Tag: ಟಿ20 ವಿಶ್ವಕಪ್

  • ʻವಿಶ್ವʼ ವಿಜಯಯಾತ್ರೆಯ ನಡುವೆ ಗಮನಸೆಳೆಯಿತು ಯಶಸ್ವಿ ಜೈಸ್ವಾಲ್‌ ಹೇರ್‌ಸ್ಟೈಲ್‌

    ʻವಿಶ್ವʼ ವಿಜಯಯಾತ್ರೆಯ ನಡುವೆ ಗಮನಸೆಳೆಯಿತು ಯಶಸ್ವಿ ಜೈಸ್ವಾಲ್‌ ಹೇರ್‌ಸ್ಟೈಲ್‌

    ಬಾರ್ಬಡೋಸ್‌ನಲ್ಲಿನ ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಆಟಗಾರರು ಇಂದು ತಾಯ್ನಾಡು ಭಾರತಕ್ಕೆ ಮರಳಿದ್ದಾರೆ. ಇಂದು ಬೆಳಗ್ಗೆ ದೆಹಲಿಗೆ ಬಂದಿಳಿದ ಟೀಂ, ಮೊದಲು ಪ್ರಧಾನಿಯನ್ನು ಭೇಟಿ ಮಾಡಿದೆ. ಈ ವೇಳೆ ಬಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ (Yashasvi Jaiswal) ಅವರ ಲುಕ್‌ ಎಲ್ಲರ ಗಮನ ಸೆಳೆದಿದೆ.

    ಹೌದು. ಜೈಸ್ವಾಲ್‌ ಅವರು ಹೊಸ ಹೇರ್‌ಸ್ಟೈಲ್‌ನಲ್ಲಿ ಇಂದು ಕಾಣಿಸಿಕೊಂಡಿದ್ದರು. ಹೀಗಾಗಿ ಅವರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಅಲ್ಲದೇ ಅವರ ಫೋಟೋ ಇಟ್ಟುಕೊಂಡು ಹಲವು ಮೀಮ್ಸ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರರು ಆಗಮಿಸಿದ ವಿಮಾನಕ್ಕೆ ವಾಟರ್ ಸೆಲ್ಯೂಟ್

    ʼತಾಯಿ ನಿಮ್ಮ ಕೂದಲನ್ನು ಬಾಚಿದಾಗʼ ಎಂದು ಪುಟ್ಟ ಮಗು ಹಾಗೂ ಜೈಸ್ವಾಲ್‌ ಫೋಟೋ ಕೊಲಾಜ್‌ ಮಾಡಿ ಹರಿಬಿಡಲಾಗಿದೆ. ಇನ್ನೂ ಕೆಲವರು ಪೋಷಕರು ಶಿಕ್ಷಕರ ಸಭೆಯಲ್ಲಿ ಭಾಗವಹಿಸಲು ಹೋಗುವಾಗ ಮಕ್ಕಳ ಮುಖದಂತೆ ಜೈಸ್ವಾಲ್‌ ಮುಖ ಇಲ್ಲಿ ಮುಗ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ. ಹೀಗೆ ಹಲವಾರು ಮೀಮ್ಸ್‌ಗಳು ಬರುತ್ತಿವೆ.

    ಭಾರತ ತಂಡದ ನಾಯಕ ರೋಹಿತ್ ಶರ್ಮಾ ನೇತೃತ್ವದ ತಂಡ ಇಂದು ಬೆಳಗ್ಗೆ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ  ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯಿಂದ ಹ್ಯಾಂಡ್‌ಶೇಕ್‌ ಮತ್ತು ಅಪ್ಪುಗೆಯೊಂದಿಗೆ ಅದ್ಧೂರಿ ಸ್ವಾಗತ ಪಡೆದ ಟೀಂ ಇಂಡಿಯಾ ಆಟಗಾರರು ಮಾತುಕತೆ ನಡೆಸಿದರು. ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ಟೀಂ ಫೋಟೋ ಕ್ಲಿಕ್ಕಿಸಿಕೊಂಡರು. ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿ ಅಭಿನಂದಿಸಿದರು. ‌

    ಬಳಿಕ ವಿಶೇಷ ವಿಮಾನದ ಮೂಲಕ ಮುಂಬೈಗೆ ಟೀಂ ಬಂದಿಳಿಯಿತು. ಏರ್‌ ಇಂಡಿಯಾದ ವಿಮಾನ ಮುಂಬೈ ತಲುಪುತ್ತಿದ್ದಂತೆ ವಿಶೇಷ ರೀತಿಯಲ್ಲಿ ವಾಟರ್‌ ಜೆಟ್‌ಗಳ ಮೂಲಕ ಆಟಗಾರರಿಗೆ ಭರ್ಜರಿ ಸ್ವಾಗತ ಕೋರಲಾಗಿಯಿತು. ಈ ನಡುವೆ ವಿಜಯಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದು, ‘ಮುಂಬೈನ ನಾರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ನಡೆಯಲಿದೆ.

  • ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    – ವಿಶ್ವವಿಜೇತರನ್ನು ನೋಡಲು ಇರುವೆಗಳಂತೆ ಮುತ್ತಿಕೊಂಡ ಫ್ಯಾನ್ಸ್‌
    – ಸಮುದ್ರವನ್ನೂ ಮೀರಿಸಿದ ಅಭಿಮಾನಿಗಳ ಸಾಗರ!

    ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಗೆದ್ದು ಐಸಿಸಿ ಪ್ರಶಸ್ತಿಯ ಬರ ನೀಗಿಸಿದ ʻವಿಶ್ವʼ ವಿಜೇತ ಟೀಂ ಇಂಡಿಯಾದ (Team India) ವಿಜಯಯಾತ್ರೆ ಶುರುವಾಗಿದೆ. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಅದ್ಧೂರಿ ಯಾತ್ರೆ ಆರಂಭವಾಗಿದೆ. ಇಲ್ಲಿಂದ ಸುಮಾರು 2 ಕಿಮೀ ವಿಜಯೋತ್ಸವ ಯಾತ್ರೆ ನಡೆಯಲಿದ್ದು, ನಂತರ ವಾಂಖೆಡೆ ಮೈದಾನ ತಲುಪಲಿದೆ.

    ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ, ಜಸ್ಪ್ರೀತ್‌ ಬುಮ್ರಾ ಸೇರಿದಂತೆ ವಿಶ್ವಕಪ್‌ ವಿಜೇತ ತಂಡ ತೆರೆದ ಬಸ್‌ನಲ್ಲಿ ಹೊರಟಿದೆ. ಪಕ್ಕದಲ್ಲೇ ಇದ್ದ ಸಮುದ್ರವನ್ನೂ ನಾಚಿಸುವಂತೆ ನೆರೆದಿದ್ದ ಅಭಿಮಾನಿಗಳ ಸಾಗರ ಕಂಡು ಆಟಗಾರರು ಹರ್ಷಗೊಂಡಿದ್ದಾರೆ. ಮೈಮೇಲೆ ರಾಷ್ಟ್ರಧ್ವಜ ಹೊದ್ದು, ಕೈಯಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ಅಭಿಮಾನಿಗಳೊಂದಿಗೆ ಸಂಭ್ರಮಿಸುತ್ತಾ ಕೈಬೀಸಿ ಮುಂದೆ ಸಾಗುತ್ತಿದ್ದಾರೆ.

    ವಿಜಯಯಾತ್ರೆಯಲ್ಲಿ ʻರೋಹಿತ್‌ ಭಾಯ್‌, ಕೊಹ್ಲಿ ಭಾಯ್‌ʼ ಘೋಷಣೆಗಳು ಮೊಳಗಿವೆ. ಬೆಳಗ್ಗೆಯಿಂದಲೇ ಕಾದು ನಿಂತಿದ್ದ ಅಭಿಮಾನಿಗಳು ಮಳೆಯಲ್ಲೂ ಉತ್ಸಾಹ ಕಳೆದಕೊಳ್ಳದೇ ವಿಶ್ವವೀರರನ್ನ ಸ್ವಾಗತಿಸಿದ್ದಾರೆ. ಸುಮಾರು 2 ಕಿಮೀ ವಿಜಯಯಾತ್ರೆ ತೆರಳಲಿದ್ದು, ನಂತರ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ.

