Tag: ಟೆಂಡರ್

  • Bengaluru | ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಕೆಶಿ

    Bengaluru | ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಕೆಶಿ

    ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ (Tunnel Road) ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

    ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ಸೋಫಾ, ಎಸಿ ಎಲ್ಲವೂ ಭಸ್ಮ

    ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Davanagere | ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ – 40ಕ್ಕೂ ಹೆಚ್ಚು ಮಂದಿಗೆ ಗಾಯ

    ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದರು. ಇದನ್ನೂ ಓದಿ: ಚಾ.ನಗರ| ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟವಾಡಿದ್ರೆ 50,000 ದಂಡ – ಮಾಹಿತಿ ಕೊಟ್ಟವರಿಗೆ 10,000 ಬಹುಮಾನ

  • ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಟೆಂಡರ್: ತಂಗಡಗಿ ಲೇವಡಿ

    ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಟೆಂಡರ್: ತಂಗಡಗಿ ಲೇವಡಿ

    ಕೊಪ್ಪಳ: ಬಿಜೆಪಿಯಲ್ಲಿ (BJP) ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನ ಖಾಲಿ ಇದ್ದು, ಹುದ್ದೆ ಭರ್ತಿಗೆ ಟೆಂಡರ್ (Tender) ಕರೆಯಬಹುದು. ಬಿಡ್‌ನಲ್ಲಿ ಹೆಚ್ಚಿನ ಬೆಲೆ ನೀಡಿದವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗಬಹುದು ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವ್ಯಂಗ್ಯವಾಡಿದ್ದಾರೆ

    ಕೊಪ್ಪಳದಲ್ಲಿ (Koppal) ಮಾತನಾಡಿದ ಅವರು, ಬಿಜೆಪಿಯಲ್ಲಿ ಎಲ್ಲಾ ಸ್ಥಾನ, ಹುದ್ದೆ ಮಾರಾಟ ಆಗುತ್ತಿದ್ದವು. ಚೈತ್ರಾ ಕುಂದಾಪುರ (Chaithra Kundapura) ಪ್ರಕರಣದಲ್ಲಿ ಇದು ಮತ್ತೆ ಸಾಬೀತಾಗಿದೆ. ಹಿಂದಿನ ಸರ್ಕಾರದಲ್ಲಿ ಸಿಎಂ ಹುದ್ದೆ 2.5 ಸಾವಿರ ಕೋಟಿಗೆ, ಮಂತ್ರಿ ಸ್ಥಾನ 70 ರಿಂದ 80 ಕೋಟಿಗೆ ಮತ್ತು ಶಾಸಕರ ಟಿಕೆಟ್ 5 ರಿಂದ 7 ಕೋಟಿಗೆ ಮಾರಾಟ ಆಗಿದ್ದವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  (Basanagouda Patil Yatnal) ಅವರೇ ಈ ಮಾತು ಹೇಳಿದ್ದರು. ಈಗ ವಿರೋಧ ಪಕ್ಷದ ಸ್ಥಾನ ಖಾಲಿ ಇದ್ದು, ಟೆಂಡರ್ ಕರೆದಿಲ್ಲ. ಬಿಜೆಪಿ ನಾಯಕರು ಟೆಂಡರ್ ಕರೆದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ಸ್ಥಾನ ತುಂಬಿಕೊಳ್ಳಬಹುದು. ಒಮ್ಮೆ ಟೆಂಡರ್ ಕರೆದಾಗ ಯಾರೂ ಭಾಗಿಯಾಗಿಲ್ಲ. ಮತ್ತೊಮ್ಮೆ ಟೆಂಡರ್ ಕರೆದು ಯಾರು ಹೆಚ್ಚು ಹಣ ಕೊಡುತ್ತಾರೋ ಅವರು ವಿರೋಧ ಪಕ್ಷದ ನಾಯಕ ಆಗಬಹುದು. ಎಂಪಿ ಟಿಕೆಟ್ ಕೂಡ ಮಾರಾಟ ಆಗಬಹುದು ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಕೇಸ್- ಹಾಲಶ್ರೀ ಕಾರು ಚಾಲಕನ ವಿಚಾರಣೆ

    ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ (Congress) ಯಾವುದೇ ತೊಂದರೆ ಆಗುವುದಿಲ್ಲ. ಇದರಿಂದ ನಮಗೆ ಇನ್ನೂ ಹೆಚ್ಚು ಲಾಭ ಆಗುತ್ತೆ. ಜೆಡಿಎಸ್ (JDS) ಜಾತ್ಯಾತೀತ ಎಂದು ಹೆಸರು ಇಟ್ಟುಕೊಂಡು ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಇದಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣದ ಶ್ರೀಕಾಂತ್ ಮನೆ ಜಾಲಾಡಿದ ಸಿಸಿಬಿ- ಬಾಕ್ಸ್‌ನಲ್ಲಿಟ್ಟಿದ್ದ 41 ಲಕ್ಷ ಪತ್ತೆ

    ರಾಜ್ಯದ 162 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಗೈಡ್‌ಲೈನ್ಸ್ ಸಬಲೀಕರಣ ಮಾಡಲು ವಿಳಂಬ ಮಾಡಿತು. ಇದರಿಂದ ಬರ ಘೋಷಣೆ ಮಾಡಲು ತಡವಾಗಿದೆ. ಕೇಂದ್ರಕ್ಕೆ ನಮ್ಮ ಸಿಎಂ ಪತ್ರ ಬರೆದಿದ್ದಾರೆ. ಬರದ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡದೇ ಗೈಡ್‌ಲೈನ್ ಸಬಲೀಕರಣ ಮಾಡಬೇಕು. ರಾಜ್ಯದ 25 ಸಂಸದರೂ ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ವ್ಯಸನ ಮುಕ್ತನಾಗಲು ಬಂದು ಲಕ್ಷಗಟ್ಟಲೆ ಹಣ ಎಗರಿಸಿದ ಭೂಪ!

