Tag: ಟೆಂಪೋ

  • ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    – ಈರುಳ್ಳಿ ತುಂಬಿಕೊಳ್ಳಲು ಮುಗಿಬಿದ್ದ ಜನ

    ನೆಲಮಂಗಲ: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ.

    ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಮತ್ತೊಂದು ವಾಹನದ ಚಾಲಕ ಓಬಣ್ಣರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೋ ಪಲ್ಟಿಯಾಗಿದ್ದರಿಂದ ಕೆಲ ಜನರು ಈರುಳ್ಳಿ ತುಂಬಲು ಮುಗಿಬಿದ್ದ ಘಟನೆ ಕೂಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಎರಡೂ ವಾಹನಗಳನ್ನು ತೆರವು ಮಾಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

  • ವೇಗವಾಗಿ ಸೈಕಲ್ ಚಾಲನೆ – ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

    ವೇಗವಾಗಿ ಸೈಕಲ್ ಚಾಲನೆ – ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

    ಮೈಸೂರು: ಸೈಕಲ್‌ನಲ್ಲಿ (Cycle) ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ (Tempo) ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ (Mysuru) ಅಭಿಷೇಕ್ ವೃತ್ತದಲ್ಲಿ ನಡೆದಿದೆ.

    ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಬಾರ್‌ನಲ್ಲಿ ಗಲಾಟೆ – ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ

    ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು (Children) ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 8 ಕ್ವಿಂಟಾಲ್ ಗೋಮಾಂಸವಿದ್ದ ಮೀನಿನ ವಾಹನ ಪಲ್ಟಿ

    8 ಕ್ವಿಂಟಾಲ್ ಗೋಮಾಂಸವಿದ್ದ ಮೀನಿನ ವಾಹನ ಪಲ್ಟಿ

    ಕಾರವಾರ: ಅಕ್ರಮ ಗೋಮಾಂಸ (Beef) ತುಂಬಿಕೊಂಡು ಹೋಗುತ್ತಿದ್ದ ಮೀನು ಸಾಗಿಸುವ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ (Overturn) ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ.

    ಕುಮಟಾ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ವಾಹನ ಪಲ್ಟಿಯಾಗುತ್ತಲೇ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ವಾಹನದಲ್ಲಿ ಬರೋಬ್ಬರಿ 8 ಕ್ವಿಂಟಾಲ್ ದನದ ಮಾಂಸವನ್ನು ಕಂಡ ಸ್ಥಳೀಯರು ದಂಗಾಗಿದ್ದಾರೆ.

    ವಾಹನ ಶಿರಸಿಯಿಂದ ಕುಮಟಾ ಮಾರ್ಗವಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಮೀನಿನ ವಾಹನ ಇದಾಗಿದ್ದು, ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲಾಗುತ್ತಿತ್ತು. ಇದನ್ನೂ ಓದಿ: ಸಹೋದರನ ಜೊತೆ ಜಗಳವಾಡಿ ಮೊಬೈಲನ್ನೇ ನುಂಗಿದ್ಳು!

    ವಿಚಾರ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ಸಂಪತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನದ ಮಾಲೀಕ ಗಣೇಶ್ ಹರಿಕಾಂತ್ರ ಎಂಬುದು ತಿಳಿದುಬಂದಿದ್ದು, ಪರಾರಿಯಾದ ಚಾಲಕ ಜಾವೇದ್ ಎಂದು ಗುರುತಿಸಲಾಗಿದೆ. ಇಬ್ಬರ ಮೇಲೂ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಗಂಡನನ್ನ ಬಿಟ್ಟು ಮತ್ತೊಬ್ಬನನ್ನ ಮದುವೆಯಾದ್ಳು, ಅವನಿಂದಲೇ ಕೊಲೆಯಾದ್ಳು

  • ಟೊಮೆಟೊ ಟೆಂಪೋ ಪಲ್ಟಿ- 300 ಬಾಕ್ಸ್ ಮಣ್ಣು ಪಾಲು

    ಟೊಮೆಟೊ ಟೆಂಪೋ ಪಲ್ಟಿ- 300 ಬಾಕ್ಸ್ ಮಣ್ಣು ಪಾಲು

    ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಟೊಮೆಟೊ(Tomato) ಸಾಗಿಸುತ್ತಿದ್ದ ಟೆಂಪೋ(Tempo) ಪಲ್ಟಿಯಾಗಿರುವ ಘಟನೆ ಕೋಲಾರದಲ್ಲಿ(Kolara) ನಡೆದಿದೆ.

