಗೆಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಇಂದು ಅದೇ ಮೈದಾನದಲ್ಲಿ ಪಾಂಡ್ಯ ಸನ್ಮಾನ ಸ್ವೀಕರಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಅಂತಿಮ ಓವರ್‌ನಲ್ಲಿ ಪಾಂಡ್ಯ ಅವರ ಚಾಣಾಕ್ಷ ಬೌಲಿಂಗ್ ಭಾರತಕ್ಕೆ ಗೆಲುವು ತಂದುಕೊಟ್ಟಿತು. ನಿರ್ಣಾಯಕ ಸಮಯದಲ್ಲಿ ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.
ಕಠಿಣ ದಿನಗಳನ್ನು ನೆನಪಿಸಿಕೊಂಡ ಪಾಂಡ್ಯ
ಪಂದ್ಯದ ಬಳಿಕ ಮಾತನಾಡಿದ್ದ ಪಾಂಡ್ಯ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದರು. ಇದು ತುಂಬಾ ಭಾವನಾತ್ಮಕ ಕ್ಷಣ. ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನ ನಾವು ಪೂರೈಸಿದ್ದೇವೆ. ಇದು ನನಗೆ ಹೆಚ್ಚು ವಿಶೇಷವಾಗಿದೆ. ಏಕೆಂದರೆ ನನ್ನ ಕೊನೆಯ 6 ತಿಂಗಳು ಕಷ್ಟಕರವಾಗಿದ್ದವು ಎಂದು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದರು.
ತಾಯ್ನಾಡಿಗೆ ಮರಳಿದ್ದ ಟೀಂ ಇಂಡಿಯಾ ಆಟಗಾರರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ವಾಂಖೆಡೆ ಕ್ರೀಡಾಂಗಣ ತಲುಪಿತು. ಬಳಿಕ ಟೀಂ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತದ (BCCI Prizemoney) ಚೆಕ್ ವಿತರಣೆ ಮಾಡಿತು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ, ಆಟಗಾರರಿಗೆ ಚೆಕ್ ವಿತರಣೆ ಮಾಡಿದರು. ಇದಕ್ಕೂ ಮುನ್ನ ಟೀಂ ಇಂಡಿಯಾ (Team India) ಆಟಗಾರರು ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!
ರೋ-ಕೊ ಜೋಡಿ ಕಮಾಲ್:
ಮುಂಬೈನಲ್ಲಿ ನಡೆದ ಅದ್ಧೂರಿ ವಿಜಯಯಾತ್ರೆಯಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma), ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಭರ್ಜರಿ ಕಮಾಲ್ ಮಾಡಿದರು. ವಿಜಯೋತ್ಸವ ಪರೇಡ್ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್ ಶರ್ಮಾರ ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿ ಎತ್ತಿ ಹಿಡಿದು ಜೋರಾಗಿ ಘರ್ಜಿಸಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತು. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!
ನಂಬಿಕೆ ಉಳಿಸಿಕೊಂಡ ಕೊಹ್ಲಿ:
ವಿಶ್ವಕಪ್ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್ ಕಳೆದುಕೊಂಡಿದ್ದ ಕಿಂಗ್ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್, ವಿರಾಟ್ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದ್ದರು. ಇದು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್ ಮೊತ್ತವೂ (176) ಆಯಿತು.
ʻವಿಶ್ವʼ ವಿಜೇತರಿಗೆ ನಮೋ ಅಭಿನಂದನೆ:
ಮುಂಬೈಗೆ ತೆರಳುವ ಮುನ್ನ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: T20 ವಿಶ್ವಕಪ್ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್ ಗಿಫ್ಟ್!
ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ (T20 World Cup) ಗೆದ್ದು ತಂದ ಟೀಂ ಇಂಡಿಯಾ ಕ್ರಿಕೆಟ್ ಆಟಗಾರರನ್ನು ಗೌರವಿಸುವ ಸಲುವಾಗಿ ಮುಂಬೈನಲ್ಲಿಂದು ಅದ್ಧೂರಿ ವಿಜಯಯಾತ್ರೆ ನಡೆಯಿತು. ಮುಂಬೈ (Mumbai) ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ಸುಮಾರು 2 ಕಿಮೀ ತಲುಪಿತು. ವಿಜಯಯಾತ್ರೆಯಲ್ಲಿ ನಾಯಕ ರೋಹಿತ್ ಶರ್ಮಾ, ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಇಬ್ಬರು ನೆರೆದಿದ್ದ ಅಭಿಮಾನಿಗಳ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಮಾಡಿದರು.
VIDEO OF THE DAY. ????????
– Rohit Sharma and Virat Kohli lifting the trophy together, Virat asked Rohit to come forward. ????❤️pic.twitter.com/IxcsfhjLo4
ವಿಜಯೋತ್ಸವ ಪರೇಡ್ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್ ಶರ್ಮಾರ (Rohit Sharma) ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿಯನ್ನು ಎತ್ತಿ ಹಿಡಿದು ಜೋರಾಗಿ ಕೇಕೆ ಹಾಕಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!
