Tag: ಟೂತ್ ಬ್ರಶ್

  • ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‍ವೊಂದನ್ನು ಹೊರ ತೆಗೆದಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ 4 ವರ್ಷದ ಮಗಳು ಆ. 14ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಬ್ರಶ್ ಮುರಿದಿದೆ.

    ಕುಟುಂಬಸ್ಥರು ಕೂಡಲೇ ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್‌

    ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾದಿಂದ ಚೇತರಿಸಿಕೊಂಡ ಬಳಿಕ ಟೂತ್ ಬ್ರಷ್ ಬದಲಾಯಿಸೊದ್ರಿಂದ ಉಪಯೋಗವೇನು ಗೊತ್ತಾ?

    ಕೊರೊನಾದಿಂದ ಚೇತರಿಸಿಕೊಂಡ ಬಳಿಕ ಟೂತ್ ಬ್ರಷ್ ಬದಲಾಯಿಸೊದ್ರಿಂದ ಉಪಯೋಗವೇನು ಗೊತ್ತಾ?

    ನವದೆಹಲಿ: ಕೊರೊನಾ ಮಹಾಮಾರಿ ದೇಶದಲ್ಲಿ ಅತಿ ವೇಗವಾಗಿ ಹರಡುತ್ತಿದೆ ಮತ್ತು ಒಬ್ಬ ವ್ಯಕ್ತಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಮತ್ತೊಮ್ಮೆ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿದೆ. ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾವನ್ನು ತಡೆಗಟ್ಟಬಹುದು. ಆದರೆ ಎಲ್ಲಾ ಸಂದರ್ಭದಲ್ಲಿಯೂ ಶೇ.100ರಷ್ಟು ಸುರಕ್ಷಿತವಾಗಿರುತ್ತೇವೆ ಎಂದು ಖಾತರಿಪಡಿಸಲಾಗುವುದಿಲ್ಲ ಎಂದು ತಜ್ಞರೆ ತಿಳಿಸಿದ್ದಾರೆ.

    ಹೀಗಿರುವಾಗ ರೋಗದಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಮತ್ತು ರೋಗದಿಂದ ಚೇತರಿಸಿಕೊಂಡವರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಇತ್ತೀಚೆಗೆ ಕೋವಿಡ್-19ನಿಂದ ಚೇತರಿಸಿಕೊಂಡ ವ್ಯಕ್ತಿಗಳು ತಕ್ಷಣ ತಮ್ಮ ಹಲ್ಲನ್ನು ಉಜ್ಜುವ ಬ್ರಷ್‍ನನ್ನು ಬದಲಾಯಿಸಿಬೇಕು ಎಂದು ದಂತ ವೈದ್ಯರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಮತ್ತೆ ಸೋಂಕಿಗೆ ಒಳಗಾಗುವುದನ್ನು ಮತ್ತು ಮನೆಯಲ್ಲಿ ಒಂದೇ ವಾಶ್ ರೂಂ ಬಳಸುವ ಇತರರನ್ನು ರಕ್ಷಿಸಬಹುದು ಎಂದು ಹೇಳಿದ್ದಾರೆ.

    ನೀವು ಅಥವಾ ನಿಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರು ಯಾರಾದರೂ ಕೋವಿಡ್‍ಗೆ ಒಳಗಾಗಿ ಅದರಿಂದ ಚೇತರಿಸಿಕೊಂಡ ನಂತರ, ದಯವಿಟ್ಟು ನಿಮ್ಮ ಟೂತ್ ಬ್ರಷ್, ಟಂಗ್ ಕ್ಲೀನರ್ ಇತ್ಯಾದಿಗಳನ್ನು ಬದಲಾಯಿಸುವುದು ಉತ್ತಮ. ಇವುಗಳಲ್ಲಿ ವೈರಸ್ ಇರಬಹುದು. ಹೀಗಾಗಿ ಇವುಗಳನ್ನು ತ್ಯಜಿಸುವುದು ಉತ್ತಮ ಎಂದು ನವದೆಹಲಿಯ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನ ಡೆಂಟಲ್ ಸರ್ಜರಿ ಎಚ್‍ಒಡಿ ಆಗಿರುವ ಡಾ. ಪ್ರವೀಶ್ ಮೆಹ್ರಾ ತಿಳಿದ್ದಾರೆ.