    ವೀ

    ಅವಮಾನವಾದ ಜಾಗದಲ್ಲೇ ಸನ್ಮಾನ:
    ಮಾಜಿ ನಾಯಕ ಎಂ.ಎಸ್‌ ಧೋನಿ ಅವರ ನಾಯಕತ್ವದಲ್ಲಿ ಭಾರತ ತಂಡ ಚೊಚ್ಚಲ ಟಿ20 ವಿಶ್ವಕಪ್ ಗೆಲುವನ್ನು ಕ್ರಿಕೆಟ್‌ ಜಗತ್ತು ಮರೆಯುವಂತಿಲ್ಲ. ಹೌದು… 2007ರಲ್ಲಿ ಟೀಂ ಇಂಡಿಯಾಕ್ಕೆ ಅತ್ಯಂತ ಪ್ರತಿಷ್ಠೆಯ ಟೂರ್ನಿ ಅದಾಗಿತ್ತು. 2007ರ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್‌ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮೆನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದಾದ ಕೆಲವೇ ದಿನಗಳಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು ಟಿ20 ಆಡಲು ಹಿಂದೇಟು ಹಾಕಿದ್ದ ಕಾರಣ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಎಂ.ಎಸ್ ಧೋನಿ ಅವರಿಗೆ ನಾಯಕತ್ವದ ಹೊಣೆ ನೀಡಲಾಯಿತು. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನದೊಂದಿಗೆ ಟೀಂ ಇಂಡಿಯಾ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಎತ್ತಿ ಹಿಡಿಯಿತು. ಅಂದು ಸಹ ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳು ಟೀಂ ಇಂಡಿಯಾವನ್ನು ತವರಿಗೆ ಅದ್ಧೂರಿಯಾಗಿ ಸ್ವಾಗತಿಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕಲ್ಲುತೂರಾಟ ನಡೆಸಿದ್ದ ಅಭಿಮಾನಿಗಳು ಧೋನಿ ಬಳಗ ಕಪ್‌ ಎತ್ತಿ ಹಿಡಿಯುತ್ತಿದ್ದಂತೆ ಹೂವಿನ ಮಳೆ ಸುರಿಸಿದ್ದರು. ಇದೀಗ ರೋಹಿತ್‌ ಬಳಗವನ್ನು ಸ್ವಾಗತಿಸಿರುವುದು ಅದೇ ದೃಶ್ಯವನ್ನು ನೆನಪಿಸಿದೆ.

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪರೇಡ್‌ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಈ ನಡುವೆ ಕ್ರಿಕೆಟ್‌ ಆಟಗಾರರನ್ನು ಸ್ವಾಗತಿಸಲು ನಿಂತಿದ್ದ ಕೆಲ ಅಭಿಮಾನಿಗಳು ʻಮೋದಿ ಮೋದಿʼ ಘೋಷಣೆ ಕೂಗಿದ್ದಾರೆ.

    ಮುಂಬೈನ ನಾರೀಮನ್ ಪಾಯಿಂಟ್‌ನಿಂದ ಪರೇಡ್‌ ಆರಂಭವಾಗಲಿದ್ದು, ಸುಮಾರು 2 ಕಿಮೀ ವಿಜಯಯಾತ್ರೆ ನಡೆಯಲಿದೆ. ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನೂ ಪ್ರದಾನ ಮಾಡಲಾಗುತ್ತದೆ. ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಮೆರವಣಿಗೆಯಲ್ಲಿ ಕಾದು ನಿಂತಿರುವ ಕೆಲ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ತೆರೆದ ಬಸ್​ನಲ್ಲಿ ರೋಡ್ ಶೋ:
    ಈಗಾಗಲೇ ಟೀಂ ಇಂಡಿಯಾದ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈ ತಲುಪಿಸಿದ್ದಾರೆ. ಏರ್‌ ಇಂಡಿಯಾದ ವಿಮಾನ ಮುಂಬೈ ತಲುಪುತ್ತಿದ್ದಂತೆ ವಿಶೇಷ ರೀತಿಯಲ್ಲಿ ವಾಟರ್‌ ಜೆಟ್‌ಗಳ ಮೂಲಕ ಸ್ವಾಗತ ಕೋರಲಾಗಿದೆ. ವಿಜಯಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದು, ‘ಮುಂಬೈನ ನಾರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಇದನ್ನೂ ಓದಿ: ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

  • T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ಮುಂಬೈ: 2024ರ ಟಿ20 ವಿಶ್ವಕಪ್‌ ಗೆಲುವಿನ ನೆನಪಿನಾರ್ಥವಾಗಿ ಬಿಸಿಸಿಐನಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ʻನಮೋ ನಂ.1ʼ ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಚಾಂಪಿಯನ್‌ ಟೀಂ ಇಂಡಿಯಾ (Team India) ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಾರತಕ್ಕೆ ಆಗಮಿಸಿತು. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಯಿತು. ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಭಾರತಕ್ಕೆ ಬರುವುದು ತಡವಾಯಿತು. ಬುಧವಾರ ರಾತ್ರಿ ಏರ್‌ ಇಂಡಿಯಾ ವಿಶೇಷ ವಿಮಾನದಿಂದ ಹೊರಟ ಟೀಂ ಇಂಡಿಯಾ ಗುರುವಾರ ಬೆಳಗ್ಗೆ 6:00 ಗಂಟೆ ಹೊತ್ತಿಗೆ ಭಾರತ ತಲುಪಿತು.

    ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾ ಆಟಗಾರರು ಮುಂಬೈಗೆ ತೆರಳುವ ಮುನ್ನ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜೊತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ವಿಶ್ವಕಪ್‌ ಟ್ರೋಫಿ ಹಿಡಿದು ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ವಿಜಯಯಾತ್ರೆಗೆ ರೋಹಿತ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

  • ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆದ್ರೆ ಅಭಿಮಾನಿಗಳ ಸಂಭ್ರಮಕ್ಕೆ ವರುಣ ತಡೆಯೊಡ್ಡಿದೆ.

    ಸದ್ಯ ಮುಂಬೈನಲ್ಲಿ ವರುಣ ಸಿಂಚನವಾಗುತ್ತಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಭಾರೀ ಮಳೆಯಾಗುತ್ತಿದೆ. ಆದ್ರೆ ಅಭಿಮಾನಿಗಳು ಮಳೆಗೂ ಜಗ್ಗದೇ ಮೈದಾನದಲ್ಲೇ ನಿಂತಿದ್ದಾರೆ. ಕೆಲವರಂತೂ ಮಳೆಯಲ್ಲೇ ನೆನೆದುಕೊಂಡು ಟೀಂ ಇಂಡಿಯಾ ಪರ ಘೋಷಣೆ ಕೂಗುತ್ತಿದ್ದಾರೆ. ಆಟಗಾರರು ಈಗಾಗಲೇ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ.

    ವಿಜಯಯಾತ್ರೆಗೆ ಹಿಟ್‌ಮ್ಯಾನ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

    ತೆರೆದ ಬಸ್​ನಲ್ಲಿ ರೋಡ್ ಶೋ:
    ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನಾರಿಮನ್‌ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತ ಕೂಡ ಪ್ರದಾನ ಮಾಡಲಾಗುತ್ತದೆ.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    – ತವರಿನಲ್ಲಿ ವಿಜಯೋತ್ಸವಕ್ಕೆ ಕೊಂಚ ತಡೆ

    ಬಾರ್ಬಡೋಸ್‌: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ ತವರಿನಲ್ಲಿ ಭರ್ಜರಿ ಸ್ವಾಗತ ನೀಡಲು ತಯಾರಿಗಳು ನಡೆದಿವೆ. ಆದ್ರೆ, ಅಭಿಮಾನಿಗಳ ಆಸೆಗೆ ಬಾರ್ಬಡೋಸ್‌ಗೆ ಅಪ್ಪಳಿಸಿದ ಭೀಕರ ಚಂಡಮಾರುತ ತಣ್ಣೀರು ಎರಚಿದೆ. ಹಾಗಾಗಿ ಟೀಂ ಇಂಡಿಯಾ (Team India) ತವರಿನಲ್ಲಿ ವಿಜಯೋತ್ಸವ ಆಚರಿಸಲು ಇನ್ನೂ ಮೂರ್ನಾಲ್ಕು ದಿನ ಕಾಯಬೇಕಿದೆ.

    ಕೆರೀಬಿಯನ್ ದ್ವೀಪಗಳಲ್ಲಿ ಸೋಮವಾರ (ಜು.1) ಬೆಳಗ್ಗಿನ ಜಾವದಲ್ಲಿ ಕೆಟಗಿರಿ-4 ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ.

    ಬಾರ್ಬಡೋಸ್ (Barbados) ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. 3 ಲಕ್ಷ ಜನಸಂಖ್ಯೆ ಹೊಂದಿರುವ ದ್ವೀಪದಲ್ಲಿ ಭಾನುವಾರ ಸಂಜೆಯಿಂದಲೇ ಲಾಕ್‌ಡೌನ್ ವಿಧಿಸಲಾಗಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಬಾರ್ಬಡೋಸ್‌ನ ಹೋಟೆಲ್‌ಗೆ ಸೀಮಿತ ಆಗಿದ್ದಾರೆ. ಅವರು ಸ್ವದೇಶಕ್ಕೆ ವಾಪಸ್ ಆಗೋದು ಇನ್ನೂ ಮೂರು ದಿನ ತಡವಾಗಬಹುದು ಎಂದು ಹೇಳಲಾಗಿದೆ.

    ಇನ್ನೂ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಯ್ ಶಾ (Jay Shah), ನಾವಿಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರು ಮತ್ತಿತರರನ್ನು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ಆದ್ಯತೆಯಾಗಿದೆ. ಸ್ವದೇಶಕ್ಕೆ ಹೋದ ನಂತರ ಸನ್ಮಾನದ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೇರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್, ಟ್ರಂಪ್ ಮುಖಾಮುಖಿ ಚರ್ಚೆ