    ಬಿಜೆಪಿ ಟಿಕೇಟ್‌ಗಾಗಿ ಚೈತ್ರಾ ಕುಂದಾಪುರ ಕೋಟಿ ಡೀಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಕೇಸ್‌ಗಳನ್ನು ಸಿಸಿಬಿಗೆ ವರ್ಗಾಯಿಸಬೇಕು. ಆಗ ಎಲ್ಲಾ ಸತ್ಯ ಹೊರಬರುತ್ತದೆ. ಯಾರೆಲ್ಲ ಹಣ ಕೊಟ್ಟು ಟಿಕೆಟ್ ಖರೀದಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಚಕ್ರವರ್ತಿ ಸೂಲಿಬೆಲೆ-ಚೈತ್ರಾ ಕುಂದಾಪುರ ಅಣ್ಣ-ತಂಗಿ ಇದ್ದಂತೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: 10 ಸಾವಿರಕ್ಕೂ ಕಷ್ಟಪಡ್ತಿದ್ದ ಚೈತ್ರಾ ಈಗ ಕೋಟ್ಯಧಿಪತಿ- 3 ಕೋಟಿ 6 ಭಾಗವಾಗಿ ಹಂಚಿದ್ದು ಹೇಗೆ?

    ಮೂರು ಡಿಸಿಎಂ ಸ್ಥಾನ ಸೃಷ್ಠಿಸಬೇಕು ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುವ ಬಗ್ಗೆಯೂ ನಾನು ನಿರ್ಧಾರ ಮಾಡಲಾಗುವುದಿಲ್ಲ. ಈ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ ಎಂದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಇದುವರೆಗೂ 3 ಕೋಟಿಯಷ್ಟು ಮೌಲ್ಯದ ನಗದು, ಚಿನ್ನ ಜಪ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಸ್ಕಾಂ ಗುತ್ತಿಗೆದಾರರ ಒಳರಾಜಕೀಯ – ಆರೋಪಕ್ಕೆ VTSD ತಿರುಗೇಟು

    ಹೆಸ್ಕಾಂ ಗುತ್ತಿಗೆದಾರರ ಒಳರಾಜಕೀಯ – ಆರೋಪಕ್ಕೆ VTSD ತಿರುಗೇಟು

    ಹುಬ್ಬಳ್ಳಿ: ಹೆಸ್ಕಾಂ (HESCL)  ಅನುಮತಿಪಡೆದ ಗುತ್ತಿಗೆದಾರ ಸಂಘದ ಒಳ ರಾಜಕೀಯ ಸದ್ಯಕ್ಕೆ ಮುಗಿದಂತೆ ಕಾಣುತ್ತಿಲ್ಲ. ಹೆಸ್ಕಾಂ ನಲ್ಲಿ 25 ಪರ್ಸೆಂಟ್ ಲಂಚದ ಆರೋಪ ಬೆನ್ನಲ್ಲೇ, ಬೆಂಗಳೂರು ಮೂಲದ ವಿಟಿಎಸ್‌ಡಿ (VTSD) ಗುತ್ತಿಗೆದಾರ ಕಂಪನಿಯ ಮೇಲೆ ಟೆಂಡರ್ ಗೋಲ್ ಮಾಲ್ ಆರೋಪ ಕೇಳಿಬಂದಿತ್ತು.

    ವಿಟಿಎಸ್‌ಡಿ (VTSD) ಕಂಪನಿ ಅಧಿಕೃತ ಪರವಾನಿಗೆ ಇಲ್ಲದೇ ಟೆಂಡರ್ (Tender) ಪಡೆದಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪ ಬೆನ್ನಲ್ಲೇ ಇಂಧನ ಇಲಾಖೆ ಒಟ್ಟು 472 ಕೋಟಿ ಟೆಂಡರ್ ಗಳನ್ನು ರದ್ದುಪಡಿಸಿತು. ಇದೀಗ ವಿಟಿಎಸ್‌ಡಿ ತನ್ನ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದೆ. ಇದನ್ನೂ ಓದಿ: ಕ್ಯಾಂಪಸ್‌ನಲ್ಲಿ ಲವ್‌ಜಿಹಾದ್‌ಗೆ ಉತ್ತೇಜನ, ಸೇನೆಗೆ ಅಪಮಾನ – 6 ಶಿಕ್ಷಕರಿಗೆ ಪಾಠ ಮಾಡದಂತೆ ಸೂಚನೆ

    ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂಪನಿ ಪ್ರಮುಖ ಪ್ರವೀಣ್ ರುದ್ರಪ್ಪ, ಗುತ್ತಿಗೆದಾರ ಸಂಘದ ಮಾಜಿ ಪದಾಧಿಕಾರಿಗಳಾದ ವಿಜಯ್ ಕುಮಾರ್ ಹಾಗೂ ಇತರರಿಗೆ ಟೆಂಡರ್ ಸಿಕ್ಕಿಲ್ಲ ಎಂದು ನಮ್ಮ ಕಂಪನಿ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಟೆಂಡರ್ ಸಿಗದೇ ಇರೋದಕ್ಕೆ ಆರೋಪ ಮಾಡಲಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ವಿವಾಹಪೂರ್ವ ಸೆಕ್ಸ್ ಮಾಡಿದ್ರೆ 1 ವರ್ಷ ಜೈಲು – ಹೊಸ ಕಾನೂನು ಜಾರಿಗೆ ಇಂಡೋನೇಷ್ಯಾ ಸಜ್ಜು