ನಾಯಕನ ನಂಬಿಕೆ ಎತ್ತಿ ಹಿಡಿದ ಕಿಂಗ್ ಕೊಹ್ಲಿ:
ವಿಶ್ವಕಪ್ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್ ಕಳೆದುಕೊಂಡಿದ್ದ ಕಿಂಗ್ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್, ವಿರಾಟ್ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದ್ದರು. ಇದು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್ ಮೊತ್ತವೂ (176) ಆಯಿತು.
ವಿಜಯಯಾತ್ರೆ ಮುಕ್ತಾಯ:
ಟಿ-20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಜಕ ಜಯ ಸಾಧಿಸಿ, 17 ವರ್ಷಗಳ ಬಳಿಕ ಚಾಂಪಿಯನ್ ಆದ ಟೀಂ ಇಂಡಿಯಾಗೆ ಸ್ವದೇಶದಲ್ಲಿ ಅದ್ಧೂರಿ, ವೈಭವೋಪೇತ ಸ್ವಾಗತ ಸಿಕ್ಕಿದೆ. ಮುಂಬೈನ ಕಡಲ ಕಿನಾರೆಯಲ್ಲಿ 2 ಕಿಮೀ ರೋಡ್ ಶೋನಲ್ಲಿ ಅಬ್ಬಬ್ಬಾ… ಎನಿಸುವಷ್ಟು ಜನಸಾಗರ ಜಮಾಯಿಸಿ ಬರಮಾಡಿಕೊಂಡಿದೆ. ಸದ್ಯ ರೋಡ್ ಶೋ ಮುಕ್ತಾಯಗೊಂಡು ಮುಂಬೈನ ವಾಂಖೆಡೆ ಕ್ರೀಡಾಂಗಣ ತಲುಪಿದೆ. ಕೆಲವೇ ಕ್ಷಣದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!
ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್:
ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು. ಇದನ್ನೂ ಓದಿ: ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!
ಮುಂಬೈಗೆ ತೆರಳುವ ಮುನ್ನ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.
– ಅದು ಚುಟುಕು ಕ್ರಿಕೆಟ್ ಯುಗಾರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!
ಚೊಚ್ಚಲ ಟಿ20 ವಿಶ್ವಕಪ್ ಆರಂಭ: 2007 ಆತಿಥ್ಯ: ದಕ್ಷಿಣ ಆಫ್ರಿಕಾ ವಿಶ್ವಕಪ್ ವಿಜೇತ ತಂಡ: ಭಾರತ ರನ್ನರ್‌ಅಪ್: ಪಾಕಿಸ್ತಾನ
2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ (T20 World Cup) ಟೂರ್ನಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ನೆನಪಿನಲ್ಲಿಡಬೇಕಾದ ವರ್ಷ. ಏಕೆಂದರೆ ಆಗಷ್ಟೇ ಮಹತ್ವ ಪಡೆದುಕೊಳ್ಳುತ್ತಿದ್ದ ಮೊಟ್ಟ ಮೊದಲ ಚುಟುಕು ಕ್ರಿಕೆಟ್‌ಗೆ ಬುನಾದಿ ಹಾಕಿಕೊಟ್ಟ ಟೂರ್ನಿ ಅದಾಗಿತ್ತು. ಅಲ್ಲದೇ ಎಂ.ಎಸ್ ಧೋನಿ ( MS Dhoni) ಅವರಂತಹ `ಮಹಾನಾಯಕ’ ಉದಯಕ್ಕೆ ಸಾಕ್ಷಿಯಾದ ಟೂರ್ನಿಯೂ ಅದಾಗಿತ್ತು.
2007ರಲ್ಲಿ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮನಗಳ ಮೇಲೆ ಕಲ್ಲು ತೂರಾಟವೂ ನಡೆದಿತ್ತು. ರಸ್ತೆಯಲ್ಲೇ ಆಟಗಾರರ ಭಾವಚಿತ್ರಗಳಿಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿದ್ದರು. ಇದಾದ ಕೆಲವೇ ದಿನಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು ಟಿ20 ಆಡಲು ಹಿಂದೇಟು ಹಾಕಿದ್ದ ಕಾರಣ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಎಂ.ಎಸ್ ಧೋನಿ ಅವರಿಗೆ ನಾಯಕತ್ವದ ಹೊಣೆ ನೀಡಲಾಯಿತು.
ಟಿ20 ಚುಟುಕು ಕ್ರಿಕೆಟ್ (T20 Cricket) ಆಗಿನ್ನು ಜನಪ್ರಿಯವಾಗಿರಲಿಲ್ಲ. ಇದರಿಂದ ಬಹಳಷ್ಟು ಜನರು ಇದನ್ನು ಟೀಕಿಸಿದ್ದರು. ಆದ್ರೆ ರಾಂಚಿ ಮೂಲದ ಎಂ.ಎಸ್ ಧೋನಿ ಅವರು ಆ ಟೂರ್ನಿಯಲ್ಲಿ ಕೈಗೊಂಡ ನಿರ್ಧಾರಗಳಿಂದ ಟೀಂ ಇಂಡಿಯಾ, ಚೊಚ್ಚಲ ಆವೃತ್ತಿಯಲ್ಲೇ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.