    ಸ್ವದೇಶಕ್ಕೆ ಆಗಮಿಸಿದ ನಂತರ ಮುಂಬೈ ಏರ್‌ಪೋರ್ಟ್‌ನಿಂದ ಬಿಸಿಸಿಐ ಕಚೇರಿವರೆಗೆ ಮೆರವಣಿಗೆ ನಡೆಸಲು ಬಿಸಿಸಿಐ ಆಲೋಚಿಸಿದೆ. ಇತ್ತ, ಸಂಸತ್‌ನ ಉಭಯ ಸದನಗಳಲ್ಲಿ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಅಭಿನಂದಿಸಲಾಗಿದೆ. ಇದನ್ನೂ ಓದಿ: ಲಂಕಾ ನೌಕಾಪಡೆಯ ನಾವಿಕ ಸಾವು – ಭಾರತೀಯ ಮೀನುಗಾರರ ಮೇಲೆ ಹತ್ಯೆ ಆರೋಪ

     

  • ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ದುಬೈ: ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಮುಗಿದಿದ್ದು ಭಾರತ (Team India) ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಟೂರ್ನಿ ಮುಗಿದ ಬೆನ್ನಲ್ಲೇ ಟಿ20 ವಿಶ್ವಕಪ್‌ 2024 ರ ಕನಸಿನ ತಂಡವನ್ನು ಐಸಿಸಿ ಬಿಡುಗಡೆ ಮಾಡಿದೆ.

    ಈ ಆಟಗಾರರ ಪಟ್ಟಿಯಲ್ಲಿ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್‌ ಕೊಹ್ಲಿಗೆ (Virat Kohli) ಸ್ಥಾನ ನೀಡಿಲ್ಲ. ಟೀಂ ಇಂಡಿಯಾದ 6 ಆಟಗಾರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಎರಡು ಮಹತ್ವದ ಜವಾಬ್ದಾರಿ – ಆರ್‌ಸಿಬಿಗೆ ದಿನೇಶ್‌ ಕಾರ್ತಿಕ್‌ ರಿಎಂಟ್ರಿ

    ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್‌ ಸಿಂಗ್‌ ಸ್ಥಾನ ಪಡೆದಿದ್ದಾರೆ.

    ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ ಆಸ್ಟ್ರೇಲಿಯಾ ಮಾರ್ಕಸ್ ಸ್ಟೊಯಿನಿಸ್ ಮತ್ತು ವಿಂಡೀಸಿನ ನಿಕೋಲಸ್ ಪೂರನ್ ಸ್ಥಾನ ಪಡೆದಿದ್ದಾರೆ. 12ನೇ ಆಟಗಾರನಾಗಿ ಆಫ್ರಿಕಾ ಆನ್ರಿಚ್ ನಾರ್ಟ್ಜೆ ಆಯ್ಕೆಯಾಗಿದ್ದಾರೆ.

    ಪ್ರತಿ ಕ್ರಿಕೆಟ್‌ ಟೂರ್ನಿ ಮುಗಿದ ಬಳಿಕ ಐಸಿಸಿ ಡ್ರೀಮ್‌ ತಂಡವನ್ನು ಪ್ರಕಟಿಸುತ್ತದೆ. ಟೂರ್ನಿಯುದ್ಧಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪೈಕಿ ಕೇವಲ 12 ಮಂದಿಯನ್ನು ಮಾತ್ರ ಅಂತಿಮವಾಗಿ ಐಸಿಸಿ ಆಯ್ಕೆ ಮಾಡುತ್ತದೆ.

  • T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಮುಂಬೈ: ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup 2024) ಟೂರ್ನಿ ಬಳಿಕ 2024ರ ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬಳಗಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂ. ನಗದು ಬಹುಮಾನ (prize money) ಘೋಷಿಸಿದೆ.

    ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಕಿರೀಟಕ್ಕೆ ಭಾರತ ತಂಡ ಮುತ್ತಿಟ್ಟಿದೆ. ಅಲ್ಲದೇ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನೂ ನೀಗಿಸಿಕೊಂಡಿದೆ.

    ಟಿ20 ವಿಶ್ವಕಪ್‌ ಗೆದ್ದ ಮರುದಿನವೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ವಿಜೇತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ.ಗಳ ಬಹುಮಾನ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: T20 WorldCup 2024 – ಟೀಂ ಇಂಡಿಯಾ ಆಟಗಾರರ ದಾಖಲೆಗಳ ಸುರಿಮಳೆ! ‌

    ಈ ಕುರಿತು X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಯ್‌ ಶಾ, ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಗೆದ್ದ ಟೀಂ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲು ನನಗೆ ಸಂತೋಷವಾಗಿದೆ. ತಂಡವು ಟೂರ್ನಿಯುದ್ಧಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವ ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ, ರೋಹಿತ್‌ ಶರ್ಮಾ ಬೆನ್ನಲ್ಲೇ T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ಜಡೇಜಾ ವಿದಾಯ