    ಆರೋಪ ಕೇಳಿಬಂದ ಕೂಡಲೇ ಟೆಂಡರ್ ರದ್ದು ಪಡಿಸೋದು ಸರಿಯಲ್ಲ. ಕೂಡಲೇ ಟೆಂಡರ್ ಪ್ರಕ್ರಿಯೆಯನ್ನು ಕೂಲಂಕಷವಾಗಿ ಮರುವಿಚಾರಣೆ ಮಾಡುವಂತೆ ಮನವಿ ಸಹ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 47,627 ಬುಲೆಟ್ ಪ್ರೂಫ್ ಜಾಕೆಟ್‍ಗಳಿಗೆ ಟೆಂಡರ್ ಕೊಟ್ಟ ಭಾರತೀಯ ಸೇನೆ

    47,627 ಬುಲೆಟ್ ಪ್ರೂಫ್ ಜಾಕೆಟ್‍ಗಳಿಗೆ ಟೆಂಡರ್ ಕೊಟ್ಟ ಭಾರತೀಯ ಸೇನೆ

    ನವದೆಹಲಿ: ಮಾರಣಾಂತಿಕ ಸ್ಟೀಲ್ ಕೋರ್ ಬುಲೆಟ್‍ಗಳಿಂದ ಯೋಧರನ್ನು ರಕ್ಷಿಸಲು ಭಾರತೀಯ ಸೇನೆಯು (Indian Army) ಮುಂಚೂಣ ಪಡೆಗಳಿಗಾಗಿ 47,627 ಬುಲೆಟ್‍ಪ್ರೂಫ್ ಜಾಕೆಟ್‍ಗಳಿಗಾಗಿ (Bulletproof Jackets) ಟೆಂಡರ್ ನೀಡಿದೆ.

    ರಕ್ಷಣಾ ಸಚಿವಾಲಯವು ಮೇಕ್ ಇನ್ ಇಂಡಿಯಾ (Make in India) ಅಡಿಯಲ್ಲಿ ಜಾಕೆಟ್‍ಗಳಿಗೆ ಟೆಂಡರ್ ನೀಡಿದ್ದು, ಎಲ್ಲಾ ವಿಧಾನಗಳನ್ನು ಅಂತಿಮಗೊಳಿಸಿ, ಜಾಕೆಟ್ ಬಳಸಲು ಸೂಕ್ತವಾಗಿದೆಯೇ ಎಂದು ಪರಿಶೀಲನೆ ನಡೆಸಿದ ನಂತರ 12 ರಿಂದ 24 ತಿಂಗಳ ಅವಧಿಯೊಳಗೆ ಜಾಕೆಟ್ ತಯಾರಿಸಲಾಗುತ್ತದೆ ಎಂದು ಭಾರತೀಯ ರಕ್ಷಣಾ ಇಲಾಖೆ (Ministry of Defence) ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ – ವಿಶೇಷತೆ ಏನು?

    7.62 ಎಂಎಂ ರಕ್ಷಾಕವಚ ಚುಪಾದ ರೈಫಲ್ ಮದ್ದುಗುಂಡುಗಳು ಮತ್ತು 10 ಮೀಟರ್ ದೂರದಿಂದ ವೇಗವಾಗಿ ಬರುವ ಉಕ್ಕಿನ ಕೋರ್ ಬುಲೆಟ್‍ಗಳಿಂದ ಸೈನಿಕನನ್ನು ರಕ್ಷಿಸಲು ಸಾಮಥ್ರ್ಯವನ್ನು ಈ ಜಾಕೆಟ್ ಹೊಂದಿರಲಿದೆ. ಈ ಜಾಕೆಟ್ ಸರಿಸುಮಾರು 10 ಕೆಜಿಗಿಂತ ಕಡಿಮೆ ಇರಲಿದೆ. ಇದನ್ನೂ ಓದಿ : ಯಾರಿಗೂ ಭಯಪಡಬೇಡಿ, ದೇಶದಲ್ಲಿ ಪ್ರೀತಿ, ಭ್ರಾತೃತ್ವವನ್ನು ಹರಡಿ – ಯುವ ಜನತೆಗೆ ರಾಹುಲ್ ಸಂದೇಶ

    ಭಾರತದ ಸೇನೆ ಬುಲೆಟ್ ಪ್ರೂಫ್ ಜಾಕೆಟ್‍ಗಳ ಕೊರತೆ ಅನುಭವಿಸುತ್ತಿದೆ. ಹಲವು ವರ್ಷಗಳಿಂದ ಖರೀದಿಗೆ ಸಿದ್ಧತೆ ನಡೆಸುತ್ತಿದ್ದರೂ ಗುಣಮಟ್ಟದ ವಿಷಯದಿಂದಾಗಿ ಈ ಪ್ರಕ್ರಿಯೆ ತಡವಾಗುತ್ತಿತ್ತು. ಮುಂದಿನ ದಿನಗಳಲ್ಲಿ ಸೈನಿಕರಿಗೆ ಪೂರ್ಣ ದೇಹಕ್ಕೆ ರಕ್ಷಣೆ ನೀಡುವ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಟೆಂಡರ್ ನೀಡುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

  • ದೊಡ್ಡಗಣೇಶ ದೇಗುಲದಲ್ಲಿ ಚಪ್ಪಲಿ ಸ್ಟ್ಯಾಂಡ್‍ಗೂ ಮೀಸಲಾತಿ!

