Tag: ಟೆಂಪೊ

  • ಟೆಂಪೋ ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಅರ್ಧ ಭಾಗ ಛಿದ್ರ- 6 ಮಂದಿ ಸಾವು

    ಟೆಂಪೋ ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಅರ್ಧ ಭಾಗ ಛಿದ್ರ- 6 ಮಂದಿ ಸಾವು

    – ಹತ್ತು ಮಂದಿಗೆ ಗಂಭೀರ ಗಾಯ

    ಮಂಡ್ಯ: ಟೆಂಪೋ ಹಾಗೂ ಟಾಟಾ ಸುಮೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 6 ಜನರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೃತಪಟ್ಟಿರುವ ಆರು ಮಂದಿಯಲ್ಲಿ ಐವರನ್ನು ಬಾಕರ್ ಶರೀಫ್ (50), ಮೆಹಬೂಬ್ ಖಾನ್ (47), ನವ್ ಸಾದ್ (45), ಮಕ್ಸೂದ್ (35), ಪಾಯಿರ್ ಪಾಷಾ ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವ ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಮೃತರು ನಾಗಮಂಗಲ ತಾಲೂಕಿನವರು ಎಂದು ಮಾಹಿತಿ ಲಭ್ಯವಾಗಿದೆ.

    ಟೆಂಪೋ ನಾಗಮಂಗಲದ ಸ್ಟಾರ್ ಗ್ರೂಪ್ ಕಂಪನಿಗೆ ಸೇರಿದ್ದು, ಚಾಲಕ ವೇಗವಾಗಿ ನಾಗಮಂಗಲದ ಕಡೆಗೆ ಹೋಗುತ್ತಿದ್ದ. ಇದೇ ವೇಳೆ ಆಲ್ಫನೊ ಎಂಬ ಹಣಕಾಸು ಸಂಸ್ಥೆಯ ಸದಸ್ಯರು ಸಂಸ್ಥೆಗೆ ಸೇರಿದ್ದ ಟಾಟಾ ಸುಮೋದಲ್ಲಿ ನಾಗಮಂಗಲ ಕಡೆಯಿಂದ ಬೆಳ್ಳೂರು ಕ್ರಾಸ್ ಕಡೆಗೆ ಪ್ರಯಾಣಿಸುತ್ತಿದ್ದರು. ಆದರೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದ ಬಳಿ ಚಾಲಕರ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಅರ್ಧ ಭಾಗ ಛಿದ್ರ ಛಿದ್ರವಾಗಿದೆ.

    ಟಾಟಾ ಸುಮೋದ ಮುಂಭಾಗದಲ್ಲಿ ಕುಳಿತಿದ್ದವರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಟ್ಟು 10 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ 9 ಜನರ ಸ್ಥಿತಿ ಚಿಂತಾಜನಕವಾಗಿದೆ.

    ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತ ಹಾಗೂ ಗಂಭೀರವಾಗಿ ಗಾಯಗೊಂಡವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಅಂಬುಲೆನ್ಸ್ ಇಲ್ಲದೆ ಕುರಿ ಸಾಗಾಟದ ಟೆಂಪೋದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ್ರು!

    ಅಂಬುಲೆನ್ಸ್ ಇಲ್ಲದೆ ಕುರಿ ಸಾಗಾಟದ ಟೆಂಪೋದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ್ರು!

    ಚಿತ್ರದುರ್ಗ: ಅಂಬುಲೆನ್ಸ್ ಇಲ್ಲದೆ ಪರದಾಡಿ ಕೊನೆಗೆ ಗರ್ಭಿಣಿಯನ್ನು ಕುಟುಂಬಸ್ಥರು ಕುರಿ ಸಾಗಿಸೋ ಟೆಂಪೋದಲ್ಲಿ 40 ಕಿ.ಮೀ ಕ್ರಮಿಸಿ ಆಸ್ಪತ್ರೆಗೆ ಕರೆತಂದ ಅಮಾನವೀಯ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಪುರ ಗ್ರಾಮದಲ್ಲಿ ನಡೆದಿದೆ.

    ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣಕ್ಕೆ ಕುರಿ ಸಾಗಿಸುವ ಟೆಂಪೋದಲ್ಲಿ ಗರ್ಭಿಣಿ ಲಕ್ಷ್ಮಕ್ಕ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಪತ್ನಿಯನ್ನು ನೋಡಿ ಪತಿ ಮಹಾಲಿಂಗಪ್ಪ ಅಂಬುಲೆನ್ಸ್‍ಗೆ ಕರೆ ಮಾಡಿದ್ದಾರೆ.

    ಕರೆ ಮಾಡಿ ಮೂರು ಘಂಟೆಯಾದರೂ ಅಂಬುಲೆನ್ಸ್ ಬರಲೇ ಇಲ್ಲ. ಕೊನೆಗೆ ದಿಕ್ಕು ತೋಚದೆ ಲಕ್ಷ್ಮಕ್ಕನನ್ನು ವಿವಿಪುರ ಗ್ರಾಮದಿಂದ ಚಿತ್ರದುರ್ಗಕ್ಕೆ ಟೆಂಪೋದಲ್ಲಿ 40 ಕಿ.ಮೀ ಕ್ರಮಿಸಿ ಜಿಲ್ಲಾಸ್ಪತ್ರೆಗೆ ಪತಿ ಹಾಗೂ ಸಂಬಂಧಿಕರು ಕರೆತಂದಿದ್ದಾರೆ.

    ಸರಿಯಾದ ಸಮಯಕ್ಕೆ ಟೆಂಪೋ ಸಿಕ್ಕಿದೆ. ಸಿಗದೇ ಇದ್ದಿದ್ದರೆ ಪತ್ನಿಯ ಸ್ಥಿತಿ ಏನಾಗುತ್ತಿತ್ತೋ ಎಂದು ಪತಿ ಅಳಲನ್ನು ತೋಡಿಕೊಂಡಿದ್ದಾರೆ. ಹಾಗೆಯೇ ಸಮಯ ಪ್ರಜ್ಞೆ ಇಲ್ಲದ, ಕರೆ ಮಾಡಿದರೂ ಬಾರದ ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಮಹಾಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಬಸ್ ಮಲ್ಲೇಶ್ವರಂನಿಂದ ವಿಜಯನಗರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

    ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಕಾರಣ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

    ಈ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.