    13 ವರ್ಷಗಳ ಬಳಿಕ ವಿಶ್ವಕಪ್‌:
    ಇನ್ನೂ ಭಾರತ ತಂಡಕ್ಕೆ ಇದು 13 ವರ್ಷಗಳ ಬಳಿಕ ಸಿಕ್ಕ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ದೊರೆತ 2ನೇ ಟಿ20 ವಿಶ್ವಕಪ್ ಆಗಿದೆ​. ಭಾರತ ತಂಡ 2007ರ ಉದ್ಘಾಟನಾ ಆವೃತ್ತಿಯಲ್ಲೇ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಅಲ್ಲದೇ 2011ರ ಏಕದಿನ ವಿಶ್ವಕಪ್ ಸಹ ಗೆದ್ದುಕೊಂಡಿತ್ತು. ಈ ಎರಡೂ ಟೂರ್ನಿಯಲ್ಲೂ ಎಂ.ಎಸ್‌ ಧೋನಿ ಅವರೇ ನಾಯಕತ್ವ ವಹಿಸಿದ್ದು ವಿಶೇಷ. ಇದನ್ನೂ ಓದಿ: ಟೀಂ ಇಂಡಿಯಾಗೆ ಟ್ರೋಫಿ ತಂದುಕೊಟ್ಟ ನೆಲದ ಮಣ್ಣನ್ನು ತಿಂದ ರೋಹಿತ್‌ ಶರ್ಮಾ – ವೀಡಿಯೋ ವೈರಲ್‌

  • 15 ವರ್ಷಗಳ T20I ಕ್ರಿಕೆಟ್‌ ಬದುಕಿಗೆ ಫುಲ್‌ಸ್ಟಾಪ್‌ – ಹೇಗಿದೆ ಜಡ್ಡು ಸಾಧನೆ?

    15 ವರ್ಷಗಳ T20I ಕ್ರಿಕೆಟ್‌ ಬದುಕಿಗೆ ಫುಲ್‌ಸ್ಟಾಪ್‌ – ಹೇಗಿದೆ ಜಡ್ಡು ಸಾಧನೆ?

    ಮುಂಬೈ: 2024ರ ಟಿ20 ವಿಶ್ವಕಪ್ ಗೆದ್ದ ಮರುದಿನವೇ ಟೀಂ ಇಂಡಿಯಾ ಆಲ್​ರೌಂಡ್​​ ರವೀಂದ್ರ ಜಡೇಜಾ (Ravindra Jadeja) ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (Rohit Sharma) ವಿದಾಯ ಹೇಳಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

    ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​​ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸುವ ಜೊತೆಗೆ ಭಾರತ 2ನೇ ಬಾರಿಗೆ ಟಿ20 ವಿಶ್ವಕಪ್ (T20 World Cup 2024) ಟ್ರೋಫಿ ಗೆದ್ದುಕೊಂಡಿತು. ಐಸಿಸಿ ಪ್ರಶಸ್ತಿ ಗೆಲುವಿನ ನಂತರ ಭಾರತ ಸಂಭ್ರಮದಲ್ಲಿರುವಾಗಲೇ ಜಡೇಜಾ ಅವರು ವಿರಾಟ್ ಕೊಹ್ಲಿ ಮತ್ತು ಅವರ ನಾಯಕ ರೋಹಿತ್ ಶರ್ಮಾ ಅವರ ಹಾದಿಯನ್ನೇ ಅನುಸರಿಸಿದ್ದು, ಗೆಲುವಿನೊಂದಿಗೆ ವಿದಾಯ ಹೇಳಿದ್ದಾರೆ.

    ಹೇಗಿದೆ ಟಿ20 ಕ್ರಿಕೆಟ್‌ ಹಾದಿ?
    ಸ್ಪಿನ್-ಬೌಲಿಂಗ್ ಆಲ್ರೌಂಡರ್ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿ ಜಡೇಜಾ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದರು. 2009ರ ಫೆಬ್ರವರಿ 10 ರಂದು ಶ್ರೀಲಂಕಾ ವಿರುದ್ಧ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದರು. ಕೊಲಂಬೊದಲ್ಲಿ ಪಂದ್ಯ ನಡೆದಿತ್ತು. ಅಂದಿನಿಂದ ಈವರೆಗೆ ಜಡೇಜಾ ಟೀಂ ಇಂಡಿಯಾಕ್ಕೆ ಶ್ರಮಿಸಿದ್ದಾರೆ. ಇದೀಗ 15 ವರ್ಷಗಳ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ವೃತ್ತಿ ಬದುಕಿಗೆ ಪೂರ್ಣವಿರಾಮ ಇಟ್ಟಿದ್ದಾರೆ.

    ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಜಡೇಜಾ ಒಟ್ಟು 74 ಪಂದ್ಯ, 41 ಇನ್ನಿಂಗ್ಸ್‌ಗಳನ್ನಾಡಿದ್ದು, 515 ರನ್‌ ಗಳಿಸಿದ್ದಾರೆ. ಇದರಲ್ಲಿ 39 ಬೌಂಡರಿ, 14 ಸಿಕ್ಸರ್‌ಗಳೂ ಸೇರಿವೆ. 46 ವೈಯಕ್ತಿಕ ಗರಿಷ್ಠ ರನ್‌ ಆಗಿದೆ. ಬೌಲಿಂಗ್‌ನಲ್ಲಿ 54 ವಿಕೆಟ್‌ಗಳನ್ನೂ ಪಡೆದುಕೊಂಡಿರುವ ಜಡೇಜಾ 28 ಕ್ಯಾಚ್‌ಗಳನ್ನ ಹಿಡಿದಿದ್ದಾರೆ. ಅಲ್ಲದೇ ಎಂ.ಎಸ್‌ ಧೋನಿ, ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ ಹೆಗ್ಗಳಿಗೂ ಇವರಿಗಿದೆ.

  • ಸೂರ್ಯನ ಸ್ಟನ್ನಿಂಗ್‌ ಕ್ಯಾಚ್‌ ಸುತ್ತ ವಿವಾದದ ಹುತ್ತ – ಅಂಪೈರ್‌ ವಿರುದ್ಧ ಸಿಡಿದ ಆಫ್ರಿಕಾ ಫ್ಯಾನ್ಸ್‌!

    ಸೂರ್ಯನ ಸ್ಟನ್ನಿಂಗ್‌ ಕ್ಯಾಚ್‌ ಸುತ್ತ ವಿವಾದದ ಹುತ್ತ – ಅಂಪೈರ್‌ ವಿರುದ್ಧ ಸಿಡಿದ ಆಫ್ರಿಕಾ ಫ್ಯಾನ್ಸ್‌!

    ಬ್ರಿಡ್ಜ್‌ಟೌನ್‌: 11 ವರ್ಷಗಳ ನಂತರ ಕೊನೆಗೂ ಭಾರತ ಐಸಿಸಿ ಟ್ರೋಫಿಗೆ ಮು‌ತ್ತಿಟ್ಟಿದೆ. 2013ರಲ್ಲಿ ಕೊನೆಯ ಬಾರಿಗೆ ಐಸಿಸಿ ಚಾಂಪಿಯನ್‌ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಭಾರತ ಕೊನೆಗೂ ವಿಶ್ವಕಪ್‌ಗೆ (T20 World Cup 2024) ಮುತ್ತಿಟ್ಟು ವಿಶೇಷ ಸಾಧನೆಗೆ ಪಾತ್ರವಾಗಿದೆ. ಆದ್ರೆ ಕೊನೆಯಲ್ಲಿ ಪಂದ್ಯದ ಗತಿಯನ್ನೇ ಬದಲಿಸಿದ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅವರ ಸ್ಟನಿಂಗ್‌ ಕ್ಯಾಚ್‌ ವಿವಾದಕ್ಕೆ ಕಾರಣವಾಗಿದೆ.

    ಹೌದು. 15ನೇ ಓವರ್‌ನಲ್ಲಿ ಅಕ್ಷರ್‌ ಪಟೇಲ್‌ ಬೌಲಿಂಗ್‌ಗೆ ಹೆನ್ರಿಕ್‌ ಕ್ಲಾಸೆನ್‌ 24 ರನ್‌ ಚಚ್ಚಿದ್ದರು. ಇದರಿಂದ ಟೀಂ ಇಂಡಿಯಾ ಸೋಲು ಖಚಿತ ಎಂದೇ ಭಾವಿಸಲಾಗಿತ್ತು. ಆ ನಂತರ ಜಸ್‌ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ ಹಾಗೂ ಹರ್ಷ್‌ದೀಪ್‌ ಸಿಂಗ್‌ ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು.