    ದೊಡ್ಡಗಣೇಶ ದೇಗುಲದಲ್ಲಿ ಚಪ್ಪಲಿ ಸ್ಟ್ಯಾಂಡ್‍ಗೂ ಮೀಸಲಾತಿ!

    ಬೆಂಗಳೂರು: ದೇವಸ್ಥಾನಕ್ಕೆ ಬಳಿಯ ಚಪ್ಪಲಿ ಸ್ಟ್ಯಾಂಡ್ ಕಾಯುವುದಕ್ಕೆ ಮೀಸಲಾತಿ(Reservation) ಇದ್ಯಾ ಎಂಬ ಪ್ರಶ್ನೆ ಎದ್ದಿದೆ. ಬೆಂಗಳೂರಿನ ಬಸವನಗುಡಿಯ ಪ್ರಸಿದ್ಧ ದೊಡ್ಡ ಗಣಪತಿ ದೇವಸ್ಥಾನ(Basavanagudi Dodda Ganapathi Temple) ಕರೆದ ಟೆಂಡರ್‌ನಿಂದಾಗಿ ಈ ಪ್ರಶ್ನೆ ಎದ್ದಿದೆ.

    ದೊಡ್ಡ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಕರೆದ ಟೆಂಡರ್‌ನಲ್ಲಿ(Tender) ಇಂಥಾದ್ದೇ ಸಮುದಾಯದವರು ಭಾಗವಹಿಸಬೇಕು ಎಂಬ ಅಂಶವಿದೆ. ಬರುವ ಭಕ್ತರ ಪಾದರಕ್ಷೆ ಕಾಯಲು ಟೆಂಡರ್ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದವರು ಮಾತ್ರ ಪಾಲ್ಗೊಳ್ಳಬೇಕು ಎಂದು ಪ್ರಕಟಿಸಿದೆ.  ಇದನ್ನೂ ಓದಿ: ಪೊಲೀಸರು ಮ್ಯಾಚ್ ಫಿಕ್ಸಿಂಗ್ ಮಾಡೋದನ್ನು ಬಿಡಿ, ನಿಷ್ಠೆಯಿಂದ ಕೆಲಸ ಮಾಡಿ: ಅಲೋಕ್ ಕುಮಾರ್

    ಜೊತೆಗೆ ಪೂಜಾ ಸಾಮಾಗ್ರಿ ಮಾರಾಟ, ಈಡುಗಾಯಿ ಆಯ್ದುಕೊಳ್ಳುವ ಹಕ್ಕಿನ ಟೆಂಡರ್, ಎಳನೀರು ಮಾರಾಟದ ಟೆಂಡರ್ ಅನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

    ದೇವಸ್ಥಾನದ ಈ ಟೆಂಡರ್ ಪ್ರಕಟಣೆಗೆ ವ್ಯಾಪಕ ಟೀಕೆಗೆ ವ್ಯಕ್ತವಾಗಿದೆ. ಇದು ವಿವಾದ ಆಗುತ್ತಿದ್ದಂತೆ ಎಚ್ಚೆತ್ತ ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿ, ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಿದೆ.

    ಮುಜರಾಯಿ ಇಲಾಖೆ ತಹಶೀಲ್ದಾರರು ಈಗ ಈ ರೀತಿಯಾಗಿ ಹೇಗೆ ಟೆಂಡರ್ ಕರೆದಿದ್ದೀರಿ ವಿವರಣೆ ನೀಡಿ ಎಂದು ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿಗೆ ನೋಟಿಸ್‌ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎರಡು ರಾಜ್ಯದ ಗುತ್ತಿಗೆದಾರರ ಮಧ್ಯೆ ಗಲಾಟೆ – ಬಿಎಸ್‌ವೈ ಪಿಎ ಮೇಲೆ ಐಟಿ ದಾಳಿ

    ಎರಡು ರಾಜ್ಯದ ಗುತ್ತಿಗೆದಾರರ ಮಧ್ಯೆ ಗಲಾಟೆ – ಬಿಎಸ್‌ವೈ ಪಿಎ ಮೇಲೆ ಐಟಿ ದಾಳಿ

    ಬೆಂಗಳೂರು: ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗುತ್ತಿಗೆದಾರರ ನಡುವಿನ ಜಗಳವೇ ಬಿಎಸ್‌ವೈ ಪಿಎ ಮನೆ ಮೇಲೆ ಐಟಿ ದಾಳಿಗೆ ಮೂಲ ಕಾರಣ ಎಂಬ ವಿಚಾರ ಈಗ ತಿಳಿದು ಬಂದಿದೆ.

    ಆರೋಪ ಏನು?
    ನೀರಾವರಿ ಟೆಂಡರ್‌ಗಳನ್ನು ಬೇಕಾದವರಿಗೆ ಮಾಡಿಕೊಡುತ್ತಿದ್ದ ಉಮೇಶ್‌ ಬಳಿಕ ಕಮಿಷನ್ ರೂಪದಲ್ಲಿ ಕೋಟಿ ಕೋಟಿ ರೂ. ದುಡ್ಡು ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಮೇಶ್‌ ಮೇಲೆ ಶಿವಮೊಗ್ಗ, ಬೆಂಗಳೂರಲ್ಲಿ ನೂರಾರು ಕೋಟಿ ಆಸ್ತಿ ಮಾಡಿರುವ ಆರೋಪವಿದೆ.

    `ಎ’ ಗ್ರೇಡ್ ಟೆಂಡರ್‌ಗಳನ್ನು ಆಂಧ್ರ ಮೂಲದವರಿಗೆ ಸಿಗುವಂತೆ ಕೆಲಸ ಮಾಡುತ್ತಿದ್ದ ಉಮೇಶ್‌ ಕರ್ನಾಟಕದ ಗುತ್ತಿಗೆದಾರರಿಗೆ ಗುತ್ತಿಗೆ ತಪ್ಪಿಸುತ್ತಿದ್ದ. ಈ ವಿಚಾರದ ಬಗ್ಗೆ ಎರಡೂ ರಾಜ್ಯದ ಗುತ್ತಿಗೆದಾರ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಿಕ್ಕಾಟ ಜೋರಾದ ಬಳಿಕ ರಾಜ್ಯದ 8 ಮಂದಿ ಗುತ್ತಿಗೆದಾರರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಕಳೆದ 6 ತಿಂಗಳಿನಿಂದ ಐಟಿ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಸಮಯ ನೋಡಿ ಈಗ ದಾಳಿ ನಡೆಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

    ಕಾವೇರಿ ನೀರಾವರಿ ನಿಗಮ, ಕೃಷ್ಣ ಭಾಗ್ಯ ಜಲನಿಗಮದ ಟೆಂಡರ್‌ನಲ್ಲಿ ಗೋಲ್ಮಾಲ್‌ ಮಾಡಿದ್ದು, ಬಿಡುಗಡೆಯಾದ ಹಣಕ್ಕೂ, ಕಾಮಗಾರಿಯ ಹಣಕ್ಕೂ ಭಾರೀ ವ್ಯತ್ಯಾಸ ಕಂಡು ಬಂದಿದೆ. ಗುತ್ತಿಗೆದಾರರಿಗೆ ಕೊಟ್ಟಿರುವ ಹಣದ ಅಂಕಿ-ಅಂಶದಲ್ಲೂ ಏರುಪೇರು ಕಾಣಿಸಿದ್ದು, ಎರಡೂವರೆ ವರ್ಷದಲ್ಲಿ ಸಾವಿರಾರು ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ವಿಜಯೇಂದ್ರ ಮಾಡಿದ ಭ್ರಷ್ಟಾಚಾರಕ್ಕೆ ಈ ದಾಳಿ ಸಾಕ್ಷಿ: ಎಚ್. ವಿಶ್ವನಾಥ್

    ಆರೋಪ ನಿಜ?
    ಮಾಜಿ ಸಿಎಂ ಯಡಿಯೂರಪ್ಪನವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ ಪರಿಷತ್ ಸದಸ್ಯ ವಿಶ್ವನಾಥ್ ಅವರ ಆರೋಪ ನಿಜವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಈ ಹಿಂದೆ ವಿಶ್ವನಾಥ್ ಅವರು ಬಿಎಸ್‍ವೈ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದರು. ನಾನು ಯಡಿಯೂರಪ್ಪನವರನ್ನು ಟಾರ್ಗೆಟ್‌ ಮಾಡುತ್ತಿಲ್ಲ. ಇದು ಟಾರ್ಗೆಟ್ ಕರೆಪ್ಶನ್‌. ಬಿಎಸ್‍ವೈ ಅವಧಿಯಲ್ಲಿ ನೀರಾವರಿ ಇಲಾಖೆಯಲ್ಲಿ ಅಕ್ರಮ ನಡೆದಿದೆ. 20 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಬೆಳಗಾವಿ ಮನೆ ಗೋಡೆ ಕುಸಿದು 7 ಮಂದಿ ಸಾವು- 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

    ಆರ್ಥಿಕ ಇಲಾಖೆ ಮತ್ತು ನೀರಾವರಿ ನಿಗಮಗಳ ಒಪ್ಪಿಗೆ ಪಡೆಯದೇ ತರಾತುರಿಯಲ್ಲಿ ಟೆಂಡರ್‌ ಹಂಚಿಕೆ ಮಾಡಲಾಗಿದೆ. ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಅರುಣ್ ಸಿಂಗ್ ಬಳಿ ಹೇಳಿದ್ದೇನೆ. ನಾಯಕತ್ವ ಬದಲಾವಣೆ ಆಗಲೇಬೇಕು. ನಾಯಕತ್ವ ಬದಲಾವಣೆಗೆ ಕಾರಣ ಕೊಟ್ಟಿದ್ದೇನೆ ಎಂದು ಗಂಭೀರ ಆರೋಪ ಮಾಡಿದ್ದರು.

    ನೀರಾವರಿ ಇಲಾಖೆಯಲ್ಲಿ ಡೀಲ್‌?
    ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾಗಿದ್ದಾಗ ಡೀಲ್ ಆರೋಪ ಕೇಳಿ ಬಂದಿತ್ತು. ಉಮೇಶನ ಡೀಲ್‍ನಿಂದ ರೋಸಿ ಹೋಗಿದ್ದ ರಮೇಶ್ ಜಾರಕಿಹೊಳಿ ಬಿಎಸ್‍ವೈ, ವಿಜಯೇಂದ್ರ ಬಳಿಯೂ ಚರ್ಚಿಸಿದ್ದರು ಎಂದು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

  • ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ವಿಜಯಪುರ: ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ನೂತನ ತಾಲೂಕು ಕೇಂದ್ರಗಳಾಗಿ ಒಂದು ವರ್ಷ ಕಳೆದಿದೆ. ಆದರೂ ತಾಲೂಕು ಅಡಳಿತ ಕಚೇರಿ ಇಲ್ಲ. ಇದೀಗ ಎರಡೂ ತಾಲೂಕುಗಳ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ.

    ಎರಡು ನೂತನ ತಾಲೂಕಿನ ಜನರು ತಾಲೂಕು ಕಚೇರಿಗಳನ್ನು ನಿರ್ಮಿಸಲು ಅನೇಕ ಹೋರಾಟ ಮಾಡಿದ್ದರು. ಆದರೆ ಸೂಕ್ತ ಕಟ್ಟಡಗಳ ಕೊರತೆ ಇರುವುದರಿಂದ ತಾಲೂಕು ಕಚೇರಿ ನಿರ್ಮಾಣಕ್ಕೆ ಹಿಂದೇಟು ಹಾಕಿದ್ದರು. ಇದೀಗ ಎರಡು ನೂತನ ತಾಲೂಕಿನ ಜನರಿಗೆ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಖುಷಿ ವಿಚಾರ ಪ್ರಕಟಿಸಿದ್ದಾರೆ. ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ.

    ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ 10 ಕೋಟಿ ರೂ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗದಲ್ಲಿ ಹಾಗೂ ತಿಕೋಟಾದಲ್ಲಿ ಹಳೆ ಪ್ರವಾಸಿ ಮಂದಿರದ ಜಾಗದಲ್ಲಿ ಈ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.

  • 1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    ಬೆಂಗಳೂರು: ಅಂಬುಲೆನ್ಸ್ ನಿಯಂತ್ರಣಾ ಕೇಂದ್ರ ಸ್ಥಾಪಿಸುವ ಸಂಬಂಧ 1800 ಕೋಟಿ ರೂ. ಟೆಂಡರ್‌ ರದ್ದುಗೊಳಿಸಿದ್ದಕ್ಕೆ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

    ಅಂಬುಲೆನ್ಸ್ ಗಳ ಸುಗಮ‌ ಸಂಚಾರಕ್ಕೆ ನಿಯಂತ್ರಣ ಕೇಂದ್ರ ಸ್ಥಾಪಿಸಲು 1800 ಕೋಟಿ ರೂ. ಟೆಂಡರ್‌ ಕರೆಯಲು ಸರ್ಕಾರ ಮುಂದಾಗಿತ್ತು. ಆದರೆ ಆರೋಗ್ಯ ಸಚಿವರ ಸೂಚನೆಯಂತೆ ಟೆಂಡರ್ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿ ಸಿಜೆ ಎ.ಎಸ್.ಒಕಾ‌ ನೇತೃತ್ವದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

    ಹೈಕೋರ್ಟ್ ಟೆಂಡರ್ ಪ್ರಕ್ರಿಯೆಯ ನಿಗಾ ವಹಿಸಿದೆ. ಕೋರ್ಟ್‌ಗೆ ಭರವಸೆ ನೀಡಿದ ಬಳಿಕವೂ ಟೆಂಡರ್ ರದ್ದುಪಡಿಸಿದ್ದು ಯಾಕೆ? ಸರ್ಕಾರದ ಕ್ರಮವೇ ನ್ಯಾಯಾಂಗ ನಿಂದನೆಯಾಗಿದೆ. ಸಚಿವರಿಗೆ ಕೋರ್ಟ್ ವಿಚಾರಣೆಯ ಮಾಹಿತಿ ಇರಲಿಲ್ಲವೇ ಎಂದು ಪ್ರಶ್ನಿಸಿದೆ.

    ಸರ್ಕಾರದ ಪ್ರಮಾಣಪತ್ರದಲ್ಲೂ ರದ್ದಿಗೆ ಸಕಾರಣ ನೀಡಿಲ್ಲ. ಕೋರ್ಟ್‌ಗೂ ಮಾಹಿತಿ ನೀಡದೇ ಟೆಂಡರ್ ರದ್ದುಪಡಿಸಿದ್ದೇಕೆ? ಸರ್ಕಾರ ಇದಕ್ಕೆ ಸೂಕ್ತ ವಿವರಣೆ ನೀಡಬೇಕು. ಇಲ್ಲವಾದರೆ ಆರೋಗ್ಯ ಸಚಿವರನ್ನೇ ಪ್ರತಿವಾದಿಯಾಗಿಸುವುದಾಗಿ ಎಚ್ಚರಿಕೆ ನೀಡಿದೆ.

    ಟೆಂಡರ್‌ ರದ್ದುಪಡಿಸಲು ತಜ್ಞರ ಲಿಖಿತ ಅಭಿಪ್ರಾಯವನ್ನೂ ಪಡೆದಿಲ್ಲ. ಇದು ಟೆಂಡರ್ ಪ್ರಕ್ರಿಯೆಯನ್ನು ವಿಳಂಬಿಸುವ ಯತ್ನವೆನಿಸುತ್ತಿದೆ. ಆರೋಗ್ಯ ಸಚಿವರೇ ಸ್ವತಃ ವೃತ್ತಿಪರ ವೈದ್ಯರಾಗಿದ್ದಾರೆ. ಹೀಗಿರುವಾಗ ಟೆಂಡರ್‌ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿದೆ.

     

    ಅಕ್ರಮಗಳು ನಡೆದಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್‌ ಪ್ರಕ್ರಿಯೆ ರದ್ದು ಮಾಡಲಾಗಿದೆ ಎಂದು ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ಈ ಸಮಜಾಯಿಷಿಯನ್ನು ಒಪ್ಪದ ಕೋರ್ಟ್‌ ಚಾಟಿ ಬೀಸಿ ಪ್ರಶ್ನಿಸಿದೆ.

    ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಲ್ಲಿ ಅಂಬುಲೆನ್ಸ್‌ಗಳು ಸಿಲುಕಿಕೊಳ್ಳುತ್ತಿವೆ. ಆಸ್ಪತ್ರೆ ತಲುಪುವುದು ವಿಳಂಬವಾಗಿ ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಮರ್ಪಕ ಅಂಬುಲೆನ್ಸ್ ಸೇವೆಗಾಗಿ ನಿಯಂತ್ರಣಾ ಕೇಂದ್ರ ಸ್ಥಾಪಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಭಾರತ ಪುನರುತ್ಥಾನ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

  • 15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

    15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

    ಬೆಂಗಳೂರು: ಕೋವಿಡ್ ನಿಂದಾಗಿ ರಾಜ್ಯ ಸರಕಾರವು ಗುತ್ತಿಗೆದಾರರ ವಹಿವಾಟುಗಳಿಗೆ ತಾತ್ಕಾಲಿಕವಾಗಿ ಕೆಲವು ತಿಂಗಳುಗಳಿಂದ ಹಲವು ನಿರ್ಬಂಧಗಳನ್ನು ಹೇರಿದೆ. ಇದರ ಪರಿಣಾಮ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ನೋಂದಾಯಿತ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಈಡಾಗಲಿದ್ದು, ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

    ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್ ಗಳಿಗೆ ಹಣ ಬಿಡುಗಡೆ ಮಾಡುವುದು ಹಾಗೂ ಪ್ಯಾಕೇಜ್ ಪದ್ದತಿಯ ಅಡಿಯಲ್ಲಿ ಟೆಂಡರ್ ಕರೆಯುವುದನ್ನು ರದ್ದುಪಡಿಸುವಂತೆ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳಲ್ಲಿ, ಮಾನ್ಯ ಸಚಿವರುಗಳಲ್ಲಿ ಹಾಗೂ ಉನ್ನತ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಹೇಳಿದ್ದಾರೆ.

    ಗುತ್ತಿಗೆದಾರರ ಬೇಡಿಕೆಗಳು ಏನು?
    * ಟೆಂಡರ್‍ನಲ್ಲಿ ಭಾಗವಹಿಸದಂತೆ ನಿರ್ಬಂಧಿಸುತ್ತಿರುವ ಕುರಿತು : ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಕೆಲವು ಅಧಿಕಾರಿಗಳು ಗುತ್ತಿಗೆದಾರರಿಗೆ ಸರಕಾರಿ ಟೆಂಡರ್‍ಗಳಲ್ಲಿ ಭಾಗವಹಿಸದಂತೆ ನಿರ್ಬಂಧವನ್ನು ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಬಿಡ್ ಸಲ್ಲಿಸಿದ ನಂತರವೂ ಟೆಂಡರನ್ನು ಹಿಂಪಡೆಯುವಂತೆ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದರಿಂದ ಟೆಂಡರ್‍ನಲ್ಲಿ ಸ್ಪರ್ಧಾತ್ಮಕ ದರಗಳಿಂದ ವಂಚಿತವಾಗಿ ಹೆಚ್ಚಿನ ಪಾರದರ್ಶಕತೆಗೆ ಅವಕಾಶವಿಲ್ಲದೆ ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗುತ್ತಿದ್ದು ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದರು.

    *ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಪಾವತಿ: ಕಳೆದ ಹಲವಾರು ತಿಂಗಳುಗಳಿಂದ ಸರಕಾರದ ಹಲವಾರು ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಿಲ್ಲುಗಳನ್ನು ನೀಡಲಾಗಿರುವುದಿಲ್ಲ. ಬಾಕಿ ಬಿಲ್ ಗಳಿಗೆ ಹಣಪಾವತಿಸುವ ಸಮಯದಲ್ಲಿ ಸರಕಾರದ ಆದೇಶ ಸಂಖ್ಯೆ: ನಂ.ಪಿಡಬ್ಲೂಡಿ/260/ಎಸ್‍ಓಎಫ್‍ಸಿ/2001(ಪಿ) 2000 ಸೆಪ್ಟೆಂಬರ್ 25 ರಲ್ಲಿ ಸೂಚಿಸಿರುವಂತೆ ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಶೇ.80 ರಷ್ಟು ಹಣ ಬಿಡುಗಡೆ ಮಾಡುವುದನ್ನು ಜೇಷ್ಠತೆ ಆಧಾರದ ಮೇಲೆ ಕಡ್ಡಾಯ ಮಾಡಿದೆ. ಈ ಆಧಾರದಲ್ಲಿ ಅಂದರೆ ಡಿ.ಬಿ.ಆರ್ ಸಂಖ್ಯೆ ಅನುಗುಣವಾಗಿ ಜೇಷ್ಠತೆ ಮೇಲೆ ಹಣ ಬಿಡುಗಡೆ ಮಾಡಬೇಕು. ಅಲ್ಲದೆ, ಸ್ಟಾಂಡರ್ಡ್ ಬಿಡ್ ಗೆ ಸೇರಿಸಿ ನೀಡಬೇಕು ಎಂದರು.

    * ಪ್ಯಾಕೇಜ್ ಪದ್ದತಿಯನ್ನು ರದ್ದಗೊಳಿಸಿ: ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಗಳನ್ನು ಕರೆಯುತ್ತಿರುವುದರಿಂದ ನಮ್ಮ ರಾಜ್ಯದ ಸ್ಥಳೀಯ ಗುತ್ತಿಗೆದಾರರಿಗೆ ಟೆಂಡರ್‍ನಲ್ಲಿ ಭಾಗವಹಿಸದಂತಹ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಇದು ಹೊರ ರಾಜ್ಯದ ಗುತ್ತಿಗೆದಾರರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಆದ್ದರಿಂದ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಕರೆಯುವುದನ್ನು ನಿಲ್ಲಿಸಿ ಒಂದೊಂದು ಕಾಮಗಾರಿಗಳಿಗೂ ಪ್ರತ್ಯೇಕವಾಗಿ ಟೆಂಡರ್ ಕರೆಯುವಂತೆ ಅವರು ಮನವಿ ಮಾಡಿದರು.

    * ಮಾದರಿ ಟೆಂಡರ್ ದಾಖಲೆ ರಚನಾ ಸಮಿತಿಗೆ ಮನವಿ: ದ್ವಿ ಲಕೋಟೆ ಪ್ಯಾಕೇಜ್ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ಅಡಿಯಲ್ಲಿ ಸರಿಯಾದ ಮಾನದಂಡಗಳಿಲ್ಲದೆ ಎಲ್ಲಾ ಷರತ್ತುಗಳನ್ನು ತಮ್ಮ ಇಚ್ಛೆಗೆ ಬಂದಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸುತ್ತಿರುವುದು ವಿವಿಧ ಸರಕಾರಿ ಇಲಾಖೆಗಳಲ್ಲಿ ಕಂಡುಬಂದಿದೆ. ಕರ್ನಾಟಕ ರಾಜ್ಯ ಟೆಂಡರ್‍ನಲ್ಲಿ ಭಾಗವಹಿಸುವ ಗುತ್ತಿಗೆದಾರರಿಗೆ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ನ ಏಕರೂಪ ನಿಯಮವನ್ನು ಇಡಿ ರಾಜ್ಯಕ್ಕೆ ಅನ್ವಯವಾಗುವಂತಹ ನಿಯಮಾವಳಿಗಳನ್ನು ರೂಪಿಸಬೇಕು.

    ಇದೇ ವೇಳೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿಎಂ ರವೀಂದ್ರ ಮಾತನಾಡಿ, ನೆರೆರಾಜ್ಯವಾದ ಕೇರಳದಲ್ಲಿ ರೂ.5.00 ಕೋಟಿವರೆಗಿನ ಕಾಮಗಾರಿಯನ್ನು ಒಂದು ಲಕೋಟೆ ಪದ್ದತಿಯಲ್ಲಿ ಯಾವುದೇ ಪೂರ್ವಭಾಗಿ ಷರತ್ತುಗಳಿಲ್ಲದೆ ಗುತ್ತಿಗೆದಾರರು ನೊಂದಾವಣಿಯಾಗಿರುವ ಆಯಾ ದರ್ಜೆಗೆ ಅನುಗುಣವಾಗಿ ಟೆಂಡರ್‍ನಲ್ಲಿ ಭಾಗವಹಿಸುವ ನಿಯಮ ಜಾರಿಯಲ್ಲಿರುತ್ತದೆ. ಇದೇ ಮಾದರಿಯ ನಿಯಮವನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಸ್ಥಳೀಯ ನಿವಾಸಿಗಳಾದ ರಾಜ್ಯದ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಕಾಮಗಾರಿ ಪಡೆಯುವಂತಹ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

  • ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    – ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ

    ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.

    ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ.

    ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು ಸ್ವಚ್ಛಗೊಳಿಸುತ್ತಾರೆ. ವಿಧಾನ ಸೌಧದ ಕಾರಿಡಾರ್ ಹಾಗೂ ಹೊರ ಭಾಗದ ಸ್ವಚ್ಛತೆಗೆ ಗುತ್ತಿಗೆ ಆಧಾರಿತ ಕಾರ್ಮಿಕರು ಪ್ರತ್ಯೇಕವಾಗಿದ್ದಾರೆ. ಇಷ್ಟಾಗಿಯೂ ವಿಧಾನಸೌಧದ ಕಾರಿಡಾರ್ ಗಳನ್ನು ನೀರು ಹಾಕಿ ತೊಳೆಯಲು ಪ್ರತ್ಯೇಕ ಟೆಂಡರ್ ಕರೆದಿದ್ದು ಪಿಡಬ್ಲ್ಯುಡಿ ಇಲಾಖೆಯ ಈ ನಿರ್ಧಾರ ಅನುಮಾನ ಕಾರಣವಾಗಿದೆ.

    ಕೊರೊನಾ ಸಮಯದಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ವಿಧಾನಸೌಧದ ಪಿಡಬ್ಲ್ಯುಡಿ ಅಧಿಕಾರಿಗಳು ʼವಾಟರ್ ವಾಶ್ ಹೆಸರಲ್ಲಿ ಟೆಂಡರ್ ಕಾಸು ಮಾಡಲು ಹೊರಟ್ಟಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.