Tag: ಟೆರರ್

  • ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ನಟ ಆದಿತ್ಯ ಅಭಿನಯದ ‘ಟೆರರ್’ (Terror) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ (Aditya) ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ (Teaser) ಬಿಡುಗಡೆ ಮಾಡಿದೆ‌.  ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು (R. Chandru) ಟೆರರ್ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. ಟೆರರ್ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ಟೆರರ್ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ,  ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ.  ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty)ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೇಕಡಾ 30 ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

    ಕನ್ನಡ ಚಿತ್ರರಂಗಕ್ಕೆ ‘A’ ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಾಯಕ ಆದಿತ್ಯ.  ‘ಎ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿಲ್ಕ್ ಮಂಜು.

  • ಡೆಡ್ಲಿ ಆದಿತ್ಯ ನಟನೆಯ ‘ಟೆರರ್’ ಸಿನಿಮಾಗೆ ಮುಹೂರ್ತ

    ಡೆಡ್ಲಿ ಆದಿತ್ಯ ನಟನೆಯ ‘ಟೆರರ್’ ಸಿನಿಮಾಗೆ ಮುಹೂರ್ತ

    ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ (Ranjan Shivaram) ನಿರ್ದೇಶನದ ಹಾಗೂ ಆದಿತ್ಯ (Aditya) ನಾಯಕರಾಗಿ ನಟಿಸುತ್ತಿರುವ  ‘ಟೆರರ್’ (Terror) ಚಿತ್ರದ ಮುಹೂರ್ತ ಸಮಾರಂಭ  ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ  ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ ಪಿ ಎಸ್ ಅಧಿಕಾರಿ ರವಿಕಾಂತೇಗೌಡ ಅವರು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.  ಇದನ್ನೂ ಓದಿ: ಬಂಗಾರದ ಬೆಳೆ ತೆಗೆದ `ಪಠಾಣ್’ ಚಿತ್ರಕ್ಕೆ ಕಂಗನಾ ರಣಾವತ್ ಮೆಚ್ಚುಗೆ

    ನನ್ನ ಮೊದಲ ನಿರ್ದೇಶನದ ಚಿತ್ರ. ಹೊಸ ಮಾಫಿಯಾ ಸುತ್ತ ಕಥೆ ಇದೆ. ಆದಿತ್ಯ ಅವರಿಗೆ ಕಥೆ ಇಷ್ಟವಾಯಿತು. ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯುತ್ತದೆ. ಸಿಲ್ಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ನಮ್ಮ ಚಿತ್ರಕ್ಕಿದೆ. ಧರ್ಮ, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದರು. ನಮ್ಮ ‘A’ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ವರ್ಷಗಳಾಯಿತು. ಹಾಗಾಗಿ ಇಂದು “ಟೆರರ್” ಚಿತ್ರ ಆರಂಭಿಸಿದ್ದೇವೆ.  ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ ಎಂದರು ನಿರ್ಮಾಪಕ ಸಿಲ್ಕ್ ಮಂಜು.

    ನಟ ಧರ್ಮ ಅವರ ಮೂಲಕ ರಂಜನ್ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಬಹಳ ಹಿಡಿಸಿತು.  ಈ ಚಿತ್ರದಲ್ಲಿ ಎರಡು ಶೇಡ್ ಗಳಲ್ಲಿರುತ್ತದೆ. ಪಾತ್ರ ಬಹಳ ಸ್ಟೈಲಿಶ್ ಆಗಿರುತ್ತದೆ. ಯಂಗ್ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ನಾಯಕ ಆದಿತ್ಯ. ಅತಿಥಿಗಳಾಗಿ ಆಗಮಿಸಿದ್ದ ಲಹರಿ ವೇಲು, ಜೇಡ್ರಳ್ಳಿ ಕೃಷ್ಣಪ್ಪ ಮುಂತಾದ ಗಣ್ಯರು, ಚಿತ್ರದಲ್ಲಿ ನಟಿಸಿರುವ  ನಟ ಧರ್ಮ, ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಛಾಯಾಗ್ರಾಹಕ ಕಾರ್ತಿಕ್ ಶರ್ಮ ಮುಂತಾದವರು ‘ಟೆರರ್’ ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿತ್ಯ ನಟನೆಯ ‘ಟೆರರ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಆದಿತ್ಯ ನಟನೆಯ ‘ಟೆರರ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ (Aditya) ನಾಯಕರಾಗಿ ನಟಿಸುತ್ತಿರುವ “ಟೆರರ್” (Terror) ಚಿತ್ರದ ಫಸ್ಟ್ ಲುಕ್ (First Look) ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಈ ಚಿತ್ರದ ಫಸ್ಟ್ ಲುಕ್  ಅದ್ದೂರಿಯಾಗಿ ಬಂದಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

    ಉಪೇಂದ್ರ ಅಭಿನಯದ “A” ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ. ರಂಜನ್ ಶಿವರಾಮ ಗೌಡ (Ranjan Sivarama Gowda) ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ.

    ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಈತನಕ ಯಾರು ಮಾಡಿರದ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳಬಹುದು. ಆದಿತ್ಯ ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ.  ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ “ಟೆರರ್” ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]