    ಕೊನೇ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್‌ ಬೇಕಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಡೇವಿಡ್‌ ಮಿಲ್ಲರ್‌ (David Miller) ಮೊದಲ ಎಸೆತವನ್ನೇ ಸಿಕ್ಸರ್‌ ಬಾರಿಸಲು ಯತ್ನಿಸಿದ್ದರು. ಈ ವೇಳೆ ಲಾಂಗ್‌ ಆನ್‌ನಲ್ಲಿದ್ದ ಸೂರ್ಯಕುಮಾರ್‌ ಯಾದವ್‌ ಬೌಂಡರಿ-ರೋಪ್ ಕ್ಯಾಚ್ (Surya Clean Catch) ಪಡೆಯುವ ಮೂಲಕ ಮಿಲ್ಲರ್‌ಗೆ ಪೆವಿಲಿಯನ್‌ ಹಾದಿ ತೋರಿದರು. ಡೇವಿಡ್‌ ಮಿಲ್ಲರ್‌ ಔಟಾಗುವ ವೇಳೆಗೆ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ನೆಲ ಕಚ್ಚಿದ್ದರು. ಹಾಗಾಗಿ ಈ ಒಂದು ಕ್ಯಾಚ್‌ ಭಾರತಕ್ಕೆ ವಿಶ್ವಕಪ್‌ ಗೆಲುವಿಗೆ ಕಾರಣವಾಯಿತು. ಆದ್ರೆ ಸೂರ್ಯಕುಮಾರ್‌ ಹಿಡಿದ ಈ ಕ್ಯಾಚ್‌ ವಿವಾದಕ್ಕೆ ಕಾರಣವಾಗಿದೆ.

    ದಕ್ಷಿಣ ಆಫ್ರಿಕಾದ ಮಾಜಿ ಆಟಗಾರರು, ಕ್ರಿಕೆಟ್‌ ತಜ್ಷರು ಹಾಗೂ ಕ್ರಿಕೆಟ್‌ ಅಭಿಮಾನಿಗಳು ಸೂರ್ಯ ಕ್ಯಾಚ್‌ ರೋಫ್‌ ಮಾಡುವ ಮುನ್ನ ಕಾಲು ಬೌಂಡರಿ ಲೈನ್‌ಗೆ ತಗುಲಿದೆ. ಸೂರ್ಯನ ಕ್ಯಾಚ್‌ ಅನ್ನು 3ನೇ ಅಂಪೈರ್‌ ವಿವಿಧ ಕೋನಗಳಿಂದ ಪರಿಶೀಲಿಸಬೇಕಿತ್ತು. ಆದ್ರೆ ಟಿವಿ ಅಂಪೈರ್‌ ಕೇವಲ ಎರಡು ಮೂರು ಕೋನಗಳಲ್ಲಿ ಪರಿಶೀಲಿಸಿ ಭಾರತ ತಂಡದ ಪರವಾಗಿ ತೀರ್ಪು ನೀಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ವಿಶ್ವ ವಿಜೇತ ಭಾರತ- ಟಿ20 ವಿಶ್ವಕಪ್‌ಗೆ ಈಗ ಟೀಂ ಇಂಡಿಯಾ ಬಾಸ್‌

    ಶನಿವಾರ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲ್ಲಲು 177 ರನ್‌ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ (South Africa) ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 169 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

    ಕೊನೇ ಓವರ್‌ನಲ್ಲಿ ಆಗಿದ್ದೇನು?
    ಕೊನೆಯ 6 ಎಸೆತಗಳಲ್ಲಿ 16 ರನ್‌ ಬೇಕಿತ್ತು. ಪಾಂಡ್ಯ ಎಸೆದ ಮೊದಲ ಎಸೆತವನ್ನು ಮಿಲ್ಲರ್‌ ಸಿಕ್ಸರ್‌ಗೆ ಯತ್ನಿಸಿದರು. ಆದರೆ ಬೌಂಡರಿ ಗೆರೆಯ ಬಳಿ ಸೂರ್ಯಕುಮಾರ್‌ ಯಾದವ್‌ ಅವರು ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಮಿಲ್ಲರ್‌ 21 ರನ್‌ ಗಳಿಸಿ ಔಟ್‌ ಆದರು. ನಂತರ ಬಂದ ರಬಡಾ ಮೊದಲ ಎಸೆತ ಬೌಂಡರಿಗೆ ಅಟ್ಟಿದರು. ನಂತರ ಎಸೆತದಲ್ಲಿ ಲೆಗ್‌ಬೈ ಮೂಲಕ 1 ರನ್‌ ಬಂತು. ನಂತರ 1 ರನ್‌ ಒಂದು ವೈಡ್‌ ಬಂತು. ಐದನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಲು ಹೋದ ರಬಡಾ ಕ್ಯಾಚ್‌ ನೀಡಿ ಔಟಾದ ಬೆನ್ನಲ್ಲೇ ಸಂಭ್ರಮಾಚರಣೆ ಆರಂಭವಾಯಿತು. ಕೊನೆಯ ಎಸೆತದಲ್ಲಿ ಒಂದು ರನ್‌ ಬಂತು. ಈ ಮೂಲಕ ಭಾರತ ಎರಡನೇ ಬಾರಿ ವಿಶ್ವಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿತು.