Tag: ಟೆಲಿಗ್ರಾಮ್

  • 12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್

    12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್

    ಮುಂಬೈ: ಪೊಲೀಸರಂತೆ ನಟಿಸಿ ದಿನವೊಂದಕ್ಕೆ 5 ರಿಂದ 10 ಕೋಟಿ ರೂ. ದೋಚುತ್ತಿದ್ದ ಸೈಬರ್ ಕ್ರೈಮ್ ಜಾಲವನ್ನು(Cybercriminals) ಮುಂಬೈ (Mumbai) ಪೊಲೀಸರು ಬಯಲಿಗೆಳೆದಿದ್ದಾರೆ.

    12ನೇ ತರಗತಿ ಓದಿ, ಉತ್ತಮ ತಾಂತ್ರಿಕ ಜ್ಞಾನ  (Technical Knowledge) ಹೊಂದಿದ್ದ ಮಾಸ್ಟರ್ ಮೈಂಡ್ (Mastermind) ಶ್ರೀನಿವಾಸ್ ರಾವ್ ದಾಡಿ (49) ಎಂಬಾತನನ್ನು ಬಂಗೂರ್ ನಗರ ಪೊಲೀಸ್ ಠಾಣೆಯ ತಂಡವು ಹೈದರಾಬಾದ್‍ನ ಹೋಟೆಲ್‍ನಲ್ಲಿ ಬಂಧಿಸಿದೆ. ಅಲ್ಲದೆ ಆತನ ಗ್ಯಾಂಗ್ ಸದಸ್ಯರಾದ ಥಾಣೆಯ ಇಬ್ಬರು ಮತ್ತು ಕೋಲ್ಕತ್ತಾದ (Kolkata) ನಾಲ್ವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ

    ಆರೋಪಿಗಳು ದಾಡಿ ಹೆಸರಿನ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವಂತೆ ನಟಿಸುತ್ತಿದ್ದರು. ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಮಾತ್ರ ಸಂವಹನ ನಡೆಸುತ್ತಿದ್ದರು. ಅಲ್ಲದೆ ಎನಿಡೆಸ್ಕ್ ಅಪ್ಲಿಕೇಷನ್‍ಗಳನ್ನು ಸಹ ಬಳಸಿದ್ದರು. ಅವರು ಬಳಸಿದ 40 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಬಂಧಿತರಿಂದ 1.5 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿಗಳು ಜನರನ್ನು ಸಂಪರ್ಕಿಸಿ ಕೋರಿಯರ್ ಮೂಲಕ ತಮ್ಮ ರಿಯಲ್ ಎಸ್ಟೇಟ್ ಕಛೇರಿಗೆ ದಾಖಲೆಗಳನ್ನು ಕಳಿಸುವಂತೆ ಹೇಳುತ್ತಿದ್ದರು. ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಇವರು ಟಾರ್ಗೆಟ್ ಮಾಡುತ್ತಿದ್ದರು. ಅಲ್ಲದೆ ತಮಗೆ ಕಳುಹಿಸಿದ ಕೊರಿಯರ್‍ನಲ್ಲಿ ಪೊಲೀಸರು ಡ್ರಗ್ಸ್ ಅಥವಾ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೆದರಿಸುತ್ತಿದ್ದರು. ಭಯಭೀತರಾದವರಿಂದ ಬ್ಯಾಂಕ್ ಅಥವಾ ಆದಾಯ ತೆರಿಗೆ (Income Tax) ಸಂಬಂಧಿತ ವಿವರಗಳನ್ನು ಪಡೆದು ಖಾತೆಯಲ್ಲಿದ್ದ ಹಣ ಕದಿಯುತ್ತಿದ್ದರು ಎಂದು ಉಪ ಪೊಲೀಸ್ ಆಯುಕ್ತ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

    ದರೋಡೆಕೋರರು ಕದ್ದ ಎಲ್ಲಾ ಹಣ ಶ್ರೀನಿವಾಸ್ ರಾವ್ ನಿರ್ವಹಿಸುತ್ತಿದ್ದ ಬ್ಯಾಂಕ್ ಖಾತೆಗಳಿಗೆ ಸೇರುತ್ತಿತ್ತು. ನಂತರ ಆತ ಹಣವನ್ನು ಕ್ರಿಪ್ಟೋಕರೆನ್ಸಿಯಾಗಿ (Cryptocurrency) ಪರಿವರ್ತಿಸಿ ಚೀನಾದ ಪ್ರಜೆಗೆ ವರ್ಗಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದ ತನಿಖೆಗಾಗಿ, ನಗರ ಪೊಲೀಸ್ ತಂಡಗಳು ದೆಹಲಿ, ಹೈದರಾಬಾದ್, ಕೋಲ್ಕತ್ತಾ, ಜಾಖರ್ಂಡ್, ಹರಿಯಾಣ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಗ್ಯಾಂಗ್‍ನ ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪೊಲೀಸರೆಂದು ಯಾಮಾರಿಸಿ ವಿದೇಶಿ ಪ್ರಜೆಯ ಹಣ ದೋಚಿದ ದುಷ್ಕರ್ಮಿಗಳು