ಪಾಕ್ ವಿರುದ್ಧ ಗೆದ್ದು ಬೀಗಿದ್ದೇ ರೋಚಕ:
ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಫೈನಲ್ ಪಂದ್ಯ ಕೊನೆಯವರೆಗೂ ರೋಚಕತೆಯಿಂದ ಕೂಡಿತ್ತು. ಅಂದು ಇಡೀ ಭಾರತವೇ ಈ ಪಂದ್ಯವನ್ನು ಕುತೂಹಲದಿಂದ ನೋಡುತ್ತಿತ್ತು.
ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 157 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡದ ಗೆಲುವಿಗೆ ಕೊನೆಯ ಓವರ್‌ನಲ್ಲಿ 12 ರನ್ ಮಾತ್ರವೇ ಬೇಕಿತ್ತು. ಪಾಕ್ ಮೊದಲೇ 9 ವಿಕೆಟ್ ಕಳೆದುಕೊಂಡಿದ್ದರಿಂದ ಭಾರತದ ಗೆಲುವಿಗೆ ಒಂದು ವಿಕೆಟ್ ಅಗತ್ಯವಿತ್ತು. ಹಾಗಾಗಿ ಕೊನೇ ಕ್ಷಣದ ವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯವನ್ನು ದೇಶದ ಕೋಟ್ಯಂತರ ಜನ ಕಣ್ಣು ಮಿಟುಕಿಸದಂತೆ ನೋಡುತ್ತಿದ್ದರು. ಪ್ರಮುಖ ಬೌಲರ್‌ಗಳು ತಮ್ಮ ಓವರ್ ಮುಕ್ತಾಯ ಗೊಳಿಸಿದ್ದರಿಂದ ಮಹಿ, ಜೋಗಿಂದರ್ ಶರ್ಮಾ ಅವರಿಗೆ ಬೌಲಿಂಗ್ ನೀಡಿದರು. ಪಾಕ್‌ನ ಸ್ಫೋಟಕ ಬ್ಯಾಟರ್ ಮಿಸ್ಬಾ ಉಲ್ ಹಕ್ ಸ್ಟ್ರೈಕ್‌ನಲ್ಲಿದ್ದರು.
ಮೊದಲಿಗೆ ವೈಡ್ ರನ್ ಬಿಟ್ಟುಕೊಟ್ಟ ಜೋಗಿಂದರ್ ಶರ್ಮಾ ಮೊದಲ ಎಸೆತದಲ್ಲಿ ಹಿಡಿತ ಸಾಧಿಸಿದರು. ಆದ್ರೆ 2ನೇ ಎಸೆತದಲ್ಲಿ ಮಿಸ್ಬಾ ಉಲ್ ಹಕ್ ಭರ್ಜರಿ ಸಿಕ್ಸರ್ ಸಿಡಿಸಿದಾಗ ಪಾಕ್‌ತಂಡ ಗೆದ್ದೇಬಿಟ್ಟೆವು ಎಂಬ ಸಂತಸದಲ್ಲಿ ಕುಣಿದು ಕುಪ್ಪಳಿಸಿತ್ತು, ಪಾಕ್ ಅಭಿಮಾನಿಗಳು ಕೇಕೆ ಹಾಕಲು ಶುರು ಮಾಡಿದ್ದರು. ಮರು ಎಸೆತದಲ್ಲಿ ಆನ್‌ಸ್ಟಂಪ್ ಮೂಲಕ ಶಾರ್ಟ್ ಫೈನ್‌ಲೆಗ್ ಶಾರ್ಟ್ ಪ್ರಯತ್ನಿಸಿದ ಮಿಸ್ಬಾ, ಶ್ರೀಶಾಂತ್‌ಗೆ ಕ್ಯಾಚ್ ನೀಡಿ ಔಟಾದರು. ಪಾಕ್ ಮೊದಲೇ 9 ವಿಕೆಟ್ ಕಳೆದುಕೊಂಡಿದ್ದ ಪರಿಣಾಮ ಪಾಕಿಸ್ತಾನ ತಂಡ ಆಲೌಟ್ ಆಗಿ ಟೀಂ ಇಂಡಿಯಾ ಎದುರು ಮಂಡಿಯೂರಿತು. ಅಂತಿಮವಾಗಿ ಭಾರತ 5 ರನ್‌ಗಳ ರೋಚಕ ಜಯ ಸಾಧಿಸಿತು. ಕುತೂಹಲದಿಂದ ನೋಡುತ್ತಿದ್ದ ಇಡೀ ಭಾರತ ಸಂಭ್ರಮದಲ್ಲಿ ತೇಲಿತು.