    ಕೋಲಾರ ನಗರದ ಹೊರ ವಲಯದಲ್ಲಿರುವ ಮೂರಾಂಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಆಂಧ್ರದಿಂದ ಮದನಪಲ್ಲಿ ಕಡೆಯಿಂದ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದನ್ನೂ ಓದಿ: ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಎನ್ನುವುದು ಸಿನಿಮಾದ ಸಂದೇಶ: ವೀರೇಂದ್ರ ಹೆಗ್ಗಡೆ

    ಟೆಂಪೋದಲ್ಲಿದ್ದ 300ಕ್ಕೂ ಹೆಚ್ಚು ಟೊಮೆಟೊ ಬಾಕ್ಸ್ ಮಣ್ಣು ಪಾಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿವಿಲ್ಲ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಟೆಂಪೋಗೆ  ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಕಾರವಾರ: ಟೆಂಪೋ (Tempo)  ಮತ್ತು ಐರಾವತ (Airavata) ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada), ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ತಾಲೂಕಿನ ಶಿರಾಲಿ ಬಳಿ ನಡೆದಿದೆ.

    ಕಾರವಾರದಿಂದ ಮಂಗಳೂರು ಕಡೆ ಹೊರಟಿದ್ದ ಐರಾವತ ಬಸ್‍ ಟೆಂಪೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್‍ನ ಮುಂಭಾಗದ ಸೀಟ್‍ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಮತ್ತೆ ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

    ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ

    Live Tv
    [brid partner=56869869 player=32851 video=960834 autoplay=true]

  • ಮಲಗಿದ್ದವರ ಮೇಲೆ ಟೆಂಪೋ ಹರಿಸಿದ ಚಾಲಕ- ಓರ್ವ ಸಾವು

    ಮಲಗಿದ್ದವರ ಮೇಲೆ ಟೆಂಪೋ ಹರಿಸಿದ ಚಾಲಕ- ಓರ್ವ ಸಾವು

    ಕೊಪ್ಪಳ: ಚಾಲಕನೊಬ್ಬ ಮಲಗಿದ್ದವರ ಮೇಲೆ ಗೂಡ್ಸ್‌ ವಾಹನ ಹರಿಸಿದ ಘಟನೆ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ನಂದಿ ಸರ್ಕಲ್ ಬಳಿ ನಡೆದಿದೆ.

    ಘಟನೆಯಲ್ಲಿ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿದೆ. ಮೃತನನ್ನು ತಿಪ್ಪಣ್ಣ (75) ಎಂದು ಗುರುತಿಸಲಾಗಿದೆ. ಬಳ್ಳಾರಿಯ ಮಲ್ಲಮ್ಮ, ಕುಕನೂರಿನ ಹನುಮವ್ವ, ಕಾರಟಗಿಯ ತುಕಾರಂ ಎಂಬುವರಿಗೆ ಗಾಯಗಳಾಗಿವೆ. ಬಳ್ಳಾರಿ ಜಿಲ್ಲೆ ಯರಂಗಳಿಯ ಚಾಲಕ ಶ್ರೀನಿವಾಸ ವಾಹನ ಹರಿಸಿದ ಚಾಲಕನಾಗಿದ್ದಾನೆ. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ – ಉತ್ತರ ಕನ್ನಡ ಜಿಲ್ಲೆ ಜನರ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ

    crime

    ಮಲಗಿದವರ ಮೇಲೆ ವಾಹನ ಹರಿಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗೂಡ್ಸ್‌ ವಾಹನ ಚಾಲಕ ಶ್ರೀನಿವಾಸ್ ವಿರುದ್ಧ ಗಾಯಾಳುಗಳು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    Live Tv
    [brid partner=56869869 player=32851 video=960834 autoplay=true]

  • ಸರಣಿ ಅಪಘಾತ: ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ

    ಸರಣಿ ಅಪಘಾತ: ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ

    ಬೆಂಗಳೂರು: ಮೈಸೂರು ರಸ್ತೆನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿಕೊಂಡಿದೆ.

    ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್‍ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ.

    ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರು ಆಟೋ ಚಾಲಕನ ರಕ್ಷಣೆಗೆ ಹರಸಾಹಸ ಪಟ್ಟಿದ್ದಾರೆ. ಅರ್ಧಗಂಟೆಗಳ ಕಾಲ ಹರಸಾಹಸದ ಬಳಿಕ ಆಟೋ ಚಾಲಕನನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ:  ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?

    ಗಂಭೀರಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಅಪಘಾತವಾದ ನಾಲ್ಕು ವಾಹನಗಳನ್ನು ತೆರವು ಮಾಡುತ್ತಿದ್ದಾರೆ. ನಡುರಸ್ತೆಯಲ್ಲಿ ಅಪಘಾತ ಆಗಿದ್ದು, ಮೈಸೂರು ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿದೆ.

    ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಕತ್ತಲಲ್ಲಿ ಕಾಣದೆ ಮಲಗಿದ್ದ ಬಾಲಕಿಯ ಮೇಲೆ ಹರಿದ ಟೆಂಪೋ

    ಕತ್ತಲಲ್ಲಿ ಕಾಣದೆ ಮಲಗಿದ್ದ ಬಾಲಕಿಯ ಮೇಲೆ ಹರಿದ ಟೆಂಪೋ

    ಬೆಂಗಳೂರು: ಮಲಗಿದ್ದ ಬಾಲಕಿಯೊಬ್ಬಳ ಮೇಲೆ ಚಾಲಕ ಟೆಂಪೋ ಹರಿಸಿದ ಪರಿಣಾಮ 7 ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಮೃತ ದುರ್ದೈವಿ ಬಾಲಕಿಯನ್ನು ಶಿವಾನ್ಯಾ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೆ.ಆರ್ ಮಾರ್ಕೆಟ್‍ನಲ್ಲಿ ಸಂಭವಿಸಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಅರ್ಧ ಮನೆಯೇ ಧ್ವಂಸ

    ಟೆಂಪೋದಲ್ಲಿ ತರಕಾರಿ ತುಂಬಿಕೊಂಡು ಮಾರ್ಕೆಟ್‍ಗೆ ಬರುತ್ತಿದ್ದಾಗ ಕತ್ತಲಲ್ಲಿ ಕಾಣದೆ ಚಾಲಕ ಮಲಗಿದ್ದ ಬಾಲಕಿಯ ಮೇಲೆ ಹರಿಸಿಬಿಟ್ಟಿದ್ದಾನೆ. ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಡ್ರೈವರ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

    ಇತ್ತ ಗಾಯಾಳು ಬಾಲಕಿಯನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾಳೆ. ಮಗಳನ್ನು ಕಳೆದುಕೊಂಡ ಹೆತ್ತಮ್ಮನ ಆಕ್ರಂದನ ಮುಗಿಲುಮುಟ್ಟಿತು. ಇದನ್ನೂ ಓದಿ: ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    ಬೀದಿಬದಿ ವ್ಯಾಪಾರ ಮಾಡಿ ಮಗಳನ್ನು ತಾಯಿ ಸಾಕುತ್ತಿದ್ದರು. ಘಟನಾ ಸ್ಥಳಕ್ಕೆ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪರಾರಿಯಾದ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

  • ಬಸ್, ಟೆಂಪೋ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

    ಬಸ್, ಟೆಂಪೋ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

    ತುಮಕೂರು: ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಖಾಸಗಿ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

    Tumkuru

    ಈ ಕುರಿತಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್‍ಪಿ ರಾಹುಲ್ ಕುಮಾರ್, ಮುಂಜಾನೆ ಮಂಜು ಮುಸುಕಿದ ವಾತಾವರಣ ಇದ್ದದ್ದರಿಂದ ಅಪಘಾತ ಸಂಭವಿಸಿರಬಹುದು. ಘಟನೆಯಲ್ಲಿ ಟೆಂಪೋದಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಖಾಸಗಿ ಬಸ್ಸಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: 1 ರಿಂದ 5ನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಬಿ.ಸಿ.ನಾಗೇಶ್

    Tumkuru

    ಮೃತರನ್ನು ಚಿಕ್ಕನಾಯಕನಹಳ್ಳಿ ಮೂಲದ ರ‍್ಶನ್, ತುರುವೇಕೆರೆ ಮೂಲದವರಾದ ಕವಿತಾ, ಕೃಷ್ಣಮರ‍್ತಿ ಹಾಗೂ ದಿವಾಕರ್ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತಿದ್ದು, ಗೂಡ್ಸ್ ಆಟೋ ತುಮಕೂರಿಂದ ತುರುವೇಕೆರೆ ಕಡೆಗೆ ತೆರಳುತಿತ್ತು.  ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ

    ಟೆಂಪೋದಲ್ಲಿ 5 ಮಂದಿ ಪ್ರಯಾಣಿಸುತ್ತಿದ್ದು, ಖಾಸಗಿ ಬಸ್ಸಿನಲ್ಲಿ ಒಟ್ಟು 22 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದವರಿಗೆ ಹೆಚ್ಚಾಗಿ ಯಾವುದೇ ತೊಂದರೆ ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ದೇವರ ನಾಡು ಕೇರಳದಲ್ಲಿ ಜಲಪ್ರಳಯ – ಜಲಾಸುರನ ಆಟಕ್ಕೆ 6 ಸಾವು, 15 ಮಂದಿ ನಾಪತ್ತೆ

  • ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

    ನಿರ್ಭಯಾ ಮಾದರಿಯ ಪ್ರಕರಣವೊಂದು ಮತ್ತೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದು ಹೋಗಿದೆ. ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ 33 ಗಂಟೆಗಳ ನರಳಾಟದ ಬಳಿಕ ಸಂತ್ರಸ್ತೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದು, ಆತನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ: ಗುಜರಾತ್ ಸಿಎಂ