  • ಝೆಲೆನ್ಸ್ಕಿ ನಕಲಿ ಟೆಲಿಗ್ರಾಮ್ ಖಾತೆ – ಉಕ್ರೇನ್ ಯೋಧರು ಶರಣಾಗುವಂತೆ ಸುಳ್ಳು ಮಾಹಿತಿ ಹಂಚಿಕೆ

    ಝೆಲೆನ್ಸ್ಕಿ ನಕಲಿ ಟೆಲಿಗ್ರಾಮ್ ಖಾತೆ – ಉಕ್ರೇನ್ ಯೋಧರು ಶರಣಾಗುವಂತೆ ಸುಳ್ಳು ಮಾಹಿತಿ ಹಂಚಿಕೆ

    ಕೀವ್: ರಷ್ಯಾ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಭೀಕರ ಯುದ್ಧ, ರಕ್ತಪಾತದ ನಡುವೆಯೂ ಯಾವೊಬ್ಬ ದೇಶವೂ ಶರಣಾಗುವ ಹಂತಕ್ಕೆ ಬಂದಿಲ್ಲ. ಆದರೆ ಉಕ್ರೇನ್ ಅಧ್ಯಕ್ಷನ ನಕಲಿ ಟೆಲಿಗ್ರಾಮ್ ಖಾತೆ ಸೈನಿಕರಲ್ಲಿ ಗೊಂದಲ ಸೃಷ್ಟಿಸುವಂತೆ ಮಾಡಿದೆ.

    ಉಕ್ರೇನ್ ಅಧ್ಯಕ್ಷನ ಟೆಲಿಗ್ರಾಮ್ ಖಾತೆಯಂತೆಯೇ ಹೋಲುವ ನಕಲಿ ಖಾತೆಯೊಂದರಲ್ಲಿ ಉಕ್ರೇನ್ ಯೋಧರಿಗೆ ಶರಣಾಗುವಂತೆ ಸಂದೇಶ ನೀಡಲಾಗಿತ್ತು. ಈ ಸಂದೇಶ ದೇಶಾದ್ಯಂತ ವೈರಲ್ ಆಗುತ್ತಿದ್ದಂತೆ ಸೈನಿಕರಲ್ಲಿ ಗೊಂದಲ ಏರ್ಪಟ್ಟಿತು.

    ಈ ಮಾಹಿತಿ ಹರಿದಾಡಲು ಪ್ರಾರಂಭವಾಗುತ್ತಿದ್ದಂತೆ ಉಕ್ರೇನ್ ಅಧ್ಯಕ್ಷ ಎಚ್ಚೆತ್ತು, ಇದು ತಪ್ಪು ಮಾಹಿತಿ ಎಂದು ತನ್ನ ಪ್ರಜೆಗಳಿಗೆ ತಿಳಿಸಿದ್ದಾರೆ. ಬಳಿಕ ಝೆಲೆನ್ಸ್ಕಿ ಹೆಸರಿನಲ್ಲಿದ್ದ ನಕಲಿ ಖಾತೆಯನ್ನು ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

    ವರದಿಗಳ ಪ್ರಕಾರ ಝೆಲೆನ್ಸ್ಕಿಯ ನಕಲಿ ಟೆಲಿಗ್ರಾಮ್ ಖಾತೆಯನ್ನು ತೆಗೆದು ಹಾಕುವುದಕ್ಕೂ ಮೊದಲು ಸುಮಾರು 20,000 ಅನುಯಾಯಿಗಳು ಇದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗೆಳತಿಗೆ ಪ್ರಪೋಸ್ ಮಾಡಿದ ಉಕ್ರೇನ್ ಯೋಧನ ಮನಕರಗುವ ವೀಡಿಯೋ

    ಟೆಲಿಗ್ರಾಮ್ ಉಕ್ರೇನ್‌ನಲ್ಲಿ ವ್ಯಾಪಕವಾಗಿ ಬಳಸುವ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಈ ಅಪ್ಲಿಕೇಶನ್ ಉಕ್ರೇನ್‌ನಲ್ಲಿ ಅತ್ಯಂತ ಉಪಯುಕ್ತವಾಗಿದ್ದು, ಇದರ ವೈಶಿಷ್ಯದಲ್ಲಿ 2ಲಕ್ಷ ಸದಸ್ಯರಿರುವ ಗುಂಪಿಗೂ ಸಂದೇಶ ಕಳುಹಿಸಲು ಸಾಧ್ಯವಿದೆ. ಆದರೆ ಟೆಲಿಗ್ರಾಮ್‌ನ ನಕಲಿ ಖಾತೆಯ ತಪ್ಪು ಮಾಹಿತಿಯಿಂದಾಗಿ ಸೈನಿಕರ ದಾರಿ ತಪ್ಪಿಸುವಂತೆ ಮಾಡಿದೆ.