Tag: ಟೀಂ ಇಂಡಿಯಾ ಜೆರ್ಸಿ

  • ಟೀಂ ಇಂಡಿಯಾ ಪ್ರಾಕ್ಟೀಸ್ ಜೆರ್ಸಿ, ಮೆಟ್ರೋ ಸ್ಟೇಷನ್‍ಗೂ ಕೇಸರಿ ಬಣ್ಣ- ಕೇಂದ್ರದ ವಿರುದ್ಧ ದೀದಿ ವಾಗ್ದಾಳಿ

    ಟೀಂ ಇಂಡಿಯಾ ಪ್ರಾಕ್ಟೀಸ್ ಜೆರ್ಸಿ, ಮೆಟ್ರೋ ಸ್ಟೇಷನ್‍ಗೂ ಕೇಸರಿ ಬಣ್ಣ- ಕೇಂದ್ರದ ವಿರುದ್ಧ ದೀದಿ ವಾಗ್ದಾಳಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿಯವರು (Mamata Banerjee) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟೀಂ ಇಂಡಿಯಾದ ಪ್ರ್ಯಾಕ್ಟೀಸ್ ಜೆರ್ಸಿಯಲ್ಲಿ ಇರುವ ಕೇಸರಿ ಬಣ್ಣವನ್ನು ಕಟುವಾಗಿ ವಿರೋಧಿಸಿದ್ದಾರೆ.

    ಪೊಸ್ತಾ ಬಝಾರ್‍ನಲ್ಲಿ ಜಗಧಾತ್ರಿ ಪೂಜಾದ ಉದ್ಘಾಟನೆ ವೇಳೆ ಮಾತನಾಡಿದ ಅವರು, ಟೀಂ ಇಂಡಿಯಾದ (Team India Jersy) ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ ಅಲ್ಲದೇ ಮೆಟ್ರೋ ಸ್ಟೇಷನ್‍ಗಳ ಗೋಡೆಗಳಿಗೂ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

    ಈ ಹಿಂದೆ ಅವರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಆದರೆ ಇದೀಗ ಬಿಜೆಪಿಯವರು (BJP) ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಮಗೆ ಹೆಮ್ಮೆ, ಅಭಿಮಾನ ಹೊಂದಿದ್ದೇವೆ. ವಿಶ್ವಕಪ್ ನಲ್ಲಿ ಗೆಲ್ಲುತ್ತಾರೆಂದು ನಂಬುತ್ತೇನೆ. ಆದರೆ ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ. ಇತ್ತ ಮೆಟ್ರೋ ಸ್ಟೇಷನ್‍ಗಳಿಗೂ ಕೇಸರಿ ಬಳಿಯಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

    ಭಾರತ ದೇಶವು ಇಲ್ಲಿನ ಜನರಿಗೆ ಸೇರಿದ್ದಾಗಿದೆ ಹೊರತು ಕೇವಲ ಬಿಜೆಪಿಯವರಿಗೆ ಸೇರಿದ್ದಲ್ಲ. ಅಧಿಕಾರ ನಿಂತ ನೀರಲ್ಲ, ಬರುತ್ತದೆ ಹೋಗುತ್ತದೆ. ಆದರೆ ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ದೀದಿ ಗುಡುಗಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

  • Byju’sಗೆ ಗುಡ್‌ಬೈ – Dream11 ತೆಕ್ಕೆಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವ

    Byju’sಗೆ ಗುಡ್‌ಬೈ – Dream11 ತೆಕ್ಕೆಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವ

    ಮುಂಬೈ: ಕ್ರಿಕೆಟ್‌ ಅಭಿಮಾನಿಗಳ ಜನಪ್ರಿಯ ಗೇಮಿಂಗ್‌ ಪ್ಲಾಟ್‌ಫಾರ್ಮ್ ಡ್ರೀಮ್-11 (Dream11) ಭಾರತ ಕ್ರಿಕೆಟ್ ತಂಡದ ಜೆರ್ಸಿ (Jerseys) ಪ್ರಾಯೋಜಕತ್ವ ಪಡೆದುಕೊಂಡಿದೆ. ಮುಂದಿನ 3 ವರ್ಷಗಳ ಅವಧಿಗೆ ಪ್ರಾಯೋಜಕತ್ವದ ಹಕ್ಕನ್ನು ಪಡೆದುಕೊಂಡಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಘೋಷಿಸಿದೆ.

    ಬೈಜೂಸ್‌ಗೆ (Byju’s) ಬದಲಾಗಿ ಡ್ರೀಮ್-11 ಜೆರ್ಸಿ ಪ್ರಾಯೋಜಕತ್ವ ತನ್ನದಾಗಿಸಿಕೊಂಡಿದೆ. ಇನ್ಮುಂದೆ ಟೀಂ ಇಂಡಿಯಾ (Team India) ಡ್ರೀಮ್‌-11 ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದೇ ತಿಂಗಳಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯಲಿರುವ ಟೆಸ್ಟ್‌ ಸರಣಿ ಮೂಲಕ ಭಾರತ ಡ್ರೀಮ್‌-11 ಜೆರ್ಸಿಯೊಂದಿಗೆ ಕಾಣಿಸಿಕೊಳ್ಳಲಿದೆ.

    ಈವರೆಗೆ ಟೀಂ ಇಂಡಿಯಾ ಜೆರ್ಸಿ (Team India Jerseys) ಪ್ರಾಯೋಜಕತ್ವ ವಹಿಸಿದ್ದ ಬೈಜೂಸ್‌ ಕಳೆದ ಮಾರ್ಚ್‌ ತಿಂಗಳಲ್ಲಿ ಒಪ್ಪಂದದಿಂದ ಹಿಂದೆ ಸರಿಯಲು ನಿರ್ಧರಿಸಿತು. ಅಂದಿನಿಂದ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕರಿಲ್ಲದೇ ಕಣಕ್ಕಿಳಿದಿತ್ತು. ಇತ್ತೀಚೆಗೆ ನಡೆದ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲೂ ಟೀಂ ಇಂಡಿಯಾ ಪ್ರಾಯೋಜಕತ್ವದಿಂದ ವಂಚನೆಯಾಗಿತ್ತು.

    ಬೈಜೂಸ್‌ ಪ್ರಾಯೋಜಕತ್ವದಲ್ಲಿ ಬಿಸಿಸಿಐ ದ್ವಿಪಕ್ಷೀಯ ಸರಣಿಯಲ್ಲಿ ಪ್ರತಿ ಪಂದ್ಯಕ್ಕೆ ಸುಮಾರು 5.50 ಕೋಟಿ ರೂ. ಜೆರ್ಸಿಯಲ್ಲಿ ಲೋಗೋವನ್ನ ಇರಿಸಿದ್ದರೆ, ಐಸಿಸಿ ಟೂರ್ನಿ ಪಂದ್ಯಗಳಲ್ಲಿ ಈ ಮೊತ್ತವು 1.70 ಕೋಟಿ ರೂ.ಗೆ ಇಳಿದಿತ್ತು. ಆದ್ರೆ ಡ್ರೀಮ್‌-11 ಒಪ್ಪಂದಕ್ಕೆ ಹೋಲಿಸಿದರೆ, ಬೈಜೂಸ್‌ಗಿಂತಲೂ ಕಡಿಮೆ ಮೊತ್ತ ಬೀಳುತ್ತದೆ. ಡ್ರೀಮ್‌-11 358 ಕೋಟಿ ರೂ.ಗಳಿಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವದ ಹಕ್ಕನ್ನು ಖರೀದಿಸಿದೆ. ಇದನ್ನೂ ಓದಿ: ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷ್ ಜೈನ್, ಭಾರತೀಯ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು, ಅದನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ. ಅಂತಹ ಅವಕಾಶ ಈಗ ನಮಗೆ ಸಿಕ್ಕಿರೋದು ಸಂತಸ ತಂದಿದೆ. ಕೋಟ್ಯಂತರ ಕ್ರೀಡಾಭಿಮಾನಿಗಳಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Asian Games 2023 – ಶಿಖರ್‌ ಧವನ್‌ಗೆ ಟೀಂ ಇಂಡಿಯಾ ನಾಯಕತ್ವ?

    ಬೈಜೂಸ್‌ 2019 ರಿಂದ 2022ರ ವರೆಗೆ ಮೂರು ವರ್ಷಗಳ ಅವಧಿಗೆ ಬಿಸಿಸಿಐ ಜೊತೆಗೆ ಜೆರ್ಸಿ ಪ್ರಾಯೋಕತ್ವ ಒಪ್ಪಂದಕ್ಕೆ ಸಹಿ ಹಾಕಿತ್ತು. ಅದನ್ನು 2023ರವರೆಗೂ ವಿಸ್ತರಿಸಿಕೊಂಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]